Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ಬೆಳಗಾವಿಯಲ್ಲಿ ಕನ್ನಡಿಗ ಕಂಡಕ್ಟರ್ ಮೇಲೆ ಹಲ್ಲೆಯನ್ನು ಖಂಡಿಸಿ, ಇದೇ ಮಾರ್ಚ್ 22ರಂದು ಅಖಂಡ ಕರ್ನಾಟಕ ಬಂದ್ ಗೆ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರು ಕರೆ ನೀಡಿದ್ದಾರೆ. ಇಂದು ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಕನ್ನಡ ಸಂಘಟನೆಗಳ ಸಭೆ ನಡೆದಿದ್ದು ಈ ಒಂದು ಸಭೆಯಲ್ಲಿ ಮಾರ್ಚ್ 22 ರಂದು ಕರ್ನಾಟಕ ಬಂದ್ ಬಹುತೇಕ ಫಿಕ್ಸ್ ಆದಂತಾಗಿದೆ. ಸಭೆ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮಾರ್ಚ್ 22ರಂದು ಕರ್ನಾಟಕ ರಾಜ್ಯ ಬಂದ್ ಮಾಡುತ್ತಿದ್ದೇವೆ. ನೆರೆ ರಾಜ್ಯ ಮತ್ತು ಸಂಸತ್ ಗಮನ ಸೆಳೆಯಲು ಬಂದ್ ಮಾಡುತ್ತಿದ್ದೇವೆ. ಕರ್ನಾಟಕದಲ್ಲಿ ಕನ್ನಡಿಗರಿಗೆ ಹೊಡೆಯುತ್ತಿದ್ದಾರೆ. ಬಿಹಾರಿಗಳು, ಪಂಜಾಬಿಗಳು, ಬಂಗಾಳದವರು ಹೊಡೆಯುತ್ತಿದ್ದಾರೆ. ಮಹಾರಾಷ್ಟ್ರದವರು ಕನ್ನಡಿಗರ ಮೇಲೆ ಹಲ್ಲೆ ಮಾಡುತ್ತಿದ್ದಾರೆ. ಬಿಹಾರಿಗಳು ಪಂಜಾಬಿಗಳು ಬಂಗಾಳದವರು ಹೊಡೆಯುತ್ತಿದ್ದಾರೆ. ಮಹಾರಾಷ್ಟ್ರದವರು ಕನ್ನಡಿಗರ ಮೇಲೆ ಹಲ್ಲೆ ಮಾಡುತ್ತಿದ್ದಾರೆ. ತಮಿಳು ತೆಲುಗು ಮರಾಠಿಗರು ಮಾರ್ವಾಡಿಗಳು, ರಾಜ್ಯದಲ್ಲಿ ವ್ಯವಹಾರ ನಡೆಸಿ ಕೋಟಿ ಕೋಟಿ ರೂಪಾಯಿ ಸಂಪಾದಿಸುತ್ತಿದ್ದಾರೆ. ಪರಭಾಷಿಕರು ಕನ್ನಡ ಭಾಷೆ ಕಲಿಯಲ್ಲ ವ್ಯವಹಾರ ಮಾಡುತ್ತಾರೆ. ಕರ್ನಾಟಕದಲ್ಲಿ…
ಬೆಂಗಳೂರು : ಸರ್ಕಾರಿ ಪ್ರೌಢಶಾಲೆಯ ಶಿಕ್ಷಕರಿಗೆ ಸರ್ಕಾರ ಬಿಗ್ ಶಾಕ್ ನೀಡಿದ್ದು, ವೃಂದ ಮತ್ತು ನೇಮಕಾತಿ ನಿಯಮಗಳು ಬೇರೆ ಆಗಿರುವುದರಿಂದ ಸರ್ಕಾರಿ ಪ್ರೌಢ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕರಿಗೆ ಮುಖ್ಯ ಶಿಕ್ಷಕ ಹುದ್ದೆ ಮುಂಬಡ್ತಿ ಸಾಧ್ಯವಿಲ್ಲ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಸ್ಪಷ್ಟನೆ ನೀಡಿದರು. ವಿಧಾನಪರಿಷತ್‍ನ ಪ್ರಶೋತ್ತರ ಕಲಾಪದಲ್ಲಿ ಕಾಂಗ್ರೆಸ್ ಸದಸ್ಯ ರಾಮೋಜಿಗೌಡ ಅವರ ಪ್ರಶ್ನೆಗೆ ಉತ್ತರಿಸಿದ ಅವರು,ಸದಸ್ಯ ರಾಮೋಜಿಗೌಡ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಪ್ರೊ.