Author: kannadanewsnow05

ಮಂಡ್ಯ : ನಾಲೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಎರಡೂ ಅಪರಿಚಿತ ಮೃತದೇಹಗಳು ಪತ್ತೆಯಾಗಿರುವ ಘಟನೆ ಮಾಚಹಳ್ಳಿ ಗೇಟ್ ಬಳಿ ಇರುವ ಹೇಮಾವತಿ ಕಾಲುವೆಯಲ್ಲಿ ಮೃತ ದೇಹಗಳು ಪತ್ತೆಯಾಗಿವೆ. ಸುಮಾರು 50 ರಿಂದ 55 ವರ್ಷದ ಇಬ್ಬರು ಪುರುಷರ ಮೃತ ದೇಹಗಳು ಪತ್ತೆಯಾಗಿವೆ. ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ ತಾಲ್ಲೂಕಿನ ಮಾಚಹಳ್ಳಿ ಗೇಟ್ ಬಳಿ ಇರುವ ಹೇಮಾವತಿ ಕಾಲುವೆಯಲ್ಲಿ ಪತ್ತೆಯಾಗಿವೆ. ಕಾಲುವೆಯಲ್ಲಿದ್ದ ಮೃತ ದೇಹಗಳನ್ನ ಮೇಲೆತ್ತಿದ ಅಗ್ನಿಶಾಮಕ ಸಿಬ್ಬಂದಿಗಳು. ಸುಮಾರು 50 -55 ವಯಸ್ಸಿನ ಪುರುಷರ ಎರಡಯ ಅಪರಿಚಿತ ಪುರುಷರ ಮೃತ ದೇಹಗಳು ಎನ್ನಲಾಗಿದೆ.ಮರಣೋತ್ತರ ಪರೀಕ್ಷೆಗೆ ತಾಲೂಕು ಸಾರ್ವಜನಿಕ ಆಸ್ಪತ್ರೆಗೆ ಮೃತದೇಹಗಳು ರವಾನಿಸಲಾಗಿದೆ. ಕೆ.ಆರ್.ಪೇಟೆ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು : ಮುಂಬರುವ ದಸರಾ ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರ ದಟ್ಟಣೆಯನ್ನು ನಿಭಾಯಿಸಲು ನೈಋತ್ಯ ರೈಲ್ವೆಯು ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು, ಬೆಳಗಾವಿ ಮತ್ತು ಮೈಸೂರು ನಡುವೆ ವಿಶೇಷ ರೈಲುಗಳನ್ನು ಓಡಿಸಲಿದೆ. ರೈಲುಗಳ ವಿವರ ಹೀಗಿದೆ: 1. ರೈಲು ಸಂಖ್ಯೆ 06271/06272 ಎಸ್ಎಂವಿಟಿ ಬೆಂಗಳೂರು–ಬೆಳಗಾವಿ–ಮೈಸೂರು ಎಕ್ಸ್ ಪ್ರೆಸ್ ವಿಶೇಷ ರೈಲು (1 ಟ್ರಿಪ್): * ರೈಲು ಸಂಖ್ಯೆ 06271 ಸೆಪ್ಟೆಂಬರ್ 30, 2025 ರಂದು ಬೆಂಗಳೂರಿನ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ನಿಂದ ಸಂಜೆ 7 ಗಂಟೆಗೆ ಹೊರಟು, ಮರುದಿನ ಬೆಳಿಗ್ಗೆ 7.30ಕ್ಕೆ ಬೆಳಗಾವಿ ತಲುಪಲಿದೆ. ಈ ರೈಲು ಚಿಕ್ಕಬಾಣಾವರ, ತುಮಕೂರು, ಅರಸೀಕೆರೆ, ಬೀರೂರು, ದಾವಣಗೆರೆ, ಹರಿಹರ, ಎಸ್ಎಂಎಂ ಹಾವೇರಿ, ಎಸ್ಎಸ್ಎಸ್ ಹುಬ್ಬಳ್ಳಿ, ಧಾರವಾಡ, ಅಳ್ನಾವರ, ಲೋಂಡಾ ಮತ್ತು ಖಾನಾಪುರ ನಿಲ್ದಾಣಗಳಲ್ಲಿ ನಿಲ್ಲಲಿದೆ. * ರೈಲು ಸಂಖ್ಯೆ 06272 ಅಕ್ಟೋಬರ್ 1, 2025 ರಂದು ಬೆಳಗಾವಿಯಿಂದ ಸಂಜೆ 5.30ಕ್ಕೆ ಹೊರಟು, ಮರುದಿನ ಬೆಳಿಗ್ಗೆ 7.45ಕ್ಕೆ ಮೈಸೂರಿಗೆ ತಲುಪಲಿದೆ. ಈ ರೈಲು ಮಾರ್ಗದಲ್ಲಿ…

Read More

ಬೆಂಗಳೂರು : ಬೆಂಗಳೂರಲ್ಲಿ ಬಿಎಂಟಿಸಿ ಸಿಬ್ಬಂದಿಗಳ ಮೇಲೆ ಹಲ್ಲೆ ಪ್ರಕರಣಗಳು ಹೆಚ್ಚುತ್ತಿವೆ. ಇದೀಗ ಮತ್ತೊಂದು ಹಲ್ಲೆ ಪ್ರಕರ ಣ ನಡೆದಿದ್ದು, ಬಿಎಂಟಿಸಿ ಸಿಬ್ಬಂದಿ ಮೇಲೆ ಬೈಕ್ ಸವಾರರಿಂದ ಹಲ್ಲೆ ನಡೆದಿರುವ ಘಟನೆ ಬನಶಂಕರಿಯ ಕದಿರಿನ ಹಳ್ಳಿಯಲ್ಲಿ ಈ ಒಂದು ಘಟನೆ ನಡೆದಿದೆ ಬಸ್ ಚಾಲಕ ಉಚಿರಪ್ಪ ಹಾಗೂ ಕಂಡಕ್ಟರ್ ಪ್ರಕಾಶ್ ಮೇಲೆ ಬೈಕ್ ಸವಾರ ಹಲ್ಲೆ ನಡೆಸಿದ್ದಾರೆ. ರಾಂಗ್ ಸೈಡ್ ನಲ್ಲಿ ಬಂದಿದ್ದನ್ನು ಪ್ರವೇಶಿಸಿದ್ದಕ್ಕೆ, ಎರಡು ಬೈಕ್ಗಳಲ್ಲಿ ಬಂದು ನಾಲ್ವರು ಬಿಎಂಟಿಸಿ ಬಸ್ ಚಾಲಕ ಹಾಗೂ ಕಂಡಕ್ಟರ್ ಮೇಲೆ ಬೈಕ್ ಸವಾರರು ಹಲ್ಲೆ ನಡೆಸಿದ್ದಾರೆ. ತಕ್ಷಣ ಚಾಲಕ 112 ಗೆ ಕರೆ ಮಾಡಲಾಗಿದ್ದು, ಬನಶಂಕರಿ ಪೊಲೀಸರು ಒಬ್ಬ ಆರೋಪಿಯನ್ನು ಅರೆಸ್ಟ್ ಮಾಡಿದ್ದಾರೆ.

