Author: kannadanewsnow05

ಮಂಗಳೂರು : ಪಹಣಿ ಒಂದರಲ್ಲಿ ತಮ್ಮ ಹೆಸರನ್ನು ಸೇರಿಸಲು ಕಂದಾಯ ಇಲಾಖೆಯ ನಿರೀಕ್ಷಕನೊಬ್ಬ ವ್ಯಕ್ತಿಯ ಒಬ್ಬರ ಬಳಿ ನಾಲ್ಕು ಲಕ್ಷ ರೂಪಾಯಿಯ ಲಂಚಕ್ಕೆ ಬೇಡಿಕೆ ಇಟ್ಟಿದ್ದ. ಈ ಸಂದರ್ಭದಲ್ಲಿ ವ್ಯಕ್ತಿಯಿಂದ ನಾಲ್ಕು ಲಕ್ಷ ರೂಪಾಯಿ ಸ್ವೀಕರಿಸುತ್ತಿದ್ದ ಸಂದರ್ಭದಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿ ಕಂದಾಯ ನೀರಿಕ್ಷಕ ದಿನೇಶ್ ಎನ್ನುವ ಅಧಿಕಾರಿಯನ್ನು ವಶಕ್ಕೆ ಪಡೆದುಕೊಂಡಿರುವ ಘಟನೆ ಮಂಗಳೂರು ಜಿಲ್ಲೆಯ ಮುಲ್ಕಿಯಲ್ಲಿ ನಡೆದಿದೆ. ಹೌದು 4 ಲಕ್ಷ ರೂಪಾಯಿ ಲಂಚ ಸ್ವೀಕರಿಸುತ್ತಿದ್ದಾಗ ಮುಲ್ಕಿ ಆರ್ ಐ ಲೋಕಾಯುಕ್ತ ಬಲೆಗೆ ಬಿದ್ದಿದ್ದಾನೆ. ಪಹಣಿಯಲ್ಲಿ ಹೆಸರು ಸೇರಿಸಲು 4 ಲಕ್ಷ ರೂಪಾಯಿ ಲಂಚಕ್ಕೆ ಆರ್ ಐ ಬೇಡಿಕೆ ಇಟ್ಟಿದ್ದ. ಹೆಸರು ಸೇರಿಸಲು ಅರ್ಜಿ ಸಲ್ಲಿಸಿದ್ದರೂ ಕೂಡ ಒಂದು ವರ್ಷದಿಂದ ಕ್ರಮ ಕೈಗೊಂಡಿರಲಿಲ್ಲ. ಸರ್ಕಾರಿ ಕೆಲಸಕ್ಕೆ ಕಂದಾಯ ನಿರೀಕ್ಷಕ ದಿನೇಶ್ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಕುರಿತಂತೆ ಮಂಗಳೂರು ಲೋಕಾಯುಕ್ತ ಕಚೇರಿಗೆ ದೂರು ಸಲ್ಲಿಕೆಯಾಗಿತ್ತು ವ್ಯಕ್ತಿಯ ದೂರಿನ ಮೇರೆಗೆ ಲೋಕಾಯುಕ್ತ ಎಸ್ ಪಿ ನಟರಾಜ್ ನೇತ್ರತ್ವದಲ್ಲಿ…

