Subscribe to Updates
Get the latest creative news from FooBar about art, design and business.
Author: kannadanewsnow05
ಕಾರಂಜಾ ಜಲಾಶಯ ಯೋಜನೆಯ ಮುಳುಗಡೆ ಪ್ರದೇಶದ ಸಂತ್ರಸ್ತರ ಬೇಡಿಕೆ ಪರಿಶೀಲನೆಗೆ ತಾಂತ್ರಿಕ ಸಮಿತಿ ರಚನೆ : CM ಸಿದ್ದರಾಮಯ್ಯ
ಬೆಳಗಾವಿ, ಡಿ.19: ಬೀದರಿನ ಕಾರಂಜಾ ಜಲಾಶಯ ಯೋಜನೆಯ ಸಂತ್ರಸ್ತರಿಗೆ ಹೆಚ್ಚಿನ ಪರಿಹಾರ ನೀಡುವ ಕುರಿತಾದ ಬೇಡಿಕೆ ಪರಿಶೀಲನೆಗೆ ತಾಂತ್ರಿಕ ಸಮಿತಿ ರಚಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.ಅವರು ಗುರುವಾರ ಸುವರ್ಣ ಸೌಧದಲ್ಲಿ ಕಾರಂಜಾ ಯೋಜನೆ ಸಂತ್ರಸ್ರರ ಹೋರಾಟಗಾರರು, ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಸಭೆ ನಡೆಸಿ, ಸಂತ್ರಸ್ತರ ಬೇಡಿಕೆ ಅನುಷ್ಠಾನದ ಸಾಧ್ಯತೆಗಳ ಬಗ್ಗೆ ಚರ್ಚೆ ನಡೆಸಿದರು. ತಮ್ಮನ್ನು ಭೇಟಿ ಮಾಡಿದ ನಿಯೋಗ ಮತ್ತು ಮುಖಂಡರುಗಳೊಂದಿಗೆ ಸಭೆ ನಡೆಸಿದ ಮುಖ್ಯಮಂತ್ರಿಗಳು ಸಂತ್ರಸ್ತರಿಗೆ ಪರಿಹಾರ ನೀಡುವ ಸಂಬಂಧ ತಾಂತ್ರಿಕ ಸಮಿತಿಯೊಂದನ್ನು ರಚಿಸಿ, ಸಮಿತಿ ನೀಡುವ ವರದಿಯಾಧರಿಸಿ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದರು. ಕಾರಂಜಾ ಜಲಾಶಯ ನಿರ್ಮಾಣಕ್ಕೆ 1972-73ರಲ್ಲಿ ಭೂಸ್ವಾಧೀನ ವಾಗಿತ್ತು. ಜಮೀನು ಕಳೆದುಕೊಂಡ ಸಂತ್ರಸ್ತರಿಗೆ ಎಕರೆಗೆ ರೂ 3000 ದಂತೆ 1981-86ರಲ್ಲಿ ಆಗಿನ ಮಾರುಕಟ್ಟೆ ಬೆಲೆ ಆಧರಿಸಿ ಪರಿಹಾರ ನೀಡಲಾಗಿತ್ತು. ಆದರೆ ಪರಿಹಾರ ಧನದ ಬಗ್ಗೆ ತಕರಾರು ಎತ್ತಿ ನ್ಯಾಯಾಲಯದ ಮೊರೆ ಹೋದ ಸಂತ್ರಸ್ತರು ಹೆಚ್ಚು ಪರಿಹಾರ ಧನ ಪಡೆದಿದ್ದರು. ನ್ಯಾಯಾಲಯದ ಮೊರೆ ಹೋಗದ…