ಎಲ್.ಆರ್ ವೈದ್ಯನಾಥನ್ ವರದಿ ಆಧರಿಸಿ ದೈಹಿಕ ಶಿಕ್ಷಕರಿಗೆ ಮುಂಬಡ್ತಿ ನೀಡುವುದನ್ನು ಪರಿಶೀಲಿಸಲಾಗುವುದು ಎಂದು ತಿಳಿಸಿದರು. ದೈಹಿಕ ಶಿಕ್ಷಕರ ಜೇಷ್ಠತಾ ಪಟ್ಟಿಯನ್ನು ಪ್ರತ್ಯೇಕವಾಗಿ ನಿರ್ವಹಿಸಲಾಗುತ್ತಿದ್ದು, ಇವರ ಪ್ರಾವೀಣ್ಯತೆ ಹಾಗೂ ಅನುಭವ ಆಧಾರದ ಮೇಲೆ ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕರು, ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ, ಸಹಾಯಕ ನಿರ್ದೇಶಕರು, (ದೈಹಿಕ ಶಿಕ್ಷಣ), ಸಹ ನಿರ್ದೇಶಕರು (ದೈಹಿಕ ಶಿಕ್ಷಣ) ಹುದ್ದೆಗಳಿಗೆ ಮುಂಬಡ್ತಿಗೆ ಅವಕಾಶ ಕಲ್ಪಿಸಲಾಗಿದೆ. ಆದರೆ, ದೈಹಿಕ ಶಿಕ್ಷಣ ಶಿಕ್ಷಕರಿಗೆ ಮುಖ್ಯ ಶಿಕ್ಷಕ ಹುದ್ದೆಗೆ ಮುಂಬಡ್ತಿ ನೀಡಲು ಸಾಧ್ಯವಿಲ್ಲ…
ಮೈಸೂರು : ಇಂದು ಮೈಸೂರಲ್ಲಿ ವರ್ಷದ ಮೊದಲ ಮಳೆಯಾಗಿದ್ದು, ಬಿರುಗಾಳಿ ಹಾಗೂ ಆಲಿಕಲ್ಲು ಸಹಿತ ಭಾರಿ ಮಳೆ ಆಯಿತು. ಹೆಬ್ಬಾಳು, ಬ್ಯಾಡರಹಳ್ಳಿ, ಕಗ್ಗರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅನೇಕ ಕಡೆಗಳಲ್ಲಿ ಮಳೆಯಾಗಿದೆ. ಬಿರುಗಾಳಿ ಸಹಿತ ಅರ್ಧ ಗಂಟೆಗೂ ಹೆಚ್ಚು ಕಾಲ ಮಳೆ ಸುರಿದಿದೆ. ಈ ವೇಳೆ ಆಲಿಕಲ್ಲು ಮಳೆ ಜೋರಾಗಿದ್ದರಿಂದ ವಾಹನ ಸವಾರರು ಪರದಾಡಿದರು. ಈ ವೇಳೆ ತಕ್ಷಣ ರಸ್ತೆ ಬದಿಯಲ್ಲಿ ವಾಹನ ಸವಾರರು ಆಲಿಕಲ್ಲು ಮಳೆಯಿಂದ ಆಶ್ರಯ ಪಡೆದುಕೊಂಡರು. ಅಲ್ಲದೆ ಇನ್ನೂ ಕೆಲವು ಸಾರ್ವಜನಿಕರು ಆಲಿಕಲ್ಲುಗಳನ್ನು ಪಾತ್ರೆ ಪಗಡೆಗಳಲ್ಲಿ ಸಂಗ್ರಹಿಸುತ್ತಿರುವುದು ಕಂಡುಬಂದಿತು
