Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ವಿರುದ್ಧದ ಪೋಕ್ಸೋ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈ ಒಂದು ಪ್ರಕರಣವನ್ನು ರದ್ದು ಕೋರಿ ಬಿಎಸ್ ಯಡಿಯೂರಪ್ಪ ಅರ್ಜಿ ಸಲ್ಲಿಸಿದರು ಎಂದು ಹೈಕೋರ್ಟ್ ಏಕ ಸದಸ್ಯ ಪೀಠದಲ್ಲಿ ಈ ಒಂದು ಅರ್ಜಿಯ ವಿಚಾರಣೆ ನಡೆಯಿತು. ಬಳಿಕ ವಾದಮಂಡನೆಗೆ ಒಂದು ಗಂಟೆಯ ಕಾಲಾವಕಾಶ ಬೇಕು ಎಂದು ಬಿಎಸ್ ಯಡಿಯೂರಪ್ಪ ಪರ ಹಿರಿಯ ವಕೀಲ ಸಿ ವಿ ನಾಗೇಶ್ ಮನವಿ ಮಾಡಿದಾಗ ಹೈಕೋರ್ಟ್ ಜನವರಿ 7ಕ್ಕೆ ವಿಚಾರಣೆ ಮುಂದೂಡಿ ಆದೇಶ ಹೊರಡಿಸಿತು. ಇಂದು ಹೈಕೋರ್ಟ್ ಏಕ ಸದಸ್ಯ ಪೀಠದಲ್ಲಿ ಬಿಎಸ್ ಯಡಿಯೂರಪ್ಪ ಅವರ ವಿರುದ್ಧದ ಪೋಕ್ಸೋ ಪ್ರಕರಣ ರದ್ದು ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಯಿತು. ಬಿಎಸ್ ಯಡಿಯೂರಪ್ಪ ಪರ ಹಿರಿಯ ವಕೀಲ ಸಿ ವಿ ನಾಗೇಶ್ ವಾದ ಮಂಡಿಸಿದರು. ವಾದ ಮಂಡನೆಗೆ ಮತ್ತೆ ಒಂದು ಗಂಟೆ ಸಮಯ ಬೇಕು ಎಂದು ಸಿವಿ ನಾಗೇಶ್ ಅವರು ಮನವಿ ಮಾಡಿದರು. ಎಸ್ಪಿಪಿ ದೂರುದಾರರ ಪರವಾದ ಮಂಡನೆಗೆ ಸಮಯ ಬೇಕೆಂದು…
BREAKING : ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅವಾಚ್ಯ ಪದ ಬಳಕೆ : ಬಿಜೆಪಿ MLC ಸಿಟಿ ರವಿ ವಿರುದ್ಧ ‘FIR’ ದಾಖಲು!