Read More

ಮಂಡ್ಯ : ಈಗಾಗಲೇ ಧರ್ಮಸ್ಥಳದ ಕುರಿತು ಎಸ್ಐಟಿ ಅಧಿಕಾರಿಗಳು ಚೆನ್ನಯ್ಯ ಸೇರಿದಂತೆ ಹಲವರನ್ನು ಅತಿವರ ವಿಚಾರಣೆಗೆ ಒಳಪಡಿಸಿದ್ದು ಇದರ ಮಧ್ಯೆ ಈ ಒಂದು ಪ್ರಕರಣಕ್ಕೆ ಮತ್ತೊಂದು ಬಿಗ್ ಟ್ರಸ್ಟ್ ಸಿಕ್ಕಿದೆ. ಯೂಟ್ಯೂಬರ್ ಸಮೀರ್ ವಿಚಾರಣೆ ಬಳಿಕ ಇದೀಗ ಮಂಡ್ಯದ ಮತ್ತೊಬ್ಬ ಯುಟುಬರ್, ಧರ್ಮಸ್ಥಳದ ವಿರುದ್ಧ ಅಪಪ್ರಚಾರ ಮಾಡಲು ನನಗೂ ಸಹ ಹಣದ ಆಮಿಷ ಒಡ್ಡಿದ್ದರು ಎಂದು ಸ್ಪೋಟಕವಾದ ಹೇಳಿಕೆ ನೀಡಿದ್ದಾನೆ. ಹೌದು ಧರ್ಮಸ್ಥಳದ ವಿರುದ್ಧ ವಿಡಿಯೋ ಮಾಡಲು ನನಗೂ ಕೂಡ ಹಣದ ಆಮಿಷ ಒಡ್ಡಿದ್ದರೂ ಎಂದು ಮಂಡ್ಯದ ಯೂಟ್ಯೂಬರ್ ಗಂಭೀರವಾದ ಆರೋಪ ಮಾಡಿದ್ದು, ಗೋಲ್ಡನ್ ಕನ್ನಡಿಗ ಯೂಟ್ಯೂಬರ್ ಸುಮಂತ್ ಈ ಒಂದು ಹೇಳಿಕೆ ನೀಡಿದ್ದಾನೆ. ನನಗೆ ಅಭಿ ಅನ್ನೋ ಯುಟ್ಯೂಬರ್ ಹಣದ ಆಫರ್ ಕೊಟ್ಟಿದ್ದ. 5 ತಿಂಗಳ ಹಿಂದೆ ಬಟ್ಟೆ ಅಂಗಡಿಯಲ್ಲಿ ನನಗೆ ಅಭಿ ಸಿಕ್ಕಿದ್ದ. ಸಮೀರ್ ವಿಡಿಯೋ ಹೇಗೆ ವೈರಲ್ ಆಯ್ತು ಅಂತ ಆತನಿಗೆ ಕೇಳಿದ್ದೆ. ನಾವು ಕೊಡೋ ಕಂಟೆಂಟ್ನ ಯೂಟ್ಯೂಬ್ ನಲ್ಲಿ ಹಾಕಬೇಕು ಜೊತೆಗೆ ವಾಸ್ತವ್ಯಕ್ಕೂ ಸಹ ಜಾಗ…

Read More

ಚಿಕ್ಕಬಳ್ಳಾಪುರ : ಸಮಾಜದಲ್ಲಿ ಎಂತೆಂತಹ ಮಕ್ಕಳು ಇರ್ತಾರೆ ನೋಡಿ, ವೃದ್ಧ ತಾಯಿಗೆ ಬರುತ್ತಿದ್ದ ಪಿಂಚಣಿ ಹಣ ಹಂಚಿಕೆ ವಿಚಾರಕ್ಕೆ ಮೂವರು ಸಹೋದರರ ನಡುವೆ ಜಗಳವಾಗಿದ್ದು, ವಿಕೋಪಕ್ಕೆ ತಿರುಗಿ ಅಣ್ಣನ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರಿನಲ್ಲಿ ನಡೆದಿದೆ. ನರಸಿಂಹಮೂರ್ತಿ (45) ಕೊಲೆಯಾದ ಸಹೋದರ. ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲೂಕಿನ ಮೇಳ್ಯ ಗ್ರಾಮದಲ್ಲಿ ಘಟನೆ ನಡೆದಿದ್ದು, ಕೊಲೆ ಆರೋಪಿಗಳಾದ ರಾಮಾಂಜಿ (39) ಮತ್ತು ಗಂಗಾಧರಪ್ಪ (39) ಎಂಬವರನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಲಾಗಿದೆ ಎಂದು ಗೌರಿಬಿದನೂರು ಠಾಣೆ ಪೊಲೀಸರು ಮಾಹಿತಿ ನೀಡಿದ್ದಾರೆ. ಕೊಲೆಯಾದ ನರಸಿಂಹಮೂರ್ತಿ ಮತ್ತು ಆರೋಪಿಗಳಾದ ರಾಮಾಂಜಿ ಹಾಗೂ ಗಂಗಾಧರಪ್ಪ ಒಡಹುಟ್ಟಿದ ಸಹೋದರರು. ಇವರ ತಂದೆ ಹನುಮಂತರಾಯಪ್ಪ ಬೆಸ್ಕಾಂ ಉದ್ಯೋಗಿಯಾಗಿದ್ದರು. ಇವರ ಮರಣದ ನಂತರ ಪತ್ನಿಗೆ ಪಿಂಚಣಿ ಬರುತ್ತಿತ್ತು. ತಾಯಿ ಬಳಿ ಪಿಂಚಣಿ ಹಣ ಹಂಚಿಕೊಳ್ಳುವ ವಿಚಾರಕ್ಕೆ ನಡೆದ ಜಗಳವು ಕೊಲೆಗೆ ಕಾರಣವಾಗಿದೆ.

