Subscribe to Updates
Get the latest creative news from FooBar about art, design and business.
Author: kannadanewsnow05
ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಚೆನ್ನಗಿರಿ ರಸ್ತೆಯಲ್ಲಿರುವ ರೈಸ್ ಮಿಲ್ ನಲ್ಲಿ ಬಾಯ್ಲರ್ ಸ್ಪೋಟಗೊಂಡು ಕಟ್ಟಡ ಕುಹಿತವಾಗಿದೆ ಈ ಒಂದು ಕಟ್ಟಡ ಕುಸಿತದಲ್ಲಿ ಹಲವರಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ನಡೆದಿದೆ. ಹೌದು ಚೆನ್ನಗಿರಿ ರಸ್ತೆಯಲ್ಲಿರುವ ಹೀಗೆ ಬಾಗಿಯಲ್ಲಿ ಇರುವಂತಹ ರೈಸ್ ಮಿಲ್ ನಲ್ಲಿ ಬೈಲರ್ ಸ್ಫೋಟಗೊಂಡು ಕಟ್ಟಡ ಕುಸಿದಿದೆ. ಈ ಒಂದು ಕಟ್ಟಡ ಕುಸಿತದಲ್ಲಿ ಐದಕ್ಕೂ ಹೆಚ್ಚು ಜನರಿಗೆ ಗಂಭೀರವಾದ ಗಾಯಗಳಾಗಿವೆ. ಇನ್ನು ಅವಶೇಷಗಳ ಅಡಿ ಮತ್ತೋರ್ವ ವ್ಯಕ್ತಿ ಸಿಲುಕಿದ್ದು, ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ಆಗಮಿಸಿ ರಕ್ಷಣಾ ಕಾರ್ಯಚರಣೆ ನಡೆಸಿದೆ.
ಗದಗ : ಗದಗದಲ್ಲಿ ಇಂದು ಘೋರ ದುರಂತ ಒಂದು ಸಂಭವಿಸಿದ್ದು, ನೀರಿನ ಟ್ಯಾಂಕರ್ ಒಂದು 2 ವರ್ಷದ ಮಗುವಿನ ಮೇಲೆ ಹರಿದ ಪರಿಣಾಮ, ಮಗು ಸ್ಥಳದಲ್ಲೇ ಉಸಿರು ಚೆಲ್ಲಿರುವ ಘಟನೆ, ಗದಗ ನಗರದ ಒಕ್ಕಲಗೇರಿ ಓಣಿಯ ರಾಚೋಟೇಶ್ವರ ದೇವಸ್ಥಾನದ ಬಳಿ ನಡೆದಿದೆ. ಮೃತ ಮಗುವನ್ನು ರೀದಾ ಸೊರಟೂರು (2) ಎಂದು ತಿಳಿದುಬಂದಿದೆ. ಮೃತ ಮಗುವಿನ ಸಬಂಧಿ ಮಹಿಳೆ ಸ್ಕೂಟಿ ಮೇಲೆ ತೆರಳುತ್ತಿದ್ದ ಸಂದರ್ಭದಲ್ಲಿ ಎದುರುಗಡೆ ನೀರಿನ ಟ್ಯಾಂಕರ್ ಬಂದಿದೆ. ಈ ವೇಳೆ ಸ್ಕೂಟಿಯನ್ನು ಪಕ್ಕಕ್ಕೆ ನಿಲ್ಲಿಸಿದ್ದಾಗ, ಆಯತಪ್ಪಿ ಮಗು ಪಕ್ಕಕ್ಕೆ ವಾಲಿದೆ. ಈ ವೇಳೆ ಸಡನ್ ಆಗಿ ಬಂದ ಟ್ಯಾಂಕರ್ ಮಗುವಿನ ಮೇಲೆ ಹರಿದಿದೆ. ಮಗು ಸ್ಥಳದಲ್ಲಿ ಸಾವನ್ನಪ್ಪಿದೆ.ಘಟನೆಯು ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ನೀರಿನ ಟ್ಯಾಂಕರ್ ನ ಹಿಂಬದಿ ಚಕ್ರಕ್ಕೆ ಮಗುವಿನ ತಲೆಬುರುಡೆ ಸಿಕ್ಕು ಅಪ್ಪಚ್ಚಿಯಾಗಿ ಸ್ಥಳದಲ್ಲೇ ಮಗು ಸಾವನ್ನಪ್ಪಿದೆ.ಕಣ್ಣೆದುರಿಗೆ ತನ್ನ ಕಂದಮ್ಮ ಬಲಿಯಾದ ದೃಶ್ಯ ನೋಡಿದ ಬೈಕ್ ಚಲಾಯಿಸುತ್ತಿದ್ದ ಮಗುವಿನ ಸಂಬಂಧಿ ಮಗುವನ್ನ ಎತ್ತಿಕೊಂಡು ಗೋಳಾಟ ನಡೆಸಿದ್ದಾಳೆ.ಬಳಿಕ ಸ್ಥಳೀಯರು ಪೊಲೀಸರಿಗೆ…
