Author: kannadanewsnow05

ಬೆಂಗಳೂರು : ಅಕ್ರಮವಾಗಿ ದುಬೈನಿಂದ ಚಿನ್ನ ಸಾಗಾಟ ಪ್ರಕರಣದಲ್ಲಿ ಸದ್ಯ ನಟಿ ರನ್ಯಾ ಪರಪ್ಪನ ಅಗ್ರಹಾರ ಜೈಲಿನಲ್ಲಿ ಇದ್ದಾರೆ. ಇದೇ ಒಂದು ಪ್ರಕರಣಕ್ಕೆ ಸಂಬಂಧಪಟ್ಟಂತೆ, ಬೆಂಗಳೂರಿನ ಹೋಟೆಲ್ ಉದ್ಯಮಿ ತಮ್ಮನ ಮಗ ತರುಣ್ ರಾಜು ನನ್ನು ನಿನ್ನೆ ಡಿ ಆರ್ ಐ ಅಧಿಕಾರಿಗಳು ಅರೆಸ್ಟ್ ಮಾಡಿದ್ದರು. ಇದೀಗ ವಿಚಾರಣೆ ವೇಳೆ ಮತ್ತೊಂದು ಸ್ಫೋಟಕವಾದ ಮಾಹಿತಿ ಬಹಿರಂಗವಾಗಿದೆ. ಹೌದು ನಟಿ ರನ್ಯಾರಾವ್ ಅಕ್ರಮ ಚಿನ್ನ ಸಾಗಾಟ ಪ್ರಕರಣಕ್ಕೆ ಸಂಬಂಧಪಟ್ಟಂತೆ, ವಿಚಾರಣೆ ನಡೆಸಿದ ಅಧಿಕಾರಿಗಳು ನಟಿ ರನ್ಯಾರಾವ್ ಮತ್ತು ಬಂಧಿತ ಮತ್ತೋರ್ವ ಆರೋಪಿ ತರುಣ ರಾಜು ಮಾಜಿ ಪ್ರೇಮಿಗಳು ಎಂದು ಬಯಲಾಗಿದೆ. ದುಬೈನಲ್ಲಿ ತರುಣ್ ರಾಜು ಆರ್ಥಿಕ ವ್ಯವಹಾರ ನಡೆಸುತ್ತಿದ್ದ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಅತ್ಯಂತ ಸುಲಭವಾಗಿ ನಟಿ ರನ್ಯಾ ಅಕ್ರಮವಾಗಿ ಚಿನ್ನ ಸಾಗಾಟ ಮಾಡುತ್ತಿದ್ದಳು ಎನ್ನುವುದು ತಿಳಿದು ಬಂದಿದೆ.

Read More

ಬೆಂಗಳೂರು : ದುಬೈನಿಂದ ಅಕ್ರಮ ಚಿನ್ನ ಸಾಗಾಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಟಿ ರನ್ಯಾರಾವ್ ಅವರಿಗೆ 15 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಿ ನಿನ್ನೆ ಬೆಂಗಳೂರಿನ ಆರ್ಥಿಕ ಅಪರಾಧಗಳ ವಿಶೇಷ ನ್ಯಾಯಾಲಯ ಆದೇಶ ಹೊರಡಿಸಿತ್ತು. ಬಳಿಕ ಇಂದು ರನ್ಯಾ ರಾವ್ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದು ಇಂದು ಮತ್ತೆ ವಿಚಾರಣೆ ನಡೆಯಲಿದೆ. ಅದಕ್ಕೂ ಮುನ್ನ ನಿನ್ನೆ ನಟಿ ರನ್ಯಾ ರಾವ್ ನಿವಾಸದ ಮೇಲೆ ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಹೌದು ರನ್ಯಾ ರಾವ್ ನಿವಾಸದ ಮೇಲೆ ಸಿಬಿಐ ಅಧಿಕಾರಿಗಳಿಂದ ದಾಳಿ ನಡೆಸಲಾಗಿದೆ. ಬೆಂಗಳೂರಿನ ನಿವಾಸದ ಮೇಲೆ ನಿನ್ನೆ ಸಂಜೆ ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದರು. ನಿನ್ನೆ ದಾಳಿ ನಡೆಸಿ 1 ಗಂಟೆ ಪರಿಶೀಲನೆ ನಡೆಸಿದ ಇಬ್ಬರು ಅಧಿಕಾರಿಗಳು ಸಂಜೆ 4 ಗಂಟೆಯಿಂದ 5 ಗಂಟೆಯವರೆಗೆ ರನ್ಯ ರಾವ್ ನಿವಾಸದಲ್ಲಿ ಹಲವು ದಾಖಲೆಗಳನ್ನು ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಬೆಂಗಳೂರಿನ ಲ್ಯಾವೆಲ್ಲಿ ರಸ್ತೆಯ 5ನೇ ಕ್ರಾಸ್ ನಲ್ಲಿರುವ ನಂದವಾಣಿ ಮ್ಯಾನ್ಶನ್ 3ನೇ ಅಂತಸ್ತಿನಲ್ಲಿರೋ…

