Subscribe to Updates
Get the latest creative news from FooBar about art, design and business.
Author: ಸುರೇಶ್
"ಕನ್ನಡ ನ್ಯೂಸ್ ನೌ ಜಾಲತಾಣದ ಮುಖ್ಯ ಸಂಪಾದಕರಾದ ಸುರೇಶ್ ಅವರು ಕಳೆದ 4 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದಾರೆ. ಸರ್ಕಾರದ ಯೋಜನೆಗಳು, ಶಿಕ್ಷಣ ಮತ್ತು ಪ್ರಚಲಿತ ವಿದ್ಯಮಾನಗಳನ್ನು ಸಾಮಾನ್ಯ ಜನರಿಗೂ ಅರ್ಥವಾಗುವಂತೆ ವಿವರಿಸುವುದು ಇವರ ವಿಶೇಷತೆ. ಈ ಮೊದಲು ವಿವಿಧ ವೆಬ್‌ಸೈಟ್‌ಗಳಲ್ಲಿ ನಾಗರಿಕ ಸಮಸ್ಯೆಗಳ ಬಗ್ಗೆ ವರದಿಗಾರರಾಗಿ ಕೆಲಸ ಮಾಡಿರುವ ಇವರು, ಸಮಯೋಚಿತ ಹಾಗೂ ವಿಶ್ವಾಸಾರ್ಹ ಮಾಹಿತಿ ನೀಡುವ ಮೂಲಕ ಓದುಗರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಡಿಜಿಟಲ್ ಸಾಕ್ಷರತೆ ಇವರ ನೆಚ್ಚಿನ ವಿಷಯಗಳಲ್ಲೊಂದು
ಮೈಸೂರು : ಮೈಸೂರಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು ಕಾರು ಮತ್ತು ಆಟೋ ಮುಖಾಮುಖಿಯಾಗಿ ಡಿಕ್ಕಿ ಹೊಡೆದು, ಸುಮರು 10ಕ್ಕೂ ಹೆಚ್ಚು ಜನರಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ಮೈಸೂರು ಜಿಲ್ಲೆಯ ಟಿ ನರಸೀಪುರ ತಾಲೂಕಿನ ಚೌಹಳ್ಳಿ ಬಳಿ ಈ ಒಂದು ಅಪಘಾತ ಸಂಭವಿಸಿದೆ. ಆಟೋದಲ್ಲಿ ಇದ್ದ 10ಕ್ಕೂ ಹೆಚ್ಚು ಜನರಿಗೆ ಗಂಭೀರವಾದ ಗಾಯಗಳಾಗಿವೆ. ತಕ್ಷಣ ಗಾಯಾಳುಗಳನ್ನು ಮೈಸೂರಿನ ಕೆಆರ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅಪಘಾತದಲ್ಲಿ ಕಾರು ಮತ್ತು ಆಟೋ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ಟಿ ನರಸೀಪುರ ಪೊಲೀಸ್ ಠಾಣೆಯಲ್ಲಿ ಕುರಿತು ಪ್ರಕರಣ ದಾಖಲಾಗಿದೆ.
ಬೆಂಗಳೂರು: ಮುಂಬರುವ ಶೈಕ್ಷಣಿಕ ವರ್ಷದಲ್ಲಿ ಒಂದನೇ ತರಗತಿ ದಾಖಲಾತಿಗೆ ಸಂಬಂಧಿಸಿದಂತೆ ಪೋಷಕರು ಮತ್ತು ವಿದ್ಯಾರ್ಥಿಗಳಲ್ಲಿ ಮೂಡಿದ್ದ ಆತಂಕಕ್ಕೆ ಹೈಕೋರ್ಟ್ ಮಹತ್ವದ ನಿರ್ದೇಶನ ನೀಡಿದೆ. ಒಂದನೇ ತರಗತಿ ಪ್ರವೇಶಾತಿಯ ವಯೋಮಿತಿ ಸಡಿಲಿಕೆ ಆದೇಶವನ್ನು ಮರು ಪರಿಶೀಲಿಸಿ, ಒಂದು ವಾರದೊಳಗೆ ಸೂಕ್ತವಾದ ಹೊಸ ಆದೇಶ ಹೊರಡಿಸುವಂತೆ ರಾಜ್ಯ ಶಾಲಾ ಶಿಕ್ಷಣ ಇಲಾಖೆಗೆ ಹೈಕೋರ್ಟ್ ಕಡಕ್ ಸೂಚನೆ ನೀಡಿದೆ. ಬೆಂಗಳೂರಿನ ಮಾಸ್ಟರ್ ಕೃಷ್ಣಗಣೇಶ್ ಸೇರಿದಂತೆ ಆರು ಮಂದಿ ವಿದ್ಯಾರ್ಥಿಗಳು ಪೋಷಕರ ಮೂಲಕ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಎಸ್.ಆರ್. ಕೃಷ್ಣಕುಮಾರ್ ಅವರಿದ್ದ ನ್ಯಾಯಪೀಠ ನಡೆಸಿತು. ಸದ್ಯ ಜಾರಿಯಲ್ಲಿರುವ ವಯೋಮಿತಿ ನಿಯಮದಿಂದಾಗಿ ರಾಜ್ಯಾದ್ಯಂತ ಸಾವಿರಾರು ವಿದ್ಯಾರ್ಥಿಗಳು ಮತ್ತು ಪೋಷಕರು ತೀವ್ರ ಗೊಂದಲ ಹಾಗೂ ತೊಂದರೆ ಎದುರಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಸರ್ಕಾರ ಎಲ್ಲಾ ಆಯಾಮಗಳಲ್ಲೂ ಈ ವಿಚಾರವನ್ನು ಕೂಲಂಕಷವಾಗಿ ಪರಿಶೀಲಿಸಬೇಕು ಎಂದು ಪೀಠವು ಅಭಿಪ್ರಾಯಪಟ್ಟಿದೆ. ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು ನ್ಯಾಯಾಲಯಕ್ಕೆ ಪ್ರಮುಖ ಅಂಶಗಳನ್ನು ಮನವರಿಕೆ ಮಾಡಿಕೊಟ್ಟರು. ಶಾಲಾ ಶಿಕ್ಷಣ ಇಲಾಖೆಯು ಹೊರಡಿಸಿರುವ ಆದೇಶದ ಪ್ರಕಾರ ಒಂದನೇ…
ಬೆಂಗಳೂರು : ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದ ಜಾಗತಿಕ ಪರಿಣಾಮಗಳು ಈಗ ರಾಜ್ಯದ ರೈತರ ಹೊಸ್ತಿಲಿಗೆ ಬಂದು ತಲುಪಿವೆ. ಯುದ್ಧದ ಹಿನ್ನೆಲೆಯಲ್ಲಿ ಜಾಗತಿಕ ಮಾರುಕಟ್ಟೆಯಲ್ಲಿ ರಸಗೊಬ್ಬರಗಳ ಕೊರತೆ ಎದುರಾಗಿದ್ದು, ಇದರ ನೇರ ಪರಿಣಾಮವಾಗಿ ದರಗಳು ಗಗನಕ್ಕೇರಿವೆ. ಮುಂಗಾರು ಬಿತ್ತನೆಗೆ ಸನ್ನದ್ಧರಾಗುತ್ತಿರುವ ರೈತ ಸಮುದಾಯಕ್ಕೆ ರಸಗೊಬ್ಬರದ ಅಭಾವ ಮತ್ತು ಈ ದಿಢೀರ್ ಬೆಲೆ ಏರಿಕೆಯು ಗಾಯದ ಮೇಲೆ ಬರೆ ಎಳೆದಂತಾಗಿದೆ. ವಿಶೇಷವಾಗಿ ಪೋಟ್ಯಾಷ್ ಮತ್ತು ಕಾಂಪ್ಲೆಕ್ಸ್ ರಸಗೊಬ್ಬರಗಳ ಬೆಲೆಯು ನಿಯಂತ್ರಣ ತಪ್ಪಿದ್ದು, ಕೇವಲ ಒಂದು ತಿಂಗಳ ಅವಧಿಯಲ್ಲಿಯೇ ಎರಡು ಬಾರಿ ದರ ಹೆಚ್ಚಳವಾಗಿದೆ. ಮೇ ತಿಂಗಳ ಆರಂಭದಲ್ಲಿ ಪ್ರತಿ 50 ಕೆ.