Read More

ಬೆಂಗಳೂರು: ಲೇಡೀಸ್​ ಪೇಯಿಂಗ್​ ಗೆಸ್ಟ್​ಗೆ (ಪಿ.ಜಿ) ನುಗ್ಗಿ ಯುವತಿಯೊಂದಿಗೆ ಅನುಚಿತ ವರ್ತನೆ ತೋರಿ, ಹಣ ಸುಲಿಗೆ ಮಾಡಿ ಪರಾರಿಯಾಗಿದ್ದ ಗಿಗ್ ಕಾರ್ಮಿಕನನ್ನು ನಗರದ ಸುದ್ದುಗುಂಟೆಪಾಳ್ಯ ಠಾಣೆ ಪೊಲೀಸರು ಬಂಧಿಸಿದ್ದಾರೆ. ನರೇಶ್ (30) ಬಂಧಿತ ಆರೋಪಿ. ಈತ ಆಂಧ್ರಪ್ರದೇಶದ ಮದನಪಲ್ಲಿ ಮೂಲದವನಾಗಿದ್ದು, ಕಳೆದ ಎರಡು ವರ್ಷಗಳಿಂದ ನಗರದ ಆವಲಹಳ್ಳಿಯಲ್ಲಿ ವಾಸವಾಗಿದ್ದ. ಆಗಸ್ಟ್ 29ರ ನಸುಕಿವ ಜಾವ 4.30ರ ಸುಮಾರಿಗೆ ಸುದ್ದುಗುಂಟೆಪಾಳ್ಯ ಬಳಿಯ ಗಂಗೋತ್ರಿ ಸರ್ಕಲ್ ಬಳಿಯಿರುವ ಪಿಜಿಯೊಂದಕ್ಕೆ ನುಗ್ಗಿದ ಆರೋಪಿ ಯುವತಿಯೊಂದಿಗೆ ಅನುಚಿತವಾಗಿ ವರ್ತಿಸಿದ್ದ. ಈ ಬಗ್ಗೆ ಸಿಸಿಟಿವಿ ದೃಶ್ಯಗಳನ್ನು ಆಧರಿಸಿ ಪ್ರಕರಣ ದಾಖಲಿಸಿಕೊಂಡು, ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಯು ಬೈಕ್ ಟ್ಯಾಕ್ಸಿ ಹಾಗೂ ಡೆಲಿವರಿ ಬಾಯ್​ ಆಗಿ ಕೆಲಸ ಮಾಡುತ್ತಿದ್ದ. ಬೈಕ್​ನಲ್ಲಿ ಹೋಗುವಾಗ ಪಿಜಿಯ ಬಾಗಿಲು ತೆಗೆದಿರುವುದನ್ನು ಕಂಡು ಒಳಗೆ ನುಗ್ಗಿದ್ದ. ಈ ವೇಳೆ, ಯುವತಿಯೊಂದಿಗೆ ಅನುಚಿತವಾಗಿ ವರ್ತಿಸಿ, ಆಕೆಯ ಬಳಿಯಿದ್ದ 2,500 ಸಾವಿರ ರೂಪಾಯಿ ಕಸಿದು ಪರಾರಿಯಾಗಿದ್ದ. ಈ ಸಂಬಂಧ ಯುವತಿ ನೀಡಿದ ದೂರು ಆಧರಿಸಿ ಆರೋಪಿಯನ್ನು…

Read More

ಕೊಪ್ಪಳ : ಜಾತಿ ನಿಂದನೆ ಮಹಿಳೆಯ ಫೋಟೋ ಸ್ಟೇಟಸ್ ಗೆ ಹಾಕುವ ಬೆದರಿಕೆ ಹಿನ್ನೆಲೆಯಲ್ಲಿ ಮನನೊಂದು ಮಹಿಳೆ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಯಲಬುರ್ಗಾ ತಾಲೂಕಿನ ಹಿರಿಯಕಲ್ ಗ್ರಾಮದಲ್ಲಿ ನಡೆದಿದೆ ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಹಿರೇವಡ್ರಕಲ್ ಗ್ರಾಮದಲ್ಲಿ ನಡೆದಿದೆ. ಹಿರೇವಡ್ರಕಲ್ ಗ್ರಾಮದಲ್ಲಿ ನೇಣು ಬಿಗಿದುಕೊಂಡು ಪಾರ್ವತಿ ಎನ್ನುವ ಮಹಿಳೆ ಆತ್ಮಹತ್ಯೆಗೆ ಶರಣಾಗಿದ್ದಾರೆ. ಯಮನೂರಪ್ಪ, ಮಧುರಾಜ್ ನಿರುಪಾದಿ ವಿರುದ್ಧ ಮಹಿಳೆ ಡೆತ್ ನೋಟ್ನಲ್ಲಿ ಹೆಸರು ಉಲ್ಲೇಖಿಸಿ ಇವರು ನನಗೆ ಬೆದರಿಕೆ ಹಾಕಿದ್ದಾರೆ ಎಂದು ಮಹಿಳೆಯ ಆರೋಪಿಸಿದ್ದಾರೆ. ಡೆತ್ ನೋಟಲ್ಲಿ ಮೂವರ ಹೆಸರು ಉಲ್ಲೇಖಿಸಿ ಪಾರ್ವತಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಆಗಸ್ಟ್ 31ರಂದು ಪಾನ್ ಶಾಪ್ ನಲ್ಲಿ ಯಮನೂರಪ್ಪ ಸಿಹಿ ತಿಂಡಿ ತಿಂದಿದ್ದ. ಇ ವೇಳೆ ತಿಂಡಿಗೆ ಹಣ ಕೇಳಿದ್ದಕ್ಕೆ ಯಮನೂರಪ್ಪ ಪಾರ್ವತಿಗೆ ಜಾತಿ ನಿಂದನೆ ಮಾಡಿದ್ದಾನೆ. ಬಳಿಕ ಪಾರ್ವತಿಯ ವಿಡಿಯೋ ಸ್ಟೇಟಸ್ ನಲ್ಲಿ ಹಾಕಿಕೊಳ್ಳುವುದಾಗಿ ಬೆದರಿಕೆ ಹಾಕಿದ್ದಾನೆ. ಇದರಿಂದ ಮನನೊಂದು ಡೆತ್ ನೋಟ್ ಬರೆದು ಪಾರ್ವತಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಘಟನೆ ಕುರಿತು ಬೇವೂರು ಪೊಲೀಸ್…

Read More

ಮಂಡ್ಯ : ಮಂಡ್ಯದಲ್ಲಿ ದಾರುಣ ಘಟನೆ ಒಂದು ನಡೆದಿದ್ದು, ಎಮ್ಮೆ ತೊಳೆಯುವ ವೇಳೆ ಬಾವಿಗೆ ಬಿದ್ದು ದಂಪತಿ ಸಾವನ್ನಪ್ಪಿರುವ ಘಟನೆ ಅರೆಬೊಪ್ಪನಹಳ್ಳಿ ಎಂಬ ಗ್ರಾಮದಲ್ಲಿ ನಡೆದಿದೆ. ಮಂಡ್ಯ ಜಿಲ್ಲೆ ಕೆ.ಆರ್‌ಪೇಟೆ ತಾಲೂಕಿನ ಗ್ರಾಮದಲ್ಲಿ ಎಮ್ಮೆ ತೊಳೆಯಲು ಹೋದಾಗ ವಸಂತಮ್ಮ(65) ಹಾಗು ಕಾಳೇಗೌಡ(70) ಬಾವಿಗೆ ಬಿದ್ದು ಸಾವನ್ನಪ್ಪಿರುವ ಮೃತ ದುರ್ದೈವಿಗಳು ಎಂದು ತಿಳಿದುಬಂದಿದೆ. ಎಮ್ಮೆ ತೊಳೆಯಲು ಹೋಗಿದ್ದ ವೇಳೆ ತೆರದ ಬಾವಿಗೆ ಪತ್ನಿಯನ್ನ ರಕ್ಷಿಸಲು ಹೋದ ಪತಿ ಕೂಡ ಸಾವನ್ನಪ್ಪಿದ್ದಾರೆ. ಕೆ.ಆರ್.ಪೇಟೆ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Read More