ಬೆಳಗಾವಿ : ಬೆಳಗಾವಿಯ ಸುವರ್ಣಸೌಧದಲ್ಲಿ ಕಲಾಪದ ವೇಳೆ ಇಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕುರಿತು ಬಿಜೆಪಿ ಎಂಎಲ್ಸಿ ಸಿಟಿ ರವಿ ಅವರು ಅವಾಚ್ಯ ಪದ ಬಳಸಿದ್ದಾರೆ. ಈ ಹಿನ್ನೆಲೆಯಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಬೆಳಗಾವಿಯ ಹಿರೇಬಾಗೇವಾಡಿಯಲ್ಲಿ ಸಿಟಿ ರವಿ ಅವರ ವಿರುದ್ಧ ದೂರು ನೀಡಿದ್ದರು. ಹೀಗಾಗಿ ಸಿಟಿ ರವಿ ಅವರನ್ನು ಇದೀಗ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಇದಾದ ಬಳಿಕ ಸುವರ್ಣ ಸೌಧದಿಂದ ಸಚಿವ ಲಕ್ಷ್ಮಿ ಹೆಬ್ಬಾಳ್ಕರ್ ಅವರು ತೆರಳುತ್ತಿದ್ದ ಸಂದರ್ಭದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಘಟನೆಯಿಂದ ನನ್ನ ಮನಸ್ಸಿಗೆ ತುಂಬಾ ನೋವಾಗಿದೆ. ಈ ಕುರಿದಂತೆ ನಾನು ನಾಳೆ ಮಾತನಾಡುತ್ತೇನೆ ಎಂದು ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಕಣ್ಣೀರು ಹಾಕುತ್ತಲೇ ಭಾವುಕರಾಗಿ ಉತ್ತರಿಸಿದರು.
ಬೆಳಗಾವಿ : ಇಂದು ಬೆಳಗಾವಿಯ ಸದನದಲ್ಲಿ ಸಚಿವ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಬಿಜೆಪಿ ಅವರು ಅವಾಚ್ಯ ಪದ ಬಳಕೆ ಮಾಡಿದ್ದಾರೆ ಎಂದು ಆರೋಪಿಸಿ ಇದೀಗ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದು, ಬೆಳಗಾವಿಯ ಹಿರೇಬಾಗೇವಾಡಿ ಠಾಣೆಯಲ್ಲಿ ಎಂಎಲ್ಸಿ ಸಿಟಿ ರವಿ ವಿರುದ್ಧ ದೂರು ಸಲ್ಲಿಸಿದ್ದು ಪೊಲೀಸರು FIR ದಾಖಲಿಸಿಕೊಂಡಿದ್ದಾರೆ. ಇದೀಗ ಬಿಜೆಪಿ MLC ಸಿಟಿ ರವಿ ಅವರನ್ನು ಹಿರೇಬಾಗೇವಾಡಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಈ ಕುರಿತಂತೆ ಹಿರೇಬಾಗೇವಾಡಿ ಠಾಣೆಯಲ್ಲಿ BNS ಕಾಯ್ದೆ 75 ಮತ್ತು 79ರ ಅಡಿ ಕಾಯ್ದೆ, ಲೈಂಗಿಕ ಕಿರುಕುಳ, ಮಹಿಳಾ ಇಚ್ಛೆ ವಿರುದ್ಧ, ಅಶ್ಲೀಲತೆ ತೋರುವುದು, ಲೈಂಗಿಕ ಬಣ್ಣದ ಬಗ್ಗೆ ಟೀಕೆ ಹಾಗೂ ಮಹಿಳೆಯ ನಮ್ರತೆ, ಅವಮಾನಿಸುವ ಉದ್ದೇಶದಿಂದ ಸನ್ನೆ ಪದ ಅಥವಾ ಕ್ರಿಯೆ ಸೆಕ್ಷನ್ 75 ಲೈಂಗಿಕ ಕಿರುಕುಳ ನೀಡಿದ ಆರೋಪ ಸೆಕ್ಷನ್ 79 ಅವಮಾನಿಸುವ ಉದ್ದೇಶದಿಂದ ಸನ್ನೆ ಪದ ಕ್ರಿಯೆ ಸೇರಿದಂತೆ ವಿವಿಧ ಸೆಕ್ಷನ್ಗಳ ಅಡಿಯಲ್ಲಿ ಸಿ ಟಿ ರವಿ ವಿರುದ್ಧ ಎಫ್ಐಆರ್…
ದಕ್ಷಿಣಕನ್ನಡ : ಮನೆಯಲ್ಲಿ ಕ್ರಿಸ್ಮಸ್ ಹಬ್ಬದ ಅಂಗವಾಗಿ ಮನೆಯನ್ನು ಅಲಂಕಾರ ಮಾಡುವ ಸಂದರ್ಭದಲ್ಲಿ ವಿದ್ಯುತ್ ಶಾಕ್ ಹೊಡೆದ ಪರಿಣಾಮ ವಿದ್ಯಾರ್ಥಿಯೊಬ್ಬ ಸಾವನ್ನಪ್ಪಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಪೆರೊಡಿತ್ತಾಯನ ಕಟ್ಟೆ ಬಳಿ ಇಂದು ನಡೆದಿದೆ. ಮೃತ ವಿಧ್ಯಾರ್ಥಿಯನ್ನು ತೆಂಕಕಾರಂದೂರಿನ ಸ್ಟೀಪನ್ (14) ಎಂದು ಗುರುತಿಸಲಾಗಿದೆ. ಪೆರೋಡಿತ್ತಾಯನ ಕಟ್ಟೆ ಶಾಲಾ ಬಳಿಯ ಮನೆಯ ಬೆಳ್ತಂಗಡಿ ಸಂತ ತೆರೇಸಾ ಶಾಲೆಯ 9 ನೇ ತರಗತಿ ವಿದ್ಯಾರ್ಥಿ ಎನ್ನಲಾಗಿದೆ. ಕ್ರಿಸ್ ಮಸ್ ಪ್ರಯುಕ್ತ ಇಂದು ಸಂಜೆ ಮನೆಗೆ ಸಾಂತಕ್ರೊಸ್ ಬರುವ ಹಿನ್ನೆಲೆಯಲ್ಲಿ ಮನೆಗೆ ಆಲಂಕಾರ ಮಾಡುವ ವೇಳೆ ವಿದ್ಯುತ್ ಶಾಕ್ ಹೊಡೆದಿದೆ. ತಕ್ಷಣ ಸ್ಥಳೀಯರು ಆಸ್ಪತ್ರೆಗೆ ಕರೆದುಕೊಂಡು ಬಂದರೂ ಅಷ್ಟೊತ್ತಿಗಾಗಲೇ ಮೃತ ಪಟ್ಡಿರುವುದಾಗಿ ತಿಳಿದು ಬಂದಿದೆ.ಮೃತ ವಿದ್ಯಾರ್ಥಿಯ ತಂದೆ ಹಾಗೂ ತಾಯಿ ಕೆಲವು ವರ್ಷಗಳ ಹಿಂದೆ ಮೃತ ಪಟ್ಟಿದ್ದರು ಈತ ಅಜ್ಜಿ ಮನೆಯಲ್ಲಿದ್ದು ಶಿಕ್ಷಣ ಪಡೆಯುತ್ತಿದ್ದರು. ಇಂದು ಶಾಲೆಗೆರಜೆ ಮಾಡಿ ಮನೆಯಲ್ಲಿ ಅಲಂಕಾರ ಮಾಡುತ್ತಿದ್ದ ಎನ್ನಲಾಗಿದೆ