ಬೆಳಗಾವಿ : ಇಂದು ಬೆಳಗಾವಿಯ ಸದನದಲ್ಲಿ ಸಚಿವ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಬಿಜೆಪಿ ಅವರು ಅವಾಚ್ಯ ಪದ ಬಳಕೆ ಮಾಡಿದ್ದಾರೆ ಎಂದು ಆರೋಪಿಸಿ ಇದೀಗ ಶ್ರೀ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದು, ಬೆಳಗಾವಿಯ ಹಿರೇಬಾಗೇವಾಡಿ ಠಾಣೆಯಲ್ಲಿ ಎಂಎಲ್ಸಿ ಸಿಟಿ ರವಿ ವಿರುದ್ಧ ದೂರು ಸಲ್ಲಿಸಿದ್ದು ಪೊಲೀಸರು FIR ದಾಖಲಿಸಿಕೊಂಡಿದ್ದಾರೆ. BNS ಕಾಯ್ದೆ 75 ಮತ್ತು 79ರ ಅಡಿ ಕಾಯ್ದೆ, ಲೈಂಗಿಕ ಕಿರುಕುಳ, ಮಹಿಳಾ ಇಚ್ಛೆ ವಿರುದ್ಧ, ಅಶ್ಲೀಲತೆ ತೋರುವುದು, ಲೈಂಗಿಕ ಬಣ್ಣದ ಬಗ್ಗೆ ಟೀಕೆ ಹಾಗೂ ಮಹಿಳೆಯ ನಮ್ರತೆ, ಅವಮಾನಿಸುವ ಉದ್ದೇಶದಿಂದ ಸನ್ನೆ ಪದ ಅಥವಾ ಕ್ರಿಯೆ ಸೆಕ್ಷನ್ 75 ಲೈಂಗಿಕ ಕಿರುಕುಳ ನೀಡಿದ ಆರೋಪ ಸೆಕ್ಷನ್ 79 ಅವಮಾನಿಸುವ ಉದ್ದೇಶದಿಂದ ಸನ್ನೆ ಪದ ಕ್ರಿಯೆ ಸೇರಿದಂತೆ ವಿವಿಧ ಸೆಕ್ಷನ್ಗಳ ಅಡಿಯಲ್ಲಿ ಸಿ ಟಿ ರವಿ ವಿರುದ್ಧ ಎಫ್ಐಆರ್ ದಾಖಲಾಗಿದೆ. ಹೌದು ಬೆಳಗಾವಿಯಲ್ಲಿ ನಡೆಯುತ್ತಿರುವ ಅಧಿವೇಶನದ ವೇಳೆ ವಿಧಾನ ಪರಿಷತ್ತಿನಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ…
ಬೆಳಗಾವಿ : ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಅವಾಚ್ಯ ಪದಗಳಿಂದ ನಿಂದಿಸಿದ ಆರೋಪದ ಹಿನ್ನೆಲೆಯಲ್ಲಿ, ಇಂದು ಬೆಳಗಾವಿಯ ಸುವರ್ಣಸೌಧದಲ್ಲಿ ಸಭಾಪತಿ ಬಸವರಾಜ ಹೊರಟ್ಟಿ ಅವರು, ಕಾಂಗ್ರೆಸ್ ಬಿಜೆಪಿ ಗದ್ದಲ ಗಲಾಟೆ ನಡುವೆ ಪರಿಷತ್ ಕಲಾಪವನ್ನು ಅನಿರ್ದಿಷ್ಟವಧಿಗೆ ಮುಂದೂಡಿದರು. ಈ ಸಂದರ್ಭದಲ್ಲಿ ಸಚಿವ ಲಕ್ಷ್ಮಿ ಹೆಬ್ಬಾಳ್ಕರ್ ಸಿಟಿ ಅವರ ವಿರುದ್ಧ ಏಕವಚನದಲ್ಲಿ ವಾಗ್ದಾಳಿ ನಡೆಸಿದರು. ಸಭಾಪತಿ ಬಸವರಾಜ್ ಹೊರಟ್ಟಿ ಅವರು ಕಲಾಪವನ್ನು ಅನಿರ್ದಿಷ್ಟ ಅವಧಿಗೆ ಮುಂದೂಡಿ ತೆರಳಿದ ಬಳಿಕವೂ ಅಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಸದಸ್ಯರ ನಡುವೆ ಭಾರಿ ಗಲಾಟೆ ನಡೆಯಿತು ಈ ಸಂದರ್ಭದಲ್ಲಿ ಸಚಿವೆ ಹೆಬ್ಬಾಳ್ಕರ್ ಅವರು ಸಭಾಪತಿ ಹೊರಟ್ಟಿ ಅವರ ಕುರ್ಚಿಯ ಸಮೀಪ ತೆರಳಿ ಸಿಟಿ ರವಿ ಅವರಿಗೆ ಹಿಗ್ಗಾ ಮುಗ್ಗಾ ಜಾಡಿಸಿದರು. ಏಯ್, ನಿನಗೆ ಮಗಳು ಇಲ್ವೇನೋ? ನಿನಗೆ ತಾಯಿ ಇಲ್ವೇನೋ? ನಿನಗೆ ಹೆಂಡತಿ ಇಲ್ವಾ? ಎಂದು ಏಕವಚನದಲ್ಲೇ ಆಕ್ರೋಶ ಹೊರ ಹಾಕಿದರು.
