Author: kannadanewsnow05

ಶಿವಮೊಗ್ಗ : ಶಿವಮೊಗ್ಗದಲ್ಲಿ ಗ್ರಾಮ ಪಂಚಾಯತಿ ಸದಸ್ಯನ ಮೇಲೆ ಹಲ್ಲೆ ನಡೆದಿದ್ದು, ಹಳೆ ದ್ವೇಷ ಹಿನ್ನೆಲೆ ಹಾಗೂ ಅಭಿವೃದ್ಧಿ ಕಂಡು ಹೊಟ್ಟೆ ಉರಿಗೆ ಈ ಒಂದು ಹಲ್ಲೆ ಮಾಡಲಾಗಿದೆ ಎನ್ನಲಾಗಿದೆ. ಶಿವಮೊಗ್ಗ ಹೊಸನಗರದ ನಿಟ್ಟೂರಿನಲ್ಲಿ ಈ ಒಂದು ಘಟನೆ ನಡೆದಿದೆ ಎಂದು ತಿಳಿದು ಬಂದಿದೆ. ಹಲ್ಲೆ ಮಾಡುವುದರ ದೃಶ್ಯ ಇದೀಗ ಸಿ ಸಿ ಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ ದೇವರಾಜ ಎನ್ನುವವರಿಂದ ನಾಗೋಡಿ  ವಿಶ್ವನಾಥ್ ಮೇಲೆ ಹಲ್ಲೆ ನಡೆದಿದೆ. ಗ್ರಾಮ ಪಂಚಾಯಿತಿ ಸದಸ್ಯ ನಾಗೋಡಿ ವಿಶ್ವನಾಥ್ ಗೆ ಇದೀಗ ಗಂಭೀರವಾದ ಗಾಯಗಳಾಗಿದ್ದು, ಗಾಯಾಳುವಿಗೆ ಹೊಸನಗರ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಹೊಸನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಚಿತ್ರದುರ್ಗ : ಇತ್ತೀಚಿಗೆ ಹೃದಯಾಘಾತ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದು, ಇದೀಗ ಯುವಕನೊಬ್ಬ ಗೆಳೆಯನ ಮದುವೆ ವೇಳೆ ಡಿಜೆ ಹಾಡಿಗೆ ಕುಣಿಯುತ್ತ ಕುಸಿದುಬಿದು ಹೃದಯಾಘಾತದಿಂದ ಸಾವನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಪಗಡಲಬಂಡಿ ಗ್ರಾಮದಲ್ಲಿ ನಡೆದಿದೆ. ಹೌದು ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಪಗಡಲಬಂಡಿ ಗ್ರಾಮದಲ್ಲಿ ಆದರ್ಶ್ (25) ಎನ್ನುವ ಯುವಕ ಹೃದಯಾಘಾತದಿಂದ ಸಾವನ್ನಪ್ಪಿದ್ದಾನೆ. ಪಗಡಲಬಂಡಿ ಗ್ರಾಮದ ಆದರ್ಶ ಗೆಳೆಯನ ಮದುವೆ ಮೆರವಣಿಗೆ ವೇಳೆ ಡಿಜಿ ಸೌಂಡ್ ಗೆ ಕುಣಿದಿದ್ದಾನೆ. ಈ ವೇಳೆ ಡ್ಯಾನ್ಸ್ ಕುಣಿಯುತ್ತಲೇ ಕುಸಿದು ಬಿದ್ದಿದ್ದಾನೆ. ಆದರ್ಶನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿತ್ತು ಪರಶುರಾಂಪುರ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಆದರ್ಶ ಸಾವನ್ನಪ್ಪಿದ್ದಾನೆ. ನವೆಂಬರ್ 14 ರಂದು ನಡೆದ ಘಟನೆಯ ವಿಡಿಯೋ ಇದೀಗ ವೈರಲ್ ಆಗಿದ್ದು ಪರಶುರಾಂಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು: ಕೆಲ ದಿನಗಳ ಹಿಂದೆ ಮುರುಡೇಶ್ವರಕ್ಕೆ ಶೈಕ್ಷಣಿಕ ಪ್ರವಾಸಕ್ಕೆ ತೆರಳಿದ್ದಂತ ಶಾಲಾ ಮಕ್ಕಳು ಸಮುದ್ರಪಾಲಾಗಿ ಹೋಗಿದ್ದರು. ನೀವು ಸಮುದ್ರ ದಂಡೆಗೆ ಪ್ರವಾಸಕ್ಕೆ ತೆರಳುತ್ತಿದ್ದರೇ ಅದಕ್ಕೂ ಮುನ್ನಾ ಈ ಕೆಳಗಿನ ವಿಷಯಗಳು ತಿಳಿದಿರಲಿ. ಅದೇನು ಅಂತ ಮುಂದೆ ಓದಿ. ಈ ಮಾಹಿತಿಯನ್ನು ಮಾಜಿ ಸಚಿವ ಎಸ್ ಸುರೇಶ್ ಕುಮಾರ್ ಅವರು ತಮ್ಮ ಫೇಸ್ ಬುಕ್ ಮುಖಪುಟದಲ್ಲಿ ಶೇರ್ ಮಾಡಿದ್ದಾರೆ. ಅದರಲ್ಲಿ ಶಿಕ್ಷಣ ಇಲಾಖೆಯ ಒಂದು ಭಾಗವಾದ ಡಯಟ್ ನ ಮಂಗಳೂರು ಜಿಲ್ಲೆಯ ನಿವೃತ್ತ ಪ್ರವಾಚಕರಾದ (Reader) ದಿವಾಕರ್ ಶೆಟ್ಟಿ ಎಂಬುವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ಒಂದು ಮಹತ್ವದ ಮಾಹಿತಿ ಇದು ಎಂದು ಹೇಳಿದ್ದಾರೆ. ಕರ್ನಾಟಕದ ಶಿಕ್ಷಣ ಇಲಾಖೆ ಎಲ್ಲಾ ಶಾಲೆಗಳಿಗೆ ಮತ್ತು ಕಾಲೇಜುಗಳಿಗೆ ಈ ಮಾಹಿತಿಯನ್ನು ಕಳಿಸಿ ಎಲ್ಲರಿಗೂ ಈ ಕುರಿತು ತಿಳುವಳಿಕೆ ಕೊಡುವುದು ಅತ್ಯಗತ್ಯ. ನಾನು ಈ ಮಾಹಿತಿಯನ್ನು ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳು ಹಾಗೂ ಶಿಕ್ಷಣ ಇಲಾಖೆಯ ಆಯುಕ್ತರ ಜೊತೆಯೂ ಹಂಚಿಕೊಂಡಿದ್ದೇನೆ ಎಂದಿದ್ದಾರೆ. ಸಮುದ್ರ ದಂಡೆಗೆ ಭೇಟಿ ನೀಡುವ ಎಲ್ಲರಿಗೂ ಈ…