Read More

ನವದೆಹಲಿ : ರಾಜ್ಯಸಭಾಧ್ಯಕ್ಷ ಜಗದೀಪ್ ಧನ್ಕರ್ ವಿರುದ್ಧದ ವಿರೋಧ ಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತವಾಗಿದೆ.14 ದಿನಗಳ ನೋಟಿಸ್ ನೀಡಿಲ್ಲ ಮತ್ತು ಧನ್ಕರ್ ಅವರ ಹೆಸರನ್ನು ಸರಿಯಾಗಿ ಬರೆಯಲಾಗಿಲ್ಲ ಎಂಬ ಕಾರಣಕ್ಕಾಗಿ ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧನ್ಕರ್ ವಿರುದ್ಧ ಪ್ರತಿಪಕ್ಷಗಳು ಮಂಡಿಸಿದ ಅವಿಶ್ವಾಸ ನಿರ್ಣಯವನ್ನು ಉಪಸಭಾಪತಿ ತಿರಸ್ಕರಿಸಿದ್ದಾರೆ ಎಂದು ವರದಿಯಾಗಿದೆ. ಕಳೆದ ಡಿಸೆಂಬರ್ 10 ರಂದು ರಾಜ್ಯಸಭೆ ಸ್ಪೀಕರ್ ಜಗದೀಪ್ ಧನ್ಕರ್ ವಿರುದ್ಧ ಪ್ರತಿಪಕ್ಷಗಳ INDIA ಮೈತ್ರಿಕೂಟದ ಸಂಸದರು ರಾಜ್ಯಸಭೆಯಲ್ಲಿ ಅವಿಶ್ವಾಸ ನಿರ್ಣಯವನ್ನು ಮಂಡಿಸಿದ್ದರು. INDIA ಮೈತ್ರಿಕೂಟದ ಪಕ್ಷಗಳಾದ ಕಾಂಗ್ರೆಸ್, ತೃಣಮೂಲ, ಎಎಪಿ, ಎಸ್ಪಿ, ಡಿಎಂಕೆ ರಾಷ್ಟ್ರೀಯ ಜನತಾ ದಳದ 50ಕ್ಕೂ ಅಧಿಕ ಸಂಸದರು ಸಹಿ ಹಾಕಿರುವ ಅವಿಶ್ವಾಸ ನಿರ್ಣಯ ಪತ್ರವನ್ನು ರಾಜ್ಯಸಭೆಯ ಕಾರ್ಯದರ್ಶಿಗೆ ನೀಡಲಾಗಿತ್ತು. ಇದೀಗ ಜಗದೀಪ್ ಧನ್ಕರ್ ವಿರುದ್ಧದ ವಿರೋಧ ಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತವಾಗಿದೆ. ರಾಜ್ಯಸಭಾ ಸ್ಪೀಕರ್ ಸದನದಲ್ಲಿ ಕಲಾಪದ ವೇಳೆ ಪಕ್ಷಪಾತ ಮಾಡುತ್ತಾರೆ, ಅವರು ತಮ್ಮ ಭಾಷಣಗಳಿಗೆ ಆಗಾಗ್ಗೆ ಅಡ್ಡಿ ಪಡಿಸುತ್ತಿದ್ದಾರೆ, ನಿರ್ಣಾಯಕ ವಿಷಯಗಳ ಬಗ್ಗೆ ಸಾಕಷ್ಟು…

Read More

ಬೆಳಗಾವಿ : ಅಂಬೇಡ್ಕರ್ ಕುರಿತು ಅಮಿತ್ ಶಾ ಹೇಳಿಕೆಗೆ ಇಂದು ವಿಧಾನಸಭೆ ಹಾಗೂ ವಿಧಾನ ಪರಿಷತ್ ಎರಡರಲ್ಲೂ ಕಾಂಗ್ರೆಸ್ ಸದಸ್ಯರು ಬಿಜೆಪಿ ವಿರುದ್ಧ ಪ್ರತಿಭಟನೆ ನಡೆಸಿದರು ಈ ವೇಳೆ ಕಾಂಗ್ರೆಸ್ ವಿರುದ್ಧ ಕೂಡ ಪ್ರತಿಪಕ್ಷ ಬಿಜೆಪಿ ಹೋರಾಟ ಮಾಡಿತು ಈ ಸಂದರ್ಭದಲ್ಲಿ ಸಚಿವ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಕುರಿತು ಎಂಎಲ್ಸಿ ಸಿಟಿ ರವಿ ಅಶ್ಲೀಲ ಪದ ಬಳಕೆ ಮಾಡಿದ್ದಾರೆ ಎಂದು ಆರೋಪ ಕೇಳಿ ಬಂದಿದೆ. ಟೀ ಕುಡಿದು ಸೀಮ್ ಸಿದ್ದರಾಮಯ್ಯ ಅವರು ಸಿ ಟಿ ರವಿ ಹೇಳಿಕೆಗೆ ಆಕ್ರೋಶ ವ್ಯಕ್ತಪಡಿಸಿ ಇದೊಂದು ಕ್ರಿಮಿನಲ್ ಆಫೆನ್ಸ್ ಆಗಿದೆ ಎಂದು ಕಿಡಿಕಾರಿದರು. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿಟಿ ರವಿ ಮಾತಿಗೆ ಸಿಎಂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದು, ಲಕ್ಷ್ಮಿ ಹೆಬ್ಬಾಳ್ಕರ್ ಈ ಸಂಬಂಧಪಟ್ಟ ಸಭಾಪತಿಗೆ ದೂರು ಕೊಟ್ಟಿದ್ದಾರೆ. ಪೊಲೀಸ್ ಠಾಣೆಯಲು ದೂರು ಸಲ್ಲಿಕೆ ಮಾಡುತ್ತಾರೆ. ಪೊಲೀಸರು ಏನು ಕ್ರಮ ತೆಗೆದುಕೊಳ್ಳುತ್ತಾರೆ ನೋಡೋಣ ಇದು ಕ್ರಿಮಿನಲ್ ಅಫೆನ್ಸ್ ಆಗಿದೆ ಎಂದು ತಿಳಿಸಿದರು. ಸಿಟಿ ರವಿ ಅವರ ಈ…

