Subscribe to Updates
Get the latest creative news from FooBar about art, design and business.
Author: kannadanewsnow05
ಮಂಗಳೂರು : ಧರ್ಮಸ್ಥಳ ಸೌಜನ್ಯ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಮತ್ತೊಂದು ಸ್ಫೋಟಕವಾದ ವಿಚಾರ ಬಹಿರಂಗವಾಗಿದ್ದು, ಇದೀಗ ಮಂಗಳೂರಿನಲ್ಲಿ ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣ ಸೌಜನ್ಯ ಕೊಲೆ ಮತ್ತು ಅತ್ಯಾಚಾರ ಮಾಡಿದ್ದು ವಿಠ್ಠಲ ಗೌಡ ಅಂತ ಸ್ಪೋಟಕ ಹೇಳಿಕೆ ನೀಡಿದ್ದಾರೆ. ಮಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಸೌಜನ್ಯ ಕೊಲೆ ಮತ್ತು ಅತ್ಯಾಚಾರ ಮಾಡಿದ್ದು ವಿಠ್ಠಲ ಗೌಡ ಈ ಕುರಿತು ನನ್ನ ಬಳಿ ಮಾಹಿತಿ ಮತ್ತು ಸಾಕ್ಷಿಗಳಿವೆ. ಅದೆಲ್ಲವನ್ನು ನಾನು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠ ಅಧಿಕಾರಿಗೆ ಕೊಡುತ್ತೇನೆ ಈ ತನಿಖೆ ಮತ್ತೆ ಮುಂದುವರಿಸುವಂತೆ ದೂರು ನೀಡುತ್ತೇನೆ ಎಂದು ಮಂಗಳೂರಿನಲ್ಲಿ ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣ ಸ್ಫೋಟಕವಾದ ಹೇಳಿಕೆ ನೀಡಿದ್ದಾರೆ. https://kannadanewsnow.com/kannada/the-continuation-of-temporary-stoppages-for-these-trains-at-this-railway-station/ https://kannadanewsnow.com/kannada/breaking-violence-breaks-out-in-massive-protest-against-social-media-ban-in-nepal-one-dead/
ಬೆಂಗಳೂರು : ಶಾಸಕ ವೀರೇಂದ್ರ ಪಪ್ಪಿ ವಿರುದ್ಧ ಅಕ್ರಮ ಆನ್ಲೈನ್ ಬೆಟ್ಟಿಂಗ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಸೆಪ್ಟೆಂಬರ್ 22 ರವರೆಗೆ ಶಾಸಕ ವೀರೇಂದ್ರ ಪಪ್ಪಿಗೆ ನ್ಯಾಯಾಂಗ ಬಂಧನ ವಿಧಿಸಿ ಕೋರ್ಟ್ ಆದೇಶ ಹೊರಡಿಸಿದೆ. ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಈ ಕುರಿತು ಆದೇಶ ಹೊರಡಿಸಿದೆ. ಇಂದು ಬೆಂಗಳೂರಿನ ವಿಶೇಷ ನ್ಯಾಯಾಲಯದಲ್ಲಿ ಶಾಸಕ ವೀರೇಂದ್ರ ಪಪ್ಪಿ ಅವರನ್ನು ಜಾರಿ ನಿರ್ದೇಶನಾಲಯ ಅಧಿಕಾರಿಗಳು ಹಾಜರುಪಡಿಸಿದ್ದರು. ಈ ವೇಳೆ ರಿಮೈಂಡ್ ಅರ್ಜಿಯಲ್ಲಿ ಇಡಿ ಅಧಿಕಾರಿಗಳು ಕಸ್ಟಡಿಗೆ ಕೇಳಿಲ್ಲ. ಹಾಗಾಗಿ ಇದೀಗ ಶಾಸಕ ವೀರೇಂದ್ರ ಪಪ್ಪಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶ ಹೊರಡಿಸಿದೆ.a
ಮಂಡ್ಯ : ಮಂಡ್ಯ ಜಿಲ್ಲೆಯ ಮದ್ದೂರು ಪಟ್ಟಣದಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲುತೂರಾಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ತಾಲೂಕು ಕಚೇರಿಯಲ್ಲಿನ ಸಭೆಯ ಬಳಿಕ ಹಿಂದು ಕಾರ್ಯಕರ್ತರು ಪ್ರತಿಭಟನೆಯನ್ನು ವಾಪಸ್ ಹಿಂಪಡೆದಿದ್ದಾರೆ ಎಂದು ತಿಳಿದುಬಂದಿದೆ. ಇದೀಗ ನಾಳೆ ಬಿಜೆಪಿನೇಯೋಗ ಮದ್ದೂರು ಪಟ್ಟಣಕ್ಕೆ ಭೇಟಿ ನೀಡಲಿದೆ. ಈ ಕುರಿತು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಮಾಧ್ಯಮಗಳೊಂದಿಗೆ ಮಾತನಾಡಿ, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹಾಳಾಗಿದೆ. ರಾಜ್ಯದಲ್ಲಿ ಕಳೆದ ಬಾರಿ ಹನುಮಾನ್ ಧ್ವಜ ಇಳಿಸಿದ್ದರು. ನಾಗಮಂಗಲದಲ್ಲಿ ಕಲ್ಲುತೂರಾಟ ನಡೆಸಿತ್ತು. ಪೊಲೀಸರ ಕೈಗೆ ಬೇಡಿ ಹಾಕಿದಂತೆ ಕಾಣುತ್ತಿದೆ. ಕಾಂಗ್ರೆಸ್ ಸರ್ಕಾರ ಬಂದ ಮೇಲೆ ಹಿಂದೂಗಳ ಮೇಲೆ ದಾಳಿ ಪ್ರಕರಣ ಹೆಚ್ಚುತ್ತಿವೆ. ಹಿಂದೂಗಳ ಅಪಮಾನ ಮಾಡುವಂತ ಕೆಲಸ ನಡೆಯುತ್ತಿದೆ ಎಂದರು. ನಿನ್ನೆ ಮಂಡ್ಯ ಜಿಲ್ಲೆಯ ಮದ್ದೂರ ಪಟ್ಟಣದಲ್ಲಿ ಗಣೇಶ ವಿಸರ್ಜನೆ ವೇಳೆ ಕೆಲವು ಕಿಡಿಗೇಡಿಗಳು ಮೆರವಣಿಗೆ ಮೇಲೆ ಕಲ್ಲುತೂರಾಟ ನಡೆಸಿದ್ದರು. ಈ ಹಿನ್ನೆಲೆಯಲ್ಲಿ ಇಂದು ಮದ್ದೂರು ಪಟ್ಟಣದಲ್ಲಿ ನಿಷೇಧಜ್ಞೆ ಜಾರಿಗೆ ಇದ್ದರೂ ಸಹ ಮಹಿಳೆಯರು ಮಕ್ಕಳು ಸೇರಿದಂತೆ ಸಾವಿರಾರು…
ಮಂಡ್ಯ : ಮಂಡ್ಯ ಜಿಲ್ಲೆಯ ಮದ್ದೂರು ಪಟ್ಟಣದಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲುತೂರಾಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ತಾಲೂಕು ಕಚೇರಿಯಲ್ಲಿನ ಸಭೆಯ ಬಳಿಕ ಹಿಂದು ಕಾರ್ಯಕರ್ತರು ಪ್ರತಿಭಟನೆಯನ್ನು ವಾಪಸ್ ಹಿಂಪಡೆದಿದ್ದಾರೆ ಎಂದು ತಿಳಿದುಬಂದಿದೆ. ನಿನ್ನೆ ಮಂಡ್ಯ ಜಿಲ್ಲೆಯ ಮದ್ದೂರಿ ಪಟ್ಟಣದಲ್ಲಿ ಗಣೇಶ ವಿಸರ್ಜನೆ ವೇಳೆ ಕೆಲವು ಕಿಡಿಗೇಡಿಗಳು ಮೆರವಣಿಗೆ ಮೇಲೆ ಕಲ್ಲುತೂರಾಟ ನಡೆಸಿದ್ದರು. ಈ ಹಿನ್ನೆಲೆಯಲ್ಲಿ ಇಂದು ಮದ್ದೂರು ಪಟ್ಟಣದಲ್ಲಿ ನಿಷೇಧಜ್ಞೆ ಜಾರಿಗೆ ಇದ್ದರೂ ಸಹ ಮಹಿಳೆಯರು ಮಕ್ಕಳು ಸೇರಿದಂತೆ ಸಾವಿರಾರು ಸಂಖ್ಯೆಯಲ್ಲಿ ಹಿಂದೂ ಕಾರ್ಯಕರ್ತರು ಸೇರಿ ಪ್ರತಿಭಟನೆ ನಡೆಸಿದ್ದರು. ಈ ವೇಳೆ ಪ್ರತಿಭಟನೆ ವೇಳೆ ಕೂಡ ಕೆಲವು ಕಡೆಗೆಗಳು ಕಲ್ಲುತೂರಾಟ ನಡೆಸಿದ್ದಾರೆ ಈ ಹಿನ್ನೆಲೆಯಲ್ಲಿ ಪೊಲೀಸರು ಗುಂಪು ಚದುರಿಸಲು ಲಾಠಿ ಚಾರ್ಜ್ ನಡೆಸಿದರು ಇದೀಗ ಪರಿಸ್ಥಿತಿ ತಿಳಿಕೊಟ್ಟಿದ್ದು ಪ್ರತಿಭಟನೆಯನ್ನು ಹಿಂದೂ ಕಾರ್ಯಕರ್ತರು ಹಿಂಪಡೆದಿದ್ದಾರೆ. ಈಗ ನಾಳೆ ಮದ್ದೂರು ಪಟ್ಟಣ ಬಂದ್ ಗೆ ಹಿಂದೂ ಸಂಘಟನೆಗಳು ಕರೆ ನೀಡಿವೆ. ಗಣೇಶ ಮೆರವಣಿಗೆ ಸಂದರ್ಭದಲ್ಲಿ ನಡೆಯಬಾರದು ನಡೆದು ಹೋಗಿದ್ದು ಶಾಂತಿಯಿಂದ ನಡೆಯುತ್ತಿದ್ದ ಮೆರವಣಿಗೆಯಲ್ಲಿ…
ಮಂಡ್ಯ : ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ಗಣೇಶ್ ವಿಸರ್ಜನೆ ವೇಳೆ ಕಲ್ಲುತೂರಾಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಸೀದಿಯಲ್ಲಿ ಕಲ್ಲುಗಳನ್ನು ಸಂಗ್ರಹಿಸಿ ಇಟ್ಟುಕೊಂಡು ಹೊಡೆದಿದ್ದಾರೆ. ಗಣೇಶ ಮೆರವಣಿಗೆ ವೇಳೆ ಕಲ್ಲು ತೂರಿದವರು ಶಾಂತಿ ಪ್ರಿಯರ? ಎಂದು ಪ್ರತಾಪ್ ಸಿಂಹ ಕಿಡಿ ಕಾರಿದರು. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ತಾಲಿಬಾನ್ ಆಡಳಿತ ನಡೆಸುತ್ತಿದೆ ನಾಗಮಂಗಲ ಆಯ್ತು ಇದೀಗ ಮದ್ದೂರಿಗೆ ಇಂತಹ ಪರಿಸ್ಥಿತಿ ಬಂದಿದೆ ಇಲ್ಲಿ ಹುಟ್ಟಿ ಬೆಳೆದು ಗಡಿಯಾಚಿಗೆ ನಿಷ್ಠೆ ಇಟ್ಟುಕೊಂಡವರಿಂದ ಕೃತ್ಯ ಎಸೆಯಲಾಗಿದೆ ಉತ್ತರ ಪ್ರದೇಶದ ಪೊಲೀಸರು ಗಣೇಶ ಮೆರವಣಿಗೆಗೆ ಬಂದು ಡ್ಯಾನ್ಸ್ ಮಾಡುತ್ತಾರೆ. ತಾಲಿಬಾನ್ ಮನಸ್ಥಿತಿಯ ಕಾಂಗ್ರೆಸ್ ಸರ್ಕಾರದಲ್ಲಿ ಇದು ಸಾಧ್ಯವಿಲ್ಲ. ಅವರು ಯಾವ ಮುಲ್ಲಾ? ಕಲ್ಲು ಹೊಡೆದವರು ಅರೆಸ್ಟ್ ಆಗಬೇಕು ಹೆಣ್ಣು ಮಕ್ಕಳ ಮೇಲೆ ಲಾಠಿ ಬೀಸಿದ ಪೊಲೀಸರನ್ನು ಅಮಾನತು ಮಾಡಿ. ಆತ್ಮ ರಕ್ಷಣೆಗಾಗಿ ಹಿಂದೂಗಳು ತಿರುಗಿ ಬೀಳುತ್ತಾರೆ. ನೂರಾರು ವರ್ಷ ಆಕ್ರಮ ನಡೆದರೂ 80% ಹಿಂದೂಗಳಿದ್ದಾರೆ. ಹಿಂದೂಗಳು ಕಲ್ಲು ಬಿಸಾಡುವುದಿಲ್ಲ ಕಲ್ಲು ಬೀಸಾಡಿದ್ರೆ ಬಿಡಲ್ಲ. ಗಣೇಶ ಮೆರವಣಿಗೆ ಮೇಲೆ ಕಲ್ಲು ತೂರಿರುವ…
ಮೈಸೂರು : ಸಾಹಿತಿ ಬಾನು ಮುಷ್ತಾಕ್ ಅವರು ಮುಸ್ಲಿಂ ಅಂತ ವಿಶ್ವ ವಿಖ್ಯಾತ ಮೈಸೂರು ದಸರಾ ಉದ್ಘಾಟನೆಗೆ ವಿರೋಧ ಮಾಡುತ್ತಿಲ್ಲ. ಬದಲಾಗಿ 2023ರ ಜನ ಸಾಹಿತ್ಯ ಸಮ್ಮೇಳನದಲ್ಲಿ ಭುವನೇಶ್ವರಿ ತಾಯಿಯ ಬಗ್ಗೆ ಅವರು ಆಡಿದ ಮಾತಿಗೆ ಕ್ಷಮೆ ಕೇಳಬೇಕು. ಕ್ಷಮೆ ಕೇಳಿದಲ್ಲಿ ನಾನು ಹಾಕಿರುವ ಕೇಸ್ ವಾಪಸ್ ಪಡೆಯುತ್ತೇನೆ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ. ಮೈಸೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಆಯ್ಕೆಯನ್ನು ಹೈಕೋರ್ಟ್ನಲ್ಲಿ ಕಲಂ 26ರ ಅಡಿ ಕೇಸ್ ಹಾಕಿದ್ದೇನೆ. ಇದರಲ್ಲಿ ಹಿಂದೂ ಧಾರ್ಮಿಕ ಪೂಜಾ ವಿಧಿವಿಧಾನಗಳ ಕುರಿತು ಹಾಗೂ ಸಂಪ್ರದಾಯಗಳ ವಿರುದ್ಧ ಕಂಡು ಬಂದರೆ ಪ್ರಶ್ನೆ ಮಾಡಬಹುದು ಎಂದು ಕಲಂ 26ರಲ್ಲಿ ತಿಳಿಸಲಾಗಿದೆ. ಹಾಗಾಗಿ ಅದರಂತೆ ಕೇಸ್ ಹಾಕಿದ್ದೇನೆ. 2023ರಲ್ಲಿ ಕನ್ನಡ ತಾಯಿ ಭುವನೇಶ್ವರಿಯ ಬಗ್ಗೆ ಬಾನು ಮುಷ್ತಾಕ್ ಮಾತನಾಡಿರುವುದಕ್ಕೆ ಕ್ಷಮೆ ಕೇಳಬೇಕು ಹಾಗೂ ದಸರಾ ಉದ್ಘಾಟನಾ ಸಂದರ್ಭದಲ್ಲಿ ಧಾರ್ಮಿಕ ಆಚರಣೆಗಳ ಬಗ್ಗೆ ಸ್ಪಷ್ಟನೆ ಕೊಡಬೇಕು. ಹಾಗಾದರೆ ಮಾತ್ರ ನಾನು…
ಮಂಡ್ಯ : ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ಗಣೇಶನ ಮೇಲೆ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಹಿಂದೂ ಸಂಘಟನೆ ಬೃಹತ್ ಪ್ರತಿಭಟನೆ ನಡೆಸುತ್ತಿದೆ. ಈ ವೇಳೆ ಮೆರವಣಿಗೆ ನಡೆಸುತ್ತಿದ್ದ ಸಂದರ್ಭದಲ್ಲಿ ಕೆಲ ಕಿಡಿಗೇಡಿಗಳು ಮಸೀದಿ ಮೇಲೆ ಮತ್ತೆ ಕಲ್ಲು ತೂರಾಟ ನಡೆಸಿದ್ದಾರೆ. ಇದೀಗ ಪ್ರತಿಭಟನಾ ಸ್ಥಳಕ್ಕೆ ಬಿಜೆಪಿಯ ಮಾಜಿ ಸಂಸದ ಪ್ರತಾಪ್ ಸಿಂಹ ಭೇಟಿ ಕೊಟ್ಟಿದ್ದು, ಮತ್ತಷ್ಟು ಕಿಚ್ಚು ಹೊತ್ತಿಸಿದ್ದಾರೆ. ಹೌದು ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನಲ್ಲಿ ಗಣೇಶ ವಿಸರ್ಜನೆ ವೇಳೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದರು. ಇದಕ್ಕೆ ಹಿಂದೂ ಸಂಘಟನೆಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಇದೀಗ ಪ್ರತಿಭಟನೆಯಲ್ಲಿ ಬಿಜೆಪಿಯ ಮಾಜಿ ಸಂಸದ ಪ್ರತಾಪ್ ಸಿಂಹ ಸಹ ಭಾಗಿಯಾಗಿದ್ದಾರೆ. ಹೆದ್ದಾರಿಯಿಂದ ತಾಲೂಕು ಕಚೇರಿವರೆಗೆ ಮೆರವಣಿಗೆ ನಡೆಸುತ್ತಿದ್ದು, ಕಲ್ಲು ತೂರಾಟ ಖಂಡಿಸಿ ಪ್ರತಾಪ್ ಸಿಂಹ ಆಕ್ರೋಶ ಹೊರ ಹಾಕಿದ್ದಾರೆ. ಅಲ್ಲದೇ ಇದಕ್ಕೂ ಮೊದಲು ಮೆರವಣಿಗೆ ವೇಳೆ ಪೊಲೀಸರಿಂದ ಲಾಠಿ ಚಾರ್ಜ್ ನಡೆಸಲಾಯಿತು. ಲಾಠಿ ಹಿಡಿದು ಯುವಕರನ್ನ ಚದುರಿಸಿದ ಪೊಲೀಸರು. ಪ್ರತಿಭಟನೆ ವೇಳೆ ಕೆಲವು…