Read More

ಆಂಧ್ರಪ್ರದೇಶ : ಸಾಮಾನ್ಯವಾಗಿ ಯಾರೇ ನಿದ್ದೆಗಣ್ಣಲ್ಲಿ ಇದ್ದರೂ ಕೂಡ ಗಂಟಲಿನಲ್ಲಿ ಹೋಗುವಂತ ಚಿಕ್ಕ ವಸ್ತುಗಳು ನುಂಗಬಹುದು. ಆದರೆ ಇಲ್ಲೊಬ್ಬ ವ್ಯಕ್ತಿ ನಿದ್ದೆ ಮಾಡುತ್ತಲೇ ಹಲ್ಲಿನ ಸೆಟ್ ಒಂದು ನುಂಗಿ ಶ್ವಾಸಕೋಶದಲ್ಲಿ ಸಿಲುಕಿರುವ ಆಘಾತಕಾರಿ ಘಟನೆ ಆಂಧ್ರಪ್ರದೇಶದ ಅಮರಾವತಿಯಲ್ಲಿ ನಡೆದಿದೆ. ಹೌದು ಅಮರಾವತಿಯ 52 ವರ್ಷದ ಈ ವ್ಯಕ್ತಿ ಕಳೆದ 7 ವರ್ಷಗಳಿಂದ ಹಲ್ಲುಸೆಟ್‌ ಬಳಸುತ್ತಿದ್ದರು. ಕಾಲಕ್ರಮೇಣ ಅದು ಸಡಿಲವಾಗಿದ್ದು, ಅವರು ನಿದ್ರಿಸುತ್ತಿದ್ದಾಗ ಶ್ವಾಸಕೋಶಗಳ ಒಳಗೆ ಹೋಗಿದೆ. ಇದರಿಂದಾಗಿ ಅವರಿಗೆ ಕೆಮ್ಮು ಶುರುವಾಗಿದ್ದು, ಚಿಕಿತ್ಸೆಗಾಗಿ ವಿಶಾಖಪಟ್ಟಣಂನ ಆಸ್ಪತ್ರೆಗೆ ಹೋಗಿದ್ದಾರೆ. ಈ ವೇಳೆ ಎಕ್ಸ್‌ರೇ ಹಾಗೂ ಸಿಟಿ ಸ್ಕ್ಯಾನ್‌ ನಡೆಸಿದ ವೈದ್ಯರು ಬ್ರಾಂಕೋಸ್ಕೋಪಿಯ ಮೂಲಕ ಹಲ್ಲು ಸೆಟ್‌ ಅನ್ನು ಹೊರತೆಗೆದಿದ್ದಾರೆ.