ಬೆಳಗಾವಿ : ಸಚಿವ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅಶ್ಲೀಲವಾಗಿ ಮಾತನಾಡಿದ ಎಂಎಲ್ಸಿ ಸಿಟಿ ರವಿ ವಿರುದ್ಧ ಇದೀಗ ಸದನದ ಕಲಾಪದಲ್ಲಿ ಕಾಂಗ್ರೆಸ್ ಸದಸ್ಯರು ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಈ ವೇಳೆ ಸಭಾಪತಿ ಬಸವರಾಜ್ ಹೊರಟ್ಟಿ ಅವರು ಕಲಾಪವನ್ನು ಅನಿರ್ದಿಷ್ಟಾವಧಿ ವರೆಗೆ ಮುಂದೂಡಿದರು. ಸಭಾಪತಿ ಬಸವರಾಜ್ ಹೊರಟ್ಟಿ ತೆರಳಿದ ಬಳಿಕವು ಕಲಾಪದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಸದಸ್ಯರ ನಡುವೆ ಪರಸ್ಪರ ವಾಗ್ವಾದ ನಡೆಯಿತು. ಈ ವೇಳೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು, ನಿನಗೆ ತಾಯಿ ಇಲ್ಲವೇನೋ, ನಿನಗೆ ಮಗಳು ಇಲ್ವೇನೋ, ನಿನಗೆ ಹೆಂಡತಿ ಇಲ್ಲವೇನೋ ಎಂದು ಏಕವಚನದಲ್ಲಿ ಸಿಟಿ ರವಿ ವಿರುದ್ಧ ಆಕ್ರೋಶ ಹೊರ ಹಾಕಿದರು. ಸಿಟಿ ರವಿ ನನಗೆ ತಾಯಿ ಇಲ್ವಾ ಎಂದು ಲಕ್ಷ್ಮಿ ಹೆಬ್ಬಾಳ್ಕರ್ ಕಿಡಿ ಕಾರಿದ್ದಾರೆ ಈ ವೇಳೆ ಬಿಜೆಪಿ ಎಂಎಲ್ಸಿ ಸಿಟಿ ರವಿ ಸುತ್ತಲೂ ಮಾರ್ಷಲ್ ಗಳು ಸುತ್ತುವರೆದಿದ್ದಾರೆ. ಈ ಕುರಿತು ವಿಧಾನ ಪರಿಷತ್ ನಲ್ಲಿ ಬಸವರಾಜ ಹೊರಟ್ಟಿ ಪ್ರಸ್ತಾಪಿಸಿದ್ದು, ಸಿಟಿ ರವಿಗೆ ಎಚ್ಚರಿಕೆ ನೀಡಿದ್ದಾರೆ.…
ಬೆಳಗಾವಿ : ಬಾಣಂತಿಯರ ಸಾವಿನ ವಿಚಾರವನ್ನ ಮುಂದಿಟ್ಟುಕೊಂಡು ಬಿಜೆಪಿ ಶಾಸಕ ಅಶ್ವತ್ ನಾರಾಯಣ್ ಆರೋಗ್ಯ ಇಲಾಖೆಯ ಬಗ್ಗೆ ಸುಳ್ಳುಗಳನ್ನ ಸದನದಲ್ಲಿ ಹೇಳುವುದು ಸರಿಯಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಬೆಳಗಾವಿಯ ಸುವರ್ಣ ಸೌಧದಲ್ಲಿ ಇಂದು ವಿಧಾನ ಸಭೆ ಕಲಾಪದಲ್ಲಿ ಬಾಣಂತಿಯರ ಸಾವುಗಳ ಕುರಿತು ನೈಜ ವಿಚಾರಗಳನ್ನ ಸದನದ ಮುಂದಿಟ್ಟ ಸಚಿವರು, ಇಲಾಖೆಯ ಕಾರ್ಯಪ್ರಗತಿ ಬಗ್ಗೆ ಸಂಕ್ಷಿಪ್ತವಾಗಿ ಮಾಹಿತಿ ನೀಡಿದರು. ಬಾಣಂತಿಯರ ಸಾವಿನ ಪ್ರಕರಣ ವಿಚಾರದಲ್ಲಿ ನ್ಯಾಯಾಂಗ ತನಿಖೆಗೆ ವಹಿಸಲು ಸಿಎಂ ಜೊತೆ ಮಾತನಾಡುವುದಾಗಿ ಸದನಕ್ಕೆ ಸ್ಪಷ್ಟಪಡಿಸಿದ ಗುಂಡೂರಾವ್ ಈ ವಿಚಾರದಲ್ಲಿ ನಾವು ಯಾವುದನ್ನು ಮುಚ್ಚಿಡುವ ಉದ್ದೇಶ ಹೊಂದಿಲ್ಲ ಎಂದರು. ಅಲ್ಲದೇ ಆರೋಗ್ಯ ಇಲಾಖೆಯ ಬಗ್ಗೆ ಬಿಜೆಪಿ ಶಾಸಕ ಅಶ್ವತ್ ನಾರಾಯಣ್ ಅವರು ಸದನದಲ್ಲಿ ಹೇಳಿದ ಹೇಳಿಕೆಗಳು ಹಸಿ ಸುಳ್ಳು ಎಂದು ತಳ್ಳಿಹಾಕಿದರು. ಸದನದಲ್ಲಿ ಅಶ್ವತ್ ನಾರಾಯಣ್ ಅವರು ಪ್ರಸ್ತಾಪಿಸಿದ ವಿಚಾರಗಳಿಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಉತ್ತರ ಅಶ್ವತ್ ನಾರಾಯಣ್ : 108 ಅಂಬ್ಯುಲೆನ್ಸ್ ಗಳಲ್ಲಿ ಜಿ.ಪಿ.ಎಸ್ ವ್ಯವಸ್ಥೆಯಿಲ್ಲ..…
ಬೆಂಗಳೂರು: ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ 66/11ಕೆವಿಎ ಸಹಕಾರನಗರ ಕೇಂದ್ರದಲ್ಲಿನ ಈ ಕೆಳಕಂಡ ಪ್ರದೇಶಗಳಲ್ಲಿ 21.12.2024 (ಶನಿವಾರ) ರಂದು ಬೆಳಗ್ಗೆ 10:00 ರಿಂದ ಸಂಜೆ 04:00 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಎಬ್ಲಾಕ್, ಇ ಬ್ಲಾಕ್, ಬಳ್ಳಾರಿ ಮುಖ್ಯ ರಸ್ತೆ, ಎಫ್ ಬ್ಲಾಕ್, ತಲಕಾವೇರಿ ಲೇಔಟ್, ಅಮೃತಹಳ್ಳಿ, ಬಿಜಿಎಸ್ ಲೇಔಟ್, ನವ್ಯ ನಗರ ಬ್ಲಾಕ್, ಶಬರಿ ನಗರ ಬೈತರಾಯನಪುರ, ಜಕ್ಕೂರು ಬಡಾವಣೆ, ಜಿಕೆವಿಕೆ ಲೇಔಟ್, ಜಕ್ಕೂರು ಪ್ಲಾಂಟೇಶನ್, ಯೋಷಾದ ನಗರಾಮೃತಹಳ್ಳಿ, ಡಿ ಅಮೃತಹಳ್ಳಿ ಬಿ ಬ್ಲಾಕ್, ಸಿ ಬ್ಲಾಕ್, ಸಿಕ್ಯೂಎಎಲ್ ಲೇಔಟ್, ಡಿ ಬ್ಲಾಕ್, ಇ ಬ್ಲಾಕ್, ಸಂಪಿಗೆಹಳ್ಳಿ, ಅಗ್ರಹಾರ ಗ್ರಾಮ, ಜಯಸೂರ್ಯ ಲೇಔಟ್, ವಿಧಾನಸೌಧ ಲೇಔಟ್, ಸಾಯಿಬಾಬಾ ಲೇಔಟ್, ಟೆಲಿಕಾಂ ಲೇಔಟ್, ಎಂಸಿಇಸಿಎಚ್ ಎಸ್ ಲೇಔಟ್, ಸುರ್ಯೋದಯ ನಗರ.2, ಅಗ್ರಹಾರ ಲೇಔಟ್, ಕೋಗಿಲು ಲೇಔಟ್, ಶ್ರೀನಿವಾಸಪುರ ಜಕ್ಕೂರು, ವಿಆರ್ ಲ್ ರಸ್ತೆ ( ಸಂತೆ ರಸ್ತೆ), ಐಎಎಸ್ ರಸ್ತೆ, ಅರ್ಕಾವತಿ ಲೇಔಟ್ ಮತ್ತು ಸುತ್ತ ಮುತ್ತಲಿನ…
ಹುಬ್ಬಳ್ಳಿ : ಮುಂಬರುವ ಕ್ರಿಸ್ಮಸ್ ಹಬ್ಬದ ಪ್ರಯುಕ್ತ ಮತ್ತು ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ತೆರವುಗೊಳಿಸಲು ದಾನಾಪುರ ಮತ್ತು ಎಸ್ಎಂವಿಟಿ ಬೆಂಗಳೂರು ನಿಲ್ದಾಣಗಳ ನಡುವೆ ಎರಡು ಟ್ರಿಪ್ ವಿಶೇಷ ಸೂಪರ್ ಫಾಸ್ಟ್ ಎಕ್ಸ್ ಪ್ರೆಸ್ ರೈಲುಗಳ ಸಂಚಾರ ನಡೆಸಲು ಪೂರ್ವ ಮಧ್ಯ ರೈಲ್ವೆಯು ಸೂಚಿಸಿದೆ. ರೈಲು ಸಂಖ್ಯೆ 03351 ದಾನಾಪುರ-ಎಸ್ಎಂವಿಟಿ ಬೆಂಗಳೂರು ವಿಶೇಷ ಸೂಪರ್ ಫಾಸ್ಟ್ ಎಕ್ಸ್ ಪ್ರೆಸ್ ರೈಲು ಡಿಸೆಂಬರ್ 22 ಮತ್ತು 29, 2024 ರಂದು (ಭಾನುವಾರ) ದಾನಾಪುರದಿಂದ ಮಧ್ಯಾಹ್ನ 3 ಗಂಟೆಗೆ ಹೊರಟು, ಮೂರನೇ ದಿನ (ಮಂಗಳವಾರ) ಎಸ್ಎಂವಿಟಿ ಬೆಂಗಳೂರು ನಿಲ್ದಾಣಕ್ಕೆ ಮಧ್ಯಾಹ್ನ 2:30 ಗಂಟೆಗೆ ಆಗಮಿಸಲಿದೆ. ರೈಲು ಸಂಖ್ಯೆ 03352 ಎಸ್ಎಂವಿಟಿ ಬೆಂಗಳೂರು-ದಾನಾಪುರ ವಿಶೇಷ ಸೂಪರ್ ಫಾಸ್ಟ್ ಎಕ್ಸ್ ಪ್ರೆಸ್ ರೈಲು ಡಿಸೆಂಬರ್ 24 ಮತ್ತು 31, 2024 ರಂದು (ಮಂಗಳವಾರ) ಎಸ್ಎಂವಿಟಿ ಬೆಂಗಳೂರಿನಿಂದ ರಾತ್ರಿ 11:50ಕ್ಕೆ ಹೊರಟು, ಮೂರನೇ ದಿನ (ಗುರುವಾರ) ದಾನಾಪುರ ನಿಲ್ದಾಣವನ್ನು ರಾತ್ರಿ 11:55ಕ್ಕೆ ತಲುಪಲಿದೆ. ಈ ರೈಲು ಎರಡೂ ಮಾರ್ಗಗಳಲ್ಲಿ ಅರಾ,…