Read More

ಬೆಂಗಳೂರು : ವಕೀಲೆ ಜೀವಾ ಆತ್ಮಹತ್ಯೆ ಪ್ರಕರಣದಲ್ಲಿ ಡಿವೈಎಸ್ಪಿ ಬಂಧನವಾಗಿದ್ದು, ಎಸ್ಐಟಿ ಅಧಿಕಾರಿಗಳು ಡಿ ವೈ ಎಸ್ ಪಿ ಕನಕಲಕ್ಷ್ಮೀ ಅವರನ್ನು ಅರೆಸ್ಟ್ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಹೌದು ಬೆಂಗಳೂರಿನಲ್ಲಿ ವಕೀಲೆ ಜೀವಾ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಎಸ್ಐಟಿ ಅಧಿಕಾರಿಗಳು ಇದೀಗ ಸಿಐಡಿ ಡಿವೈಎಸ್ಪಿ ಕನಕಲಕ್ಷ್ಮಿ ಅವರು ಅರೆಸ್ಟ್ ಆಗಿದ್ದಾರೆ. ಪ್ರಕರಣ ಹಿನ್ನೆಲೆ? ಜೀವಾ ಅವರು 2024 ನವೆಂಬರ್​​ 22ರಂದು ಸ್ವಗೃಹದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಡೆತ್ ನೋಟ್​​ನಲ್ಲಿ ಡಿವೈಎಸ್​​ಪಿ ಕನಕಲಕ್ಷ್ಮಿ ಹೆಸರು ಉಲ್ಲೇಖಿಸಿದ್ದರು. ಈ ಸಂಬಂಧ ಮೃತರ ಸಹೋದರಿ ನೀಡಿದ ದೂರು ಆಧರಿಸಿ ಬನಶಂಕರಿ ಪೊಲೀಸರು ಪ್ರಕರಣ ದಾಖಲಿಸಿದ್ದರು. ನಗರ ಪೊಲೀಸ್ ಆಯುಕ್ತ ದಯಾನಂದ ಅವರು ತನಿಖೆಯನ್ನು ಸಿಸಿಬಿಗೆ ವರ್ಗಾಯಿಸಿದ್ದರು. ಮತ್ತೊಂದೆಡೆ, ಸಿಬಿಐ ತನಿಖೆ ಕೋರಿ ವಕೀಲರ ಸಂಘ ಸಲ್ಲಿಸಿದ್ದ ಅರ್ಜಿ ಸಂಬಂಧ ವಿಚಾರಣೆ ನಡೆಸಿದ್ದ ಹೈಕೋರ್ಟ್, ಪ್ರತ್ಯೇಕ ಎಸ್​​ಐಟಿ ರಚಿಸಿತ್ತು. ವಕೀಲೆ ಜೀವಾ ಆತ್ಮಹತ್ಯೆ ಪ್ರಕರಣದ ತನಿಖೆಯನ್ನು ಬೆಂಗಳೂರು ಸಿಬಿಐನ ಪೊಲೀಸ್‌ ವರಿಷ್ಠಾಧಿಕಾರಿ ವಿನಾಯಕ್‌ ವರ್ಮಾ, ಕರ್ನಾಟಕ ಹೋಮ್‌ ಗಾರ್ಡ್‌ನ…