ಬೆಂಗಳೂರು : ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ವಿರುದ್ಧದ ಪೋಕ್ಸೋ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈ ಒಂದು ಪ್ರಕರಣವನ್ನು ರದ್ದು ಕೋರಿ ಬಿಎಸ್ ಯಡಿಯೂರಪ್ಪ ಅರ್ಜಿ ಸಲ್ಲಿಸಿದರು ಎಂದು ಹೈಕೋರ್ಟ್ ಏಕ ಸದಸ್ಯ ಪೀಠದಲ್ಲಿ ಈ ಒಂದು ಅರ್ಜಿಯ ವಿಚಾರಣೆ ನಡೆಯಿತು. ಬಳಿಕ ವಾದಮಂಡನೆಗೆ ಒಂದು ಗಂಟೆಯ ಕಾಲಾವಕಾಶ ಬೇಕು ಎಂದು ಬಿಎಸ್ ಯಡಿಯೂರಪ್ಪ ಪರ ಹಿರಿಯ ವಕೀಲ ಸಿ ವಿ ನಾಗೇಶ್ ಮನವಿ ಮಾಡಿದಾಗ ಹೈಕೋರ್ಟ್ ಜನವರಿ 7ಕ್ಕೆ ವಿಚಾರಣೆ ಮುಂದೂಡಿ ಆದೇಶ ಹೊರಡಿಸಿತು. ಇಂದು ಹೈಕೋರ್ಟ್ ಏಕ ಸದಸ್ಯ ಪೀಠದಲ್ಲಿ ಬಿಎಸ್ ಯಡಿಯೂರಪ್ಪ ಅವರ ವಿರುದ್ಧದ ಪೋಕ್ಸೋ ಪ್ರಕರಣ ರದ್ದು ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಯಿತು. ಬಿಎಸ್ ಯಡಿಯೂರಪ್ಪ ಪರ ಹಿರಿಯ ವಕೀಲ ಸಿ ವಿ ನಾಗೇಶ್ ವಾದ ಮಂಡಿಸಿದರು. ವಾದ ಮಂಡನೆಗೆ ಮತ್ತೆ ಒಂದು ಗಂಟೆ ಸಮಯ ಬೇಕು ಎಂದು ಸಿವಿ ನಾಗೇಶ್ ಅವರು ಮನವಿ ಮಾಡಿದರು. ಎಸ್ಪಿಪಿ ದೂರುದಾರರ ಪರವಾದ ಮಂಡನೆಗೆ ಸಮಯ ಬೇಕೆಂದು…
BREAKING : ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅವಾಚ್ಯ ಪದ ಬಳಕೆ : ಬಿಜೆಪಿ MLC ಸಿಟಿ ರವಿ ವಿರುದ್ಧ ‘FIR’ ದಾಖಲು!
ಬೆಳಗಾವಿ : ಇಂದು ಬೆಳಗಾವಿಯ ಸದನದಲ್ಲಿ ಸಚಿವ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಬಿಜೆಪಿ ಅವರು ಅವಾಚ್ಯ ಪದ ಬಳಕೆ ಮಾಡಿದ್ದಾರೆ ಎಂದು ಆರೋಪಿಸಿ ಇದೀಗ ಶ್ರೀ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದು, ಬೆಳಗಾವಿಯ ಹಿರೇಬಾಗೇವಾಡಿ ಠಾಣೆಯಲ್ಲಿ ಎಂಎಲ್ಸಿ ಸಿಟಿ ರವಿ ವಿರುದ್ಧ ದೂರು ಸಲ್ಲಿಸಿದ್ದು ಪೊಲೀಸರು FIR ದಾಖಲಿಸಿಕೊಂಡಿದ್ದಾರೆ. BNS ಕಾಯ್ದೆ 75 ಮತ್ತು 79ರ ಅಡಿ ಕಾಯ್ದೆ, ಲೈಂಗಿಕ ಕಿರುಕುಳ, ಮಹಿಳಾ ಇಚ್ಛೆ ವಿರುದ್ಧ, ಅಶ್ಲೀಲತೆ ತೋರುವುದು, ಲೈಂಗಿಕ ಬಣ್ಣದ ಬಗ್ಗೆ ಟೀಕೆ ಹಾಗೂ ಮಹಿಳೆಯ ನಮ್ರತೆ, ಅವಮಾನಿಸುವ ಉದ್ದೇಶದಿಂದ ಸನ್ನೆ ಪದ ಅಥವಾ ಕ್ರಿಯೆ ಸೆಕ್ಷನ್ 75 ಲೈಂಗಿಕ ಕಿರುಕುಳ ನೀಡಿದ ಆರೋಪ ಸೆಕ್ಷನ್ 79 ಅವಮಾನಿಸುವ ಉದ್ದೇಶದಿಂದ ಸನ್ನೆ ಪದ ಕ್ರಿಯೆ ಸೇರಿದಂತೆ ವಿವಿಧ ಸೆಕ್ಷನ್ಗಳ ಅಡಿಯಲ್ಲಿ ಸಿ ಟಿ ರವಿ ವಿರುದ್ಧ ಎಫ್ಐಆರ್ ದಾಖಲಾಗಿದೆ. ಹೌದು ಬೆಳಗಾವಿಯಲ್ಲಿ ನಡೆಯುತ್ತಿರುವ ಅಧಿವೇಶನದ ವೇಳೆ ವಿಧಾನ ಪರಿಷತ್ತಿನಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ…