ಉತ್ತರಕನ್ನಡ : ಕಫದಿಂದ ಬಳಲುತ್ತಿದ್ದ ಬಾಲಕಿಯೋರ್ವಳು ತಾಯಿಯ ಜೊತೆಗೆ ಆಸ್ಪತ್ರೆಗೆ ತೆರಳುವಾಗ ಬಸ್ ನಲ್ಲಿಯೇ ಸಾವನ್ನಪ್ಪಿರುವ ಘಟನೆ ಉತ್ತರಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಮಾಜಾಳಿ ಗ್ರಾಮದಲ್ಲಿ ನಡೆದಿದೆ. ಮಾಜಾಳಿ ಗ್ರಾಮದ ಸ್ನೇಹ ಸಾಗರ್ ಕೋಠಾರಿಕರ (8) ಸಾವನ್ನಪ್ಪಿದ ಬಾಲಕಿ ಎಂದು ತಿಳಿದು ಬಂದಿದೆ. ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಮಾಜಾಳಿ ಗ್ರಾಮದ ನಿವಾಸಿಯಾಗಿರುವ ಸ್ನೇಹಾ ಕಳೆದ ಮೂರು ದಿನದಿಂದ ಕಫದ ಸಮಸ್ಯೆಯಿಂದ ಬಳಲುತ್ತಿದ್ದಳು. ತಾಯಿ ಮಂಗಳ ಜೊತೆಗೆ ಬಸ್ನಲ್ಲಿ ಸ್ನೇಹ ಕುಮಟಾಗೆ ತೆರಳುತ್ತಿದ್ದಳು. ಅಮದಳ್ಳಿ ಬಳಿ ತಲೆನೋವು ಹಾಗೂ ವಾಂತಿಯಿಂದ ಸ್ನೇಹ ಅಸ್ವಸ್ಥಳಾಗಿದ್ದಳು. ಕೊಡಲೇ ಹಟ್ಟಿಕೇರಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸ್ನೇಹಳನ್ನು ದಾಖಲಿಸಿದರು. ಅಲ್ಲಿಂದ ಅಂಕೋಲಾ ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗ ಮಧ್ಯೆ ಸ್ನೇಹ ಸಾವನಪ್ಪಿದ್ದಾಳೆ ಘಟನೆಯ ಬಗ್ಗೆ ಅಂಕೋಲಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಕೋಲಾರ : ಡ್ರಿಲ್ ಮಾಡುವ ಸಂದರ್ಭದಲ್ಲಿ ಕಲ್ಲು ಬಂಡೆ ತಗೊಂಡು ಕಲ್ಲು ಬಿದ್ದು ಕಾರ್ಮಿಕ ಸಾವನ್ನಪ್ಪಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಮಾಕಾರಹಳ್ಳಿಯಲ್ಲಿರುವ ಸ್ನೇಹ ಕ್ರಷರ್ ತಾತ್ಕಾಲಿಕವಾಗಿ ಬಂದ್ ಮಾಡಲು ಆದೇಶಿಸಲಾಗಿದೆ. ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಉಪ ನಿರ್ದೇಶಕರು ಈ ಕುರಿತು ಆದೇಶಿಸಿದ್ದಾರೆ. ಉಪ ನಿರ್ದೇಶಕ ಕೋದಂಡರಾಮಯ್ಯ ಅವರಿಂದ ಆದೇಶ ಹೊರಡಿಸಲಾಗಿದೆ. ಡ್ರಿಲ್ಲಿಂಗ್ ವೇಳೆ ಕಲ್ಲು ಬಿದ್ದು ಕಾರ್ಮಿಕ ವೆಂಕಟೇಶ್ ಸಾವನ್ನಪ್ಪಿದ್ದರು. ಆಂಧ್ರಪ್ರದೇಶ ಮೂಲದ ಕಾರ್ಮಿಕ ವೆಂಕಟೇಶ್ ಕಲ್ಲು ಬಿದ್ದು ಮೃತಪಟ್ಟಿದ್ದರು. ಕೆಲವು ಗಣಿ ನಿಯಮ ಉಲ್ಲಂಘನೆ ಮಾಡಿರುವ ಹಿನ್ನೆಲೆಯಲ್ಲಿ ನಿಯಮ ಸರಿಪಡಿಸಿಕೊಳ್ಳುವವರೆಗೆ ಕೆಲಸ ನಿಲ್ಲಿಸಲು ಆದೇಶ ಹೊರಡಿಸಿದ್ದಾರೆ.
