Subscribe to Updates
Get the latest creative news from FooBar about art, design and business.
Author: kannadanewsnow05
ತುಮಕೂರು : ರಾಜ್ಯ ಕಾಂಗ್ರೆಸ್ ಸರ್ಕಾರ 5 ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ಮಾಡಿದ್ದು ಅದರಲ್ಲಿ ಮಹಿಳೆಯರಿಗೆ ಎಂದೆ ಗೃಹಲಕ್ಷ್ಮಿ ಹಾಗೂ ಶಕ್ತಿ ಯೋಜನೆ ಎಂಬ ಎರಡು ಯೋಜನೆಗಳು ಬಹಳ ಪ್ರಮುಖ ಯೋಜನೆಗಳಾಗಿವೆ. ಇದೀಗ ಶಕ್ತಿ ಯೋಜನೆಯಲ್ಲಿ ನಿನ್ನೆ ತಾನೇ 500 ಕೋಟಿ ಮಹಿಳೆಯರು ಉಚಿತ ಬಸ್ ಪ್ರಯಾಣ ಯೋಜನೆ ಪಡೆದಿದ್ದಾರೆ. ಸಿಎಂ ಸಿದ್ದರಾಮಯ್ಯ ಸ್ವತಹ ಬಸ್ ನಲ್ಲಿ ನಿಂತು ಟಿಕೆಟ್ ನೀಡಿದ್ದಾರೆ. ಇದೀಗ ತುಮಕೂರಲ್ಲಿ ಶಕ್ತಿ ಯೋಜನೆಯ ಪರಿಣಾಮದಿಂದಾಗಿ ಬಸ್ನಲ್ಲಿ ರಶ್ ಹೆಚ್ಚಾಗಿ ಮಹಿಳೆಯರಗಳು ಉಸಿರು ಕಟ್ಟಿ ಕಾಪಾಡಿ ಕಾಪಾಡಿ ಎಂದು ಕೂಗಿ ಕೊಂಡಿರುವ ಘಟನೆ ನಡೆದಿದೆ. ಮಹಿಳಾ ಪ್ರಯಾಣಿಕರಿಗಾಗಿ ಸರ್ಕಾರ ನೀಡಿರುವ ಫ್ರೀ ಬಸ್ ಯೋಜನೆ ಹಲವು ಫಜೀತಿ ಸೃಷ್ಟಿ ಮಾಡುತ್ತಿದೆ. ಮೈಸೂರಿನಿಂದ ತುಮಕೂರಿಗೆ ಸಂಚರಿಸುತ್ತಿದ್ದ ಬಸ್ನಲ್ಲಿ ಮಹಿಳೆಯೊಬ್ಬರು ಉಸಿರುಗಟ್ಟಿ ಕಿರುಚಾಡಿದ ಘಟನೆ ತುಮಕೂರು ಜಿಲ್ಲೆ ಕುಣಿಗಲ್ ಪಟ್ಟಣದಲ್ಲಿ ನಡೆದಿದೆ. ಅತಿಯಾದ ಜನಸಂದಣಿಯಲ್ಲಿ ಬಸ್ನೊಳಗೆ ಉಂಟಾದ ತೀವ್ರ ನೂಕಾಟ-ತಳ್ಳಾಟದಿಂದ ಮಹಿಳೆಯೊಬ್ಬರಿಗೆ ಉಸಿರಾಡಲು ತೀವ್ರ ತೊಂದರೆ ಉಂಟಾಗಿದೆ. ನನ್ನನ್ನು ಕಾಪಾಡಿ, ಬಸ್ಸಿನಿಂದ…
ಬೆಂಗಳೂರು : ಬೆಂಗಳೂರಲ್ಲಿ 4000 ಲಂಚ ಸ್ವೀಕರಿಸುತ್ತಿದ್ದ ವೇಳೆ ರೆಡ್ ಹ್ಯಾಂಡ್ ಆಗಿ ಆಹಾರ ನಿರೀಕ್ಷಕನೊಬ್ಬ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದ FSSAI ಕಚೇರಿಯಲ್ಲಿ ನಡೆದಿದೆ. ಭಾರತೀಯ ಆಹಾರ ಸುರಕ್ಷತಾ ಮತ್ತು ಗುಣಮಟ್ಟ ಪ್ರಾಧಿಕಾರ (FSSAI)ದಲ್ಲಿ ಕೆಲಸ ನಿರ್ವಹಿಸುತ್ತಿದ್ದ ಲೆಕ್ಕ ನಿರೀಕ್ಷಕ ನಾಗೇಶ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾನೆ. ಅಂಗಡಿಗೆ ಲೈಸೆನ್ಸ್ ನೀಡಲು 5,000 ಲಂಚ ನೀಡುವಂತೆ ಬೇಡಿಕೆ ಇಟ್ಟಿದ್ದ. ನಾಗೇಶ್ ಮಧ್ಯವರ್ತಿ ನಿರಂಜನ್ ಮೂಲಕ 4,000 ಲಂಚ ಸ್ವೀಕರಿಸಿದ್ದಾನೆ. ನೆಲಮಂಗಲದ FSSAI ಉಪಕಚೇರಿಯಲ್ಲಿ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ರೆಡ್ ಹ್ಯಾಂಡ್ ಆಗಿ ಬಲೆಗೆ ಬಿದ್ದಿದ್ದಾನೆ. ಆಹಾರ ನಿರೀಕ್ಷಕ ನಾಗೇಶ್ ಮತ್ತು ಮಧ್ಯವರ್ತಿ ನಿರಂಜನನ್ನು ಇದೀಗ ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಲೋಕಾಯುಕ್ತ ಡಿವೈಎಸ್ಪಿ ನೇತೃತ್ವದಲ್ಲಿ ಈ ಒಂದು ಕಾರ್ಯಾಚರಣೆ ನಡೆದಿದೆ. ನೆಲಮಂಗಲದ ಎಫ್ ಎಸ್ ಎಸ್ ಎ ಐ ಉಪಕಚೇರಿಯಲ್ಲಿ ದಾಖಲೆಗಳನ್ನು ಸಹ ಲೋಕಾಯುಕ್ತ ಅಧಿಕಾರಿಗಳು ಪರಿಶೀಲನೆ ನಡೆಸಿದರು.
ಬೆಂಗಳೂರು : ಬೆಂಗಳೂರಲ್ಲಿ ಮೈಸೂರು ರಸ್ತೆಯಲ್ಲಿರುವ ಗಾಳಿ ಆಂಜನೇಯ ದೇವಾಲಯವನ್ನು ಮುಜರಾಯಿ ಇಲಾಖೆ ತನ್ನ ಸುಪರ್ದಿಗೆ ಪಡೆದ ಹಿನ್ನೆಲೆಯಲ್ಲಿಇತ್ತೀಚಿಗೆ ದೇವಾಲಯದ ಆಡಳಿತ ಮಂಡಳಿ ಸರ್ಕಾರದ ಕ್ರಮ ಪ್ರಶ್ನಿಸಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿತ್ತು. ಇಂದು ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ರಾಜ್ಯ ಸರ್ಕಾರದ ಕ್ರಮಕ್ಕೆ ತಡೆಯಾಜ್ಞೆ ನೀಡಲು ನಕಾರ ವ್ಯಕ್ತಪಡಿಸಿದೆ. ಗಾಳಿ ಆಂಜನೇಯ ದೇವಾಲಯದಲ್ಲಿ ಹಣ ದುರುಪಯೋಗ ಆರೋಪವಿದೆ ಈ ನೆಲೆಯಲ್ಲಿ ಸರ್ಕಾರದ ಕ್ರಮ ಮೇಲ್ನೋಟಕ್ಕೆ ತಪ್ಪು ಎನ್ನಲಾಗುವುದಿಲ್ಲ. ಹಾಗಾಗಿ ರಾಜ್ಯ ಸರ್ಕಾರದ ಕ್ರಮಕ್ಕೆ ತಡೆಯಾಜ್ಞೆ ನೀಡಲು ಹೈಕೋರ್ಟ್ ಇದೀಗ ನಕಾರ ವ್ಯಕ್ತಪಡಿಸಿದೆ. ಗಾಳಿ ಆಂಜನೇಯ ದೇವಾಲಯದಲ್ಲಿ ಹಣ ದುರುಪಯೋಗದ ಆರೋಪವಿದೆ. ಹೀಗಾಗಿ ಸರ್ಕಾರದ ಕ್ರಮ ಮೇಲ್ನೋಟಕ್ಕೆ ತಪ್ಪೆನ್ನಲಾಗುವುದಿಲ್ಲ ಎಂದು ನ್ಯಾಯಮೂರ್ತಿ ಸುನೀಲ್ ದತ್ ಯಾದವ್ ಅವರಿದ್ದ ಹೈಕೋರ್ಟ್ ಪೀಠ ಆದೇಶ ಹೊರಡಿಸಿದೆ. ಗಾಳಿ ಆಂಜನೇಯಸ್ವಾಮಿ ದೇವಾಲಯದ ಆಡಳಿತವನ್ನು ಸರ್ಕಾರ ತನ್ನ ಅಧೀನಕ್ಕೆ ಪಡೆದಿದ್ದು, ಧಾರ್ಮಿಕ ದತ್ತಿ ಇಲಾಖೆಯ ಅಧಿಕಾರಿಗಳು ಇನ್ಮುಂದೆ ದೇವಾಲಯದ ಉಸ್ತುವಾರಿಯ ನಡೆಸಿಕೊಂಡು ಹೋಗಲಿದೆ. ದೇವಾಲಯದ ಆಡಳಿತ ಮಂಡಳಿಗೆ…
ಬೆಂಗಳೂರು : ಬೆಂಗಳೂರಲ್ಲಿ ಮತ್ತೊಂದು ಕೊಲೆ ನಡೆದಿದ್ದು, ಆನೇಕಲ್ ತಾಲ್ಲೂಕಿನ ಹೆಬ್ಬಗೋಡಿ ಪೊಲೀಸ್ ಠಾಣೆ ವ್ಯಾಪ್ತಿಯ ಬೊಮ್ಮಸಂದ್ರದಲ್ಲಿ ಆಟೊ ಚಾಲಕನನ್ನು ಸೋಮವಾರ ರಾತ್ರಿ ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದೆ. ಜಿಗಣಿ ಸಮೀಪದ ಹಿನ್ನಕ್ಕಿಯಲ್ಲಿ ವಾಸವಾಗಿದ್ದ ಮೈಸೂರು ಜಿಲ್ಲೆ ತಲಕಾಡು ಮೂಲದ ದರ್ಶನ್ (28) ಮೃತ ಆಟೊ ಚಾಲಕ ಎಂದು ತಿಳಿದುಬಂದಿದೆ. ಕೊಲೆಯಾದ ದರ್ಶನ್ ತನ್ನ ಅಕ್ಕ, ಭಾವನೊಂದಿಗೆ ವಾಸವಾಗಿದ್ದ. ಸೋಮವಾರ ರಾತ್ರಿ ಭಾವವನ್ನು ಕೆಲಸಕ್ಕೆ ಬಿಟ್ಟು ಬೊಮ್ಮಸಂದ್ರ ಬಳಿ ಬಂದಾಗ ತಂಡವೊಂದು ದಾಳಿ ನಡೆಸಿ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾರೆ. ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ.ಡಿಸಿಪಿ ಸಾರಾ ಫಾತೀಮಾ, ಎಲೆಕ್ಟ್ರಾನಿಕ್ ಸಿಟಿ ಎಸಿಪಿ ಸತೀಶ್, ಹೆಬ್ಬಗೋಡಿ ಇನ್ಸ್ಪೆಕ್ಟರ್ ಸೋಮಶೇಖರ್ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಆರೋಪಿಗಳ ಬಂಧನಕ್ಕೆ ಮೂರು ತಂಡಗಳನ್ನು ರಚನೆ ಮಾಡಲಾಗಿದೆ. ಶ್ವಾನದಳ ಮತ್ತು ವಿಧಿವಿಜ್ಞಾನ ತಜ್ಞರು ಭೇಟಿ ನೀಡಿ ಪರಿಶೀಲಿಸಿದರು.