ಬೆಂಗಳೂರು: ಮೆರವಣಿಗೆ ನಡೆಯುವ ಸಂದರ್ಭದಲ್ಲಿ ಮಸೀದಿ ಕಡೆಯಿಂದ ಕಲ್ಲುಗಳು ಎಸೆದ ಬಗ್ಗೆ ಮಾಹಿತಿ ಇದೆ. ವಿಚಾರಣೆ ನಡೆಸಿ ನಂತರ 21 ಜನರನ್ನು ಬಂಧಿಸಲಾಗಿದೆ ಎಂದು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ಹೇಳಿದ್ದಾರೆ. ಮದ್ದೂರಿನಲ್ಲಿ ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಕಲ್ಲು ತೂರಾಟದ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಇದು ಪೂರ್ವನಿಯೋಜಿತವಾಗಿ ನಡೆದಿದೆ.ಯಾವ ಹಿಂದೂಗಳ ಮೇಲೂ ಕೇಸ್ ದಾಖಲಾಗಿಲ್ಲ. ಇಷ್ಟು ಬೇಗ ಕ್ರಮ ತೆಗೆದುಕೊಂಡ ಪ್ರಕರಣ ಬೇರೆ ಯಾವುದೂ ಇಲ್ಲ. ಆದರೆ ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಪ್ರಚೋದಿಸುತ್ತಿದ್ದಾರೆ. ಇನ್ನಷ್ಟು ಬಿಗಿಕ್ರಮಗಳನ್ನು ತೆಗೆದುಕೊಳ್ಳಲು ಹೇಳಬಹುದಿತ್ತು. ಅದು ಬಿಟ್ಟು ಕೋಮುಗಲಭೆಗೆ ಪ್ರಚೋದನೆ ಕೊಡುವುದು ಸರಿಯಲ್ಲ ಎಂದರು. ಉದ್ದೇಶಪೂರ್ವಕವಾಗಿಯೇ ಹೀಗೆ ಮಾಡಿದ್ದಾರೆ. ಅಶೋಕ್ ಸೇರಿದಂತೆ ಬಿಜೆಪಿ ನಾಯಕರ ಕುಮ್ಮಕ್ಕಿನಿಂದ ಇದೆಲ್ಲ ಆಗುತ್ತಿದೆ. ನನಗೂ ಕೆಲವು ಸಂಘಟನೆಗಳ ಮುಖಂಡರು ಕರೆ ಮಾಡಿ ಮಾತನಾಡಿದ್ದಾರೆ. ಅವರ ಹೆಸರನ್ನ ಈಗ ಹೇಳಲು ಬಯಸುವುದಿಲ್ಲ. ಬಿಜೆಪಿ ನಾಯಕರೇ ಸಂಘಟನೆಗಳ ಮುಖಂಡರಿಗೆ ಕರೆ ಮಾಡಿ ಪ್ರಚೋದನೆ ಕೊಡುತ್ತಿದ್ದಾರೆ. ಸರ್ಕಾರದ ಅಭಿವೃದ್ಧಿ ಯೋಜನೆಗಳನ್ನು…
ಮಂಡ್ಯ : ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ಗಣೇಶನ ಮೇಲೆ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಹಿಂದೂ ಸಂಘಟನೆ ಬೃಹತ್ ಪ್ರತಿಭಟನೆ ನಡೆಸುತ್ತಿದೆ. ಈ ವೇಳೆ ಮೆರವಣಿಗೆ ನಡೆಸುತ್ತಿದ್ದ ಸಂದರ್ಭದಲ್ಲಿ ಕೆಲ ಕಿಡಿಗೇಡಿಗಳು ಮಸೀದಿ ಮೇಲೆ ಮತ್ತೆ ಕಲ್ಲು ತೂರಾಟ ನಡೆಸಿದ್ದಾರೆ.ಇದೀಗ ಹಿಂದೂ ಕಾರ್ಯಕರ್ತರು ಮಂಗಳೂರು ಹಾಗು ಬೆಂಗಳೂರು ಹಳೆ ಹೆದ್ದಾರಿ ಬಂದ್ ಮಾಡಿ ಪ್ರತಿಭಟನೆ ನಡೆಸಿದರು. ಅಲ್ಲದೇ ಇದಕ್ಕೂ ಮೊದಲು ಮೆರವಣಿಗೆ ವೇಳೆ ಪೊಲೀಸರಿಂದ ಲಾಠಿ ಚಾರ್ಜ್ ನಡೆಸಲಾಯಿತು. ಲಾಠಿ ಹಿಡಿದು ಯುವಕರನ್ನ ಚದುರಿಸಿದ ಪೊಲೀಸರು. ಪ್ರತಿಭಟನೆ ವೇಳೆ ಕೆಲವು ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದಾರೆ. ಈ ವೇಳೆ ಕಿಡಿಗೇಡಿಗಳ ಮೇಲೆ ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದಾರೆ. ಮಸೀದಿ ಬಳಿ ಹಿಂದೂ ಕಾರ್ಯಕರ್ತರು ಕರ್ಪೂರ ಹಚ್ಚಿ ಆಕ್ರೋಶ ಹೊರಹಾಕಿದ್ದಾರೆ. ಮದ್ದೂರು ಬಂದ್ ಗೆ ಹಿಂದೂ ಪರ ಸಂಘಟನೆಗಳು ಕರೆ ನೀಡಿದ್ದು, ಹೀಗಾಗಿ ಇಂದು ಯಾವುದೇ ಅಹಿತಕರ ಘಟನೆ ನಡೆಯದಂತೆ ಪೋಲೀಸರು ಕಟ್ಟೆಚ್ಚರ ವಹಿಸಿದ್ದಾರೆ. ಇಂದು ಬೆಳಿಗ್ಗೆ 6 ರಿಂದ ನಾಳೆ…
ಬೆಂಗಳೂರು : ಬೆಂಗಳೂರಲ್ಲಿ ಮತ್ತೊಂದು ಭೀಕರವಾದ ಮರ್ಡರ್ ಆಗಿದ್ದು, ಸ್ನೇಹಿತರೆ ಎಲ್ಲಾ ಕೂಡಿ ಕಾರ್ ಡ್ರೈವರ್‌ನನ್ನು ಭೀಕರವಾಗಿ ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಮೈಸೂರು ರಸ್ತೆಯ ಬಾಪೂಜಿನಗರದಲ್ಲಿ ನಡೆದಿದೆ. ಕೌಶಿಕ್ (25 ) ಕೊಲೆಯಾದ ದುರ್ದೈವಿ. ಮೃತ ಕೌಶಿಕ್ ಬ್ಯಾಟರಾಯನಪುರದಲ್ಲಿ ರೌಡಿಶೀಟರ್ ಆಗಿದ್ದ. 2020ರಲ್ಲಿ ಕೊಲೆ ಕೇಸ್ ಒಂದರಲ್ಲಿ ಕೌಶಿಕ್ ಎ8 ಆರೋಪಿಯಾಗಿ ಜೈಲು ಸೇರಿದ್ದ. ಬಳಿಕ ಜಾಮೀನಿನ ಮೂಲಕ ಹೊರಬಂದು, ಕ್ಯಾಬ್ ಓಡಿಸಿಕೊಂಡು ಜೀವನ ಸಾಗಿಸ್ತಿದ್ದ. ಭಾನುವಾರ ರಾತ್ರಿ ಕೌಶಿಕ್, ಸ್ನೇಹಿತರೊಂದಿಗೆ ಪಾರ್ಟಿ ಮಾಡುತ್ತಿದ್ದ ವೇಳೆ ಜಗಳ ನಡೆದಿದೆ. ಬಳಿಕ ಜೊತೆಯಲ್ಲಿದ್ದ ಸ್ನೇಹಿತರೇ ಕೌಶಿಕ್‌ನನ್ನು ಹತ್ಯೆಗೈದಿದ್ದಾರೆ ಎನ್ನಲಾಗುತ್ತಿದೆ. ಮಧ್ಯರಾತ್ರಿ 2:30ರ ಸುಮಾರಿಗೆ ಆರೋಪಿಗಳು ಕೊಲೆ ಮಾಡಿ ಪರಾರಿಯಾಗಿದ್ದಾರೆ. ಘಟನಾ ಸ್ಥಳಕ್ಕೆ ಬ್ಯಾಟರಾಯನಪುರ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಬಳಿಕ ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಿದ್ದಾರೆ. ಬ್ಯಾಟರಾಯನಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.