ಬೆಂಗಳೂರು : ಚುನಾವಣೆಯಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಸೋಲಿಗೆ ಸಾವರ್ಕರ್ ಕಾರಣ. ಸಾವರ್ಕರ್ ಕಾರಣವೆಂದು ಸಾಬೀತುಪಡಿಸುವ ದಾಖಲೆಯನ್ನು ಸದನದಲ್ಲಿ ಹಾಜರುಪಡಿಸಿದರೆ ರಾಜೀನಾಮೆಯ ಸವಾಲು ಹಾಕಿದ್ದಾರೆ. ವಿಧಾನಸಭೆಯಲ್ಲಿ ಭಾರತೀಯ ಜನತಾ ಪಕ್ಷದ ಸದಸ್ಯರು ಸವಾಲು ಹಾಕಿದ್ದಾರೆ. ಈ ಕುರಿತು ದಾಖಲೆ ತೋರಿಸಿದ ಸಚಿವ ಪ್ರಿಯಾಂಕ್ ಖರ್ಗೆ ಬಿಜೆಪಿ ನಾಯಕರೇ ಯಾವಾಗ ರಾಜೀನಾಮೆ ನೀಡುತ್ತಿರಿ? ಎಂದು ಟ್ವೀಟ್ ಮೂಲಕ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಟ್ವೀಟ್ ನಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಮಾಹಿತಿ ಹಂಚಿಕೊಂಡಿದ್ದು, 1952 ಜನವರಿ 18ರಂದು ಅಂಬೇಡ್ಕರ್ ಪರಿಚಯಸ್ಥರಿಗೆ ಪತ್ರ ಬರೆದು ಚುನಾವಣೆಯಲ್ಲಿ ತಮ್ಮ ಸೋಲಿಗೆ ಸಾವರ್ಕರ್ ಪಾತ್ರದ ಬಗ್ಗೆ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಸಾವರ್ಕರ್ ಹೇಗೆ ಪಾತ್ರ ವಹಿಸಿದ್ದಾರೆಂದು ಅಂಬೇಡ್ಕರ್ ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದರು. ತಮ್ಮ ಸೋಲಿಗೆ ಕಾರಣವೆಂದು ಭಾವಿಸಿದ ಅಂಶಗಳನ್ನು ಅಂಬೇಡ್ಕರ್ ಅವರು ಪತ್ರದಲ್ಲಿ ವಿವರಿಸಿದ್ದರು. ಸಾವರ್ಕರ್ ಪ್ರಭಾವ ಮತ್ತು ರಾಜಕೀಯ ತಂತ್ರವನ್ನು ಪತ್ರದಲ್ಲಿ ವಿವರಿಸಿದ್ದರು. ಬಾಬಾ ಸಾಹೇಬ್ ಡಾ. ಅಂಬೇಡ್ಕರ್ ಅವರು ಬರೆದಿದ್ದ ಆ ಪತ್ರ ಇಲ್ಲಿದೆ. ರಾಜ ಬಿಜೆಪಿ…
ಮಂಗಳೂರು : ಭೂಗತಪಾತಕಿ ಕಲಿ ಯೋಗೇಶ್ ಸಹಚರನನ್ನು ಸಿಸಿಬಿ ಪೊಲೀಸರು ಇದೀಗ ಅರೆಸ್ಟ್ ಮಾಡಿದ್ದಾರೆ. ಆರೋಪಿ ಅಬ್ದುಲ್ ಅಸಿರ್ ನಿಷೇಧಿತ ಮಾದಕ ವಸ್ತು ಎಂಡಿಎಂಎ ಸಾಗಿಸುತ್ತಿದ ವೇಳೆ ಮಂಗಳೂರು ಸಿಸಿಬಿ ಪೊಲೀಸರು ಆತನನ್ನು ಅರೆಸ್ಟ್ ಮಾಡಿದ್ದಾರೆ. ಮಂಗಳೂರು