Read More

ಬೆಳಗಾವಿ : ಅಂಬೇಡ್ಕರ್ ಅವರ ಕುರಿತು ಅಮಿತ್ ಶಾ ಹೇಳಿಕೆಗೆ ಇಂದು ವಿಧಾನಸಭೆ ಹಾಗೂ ವಿಧಾನ ಪರಿಷತ್ ಎರಡರಲ್ಲಿಯೂ ಕಾಂಗ್ರೆಸ್ ಸದಸ್ಯರು ಬಿಜೆಪಿ ವಿರುದ್ಧ ಪ್ರತಿಭಟನೆ ಮಾಡಿದರು. ಈ ವೇಳೆ ಬಿಜೆಪಿಯ ಸದಸ್ಯರು ಕೂಡ ಪ್ರತಿಭಟನೆ ಮಾಡುವ ಸಂದರ್ಭದಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ವಿರುದ್ಧ ಎಂಎಲ್ಸಿ ಸಿಟಿ ರವಿ ಅವರು ಅಶ್ಲೀಲ ಪದ ಬಳಕೆ ಮಾಡಿದ್ದಾರೆ ಎಂದು ಆರೋಪಿಸಿ, ಬೆಳಗಾವಿಯ ಸುವರ್ಣಸೌಧದ ಬಳಿ ಎಂಎಲ್ಸಿ ಸಿಟಿ ರವಿ ಅವರ ಕಾರಿಗೆ ಮುತ್ತಿಗೆ ಹಾಕಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಬೆಂಬಲಿಗರು ಘೋಷಣೆ ಕೂಗಿ ಧಿಕ್ಕಾರ ಕೂಗಿದರು. ಹೌದು ಬಿಜೆಪಿಯ ಎಂ.ಎಲ್ ಸಿ ಸಿಟಿ ರವಿ ವಿರುದ್ಧ ಧಿಕ್ಕಾರ ಕೂಗಿ ಘೋಷಣೆ ಕೂಗಿದರು. ಅಶ್ಲೀಲ ಪದ ಬಳಕೆ ಆರೋಪದ ಹಿನ್ನೆಲೆಯಲ್ಲಿ ಬೆಳಗಾವಿಯ ಸುವರ್ಣ ಸೌಧದಲ್ಲಿ ಸಿಟಿ ರವಿಗೆ ಮುತ್ತಿಗೆ ಹಾಕಲಾಯಿತು. ಬಿಜೆಪಿ ಎಂಎಲ್ಸಿ ಸಿಟಿ ರವಿ ವಿರುದ್ಧ ಘೋಷಣೆ ಕೂಗಿದರು. ಸುವರ್ಣ ಸೌಧದ ಬಳಿ ಎಂಎಲ್ಸಿ ಸೀಟಿ ರವಿಗೆ ಮುತ್ತಿಗೆ ಹಾಕಲು…

Read More

ಬೆಂಗಳೂರು : ಸಿಎಂ ಸಿದ್ದರಾಮಯ್ಯ ವಿರುದ್ಧದ ಮುಡಾ ಕೇಸ್ ತನಿಖೆಯ ವಿಚಾರವಾಗಿ ಪ್ರಕರಣವನ್ನು ಸಿಬಿಐಗೆ ವರ್ಗಾಯಿಸುವಂತೆ ಕೋರಿ ಸ್ನೇಹಮಯಿ ಕೃಷ್ಣ ಅರ್ಜಿ ಸಲ್ಲಿಸಿದ್ದರು. ಈ ಒಂದು ಅರ್ಜಿಯ ವಿಚಾರಣೆ ಇಂದು ಹೈಕೋರ್ಟ್ ಏಕ ಸದಸ್ಯ ಪೀಠದಲ್ಲಿ ವಿಚಾರಣೆ ನಡೆಯಿತು. ಬಳಿಕ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರು, 2025 ಜನವರಿ 15ಕ್ಕೆ ಮುಂದೂಡಿದರು. ಅಲ್ಲದೇ ಅವತ್ತೇ ಈ ಒಂದು ಪ್ರಕರಣದ ಅಂತಿಮ ವಿಚಾರಣೆ ನಡೆಸಲು ನಿರ್ಧರಿಸಿದೆ. ವಿಚಾರಣೆ ಆರಂಭವಾದ ಬಳಿಕ ಎಲ್ಲಾ ಪ್ರತಿವಾದಿಗಳಿಗೂ ನೋಟಿಸ್ ಜಾರಿಯಾಗಿದೆ ಎಂದು ಸ್ನೇಹಮಯಿ ಕೃಷ್ಣ ಪರ ಹಿರಿಯ ವಕೀಲ ಕೆ ಜಿ ರಾಘವನ್ ಅವರು ವಾದ ಮಂಡಿಸಿದರು. ಹೈ ಕೋರ್ಟ್ ಎದುರಿನ ಬಿಲ್ಡಿಂಗ್ ನೋಟಿಸ್ ಜಾರಿಯಾಗಲು 35 ದಿನ ಸಮಯ ತಗುಲಿರುವುದು ಶಾಕಿಂಗ್ ವಿಚಾರ ಎಂದು ಇದೆ ವೇಳೆ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರಿದ್ದ ಪೀಠ ಅಭಿಪ್ರಾಯ ವ್ಯಕ್ತಪಡಿಸಿತು. ಈ ಸಂದರ್ಭದಲ್ಲಿ ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ಕೋರಿ ಸಿಎಂ ಸಿದ್ದರಾಮಯ್ಯ ಪರ ಹಿರಿಯ ವಕೀಲರಾದಂತಹ ಅಭಿಷೇಕ್ ಮನುಸಿಂಗ್ವಿ ಹಾಗೂ…

