Subscribe to Updates
Get the latest creative news from FooBar about art, design and business.
Author: kannadanewsnow05
ಬಿಜೆಪಿಯವರು ಹಣ & ಹೆಂಡ ಕೊಟ್ಟು ಧರ್ಮ ಕಾಪಾಡುವ ಕೆಲಸ ಮಾಡುತ್ತಿದ್ದಾರೆ : ಕಾಂಗ್ರೆಸ್ MLC ಬಿಕೆ ಹರಿಪ್ರಸಾದ ವಾಗ್ದಾಳಿ
ಬೆಂಗಳೂರು : ರಾಜ್ಯದಲ್ಲಿ ಈಗ ಜನರು ನೆಮ್ಮದಿಯಿಂದ ಬದುಕುತ್ತಿದ್ದಾರೆ ಹೀಗಾಗಿ ಬಿಜೆಪಿಯವರು ಕರಾವಳಿ ಭಾಗದಿಂದ ಮೈಸೂರು ಭಾಗದ ಕಡೆಗೆ ಬಂದಿದ್ದಾರೆ. ಬಿಜೆಪಿಯವರು ಅವರ ಮಕ್ಕಳನ್ನು ಮುಂದೆ ಬಿಟ್ಟು ಹೋರಾಟ ಮಾಡಲಿ ಬೇರೆಯವರ ಮಕ್ಕಳನ್ನು ಬಾವಿಗೆ ತಳ್ಳಿ ರಾಜಕಾರಣ ಮಾಡುವುದು ಸರಿಯಲ್ಲ ಎಂದು ಕಾಂಗ್ರೆಸ್ MLC ಬಿಕೆ ಹರಿಪ್ರಸಾದ ಹೇಳಿಕೆ ನೀಡಿದರು. ಬೆಂಗಳೂರಲ್ಲಿ ಮಾತನಾಡಿದ ಅವರು, ಬಿಜೆಪಿಯವರು ಧರ್ಮಾಧಾರಿತ ರಾಜಕಾರಣ ಮಾಡುತ್ತಿದ್ದಾರೆ. ಕರಾವಳಿ ಭಾಗದಲ್ಲಿ ಬಿಜೆಪಿಯವರು ನಿರುದ್ಯೋಗಿಗಳಾಗಿದ್ದಾರೆ ಹೀಗಾಗಿ ಮೈಸೂರು ಭಾಗಕ್ಕೆ ಬಂದಿದ್ದಾರೆ. ಹಣಕೊಟ್ಟು ಹೋರಾಟಕ್ಕೆ ಕರೆಸಿದ್ದಾರೆ ಎಂದು ಮಹಿಳೆಯೊಬ್ಬರು ಹೇಳಿದ್ದಾರೆ. ಶೂದ್ರರೂ ಹಾಗೂ ಹಿಂದುಳಿದವರನ್ನು ಹೋರಾಟಕ್ಕೆ ಮುಂದೆ ಬಿಡುತ್ತಾರೆ. ಹಣ & ಹೆಂಡ ಕೊಟ್ಟು ಧರ್ಮ ಕಾಪಾಡುವ ಕೆಲಸ ಮಾಡುತ್ತಿದ್ದಾರೆ ಎಂದು ಬೆಂಗಳೂರಿನಲ್ಲಿ ಬಿಕೆ ಹರಿಪ್ರಸಾದ್ ವಾಗ್ದಾಳಿ ನಡೆಸಿದರು.