ಸಿಸಿಬಿ ಪೊಲೀಸರಿಂದ ಅಬ್ದುಲ್ ಅಸಿರ್ (32) ಬಂಧನವಾಗಿದೆ. ಅಬ್ದುಲ್ ಅಲಿಯಾಸ್ ಸದ್ದು ಅಲಿಯಾಸ್ ಸಾಧು ಅಲಿಯಾಸ್ ಮಾಯಾ ಎನ್ನುವ ಆರೋಪಿಯನ್ನು ಸೆರೆ ಹಿಡಿಯಲಾಗಿದೆ. ಕಾಸರಗೋಡಿನಿಂದ ಮಂಗಳೂರಿಗೆ MDMA ತಂದು ಈತ ಮಾರಾಟ ಮಾಡುತ್ತಿದ್ದ. ನಂತೂರಿನಲ್ಲಿ ಎಂಡಿಎಂಎ ಮಾರುತಿದ್ದಾಗ ಸಿಸಿಬಿ ಪೊಲೀಸರಿಂದ ಬಂಧನವಾಗಿದೆ. ಕೇರಳದ ಕಾಸರಗೋಡು ಜಿಲ್ಲೆಯ ನಾಂಗಿ ಕಡ್ದಪುರಂ ನಿವಾಸಿ ಅಬ್ದುಲ್ ಬಂಧನವಾಗಿದೆ. ಬಂಧಿತ ಅಬ್ದುಲ್ ನಿಂದ 5 ಲಕ್ಷ ರೂಪಾಯಿ ಮೌಲ್ಯದ 53 ಗ್ರಾಂ ಎಂಡಿಎಂಎ ಜಪ್ತಿ ಮಾಡಿಕೊಳ್ಳಲಾಗಿದ್ದು, ಭೂಗತ ಪಾತಕಿ ಕಲಿ ಯೋಗೆಶ ಪರವಾಗಿ ಅಬ್ದುಲ್ ಕೆಲಸ ಮಾಡುತ್ತಿದ್ದ. ಪುತ್ತೂರಿನ ಚಿನ್ನಾಭರಣ ಮಳಿಗೆಯ ಮೇಲೆ ಫೈರಿಂಗ್ ಪ್ರಕರಣದ ಆರೋಪಿ ಕೂಡ ಆಗಿದ್ದಾನೆ. ಅಬ್ದುಲ್ ವಿರುದ್ಧ ಕೊಲೆ, ಕಳ್ಳತನ ಅಲ್ಲದೆ ಪೋಕ್ಸೋ…
ಕಲಬುರಗಿ : ಕಲಬುರ್ಗಿಯಲ್ಲಿ ಘೋರವಾದ ದುರಂತವೊಂದು ಸಂಭವಿಸಿದ್ದು, ಲಾರಿಯೊಂದು ಬಾಲಕ ಮೇಲೆ ಹರಿದು ಸ್ಥಳದಲ್ಲೇ 5 ವರ್ಷದ ಬಾಲಕ ಮೃತಪಟ್ಟಿರುವ ಘಟನೆ ಕಲಬುರ್ಗಿಯ ಮಳಖೇಡ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಇಂದು ನಡೆದಿದೆ. ಕಲಬುರ್ಗಿ ಜಿಲ್ಲೆಯ ಚಿತ್ತಾಪೂರ ತಾಲೂಕಿನ ಅಲೂರ(ಬಿ) ಗ್ರಾಮದ ಕೂಲಿ ಕಾರ್ಮಿಕನ ಮಗು ಅಯ್ಯಪ್ಪ ಬಸವರಾಜ (5) ಮೃತಪಟ್ಟಿರುವ ಬಾಲಕ ಎಂದು ಗುರುತಿಸಲಾಗಿದೆ. ಇಂದು ಬೆಳಗ್ಗೆ ಕೆಂಪು ಮಣ್ಣು ತುಂಬಿಕೊಂಡು ರಾಜಶ್ರೀ ಸಿಮೆಂಟ್ ಕಾರ್ಖಾನೆ ಒಳಗಡೆ ತೆರಳುತ್ತಿದ್ದ ಖಾಸಗಿ ಲಾರಿಯೊಂದು ಬಾಲಕನ ಮೇಲೆ ಹರಿದು ಪರಿಣಾಮ ಬಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಚಿತ್ತಾಪುರ ಠಾಣೆ ಪೊಲೀಸರು ಭೇಟಿ ನೀಡಿ, ಪ್ರಕರಣ ದಾಖಲಿಸಿಕೊಂಡು, ಪರಿಶೀಲನೆ ನಡೆಸುತ್ತಿದ್ದಾರೆ.