ಬೆಳಗಾವಿ : ರಾಜ್ಯದಲ್ಲಿ ಅಕ್ರಮ ಮದ್ಯ ಮಾರಾಟ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಅಬಕಾರಿ ಸಚಿವ ಆರ್. ಬಿ. ತಿಮ್ಮಾಪುರ ಸ್ಪಷ್ಟಪಡಿಸಿದರು. ಅವರು ಇಂದು ವಿಧಾನ ಪರಿಷತ್ತಿನಲ್ಲಿ ಸದಸ್ಯ ಸುನಿಲ್ ಗೌಡ ಪಾಟೀಲ್ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದರು.ರಾಜ್ಯದಲ್ಲಿ ಅಕ್ರಮ ಮದ್ಯ ಮಾರಾಟದ ವಿರುದ್ಧ ಕರ್ನಾಟಕ ಅಬಕಾರಿ ಕಾಯ್ದೆ ಅನ್ವಯ ಕಳೆದ ಮೂರು ವರ್ಷಗಳಲ್ಲಿ ಒಟ್ಟು 5751 ದಾಳಿಗಳನ್ನು ನಡೆಸಿ, 4437 ಪ್ರಕರಣಗಳನ್ನು ದಾಖಲಿಸಲಾಗಿದೆ. ಪ್ರಕರಣಗಳಲ್ಲಿ ಭಾಗಿಯಾದ 5021 ಆರೋಪಿತರನ್ನು ದಸ್ತಗಿರಿ ಮಾಡಲಾಗಿದೆ ಎಂದು ಸಚಿವರು ತಿಳಿಸಿದರು.
ಬೆಳಗಾವಿ : ಬಳ್ಳಾರಿಯಲ್ಲಿ ಸಂಭವಿಸಿದ ಬಾಣಂತಿಯರ ಸಾವಿನ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಇದರಲ್ಲಿ ತಪ್ಪಿತಸ್ಥರಾದವರನ್ನು ಸುಮ್ಮನೆ ಬಿಡುವುದಿಲ್ಲ. ಮುಖ್ಯಮಂತ್ರಿಗಳೊAದಿಗೆ ಚರ್ಚಿಸಿ, ಬಾಣಂತಿಯರ ಸಾವಿನ ಕುರಿತು ನ್ಯಾಯಮೂರ್ತಿಗಳ ನೇತೃತ್ವದಲ್ಲಿ ತನಿಖೆ ನಡೆಸಲಾಗುವುದು. ಒಂದು ವೇಳೆ ನಾನು ತಪ್ಪಿತಸ್ಥನೆಂದು ತಿಳಿದು ಬಂದರೆ, ಯಾವುದೇ ಮುಲಾಜು ಇಲ್ಲದೇ, ನನ್ನ ಮೇಲಿನ ಕ್ರಮಕ್ಕೂ ಸಿದ್ಧ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಅಧಿವೇಶನದಲ್ಲಿ, ವಿರೋಧ ಪಕ್ಷದ ನಾಯಕರು ನಿಯಮ 69 ಅಡಿ ಬಾಣಂತಿಯರ ಸಾವಿನ ಕುರಿತು ಪ್ರಸ್ತಾಪಿಸಿದ್ದ ವಿಚಾರಗಳಿಗೆ ಸಚಿವ ದಿನೇಶ್ ಗುಂಡೂರಾವ್ ಶುಕ್ರವಾರ ಉತ್ತರಿಸಿದರು.