ಬೆಳಗಾವಿ : ವಿಧಾನಸಭೆ ಮತ್ತು ಪರಿಷತ್ ಕಲಾಪದಲ್ಲೂ ಕಾಂಗ್ರೆಸ್ ಶಾಸಕರು ಅಂಬೇಡ್ಕರ್ ಭಾವಚಿತ್ರ ಪ್ರದರ್ಶಿಸಿ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಧಿಕ್ಕಾರ ಕೂಗಿದ್ದಾರೆ.ಇಂದು ವಿಧಾನಸಭೆಯ ಕಲಾಪ ಆರಂಭವಾಗುತ್ತಿದ್ದಂತೆ ಅಮಿತ್ ಶಾ ಹೇಳಿಕೆಗೆ ಖಂಡನೆ ವ್ಯಕ್ತಪಡಿಸಿ ಚರ್ಚೆಗೆ ಆಗ್ರಹಿಸಿದರು. ಸದನದಲ್ಲಿ ನಿರ್ಣಯ ಕೈಗೊಳಲು ಒತ್ತಾಯಿಸಿದರು. ಅಂಬೇಡ್ಕರ್ ಬಗ್ಗೆ ಅಮಿತ್ ಶಾ ಹೇಳಿಕೆ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದೆ. ಈ ಹಿನ್ನೆಲೆಯಲ್ಲಿ ವಿಧಾನಸಭೆಯಲ್ಲಿ ಅಂಬೇಡ್ಕರ್ ಫೋಟೋ ಹಿಡಿದು ಕಾಂಗ್ರೆಸ್ ಸದಸ್ಯರು ಧರಣಿ ನಡೆಸಿದರು. ಆಸನದ ಮುಂದೆ ಅಂಬೇಡ್ಕರ್ ಫೋಟೋ ಹಿಡಿದು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರು ಕುಳಿತಿದ್ದಾರೆ. ಸದನದ ಬಾವಿಗೆ ಇಳಿದು ಕಾಂಗ್ರೆಸ್ ಸದಸ್ಯರು ಜಮಾಯಿಸಿದ್ದಾರೆ. ವಿಪಕ್ಷ ಬಿಜೆಪಿ ಶಾಸಕರಿಂದಲೂ ಕಾಂಗ್ರೆಸ್ ವಿರುದ್ಧ ಧಿಕ್ಕಾರ ಘೋಷಣೆ ಕೂಗಿದರು. ಸದನದಲ್ಲಿ ಕಾಂಗ್ರೆಸ್ ಬಿಜೆಪಿ ಸದಸ್ಯರಿಂದ ತೀವ್ರ ಗದ್ದಲ ಮತ್ತು ಕೋಲಾಹಲ ಉಂಟಾಯಿತು. ವಿಧಾನಸಭೆಯಲ್ಲಿ ತೀವ್ರ ಗದ್ದಲ ಹಿನ್ನೆಲೆಯಲ್ಲಿ ಕೆಲಕಾಲ ಕಲಾಪ ಮುಂದೂಡಲಾಯಿತು. ಸಂವಿಧಾನ ಶಿಲ್ಪಿ ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರನ್ನು…
ಬೆಂಗಳೂರು : ಅನಾರೋಗ್ಯದ ಹಿನ್ನೆಲೆ ಚಿಕಿತ್ಸೆ ಪಡೆಯಲು ಇಂದು ಅಮೆರಿಕಕ್ಕೆ ಹ್ಯಾಟ್ರಿಕ್ ಹೀರೊ ನಟ ಶಿವರಾಜ್ ಕುಮಾರ್ ಪ್ರಯಾಣ ಬೆಳೆಸಿದ್ದಾರೆ. ಈಗಾಗಲೇ ಬೆಂಗಳೂರಿನ ನಾಗವಾರದ ತಮ್ಮ ನಿವಾಸದಿಂದ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತೆರಳಿದ್ದಾರೆ. ನಿವಾಸದಿಂದ ಕೆಂಪೇಗೌಡ ಏರ್ಪೋರ್ಟ್ ನತ್ತ ನಟ ಶಿವರಾಜ್ ಕುಮಾರ್ ಇದೀಗ ತೆರಳಿದ್ದಾರೆ. ಈ ವೇಳೆ ಅಮೇರಿಕಾಕೆ ಚಿಕಿತ್ಸೆಗೆ ತೆರಳುವ ಮುನ್ನ ನಟ ಶಿವಣ್ಣ ಮಾಧ್ಯಮ ಪ್ರತಿನಿಧಿಗಳಿಗೆ ಪ್ರತಿಕ್ರಿಯೆ ನೀಡಿದ್ದು, ಈ ವೇಳೆ ಮಾತನಾಡುವಾಗ ಸ್ವಲ್ಪ ದುಃಖ ಆಯ್ತು ಅಷ್ಟೇ. 35 ದಿನ ಮನೆಯಿಂದ ಆಚೆ ಇರಬೇಕಲ್ವಾ ಅದಕ್ಕೆ ಸ್ವಲ್ಪ ದುಃಖವಾಗುತ್ತಿದೆ. ಜನವರಿ 26 ಕ್ಕೆ ನಾನು ಬೆಂಗಳೂರಿಗೆ ವಾಪಸ್ ಆಗುತ್ತೇನೆ. ಎಲ್ಲರನ್ನೂ ಮಿಸ್ ಮಾಡಿಕೊಳ್ಳುತ್ತಿದ್ದೇನೆ. ಎಲ್ಲರಿಗೂ ಹೊಸ ವರ್ಷದ ಶುಭಾಶಯ ಎಂದು ಇದೆ ವೇಳೆ ನಟ ಶಿವರಾಜ್ ಕುಮಾರ್ ಶುಭ ಕೋರಿದರು. ಪತ್ನಿ ಗೀತಾ ಶಿವರಾಜ್ ಕುಮಾರ್ , ಪುತ್ರಿ ನಿವೇದಿತಾ ಹಾಗೂ ಆಪ್ತರ ಜೊತೆ ಅಮೆರಿಕಕ್ಕೆ ನಟ ಶಿವರಾಜ್ ಕುಮಾರ್ ಪ್ರಯಾಣ ಬೆಳೆಸಲಿದ್ದಾರೆ.ಡಿ.24 ರಂದು…
ಕಲಬುರ್ಗಿ : ಕಲಬುರ್ಗಿಯಲ್ಲಿ ಇಂದು ಭೀಕರವಾದಂತಹ ರಸ್ತೆ ಅಪಘಾತ ಸಂಭವಿಸಿದ್ದು, ಕ್ರಷರ್ ಹಾಗೂ ಬೈಕ್ ಮುಖಾಂತರ ಡಿಕ್ಕಿ ಹೊಡೆದ ಪರಿಣಾಮ, ಬೈಕ್ ಸವಾರ ಸ್ಥಳದಲ್ಲಿ ಸಾವನಪ್ಪಿದ್ದರೆ ಕ್ರಷರ್ ನಲ್ಲಿದ್ದ 10ಕ್ಕೂ ಹೆಚ್ಚು ಜನರಿಗೆ ಗಂಭೀರವಾದಂತಹ ಗಾಯಗಳಾಗಿರುವ ಘಟನೆ ಕಲಬುರ್ಗಿ ನಗರದ ಹೊರವಲಯದ ಅಪಘಾತ ಸಂಭವಿಸಿದೆ. ಮೃತ ಬೈಕ್ ಸವಾರನನ್ನು ಕೆರೂರ್ ಗ್ರಾಮದ ನಿವಾಸಿ ಉಮೇಶ್ ಹರಿರಾಮ್ ಚೌಹಾಣ್ (39) ಎಂದು ಗುರುತಿಸಲಾಗಿದೆ. ಕ್ರಷರ್ ನಲ್ಲಿದ್ದ 10ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ. ಇನ್ನೂ ಅದೇ ಗ್ರಾಮದ ಕ್ರಷರ್ ಚಾಲಕ ಕೃಷ್ಣ ನಾಗೇಶ್ ಬೋರೆ, ಅಲಗುಡ್ ಕ್ರಾಸ್ ನಿಂದ ಕಾರ್ಖನೆಯೊಂದರ ಕೂಲಿ ಕಾರ್ಮಿಕರಿಗೆ ಕೂರಿಸಿಕೊಂಡು ಹೇರೂರು ಗ್ರಾಮದ ಕಡೆ ತೆರಳುತ್ತಿದ್ದ. ಚಾಲಕ ಕೃಷ್ಣ ಅತಿವೇಗದಿಂದ ಕ್ರಷರ್ ಚಲಾಯಿಸುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಬೆಂಗಳೂರು : ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧದ ಪೋಕ್ಸೋ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪ್ರಕರಣ ರದ್ದು ಕೋರಿ ಬಿಎಸ್ ಯಡಿಯೂರಪ್ಪ ಅವರು ಸಲ್ಲಿಸಿದ ಅರ್ಜಿಯ ವಿಚಾರಣೆ ಇಂದು ಹೈಕೋರ್ಟ್ ಏಕ ಸದಸ್ಯ ಪೀಠದಲ್ಲಿ ನಡೆಯಿತು. ವಿಚಾರಣೆ ಬಳಿಕ ಹೈಕೋರ್ಟ್ ನ್ಯಾಯಮೂರ್ತಿಗಳು, ವಿಚಾರಣೆಯನ್ನು ನಾಳೆ ಸಂಜೆ 5 ಗಂಟೆಗೆ ಮುಂದೂಡಿ ಆದೇಶ ಹೊರಡಿಸಿದರು. ವಿಚಾರಣೆ ಆರಂಭದಲ್ಲಿ ಬಿಎಸ್ ಯಡಿಯೂರಪ್ಪ ಪರ ಹಿರಿಯ ವಕೀಲ ಸಿವಿ ನಾಗೇಶ್ ಅವರು ವಾದ ಆರಂಭಿಸಿದರು. ಸಂತ್ರಸ್ತ ಬಾಲಕಿಯ ದೂರುದಾರ ತಾಯಿಯ ನಡವಳಿಕೆಯನ್ನು ಗಮನಿಸಬೇಕು. ಅಧಿಕಾರಿಗಳು, ಸಂಬಂಧಿಗಳು, ರಾಜಕಾರಣಿಗಳ ಮೇಲೆ ಮಹಿಳೆ 56 ದೂರನ್ನು ನೀಡಿದ್ದಾರೆ. ಘಟನೆ ನಡೆದ ಒಂದುವರೆ ತಿಂಗಳ ನಂತರ ಮಾರ್ಚ್ 14ಕ್ಕೆ ಕೇಸ್ ದಾಖಲಾಗಿದೆ ಎಂದು ವಾದಿಸಿದರು. ಅನುಚಿತವಾಗಿ ಸ್ಪರ್ಶಿಸಿದ್ದಾರೆ ಎಂದು ಬಾಲಕಿಯ ಹೇಳಿಕೆ ಇದೆ. ಹಲವು ಜನರ ಸಮ್ಮುಖದಲ್ಲಿ ಈ ಘಟನೆ ನಡೆಯಲು ಸಾಧ್ಯವೇ? ಬಾಲಕಿಯ ಹೇಳಿಕೆಯನ್ನು ಆಧರಿಸಿ ಚಾರ್ಜ್ ಶೀಟ್ ದಾಖಲಿಸಲಾಗಿದೆ. ಎಂದು ಬಿಎಸ್ ಯಡಿಯೂರಪ್ಪ ಪರ ಹಿರಿಯ ವಕೀಲ ಸಿವಿ ನಾಗೇಶ್ ವಾದ…
ಕೋಲಾರ : ಬೊಲೆರೋ ವಾಹನ ಡಿಕ್ಕಿಯಾಗಿ ಸ್ಥಳದಲ್ಲೇ ಐವರು ಬೈಕ್ ಸವಾರರು ಸಾವನ್ನಪ್ಪಿರುವ ಘಟನೆ, ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಎನ್ ವಡ್ಡಹಳ್ಳಿ-ಗುಡಿಪಲ್ಲಿಗೆ ಹೋಗುವ ಮುಖ್ಯ ರಸ್ತೆಯಲ್ಲಿ ಈ ಒಂದು ಭೀಕರ ರಸ್ತೆ ಅಪಘಾತ ನಡೆದಿದೆ.ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಎನ್ ವಡ್ಡಹಳ್ಳಿಯಲ್ಲಿ ಈ ಒಂದು ಭೀಕರ ಅಪಘಾತ ಸಂಭವಿಸಿದೆ. ಮೃತರನ್ನು ಕೋನಗುಂಟೆ ಗ್ರಾಮದ ರಾಧಪ್ಪ (45) ವೆಂಕಟರಾಮಪ್ಪ (45) ವೆಂಕಟರಾಮಪ್ಪನ ಪತ್ನಿ ಅಲುವೇಲಮ್ಮ (30) ಹಾಗೂ ಅವರ ಜೊತೆಗೆ ಇಬ್ಬರು ಅಪರಿಚಿತರು ಕೂಡ ಸಾವನ್ನಪ್ಪಿದ್ದರೆ.. ಇನ್ನೋರ್ವ ವ್ಯಕ್ತಿಗೆ ಗಂಭೀರವಾದ ಗಾಯವಾಗಿದ್ದು, ಕೂಡಲೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಕೂಲಿ ಕೆಲಸ ಮುಗಿಸಿ ಮನೆಗೆ ಹೋಗುತ್ತಿದ್ದಾಗ ಈ ಒಂದು ಅಪಘಾತ ಸಂಭವಿಸಿದೆ ಎನ್ನಲಾಗಿದೆ. ನಂಗಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ರಾಮನಗರ : ರಾಮನಗರದಲ್ಲಿ ಇಂದು ಭೀಕರವಾದಂತಹ ಸರಣಿ ಅಪಘಾತ ನಡೆದಿದ್ದು, ನಿಯಂತ್ರಣ ತಪ್ಪಿ ಕಾರೊಂದು ಮಹಿಳೆಗೆ ಡಿಕ್ಕಿ ಹೊಡೆದು ಬಳಿಕ ಹಲವು ಕಾರುಗಳಿಗೆ ಗುದ್ದಿದ ಘಟನೆ ರಾಮನಗರದ ರಾಯರದೊಡ್ಡಿ ಬಳಿ ಈ ಒಂದು ಸರಣಿ ಅಪಘಾತ ನಡೆದಿದೆ. ಹೌದು ರಾಮನಗರದ ರಾಯರ ದೊಡ್ಡಿ ಬಳಿ ಸಂಭವಿಸಿದ ಸರಣಿ ಅಪಘಾತ ಮಹಿಳೆಗೆ ಡಿಕ್ಕಿಯಾಗಿ ಬಳಿಕ ಹಲವು ವಾಹನಗಳಿಗೆ ಕಾರು ಗುದ್ದಿದೆ. ಈ ವೇಳೆ ಪರಾರಿಯಾಗಲು ಯತ್ನಿಸಿದ ಕಾರಿನ ಚಾಲಕನನ್ನು ಚೇಸ್ ಮಾಡಿ ಪೊಲೀಸರು ಬಂಧಿಸಿದ್ದಾರೆ. ಕಾರು ಚಾಲಕನನ್ನು ವಶಕ್ಕೆ ಪಡೆದು ಪೊಲೀಸರು ಸದ್ಯ ವಿಚಾರಣೆ ನಡೆಸುತ್ತಿದ್ದಾರೆ. ಘಟನಾ ಸ್ಥಳಕ್ಕೆ ರಾಮನಗರ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಬೆಂಗಳೂರು : ಬೆಂಗಳೂರಿನಲ್ಲಿ ಬಿಬಿಎಂಪಿ ನಿರ್ಲಕ್ಷಕ್ಕೆ ಇದೀಗ ಮತ್ತೊಂದು ಅವಘಡ ಸಂಭವಿಸಿದ್ದು, ತಂದೆಯ ಜೊತೆಗೆ ಶಾಲೆಗೆ ತೆರಳುತ್ತಿದ್ದ ವೇಳೆ ಮರದ ಕೊಂಬೆ ಬಿದ್ದು ಬಾಲಕನಿಗೆ ತಲೆಗೆ ಪೆಟ್ಟಾಗಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರಿನ ನಂದಿ ದುರ್ಗದ ರಸ್ತೆಯಲ್ಲಿ ಈ ಒಂದು ಘಟನೆ ನಡೆದಿದೆ. ಹೌದು ಬಿಬಿಎಂಪಿ ನಿರ್ಲಕ್ಷಕ್ಕೆ ಮರದ ಕೊಂಬೆ ಬಿದ್ದು ಜಾಡೆಂ ಲೂಕಸ್ (14) ವರ್ಷದ ಬಾಲಕ ಐಸಿಯುನಲ್ಲಿ ಜೀವನ್ಮರಣದ ನಡುವೆ ಹೋರಾಟ ಮಾಡುತ್ತಿದ್ದಾನೆ. ಮರದ ಕೊಂಬೆ ಬಿದ್ದು ಆಸ್ಪತ್ರೆಯಲ್ಲಿ ಬಾಲಕ ಇದೀಗ ನರಳಾಟ ನಡೆಸುತ್ತಿದ್ದಾನೆ. ಬೆಳಿಗ್ಗೆ ನಂದಿ ದುರ್ಗದ ರಸ್ತೆಯಲ್ಲಿ ಈ ಒಂದು ಘಟನೆ ನಡೆದಿದೆ. ತಂದೆ ಜೊತೆ ಸ್ಕೂಟರ್ ಜೊತೆಗೆ ತೆರಳುತ್ತಿದ್ದಾಗ ಮರದ ಕೋಂಬೆ ಮರ ಬಿದ್ದು ಜಾಡಂ ಲೂಕಸ್ ತಲೆಗೆ ಗಂಭೀರವಾದ ಗಾಯಗಳಾಗಿವೆ. ಘಟನೆ ತಿಳಿದ ತಕ್ಷಣ ಆಸ್ಪತ್ರೆಗೆ ಬಿಬಿಎಂಪಿ ಅಧಿಕಾರಿ ಜಿ.ಎಲ್.ಜಿ ಸ್ವಾಮಿ ಭೇಟಿ ನೀಡಿ ಬಾಲಕನ ಆರೋಗ್ಯವನ್ನು ವಿಚಾರಿಸಿದ್ದಾರೆ. ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಬಾಲಕನ ತಂದೆ ಡೇವಿಡ್, ಎಂದಿನಂತೆ ನನ್ನ ಮಗನನ್ನು…
ಬೆಂಗಳೂರು : ಬೆಂಗಳೂರಲ್ಲಿ ವೈಟ್ ಬೋರ್ಡ್ ಹೊಂದಿರುವಂತಹ, ಸೆಲೆಬ್ರಿಟಿಗಳಿಗೆ ಐಷಾರಾಮಿ ಕಾರುಗಳನ್ನು ಬಾಡಿಗೆಗೆ ನೀಡುತ್ತಿದ್ದ ಟ್ರಾವೆಲ್ಸ್ ಮಾಲೀಕರಿಗೆ ಇದೀಗ ಸಾರಿಗೆ ಇಲಾಖೆಯು ಬಿಗ್ ಶಾಕ್ ನೀಡಿದೆ.ಐಷಾರಾಮಿ ವೈಟ್ ಬೋರ್ಡ್ ಕಾರುಗಳನ್ನು ಸೆಲೆಬ್ರಿಟಿಗಳಿಗೆ ಬಾಡಿಗೆಗೆ ನೀಡುತ್ತಿದ್ದಾರೆ ಇದರಿಂದ ಸಾರಿಗೆ ಇಲಾಖೆಗೆ ಕೋಟ್ಯಂತರ ರೂ. ನಷ್ಟ ಉಂಟಾಗುತ್ತಿದೆ. ಹಾಗಾಗಿ ಸಾರಿಗೆ ಇಲಾಖೆ ಆ ಕಾರುಗಳನ್ನು ಸೀಜ್ ಮಾಡುವ ಮೂಲಕ ಟ್ರಾವೆಲ್ಸ್ ಮಾಲೀಕರಿಗೆ ಶಾಕ್ ನೀಡಿದೆ. ಹೌದು ಬೆಂಗಳೂರಲ್ಲಿ ಇಂದು ಸಾರಿಗೆ ಇಲಾಖೆಯ ಅಧಿಕಾರಿಗಳು ಹಲವು ಕಡೆಗಳಲ್ಲಿ ದಾಳಿ ನಡೆಸಿದ್ದು, ಯಶವಂತಪುರ, ರಾಜಾಜಿ ನಗರ, ಮತ್ತಿಕೆರೆ, ಪೀಣ್ಯ, ಮಲ್ಲೇಶ್ವರಂ ಸೇರಿದಂತೆ ಅಕ್ಕಪಕ್ಕದ ಏರಿಯಾಗಳಲ್ಲಿ ಪ್ರತಿ ತಂಡದಲ್ಲೂ ಸಾರಿಗೆ ಇಲಾಖೆಯ ಇನ್ಸ್‌ಪೆಕ್ಟರ್ ಒಳಗೊಂಡಂತೆ ಒಟ್ಟು 9 ತಂಡಗಳಿಂದ ಕಾರ್ಯಾಚರಣೆ ಮಾಡಲಾಗಿದೆ. ಈ ಮೂಲಕ, ಜಾಗ್ವಾರ್, ಬಿಎಂಡಬ್ಲೂ, ರೇಂಜ್ ರೋವರ್, ಸೇರಿದಂತೆ ಕೋಟ್ಯಂತರ ರೂ. ಬೆಲೆಬಾಳುವ 25 ಐಷಾರಾಮಿ ಕಾರುಗಳನ್ನು ಆರ್ಡಿಓ ಅಧಿಕಾರಿಗಳು ಸೀಜ್ ಮಾಡಿದ್ದಾರೆ. ಜೊತೆಗೆ 50 ಲಕ್ಷ ರೂ. ದಂಡ ವಸೂಲಿ ಮಾಡಿದ್ದಾರೆ. ಈ ಮೂಲಕ,…
ಬೆಂಗಳೂರು : ಪತ್ನಿಯ ಕಿರುಕುಳಕ್ಕೆ ಬೇಸತ್ತು, ಟೆಕ್ಕಿ ಅತುಲ್ ಸುಭಾಷ್ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ಕೆಲವು ದಿನಗಳ ಹಿಂದೆ ಅತುಲ್ ಪತ್ನಿ, ಅತ್ತೆ ಹಾಗೂ ಬಾಮೈದನನ್ನು ಮಾರತ್ತಹಳ್ಳಿ ಪೊಲೀಸರು ಅರೆಸ್ಟ್ ಮಾಡಿದ್ದರು. ಇದೀಗ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಬಂಧಿತ ಅತುಲ್ ಪತ್ನಿ ಪೋಲೀಸರ ವಿಚಾರಣೆ ವೇಳೆ ಸ್ಪೋಟಕ ಹೇಳಿಕೆ ನೀಡಿದ್ದಾಳೆ. ನಿಖಿತಾ ಸಿಂಘಾನಿಯ ಹೇಳಿದ್ದೇನು? ಪ್ರಕರಣಕ್ಕೆ ಸಂಬಂಧಿಸಿದಂತೆ ಅತುಲ್ ಪತ್ನಿ ನಿಖಿತಾ ಸಿಂಘಾನಿಯಾ ಅವರನ್ನು ಬೆಂಗಳೂರಿನ ಮಾರತ್ತಹಳ್ಳಿ ಪೊಲೀಸರು ವಿಚಾರಣೆಗೊಳಪಡಿಸಿದ್ದು, ಈ ವೇಳೆ ಕೆಲ ಸ್ಫೋಟಕ ಅಂಶಗಳನ್ನು ಬಿಚ್ಚಿಟ್ಟಿದ್ದಾರೆ. ಘಟನೆಯಲ್ಲಿ ಅತುಲ್ ಸಂತ್ರಸ್ತ ಅಲ್ಲ. ನಾನೇ ನಿಜವಾದ ಸಂತ್ರಸ್ತೆ ಎಂದು ನಿಖಿತಾ ಪೊಲೀಸರ ಮುಂದೆ ತನ್ನ ಅಳಲು ತೋಡಿಕೊಂಡಿದ್ದಾರೆ. ನಾನು ಮತ್ತು ಅತುಲ್ ಬೇರೆ ಬೇರೆ ಕಡೆ ವಾಸ ಮಾಡುತ್ತಿದ್ದೇವೆ . ಆತ ಮಾಡಿರುವ ಆರೋಪ ಸುಳ್ಳು, ಎಲ್ಲವನ್ನು ಕಾನೂನಾತ್ಮಕವಾಗಿ ಎದುರಿಸುತ್ತೇನೆ. 2020 ರಿಂದಲೂ ನಾವು ಪ್ರತ್ಯೇಕವಾಗಿ ವಾಸ ಮಾಡುತ್ತಿದ್ದೇವೆ. ಆತನ ಸಾವಿಗೂ ನನಗೂ ಯಾವುದೇ ಸಂಬಂಧ…