Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ಕಳೆದ ಕೆಲವು ದಿನಗಳ ಹಿಂದೆ ವರುಣ ಶಾಂತವಾಗಿದ್ದು ಬೆಂಗಳೂರಿನ ಜನತೆ ಸಹಜ ಸ್ಥಿತಿಯತ್ತ ಮರುಳುತ್ತಿದ್ದರು. ಇದೀಗ ಹವಾಮಾನ ಇಲಾಖೆಯ ಮುನ್ಸೂಚನೆಯ ಪ್ರಕಾರ ಬೆಂಗಳೂರು ನಗರ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮುಂದಿನ ಮೂರು ಗಂಟೆಗಳ ಕಾಲ ಭಾರಿ ಮಳೆ ಆಗುವ ಮುನ್ಸೂಚನೆ ನೀಡಿದೆ. ಇದೀಗ ಕರ್ನಾಟಕದಾದ್ಯಂತ ಮತ್ತೆ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಮುಂದಿನ 3 ಗಂಟೆಗಳಲ್ಲಿ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ರಾಮನಗರ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ. ರಾಜ್ಯದ ದಕ್ಷಿಣ ಒಳನಾಡು, ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಹಿತ ಅಲ್ಲಲ್ಲಿ ಸಾಧಾರಣ ಮಳೆ. ಉತ್ತರ ಒಳನಾಡು ಜಿಲ್ಲೆಗಳಲ್ಲಿ ಒಣ ಹವೆಯಿರುವ ಸಾಧ್ಯತೆ ಇದೆ. ನವೆಂಬರ್ 9 ರಿಂದ ಮೂರು ದಿನಗಳ ಕಾಲ 6 ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದ್ದು, ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ರಾಯಚೂರು : ಒಂದೇ ಬೈಕ್ ನಲ್ಲಿ ನಾಲ್ವರು ಯುವಕರು ಚಲಿಸುತ್ತಿದ್ದ ವೇಳೆ ಬೈಕ್ ಹಾಗೂ ಕಾರು ಮದ್ಯ ಭೀಕರವಾದ ಅಪಘಾತ ಸಂಭವಿಸಿ, ಸ್ಥಳದಲ್ಲೇ ಇಬ್ಬರು ಯುವಕರು ಸಾವನಪ್ಪಿದ್ದು, ಇನ್ನಿಬ್ಬರಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ರಾಯಚೂರು ನಗರದ ಹೊರವಲಯದ ಪವರ್ ಗ್ರಿಡ್ ಬಳಿ ಇಂದು ನಡೆದಿದೆ. ಹೌದು ಮೃತ ಯುವಕರನ್ನು ಶರಣಬಸವ(28), ಶಿವು (26) ಮೃತ ದುರ್ದೈವಿಗಳು ಎಂದು ಹೆಕಲಾಗುತ್ತಿದೆ.