ಜಿ. ಚೀಲಕ್ಕೆ ₹1,400 ಇದ್ದ ಕಾಂಪ್ಲೆಕ್ಸ್ ಮತ್ತು ಪೋಟ್ಯಾಷ್ ಬೆಲೆ, ಈಗಾಗಲೇ ₹1,700ಕ್ಕೆ ತಲುಪಿದೆ. ಇನ್ನು ಮಾರುಕಟ್ಟೆಗೆ ಬರುತ್ತಿರುವ ಹೊಸ ದಾಸ್ತಾನುಗಳ (ಸ್ಟಾಕ್) ಬೆಲೆ ಬರೋಬ್ಬರಿ ₹2,200ಕ್ಕೆ ಜಿಗಿದಿದೆ. ಮುಂಬರುವ ದಿನಗಳಲ್ಲಿ ಈ ದರ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ ಎಂದು ರಸಗೊಬ್ಬರ ಕಂಪನಿಗಳ ಪ್ರತಿನಿಧಿಗಳು ಆತಂಕ ವ್ಯಕ್ತಪಡಿಸಿದ್ದಾರೆ. ಮತ್ತೊಂದೆಡೆ, ಯೂರಿಯಾ ಮತ್ತು ಡಿಎಪಿ…
ಬೆಂಗಳೂರು : ಶಿಕ್ಷಕರ ಕೊರತೆ ನೀಗಿಸಲು ಕ್ರಮ ರಾಜ್ಯದ ಸರ್ಕಾರಿ ಶಾಲೆಗಳಲ್ಲಿನ ಶಿಕ್ಷಕರ ಕೊರತೆಯನ್ನು ನೀಗಿಸಲು ಮುಖ್ಯಮಂತ್ರಿಗಳು ಬಿಗಿ ಕ್ರಮಕ್ಕೆ ಮುಂದಾಗಿದ್ದಾರೆ. ಸುಮಾರು 15 ಸಾವಿರ ಶಿಕ್ಷಕರನ್ನು ನೇಮಕ ಮಾಡಿಕೊಳ್ಳುವ ಕುರಿತಾದ ಪ್ರಸ್ತಾವನೆಯನ್ನು ತಕ್ಷಣವೇ ಆರ್ಥಿಕ ಇಲಾಖೆಗೆ ಸಲ್ಲಿಸುವಂತೆ ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಖಡಕ್ ನಿರ್ದೇಶನ ನೀಡಿದ್ದಾರೆ. ಇದು ಮುಂಬರುವ ದಿನಗಳಲ್ಲಿ ಶಾಲೆಗಳ ಶೈಕ್ಷಣಿಕ ಗುಣಮಟ್ಟವನ್ನು ಮತ್ತಷ್ಟು ಹೆಚ್ಚಿಸಲು ಸಹಕಾರಿಯಾಗಲಿದೆ. ಶೀಘ್ರದಲ್ಲೇ 15 ಸಾವಿರ ಶಿಕ್ಷಕರ ಭರ್ತಿ ಪ್ರಕ್ರಿಯೆ ಕೂಡ ಆರಂಭವಾಗಲಿದೆ. ಜೂನ್ 1 ರಂದು KPSC ಶಾಲೆಗೆ ಅಧಿಕೃತ ಚಾಲನೆ ಗೃಹ ಕಚೇರಿ ಕೃಷ್ಣಾದಲ್ಲಿ ನಿನ್ನೆ ನಡೆದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉನ್ನತ ಮಟ್ಟದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮುಖ್ಯಮಂತ್ರಿಗಳು ಈ ಪ್ರಮುಖ ನಿರ್ಧಾರಗಳನ್ನು ಕೈಗೊಂಡಿದ್ದಾರೆ. ಕೆಪಿಎಸ್ ಯೋಜನೆಗೆ ಚಾಲನೆ ಬರುವ ಜೂನ್ ಒಂದರಂದು ಶಿವಮೊಗ್ಗದಲ್ಲಿ ಕರ್ನಾಟಕ ಪಬ್ಲಿಕ್ ಸ್ಕೂಲ್ ಯೋಜನೆಗೆ ಅಧಿಕೃತವಾಗಿ ಚಾಲನೆ ನೀಡಲಾಗುವುದು ಎಂದು ಮುಖ್ಯಮಂತ್ರಿಗಳು ಪ್ರಕಟಿಸಿದರು. ಈ ಯೋಜನೆಯಡಿ ಒಟ್ಟು 800 ಕೆಪಿಎಸ್…