ಬೆಂಗಳೂರು : ಈಗಾಗಲೇ ಧರ್ಮಸ್ಥಳದಲ್ಲಿ ಶವ ಹೂತು ಹಾಕಿರುವ ಕುರಿತು SIT ಅಧಿಕಾರಿಗಳು ಚಿನ್ನಯನನ್ನು ವಶಕ್ಕೆ ಪಡೆದು ತನಿಖೆ ಮುಂದುವರಿಸಿದ್ದಾರೆ ಇದರ ಮಧ್ಯ ಸೌಜನ್ಯ ಪ್ರಕರಣದ ಕುರಿತು ಎಸ್‌ಐಟಿ ಅಧಿಕಾರಿಗಳು ಧರ್ಮಸ್ಥಳ ಗ್ರಾಮ ಪ್ರಕರಣದ ತನಿಖೆ ನಡೆಸುತ್ತಿದ್ದು, ಸೌಜನ್ಯ ಪ್ರಕರಣದ ಮರು ತನಿಖೆ ಎನ್ನಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಹೇಳಿದರು. ಸೌಜನ್ಯ ಪ್ರಕರಣದಲ್ಲಿ ಆರೋಪ ಮುಕ್ತರಾಗಿರುವ ಉದಯ ಕುಮಾ‌ರ್ ಜೈನ್‌ ಅವರನ್ನು ಎಸ್‌ಐಟಿ ಅಧಿ ಕಾರಿಗಳು ವಿಚಾರಣೆ ನಡೆಸಿರುವ ಕುರಿತು ಪ್ರತಿಕ್ರಿಯಿಸಿದ ಸಚಿವರು, ಅಧಿಕಾರಿಗಳು ಯಾವ ಆಧಾರದಲ್ಲಿ ವಿಚಾರಣೆ ನಡೆಸಿ ದ್ದಾರೋ ಗೊತ್ತಿಲ್ಲ. ಅವರಿಗೆ ಸಿಕ್ಕಿರುವ ಮಾಹಿತಿ ಏನು? ಏನಾದರೂ ಮಾಹಿತಿ ಸಿಕ್ಕಿದೆಯೇ ಎಂಬ ಮಾಹಿತಿ ಇಲ್ಲ. ತನಿಖೆ ಸಂದರ್ಭದಲ್ಲಿ ಬೇಕಾದಷ್ಟು ವಿಚಾರ ಕಲೆ ಹಾಕಿರುತ್ತಾರೆ. ಎಸ್‌ಐಟಿಗೆ ಮಾಹಿತಿ ಕೊಡುವವರು ಏನೋ ಮಾಹಿತಿ ನೀಡಿರಬಹುದು. ಅದಕ್ಕಾಗಿ ಉದಯ್ ಜೈನ್‌ರನ್ನು ಕರೆಸಿರಬಹುದು ಎಂದರು. ಟಮನ್‌ಸ್ ಆಫ್ ರೆಫರೆನ್ಸ್ ನಲ್ಲಿ ಇಲ್ಲದಿದ್ದರೂ ಲಿಂಕ್ ಇರು ತ್ತಲ್ವ? ಲಿಂಕ್‌ಗಳ ಪರಿಶೀಲನೆ ಮಾಡಬೇಕಾ…

Read More

ಬೆಂಗಳೂರು : ಬೆಂಗಳೂರಿನಲ್ಲಿ ಇತ್ತೀಚಿಗೆ ರೋಡರೇಜ್ ಪ್ರಕರಣಗಳು ಹೆಚ್ಚುತ್ತಿದ್ದು, ದಾರಿ ಬಿಡಲಿಲ್ಲ ಎಂದು ಬೈಕ್ ಸವಾರರೊಬ್ಬ ಪುಂಡಾಟ ಮೆರೆದಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ನಡುರಸ್ತೆಯಲ್ಲಿಯೇ ಡ್ರ್ಯಾಗರ್ ಹಿಡಿದು ಬೈಕ್ ಸವಾರ ಪುಂಡಾಟ ಮೆರೆದಿದ್ದಾನೆ. ಗೂಡ್ಸ್ ವಾಹನ ಚಾಲಕನ ಮೇಲೆ ಬೈಕ್ ಸವಾರ ದರ್ಪ ತೋರಿದ್ದಾನೆ. ಗಲಾಟೆ ವೇಳೆ ಗೂಡ್ಸ್ ವಾಹನದ ಗ್ಲಾಸ್ ಒಡೆದು ಪುಡಿ ರೌಡಿ ದಾಂದಲೆ ಮಾಡಿದ್ದಾನೆ. ಬೆಂಗಳೂರಿನ ಲಿಂಗರಾಜಪುರ ಕೆಳಗೆ ನಿನ್ನೆ ಸಂಜೆ ಒಂದು ಗಲಾಟೆ ನಡೆದಿದೆ.

Read More