ಬೆಂಗಳೂರು : ಬೆಂಗಳೂರಿನಲ್ಲಿ ಪೊಲೀಸ್ ಕಾನ್ಸ್ಟೇಬಲ್ ಒಬ್ಬರ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಬೆಂಗಳೂರಿನ ಆಡುಗೋಡಿ ಪೊಲೀಸ್ ಕ್ವಾಟ್ರಸ್ ನಲ್ಲಿ ನೀಡೋ ಬಿಗಿದ ಸ್ಥಿತಿಯಲ್ಲಿ ಮುಬಾರಕ್ ಮುಜಾವರ್ ಎನ್ನುವವರ ಮೃತದೇಹ ಪತ್ತೆಯಾಗಿದೆ. ಬೆಂಗಳೂರಿನ ಆಡುಗೋಡಿ ಪೊಲೀಸ್ ಕ್ವಾರ್ಟರ್ಸ್ ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಕಾನ್ಸ್ಟೇಬಲ್ ಮುಬಾರಕ್ ಮುಜಾವರ್ ಶವ ಪತ್ತೆಯಾಗಿದೆ. ಮೃತ ಮುಬಾರಕ್ CAR ದಕ್ಷಿಣ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದರು. ಕಳೆದ 15 ದಿನಗಳ ಹಿಂದೆ ಕಾನ್ಸ್ಟೇಬಲ್ ಮುಬಾರಕ್ ನೇಣು ಬಿಗಿದುಕೊಂಡಿದ್ದಾರೆ. ವಾಸನೆ ಬರುತ್ತಿದ್ದಕ್ಕೆ ಮನೆಯಲ್ಲಿ ನೋಡಿದಾಗ ಈ ಒಂದು ಘಟನೆ ಬೆಳಕಿಗೆ ಬಂದಿದೆ. ಆಡುಗೋಡಿ ಪೊಲೀಸ್ ಠಾಣೆಯಲ್ಲಿ ಘಟನೆ ಕುರಿತು ಪ್ರಕರಣ ದಾಖಲಾಗಿದೆ.
ಬೆಂಗಳೂರು : ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಸಿಬ್ಬಂದಿಗಳ ಕಿರುಕುಳದಿಂದ ಬೇಸತ್ತು ಕಳೆದ ಕೆಲವು ದಿನಗಳ ಹಿಂದೆ ಸರಣಿ ಆತ್ಮಹತ್ಯೆ ಪ್ರಕರಣಗಳು ನಡೆದಿದ್ದವು. ಇದರಿಂದ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡು ಕಿರುಕುಳ ನೀಡುವುದನ್ನು ತಪ್ಪಿಸುವುದಕ್ಕಾಗಿ ರಾಜ್ಯ ಸರ್ಕಾರ ಹೊರಡಿಸಿದ್ದ ಕರ್ನಾಟಕ ಕಿರು ಸಾಲ ಮತ್ತು ಸಣ್ಣ ಸಾಲ (ಬಲವಂತದ ಕ್ರಮಗಳ ಪ್ರತಿಬಂಧಕ) ಸುಗ್ರೀವಾಜ್ಞೆಯ (ಮೈಕ್ರೋ ಫೈನಾನ್ಸ್) ಸಾಂವಿಧಾನಿಕ ಸಿಂಧುತ್ವವನ್ನು ಹೈಕೋರ್ಟ್ ಎತ್ತಿ ಹಿಡಿದಿದೆ. ಹೌದು ರಾಜ್ಯ ಸರ್ಕಾರ ಜಾರಿ ಮಾಡಿದ ಸುಗ್ರೀವಾಜ್ಞೆಯ ಸಿಂಧುತ್ವ ಮತ್ತು ಮೋಟಾರು ವಾಹನ/ಆಸ್ತಿ ಹಣಕಾಸು ಉದ್ಯಮವು ಸುಗ್ರೀವಾಜ್ಞೆಯಿಂದ ಹೊರಗಿವೆ ಎಂಬುದನ್ನು ಸರ್ಕಾರ ಸ್ಪಷ್ಟಪಡಿಸಲು ನಿರ್ದೇಶಿಸುವಂತೆ ಕೋರಿ ಬೆಂಗಳೂರಿನ ಕರ್ನಾಟಕ ಹೈರ್ ಪರ್ಚೇಸ್ ಅಸೋಶಿಯೇಶನ್ ಅರ್ಜಿ ಸಲ್ಲಿಸಿತ್ತು. ಅದರ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ ಅರ್ಜಿ ವಜಾಗೊಳಿಸಿ, ಸುಗ್ರೀವಾಜ್ಞೆಯನ್ನು ಎತ್ತಿಹಿಡಿದು ಆದೇಶಿಸಿದೆ.












