Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ಕಾರಿನ ಸನ್ ರೂಫ್ ತೆರೆದು ಮಕ್ಕಳನ್ನ ನಿಲ್ಲಿಸುವ ಪೋಷಕರೆ ಎಚ್ಚರ. ಸನ್ ರೂಫ್ ತೆರೆದು ನಿಂತ ಬಾಲಕನ ತಲೆಗೆ ರಸ್ತೆಯಲ್ಲಿದ್ದ ಹೈಟ್ ರಿಸ್ಟ್ರಿಕ್ಷನ್ ಬ್ಯಾರಿಯರ್ ಬಡಿದು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಗರದಲ್ಲಿ ನಡೆದಿದೆ. ಸೆಪ್ಟೆಂಬರ್ 6ರಂದು ಮಧ್ಯಾಹ್ನ 1 ಗಂಟೆ ಸುಮಾರಿಗೆ ವಿದ್ಯಾರಣ್ಯಪುರದ ಜಿಕೆವಿಕೆ ರಸ್ತೆಯಲ್ಲಿ ಘಟನೆ ಸಂಭವಿಸಿದ್ದು, ಕಾರಿನಲ್ಲಿದ್ದ ಬಾಲಕನ ತಲೆಗೆ ಗಂಭೀರ ಗಾಯವಾಗಿದೆ. ಬಾಲಕ ಸನ್ ರೂಫ್ ತೆರೆದು ನಿಂತಿದ್ದಾಗ ರಸ್ತೆಯಲ್ಲಿದ್ದ ಹೈಟ್ ರಿಸ್ಟ್ರಿಕ್ಷನ್ ಬ್ಯಾರಿಯರ್ ಬಗ್ಗೆ ಅಂದಾಜು ಸಿಗದ ಚಾಲಕ ಕಾರನ್ನು ಚಲಾಯಿಸಿಕೊಂಡು ಹೋಗಿದ್ದರ ಪರಿಣಾಮ ಕಬ್ಬಿಣದ ಬ್ಯಾರಿಯರ್ ಬಾಲಕನ ತಲೆಗೆ ಬಡಿದಿದೆ. ಘಟನೆಯ ದೃಶ್ಯಗಳು ಮತ್ತೊಂದು ಕಾರಿನ ಡ್ಯಾಶ್ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ. ವಿಡಿಯೋ ಪರಿಶೀಲನೆ ನಡೆಸಲಾಗಿದ್ದು, ಘಟನೆಯ ಕುರಿತು ಮಾಹಿತಿ ಕಲೆಹಾಕುತ್ತಿರುವುದಾಗಿ ಬೆಂಗಳೂರು ಉತ್ತರ ವಿಭಾಗದ ಸಂಚಾರ ಪೊಲೀಸರು ತಿಳಿಸಿದ್ದಾರೆ. https://twitter.com/3rdEyeDude/status/1964541596994851003?t=qzG0qa7IREcEH24Tj8Q9eQ&s=19
ಉಡುಪಿ: ಸಮುದ್ರಕ್ಕೆ ಈಜಲು ಹೋದ ನಾಲ್ವರ ಪೈಕಿ ಮೂವರು ಮೃತಪಟ್ಟಿದ್ದು, ಓರ್ವ ತೀವ್ರವಾಗಿ ಅಸ್ವಸ್ಥಗೊಂಡ ಘಟನೆ ಕುಂದಾಪುರ ತಾಲೂಕಿನ ಗೋಪಾಡಿ ಬೀಚ್‌ನಲ್ಲಿ ಭಾನುವಾರ ಮಧ್ಯಾಹ್ನ ಸಂಭವಿಸಿದೆ. ಬೆಂಗಳೂರಿನಿಂದ 10 ಮಂದಿ ಯುವಕರ ತಂಡ ಗೋಪಾಡಿಗೆ ಬಂದಿದ್ದು, ಅದರಲ್ಲಿ ಏಳು ಮಂದಿ ಸಮುದ್ರಕ್ಕೆ ಇಳಿದು ನೀರಿನಲ್ಲಿ ಆಡುತ್ತಿದ್ದರು. ಈ ವೇಳೆ ನಾಲ್ವರು ಅಲೆಗಳಿಗೆ ಸಿಲುಕಿ ನೀರು ಪಾಲಾಗಿದ್ದು, ಅವರಲ್ಲಿ ಮೂವರು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಓರ್ವನನ್ನು ಸ್ಥಳೀಯರು ರಕ್ಷಿಸಿದ್ದು, ಗಂಭೀರ ಸ್ಥಿತಿಯಲ್ಲಿದ್ದ ಆತನನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಅಗ್ನಿ ಶಾಮಕ ದಳ ಮತ್ತು ಪೊಲೀಸರು ಆಗಮಿಸಿದ್ದರು. ಮುಳುಗು ತಜ್ಞ ಈಶ್ವರ ಮಲ್ಪೆ ತಂಡ ಹಾಗೂ ಸ್ಥಳೀಯರಿಂದ ರಕ್ಷಣಾ ಕಾರ್ಯಾಚರಣೆ ನಡೆಸಿದರು.