ಬೆಳಗಾವಿ : ವಸತಿ ಶಾಲೆಯಲ್ಲಿ ಉಪಹಾರ ಸೇವಿಸಿದ 30ಕ್ಕೂ ಹೆಚ್ಚು ಜನರು ಅಸ್ವಸ್ಥ ಆಗಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಹಿರೇಕೋಡಿ ಗ್ರಾಮದ ಮುರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಈ ಒಂದು ಘಟನೆ ನಡೆದಿದೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಹಿರೇಕೋಡಿ ಗ್ರಾಮದಲ್ಲಿ ಈ ಒಂದು ಘಟನೆ ನಡೆದಿದ್ದು, ಸದ್ಯ ಇಬ್ಬರು ವಿದ್ಯಾರ್ಥಿಗಳಿಗೆ ICU ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ವಸತಿ ಶಾಲೆಯಲ್ಲಿ ಬೆಳಗ್ಗೆ ವಿದ್ಯಾರ್ಥಿಗಳು ಉಪ್ಪಿಟ್ಟು ಸೇವಿಸಿದ್ದಾರೆ. 400ಕ್ಕೂ ಹೆಚ್ಚು ವಿದ್ಯಾರ್ಥಿಗಳಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆ 6ನೇ ತರಗತಿಯಿಂದ ಪಿಯುಸಿವರೆಗೆ ವಿದ್ಯಾರ್ಥಿಗಳು ಓದುತ್ತಿದ್ದಾರೆ. ಉಪ್ಪಿಟ್ಟು ಸೇವನೆ ನಂತರ ಹಲವು ಮಕ್ಕಳಿಗೆ ಹೊಟ್ಟೆ ನೋವು, ವಾಂತಿ, ಭೇದಿ ಆಗಿದ್ದು ಅಸ್ವಸ್ಥರನ್ನು ಚಿಕ್ಕೋಡಿ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಬೆಂಗಳೂರು : ಸೆಪ್ಟೆಂಬರ್ 22 ರಿಂದ ರಾಜ್ಯ ಸರ್ಕಾರ ಹೊಸ ಜಾತಿ ಗಣತಿ ನಡೆಸುವ ವಿಚಾರವಾಗಿ ಇಂದು ಬೆಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ ಸುದ್ದಿಗೋಷ್ಠಿ ನಡೆಸಿದರು. ಸುದ್ದಿಗೋಷ್ಠಿಯಲ್ಲಿ 1ಲಕ್ಷ 75 ಶಿಕ್ಷಕರನ್ನು ನೇಮಕ ಮಾಡಿದ್ದು ಅವರಿಗೆ ವೇತನ ಸಹ ನೀಡಲಾಗುತ್ತೆ ಎಂದು ಬೆಂಗಳೂರಿನ ಗೃಹಕಚೇರಿ ಕೃಷ್ಣ ದಲ್ಲಿ ಸಿಎಂ ಸಿದ್ದರಾಮಯ್ಯ ತಿಳಿಸಿದರು. ಕಾಂತರಾಜು ವರದಿಯನ್ನು ನಾವು ಒಪ್ಪಿಕೊಂಡಿಲ್ಲ. ಬಳಿಕ ಜಯಪ್ರಕಾಶ್ ಹೆಗಡೆ ಹಿಂದುಳಿದ ಆಯೋಗದ ಅಧ್ಯಕ್ಷರಾದರು. 2015 ರಲ್ಲಿ ಸಾಮಾಜಿಕ ಶೈಕ್ಷಣಿಕ ಸಮೀಕ್ಷೆ ಆಗಿತ್ತು. 10 ವರ್ಷ ಆಗಿದೆ ಅಂತ ಹೊಸ ಸಮೀಕ್ಷೆಗೆ ತೀರ್ಮಾನ ಆಗಿದೆ. ಸಮೀಕ್ಷೆ ಜವಾಬ್ದಾರಿ ಹಿಂದುಳಿದ ಆಯೋಗಕ್ಕೆ ವಹಿಸಿದ್ದೇನೆ. ಜಾತಿ, ಧರ್ಮ ಹಾಗೂ ಸಾಮಾಜಿಕ ಪರಿಸ್ಥಿತಿಯ ಬಗ್ಗೆ ಗೊತ್ತಾಗಬೇಕು. ಅವರ ಹಿನ್ನೆಲೆ ಗೊತ್ತಾದಾಗ ವಿಶೇಷ ಕಾರ್ಯಕ್ರಮ ರೂಪಿಸಬಹುದು ಹಿಂದೆ ಕಾಂತರಾಜು ಅಧ್ಯಕ್ಷತೆಯಲ್ಲಿ ಸಮೀಕ್ಷೆ ಮಾಡಲು ಸೂಚಿಸಿದ್ದೆ ಆ ವರದಿ ಹಳೆಯದು ಅಂತ ಪರಿಗಣನೆ ಮಾಡಲಿಲ್ಲ. ಈಗ ಹೊಸದಾಗಿ ಸಾಮಾಜಿಕ ಶೈಕ್ಷಣಿಕ ಸಮೀಕ್ಷೆಗೆ ಸೂಚಿಸಿದ್ದೇನೆ. 7 ಕೋಟಿ ಜನರ ಸಾಮಾಜಿಕ…