Read More

ಬೆಂಗಳೂರು : ದುಬೈನಲ್ಲಿ ಅಕ್ರಮವಾಗಿ ಚಿನ್ನ ಸಾಗಾಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಟಿ ರನ್ಯಾ ರಾವ್ ಅವರನ್ನು ನಿನ್ನೆ ಆರ್ಥಿಕ ಅಪರಾಧಗಳ ವಿಶೇಷ ನ್ಯಾಯಾಲಯವು 15 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶ ನೀಡಿತ್ತು.ಅದಾದ ಬಳಿಕ ಇದೀಗ ಈ ಒಂದು ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಿ ರಾಜ್ಯ ಸರ್ಕಾರ ಇದೀಗ ಆದೇಶ ಹೊರಡಿಸಿದೆ. ಹೌದು ರನ್ಯಾ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಚಿನ್ನ ಸಾಗಾಟದ ವೇಳೆ ಪೊಲೀಸರ ಲೋಪದೋಷ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ತನಿಖೆಯನ್ನು ಸಿಐಡಿ ತನಿಖೆಗೆ ವಹಿಸಿ ಆದೇಶ ನೀಡಿದೆ. ರನ್ಯಾ ರಾವ್ ಚಿನ್ನ ಸಾಗಾಟದಲ್ಲಿ ಪೊಲೀಸರು ಭಾಗಿಯಾಗಿರುವ ಶಂಕೆ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಸತ್ಯಾಸತತೆಯನ್ನು ತಿಳಿಯಲು ಸಿಐಡಿ ತನಿಖೆಗೆ ರಾಜ್ಯ ಸರ್ಕಾರ ಇದೀಗ ಆದೇಶ ನೀಡಿದೆ. ಆದೇಶದಲ್ಲಿ ದುಬೈನಿಂದ ಅಕ್ರಮವಾಗಿ ಚಿನ್ನ ಸಾಗಾಟ (Gold smuggling) ಮಾಡುತ್ತಿದ್ದ ಆರೋಪದ ಹಿನ್ನೆಲೆಯಲ್ಲಿ ನಟಿ ರನ್ಯಾ ರಾವ್ ಅವರನ್ನು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಂದಾಯ…

Read More

ಬೆಂಗಳೂರು : ಅಭಿಮಾನಿ ಒಬ್ಬ ತನ್ನ ನೆಚ್ಚಿನ ನಟಿಯೊಂದಿಗೆ ಸೆಲ್ಫಿ ತೆಗೆದುಕೊಳ್ಳಲು ಮುಂದಾಗಿದ್ದಾನೆ ಆದರೆ ಸೆಲ್ಫಿ ತೆಗೆದುಕೊಳ್ಳಲು ತಪ್ಪಲ್ಲ ಈ ಸಂದರ್ಭದಲ್ಲಿ ನಟಿಯ ಕೈಹಿಡಿದು ಎಳೆದಿದ್ದಾನೆ ಅಭಿಮಾನಿ ಇದರಿಂದ ಕೋಪಗೊಂಡ ನಟಿ ಅಭಿಮಾನಿಗೆ ಕಪಾಳ ಮೋಕ್ಷ ಮಾಡಿರುವ ಘಟನೆ ವರದಿಯಾಗಿದೆ. ಹೌದು ಕೈ ಹಿಡಿದು ಎಳೆದ ಅಭಿಮಾನಿಗೆ ನಟಿಯಿಂದ ಕಪಾಳ ಮೋಕ್ಷವಾಗಿದ್ದು, ಅಭಿಮಾನಿ ಕಪಾಳಕ್ಕೆ ನಟಿ ರಾಗಿಣಿ ದ್ವಿವೇದಿ ಅವರು ಬಾರಿಸಿದ್ದಾರೆ. ಖಾಸಗಿ ಕಾರ್ಯಕ್ರಮ ಒಂದರಲ್ಲಿ ರಾಗಿಣಿ ಅವರು ಅಭಿಮಾನಿಗೆ ಕಪಾಳಮೋಕ್ಷ ಮಾಡಿದ್ದಾರೆ ಎನ್ನಲಾಗಿದೆ. ನಟಿ ರಾಗಿಣಿ ಅಭಿಮಾನಿಗೆ ಕಪಾಳ ಮೋಕ್ಷ ಮಾಡಿರುವ ವಿಡಿಯೋ ಎಲ್ಲೆಡೆ ವೈರಲ್ ಆಗಿದೆ. ಸ್ಟೇಜ್ ಮೇಲೆ ರಾಗಿಣಿ ಅವರು ನಿಂತಾಗ ಅಭಿಮಾನಿಯೊಬ್ಬ ಸೆಲ್ಫಿ ಸಲುವಾಗಿ ರಾಗಿಣಿ ಜೊತೆ ಫೋಟೋ ತೆಗೆಸಿಕೊಳ್ಳಲು ಅಭಿಮಾನಿ ಮುಂದಾಗಿದ್ದಾನೆ. ಆದರೆ ಈ ವೇಳೆ ರಾಗಿಣಿ ಕೈ ಹಿಡಿದು ಅಭಿಮಾನಿ ಎಳೆದಿದ್ದಾನೆ. ಇದರಿಂದ ಸ್ವಲ್ಪ ವಿಚಲಿತರಾದ ರಾಗಿಣಿ ಅವರು ಅಭಿಮಾನಿ ಕಪಾಳಕ್ಕೆ ಬಾರಿಸಿದ್ದಾರೆ. ಈ ಒಂದು ವಿಡಿಯೋ ಎಲ್ಲೆಡೆ ವೈರಲಾಗುತ್ತಿದೆ.