ಮೈಸೂರು : 2025ನೇ ಸಾಲಿನ ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವವನ್ನು ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 2 ರವರೆಗೆ ವಿಜೃಂಭಣೆಯಿಂದ ಆಚರಿಸಲಾಗುತ್ತದೆ. ಹೀಗಾಗಿ ಈಗಾಗಲೇ ಅರಮನೆಯಲ್ಲಿ ಸಕಲ ಸಿದ್ಧತೆಗಳು ಸಹ ನಡೆದಿದ್ದು, ಇದೀಗ ಈ ಬಾರಿಯ ಮೈಸೂರು ದಸರಾ ವೀಕ್ಷಣೆಗೆ ಟಿಕೆಟ್ ಮತ್ತು ಗೋಲ್ಡ್ ಕಾರ್ಡ್‌ಗಳನ್ನು ಸಾರ್ವಜನಿಕ ಬಳಕೆಗೆ ಜಿಲ್ಲಾಡಳಿತವು ದಸರಾ ಅಧಿಕೃತ ವೆಬ್ ಸೈಟ್‌ನಲ್ಲಿ ಬಿಡುಗಡೆಗೊಳಿಸಿದೆ. ಹೌದು.. ಈ ಬಾರಿಯ ಮೈಸೂರು ದಸರಾ ಹಬ್ಬದಲ್ಲಿ ಅರಮನೆ, ಜಂಬೂಸವಾರಿ, ಪಂಜಿನ ಕವಾಯತು, ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಹೀಗೆ ಎಲ್ಲವನ್ನೂ ಕಣ್ತುಂಬಿಕೊಳ್ಳಬೇಕು ಎನ್ನುವವರಿಗೆ ಜಿಲ್ಲಾಡಳಿತ, 6500 ರೂಪಾಯಿ ಗೋಲ್ಡ್ ಕಾರ್ಡ್, ಟಿಕೆಟ್ ಗಳನ್ನು ಬಿಡುಗಡೆ ಮಾಡಿದೆ. ಸೆ.22 ರಿಂದ ಅ.2 ರವರೆಗೆ ನಡೆಯಲಿರುವ ದಸರಾದಲ್ಲಿ ಗೋಲ್ಡ್ ಕಾರ್ಡ್ ಪಡೆದು ಎಲ್ಲ ಕಾರ್ಯಕ್ರಮಗಳನ್ನು ನೋಡಬಹುದಾಗಿದೆ. ಗೋಲ್ಡ್ ಕಾರ್ಡ್ ಗೆ ಎಷ್ಟು ದರ? ದಸರಾ ಗೋಲ್ಡ್ ಕಾರ್ಡ್ ಗೆ 6500 ರೂಪಾಯಿ ನಿಗದಿ ಮಾಡಲಾಗಿದೆ. ಇನ್ನು ಮೈಸೂರು ದಸರಾದ ಪ್ರಮುಖ ಆಕರ್ಷಣೆಯಾಗಿರುವ ಜಂಬೂಸವಾರಿ ಟಿಕೆಟ್…