ಬೆಂಗಳೂರು : ಸೆಪ್ಟೆಂಬರ್ 22 ರಿಂದ ರಾಜ್ಯ ಸರ್ಕಾರ ಹೊಸ ಜಾತಿ ಗಣತಿ ನಡೆಸುವ ವಿಚಾರವಾಗಿ ಇಂದು ಬೆಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ ಸುದ್ದಿಗೋಷ್ಠಿ ನಡೆಸಿದರು. ಸುದ್ದಿಗೋಷ್ಠಿಯಲ್ಲಿ ಕಾಂತರಾಜು ವರದಿಯನ್ನು ನಾವು ಒಪ್ಪಿಕೊಂಡಿಲ್ಲ ಎಂದು ಬೆಂಗಳೂರಿನ ಗೃಹಕಚೇರಿ ಕೃಷ್ಣ ದಲ್ಲಿ ಸಿಎಂ ಸಿದ್ದರಾಮಯ್ಯ ತಿಳಿಸಿದರು. ಕಾಂತರಾಜು ವರದಿಯನ್ನು ನಾವು ಒಪ್ಪಿಕೊಂಡಿಲ್ಲ. ಬಳಿಕ ಜಯಪ್ರಕಾಶ್ ಹೆಗಡೆ ಹಿಂದುಳಿದ ಆಯೋಗದ ಅಧ್ಯಕ್ಷರಾದರು. 2015 ರಲ್ಲಿ ಸಾಮಾಜಿಕ ಶೈಕ್ಷಣಿಕ ಸಮೀಕ್ಷೆ ಆಗಿತ್ತು. 10 ವರ್ಷ ಆಗಿದೆ ಅಂತ ಹೊಸ ಸಮೀಕ್ಷೆಗೆ ತೀರ್ಮಾನ ಆಗಿದೆ. ಸಮೀಕ್ಷೆ ಜವಾಬ್ದಾರಿ ಹಿಂದುಳಿದ ಆಯೋಗಕ್ಕೆ ವಹಿಸಿದ್ದೇನೆ. ಜಾತಿ, ಧರ್ಮ ಹಾಗೂ ಸಾಮಾಜಿಕ ಪರಿಸ್ಥಿತಿಯ ಬಗ್ಗೆ ಗೊತ್ತಾಗಬೇಕು. ಅವರ ಹಿನ್ನೆಲೆ ಗೊತ್ತಾದಾಗ ವಿಶೇಷ ಕಾರ್ಯಕ್ರಮ ರೂಪಿಸಬಹುದು ಹಿಂದೆ ಕಾಂತರಾಜು ಅಧ್ಯಕ್ಷತೆಯಲ್ಲಿ ಸಮೀಕ್ಷೆ ಮಾಡಲು ಸೂಚಿಸಿದ್ದೆ ಆ ವರದಿ ಹಳೆಯದು ಅಂತ ಪರಿಗಣನೆ ಮಾಡಲಿಲ್ಲ. ಈಗ ಹೊಸದಾಗಿ ಸಾಮಾಜಿಕ ಶೈಕ್ಷಣಿಕ ಸಮೀಕ್ಷೆಗೆ ಸೂಚಿಸಿದ್ದೇನೆ. 7 ಕೋಟಿ ಜನರ ಸಾಮಾಜಿಕ ಶೈಕ್ಷಣಿಕ ಸಮೀಕ್ಷೆಗೆ ಸೂಚಿಸಿದ್ದೇನೆ ಎಂದು ತಿಳಿಸಿದರು.…
ಬೆಂಗಳೂರು : ಬೆಂಗಳೂರಲ್ಲಿ ಇಂದು ಸಿಎಂ ಸಿದ್ದರಾಮಯ್ಯ ನಿವಾಸದ ಬಳಿ ಕಾರೊಂದು ಹೊತ್ತಿ ಉರಿದಿರುವ ಘಟನೆ ವರದಿಯಾಗಿದೆ. ಬೆಂಗಳೂರಿನ ಕಾವೇರಿ ನಿವಾಸದ ಪಕ್ಕ ಪಾರ್ಕಿಂಗ್ ಮಾಡಿದ್ದ ಕಾರು ಏಕಾಏಕಿ ಹೊತ್ತಿ ಉರಿದಿದೆ. ಕಾವೇರಿ ನಿವಾಸಿದ ಸುತ್ತಲೂ ದಟ್ಟ ಹೋಗಿ ಆವರಿಸಿದೆ ಬೆಂಕಿ ನಲ್ಲಿ ಸಂಪೂರ್ಣವಾಗಿ ಹೊತ್ತಿ ಉರಿದಿದೆ. ಸಿಎಂ ನಿವಾಸದ ಸುತ್ತ ಕೆಲಕಾಲ ಟ್ರಾಫಿಕ್ ಜಾಮ್ ಉಂಟಾಗಿದೆ ಸದಾಶಿವನಗರದಿಂದ ಸಿಎಂ ಸಿದ್ದರಾಮಯ್ಯ ಕಾವೇರಿ ನಿವಾಸದ ನಡುವಿನ ರಸ್ತೆ ಕ್ಯಾಲೆಶ್ ಗುಟ್ಟಹಳ್ಳಿ ಕಡೆಗೂ ಟ್ರಾಫಿಕ್ ಜಾಮ್ ಉಂಟಾಗಿದೆ.