Read More

ಬೆಂಗಳೂರು : ಕಳೆದ ವರ್ಷ ಬೆಂಗಳೂರಿನಲ್ಲಿ ಪಾಕಿಸ್ತಾನ ಪ್ರಜೆಗಳ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಬೆಂಗಳೂರು ಜಿಲ್ಲೆಯ ಆನೇಕಲ್ ತಾಲೂಕಿನ ಕೋರ್ಟಿಗೆ ಜಿಗಣಿ ಠಾಣೆ ಪೊಲೀಸರು ಜಾರ್ಜ್ ಶೀಟ್ ಸಲ್ಲಿಸಿದ್ದಾರೆ.ಆನೇಕಲ್ ನ ಜಿಗಣಿ ಪೊಲೀಸ್ ಠಾಣೆಯಲ್ಲಿ ಪಾಕಿಸ್ತಾನ ಪ್ರಜೆಗಳ ಬಂಧನ ಕುರಿತು ಪ್ರಕರಣ ದಾಖಲಾಗಿತ್ತು. ಪ್ರಕರಣಕ್ಕೆ ಸಂಬಂಧಪಟ್ಟಂತೆ 10 ಆರೋಪಿಗಳ ವಿರುದ್ಧ ಇದೀಗ 1,200 ಪುಟಗಳಷ್ಟು ಆರೋಪ ಪಟ್ಟಿ ಸಲ್ಲಿಸಲಾಗಿದೆ ಎಂದು ತಿಳಿದುಬಂದಿದೆ. ಪ್ರಕರಣ ಹಿನ್ನೆಲೆ? ಕಳೆದ ಡಿಸೇಂಬರ್ ನಲ್ಲಿ ಆನೇಕಲ್ ತಾಲ್ಲೂಕಿನ ಜಿಗಣಿಯಲ್ಲಿ ಅಕ್ರಮವಾಗಿ ಭಾರತಕ್ಕೆ ಪ್ರವೇಶಿಸಿದ ಆರೋಪದ ಆರೋಪಿಗಳನ್ನು ಬಂಧಿಸಲಾಗಿದೆ. ಪೊಲೀಸರು 1200 ಪುಟಗಳ ದೋಷಾರೋಪ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ. ಆರೋಪಿಗಳು ನಕಲಿ ದಾಖಲೆಗಳನ್ನು ಸೃಷ್ಟಿಸಿಕೊಂಡು, ಯೂಟ್ಯೂಬ್ ಮೂಲಕ ಧರ್ಮ ಪ್ರಚಾರ ಮಾಡುತ್ತಿದ್ದರು ಎಂದು ತನಿಖೆಯಿಂದ ತಿಳಿದುಬಂದಿದೆ. ಪಾಕಿಸ್ತಾನದ ಶಾಶ್ವತ ನಿವಾಸ ಪ್ರಮಾಣಪತ್ರಗಳು ಮತ್ತು ತಾಂತ್ರಿಕ ಸಾಕ್ಷ್ಯಗಳನ್ನು ಪೊಲೀಸರು ಪತ್ತೆಹಚ್ಚಿದ್ದಾರೆ. ಮುಸ್ಲಿಂ ಹೆಸರುಗಳನ್ನ ಹಿಂದೂಗಳ ಹೆಸರುಗಳನ್ನಾಗಿ ಬದಲಿಸಿಕೊಂಡು, ದೆಹಲಿ, ಬೆಂಗಳೂರು, ಹೈದರಾಬಾದ್ ಸೇರಿ ಹಲವೆಡೆ ವಾಸವಾಗಿದ್ದರು. ಕಳೆದ ಮೂರ್ನಾಲ್ಕು…

