Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ಮುಡಾದಲ್ಲಿ ಸಿದ್ದರಾಮಯ್ಯ ಪತ್ನಿಗೆ 14 ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ತನಿಖೆಗೆ ರಾಜಪಾಲರ ಅನುಮತಿ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಮೇಲ್ಮನವಿ ಸಲ್ಲಿಸಿದ್ದು, ಇಂದು ಹೈಕೋರ್ಟ್ ನಲ್ಲಿ ಪ್ರಕರಣದ ವಿಚಾರಣೆ ನಡೆಯಿತು. ವಿಚಾರಣೆಯ ಬಳಿಕ ಹೈಕೋರ್ಟ್ ವಿಚಾರಣೆಯನ್ನು 2 ವಾರಗಳ ಕಾಲ ಮುಂದೂಡಿತು. ವಿಚಾರಣೆಯ ವೇಳೆ ಸಿಎಂ ಸಿದ್ದರಾಮಯ್ಯ ಪರ ವಕೀಲರು ವಾದ ಮಂಡನೆಗೆ ಕಾಲಾವಕಾಶ ಕೋರಿದರು. ಬಳಿಕ ವಿಚಾರಣೆಯನ್ನು ಎರಡನೇ ವಾರಕ್ಕೆ ಹೈಕೋರ್ಟ್ ಮುಂದೂಡಿದೆ. ಹೈಕೋರ್ಟ್ ಏಕ ಸದಸ್ಯ ಪೀಠ ರಾಜ್ಯಪಾಲರ ಕ್ರಮ ಎತ್ತಿ ಹಿಡಿದಿತ್ತು. ತೀರ್ಪು ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಇದೀಗ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು.
ಮಂಡ್ಯ : ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಇಂದು ಸಾಮೂಹಿಕ ಗಣೇಶ ವಿಸರ್ಜನೆ ಹಿನ್ನೆಲೆಯಲ್ಲಿ ಇಂದು ನಾಳೆ ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಮದ್ಯ ಮಾರಾಟ ನಿಷೇಧ ಜಾರಿಗೊಳಿಸಲಾಗಿದೆ. ನಾಗಮಂಗಲದ ಸುತ್ತಮುತ್ತಲು ಎರಡು ದಿನಗಳ ಕಾಲ ಮದ್ಯ ಮಾರಾಟ ನಿಷೇಧಗೊಳಿಸಿ ಜಿಲ್ಲಾಧಿಕಾರಿ ಡಾ. ಕುಮಾರ್ ಆದೇಶ ಹೊರಡಿಸಿದ್ದಾರೆ. ಗಣೇಶ ವಿಸರ್ಜನೆಯ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದ್ದು, ಕಳೆದ ವರ್ಷ ಗಣೇಶ ವಿಸರ್ಜನೆ ವೇಳೆ ಕೋಮುಗಲಭೆ ನಡೆದಿತ್ತು. ಕೋಮುಗಲಭೆಯ ವೇಳೆ ಸಾರ್ವಜನಿಕರ ಆಸ್ತಿಪಾಸ್ತಿ ನಷ್ಟವಾಗಿತ್ತು ಈ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲಾ ಆಡಳಿತದಿಂದ ಮುನ್ನೆಚ್ಚರಿಕೆ ಕ್ರಮ ವಹಿಸಲಾಗಿದೆ ನಾಗಮಂಗಲದಲ್ಲಿ ದಾರಿಯುದ್ದಕ್ಕೂ ಸಿಸಿ ಕ್ಯಾಮೆರಾ ಗಳನ್ನು ಅಳವಡಿಸಲಾಗಿದೆ. ಪೊಲೀಸ್ ಭದ್ರತೆಯಲ್ಲಿ ಸಾಮೂಹಿಕ ಗಣೇಶ ವಿಸರ್ಜನೆ ನಡೆಯಲಿದೆ.