ಬೈಕ್ ನಲ್ಲಿದ್ದ ಇನ್ನಿಬ್ಬರು ಇರ್ಫಾನ್ ಹಾಗೂ ಗರೀಬ್ ಎಂಬುವರಿಗೆ ಗಂಭೀರವಾದ ಗಾಯಗಳಾಗಿವೆ. ಗಾಯಾಳುಗಳನ್ನ ರಾಯಚೂರಿನ ರಿಮ್ಸ್ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ನಿಯಮ ಉಲ್ಲಂಘಿಸಿ ಬೈಕ್ ನಲ್ಲಿ ನಾಲ್ವರು ಯುವಕರು ಚಲಿಸುತ್ತಿದ್ದ ವೇಳೆ ರಾಯಚೂರಿನಿಂದ ಕಲ್ಲೂರಿಗೆ ತೆರಳುತ್ತಿದ್ದ ವೇಳೆ ಪವರ್ ಗ್ರೀಡ್ ಬಳಿ ಕಾರು ಡಿಕ್ಕಿ ಹೊಡೆದಿದೆ. ಈ ವೇಳೆ ಕೆಳಗೆ ಬಿದ್ದ ಸಂದರ್ಭದಲ್ಲಿ ಇಬ್ಬರು ಯುವಕರ ಮೇಲೆ ಲಾರಿ ಹರಿದ ಪರಿಣಾಮ ಸ್ಥಳದಲ್ಲಿ ಸಾವನ್ನಪ್ಪಿದ್ದಾರೆ.ಘಟನಾ ಸ್ಥಳಕ್ಕೆ ಪಶ್ಚಿಮ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಹಾವೇರಿ : ನನ್ನನ್ನು ಸಿಎಂ ಸ್ಥಾನದಿಂದ ಕೆಳಗೆ ಇಳಿಸಲು ಆಪರೇಷನ್ ಕಮಲದ ಮೂಲಕ ಶಾಸಕರಿಗೆ 50 ಕೋಟಿ ರೂಪಾಯಿ ನೀಡಲಾಗಿದೆ ಎಂದು ಬಿಜೆಪಿ ವಿರುದ್ಧ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ನೀಡಿದ್ದಾರೆ. ನಿನ್ನೆ ಹಾವೇರಿ ಜಿಲ್ಲೆಯ ಸಮಣೂರು ತಾಲೂಕಿನ ಹುರಳಿಕುಪ್ಪಿಯಲ್ಲಿ ಚುನಾವಣಾ ಪ್ರಚಾರದ ವೇಳೆ ಭಾಷಣ ಮಾಡಿದ ಅವರು, ಎಲ್ಲರೂ ಸೇರಿ ನನ್ನ ವಿರುದ್ಧ ಹುನ್ನಾರ ಮಾಡಿದ್ದಾರೆ. ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮಗ ಭರತ್ ಬೊಮ್ಮಾಯಿನನ್ನು ಸೋಲಿಸಿ ಉತ್ತರ ಕೊಡಿ. ನನ್ನ ವಿರುದ್ಧ ನಡೆಯುತ್ತಿರುವ ಹುನ್ನಾರಕ್ಕೆ ಉತ್ತರ ಕೊಡಬೇಕಿದೆ. ನನ್ನ ರಾಜಕೀಯ ಜೀವನ ತೆರೆದ ಪುಸ್ತಕ.ಹೊಟ್ಟೆ ಕಿಚ್ಚಿನಿಂದ ಸಹಿಸದೆ ಹೇಗಾದರೂ ಮಾಡಿ ನನ್ನನ್ನು ಇಳಿಸಲು ಪ್ರಯತ್ನಿಸಲಾಗುತ್ತಿದೆ ಎಂದರು. ಆಪರೇಷನ್ ಕಮಲದ ಮೂಲಕ ಅಧಿಕಾರದಿಂದ ನನ್ನ ಇಳಿಸಲು ಯತ್ನಿಸಲಾಗುತ್ತಿದೆ. ಒಬ್ಬ ಶಾಸಕರಿಗೆ 50 ಕೋಟಿ ಆಫರ್ ನೀಡಿ ಆಪರೇಷನ್ ಕಮಲಕ್ಕೆ ಯತ್ನಿಸಲಾಗಿದೆ. ಈಗ ನಾನು ರಾಜೀನಾಮೆ ಕೊಡಬೇಕು ಎಂದು ಅಂತಿದ್ದಾರೆ. ಕಾನೂನಿನಡಿ ಎದುರಿಸಲು ಸಿದ್ಧನಿದ್ದೇನೆ ಎಂದು ಹೇಳಿದ್ದೇನೆ ಆದರೂ ನನ್ನ ವಿರುದ್ಧ ಮಸಲತ್ತು…
ತುಮಕೂರು : ಹಾಸ್ಟೆಲಲ್ಲಿ ಊಟ ಸೇವಿಸಿ ಅಸ್ವಸ್ಥಗೊಂಡು 6ನೇ ತರಗತಿ ವಿದ್ಯಾರ್ಥಿಯೊಬ್ಬ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ಬಜ್ಜನಹಳ್ಳಿಯ ಏಕಲವ್ಯ ವಸತಿ ಶಾಲೆಯಲ್ಲಿ ನಿನ್ನೆ ಈ ಒಂದು ಘಟನೆ ನಡೆದಿದೆ. ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ಬಜ್ಜನಹಳ್ಳಿಯಲ್ಲಿ ಈ ಘಟನೆ ನಡೆದಿದ್ದು, ಹಾಸ್ಟೆಲಲ್ಲಿ ಅಸ್ವಸ್ಥಗೊಂಡಿದ್ದ ಅಭಿಲಾಶ್ (13) ಸಾವನ್ನಪ್ಪಿದ್ದಾನೆ. ಮಧ್ಯಾಹ್ನ ಊಟ ಮಾಡಿದ ಬಳಿಕ ಬಾಲಕ ಅಭಿಲಾಶ್ ಅಸ್ವಸ್ಥಗೊಂಡಿದ್ದ. ಈ ವೇಳೆ ಸೂಕ್ತ ಚಿಕಿತ್ಸೆ ಸಿಗದೇ ಹಾಸ್ಟೆಲ್ ಕೊಠಡಿಯಲ್ಲಿ ಬಾಲಕ ಸಾವನ್ನಪ್ಪಿದ್ದಾನೆ.ಅಸ್ವಸ್ಥಗೊಂಡ ಅಭಿಲಾಷೆಗೆ ಪ್ರಾಥಮಿಕ ಚಿಕಿತ್ಸೆ ಕೊಡಿಸದೆ ನಿರ್ಲಕ್ಷ ಮಾಡಿರುವ ಆರೋಪ ಕೇಳಿ ಬಂದಿದೆ. ಹಾಸ್ಟೆಲ್ ಪ್ರಾಂಶುಪಾಲ ಹಾಗೂ ವಾರ್ಡನ್ ವಿರುದ್ಧ ಪೋಷಕರು ಆರೋಪಿಸಿದ್ದಾರೆ. ಘಟನೆ ಕುರಿತಂತೆ ಕೊರಟಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು : ರಾಜ್ಯದ ಐದು ಜಿಲ್ಲೆಗಳಲ್ಲಿ ಹೊಸದಾಗಿ 5 ವೈದ್ಯಕೀಯ ಕಾಲೇಜುಗಳನ್ನು ಆರಂಭಿಸಲು ಸರ್ಕಾರ ಉದ್ದೇಶಿಸಿದೆ. ಹಾಗಾಗಿ ಕಾಲೇಜುಗಳನ್ನು ಆರಂಭ ಮಾಡಲು ಸಿದ್ಧತೆ ಮಾಡಿಕೊಳ್ಳಲು ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ್ ಪಾಟೀಲ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಸೂಚನೆ ನೀಡಲಾಗಿದೆ. ಹೌದು ಬಾಗಲಕೋಟೆ, ತುಮಕೂರು, ಕೋಲಾರ, ದಾವಣಗೆರೆ ಮತ್ತು ಬಿಜಾಪುರದಲ್ಲಿ ವೈದ್ಯಕೀಯ ಕಾಲೇಜು ಪ್ರಾರಂಭಿಸಲು ಉದ್ದೇಶಿಸಲಾಗಿದೆ.ಎಲ್ಲಾ ಜಿಲ್ಲೆಯಲ್ಲಿಯೂ ವೈದ್ಯಕೀಯ ಕಾಲೇಜುಗಳನ್ನು ಪ್ರಾರಂಭ ಮಾಡಬೇಕು ಎನ್ನುವುದು ಸರ್ಕಾರದ ಉದ್ದೇಶವಾಗಿದ್ದು, ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ವೈದ್ಯಕೀಯ ಇಲಾಖೆ ಮೂಲಗಳು ತಿಳಿಸಿವೆ. ವೈದ್ಯಕೀಯ ಕಾಲೇಜು ಪ್ರಾರಂಭ ಮಾಡಲು ಸಾಕಷ್ಟು ಸಿದ್ಧತೆಗಳನ್ನು ಮಾಡಿಕೊಳ್ಳಬೇಕಾಗುತ್ತದೆ. ಹಾಗಾಗಿ ಸಂಬಂದಿಸಿದ ಜಿಲ್ಲೆಯಲ್ಲಿ ಸ್ಥಳ ಆಯ್ಕೆಯಿಂದ ಹಿಡಿದು ಅನೇಕ ಕೆಲಸಗಳನ್ನು ಮಾಡಿಕೊಳ್ಳುವಂತೆ ಮೌಖಿಕವಾಗಿ ಸೂಚನೆ ನೀಡಲಾಗಿದೆ. ರಾಜ್ಯದಲ್ಲಿರುವ ಸದ್ಯ 22 ವೈದ್ಯ ಕಾಲೇಜುಗಳಿದ್ದು, ಕನಕಪುರ ಮತ್ತು ರಾಮನಗರ ವೈದ್ಯ ಕಾಲೇಜು ಈ ವರ್ಷ ಪ್ರಾರಂಭವಾಗುವ ನಿರೀಕ್ಷೆ ಇದೆ.