ಬೆಂಗಳೂರು : ಬೆಂಗಳೂರಲ್ಲಿ ಡ್ರಗ್ಸ್ ಸಂಗ್ರಹಿಸಿದ್ದ ಇಬ್ಬರು ಮಹಿಳೆ ಸೇರಿ ಒಟ್ಟು ನಾಲ್ವರು ಆರೋಪಿಗಳನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.ಅದ್ಮ್ಯಾಕೋ ಬ್ರೈಟ್ ಹಾಗು ಎನ್ಕೆಟೈ ಕೋಫಿ ಬಂಧಿತ ಆರೋಪಿಗಳು ಎಂದು ತಿಳಿದುಬಂದಿದೆ. ಬಂಧಿತರಿಂದ 70 ಲಕ್ಷ ರೂ.ಮೌಲ್ಯದ 700 ಗ್ರಾಂ MDMA ಸೀಜ್ ಮಾಡಿದ್ದಾರೆ. ಮಂಗಳೂರಿನ ಯಲಹಂಕ ಉಪನಗರ ಠಾಣೆ ಪೋಲಿಸರು ಕಾರ್ಯಾಚರಣೆ ನಡೆಸಿದ್ದು ಯಲಹಂಕದ ದೊಡ್ಡ ಬೆಟ್ಟ ಹಳ್ಳಿ ಮನೆ ಒಂದರಲ್ಲಿ ಪೊಲೀಸರು ಗಾಂಜಾ ಜಪ್ತಿ ಮಾಡಿದ್ದಾರೆ ಆರೋಪಿಗಳ ಮಾಹಿತಿ ಆಧರಿಸಿ ಬೆಂಗಳೂರಿನ ಏಳು ಕಡೆ ದಾಳಿ ಮಾಡಿದ್ದಾರೆ. ದಾಳಿಂಬೆ ಬೆಳೆ ಪಾಸ್ಪೋರ್ಟ್ ಅವತ್ತಿನೂರು ವಾಸವಿದ 9 ಜನರನ್ನು ಅರೆಸ್ಟ್ ಮಾಡಲಾಗಿದೆ. ದಾಳಿಯ ವೇಳೆ ಇಬ್ಬರು ವಿದೇಶದಲ್ಲಿ ಡ್ರಗ್ಸ್ ಪತ್ತೆಯಾಗಿದೆ. ವಿದೇಶಿ ಮಹಿಳೆಯರಾದ ಬೆನೆಡಿಕ್ಸ್, ಪ್ರಿಸ್ಕಿಲ್ ಕೂಡ ಬಂಧನವಾಗಿದೆ.
ಮಂಡ್ಯ : ಮಂಡ್ಯದಲ್ಲಿ ಬೆಚ್ಚಿ ಬೀಳಿಸುವಂತಹ ಘಟನೆ ನಡೆದಿದ್ದು ಕೋರ್ಟ್ ಅಮೀನ್ ಮೇಲೆ ಕಣ್ಣಿಗೆ ಮಹಿಳೆಯೊಬ್ಬರು ಖಾರದಪುಡಿ ಎರಚಿರುವ ಘಟನೆ ನಡೆದಿದೆ. ಅಪಘಾತ ಪ್ರಕರಣದ ಸಂಭಂದ ನೋಟಿಸ್ ಕೊಡಲು ಹೋಗಿದ್ದಾಗ ಈ ಘಟನೆ ನಡೆದಿದೆ. ಕೋರ್ಟ್ ಅಮೀನ್ ಶಂಕರೇಗೌಡ ಎನ್ನುವವರ ಕನ್ನಳ್ಳಿ ಮಹಿಳೆ ಖಾರದಪುಡಿ ಎರಚಿ ದಾಳಿ ಮಾಡಿದ್ದಾಳೆ. ಮಂಡ್ಯ ಜಿಲ್ಲೆಯ ಮಳೆನಹಳ್ಳಿ ಗ್ರಾಮದಲ್ಲಿ ಒಂದು ಘಟನೆ ನಡೆದಿದೆ. ಅಪಘಾತ ಪ್ರಕರಣ ಸಂಬಂಧ ನೋಟಿಸ್ ಕೊಡಲು ಭೇಟಿ ನೀಡಿರುತ್ತಾರೆ. ಈ ವೇಳೆ ಅಮೀನ್ ಕಣ್ಣಿಗೆ ಸಾಕಮ್ಮ ಎನ್ನುವ ಮೇಲೆ ಕಾರದಪುಡಿ ಎರಚಿದ್ದಾಳೆ. ಕೆ.ಆರ್ ಪೇಟೆ ಸಿವಿಲ್ ಕೋರ್ಟ್ ಅಮೀನ್ ಶಂಕರೇಗೌಡರಿಗೆ ಕಾರದಪುಡಿ ಎರಚಿದ್ದಾಳೆ.