ಕಳೆದ ನವೆಂಬರ್ ತಿಂಗಳ 9, 10 ಹಾಗೂ 11 ತಾರೀಖಿನಂದು ಬಳ್ಳಾರಿ ಆಸ್ಪತ್ರೆಯಲ್ಲಿ 34 ಸಿಜೇರಿಯನ್ ಹೆರಿಗೆ ಮಾಡಲಾಗಿದೆ. ಈ ಪೈಕಿ 7 ಬಾಣಂತಿಯರು ಹೆರಿಗೆ ನಂತರ ತೀವ್ರ ತರನಾಗಿ ಅಸ್ವಸ್ಥಗೊಂಡರು. ಇದರಲ್ಲಿ 5 ಬಾಣಂತಿಯರು ಸಾವನಪ್ಪಿದರೆ, ಇಬ್ಬರು ಸಾವಿನಿಂದ ಪಾರಾದರು. ಘಟನೆ ತಿಳಿದ ತಕ್ಷಣವೇ, ಸಾವಿನ…
ಬೆಳಗಾವಿ : ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಎಂಎಲ್ಸಿ ಸಿಟಿ ರವಿ ಅವರು ಅವಾಚ್ಯವಾಗಿ ಪದ ಬಳಿಸಿ ನಿಂದನೆ ಮಾಡಿದ್ದಾರೆ ಎಂದು ಆರೋಪಿಸಿ ಇದೀಗ ಸಭಾಪತಿ ಬಸವರಾಜ್ ಹೊರಟ್ಟಿ ಅವರಿಗೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಸಿಟಿ ರವಿ ವಿರುದ್ಧ ದೂರು ನೀಡಿದ್ದಾರೆ. ಅಲ್ಲದೆ ಪೊಲೀಸರಿಗೂ ದೂರು ನೀಡಲು ಅವರು ಸಿದ್ಧತೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಘಟನೆ ಹಿನ್ನೆಲೆ ಏನು? ವಿಧಾನ ಪರಿಷತ್ನಲ್ಲಿ ಬಿಜೆಪಿ ಸದಸ್ಯರು ಪ್ರಾಸ್ಟೂ* ಎಂಬ ಪದ ಬಳಕೆ ಮಾಡಿದ್ದಾರೆ. ಸಿ.ಟಿ. ರವಿ ಅವರು ಲಕ್ಷ್ಮಿ ಹೆಬ್ಬಾಳ್ಕರ್ ವೇ* ಎಂದು ಹೇಳಿದ್ದಾರೆ. ಈ ಪದವನ್ನು ಬಳಕೆ ಮಾಡಿದ್ದರಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಕೆಂಡಾಮಂಡಲವಾಗಿದ್ದಾರೆ. ಇದರಿಂದ ತಮಗಾದ ಅವಮಾನ ತಡೆದುಕೊಳ್ಳಲಾಗದೇ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಕಣ್ಣಿರು ಹಾಕುತ್ತಾ ಪರಿಷತ್ತಿನಿಂದ ಹೊರಗೆ ಹೋಗಿದ್ದಾರೆ. ಈ ಬಗ್ಗೆ ಬಿಜೆಪಿ ಸದಸ್ಯರು ಸಿ.ಟಿ. ರವಿ ಅವರು ಹಾಗೇ ಮಾತನಾಡಿಲ್ಲ ಎಂದು ವಾದ ಮಾಡಿದ್ದಾರೆ. ಇನ್ನು ಈ ಘಟನೆ ನಡೆಯುವ ಸ್ವಲ್ಪ ಮುಂಚೆ ಸಿ.ಟಿ. ರವಿ ಹೊರಗೆ…