ಕೋಲಾರ : ದುಷ್ಕರ್ಮಿಗಳು ಮಹಿಳೆಯ ಕತ್ತು ಕೊಯ್ದು ಭೀಕರವಾಗಿ ಕೊಲೆ ಮಾಡಿರುವ ಘಟನೆ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಪಾಳ್ಯ ಗ್ರಾಮದ ಹೊರವಲಯದಲ್ಲಿ ನಡೆದಿದೆ. ಹೌದು ಪಾಳ್ಯ ಗ್ರಾಮದಲ್ಲಿ ಕತ್ತು ಕೊಯ್ದು ಮಹಿಳೆಯ ಬರ್ಬರ ಕೊಲೆಯಾಗಿದೆ. ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಪಾಳ್ಯ ಗ್ರಾಮದಲ್ಲಿ ಈ ಒಂದು ಕೊಲೆ ನಡೆದಿದೆ.ಕತ್ತು ಕೊಯ್ದು ರೂಪ (38) ಎಂಬವರ ಬರ್ಬರ ಹತ್ಯೆ ನಡೆದಿದೆ. ಗ್ರಾಮದ ಹೊರವಲಯದಲ್ಲಿ ಕತ್ತು ಕೊಯ್ದು ಭೀಕರವಾಗಿ ಕೊಲೆ ಮಾಡಲಾಗಿದೆ. ಶ್ರೀನಿವಾಸಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು : 40,000 ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಸಹಾಯಕ ಡ್ರಗ್ಸ್ ಕಂಟ್ರೋಲರ್ ಅಧಿಕಾರಿ ಒಬ್ಬರು ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಹೌದು ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿಯನ್ನು ಸಹಾಯಕ ಡ್ರಗ್ಸ್ ಕಂಟ್ರೋಲರ್ ಅಧಿಕಾರಿ ಅಜಯ್ ಡಿ.ಶಾ ಎಂದು ತಿಳಿದುಬಂದಿದೆ. ಲಂಚ ಸ್ವೀಕರಿಸುವಾಗ ರೆಡ್ ಹ್ಯಾಂಡ್ ಆಗಿ ಸಿಗಿ ಬಿದ್ದಿದ್ದಾರೆ. ಹೊಲ್ಸೇಲ್ ಮೆಡಿಕಲ್ ಶಾಪ್ ಲೈಸೆನ್ಸ್ ಗೆ ಸುಬ್ರಮಣ್ಯ ಎನ್ನುವವರು ಅರ್ಜಿ ಹಾಕಿದ್ದರು. ಮೆಡಿಕಲ್ ಶಾಪ್ ಗೆ ಲೈಸೆನ್ಸ್ ನೀಡಲು ಲಂಚಕ್ಕೆ ಅಜಯ್ ಡಿಮ್ಯಾಂಡ್ ಮಾಡಿದ್ದರು. ಸುಬ್ರಮಣ್ಯ ಬಳಿ 40,000 ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ಕಾರಿನಲ್ಲಿ ಲಂಚ ಸ್ವೀಕರಿಸುವಾಗ ಅಧಿಕಾರಿ ಅಜಯ್ ಲೋಕಯುಕ್ತ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ ಎಸ್ ಪಿ ಶ್ರೀನಾಥ್ ಜೋಶಿ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ.ಅಧಿಕಾರಿ ಅಜಯ್ ರಾಜ್ ಡಿ.ಶಾನನ್ನು ಇದೀಗ ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.