ಚಿಕ್ಕಬಳ್ಳಾಪುರ : ಮುಂಬೈನ ಎನ್ಕೌಂಟರ್ ಸ್ಪೆಷಲಿಸ್ಟ್ ದಯಾನಾಯಕ್ ಹೆಸರಿನಲ್ಲಿ ಲಕ್ಷಾಂತರ ರೂಪಾಯಿ ವಂಚನೆ ಎಸಗಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. ಚಿಕ್ಕಬಳ್ಳಾಪುರದ ಬಿಕೆ ರಾಮಚಂದ್ರಪ್ಪ ದಂಪತಿಗಳಿಗೆ 12, 63, 000 ವಂಚನೆ ಎಸಗಲಾಗಿದೆ. ಬಿಕೆ ರಾಮಚಂದ್ರಪ್ಪ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ನಿವೃತ್ತ ಅಧಿಕಾರಿಯಾಗಿದ್ದಾರೆ. ಮನಿ ಲ್ಯಾಂಡ್ ರಿಂಗ್ ಕಾಯ್ದೆಯ ಅಡಿ ಬಂಧಿಸುವುದಾಗಿ ಹೆದರಿಸಿ ಲಕ್ಷಾಂತರ ರೂಪಾಯಿ ವಂಚನೆ ಎಸಗಿದ್ದಾರೆ. ದಯಾ ನಾಯಕರಂತೆ ವಿಡಿಯೋ ಕಾಲ್ ನಲ್ಲಿ ನಟಿಸಿ ವಂಚಕರಿಂದ ಬೆದರಿಕೆ ಹಾಕಿದ್ದು, ಮುಂಬೈ ಕೋಬ್ಲಾ ಪೊಲೀಸ್ ಠಾಣೆಯಿಂದ ಕರೆ ಮಾಡಿದ್ದೇವೆ ಎಂದು ದಂಪತಿಗೆ ಬೆದರಿಕೆ ಹಾಕಿದ್ದಾರೆ. ವಂಚಕರಿಗೆ ಬೆದರಿ ಬ್ಯಾಂಕ್ ನಲ್ಲಿದ್ದ ಚಿನ್ನಾಭರಣ ಇಟ್ಟು ದಂಪತಿಗಳು ಹಣ ಪಡೆದಿದ್ದಾರೆ. ಚಿನ್ನಾಭರಣದ ಹಣವನ್ನು ವಂಚಕರ ಬ್ಯಾಂಕ್ ಖಾತೆಗೆ ಹಾಕಿದ್ದಾರೆ.ಈ ಕುರಿತು ಚಿಕ್ಕಬಳ್ಳಾಪುರ ಸೈಬರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು : ಎಸಿಸಿ ಒಬಿಸಿ ರಾಷ್ಟ್ರೀಯ ಸಲಹಾ ಸಮಿತಿ ಸಭೆಯ ವಿಚಾರವಾಗಿ ಹಿಂದುಳಿದ ವರ್ಗಗಳಿಗೆ ಅನ್ಯಾಯ ಆಗಿರುವುದಕ್ಕೆ ಕಾಂಗ್ರೆಸ್ ಪಕ್ಷವೇ ಹೊಣೆಯಾಗಿದೆ. ಅಕಸ್ಮಾತ್ ಪರಿಶಿಷ್ಟ ರ ಬಗ್ಗೆ ಕಾಳಜಿ ಇದ್ದರೆ ಕಾಂಗ್ರೆಸ್ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಪ್ರಧಾನಿ ಅಭ್ಯರ್ಥಿಯನ್ನಾಗಿ ಘೋಷಿಸಲಿ ಎಂದು ಬೆಂಗಳೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಸವಾಲು ಹಾಕಿದರು. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಹಿಂದುಳಿದ ವರ್ಗಗಳ ಚಾಂಪಿಯನ್ ಅನ್ನುವ ಭ್ರಮೆಯಲ್ಲಿ ಇದ್ದಾರೆ. ಹಿಂದುಳಿದ ವರ್ಗಕ್ಕೆ ಸೇರಿದ ಪ್ರಧಾನಿ ಮೋದಿ ದೇಶವನ್ನು ಮುನ್ನಡೆಸುತ್ತಿದ್ದಾರೆ. ಪ್ರಧಾನಿ ಮೋದಿ ಅವರು ಸಿದ್ದರಾಮಯ್ಯ ರೀತಿ ಅದೃಷ್ಟ ಲಾಟರಿ ಸಿಎಂ ಆಗಿರಲಿಲ್ಲ. ಒಬಿಸಿ ಅಂತ ಹೇಳಿ ರಾಜಕೀಯ ಲಾಭ ಪಡೆದುಕೊಳ್ಳಲು ಪ್ರಯತ್ನ ಮಾಡಿಲ್ಲ ಎಂದರು. ಬಿಜೆಪಿಯನ್ನು ಅಲ್ಪಸಂಖ್ಯಾತರ ವಿರೋಧಿ ಎಂದು ಬಿಂಬಿಸುವ ಪ್ರಯತ್ನ ಮಾಡಲಾಗುತ್ತಿದ್ದು, ಅಬ್ದುಲ್ ಕಲಾಂ ಅವರನ್ನು ರಾಷ್ಟ್ರಪತಿ ಮಾಡಿದ್ದು ಕಾಂಗ್ರೆಸ್ ಅಲ್ಲ. ಪರಿಶಿಷ್ಟರ ಬಗ್ಗೆ ಕಾಳಜಿ ಇದ್ದರೆ ಮಲ್ಲಿಕಾರ್ಜುನ ಖರ್ಗೆ ಅವರನ್ನು ಅಭ್ಯರ್ಥಿಯನ್ನಾಗಿ ಘೋಷಿಸಿ.…
ಬೆಂಗಳೂರು : ರಾಜ್ಯದಲ್ಲಿ ಇತ್ತೀಚೆಗೆ ಪದೇಪದೇ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ ಸಿಂಗ್ ಸುರ್ಜೆವಾಲಾ ಕರ್ನಾಟಕಕ್ಕೆ ಭೇಟಿ ನೀಡುತ್ತಿದ್ದು, ಈ ವಿಚಾರವಾಗಿ ಆರ್ ಅಶೋಕ್ ಸಾಮಾಜಿಕ ಜಾಲತಾಣ ಟ್ವೀಟ್ ನಲ್ಲಿ ವ್ಯಂಗ್ಯವಾಡಿದ್ದಾರೆ. ಮುಖ್ಯಮಂತ್ರಿ ಸ್ಥಾನವನ್ನ ಸಮರ್ಥವಾಗಿ ನಿಭಾಯಿಸಬಲ್ಲ ಒಬ್ಬ ನಾಯಕನೂ ಇಲ್ಲದೆ ಕಾಂಗ್ರೆಸ್ ಹೈಕಮಾಂಡ್ ತ್ರಿಶಂಕು ಸ್ಥಿತಿಯಲ್ಲಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ವ್ಯಂಗ್ಯವಾಡಿದ್ದಾರೆ. ಟ್ವೀಟ್ ನಲ್ಲಿ ರಾಜ್ಯದಲ್ಲಿ “ರಣದೀಪ್” ಆಡಳಿತ ಜಾರಿ ಆಗಿದೆಯಾ❓ಗುರುವಾರದ ಸಂಪುಟ ಸಭೆಯೂ ಸುರ್ಜೆವಾಲಾ ಅವರ ಅಧ್ಯಕ್ಷತೆಯಲ್ಲಿ ನಡೆಯುತ್ತಾ❓ಲಾಟರಿ ಸಿಎಂ ಸಿದ್ದರಾಮಯ್ಯ ಅವರ ಮೇಲೆ ಸಂಪೂರ್ಣವಾಗಿ ವಿಶ್ವಾಸ ಕಳೆದುಕೊಂಡಿರುವ ಕಾಂಗ್ರೆಸ್ ಹೈಕಮಾಂಡ್ ಕರ್ನಾಟಕದಲ್ಲಿ ”ರಣದೀಪ್ ” ಆಡಳಿತ ಹೇರಿದೆ. ಕೆಪಿಸಿಸಿ ಕಚೇರಿಯಲ್ಲಿ, ಪಂಚತಾರಾ ಹೋಟೆಲ್ ಗಳಲ್ಲಿ ಅತೃಪ್ತ ಶಾಸಕಾರ ದೂರು-ದುಮ್ಮಾನ ಕೇಳುತ್ತಿರುವ, ಮಂತ್ರಿಗಳ ಸಾಧನೆ ಪರಾಮರ್ಶೆ ಮಾಡುತ್ತಿರುವ ಸುರ್ಜೆವಲ ಅವರು, ಗುರುವಾರ ವಿಧಾನಸೌಧದಲ್ಲಿ ನಡೆಯುವ ಸಂಪುಟ ಸಭೆಗೂ ಬಂದು ತಾವೇ ಅಧ್ಯಕ್ಷತೆ ವಹಿಸಿದರೂ ಅಚ್ಚರಿ ಪಡಬೇಕಿಲ್ಲ. ಸಿಎಂ ಸಿದ್ದರಾಮಯ್ಯ ಅವರಿಗೆ ಆಡಳಿತದ ಮೇಲೆ ಹಿಡಿತವಿಲ್ಲ, ಡಿಸಿಎಂ DK…
ದಾವಣಗೆರೆ : ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಕುರಿತಂತೆ ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ನಾನೇ ಐದು ವರ್ಷಗಳ ಕಾಲ ಮುಖ್ಯಮಂತ್ರಿ ಆಗಿರುತ್ತೇನೆ ಎಂದು ಸ್ಪಷ್ಟಪಡಿಸಿದ್ದಾರೆ ಆದರೂ ಕೂಡ ಕೆಲವು ಸ್ವಾಮೀಜಿಗಳು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಆರ್ ಶೀಘ್ರದಲ್ಲಿ ಮುಖ್ಯಮಂತ್ರಿ ಆಗುತ್ತಾರೆ ಎಂದು ಹೇಳಿಕೆ ನೀಡಿದ್ದು, ಇದೀಗ ದಾವಣಗೆರೆಯಲ್ಲಿ ಡಿಕೆ ಶಿವಕುಮಾರ್ ಅವರ ಅಭಿಮಾನಿಗಳು ದೇವಿಗೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ಮುಂದಿನ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಎಂದು ಜೈ ಘೋಷ ಹಾಕಿರುವ ಘಟನೆ ನಡೆದಿದೆ. ಕಾಂಗ್ರೆಸ್ ನಲ್ಲಿ ಮುಂದಿನ ಸಿಎಂ ವಿಚಾರ ಸದ್ಯಕ್ಕೆ ನಿಲ್ಲದಂತೆ ಕಾಣುತ್ತಿಲ್ಲ. ಏಕೆಂದರೆ ಡಿಕೆ ಶಿವಕುಮಾರ್ ಸಿಎಂ ಆಗಲಿ ಎಂದು ಅಭಿಮಾನಿಗಳು ಇದೀಗ ಪೂಜೆ ಮಾಡಿದ್ದಾರೆ. ದಾವಣಗೆರೆಯಲ್ಲಿ ಅಭಿಮಾನಿಗಳಿಂದ ವಿಶೇಷ ಪೂಜೆ ನಡೆದಿದ್ದು ನಗರ ದೇವತೆಯ ದುರ್ಗಾಂಬಿಕಾ ದೇವಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. 101 ತೆಂಗಿನ ಕಾಯಿ ಒಡೆದು ವಿಶೇಷ ಪೂಜೆ ಸಲ್ಲಿಸಿದ್ದಾರೆ ಆದಷ್ಟು ಬೇಗ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗಲಿ ಎಂದು ಜೈಕಾರ ಹಾಕಿದ್ದಾರೆ…
