Subscribe to Updates
Get the latest creative news from FooBar about art, design and business.
Author: kannadanewsnow05
ಈ ಯಂತ್ರವನ್ನು ಗುರುವಾರ ಅಥವಾ ರವಿವಾರ, ಹುಣ್ಣಿಮೆ ಅಥವಾ ಅಮಾವಾಸ್ಯ ದಿನ ರಾತ್ರಿ 9 ರಿಂದ 10 ಸಮಯದಲ್ಲಿ ಸ್ನಾನ ಪೂಜಾದಿಗಳನ್ನು ಮಾಡಿಕೊಂಡು ಸಿದ್ಧಾಸನದ ಮೇಲೆ ಕುಳಿತು, ಗಣಪತಿ ಶಾಂತಿ ಮಂತ್ರ ಪಟನೆ ಮಾಡಿ ಯಂತ್ರ ಮಂತ್ರ ಸಾಧನೆಯನ್ನು 9 ತ್ರಾಮದ ತಗಡಿನ ಮೇಲೆ ವಿಧಾನೋಕ್ತವಾಗಿ ಬರೆದು ”ಓಂ ಆಲಯ ಮಹಾ ಆಲಯ ಓಂ ಸರ್ವ ಗ್ರಹ ದೋಷ ನಿವರಣಾಯ ಸಮಸ್ತ ಶಾಪ ವಿಮೋಚನಾಯ, ಸರ್ವಭೂತ-ಪ್ರೇತ ಪಿಶಾಚ ಉಚ್ಚಾಟನಾಯ, ಸರ್ವ ಇಷ್ಟ ಸಿದ್ದಿಕರಾಯ, ಓಂ ನಮಃ ಶಿವಾಯ ಸ್ವಾಹಾಃ’ ಈ ಮಂತ್ರದಿಂದ 9 ಯಂತ್ರಗಳಿಗೂ ೧೦೮ ಸಲ ಅಭಿಮಂತ್ರಿಸಿ. ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ…
ದಕ್ಷಿಣಕನ್ನಡ : ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತು ಹಾಕಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಎಸ್ಐಟಿ ಅಧಿಕಾರಿಗಳು ಬುರುಡೆ ಪ್ರಕರಣವನ್ನು ಕೊನೆಗೂ ಭೇದಿಸಿದ್ದಾರೆ. ವಿಚಾರಣೆಯ ವೇಳೆ ಮಾಸ್ಕ್ ಮ್ಯಾನ್ ಚಿನ್ನಯ ಎಸ್ ಐ ಟಿ ಅಧಿಕಾರಿಗಳ ಮುಂದೆ ಎಲ್ಲಾ ಸತ್ಯವನ್ನು ಬಾಯಿಬಿಟ್ಟಿದ್ದಾನೆ. ಹೀಗಾಗಿ ಈ ಒಂದು ಬುರುಡೆ ಪ್ರಕರಣ ಶೀಘ್ರದಲ್ಲಿ ತಾರ್ಕಿಕ ಅಂತ್ಯಗೊಳ್ಳುವ ಸಾಧ್ಯತೆ ಇದೆ ಎನ್ನಲಾಗಿದೆ. ಹೌದು ಎಸ್ ಐ ಟಿ ಅಧಿಕಾರಿಗಳು ಕೊನೆಗೂ ಬುರುಡೆ ಪ್ರಕರಣವನ್ನು ಭೇದಿಸಿದ್ದಾರೆ ಸೌಜನ್ಯ ಮಾವ ವಿಠಲ ಗೌಡನಿಂದಲೇ ಚಿನ್ನಯ್ಯ ಕಥೆಯನ್ನು ಶುರು ಮಾಡಿದ್ದ. ವಿಚಾರಣೆಯ ವೇಳೆ ಚಿನ್ನ ಯ್ಯ ಎಲ್ಲಾ ಸತ್ಯವನ್ನು ಬಾಯಿಬಿಟ್ಟಿದ್ದಾನೆ. ಎರಡು ವರ್ಷಗಳ ಹಿಂದೆ ಚಿನ್ನಯ ಉಜಿರೆಗೆ ವಾಪಸ್ ಬಂದಿದ್ದ. ಉಜಿರೆಯ ಗ್ರಾಮ ಪಂಚಾಯಿತಿನಲ್ಲಿ ಕೆಲವು ತಿಂಗಳುಗಳ ಕಾಲ ಕೆಲಸ ಮಾಡಿದ್ದ. ಸೌಜನ್ಯ ಮಾವ ವಿಠಲ ಗೌಡನ ಆರೋಪಿ ಚಿನಯ್ಯ ಇದೇ ವೇಳೆ ಕಣ್ಣಿಗೆ ಬಿದ್ದಿದ್ದಾನೆ. ವಿಠಲ ಗೌಡನಿಗೆ ಚೆನ್ನಯ್ಯನ ಮೊದಲೇ ಪರಿಚಯವಿತ್ತು. ಕಾನೂನು ಪ್ರಕ್ರಿಯೆಗೆ ಒಳಪಟ್ಟ ಚಿನ್ನಯ್ಯ ಆರೋಪಿ ಚಿನಯ್ಯನನ್ನು…
ಬೆಂಗಳೂರು : ರಾಜ್ಯದಲ್ಲಿ ಸರ್ಕಾರಿ ನೌಕಾರಿ ಆಕಾಂಕ್ಷಿಗಳಿಗೆ ಇದೀಗ ರಾಜ್ಯ ಸರ್ಕಾರ ಸಿಹಿ ಸುದ್ದಿಯೊಂದನ್ನು ನೀಡಿದ್ದು, ಈ ಹಿಂದೆ ತಡೆಹಿಡಿಯಲಾಗಿದ್ದ ನೇಮಕಾತಿ ಪ್ರಕ್ರಿಯೆಗಳಿಗೆ ಮರುಚಾಲನೆ ನೀಡಲು ನಿರ್ಧರಿಸಿರುವ ಸರ್ಕಾರ, ಇದರೊಂದಿಗೆ ನೇರ ನೇಮಕಾತಿಯ ಗರಿಷ್ಠ ವಯೋಮಿತಿಯನ್ನು ಒಂದು ಬಾರಿಯ ಕ್ರಮವಾಗಿ ಎರಡು ವರ್ಷಗಳಷ್ಟು ಸಡಿಲಿಕೆ ಮಾಡಿ ಮಹತ್ವದ ಆದೇಶ ಹೊರಡಿಸಿದೆ. ನ್ಯಾಯಮೂರ್ತಿ ಎಚ್.ಎನ್ ನಾಗಮೋಹನ್ ದಾಸ್ ಅವರ ಆಯೋಗದಿಂದ ಪರಿಶಿಷ್ಟ ಜಾತಿಗಳಿಗೆ ಒಳ ಮೀಸಲಾತಿ ನೀಡಿ ಪರಿಷ್ಕರಿಸುವ ಹಿನ್ನೆಲೆಯಲ್ಲಿ, ಈ ಹಿಂದೆ 2024ರ ಅಕ್ಟೋಬರ್ 28ರಂದು ಹೊರಡಿಸಲಾಗಿದ್ದ ಆದೇಶದ ಪ್ರಕಾರ ಎಲ್ಲಾ ನೇಮಕಾತಿ ಪ್ರಕ್ರಿಯೆಗಳನ್ನು ತಡೆಹಿಡಿಯಲಾಗಿತ್ತು. ಇದೀಗ, ಪರಿಷ್ಕೃತ ಮೀಸಲಾತಿ ನೀತಿಯನ್ನು ಅಳವಡಿಸಿ, ಸ್ಥಗಿತಗೊಂಡಿದ್ದ ನೇಮಕಾತಿ ಪ್ರಕ್ರಿಯೆಗಳಿಗೆ ಶೀಘ್ರದಲ್ಲೇ ಮರುಚಾಲನೆ ನೀಡಲು ಸರ್ಕಾರ ನಿರ್ಧರಿಸಿದೆ. ವಯೋಮಿತಿ ಸಡಿಲಿಕೆಯ ವಿವರ ಸೆಪ್ಟೆಂಬರ್ 6ರಂದು ಹೊರಡಿಸಿದ ಸರ್ಕಾರದ ಆದೇಶದ ಪ್ರಕಾರ ರಾಜ್ಯ ಸಿವಿಲ್ ಸೇವೆಗಳ ಗ್ರೂಪ್-ಬಿ ಮತ್ತು ಗ್ರೂಪ್-ಸಿ ಹುದ್ದೆಗಳ ನೇರ ನೇಮಕಾತಿಯಲ್ಲಿ ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿಯಲ್ಲಿ ಎರಡು ವರ್ಷಗಳ ಸಡಿಲಿಕೆ…