Read More

ಚಿಕ್ಕಮಗಳೂರು : ಚಿಕ್ಕಮಂಗಳೂರು ಜಿಲ್ಲೆಯಲ್ಲಿ ಇಂದು ಕಾಡಾನೆ ದಾಳಿಗೆ ಮತ್ತೋರ್ವ ವ್ಯಕ್ತಿ ಸಾವನ್ನಪ್ಪಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಯಕ್ಕಡಬೈಲು ಎಂಬ ಗ್ರಾಮದಲ್ಲಿ ಒಂಟಿ ಸಲಗಕ್ಕೆ 60 ವರ್ಷದ ಎಲಿಯಸ್ ಎನ್ನುವ ವ್ಯಕ್ತಿ ಇದೀಗ ಸಾವನಪ್ಪಿದ್ದಾರೆ. ಕಳೆದ 20 ದಿನದ ಅಂತರದಲ್ಲಿ ಇಬ್ಬರನ್ನು ಒಂಟಿ ಸಲಗ ಬಲಿ ಪಡೆದಿದೆ. ಯಕ್ಕಡಬೈಲು ಗ್ರಾಮದ ಬಳಿ 60 ವರ್ಷದ ಏಲಿಯಾಸ್ ಎನ್ನುವ ವ್ಯಕ್ತಿ ಸಾವನ್ನಪ್ಪಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಎನ್ಆರ್ ಪುರ ತಾಲೂಕಿನ ಯಕ್ಕಡ ಬೈಲು ಗ್ರಾಮದ ಈ ವ್ಯಕ್ತಿ ಮನೆಯ ಹಿಂಭಾಗದ ಅರಣ್ಯ ಪ್ರದೇಶದಲ್ಲಿ ಕಾಡಾನೆ ದಾಳಿಗೆ ಇವರು ಬಲಿಯಾಗಿದ್ದಾರೆ. ಮುತ್ತಿನ ಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಯಕ್ಕಡಬೈಲು ಎಂಬಲ್ಲಿ ಒಂದು ಘಟನೆ ನಡೆದಿದೆ.ಕೊಪ್ಪ ವಲಯ ಅರಣ್ಯ ವ್ಯಾಪ್ತಿಯಲ್ಲಿ ಒಂಟಿ ಸಲಗ ದಾಳಿ ಮಾಡಿದೆ. ಕಳೆದ 20 ದಿನದ ಹಿಂದೆ ಸೀತೂರು ಬಳಿ ಉಮೇಶ್ ಎನ್ನುವ ವ್ಯಕ್ತಿಯನ್ನು ಇದೇ ಒಂಟಿ ಸಲಗ ಬಲಿಪಡೆದಿತ್ತು. ಇದೀಗ 2ನೇ ಬಲಿ ಪಡೆದುಕೊಂಡಿದೆ.

Read More

ಬೆಳಗಾವಿ : ಕೇಂದ್ರ ಗೃಹ ಸಚಿವ ಅಮಿತ್ ಶಾ, ಡಾ.ಬಿ.ಆರ್.ಅಂಬೇಡ್ಕರ್ ಕುರಿತು ಅವಹೇನಕಾರಿ ಹೇಳಿಕೆ ಖಂಡಿಸಿ ವಿಧಾನ ಪರಿಷತ್​ನಲ್ಲಿ ಕಾಂಗ್ರೆಸ್- ಬಿಜೆಪಿ ಸದಸ್ಯರ ನಡುವೆ ವಾಗ್ವಾದ ನಡೆಯಿತು. ಇದೇ ವೇಳೆ ಮಾತಿನ ಭರದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಬಗ್ಗೆ ಸದಸ್ಯ ಸಿ.ಟಿ. ರವಿ ಅವರ ಅಶ್ಲೀಲ ಪದ ಬಳಕೆ ಕೈ ಸದಸ್ಯರ ಸಿಟ್ಟಿಗೆ ಕಾರಣವಾಯಿತು. ಸಿಟಿ ರವಿ ಅವರು ಅಶ್ಲೀಲ ಪದ ಬಳಗಸಿದ್ದಾರೆ ಎಂದು ಆರೋಪಿಸಿ ಇದೀಗ ಕಾಂಗ್ರೆಸ್ಸರು ಸಭಾಪತಿ ಬಸವರಾಜ್ ಹೊರಟ್ಟಿ ಅವರಿಗೆ ದೂರು ನೀಡಿದ್ದು, ಸಿಟಿ ರವಿ ಅಮಾನತಿಗೆ ಕಾಂಗ್ರೆಸ್ ನಾಯಕರು ಒತ್ತಡ ಹೇರಿದ್ದಾರೆ.ಸಭಾಪತಿ ಹೊರಟ್ಟಿ ಚೇಂಬರ್ ನಲ್ಲಿ ಮಾತುಕತೆ ನಡೆಸಿದ್ದಾರೆ.ಶೂನ್ಯ ಅವಧಿಯಲ್ಲಿ ಅಮಿತ್ ಶಾ ಹೇಳಿಕೆ ಖಂಡಿಸಿ ಆಡಳಿತ ಸದಸ್ಯರು ಧರಣಿಗೆ ಮುಂದಾದರು. ಕೂಡಲೇ ಅಮಿತ್ ಶಾ ಅವರನ್ನು ಬಂಧಿಸಿ, ರಾಜೀನಾಮೆ ಪಡೆಯುವಂತೆ ಕೈ ಸದಸ್ಯರು ಆಗ್ರಹಿಸಿದರು. ಸಿಟಿ ರವಿ ಹೇಳಿದ್ದೇನು? ಕೇಂದ್ರ ಸಚಿವ ಅಮಿತ್ ಶಾ ಅವರು ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಕುರಿತಂತೆ…

Read More

ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಅಕ್ರಮ ನಡೆದಿದೆ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಈಗಾಗಲೇ ಸ್ನೇಹಮಯಿ ಕೃಷ್ಣ ಅವರು ಹಲವು ಗಂಭೀರ ಆರೋಪ ಮಾಡಿದ್ದು ಅಲ್ಲದೆ, ಹೈಕೋರ್ಟ್ ನಲ್ಲಿ ಒಂದು ಪ್ರಕರಣದ ವಿಚಾರಣೆ ನಡೆಯುತ್ತಿದೆ. ಇದರ ಮಧ್ಯ ಇದೀಗ ಈ ಒಂದು ಪ್ರಕರಣಕ್ಕೆ ಬಿಗ್ ಟ್ರಸ್ಟ್ ಸಿಕ್ಕಿದ್ದು ಬಿಜೆಪಿ ಮುಖಂಡನಿಂದಲೇ ನನಗೆ ಈ ಒಂದು ದೂರು ತೆಗೆದುಕೊಳ್ಳಲು ಆಮಿಷ ಒಡ್ಡಿದ್ದರು ಎಂದು ಸ್ನೇಹಮಯಿ ಕೃಷ್ಣ ಆರೋಪ ಮಾಡಿದ್ದಾರೆ. ಹೌದು ಮುಡಾ ಅಕ್ರಮ ಕುರಿತು ಸಿಬಿಐ ತನಿಖೆ ನಡೆಸಬೇಕೆಂದು ದೂರುದಾರ ಸ್ನೇಹಮಯಿ ಕೃಷ್ಣ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿಯನ್ನು ವಾಪಸ್ ಪಡೆಯುವಂತೆ ಪಾರ್ವತಿ ಅವರ ಆಪ್ತ ಎನ್ನಲಾದ ಹರ್ಷ ಪತ್ರಕರ್ತರೊಬ್ಬರ ಜೊತೆ ಬಂದು ಹಣದ ಆಮಿಷ ಒಡ್ಡಿದ್ದಾರೆ ಎಂದು ಸ್ನೇಹಮಯಿ ಕೃಷ್ಣ ಆರೋಪ ಮಾಡಿದ್ದಾರೆ. ಲೋಕಾಯುಕ್ತದಿಂದ ನಮಗೆ ಸಮಸ್ಯೆ ಇಲ್ಲ. ಕೇಸ್ ಸಿಬಿಐಗೆ ಹೋದರೆ ಸಮಸ್ಯೆಯಾಗುತ್ತದೆ. ಹಾಗಾಗಿ ನಿಮಗೆ ಎಷ್ಟು ಹಣ ಬೇಕು ಕೇಳಿ ನಾವು ಕೊಡುತ್ತೇವೆಂದು ಹರ್ಷ ಕಾಲು…