Read More

ಬೆಂಗಳೂರು : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕಳೆದ ಶುಕ್ರವಾರದಂದು ಹೈಕೋರ್ಟ್ ಕೊಲೆ ಆರೋಪಿಗಳಾದಂತಹ ನಟ ದರ್ಶನ್ ಪವಿತ್ರ ಗೌಡ ಸೇರಿದಂತೆ ಉಳಿದ ಎಲ್ಲಾ 7 ಆರೋಪಿಗಳಿಗೂ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿತು. ಈ ಹಿನ್ನೆಲೆಯಲ್ಲಿ ಇಂದು ಪರಪ್ಪನ ಅಗ್ರಹಾರ ಜೈಲಿನಿಂದ ಕೊಲೆ ಆರೋಪಿ A1 ಪವಿತ್ರ ಗೌಡ ರಿಲೀಸ್ ಆಗುವ ಸಾಧ್ಯತೆ ಇದೆ ಎನ್ನಲಾಗಿದೆ. ಇನ್ನು ತುಮಕೂರು ಹಾಗೂ ಕಲ್ಬುರ್ಗಿ ಕೇಂದ್ರ ಕಾರಾ ಗ್ರಹಗಳಲ್ಲಿರುವ ಇತರೆ ಆರೋಪಿಗಳು ಕೂಡ ಬಿಡುಗಡೆಯಾಗುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ. ಇದರ ಬೆನ್ನಲ್ಲೆ ಬಿಜಿಎಸ್ ಆಸ್ಪತ್ರೆಯಿಂದ ಇಂದು ಮಧ್ಯಾಹ್ನದ ಬಳಿಕ ದರ್ಶನ್ ಡಿಸ್ಚಾರ್ಜ್ ಆಗುವ ಸಾಧ್ಯತೆ ಇದೆ. ಕಳೆದ ಒಂದುವರೆ ತಿಂಗಳಿನಿಂದ ನಟ ದರ್ಶನ್ ಬಿಜಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಸರ್ಜರಿ ಮಾಡಿಸಿಕೊಳ್ಳದೆ ಆಸ್ಪತ್ರೆಯಿಂದ ದರ್ಶನ್ ಡಿಸ್ಚಾರ್ಜ್ ಆಗುವ ಸಾಧ್ಯತೆ ಇದೆ ಎನ್ನಲಾಗಿದೆ. ಮಧ್ಯಂತರ ಜಾಮಿನು ಪಡೆದುಕೊಂಡು ನಟ ದರ್ಶನ್ ಆಸ್ಪತ್ರೆಯಲ್ಲಿ ಟ್ರೀಟ್ಮೆಂಟ್ ಪಡೆದುಕೊಂಡಿದ್ದಾರೆ. ಫಿಜಿಯೋಥೆರಫಿ ಮಾಡಿಸಿ ಬೇಲ್…

Read More

ಶಿವಮೊಗ್ಗ : ಶಿವಮೊಗ್ಗದಲ್ಲಿ ಹಿಂದೂ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣಕ್ಕೆ ಸಂಬಂಧಿಸಿಂತೆ ಸಾಕ್ಷಿಗೆ ಯುವಕನೊಬ್ಬ ಬೆದರಿಕೆ ಹಾಕಿದ್ದಾನೆ ಎನ್ನಲಾಗಿದೆ. ಇದಕ್ಕೆ ಸಂಬಂಧಿಸಿದಂತೆ ಇದೀಗ ಬೆದರಿಕೆ ಹಾಕಿದ ಯುವಕನ ವಿರುದ್ಧ ಕೇಸ್‌ ದಾಖಲಾಗಿದೆ. ಕೋರ್ಟಿಗೆ ತೆರಳಿ ಸಾಕ್ಷಿ ಹೇಳದಂತೆ ಸಾಕ್ಷಿದಾರನಿಗೆ ಬೆದರಿಕೆ ಹಾಕಲಾಗಿದೆ. ಈ ಸಂಬಂಧ ಪೊಲೀಸರು ಇದೀಗ ಪ್ರಕರಣ ದಾಖಲಿಸಿದ್ದಾರೆ. ಶಿವಮೊಗ್ಗದ ತುಂಗಾನಗರ ಪೊಲೀಸ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ. ಹರ್ಷ ಹತ್ಯೆ ಪ್ರಕರಣದಲ್ಲಿ ಪೆಟ್ರೋಲ್ ಬಂಕ್ ಸಿಬ್ಬಂದಿ ಸಾಕ್ಷಿಯಾಗಿದ್ದ. ಡಿಸೆಂಬರ್ 12ರಂದು ಎನ್ಐಎ ನ್ಯಾಯಾಲಯದಲ್ಲಿ ಸಾಕ್ಷಿ ಹೇಳಿದ್ದ ಯುವಕ ಅನಂತರ ಸಾಕ್ಷಿ ಹೇಳದಂತೆ ಅಪರಿಚಿತ ವ್ಯಕ್ತಿಯಿಂದ ಬೆದರಿಕೆ ಹಾಕಲಾಗಿತ್ತು. ಮರುದಿನ ಕೋರ್ಟ್ ಸೂಚನೆಯ ಮೇರೆಗೆ ಪ್ರಕರಣ ದಾಖಲಾಗಿದೆ. ಶಿವಮೊಗ್ಗದ ಸೀಗೆಹಟ್ಟಿ ಬಳಿ ಎರಡು ವರ್ಷದ ಹಿಂದೆ ಹರ್ಷ ಹತ್ಯೆ ನಡೆದಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೆಟ್ರೋಲ್‌ ಬಂಕ್‌ ಉದ್ಯೋಗಿಯೊಬ್ಬನನ್ನು NIA ಸಾಕ್ಷಿಯಾಗಿ ಪರಿಗಣಿಸಿತ್ತು.ಈಗ ಆತನಿಗೆ ಅಪರಿಚಿತನೊಬ್ಬ ಬೆದರಿಕೆ ಒಡ್ಡಿರುವ ಆರೋಪ ಕೇಳಿ ಬಂದಿದೆ. ಹಿಂದೂ ಹರ್ಷ ಹತ್ಯೆಯಾದ ದಿನ…

Read More

ಬೆಂಗಳೂರು : ಕಳೆದ ಹಲವು ದಿನಗಳಿಂದ ಮಳೆರಾಯ ತಣ್ಣಗಾಗಿದ್ದ ಎನ್ನುವಷ್ಟರಲ್ಲಿ ಇದೀಗ ಮತ್ತೆ ವರ್ಣಾರ್ಭಟ ಆರಂಭವಾಗಲಿದ್ದು, ಮುಂದಿನ 48 ಗಂಟೆಗಳಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ 20ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಭಾರಿ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಸದ್ಯಕ್ಕೆ ರಾಜ್ಯಾದ್ಯಂತ ಚಳಿಯ ವಾತಾವರಣವಿದೆ.ಆದರೆ ಬೆಂಗಳೂರು ಸೇರಿ ರಾಜ್ಯದ 20ಕ್ಕೂ ಅಧಿಕ ಜಿಲ್ಲೆಗಳಲ್ಲಿ ಡಿಸೆಂಬರ್ 18ರಿಂದ ಮಳೆಯಾಗಲಿದೆ.ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮನ್ಸೂಚನೆ ನೀಡಿದೆ.