ಬೆಂಗಳೂರು : ನೇಪಾಳದಲ್ಲಿ ಸಿಲುಕಿದ ಕನ್ನಡಿಗರು ತಾಯ್ನಾಡಿಗೆ ಸುರಕ್ಷಿತವಾಗಿ ವಾಪಸ್ ಆಗಿದ್ದಾರೆ. ಸುಮಾರು 39ಕ್ಕೂ ಹೆಚ್ಚು ಕನ್ನಡಿಗರು ಸುರಕ್ಷಿತವಾಗಿ ಇಂದು ಬೆಂಗಳೂರಿಗೆ ಆಗಮಿಸಿದ್ದಾರೆ. ನಿನ್ನೆ ರಾತ್ರಿ 7:30ಕ್ಕೆ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ 39 ಕನ್ನಡಿಗರು ಸುರಕ್ಷಿತವಾಗಿ ಬಂದಿಳಿದಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿ ಇರುವ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದಾರೆ. ನೇಪಾಳದಿಂದ ದೆಹಲಿ ದೆಹಲಿಯಿಂದ ಬೆಂಗಳೂರಿಗೆ ಕನ್ನಡಿಗರು ಬಂದು ಇಳಿದಿದ್ದಾರೆ. ಇಶಾ ಫೌಂಡೇಶನ್ ಜೊತೆಗೆ ತೆರಳಿದ್ದ ಪ್ರಯಾಣಿಕರು ಸೇರಿದಂತೆ ಎಲ್ಲರೂ ಸುರಕ್ಷಿತವಾಗಿ ಮರಳಿದ್ದಾರೆ ಎಂದು ತಿಳಿದುಬಂದಿದೆ.
ಉಡುಪಿ : ಉಡುಪಿಯಲ್ಲಿ ಘೋರ ಕೃತ್ಯ ನಡೆದಿದ್ದು, ಹುಟ್ಟುಹಬ್ಬದ ದಿನವೇ ಯುವತಿಗೆ ಚಾಕು ಇರಿದು ಕೊಲೆಗೆ ಯತ್ನಿಸಿರುವ ಘಟನೆ ಉಡುಪಿ ಜಿಲ್ಲೆಯ ಬ್ರಹ್ಮವರ ತಾಲೂಕಿನ ಕೊಕರ್ಣಿಯಲ್ಲಿ ನಡೆದಿದೆ. ಚಾಕು ಇರಿತಕ್ಕೆ ಒಳಗಾದ ಯುವತಿಯನ್ನು ರಕ್ಷಿತಾ ಪೂಜಾರಿ (25) ಎಂದು ತಿಳಿದುಬಂದಿದೆ. ಪಕ್ಕದ ಮನೆಯ ನಿವಾಸಿ ಕಾರ್ತಿಕ್ ಎಂಬ ಯುವಕ ಚಾಕು ಇರಿದು ಪರಾರಿಯಾಗಿದ್ದಾನೆ.ಗಾಯಗೊಂಡ ರಕ್ಷಿತಾಳನ್ನು ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮದುವೆಗೆ ಆಕ್ಷೇಪ ಬಂದ ಕಾರಣ ರಕ್ಷಿತಾ ಕಾರ್ತಿಕ್ ನಂಬರ್ ಬ್ಲಾಕ್ ಮಾಡಿದ್ದಳು. ಈ ಕಾರಣಕ್ಕೆ ಚಾಕು ಇರಿದು ಆರೋಪಿ ಕಾರ್ತಿಕ್ ಪರಾರಿಯಾಗಿದ್ದಾನೆ. ಬ್ರಹ್ಮವರ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.