ಚಿಕ್ಕಬಳ್ಳಾಪುರ : ಕೋಲಾರ -ಚಿಕ್ಕಬಳ್ಳಾಪುರ ಕೇಂದ್ರ ಸಹಕಾರ ಬ್ಯಾಂಕಿನ ವಿವಿಧ ಶಾಖೆಗಳಲ್ಲಿ 9.86 ಕೋಟಿ ರೂಪಾಯಿ ಅವ್ಯವಹಾರ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಬ್ಯಾಂಕಿನ ಕೋಲಾರ, ಕೆಜಿಎಫ್, ಚಿಂತಾಮಣಿ ತಾಲ್ಲೂಕು ಶಾಖೆಗಳ ವ್ಯವಸ್ಥಾಪಕರನ್ನು ಅಮಾನತು ಮಾಡಲಾಗಿದೆ. ಹೌದು ಕೋಲಾರ ಶಾಖೆಯಲ್ಲಿ 1.50 ಕೋಟಿ ರೂ., ಕೆಜಿಫ್ ನಲ್ಲಿ 4.17 ಕೋಟಿ ರೂ., ಚಿಂತಾಮಣಿ ಶಾಖೆಯಲ್ಲಿ 2.23 ಕೋಟಿ ರೂ. ಹಣ ದುರ್ಬಳಕೆಯಾಗಿದೆ. ಈ ಹಿನ್ನೆಲೆಯಲ್ಲಿ ವ್ಯವಸ್ಥಾಪಕರಾದ ಎಂ. ಅಮರೇಶ್, ಜಿ.ಎನ್. ಗಿರೀಶ್, ಜಿ. ನಾಗರಾಜ್ ಅವರ ವಿರುದ್ಧ ವಿಚಾರಣೆ ಕಾಯ್ದಿರಿಸಿ ಸೇವೆಯಿಂದ ಅಮಾನತು ಮಾಡಲಾಗಿದೆ. ಈ ಅಕ್ರಮ ಕುರಿತಂತೆ ಮುನೀಶ್ ಎಂಬುವವರು ದೂರು ನೀಡಿದ್ದರು. ಹಾಗಾಗಿ ಬ್ಯಾಂಕಿನ ಆಂತರಿಕ ಪರೀಕ್ಷಣಾ ತಂಡ ತನಿಖೆ ಕೈಗೊಂಡಿತ್ತು. 2017 -18ನೇ ಸಾಲಿನಿಂದ 2020 -21ನೇ ಸಾಲಿನವರೆಗೆ ನಡೆದ ಅಕ್ರಮಗಳ ತನಿಖೆ ನಡೆಸಿದಾಗ ಈ ಅವ್ಯವಹಾರ ಬೆಳಕಿಗೆ ಬಂದಿದೆ. ಹಾಗಾಗಿ ಮೂವರು ವ್ಯವಸ್ಥಾಪಕರನ್ನು ಇದೀಗ ಸಸ್ಪೆಂಡ್ ಮಾಡಲಾಗಿದೆ.
ವಿಜಯಪುರ : ವಕ್ಫ್ ವಿವಾದಕ್ಕೆ ಸಂಬಂಧಪಟ್ಟಂತೆ ಮೊದಲು ವಿಜಯಪುರ ಜಿಲ್ಲೆಯಲ್ಲಿ ಈ ಒಂದು ವಿವಾದ ಆರಂಭವಾಯಿತು. ಜಿಲ್ಲೆಯ ಅನೇಕ ರೈತರ ಜಮೀನು ವಕ್ಫ್ ಆಸ್ತಿಯೆಂದು ರೈತರ ಜಮೀನಿನ ಪಹಣಿಯಲ್ಲಿ ನಮೂದಾಗಿದ್ದು ಕಂಡು ರೈತರು ಆತಂಕಕ್ಕೆ ಒಳಗಾಗಿದ್ದರು.ಈ ಹಿನ್ನೆಲೆಯಲ್ಲಿ ಬಿಜೆಪಿ ನಿನ್ನೆ ರಾಜ್ಯಾದ್ಯಂತ ಪ್ರತಿಭಟನೆ ನಡೆಸಿತ್ತು. ಇದೀಗ ವಿಜಯಪುರ ಜಿಲ್ಲೆಯಲ್ಲಿ ವಕ್ಫ್ ಬೋರ್ಡ್ನಿಂದಾದ ಅವಾಂತರ ಕುರಿತು ಬಿಜೆಪಿಯ ಸತ್ಯಶೋಧನಾ ಸಮಿತಿ ಅಧ್ಯಕ್ಷ ಗೋವಿಂದ ಕಾರಜೋಳ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರಿಗೆ ಸೋಮವಾರ ವರದಿ ಸಲ್ಲಿಸಿದ್ದಾರೆ.