ಬೆಂಗಳೂರು : ಸನ್ ರೂಫ್ ಓಪನ್ ಮಾಡಿ ಮಕ್ಕಳನ್ನು ತಿಳಿಸುವಾಗ ಪೋಷಕರು ಆದಷ್ಟು ಎಚ್ಚರದಿಂದ ಇರಬೇಕು ಇದೀಗ ಬೆಂಗಳೂರಿನಲ್ಲಿ ಭೀಕರವಾದ ಘಟನೆ ಒಂದು ನಡೆದಿದ್ದು, ಸನ್ ರೂಫ್ ಓಪನ್ ಮಾಡಿ ಬಾಲಕನೊಬ್ಬ ನಿಂತಿದ್ದ ವೇಳೆ ಕಬ್ಬಿಣದ ಕಮಾನಿಗೆ ಬಾಲಕನ ತಲೆಗೆ ಬಡಿದು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರಲ್ಲಿ ನಡೆದಿದೆ. ಬೆಂಗಳೂರಿನ ವಿದ್ಯಾರಣ್ಯಪುರದಲ್ಲಿ ನಡೆದಿದೆ. ವಿದ್ಯಾರಣ್ಯಪುರದ ಜಿಕೆವಿಕೆ ರಸ್ತೆಯಲ್ಲಿ ಈ ಒಂದು ಘಟನೆ ನಡೆದಿದೆ. ಕಾರಿನ ಸನ್ರೂಫ್ ಓಪನ್ ಮಾಡಿ ಬಾಲಕ ನಿಂತಿದ್ದ ಈ ವೇಳೆ ಕಬ್ಬಿಣದ ಕಮಾನು ಬಾಲಕನ ತಲೆಗೆ ಬಡಿದಿದೆ, ಕಾರಿನಲ್ಲಿ ಓಪನ್ ಮಾಡಿ ನಿಂತಿದ್ದಾಗ ಭೀಮ್ ಬಾಲಕನ ತಲೆಗೆ ಬಡೆದಿದೆ. ಬಾಲಕನ ತಲೆಗೆ ಬಡಿಯುವ ಭೀಕರ ದೃಶ್ಯ ಕ್ಯಾಮೆರಾದಲ್ಲಿ ಸರಿಯಾಗಿದೆ ಕಬ್ಬಿಣದ ಕಾರಿನ ಒಳಗೆ ಬಾಲಕ ಇದೆ ವೇಳೆ ಕುಸಿದು ಬಿದ್ದಿದ್ದಾನೆ.
ಬೆಂಗಳೂರು : ಬೆಂಗಳೂರು ನಗರದ ಪ್ರತಿಷ್ಠಿತ ಹೋಟೆಲ್ ಮೇಲೆ ಸಿಸಿಬಿ ದಾಳಿ ನಡೆಸಿದೆ. ಅವಧಿ ಮೀರಿ ಹೋಟೆಲ್ ನಲ್ಲಿ ಪಾರ್ಟಿ ಮತ್ತು ಡ್ರಗ್ಸ್ ಬಳಕೆ ಮಾಡಿರುವ ಆರೋಪದ ಹಿನ್ನೆಲೆಯಲ್ಲಿ ಬೆಂಗಳೂರು ನಗರದ JW ಮಾರಿಯೆಟ್ ಹೋಟೆಲ್ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ. ಸುಮಾರು 50 ಕ್ಕೂ ಹೆಚ್ಚು ಜನರು ಮಾಡುತ್ತಿದ್ದರ ಬಗ್ಗೆ ಖಚಿತ ಮಾಹಿತಿ ಮೇರೆಗೆ ಸಿಸಿಬಿ ಪೊಲೀಸರು ದಾಳಿ ಮಾಡಿದ್ದಾರೆ. ಸಿಸಿಬಿ ಎಸಿಪಿ ಮಹಾನಂದ ನೇತೃತ್ವದಲ್ಲಿ ದಾಳಿ ನಡೆಸಿ ಪರಿಶೀಲನೆ ನಡೆಸಲಾಗುತ್ತಿದೆ. ದಾಳಿಯ ವೇಳೆ ಸಿಸಿಬಿ ಪೊಲೀಸರು ಓರ್ವನನ್ನ ವಶಕ್ಕೆ ಪಡೆದುಕೊಂಡಿದ್ದು, ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹುಣ್ಣಿಮೆಯ ದಿನವನ್ನು ಭಗವಾನ್ ಚಂದ್ರನ ಪ್ರಾಬಲ್ಯದ ದಿನವೆಂದು ಪರಿಗಣಿಸಲಾಗುತ್ತದೆ. ಅದಕ್ಕಾಗಿಯೇ ಹುಣ್ಣಿಮೆಯ ದಿನದಂದು ದೈವಿಕ ಶಕ್ತಿಗಳ ಶಕ್ತಿ ಹೆಚ್ಚಾಗಿರುತ್ತದೆ ಮತ್ತು ಯಾವುದೇ ದುಷ್ಟ ಶಕ್ತಿಗಳು ನಮಗೆ ಹಾನಿ ಮಾಡಲು ಸಾಧ್ಯವಿಲ್ಲ ಎಂದು ಹೇಳಲಾಗುತ್ತದೆ. ಮತ್ತು ಅದಕ್ಕಾಗಿಯೇ ಹುಣ್ಣಿಮೆಯ ದಿನದಂದು ಎಲ್ಲಾ ದೇವಾಲಯಗಳಲ್ಲಿ ವಿಶೇಷ ಅಭಿಷೇಕಗಳು ಮತ್ತು ಪೂಜೆಗಳನ್ನು ಮಾಡಲಾಗುತ್ತದೆ. ಅಂತಹ ಹುಣ್ಣಿಮೆಯ ದಿನದಂದು ಚಂದ್ರಗ್ರಹಣ ಸಂಭವಿಸುತ್ತದೆ. ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ. ನಿಮ್ಮ ಸಮಸ್ಯೆಗಳಾದ ಆರೋಗ್ಯ, ಸಂತಾನ, ಸಾಲದ ಬಾಧೆ, ಪ್ರೀತಿಯಲ್ಲಿ ನಂಬಿ ಮೋಸ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸತಿ ಪತಿ ಕಲಹ, ಪ್ರೇಮ…
ಬಾಗಲಕೋಟೆ : ರಾಜ್ಯದಲ್ಲಿ ಗಣೇಶ ವಿಸರ್ಜನೆ ಸಮಾರಂಭ ವೇಳೆ ಮತ್ತೊಂದು ದುರಂತ ಸಂಭವಿಸಿದ್ದು, ಮೆರವಣಿಗೆ ವೇಳೆ ಮುಸ್ಲಿಂ ಯುವಕನೊಬ್ಬ ಹಸಿರು ಧ್ವಜ ತಂದಿದ್ದಾನೆ. ಮೆರವಣಿಗೆ ಮೇಲೆ ಹಸಿರು ಧ್ವಜ ಹಾರಿಸಬೇಡ ಎಂದಿದ್ದಕ್ಕೆ ವಾಗ್ವಾದ ನಡೆದಿದ್ದು ಈ ವೇಳೆ ಮುಸ್ಲಿಂ ಯುವಕ ಹಿಂದೂ ಯುಗನಿಗೆ ಚಾಕು ಇರಿದಿರುವ ಘಟನೆ ಬಾಗಲಕೋಟೆ ತಾಲೂಕಿನ ಮುರುನಾಳಗ್ರಾಮದಲ್ಲಿ ನಡೆದಿದೆ. ನವೀನ್ ಕೊಡ್ಲೆಪ್ಪನವರ್ (22) ಎಂಬ ಹಿಂದೂ ಯುವಕನಿಗೆ ಆಸೀಫ್ ಬೆಳಗಾಂಕರ್ ಎಂಬ ಮುಸ್ಲಿಂ ಯುವಕ ಚಾಕು ಇರಿದ್ದಾನೆ. ನವೀನ್ ಕೊಡ್ಲಾಪ್ಪನವರ್ ಎಡಗೈ ಹಾಗು ಬೆನ್ನಿಗೆ ಗಂಭೀರ ಗಾಯಗಳಾಗಿದ್ದು ಬಾಗಲಕೋಟೆ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ಕುಡಿದಂತೆ ಕಲಾದಿಗೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಚಿಕ್ಕಮಗಳೂರು : ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟ್ ನಲ್ಲಿ ಕೆಎಸ್ಆರ್ಟಿಸಿ ಬಸ್, 2 ಲಾರಿಗಳ ನಡುವೆ ಭೀಕರ ಅಪಘಾತ ಸಂಭಾವಿಸಿದೆ. ಅಪಘಾತದಲ್ಲಿ ಚಾಲಕನಿಗೆ ಗಂಭೀರವಾದ ಗಾಯಗಳಾಗಿವೆ. KSRTC ಬಸ್ 2 ಚಿಕ್ಕಮಗಳೂರಿಂದ ಮಂಗಳೂರಿಗೆ ತೆರಳುತ್ತಿತ್ತು. ಈ ವೇಳೆ 2 ಲಾರಿಗಳ ನಡುವೆ ಅಪಘಾತ ಸಂಭವಿಸಿದ್ದು, ಬಸ್ ಚಾಲಕನಿಗೆ ಗಂಭೀರವಾದ ಗಾಯಗಳಾಗಿವೆ. ತಕ್ಷಣ ಮಂಗಳೂರು ಆಸ್ಪತ್ರೆಗೆ ಚಾಲಕನನ್ನು ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅಪಘಾತ ಹಿನ್ನೆಲೆ ಚಾರ್ಮಾಡಿ ಘಾಟ್ ನಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದೆ. ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.