ಬೆಂಗಳೂರು: ಸೊಸೆಗೆ ವರದಕ್ಷಿಣೆ ಕಿರುಕುಳ ನೀಡುತ್ತಿರುವ ಆರೋಪದ ಮೇಲೆ ಸಿನಿಮಾ ನಿರ್ದೇಶಕ ಎಸ್.ನಾರಾಯಣ್, ಪತ್ನಿ ಹಾಗೂ ಪುತ್ರನ ವಿರುದ್ಧ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಪೊಲೀಸರು ನೋಟಿಸ್ ನೀಡಿದ್ದಾರೆ. ಎಸ್.ನಾರಾಯಣ್ ಅವರ ಎರಡನೇ ಮಗನ ಪತ್ನಿ ಪವಿತ್ರಾ ನಿನ್ನೆ ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಮದುವೆಯಲ್ಲಿ ವರದಕ್ಷಿಣೆ ಕೊಟ್ಟಿದ್ದರೂ ಹೆಚ್ಚಿನ ಹಣಕ್ಕೆ ಒತ್ತಾಯ ಮಾಡುತ್ತಿದ್ದಾರೆ. ಹಲ್ಲೆ ನಡೆಸಿ ವರದಕ್ಷಿಣೆ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿದ್ದರು. ದೂರಿನನ್ವಯ ಪ್ರಕರಣ ದಾಖಲಾಗಿದ್ದು, ಸದ್ಯ ಪೊಲೀಸರು ಮೂರು ದಿನದೊಳಗಾಗಿ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದಾರೆ. ಈಗಾಗಲೇ ಪವಿತ್ರಾ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಆರ್.ಆರ್.ನಗರದಲ್ಲಿರುವ ಎಸ್.ನಾರಾಯಣ್ ನಿವಾಸದಲ್ಲಿ ಮಹಜರು ನಡೆಸಿದ್ದಾರೆ. ಜೊತೆಗೆ ಮಹಜರು ವೇಳೆ ಎಸ್.ನಾರಾಯಣ್ ಹಾಗೂ ಕುಟುಂಬಸ್ಥರಿಂದ ಪ್ರಾಥಮಿಕ ಹೇಳಿಕೆ ದಾಖಲಿಸಿಕೊಂಡಿದ್ದಾರೆ. ಇನ್ನೂ ದೂರು ನೀಡಿರುವ ಪವಿತ್ರಾ ಅವರಿಗೂ ಕೂಡ ಪೊಲೀಸರು ನೋಟಿಸ್ ನೀಡಿದ್ದು, ದೂರಿನಲ್ಲಿ ಉಲ್ಲೇಖಿಸಿದಂತೆ ಸಾಕ್ಷ್ಯಾಧಾರಗಳನ್ನು ಒದಗಿಸುವಂತೆ ತಿಳಿಸಿದ್ದಾರೆ.a
ಬೆಂಗಳೂರು : ಬೆಂಗಳೂರಲ್ಲಿ ಭಾರಿ ಅನಾಹುತವೊಂದು ತಪ್ಪಿದ್ದು, ಶಾಲಾ ಬಸ್ ಒಂದು ನಿಯಂತ್ರಣ ಕಳೆದುಕೊಂಡು ರಸ್ತೆ ಗುಂಡಿಗೆ ಜಾರಿದ ಘಟನೆ ನಡೆದಿದೆ. ಶಾಲಾ ಬಸ್ ನಲ್ಲಿದ್ದ 20 ಕ್ಕೂ ಹೆಚ್ಚು ಶಾಲಾ ಮಕ್ಕಳು ಇದೀಗ ಅಪಾಯದಿಂದ ಪಾರಾಗಿದ್ದಾರೆ. ಬೆಂಗಳೂರಿನ ಪಣತ್ತೂರು ಬಳಗರೆ ಬಳಿ ಈ ಒಂದು ಘಟನೆ ಸಂಭವಿಸಿದೆ. ಮಳೆ ನೀರಿನಿಂದ ಚಾಲಕನಿಗೆ ರಸ್ತೆ ಪಕ್ಕದ ಗುಂಡಿ ಕಾಣಿಸಲಿಲ್ಲ. ಏಕಾಏಕಿ ಬಸ್ ಗುಂಡಿಗೆ ವಾಲಿದೆ. ಪಕ್ಕದಲ್ಲಿ ಇನ್ನೊಂದು ಶಾಲಾ ಬಸ್ ಹೋಗುತ್ತಿತ್ತು ಅದನ್ನು ಓವರ್ ಟೇಕ್ ಮಾಡಿ ಮುಂದೆ ಹೋಗಲು ಹೋದಾಗ ಚಾಲಕನಿಗೆ ಮಳೆ ಬಂದು ನೀರು ತುಂಬಿದ ತಕ್ಷಣ ರಸ್ತೆ ಪಕ್ಕದಲ್ಲಿರುವ ಗುಂಡಿ ಕಾಣಿಸಲಿಲ್ಲ. ತಕ್ಷಣ ಬಸ್ ಗುಂಡಿಗೆ ಜಾರಿದೆ.ಕೂಡಲೇ ಶಾಲಾ ಸಿಬ್ಬಂದಿಗಳು ಮಕ್ಕಳನ್ನು ಬಸ್ ನಿಂದ ಹೊರಗಡೆ ತಂದಿದ್ದು ಭಾರಿ ಅನಾಹುತ ಒಂದು ತಪ್ಪಿದೆ.
ಮೈಸೂರು : ಸದ್ಯ ರಾಜ್ಯದಲ್ಲಿ ಹಲವು ಗಲಭೆ ಪ್ರಕರಣಗಳು ನಡೆದಿದ್ದು, ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ಗಣೇಶ ಮೆರವಣಿಗೆ ವೇಳೆ ಕಲ್ಲು ತೂರಾಟ ಘಟನೆ, ಮೈಸೂರಿನಲ್ಲಿ ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಅವರನ್ನು ರಾಜ್ಯ ಸರ್ಕಾರ ಆಹ್ವಾನಿಸಿದ್ದು ಸೇರಿದಂತೆ ಹಲವು ಘಟನೆಗಳು ವಿವಾದಕ್ಕೆ ಕಾರಣವಾಗಿದೆ. ಇದೀಗ ಬಿಜೆಪಿ ಉಚ್ಛಾಟಿತ ಶಾಸಕ ಬಸನ ಒಡ ಪಾಟಿಲಿ 2028ಕ್ಕೆ ನಾನೇ ಹೊಸ ಪಕ್ಷ ಕಟ್ಟಿ ರಾಜ್ಯದ ಸಿಎಂ ಆಗುತ್ತೇನೆ ಎಂದು ಸ್ಫೋಟಕವಾದ ಹೇಳಿಕೆ ನೀಡಿದ್ದಾರೆ. ಮೈಸೂರಿನಲ್ಲಿ ಮಧ್ಯಮಗಳೊಂದಿಗೆ ಮಾತನಾಡಿದ ಅವರು, 2028 ಕ್ಕೆ ನಾನೇ ರಾಜ್ಯದ ಮುಖ್ಯಮಂತ್ರಿ ಆಗುತ್ತೇನೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಈ ಒಂದು ಹೇಳಿಕೆ ನೀಡಿದ್ದಾರೆ. ಬಿಜೆಪಿ ರಿಪೇರಿ ಆದರೆ ಬಿಜೆಪಿ ಜೊತೆಗೆ ಇಲ್ಲದಿದ್ದರೆ ಹೊಸ ಪಕ್ಷ ಕಟ್ಟುತ್ತೇನೆ. ಹೊಸ ಪಕ್ಷ ಕಟ್ಟಿ ಮುಖ್ಯಮಂತ್ರಿ ಆಗುತ್ತೇನೆ. ಬಿಜೆಪಿ ನಾಯಕರು ನನ್ನ ಸಂಪರ್ಕದಲ್ಲಿದ್ದಾರೆ.ಪ್ರತಾಪ್ ಸಿಂಹ ರಮೇಶ್ ಜಾರಕಿಹೊಳಿ ಸೇರಿದಂತೆ ಒಂದು ತಂಡ ಮಾಡಿದ್ದೇವೆ. ಭ್ರಷ್ಟಾಚಾರ ಮುಕ್ತ ಮತ್ತು ಕುಟುಂಬ ರಾಜಕಾರಣ…