ಬೆಂಗಳೂರು, ಮೇ20: ಯುಪಿಎ ಕಾಲದಲ್ಲಿ 400 ರೂ. ಇದ್ದ ಅಡುಗೆ ಅನಿಲ ಸಿಲಿಂಡರ್ ದರ ಅಲ್ಪ ಏರಿಕೆ ಮಾಡಿದ್ದಕ್ಕೆ ತಲೆಯ ಮೇಲೆ ಗ್ಯಾಸ್ ಸಿಲಿಂಡರ್ ಹೊತ್ತು ಪ್ರತಿಭಟನೆ ಮಾಡಿದ ಬಿಜೆಪಿ ನಾಯಕರು ಈಗ ಎಲ್ಲಿ ಹೋದರು ಎಂದು ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಪ್ರಶ್ನಿಸಿದ್ದಾರೆ. ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪೆಟ್ರೋಲ್, ಡೀಸೆಲ್ ಹಾಗೂ ಅಡುಗೆ ಅನಿಲ ದರವನ್ನು ಪದೇ ಪದೇ ಏರಿಸುತ್ತಿರುವ ಕೇಂದ್ರ ಎನ್.ಡಿ.ಎ. ಸರ್ಕಾರದ ವಿರುದ್ಧ ಧ್ವನಿ ಎತ್ತಲಾಗದ ರಾಜ್ಯ ಬಿಜೆಪಿ ನಾಯಕರು ಕಾಂಗ್ರೆಸ್ ಸಾಧನೆ ಸಮಾವೇಶದ ಬಗ್ಗೆ ಮಾತನಾಡುತ್ತಾರೆ. 2028ರಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರುವುದು ನಿಶ್ಚಿತ ಎಂಬುದು ಬಿಜೆಪಿ ನಾಯಕರಿಗೆ ಮನವರಿಕೆಯಾಗಿದೆ ಹೀಗಾಗಿಯೇ ಹೌಹಾರುತ್ತಿದ್ದಾರೆ ಎಂದರು. ನೀಟ್ ಪರೀಕ್ಷೆಯನ್ನು ಸಮರ್ಪಕವಾಗಿ ನಡೆಸಲಾಗದೆ, ಪ್ರಶ್ನೆಪತ್ರಿಕೆ ಲೀಕ್ ಆದರೂ ಸಚಿವ ರಾಜೀನಾಮೆ ಪಡೆಯದ, ಕ್ರಮ ಕೈಗೊಳ್ಳದೆ 25 ಲಕ್ಷ ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ಚಲ್ಲಾಟ ಆಡುತ್ತಿರುವ ಕೇಂದ್ರ ಸರ್ಕಾರವನ್ನು ಪ್ರಶ್ನಿಸಲಿ ಎಂದರು. ರಾಜ್ಯ ಸರ್ಕಾರ…
ತುಮಕೂರು : ತುಮಕೂರನ್ನು ಬೆಂಗಳೂರು ಉತ್ತರ ಜಿಲ್ಲೆ ಮಾಡಿ ಎಂಬ ಹೇಳಿಕೆ ವಿಚಾರಕ್ಕೆ ಸಂಬಂಧಪಟ್ಟಂತೆ ತಮ್ಮ ಹೇಳಿಕೆಗೆ ತುಮಕೂರು ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಗೃಹ ಸಚಿವ ಜಿ ಪರಮೇಶ್ವರ್ ಸ್ಪಷ್ಟನೆ ಕೊಟ್ಟಿದ್ದು, ತುಮಕೂರು ಒಂದು ಕಾನ್ಸೆಪ್ಟ್ ಅಷ್ಟೇ ತುಮಕೂರು ಹೆಸರು ಬದಲಾವಣೆ ಮಾಡಿ ಅಂತ ಹೇಳಿದ್ದಿನ? ತುಮಕೂರು