Read More

ಬೆಂಗಳೂರು : ರೌಡಿಶೀಟರ್ ನನ್ನು ಬಂಧಿಸಲು ತೆರಳಿದ್ದ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿ ಪರಾರಿಯಾಗುತ್ತಿದ್ದ ಸಂದರ್ಭದಲ್ಲಿ ಪೊಲೀಸರು ರೌಡಿಶೀಟರ್ ಕಾಲಿಗೆ ಫೈರಿಂಗ್ ಮಾಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಗಣಿ ತಾಲೂಕಿನ ಮಾಯಸಂದ್ರದಲ್ಲಿ ನಡೆದಿದೆ. ಹೌದು ಮಾಯಸಂದ್ರದ ಬಳಿ ರೌಡಿಶೀಟರ್ ಕಾಲಿಗೆ ಪೊಲೀಸರಿಂದ ಫೈರಿಂಗ್ ನಡೆದಿದೆ. ರೌಡಿಶೀಟರ್ ಮನೋಜ್ ಮೇಲೆ ಲೋಕಿ ಗ್ಯಾಂಗ್ ದಾಳಿ ಮಾಡಿತ್ತು. ಘಟನೆ ಬಳಿಕ ಲೋಕಿ ಮತ್ತು ಆತನ ಗ್ಯಾಂಗ್ ತಲೆಮೆರೆಸಿಕೊಂಡಿತ್ತು.ಇಂದು ಬಂಧಿಸಲು ಹೋಗಿದ್ದಾಗ ಪೊಲೀಸರ ಮೇಲೇನೆ ಲೋಕಿ ಹಲ್ಲೆಗೆ ಯತ್ನಿಸಿದ್ದಾನೆ. ಪೊಲೀಸರ ಮೇಲೆ ಹಲ್ಲೆ ಮಾಡಿ ಲೋಕೇಶ್ ಯತ್ನಿಸಿ ಪರಾರಿಯಾಗುವ ವೇಳೆ ಆತ್ಮ ರಕ್ಷಣೆಗಾಗಿ ಜಿಗಣಿ ಠಾಣೆ ಇನ್ಸ್ಪೆಕ್ಟರ್ ಮಂಜುನಾಥ್ ಫೈರಿಂಗ್ ಮಾಡಿದ್ದಾರೆ. ಗಾಯಗೊಂಡಿರುವ ರೌಡಿ ಶೀಟರ್ ಲೋಕಿಗೆ ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

Read More

ನವದೆಹಲಿ : ಖ್ಯಾತ ತಬಲಾ ವಾದಕ ಮತ್ತು ಉಸ್ತಾದ್ ಅಲ್ಲಾ ರಖಾ ಅವರ ಹಿರಿಯ ಪುತ್ರ ಉಸ್ತಾದ್ ಜಾಕೀರ್ ಹುಸೇನ್ ಪ್ರಸ್ತುತ ಅಮೆರಿಕದ ಸ್ಯಾನ್ ಫ್ರಾನ್ಸಿಸ್ಕೋ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಇದೀಗ ಅವರು ನಿಧನರಾಗಿದ್ದಾರೆ ಬಲ್ಲ ಮೂಲಗಳಿಂದ ಎಂದು ತಿಳಿದುಬಂದಿದೆ.ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಅವ್ರ ಆರೋಗ್ಯ ಸ್ಥಿತಿ ಚಿಂತಾಜನಕವಾಗಿತ್ತು. ಸಧ್ಯ ಜಾಕೀರ್ ಹುಸೇನ್ ಕೊನೆಯುಸಿರೆಳೆದಿದ್ದಾರೆ ಎಂದು ವರದಿಯಾಗಿದೆ. ಅಂದ್ಹಾಗೆ, ಜಾಕೀರ್ ಹುಸೇನ್ ಅವ್ರ ಹೆಸರನ್ನ ಸಂಗೀತ ಜಗತ್ತಿನಲ್ಲಿ ಗೌರವದಿಂದ ತೆಗೆದುಕೊಳ್ಳಲಾಗುತ್ತದೆ. 9 ಮಾರ್ಚ್ 1951 ರಂದು ಮುಂಬೈನಲ್ಲಿ ಜನಿಸಿದ ಉಸ್ತಾದ್ ಜಾಕಿರ್ ಹುಸೇನ್ ಅವರಿಗೆ 1988ರಲ್ಲಿ ಪದ್ಮಶ್ರೀ, 2002ರಲ್ಲಿ ಪದ್ಮಭೂಷಣ ಮತ್ತು 2023ರಲ್ಲಿ ಪದ್ಮವಿಭೂಷಣ ಪ್ರಶಸ್ತಿಯನ್ನ ನೀಡಲಾಯಿತು. ಜಾಕಿರ್ ಹುಸೇನ್ ಮೂರು ಗ್ರ್ಯಾಮಿ ಪ್ರಶಸ್ತಿಗಳನ್ನ ಸಹ ಪಡೆದಿದ್ದಾರೆ.