ಜಿಲ್ಲೆಯಲ್ಲಿ 14,210 ಎಕರೆ ಜಮೀನು ವಕ್ಫ್ ಬೋರ್ಡ್ ಹೆಸರಿನಲ್ಲಿ ಕಬಳಿಕೆಯಾಗಿದೆ ಎಂದು ಸಮಿತಿಯ ವರದಿಯಲ್ಲಿ ತಿಳಿಸಲಾಗಿದೆ. ಸಿಂದಗಿಯಲ್ಲಿ 12ನೇ ಶತಮಾನದಲ್ಲಿ ಬಸವಾದಿ ಶರಣರ ಕಾಲದಲ್ಲಿ ನಿರ್ಮಿಸಲಾದ ಮಠದ ಆಸ್ತಿ, ದೇವರ ಹಿಪ್ಪರಗಿ ತಾಲೂಕಿನ ಪಡಗನೂರು ಗ್ರಾಮದಲ್ಲಿ ಸರ್ವೆ ಸಂಖ್ಯೆ 220ರಲ್ಲಿ 57 ಎಕರೆ ಜಮೀನು, ಪಡಗನೂರು ಗ್ರಾಮದಲ್ಲಿನ ಕಾಲದ ಚಾಲುಕ್ಯರ ದೇವಸ್ಥಾನ, ವಿಜಯಪುರ ನಗರದಲ್ಲಿನ ಲೋಕೋಪಯೋಗಿ ಇಲಾಖೆಗೆ ಸೇರಿದ ಸರ್ವೆ ಸಂಖ್ಯೆ 811ರ 77 ಎಕರೆ 10…
ಹಾಸನ : ಹಸೆಮಣೆ ಎರಬೇಕಿದ್ದ ಕೆ ಎಸ್ ಐ ಎಸ್ ಎಫ್ ಕಾನ್ಸ್ಟೇಬಲ್ ಒಬ್ಬರನ್ನು ಬರ್ಬರ ಹತ್ಯೆ ಮಾಡಲಾಗಿದೆ. ಹಾಸನ ತಾಲೂಕಿನ ದುದ್ದ ಗ್ರಾಮದಲ್ಲಿ ಈ ಒಂದು ಭೀಕರ ಕೊಲೆ ನಡೆದಿದೆ. ಮಾರಕಾಸ್ತ್ರಗಳಿಂದ ಕೊಚ್ಚಿ ವಿ ಹರೀಶ್ (32) ಭೀಕರವಾಗಿ ಕೊಲೆಯಾಗಿದ್ದಾರೆ.ಮೃತ ಹರೀಶ್ ಅರಸೀಕೆರೆ ತಾಲೂಕಿನ ಬಾಗೇಶಪುರ ಗ್ರಾಮದ ನಿವಾಸಿ ಎಂದು ತಿಳಿದು ಬಂದಿದೆ. ಬೆಂಗಳೂರಿನಲ್ಲಿ ಕೆ ಎಸ್ ಐ ಎಸ್ ಎಫ್ ಕಾನ್ಸ್ಟೇಬಲ್ ಆಗಿ ಕಾರ್ಯನಿರ್ವಹಿಸುತ್ತಿದ್ದರು. (KSISF) ಕರ್ನಾಟಕ ರಾಜ್ಯ ಕೈಗಾರಿಕಾ ಭದ್ರತಾ ಪಡೆಯಲ್ಲೇ ಕಾರ್ಯ ನಿರ್ವಹಿಸುತ್ತಿದ್ದರು. ಇದೇ ನವೆಂಬರ್ 11ರಂದು ಹರೀಶ್ ಮದುವೆ ನಿಗದಿಯಾಗಿತ್ತು. ಮದುವೆ ಆಮಂತ್ರಣ ಪತ್ರ ಹಂಚಿ ಮನೆಗೆ ತೆರುಳುವಾಗ ಹರೀಶ್ ಅನ್ನು ಭೀಕರವಾಗಿ ಕೊಲೆ ಮಾಡಲಾಗಿದೆ. ಮಾರಕಾಷ್ಟಗಳಿಂದ ಹಲ್ಲೆ ನಡೆಸಿ ಹರೀಶ್ ಕೊಲೆ ಮಾಡಿದ ದುಷ್ಕರ್ಮಿಗಳು ಪರಾರಿ ಆಗಿದ್ದಾರೆ. ಘಟನಾ ಸ್ಥಳಕ್ಕೆ ಹಾಸನದ ಎಸ್ಪಿ ಮೊಹಮ್ಮದ್ ಸುಜಿತಾ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಹಾಸನ ತಾಲೂಕಿನ ದುದ್ದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.