ಹೆಸರು ಬದಲಾವಣೆ ಆಗಲ್ಲ ವಿಸ್ತೀರ್ಣವೂ ಬದಲಾಗಲ್ಲ ತುಮಕೂರು ಹೇಗಿರುತ್ತೋ ಹಾಗೆ ಇರಲಿದೆ ಎಂದು ಸ್ಪಷ್ಟಪಡಿಸಿದರು. ಬೆಂಗಳೂರಿನ ಒಂದು ಭಾಗ ಆದಾಗ ಹೂಡಿಕೆಗೆ ಆಲೋಚನೆ ಬರುತ್ತೆ. ನಾವು ಅಲ್ಲಿ ಹೋಗಿ ಇನ್ವೆಸ್ಟ್ ಮಾಡಬೇಕೆಂಬ ಆಲೋಚನೆ ಬರುತ್ತದೆ. ಅಷ್ಟು ಬಿಟ್ಟರೆ ನಾವು ಯಾವುದನ್ನು ಬದಲಾಯಿಸಲ್ಲ. ತುಮಕೂರು ಹೆಸರು ಬದಲಾಗಲ್ಲ ದೆಹಲಿಯನ್ನು ಮೂರು ಭಾಗ ಮಾಡಿಲ್ವಾ? ಅದನ್ನು ಬದಲಾಯಿಸಿದ್ದಾರ? ತುಮಕೂರಿನ ಒಂದು ಕಡ್ಡಿ ಕೂಡ ಅಲಗಾಡುವುದಿಲ್ಲ. ತುಮಕೂರು ಹಾಗೆ ಇರುತ್ತೆ ತುಮಕೂರು ತಾಲೂಕು ಸಹ ಹಾಗೆ ಇರುತ್ತೆ. ಬೆಂಗಳೂರಿಗೆ ಒಂದು ಭಾಗ ಅಂತ ಮಾಡಿದರೆ ಹೂಡಿಕೆ ಮಾಡುತ್ತಾರೆ. ನಮಗೂ ಕೂಡ ತುಮಕೂರು ಎಲಿವೇಟ್ ಆಗುತ್ತೆ ಅನ್ನೋ…
ನವದೆಹಲಿ: ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ಚುನಾವಣೆ ನಡೆಸುವ ವಿಚಾರಕ್ಕೆ ಸಂಬಂಧಿಸಿದಂತೆ ಕರ್ನಾಟಕ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಿಂದ ಕೊಂಚ ಸಮಾಧಾನಕರ ಸುದ್ದಿ ಸಿಕ್ಕಿದೆ. ಚುನಾವಣೆ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಸುಪ್ರೀಂ ಕೋರ್ಟ್ ರಾಜ್ಯ ಸರ್ಕಾರಕ್ಕೆ ಮತ್ತೆ ಎರಡು ತಿಂಗಳ ಕಾಲಾವಕಾಶವನ್ನು ನೀಡಿ ಮಹತ್ವದ ಆದೇಶ ಹೊರಡಿಸಿದೆ. ಈ ಹಿಂದೆ ಜಿಬಿಎ ಚುನಾವಣೆಯನ್ನು ಜೂನ್ ಅಂತ್ಯದೊಳಗೆ ನಡೆಸಿ ಮುಗಿಸಬೇಕು ಎಂದು ಸುಪ್ರೀಂ ಕೋರ್ಟ್ ಕಟ್ಟುನಿಟ್ಟಿನ ಸೂಚನೆ ನೀಡಿತ್ತು. ಆದರೆ, ಪ್ರಸ್ತುತ ಸಂದರ್ಭದಲ್ಲಿ ನಿಗದಿತ ಅವಧಿಯೊಳಗೆ ಚುನಾವಣೆ ನಡೆಸುವುದು ಕಷ್ಟಸಾಧ್ಯ ಎಂದು ಮನಗಂಡಿದ್ದ ಕರ್ನಾಟಕ ಸರ್ಕಾರ ಮತ್ತು ರಾಜ್ಯ ಚುನಾವಣಾ ಆಯೋಗ, ಸುಪ್ರೀಂ ಕೋರ್ಟ್‌ಗೆ ಜಂಟಿ ಮನವಿ ಸಲ್ಲಿಸಿದ್ದವು. ಬೆಂಗಳೂರಿನ ವಿಸ್ತರಣೆ ಮತ್ತು ಆಡಳಿತಾತ್ಮಕ ಸಿದ್ಧತೆಗಳ ಹಿನ್ನೆಲೆಯಲ್ಲಿ ಚುನಾವಣೆ ನಡೆಸಲು ಇನ್ನು ಹೆಚ್ಚಿನ ಸಮಯದ ಅಗತ್ಯವಿದೆ ಎಂದು ಸರ್ಕಾರ ಪ್ರತಿಪಾದಿಸಿತ್ತು. ಇದಕ್ಕಾಗಿ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದ ರಾಜ್ಯ ಸರ್ಕಾರ, ಪ್ರಸ್ತುತ ಡೆಡ್‌ಲೈನ್‌ನಿಂದ ಹೆಚ್ಚುವರಿಯಾಗಿ ಮೂರು ತಿಂಗಳ ಕಾಲಾವಕಾಶ ನೀಡಬೇಕು ಎಂದು ಸುಪ್ರೀಂ ಕೋರ್ಟ್‌ಗೆ ಮನವಿ…