Read More

ತುಮಕೂರು : ಕೃಷಿ ಹೊಂಡದಲ್ಲಿ ಸೋಡಿಯಂ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಡ್ರೋನ್ ಪ್ರತಾಪ್ ನನ್ನು ಬಂಧಿಸಿದ್ದ ಪೊಲೀಸರು ಇದೀಗ ನಿನ್ನೆ ಡ್ರೋನ್ ಪ್ರತಾಪ್ ನ ಇಬ್ಬರು ಸ್ನೇಹಿತರನ್ನು ಬಂಧಿಸಿದ್ದಾರೆ. ಇದೀಗ ಡ್ರೋನ್ ಪ್ರತಾಪ್ ಸೇರಿದಂತೆ ಮೂವರ ಪೊಲೀಸ್ ಕಸ್ಟಡಿ ಇಂದು ಮುಕ್ತಾಯವಾಗಲಿದೆ. ಡ್ರೋನ್ ಪ್ರತಾಪ್, ಸ್ನೇಹಿತ ಪ್ರಜ್ವಲ್ ಹಾಗೂ ಕ್ಯಾಮರಾ ಮೆನ್ ವಿನಯ್ ಪೊಲೀಸ್ ಕಸ್ಟಡಿ ಇಂದು ಅಂತ್ಯವಾಗಲಿದೆ. ಬೆಳಿಗ್ಗೆ 11:30 ಕ್ಕೆ ತುಮಕೂರು ಜಿಲ್ಲೆಯ ಮಧುಗಿರಿ ಕೋರ್ಟ್ ಗೆ ಮೂವರು ಹಾಜರಾಗಲಿದ್ದಾರೆ. ಕೋರ್ಟಿಗೆ ಮಿಡಿಗೇಶಿ ಪೊಲೀಸರು ಮೂವರನ್ನು ಹಾಜರುಪಡಿಸಲಿದ್ದಾರೆ. ಕೃಷಿಹೊಂಡದಲ್ಲಿ ಡೋಂಡ್ರೋನ್ ಟ್ ಪ್ರತಾಪ್ ಸೋಡಿಯಂ ಎಸೆದು ಸ್ಪೋಟಿಸಿದ್ದ. ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಜನಕಲೊಟಿ ಬಳಿ ಈ ಒಂದು ಘಟನೆ ನಡೆದಿತ್ತು.ಈ ಸಂಬಂಧ ಬಿಡಿಗೇಶಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಡ್ರೋನ್ ಪ್ರತಾಪ್ ಬೆಂಗಳೂರಿನ ಅವೆನ್ಯೂ ರಸ್ತೆಯ ಅಂಗಡಿಯೊಂದರಲ್ಲಿ ಸೋಡಿಯಂ ಖರೀದಿಸಿದ್ದರು. ಈ ಹಿನ್ನೆಲೆಯಲ್ಲಿ ಸ್ಥಳ ಮಹಜರು ನಡೆಸಿದ ಪೊಲೀಸರು ಶನಿವಾರ ತಡರಾತ್ರಿ ಬೆಂಗಳೂರಿನಲ್ಲಿ ಇಬ್ಬರನ್ನು ಬಂಧಿಸಿದ್ದಾರೆ. ಇನ್ನೋರ್ವ…

Read More