ಬೆಳಗಾವಿ : ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಅವಾಚ್ಯ ಪದಗಳಿಂದ ನಿಂದಿಸಿದ ಆರೋಪದ ಹಿನ್ನೆಲೆಯಲ್ಲಿ, ಇಂದು ಬೆಳಗಾವಿಯ ಸುವರ್ಣಸೌಧದಲ್ಲಿ ಸಭಾಪತಿ ಬಸವರಾಜ ಹೊರಟ್ಟಿ ಅವರು, ಕಾಂಗ್ರೆಸ್ ಬಿಜೆಪಿ ಗದ್ದಲ ಗಲಾಟೆ ನಡುವೆ ಪರಿಷತ್ ಕಲಾಪವನ್ನು ಅನಿರ್ದಿಷ್ಟವಧಿಗೆ ಮುಂದೂಡಿದರು. ಈ ಸಂದರ್ಭದಲ್ಲಿ ಸಚಿವ ಲಕ್ಷ್ಮಿ ಹೆಬ್ಬಾಳ್ಕರ್ ಸಿಟಿ ಅವರ ವಿರುದ್ಧ ಏಕವಚನದಲ್ಲಿ ವಾಗ್ದಾಳಿ ನಡೆಸಿದರು. ಸಭಾಪತಿ ಬಸವರಾಜ್ ಹೊರಟ್ಟಿ ಅವರು ಕಲಾಪವನ್ನು ಅನಿರ್ದಿಷ್ಟ ಅವಧಿಗೆ ಮುಂದೂಡಿ ತೆರಳಿದ ಬಳಿಕವೂ ಅಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಸದಸ್ಯರ ನಡುವೆ ಭಾರಿ ಗಲಾಟೆ ನಡೆಯಿತು ಈ ಸಂದರ್ಭದಲ್ಲಿ ಸಚಿವೆ ಹೆಬ್ಬಾಳ್ಕರ್ ಅವರು ಸಭಾಪತಿ ಹೊರಟ್ಟಿ ಅವರ ಕುರ್ಚಿಯ ಸಮೀಪ ತೆರಳಿ ಸಿಟಿ ರವಿ ಅವರಿಗೆ ಹಿಗ್ಗಾ ಮುಗ್ಗಾ ಜಾಡಿಸಿದರು. ಏಯ್, ನಿನಗೆ ಮಗಳು ಇಲ್ವೇನೋ? ನಿನಗೆ ತಾಯಿ ಇಲ್ವೇನೋ? ನಿನಗೆ ಹೆಂಡತಿ ಇಲ್ವಾ? ಎಂದು ಏಕವಚನದಲ್ಲೇ ಆಕ್ರೋಶ ಹೊರ ಹಾಕಿದರು.
ಬೆಳಗಾವಿ : ಸಚಿವ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅಶ್ಲೀಲವಾಗಿ ಮಾತನಾಡಿದ ಎಂಎಲ್ಸಿ ಸಿಟಿ ರವಿ ವಿರುದ್ಧ ಇದೀಗ ಸದನದ ಕಲಾಪದಲ್ಲಿ ಕಾಂಗ್ರೆಸ್ ಸದಸ್ಯರು ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಈ ವೇಳೆ ಸಭಾಪತಿ ಬಸವರಾಜ್ ಹೊರಟ್ಟಿ ಅವರು ಕಲಾಪವನ್ನು ಅನಿರ್ದಿಷ್ಟಾವಧಿ ವರೆಗೆ ಮುಂದೂಡಿದರು. ಸಭಾಪತಿ ಬಸವರಾಜ್ ಹೊರಟ್ಟಿ ತೆರಳಿದ ಬಳಿಕವು ಕಲಾಪದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಸದಸ್ಯರ ನಡುವೆ ಪರಸ್ಪರ ವಾಗ್ವಾದ ನಡೆಯಿತು. ಈ ವೇಳೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು, ನಿನಗೆ ತಾಯಿ ಇಲ್ಲವೇನೋ, ನಿನಗೆ ಮಗಳು ಇಲ್ವೇನೋ, ನಿನಗೆ ಹೆಂಡತಿ ಇಲ್ಲವೇನೋ ಎಂದು ಏಕವಚನದಲ್ಲಿ ಸಿಟಿ ರವಿ ವಿರುದ್ಧ ಆಕ್ರೋಶ ಹೊರ ಹಾಕಿದರು. ಸಿಟಿ ರವಿ ನನಗೆ ತಾಯಿ ಇಲ್ವಾ ಎಂದು ಲಕ್ಷ್ಮಿ ಹೆಬ್ಬಾಳ್ಕರ್ ಕಿಡಿ ಕಾರಿದ್ದಾರೆ ಈ ವೇಳೆ ಬಿಜೆಪಿ ಎಂಎಲ್ಸಿ ಸಿಟಿ ರವಿ ಸುತ್ತಲೂ ಮಾರ್ಷಲ್ ಗಳು ಸುತ್ತುವರೆದಿದ್ದಾರೆ. ಈ ಕುರಿತು ವಿಧಾನ ಪರಿಷತ್ ನಲ್ಲಿ ಬಸವರಾಜ ಹೊರಟ್ಟಿ ಪ್ರಸ್ತಾಪಿಸಿದ್ದು, ಸಿಟಿ ರವಿಗೆ ಎಚ್ಚರಿಕೆ ನೀಡಿದ್ದಾರೆ.…
ಬೆಳಗಾವಿ : ಬಾಣಂತಿಯರ ಸಾವಿನ ವಿಚಾರವನ್ನ ಮುಂದಿಟ್ಟುಕೊಂಡು ಬಿಜೆಪಿ ಶಾಸಕ ಅಶ್ವತ್ ನಾರಾಯಣ್ ಆರೋಗ್ಯ ಇಲಾಖೆಯ ಬಗ್ಗೆ ಸುಳ್ಳುಗಳನ್ನ ಸದನದಲ್ಲಿ ಹೇಳುವುದು ಸರಿಯಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಬೆಳಗಾವಿಯ ಸುವರ್ಣ ಸೌಧದಲ್ಲಿ ಇಂದು ವಿಧಾನ ಸಭೆ ಕಲಾಪದಲ್ಲಿ ಬಾಣಂತಿಯರ ಸಾವುಗಳ ಕುರಿತು ನೈಜ ವಿಚಾರಗಳನ್ನ ಸದನದ ಮುಂದಿಟ್ಟ ಸಚಿವರು, ಇಲಾಖೆಯ ಕಾರ್ಯಪ್ರಗತಿ ಬಗ್ಗೆ ಸಂಕ್ಷಿಪ್ತವಾಗಿ ಮಾಹಿತಿ ನೀಡಿದರು. ಬಾಣಂತಿಯರ ಸಾವಿನ ಪ್ರಕರಣ ವಿಚಾರದಲ್ಲಿ ನ್ಯಾಯಾಂಗ ತನಿಖೆಗೆ ವಹಿಸಲು ಸಿಎಂ ಜೊತೆ ಮಾತನಾಡುವುದಾಗಿ ಸದನಕ್ಕೆ ಸ್ಪಷ್ಟಪಡಿಸಿದ ಗುಂಡೂರಾವ್ ಈ ವಿಚಾರದಲ್ಲಿ ನಾವು ಯಾವುದನ್ನು ಮುಚ್ಚಿಡುವ ಉದ್ದೇಶ ಹೊಂದಿಲ್ಲ ಎಂದರು. ಅಲ್ಲದೇ ಆರೋಗ್ಯ ಇಲಾಖೆಯ ಬಗ್ಗೆ ಬಿಜೆಪಿ ಶಾಸಕ ಅಶ್ವತ್ ನಾರಾಯಣ್ ಅವರು ಸದನದಲ್ಲಿ ಹೇಳಿದ ಹೇಳಿಕೆಗಳು ಹಸಿ ಸುಳ್ಳು ಎಂದು ತಳ್ಳಿಹಾಕಿದರು. ಸದನದಲ್ಲಿ ಅಶ್ವತ್ ನಾರಾಯಣ್ ಅವರು ಪ್ರಸ್ತಾಪಿಸಿದ ವಿಚಾರಗಳಿಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಉತ್ತರ ಅಶ್ವತ್ ನಾರಾಯಣ್ : 108 ಅಂಬ್ಯುಲೆನ್ಸ್ ಗಳಲ್ಲಿ ಜಿ.ಪಿ.ಎಸ್ ವ್ಯವಸ್ಥೆಯಿಲ್ಲ..…