ಮಂಡ್ಯ : ರಾಜ್ಯದಲ್ಲಿ ಹೃದಯಾಘಾತದಿಂದ ಸರಣಿ ಸಾವುಗಳು ಮುಂದುವರೆದಿದ್ದು, ಇಂದು ಬೆಳಿಗ್ಗೆ ತಾನೇ ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನಲ್ಲಿ ನಗರಸಭೆಯ ಮಾಜಿ ಅಧ್ಯಕ್ಷ ಮನೆಯಲ್ಲಿ ಟೀ ಕುಡಿಯುತ್ತಿರುವಾಗಲೇ ಖುಸಿದು ಬಿದ್ದು ಹೃದಯಾಘಾತದಿಂದ ಸಾವನಪ್ಪಿದ್ದರು. ಇದೀಗ ಮಂಡ್ಯದಲ್ಲಿ ಮತ್ತೋರ್ವ ವ್ಯಕ್ತಿ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ಹೌದು ಗುಮ್ಮನಹಳ್ಳಿಯಲ್ಲಿ ಮಂಜುನಾಥ್ (44) ಎನ್ನುವ ವಾವ್ಯಕ್ತಿ ಕ್ತಿ ಹೃದಯಘಾರದಿಂದ ವ್ಯಕ್ತಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಗುಮ್ಮನಹಳ್ಳಿಯಲ್ಲಿ ಈ ಒಂದು ಘಟನೆ ನಡೆದಿದ್ದು,ನಿನ್ನೆ ರಾತ್ರಿ ಮನೆಯಲ್ಲಿದ್ದಾಗ ಮಂಜುನಾಥ್ ಎನ್ನುವವರಿಗೆ ಎದೆ ನೋವು ಬಂದಿತ್ತು. ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯೆ ಮಂಜುನಾಥ್ ಹೃದಯಘಾತದಿಂದ ಸಾವನಪ್ಪಿದ್ದಾರೆ.
ಬೆಂಗಳೂರು : ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಜ್ವರದಿಂದ ಬಳಲುತ್ತಿದ್ದು, ಹಾಗಾಗಿ ಅವರು ಇದೀಗ ಬೆಂಗಳೂರಿನ ಸದಾಶಿವ ನಗರದ ತಮ್ಮ ನಿವಾಸದಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ. ಈ ಹಿನ್ನೆಲೆ ಇಂದು ನಿಗದಿಯಾಗಿದ್ದ ಎಲ್ಲ ಸರ್ಕಾರಿ, ಖಾಸಗಿ ಕಾರ್ಯಕ್ರಮಗಳು ದಿಢೀರ್ ರದ್ದಾಗಿವೆ. ಇಂದು ಡಿಸಿಎಂ ಡಿಕೆ ಶಿವಕುಮಾರ್ ಹಲವು ಕಾರ್ಯಕ್ರಮಗಳಲ್ಲಿ ಭಾಗವಹಿಸಬೇಕಾಗಿತ್ತು. ಆದರೆ ಜ್ವರ ಬಂದಿರುವ ಹಿನ್ನೆಲೆಯಲ್ಲಿ ಸದಾಶಿವ ನಗರದ ನಿವಾಸದಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ. ಹಾಗಾಗಿ ಎಲ್ಲ ಕಾರ್ಯಕ್ರಮಗಳನ್ನ ರದ್ದು ಮಾಡಲಾಗಿದೆ.