ಮೈಸೂರು : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ ಹಿನ್ನೆಲೆಯಲ್ಲಿ ಈ ಬಾರಿ ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ ಅವರನ್ನು ದಸರಾ ಉದ್ಘಾಟನೆಗೆ ರಾಜ್ಯ ಸರ್ಕಾರದಿಂದ ಅಧಿಕೃತವಾಗಿ ಆಹ್ವಾನಿಸಲಾಗಿದೆ. ಈ ವಿಚಾರ ಇದೀಗ ರಾಜ್ಯದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದ್ದು, ಇದರ ಮಧ್ಯ ಮೈಸೂರು ಜಿಲ್ಲಾಆಡಳಿತ ದಸರಾ ವೀಕ್ಷಣೆಗೆ ಆನ್ಲೈನ್ ಅಲ್ಲಿ ಗೋಲ್ಡ್ ಕಾರ್ಡ್ ಬಿಡುಗಡೆ ಮಾಡಿದೆ. ಹೌದು ಆನ್ಲೈನಲ್ಲಿ ಇದೀಗ ಮೈಸೂರು ದಸರಾ ಗೋಲ್ಡ್ ಕಾರ್ಡ್ ಬಿಡುಗಡೆ ಮಾಡಲಾಗಿದ್ದು, ಮೈಸೂರು ಜಿಲ್ಲಾಡಳಿತದ ಅಧಿಕೃತ ವೆಬ್ಸೈಟ್ನಲ್ಲಿ ಟಿಕೆಟ್ ಬಿಡುಗಡೆ ಮಾಡಲಾಗಿದೆ. ದಸರಾ ಗೋಲ್ಡ್ ಕಾರ್ಡ್ ಖರೀದಿಗೆ ಅವಕಾಶ ಕಲ್ಪಿಸಲಾಗಿದ್ದು,ದಸರಾ ಗೋಲ್ಡ್ ಕಾರ್ಡಿಗೆ 6500 ನಿಗದಿ ಮಾಡಲಾಗಿದೆ. ಜಂಬೂಸವಾರಿ ಟಿಕೆಟ್ 3500, ಪಂಚಿನ ಕವಾಯತುಗೆ 1500 ನಿಗದಿ ಮಾಡಲಾಗಿದೆ. ಮೊದಲ ದಿನವೇ ಗೋಲ್ಡ್ ಕಾರ್ಡ್ ಖರೀದಿಗೆ ಉತ್ತಮ ರೆಸ್ಪಾನ್ಸ್ ಸಿಕ್ಕಿದೆ. ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ಜಂಬೂಸವಾರಿ ಹಾಗೂ ಪಂಜಿನ ಕವಾಯತು ಕಾರ್ಯಕ್ರಮಗಳ ವೀಕ್ಷಣೆಗೆ ಟಿಕೆಟ್ ಹಾಗೂ ‘ಗೋಲ್ಡ್ ಕಾರ್ಡ್’ಗಳ ಮಾರಾಟಕ್ಕೆ…
ಚಿಕ್ಕಮಗಳೂರು : ಚಿಕ್ಕಮಗಳೂರಲ್ಲಿ ಮತ್ತೊಂದು ಭೀಕರವಾದ ಅಪಘಾತ ಸಂಭವಿಸಿದ್ದು, ರಾಷ್ಟ್ರೀಯ ಹೆದ್ದಾರಿ 169 ರಲ್ಲಿ ನಿಯಂತ್ರಣ ತಪ್ಪಿ , ತುಂಗಾ ನದಿಗೆ ಕಾರೊಂದು ಉರುಳಿ ಬಿದ್ದಿದೆ. ಶೃಂಗೇರಿ ತಾಲೂಕಿನ ಗುಲಗಂಜಿ ಮನೆ ಗ್ರಾಮದ ಬಳಿ ಈ ಒಂದು ಘಟನೆ ನಡೆದಿದೆ. ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನ ಗುಲಗಂಜಿ ಮನೆ ಗ್ರಾಮದ ಬಳಿ ನಿಯಂತ್ರಣ ತಪ್ಪಿ ತುಂಗಾ ನದಿಗೆ ಕಾರು ಉರುಳಿ ಬಿದ್ದಿದೆ. ಪರಿಣಾಮ ಕಾರಿನಲ್ಲಿದ್ದನವರಿಗೆ ಗಂಭೀರವಾಗಿ ಗಾಯಗಳಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕಾರಲ್ಲಿದ್ದವರು, ದಾವಣಗೆರೆ ಮೂಲದ ಪ್ರವಾಸಿಗರು ಎಂದು ತಿಳಿದುಬಂದಿದೆ. ಅವರು ಶೃಂಗೇರಿ ಪ್ರವಾಸಕ್ಕೆ ಬಂದಿದ್ದರು ಎನ್ನಲಾಗಿದ್ದು, ಗಾಯಗೊಂಡ ನಾಲ್ವರು ಪ್ರವಾಸಿಗರಿಗೆ ಶೃಂಗೇರಿ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ಕುರಿತಂತೆ ಶೃಂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ದಕ್ಷಿಣಕನ್ನಡ : ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಸ್ಪೋಟಕ ಟ್ವಿಸ್ಟ್ ಸಿಕ್ಕಿದೆ. ಮಾಸ್ಕ್ ಮ್ಯಾನ್ ಚಿನ್ನಯ್ಯನಿಗೆ ಬುರುಡೆಯನ್ನು ತಂದುಕೊಟ್ಟಿದ್ದೇ ಸೌಜನ್ಯ ಮಾವ ಎಂಬುದಾಗಿ ತಿಳಿದು ಬಂದಿದೆ. ಹೌದು ಮಾಸ್ಕ್ ಮ್ಯಾನ್ ಚಿನ್ನಯ್ಯಗೆ ಬುರುಡೆ ತಂದು ಕೊಟ್ಟಿದ್ದೇ ಸೌಜನ್ಯ ಮಾವ ವಿಠಲ್ ಗೌಡ ಎಂಬುದಾಗಿ ಎಸ್‌ಐಟಿ ವಿಚಾರಣೆ ವೇಳೆಯಲ್ಲಿ ತಿಳಿದು ಬಂದಿದೆ.ಹೀಗಾಗಿ ಯಾವುದೇ ಕ್ಷಣದಲ್ಲಿ ಎಸ್‌ಐಟಿಯಿಂದ ವಿಠಲ್ ಗೌಡ ಅರೆಸ್ಟ್ ಆಗುವ ಸಾಧ್ಯತೆ ಇದೆ. ಅಂದಹಾಗೇ ಚಿನ್ನಯ್ಯ ಹಾಗೂ ವಿಠಲ್ ಗೌಡ ಜೊತೆಗೆ ಹಳೆಯ ಸ್ನೇಹ ಸಂಬಂಧವಿತ್ತಂತೆ. ನೇತ್ರಾವತಿ ನದಿ ತೀರದಲ್ಲಿ ಚಿಕ್ಕ ಹೋಟೆಲ್ ಅನ್ನು ವಿಠಲ್ ಗೌಡ ನಡೆಸುತ್ತಿದ್ದಾರೆ. ಇಂತಹ ವಿಠಲ್ ಗೌಡ ಅವರ ಅಂಗಡಿಯಲ್ಲೇ ಚಿನ್ನಯ್ಯ ತಂಗುತ್ತಿದ್ದರಂತೆ. ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶನಿವಾರ ಸಂಜೆ ಬಂಗ್ಲೆಗುಡ್ಡ ಅರಣ್ಯ ಪ್ರದೇಶದಲ್ಲಿ ಸ್ಥಳ ಮಹಜರು ಮಾಡಲಾಗಿದೆ. ವಿಶೇಷ ತನಿಖಾ ತಂಡದ ಪೊಲೀಸರು ಸೌಜನ್ಯಳ ಮಾವ ವಿಠಲ ಗೌಡ ಅವರನ್ನು ಧರ್ಮಸ್ಥಳ ನೇತ್ರಾವತಿ ಸ್ನಾನಘಟ್ಟ ಬಳಿ ಇರುವ ಬಂಗ್ಲೆಗುಡ್ಡಕ್ಕೆ ಕರೆದುಕೊಂಡು ಹೋಗಿ ಸ್ಥಳ ಮಹಜರು…
ಚಾಮರಾಜನಗರ : ಗಾಳೀಪುರ ಸಮೀಪದ ರಿಂಗ್ ರಸ್ತೆಯಲ್ಲಿ ಸಂಭವಿಸಿದ್ದ ಲಾರಿ, ಕಾರು ಹಾಗೂ ಮೊಪೆಡ್ ನಡುವಿನ ಸರಣಿ ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ ನಾಲ್ಕಕ್ಕೆ ಏರಿಕೆಯಾಗಿದೆ. ಮೊಪೆಡ್ ನಲ್ಲಿ ಹೋಗುತ್ತಿದ್ದ ನಾಲ್ವರ ಪೈಕಿ ಸ್ಥಳದಲ್ಲೇ ಮೆರಾನ್ ಎಂಬ ಬಾಲಕ ಸಾವನ್ನಪ್ಪಿದ್ದ. ಗಂಭೀರವಾಗಿ ಗಾಯಗೊಂಡಿದ್ದ ರೆಹಾನ್, ಆದಾನ್ ಪಾಷಾ, ಫೈಜಲ್ ಎಂಬ ಬಾಲಕರನ್ನು ಸಿಮ್ಸ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ಸಾಗಿಸಲಾಗಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿಗೆ ರವಾನಿಸಲಾಗಿತ್ತು. ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಮೂವರು ಸಾವನ್ನಪ್ಪಿದ್ದಾರೆ.ಈ ಕುರಿತು ಚಾಮರಾಜನಗರ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು : ಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಸಾಮಾನ್ಯ ಕೈದಿಯಂತೆ ತಮ್ಮ ಶಿಕ್ಷೆಯನ್ನು ಅನುಭವಿಸುತ್ತಿದ್ದಾರೆ. ಜೈಲು ಅಧಿಕಾರಿಗಳು ಅವರನ್ನು ಲೈಬ್ರರಿಯ ಕ್ಲರ್ಕ್ ಆಗಿ ನೇಮಿಸಿದ್ದು, ಪುಸ್ತಕಗಳನ್ನು ವಿತರಿಸುವುದು ಮತ್ತು ನೋಂದಣಿ ಮಾಡುವ ಕೆಲಸವನ್ನು ನಿರ್ವಹಿಸುತ್ತಿದ್ದಾರೆ. ಸದ್ಯಕ್ಕೆ ಪ್ರಜ್ವಲ್ ರೇವಣ್ಣ ಅವರು ಒಂದು ದಿನದ ಮಟ್ಟಿಗೆ ಕೆಲಸ ಮಾಡಿದ್ದು, ದಿನಗೂಲಿಯಾಗಿ 522 ರೂಪಾಯಿಗಳನ್ನು ಸಂಬಳವಾಗಿ ಪಡೆಯುತ್ತಿದ್ದಾರೆ. ಕೆಲಸಕ್ಕೆ ಹಾಜರಾಗದಿದ್ದರೆ ಸಂಬಳ ನೀಡಲಾಗುವುದಿಲ್ಲ. ನ್ಯಾಯಾಲಯದ ವಿಚಾರಣೆಗಾಗಿ ಆಗಾಗ ಬರಬೇಕಾಗಿರುವುದರಿಂದ ಮತ್ತು ವಕೀಲರೊಂದಿಗೆ ಇತರ ಪ್ರಕರಣಗಳ ಚರ್ಚೆಗಾಗಿ ಸಮಯ ಬೇಕಾಗಿರುವ ಕಾರಣ, ಅವರನ್ನು ಪೂರ್ಣ ಸಮಯದ ಕೆಲಸಕ್ಕೆ ನಿಯೋಜಿಸಿಲ್ಲ. ಪ್ರಜ್ವಲ್ ರೇವಣ್ಣ ಅವರ ಜೈಲು ಜೀವನವು ಸಾಮಾನ್ಯ ಕೈದಿಗಳಂತೆಯೇ ಇದ್ದು, ಕಾರಾಗೃಹದ ನಿಯಮಗಳನ್ನು ಪಾಲಿಸುತ್ತಿದ್ದಾರೆ. ಈ ಪ್ರಕರಣದಲ್ಲಿ ಅವರಿಗೆ ಜೀವಾವಧಿ ಶಿಕ್ಷೆಯಾಗಿದ್ದರೂ, ಜೈಲಿನಲ್ಲಿ ಕೆಲಸ ಮಾಡುವ ಮೂಲಕ ಸಮಯ ಕಳೆಯುತ್ತಿದ್ದಾರೆ ಎಂದು ಬಲ್ಲ ಮೂಲಗಳಿಂದ ತಿಳಿದುಬಂದಿದೆ.
ಹುಬ್ಬಳ್ಳಿ : ಗಣೇಶ ವಿಸರ್ಜನೆ ವೇಳೆ ರಾಜ್ಯದಲ್ಲಿ ಹಲವಡೆ ಅಹಿತಕರ ಘಟನೆ ನಡೆದಿದ್ದು ಇದೀಗ ಹುಬ್ಬಳ್ಳಿಯಲ್ಲಿ ಗಣೇಶ ವಿಸರ್ಜನೆಯ ವೇಳೆ ವ್ಯಕ್ತಿಗೆ ಚಾಕು ಇರಿಯಲಾಗಿದೆ. ಹುಬ್ಬಳ್ಳಿಯ ಕೊಪ್ಪೀಕರ ರಸ್ತೆಯಲ್ಲಿ ನಿನ್ನೆ ರಾತ್ರಿ ಒಂದು ಘಟನೆ ನಡೆದಿದ್ದು ಪ್ರತಾಪ್ ಅಲಿಯಾಸ್ ಚೇತನ ಗೌಡರ (32) ಗೆ ಚಾಕು ಇರಿಲಾಗಿದೆ. ಹುಬ್ಬಳ್ಳಿ ತಾಲೂಕಿನ ಬಿಡನಾಳ ಮಾರುತಿ ನಗರದ ನಿವಾಸಿ ಪ್ರತಾಪ್ ಗೌಡ ಎಂದು ತಿಳಿದು ಬಂದಿದ್ದು, ಸೋನಿಯಾ ಗಾಂಧಿನಗರದ ಶಿರಿ ಹಾಗೂ ಇನ್ನಿಬ್ಬರಿಂದ ಕೃತ್ಯ ಎಸಗಿರುವ ಆರೋಪ ಕೇಳಿ ಬಂದಿದೆ. ಗಣೇಶ ಮೆರವಣಿಗೆಯಲ್ಲಿ ಭಾಗಿಯಾಗಿದ್ದ ಪ್ರತಾಪ್ ಗೆ ಚಾಕು ಇರಿದಿದ್ದಾರೆ. ಮೂತ್ರ ವಿಸರ್ಜನೆಗೆ ಎಂದು ಹೋಗುತ್ತಿದ್ದಾಗ ಏಕಾಏಕಿ ಚಾಕು ಇರಿಯಲಾಗಿದೆ. ಟ್ರಾನ್ಸ್ಪೋರ್ಟ್ ಕಂಪನಿ ಒಂದರಲ್ಲಿ ಪ್ರತಾಪ್ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದ ಕಳೆದ ಒಂದು ತಿಂಗಳ ಹಿಂದೆ ಅಷ್ಟೇ ಪ್ರತಾಪ್ ಮದುವೆಯಾಗಿದ್ದಾನೆ. ಖಾಸಗಿ ಆಸ್ಪತ್ರೆಗೆ ದಾಖಲಿಸಿ ಪ್ರತಾಪ್ ಗೆ ಚಿಕಿತ್ಸೆ ನೀಡಲಾಗುತ್ತಿದೆ. ಆಸ್ಪತ್ರೆಗೆ ಹುಬ್ಬಳ್ಳಿ ಧಾರವಾಡ ಪೊಲೀಸ್ ಆಯುಕ್ತ ಶಶಿಕುಮಾರ್ ಭೇಟಿ ನೀಡಿದ್ದಾರೆ ಹುಬ್ಬಳ್ಳಿಯ…
ಚಿತ್ರದುರ್ಗ : ಆನ್‌ಲೈನ್ ಬೆಟ್ಟಿಂಗ್ ಹಾಗೂ ಮನಿ ಗೇಮಿಂಗ್ ಹಗರಣ ದಲ್ಲಿ ಬಂಧಿತರಾಗಿರುವ ಚಿತ್ರದುರ್ಗದ ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ (ಪಪ್ಪಿ) ಅವರಿಗೆ ಸೇರಿದ ಆಸ್ತಿಪಾಸ್ತಿಗಳ ಮೇಲೆ ಜಾರಿ ನಿರ್ದೇಶನಾಲಯ (ಇ.ಡಿ.) ನಿನ್ನೆ 3ನೇ ಸಲ ದಾಳಿ ಮಾಡಿದೆ. ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ನಗರ ಬ್ಯಾಂಕ್‌ಗಳಿಗೆ ಇ.ಡಿ. ಅಧಿಕಾರಿಗಳ ತಂಡ ಶನಿವಾರ ಬೆಳಗ್ಗೆ ಭೇಟಿ, ಪಪ್ಪಿ ಅವರಿಗೆ ಸೇರಿದ ಲಾಕರ್ ನಲ್ಲಿದ್ದವು ಎನ್ನಲಾದ ಅಮೂಲ್ಯ ವಸ್ತುಗಳಿದ್ದ 2 ಬಟ್ಟೆ ಚೀಲಗಳನ್ನು ತೆಗೆದು ಕೊಂಡು ಹೋಗಿದೆ. ಇದರಲ್ಲಿ ಚಿನ್ನ ಇತ್ತೋ ಅಥವಾ ದಾಖಲೆಗಳಿದ್ದವೋ ಎನ್ನುವುದು ಇನ್ನಷ್ಟೇ ಖಚಿತವಾಗಬೇಕಿದೆ. ಆದಾಗ್ಯೂ ಲಾಕರ್‌ಗಳಲ್ಲಿ ಚಿನ್ನ ಸಿಕ್ಕಿರುವುದನ್ನು ಬಲ್ಲ ಮೂಲಗಳು ಖಚಿತಪಡಿಸಿವೆ. ಎಲ್ಲಾ ಬ್ಯಾಂಕ್‌ಗಳ ಲಾಕರ್‌ಗಳಲ್ಲಿ ಪಪ್ಪಿಗೆ ಸೇರಿದ ಅಪಾರವಾದ ಚಿನ್ನಾಭರಣ ಚೀಲಗಳು ಪತ್ತೆಯಾಗಿವೆ ಎನ್ನಲಾಗಿದೆ. ಒಟ್ಟು 4 ಬ್ಯಾಂಕ್‌ಗಳಿಂದ ಇ.ಡಿ. ಅಧಿಕಾರಿಗಳು ಲಾಕರ್‌ನಲ್ಲಿ ದೊರೆತ ಚಿನ್ನದ ಆಭರಣಗಳನ್ನು ತಮ್ಮ ವಶಕ್ಕೆ ಪಡೆದುಕೊಂಡಿದ್ದಾರೆ. ಆದರೆ, ಎಷ್ಟು ಪ್ರಮಾಣ ಅದರ ಮೌಲ್ಯದ ಬಗ್ಗೆ ಯಾವುದೇ ಮಾಹಿತಿ ನೀಡಿಲ್ಲ. ಈಗಾಗಲೇ ಬೆಂಗಳೂರಿನ…