Read More

ಮಂಡ್ಯ : ನಾಳೆಯಿಂದ ಮೂರು ದಿನಗಳ ಕಾಲ ಮಂಡ್ಯ ಜಿಲ್ಲೆಯಲ್ಲಿ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಮಾಂಸಹಾರ ನಿಷೇಧಿಸಿ ರುವುದನ್ನು ವಿರೋಧಿಸಿ ಮನೆಗೊಂದು ಕೋಳಿ ಊರಿಗೊಂದು ಕುರಿ ಸಂಗ್ರಹ ಅಭಯಾನಕ್ಕೆ ತಾಲೂಕಿನ ಹಳೆ ಬೂದನೂರು ಗ್ರಾಮದಲ್ಲಿ ಚಾಲನೆ ನೀಡಲಾಯಿತು. ಸಮ್ಮೇಳನದಲ್ಲಿ ಕನ್ನಡ ಸಾಹಿತ್ಯ ಪರಿಷತ್ ಮಾಂಸಹಾರಕ್ಕೆ ನಿರ್ಬಂಧ ಹಾಕಿದ ದಿನದಿಂದ ಬಾಡೂಟಕ್ಕೆ ಆಗ್ರಹಿಸುತ್ತಿದ್ದ ಬಾಡೂಟ ಬಳಗದ ಬೇಡಿಕೆಗೆ ಮನ್ನಣೆ ಸಿಗದ ಹಿನ್ನೆಲೆಯಲ್ಲಿ ಅಂದು ವಿಚಾರ ಕ್ರಾಂತಿ, ಇಂದು ಆಹಾರ ಕ್ರಾಂತಿ’ ಘೋಷಣೆಯಡಿ ಭಾಗವಹಿಸುವವರೆಗೆ ಮಾಂಸಹಾರ ನೀಡಲು ಮುಂದಾಗಿದ್ದು ಇದಕ್ಕಾಗಿ ಕೋಳಿ ಕುರಿ ಸಂಗ್ರಹಕ್ಕೆ ಮುಂದಾಗಿದೆ.

Read More

ಬೆಳಗಾವಿ : “ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಹೆಸರು ಹೇಳುವ ಬದಲು ದೇವರ ನಾಮ ಜಪ ಮಾಡಿದ್ದರೆ ಮುಕ್ತಿ ದೊರೆಯುತ್ತಿತ್ತು ಎನ್ನುವ ಕೇಂದ್ರ ಗೃಹ ಸಚಿವ ಅಮಿತ್ ಷಾ ಹೇಳಿಕೆ ಪ್ರಜಾಪ್ರಭುತ್ವಕ್ಕೆ ಮಾಡಿರುವ ಅಪಮಾನ” ಎಂದು ಡಿಸಿಎಂ ಡಿ. ಕೆ. ಶಿವಕುಮಾರ್ ಅವರು ಆಕ್ರೋಶ ವ್ಯಕ್ತಪಡಿಸಿದರು. ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರ ಅಂಬೇಡ್ಕರ್ ವಿರೋಧಿ ಹೇಳಿಕೆ ಕುರಿತು ಬೆಳಗಾವಿ ಸುವರ್ಣ ವಿಧಾನಸೌಧದ ಬಳಿ ಮಾಧ್ಯಮಗಳ ಪ್ರಶ್ನೆಗೆ ಗುರುವಾರ ಉತ್ತರಿಸಿದರು. “ಅಂಬೇಡ್ಕರ್ ಅವರು ಹಾಗೂ ಸಂವಿಧಾನವನ್ನು ನಾವುಗಳು ಪ್ರತಿಪಾದನೆ ಮಾಡದೆ ಮತ್ತಿನ್ಯಾರು ಮಾಡಲು ಸಾಧ್ಯ. ಅಂಬೇಡ್ಕರ್ ಅವರು ನಮಗೆ ಸಂವಿಧಾನ ಕೊಟ್ಟವರು ಅವರಿಗೆ ನಾವೆಲ್ಲ ಗೌರವ ಕೊಡುವುದು ನಮ್ಮ ಕರ್ತವ್ಯ. ಬಸವಣ್ಣ ಅವರ ಕಾಯಕವೇ ಕೈಲಾಸ ತತ್ವದಲ್ಲಿ ನಾವೆಲ್ಲರೂ ನಂಬಿಕೆ ಇಟ್ಟಿರುವವರು” ಎಂದರು. “ಸಂವಿಧಾನಕ್ಕೆ ಮತ್ತು ಅಂಬೇಡ್ಕರ್ ಅವರಿಗೆ ಮಾಡಿರುವ ಅಪಮಾನದ ಕುರಿತು ಹೆಚ್ಚಿನ ಚರ್ಚೆಯನ್ನು ನಾವೆಲ್ಲರೂ ಮಾಡಬೇಕಿದೆ” ಎಂದು ಹೇಳಿದರು.

Read More