ಶಿವಮೊಗ್ಗ; ಮೇ. 20 (ಕರ್ನಾಟಕ ವಾರ್ತೆ): ರಾಜ್ಯ ಸರ್ಕಾರದ ಐದನೇ ಗ್ಯಾರಂಟಿ ಯೋಜನೆಯಾದ ಯುವನಿಧಿ ಯೋಜನೆಗೆ ಶಿವಮೊಗ್ಗ ಜಿಲ್ಲೆಯ 2023ರ ನಂತರ ಸ್ನಾತಕೋತ್ತರ ಪದವಿ/ ಪದವಿ/ ಡಿಪ್ಲೋಮಾ ಪಡೆದ ಅರ್ಹ ನಿರುದ್ಯೋಗಿಗಳು ಪದವಿ ಪಡೆದು 6 ತಿಂಗಳಾದರೂ ಉದ್ಯೋಗ ಪಡೆಯದವರು ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸುವಂತೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿಗಳು ತಿಳಿಸಿದ್ದಾರೆ. ಜಿಲ್ಲೆಯ ಫಲಾನುಭವಿಗಳು ತ್ರೈಮಾಸಿಕ ಬದಲಾಗಿ ಪ್ರತಿ ತಿಂಗಳು 25ರೊಳಗಾಗಿ ಕಡ್ಡಾಯವಾಗಿ ಸೇವಾ ಸಿಂಧು ಪೋರ್ಟಲ್‌ನಲ್ಲಿ ಆನ್‌ಲೈನ್ ಮೂಲಕ ಸ್ವಯಂ ಘೋಷಣೆ ನೀಡಬೇಕು. ಇಲ್ಲದಿದ್ದಲ್ಲಿ ಆ ತಿಂಗಳ ನೇರ ನಗದು ಖಾತೆಗೆ ಜಮಾ ಆಗುವುದಿಲ್ಲ. ಪ್ರತಿ ತಿಂಗಳು ಪದವೀಧರರಿಗೆ ರೂ. 3000/- ಹಾಗೂ ಡಿಪ್ಲೋಮಾದಾರರಿಗೆ ರೂ. 1500/- ನಿರುದ್ಯೋಗ ಭತ್ಯೆ ನೀಡಲಾಗುವುದು.
ಶಿವಮೊಗ್ಗ; ಮೇ.20 (ಕರ್ನಾಟಕ ವಾರ್ತೆ): ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲ್ಲೂಕು ಸೊಣ್ಣಹಳ್ಳಿಪುರದಲ್ಲಿರುವ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ಜೂನ್ 01 ರಿಂದ 31 ದಿನಗಳ ಕಾಲ ನಿರುದ್ಯೋಗಿ ಯುವಕರಿಗೆ ಉಚಿತ ಫೋಟೋಗ್ರಫಿ ಮತ್ತು ವಿಡಿಯೋಗ್ರಫಿ ತರಬೇತಿ ಶಿಬಿರವನ್ನು ಏರ್ಪಡಿಸಿದ್ದು, ಆಸಕ್ತರಿಂದ ಅರ್ಜಿ ಆಹ್ವಾನಿಸಿದೆ. ಶಿಬಿರದಲ್ಲಿ ಫೋಟೋಗ್ರಫಿ ಮತ್ತು ವಿಡಿಯೋಗ್ರಫಿಯೊಂದಿಗೆ ಗಿಂಬಲ್ ಹಾಗೂ ಡ್ರೋಣ್ ಬಳಕೆ, ಮಾಡೆಲ್ ಫೋಟೋ ಶೂಟ್, ಪ್ರಾಡೆಕ್ಟ್ ಫೋಟೋಗ್ರಫಿ, ಔಟ್ ಡೋರ್ ಫೋಟೋಶೂಟ್, ಸ್ಟುಡಿಯೋ ಸೆಟ್ ಅಫ್, ಫ್ರೀ ವೆಡ್ಡಿಂಗ್ ಶೂಟ್, ವೆಡ್ಡಿಂಗ್ ಶೂಟ್, ಫೋಟೋ ಮತ್ತು ವಿಡಿಯೋ ಎಡಿಟಿಂಗ್, ಫೋಟೋಶಾಪ್, ಕರಿಷ್ಮಾ ಆಲ್ಬಂ ಬಗ್ಗೆ ಪ್ರಾಯೋಗಿಕವಾಗಿ ತರಬೇತಿ ನೀಡಲಾಗುವುದು. ಸ್ವಯಂ ಉದ್ಯೋಗಿಗಳಾಗಲು ಬಯಸುವ 18 ರಿಂದ 50 ವರ್ಷ ವಯಸ್ಸಿನ ಕರ್ನಾಟಕ ರಾಜ್ಯದ ಯಾವುದೇ ಜಿಲ್ಲೆಯ ನಿರುದ್ಯೋಗಿ ಪುರುಷರು ಹಾಗೂ ಮಹಿಳೆಯರು ಈ ಶಿಬಿರದಲ್ಲಿ ಪಾಲ್ಗೊಳ್ಳಬಹುದಾಗಿದೆ. ಈ ಶಿಬಿರದ ಸಮಯದಲ್ಲಿ ತರಬೇತಿ, ಊಟ ಹಾಗೂ ವಸತಿ ಸೌಕರ್ಯಗಳು ಉಚಿತವಾಗಿ ಶಿಬಿರಾರ್ಥಿಗಳಿಗೆ ಕಲ್ಪಿಸಲಾಗುವುದು.…
ಬೆಂಗಳೂರು : ಬಿಡದಿ ಟೌನ್‌ಶಿಪ್ ಕುರಿತು ರೈತರನ್ನು ಉದ್ದೇಶಿಸಿ ಡಿಸಿಎಂ ಡಿಕೆ ಶಿವಕುಮಾರ್ ಮಾತನಾಡಿದ್ದು ದೇವೇಗೌಡರ ಕುಟುಂಬ ಹಾಸನದಲ್ಲಿ ಜಮೀನು ತೆಗೆದುಕೊಳ್ಳಬಹುದಿತ್ತಲ್ಲ? ಅವರು ಇಲ್ಲೇ ನೂರಾರು ಬೇಕೆರೆ ಜಮೀನು ತೆಗೆದುಕೊಂಡಿದ್ದಾರೆ. ಕೇತಗಾನಹಳ್ಳಿಯಲ್ಲಿ ಇರುವ ಜಮೀನು ಬಹು ಸ್ವಾಧೀನ ಮಾಡಲು ಸೇರಿಸಿಲ್ಲ. ರೈತರಿಗೆ 8000 ಅಡಿ ಭೂಮಿ ಕೊಡಲು ನಿರ್ಧರಿಸಿದೆ ಅಂತ ಎಚ್ ಡಿ ಕುಮಾರಸ್ವಾಮಿ ಹೇಳಿದ್ದರು. ಬಿಡದಿ ಟೌನ್ ಶಿಪ್ ಕುರಿತು ರೈತರ ಜೊತೆ ಡಿಸಿಎಂ ಡಿಕೆ ಶಿವಕುಮಾರ್ ಸಭೆ ನಡೆಸಿದ್ದು ಬೆಂಗಳೂರಿನಲ್ಲಿ ಮಾತನಾಡಿದ ಅವರು, ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಎಂದು ಬದಲಾಯಿಸಿದ ಬಳಿಕ ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ ಜಮೀನುಗಳ ಮೌಲ್ಯ ಹೆಚ್ಚಾಗಿದೆ. ಬೆಂಗಳೂರು ಎಂಬುವುದು ಒಂದು ಬ್ರಾಂಡ್ ನಾವೆಲ್ಲ ಈಗ ಬೆಂಗಳೂರು ಜಿಲ್ಲೆಯವರು ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದರು. ಈ ವಿಚಾರದಲ್ಲಿ ಕೋರ್ಟಿಗೆ ಹೋಗಲಿ ಏನಾದರೂ ಮಾಡಿಕೊಳ್ಳಲಿ ಮೂರು ಮೂರು ಹಳ್ಳಿಗಳನ್ನು ಸೇರಿಸಿ ಡಿನೋಟಿಫೈ ಮಾಡುತ್ತೇವೆ. ಒಂದೊಂದೇ ಕ್ಲಿಯರ್ ಮಾಡುತ್ತೇವೆ. ಬಿಡದಿಗೆ ಗ್ರೇಟರ್ ಬೆಂಗಳೂರು ಎಂದೆ ಹೆಸರಿಡುತ್ತೇನೆ.…