Read More

ಕರ್ನೂಲ್ : ಎರಡು ಬೈಕ್ ಗಳಿಗೆ ಕೆಎಸ್ಆರ್ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ನಾಲ್ವರು ಸಾವನ್ನಪ್ಪಿರುವ ಘಟನೆಆಂಧ್ರಪ್ರದೇಶದ ಪಾಂಡವಗಲ್ ಗ್ರಾಮದ ಬಳಿ ಈ ಒಂದು ಘಟನೆ ನಡೆದಿದೆ. ಕರ್ನೂಲ್ ಜಿಲ್ಲೆಯ ಆದೋನಿ ತಾಲೂಕಿನ ಪಾಂಡವಾಗಲ್ ಗ್ರಾಮದಲ್ಲಿ ಈ ಅಪಘಾತ ಸಂಭವಿಸಿದೆ. ಸಾರಿಗೆ ಬಸ್ ಡಿಕ್ಕಿಯಾಗಿ ಎರಡು ಬೈಕ್ಗಳಲ್ಲಿದ್ದ ನಾಲ್ವರು ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಮತ್ತೊಬ್ಬನ ಸ್ಥಿತಿ ಚಿಂತಾಜನಕವಾಗಿದ್ದು ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಗಂಗಾವತಿಯಿಂದ ಮಂತ್ರಾಲಯಕ್ಕೆ ಈ ಒಂದು ಸಾರಿಗೆ ಬಸ್ ಹೊರಟಿತ್ತು. ಅಪಘಾತದಲ್ಲಿ ರಾಯಚೂರು ಮೂಲದ ಇಬ್ಬರು ಹಾಗು ಕರ್ನುಲ್ ಜಿಲ್ಲೆಯ ಆದೋನಿ ಮೂಲದ ಇಬ್ಬರು ಸಾವನ್ನಪ್ಪಿದ್ದಾರೆ. ಅಪಘಾತದ ಕುರಿತು ಆಂಧ್ರಪ್ರದೇಶದ ಆದೋನಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು : ಇಂದು ಡಿಸಿಎಂ ಡಿಕೆ ಶಿವಕುಮಾರ್ ಅವರು ವಿಧಾನಸಭೆಯಲ್ಲಿ ಡಿ ಗ್ರೇಟರ್ ಬೆಂಗಳೂರು ವಿಧೇಯಕ ಮಂಡಿಸಿದರು. ಗ್ರೇಟರ್ ಬೆಂಗಳೂರು ಅಥಾರಿಟಿ ಮೇಲೆ ವಿಧಾನಸಭೆಯಲ್ಲಿ ಚರ್ಚೆ ನಡೆಯಿತು. ಈ ಒಂದು ಚರ್ಚೆಯಲ್ಲಿ ಬಿಜೆಪಿ ಶಾಸಕ ಎಸ್ ಟಿ ಸೋಮಶೇಖರ್ ಭಾಗಿಯಾಗಿದ್ದು, ವಿಧೇಯಕವನ್ನು ಬೆಂಬಲಿಸಿ ST ಸೋಮಶೇಖರ್ ಮಾತನಾಡಿದರು. ಈ ವೇಳೆ ಕಾಂಗ್ರೆಸ್ ಸದಸ್ಯರು ಶಾಸಕ ಎಸ್ ಟಿ ಸೋಮಶೇಖರ್ ಅವರ ಮಾತನ್ನು ಸ್ವಾವತಿಸಿದರು. ಮೇಜು ತಟ್ಟಿ ಸೋಮಶೇಖರ್ ಮಾತನ್ನು ಕಾಂಗ್ರೆಸ್ ಸದಸ್ಯರು ಸ್ವಾಗತಿಸಿದರು. ಬಿಜೆಪಿ ಶಾಸಕರ ಅಭಿಪ್ರಾಯವನ್ನು ಸೋಮಶೇಖರ್ ಆಕ್ಷೇಪಿಸಿ ಮಾತನಾಡಿದ್ದು, ಚರ್ಚೆಯುದಕ್ಕೂ ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ಹಾಡಿ ಹೊಗಳಿದರು. ಆದರೆ ಈ ಸಂದರ್ಭದಲ್ಲಿ ಬಿಜೆಪಿ ಶಾಸಕರು ಸೋಮಶೇಖರ್ ಮಾತನಾಡುವ ಸಂದರ್ಭದಲ್ಲಿ ಮೌನಕ್ಕೆ ಜಾರಿದ್ದರು.

Read More

ಬೆಳಗಾವಿ : ಬೆಳಗಾವಿಯಲ್ಲಿ ಚಲಿಸುತ್ತಿದ್ದ ಬಸ್ ಬ್ರೇಕ್ ಫೇಲ್ ಆಗಿದ್ದರಿಂದ ಬಸ್ ಪಲ್ಟಿಯಾದ ಪರಿಣಾಮ ಬಸ್ನಲ್ಲಿ ಪ್ರಯಾಣಿಸುತ್ತಿದ್ದ ಸುಮಾರು 15ಕ್ಕೂ ಹೆಚ್ಚು ಜನರಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನಲ್ಲಿ ನಡೆದಿದೆ. ಹೌದು ಬೈಲಹೊಂಗಲ ತಾಲೂಕಿನ ಲಿಂಗದಳ್ಳಿ-ಅರವಳಿ ಬಳಿ ಬ್ರೇಕ್ ಫೇಲ್ ಆಗಿ ಬಸ್ ಪಲ್ಟಿಯಾಗಿದೆ. ಲಿಂಗದಹಳ್ಳಿ ಬಳಿ ಬಸ್ ಪಲ್ಟಿಯಾದ ಪರಿಣಾಮ ಬಸ್ ನಲ್ಲಿಫಾ ಸುಮಾರು 15 ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯವಾಗಿದ್ದು, ತಕ್ಷಣ ಅವರನ್ನು ಸ್ಥಳೀಯ ಆಸ್ಪತ್ರೆಗೆ ಶಿಫ್ಟ್ ಮಾಡಲಾಯಿತು. ಬೈಲಹೊಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ

Read More

ಬೆಂಗಳೂರು : ದುಬೈ ನಿಂದ ಅಕ್ರಮ ಚಿನ್ನ ಸಾಗಾಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಟಿ ರನ್ಯಾ ರಾವ್ ಕಳೆದ 3 ದಿನಗಳಿಂದ ಡಿ ಆರ್ ಐ ಕಸ್ಟಡಿಯಲ್ಲಿದ್ದರು. ಇದೀಗ ನಟಿ ರನ್ಯಾರಾವ್ ಕಸ್ಟಡಿ ಅವಧಿ ಅಂತ್ಯವಾದ ಹಿನ್ನೆಲೆಯಲ್ಲಿ ಮತ್ತೆ ಅಧಿಕಾರಿಗಳು ಬೆಂಗಳೂರಿನ ಆರ್ಥಿಕ ಅಪರಾಧಗಳ ವಿಶೇಷ ನ್ಯಾಯಾಲಯಕ್ಕೆ ಅವರನ್ನು ಹಾಜರುಪಡಿಸಿದ್ದಾರೆ. ವಿಚಾರಣೆ ನಡೆಸಿದ ನ್ಯಾಯಧೀಶರು 15 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿದ್ದಾರೆ. ಕೋರ್ಟ್ ನಲ್ಲಿ ನಟಿ ರನ್ಯಾರಾವ್ ಹಾಜರಾದ ಬಳಿಕ ಕಣ್ಣೀರು ಹಾಕಿದರು. ಈ ವೇಳೆ ಹಲ್ಲೆ ಮಾಡಿದ್ರ ಎಂದು ನ್ಯಾಯಾಧೀಶರು ಪ್ರಶ್ನೆ ಮಾಡಿದಾಗ, ಕೋರ್ಟ್ನಲ್ಲೇ ನಟಿ ರನ್ಯರಾವ್ ಅತ್ತಿದ್ದಾರೆ. ನಾನು ಎಮೋಷನಲ್ ಬ್ರೋಕನ್ ಆಗಿದ್ದೇನೆ. ಕೆಟ್ಟದಾಗಿ ನನಗೆ ಬೈದಿದ್ದಾರೆ. ತಲೆಗೆ ಸುತ್ತಿಗಿಯಲ್ಲಿ ಹೊಡೆದಂತೆ ಪ್ರಶ್ನೆ ಮಾಡಿದ್ದಾರೆ. ಮಾನಸಿಕವಾಗಿ ನಾನು ಕುಗ್ಗಿದ್ದೇನೆ. ಕೆಟ್ಟ ಪದ ಬಳಸಿದ್ದಾರೆ. ದೈಹಿಕವಾಗಿ ಹಲ್ಲೆ ಮಾಡಿಲ್ಲ. ಹೇಳಿಲ್ಲ ಅಂದರೆ ಏನಾಗುತ್ತೆ ಅನ್ನೋದು ಗೊತ್ತಲ್ಲ. ಒಂದು ಬೆದರಿಕ ರೀತಿಯಲ್ಲಿ ಅಧಿಕಾರಿಗಳು ಮಾತನಾಡಿದ್ದಾರೆ ಎಂದು ಜಡ್ಜ್ ಜಜ್…

Read More