ಕೊಡಗು : ಸುಮಾರು 18 ಲಕ್ಷ ಮೌಲ್ಯದ 70 ಕ್ವಿಂಟಲ್ ಕಾಫಿ ಕಳ್ಳತನ ಮಾಡಿದ ಐವರು ಆರೋಪಿಗಳನ್ನು ಅರೆಸ್ಟ್ ಮಾಡಲಾಗಿದೆ. ಕೊಡಗು ಜಿಲ್ಲೆಯ ಕುಶಾಲನಗರದಲ್ಲಿ ಈ ಒಂದು ಘಟನೆ ನಡೆದಿದ್ದು, ಬಂಧಿತರನ್ನು ಸುನಿಲ್, ರಾಜು, ಶರತ್, ದಿನೇಶ್ ಹಾಗು ಜಿತೇಂದ್ರ ಎಂದು ತಿಳಿದು ಬಂದಿದೆ. ಆರೋಪಿಗಳು ಸುಮಾರು 18 ಲಕ್ಷ ಮೌಲ್ಯದ ಕಾಫಿ ಕಳ್ಳತನ ಮಾಡಿದ್ದರು. ಕುಶಾಲನಗರ ತಾಲೂಕಿನ ಕಡ್ಲೂರಿನಲ್ಲಿ ಈ ಒಂದು ಘಟನೆ ನಡೆದಿತ್ತು. ಕೊಡಗು ಜಿಲ್ಲೆಯ ಕುಶಲನಗರ ತಾಲೂಕಿನ ಕಡ್ಲೂರು ಗ್ರಾಮದಲ್ಲಿ ಉಮಾ ಕಾಫಿ ವರ್ಕ್ಸ್ ನಲ್ಲಿ ಆರೋಪಿಗಳು ಕಳ್ಳತನ ಮಾಡಿದ್ದಾರೆ. ಬಂಧಿತರಿಂದ 6,095 ಕೆಜಿ ಕಾಫಿ ಹಾಗೂ ಮೂರು ವಾಹನ ವಶಕ್ಕೆ ಪಡೆಯಲಾಗಿದೆ ಈ ಕುರಿತು ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು : ಪೋಕ್ಸೊ ಪ್ರಕರಣದಲ್ಲಿ ಚಾರ್ಜ್‌ಶೀಟ್ ಸಲ್ಲಿಸಲು ಪೊಲೀಸರು ಲಂಚಕ್ಕೆ ಬೇಡಿಕೆಯಿಟ್ಟಿದ್ದರು. 70 ಸಾವಿರ ಲಂಚ ಸ್ವೀಕರಿಸುವ ವೇಳೆ ದೇವನಹಳ್ಳಿ ಪೊಲೀಸ್ ಸಿಬ್ಬಂದಿಯೊಬ್ಬರು ಲೋಕಾಯುಕ್ತ ಬಲೆಗೆ ಬಿದ್ದಿದ್ದು, ಮಹಿಳಾ ಪಿಎಸ್‌ಐ ಜಗದೇವಿ ಪರಾರಿಯಾಗಿದ್ದಾರೆ. 70 ಸಾವಿರ ಲಂಚಕ್ಕೆ ಬೇಡಿಕೆಯಿಟ್ಟು, 50 ಸಾವಿರ ಲಂಚ ಸ್ವೀಕರಿಸುತ್ತಿದ್ದ ಸಮಯದಲ್ಲಿ ದೇವನಹಳ್ಳಿ ಪೊಲೀಸ್ ಠಾಣಾ ಸಿಬ್ಬಂದಿ ಅಮರೇಶ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಪೋಕ್ಸೊ ಪ್ರಕರಣದಲ್ಲಿ ಚಾರ್ಜ್‌ಶೀಟ್ ಸಲ್ಲಿಸಲು ಪೊಲೀಸರು ಲಂಚಕ್ಕೆ ಬೇಡಿಕೆಯಿಟ್ಟಿದ್ದರು. ಮಹಿಳೆಯೊಬ್ಬರು ನೀಡಿದ್ದ ದೂರಿನನ್ವಯ ಲೋಕಾಯುಕ್ತ ಅಧಿಕಾರಿಗಳಿಂದ ಕಾರ್ಯಾಚರಣೆ ನಡೆಸಲಾಗಿತ್ತು. ದೇವನಹಳ್ಳಿ ಠಾಣೆ ಪಿಎಸ್‌ಐ ಜಗದೇವಿ, ಕಾನ್ಸ್‌ಟೇಬಲ್‌ಗಳಾದ ಮಂಜುನಾಥ್, ಅಮರೇಶ್ ವಿರುದ್ದ ದೂರು ದಾಖಲಾಗಿತ್ತು. ಪೋಕ್ಸೊ ಕೇಸ್‌ನಲ್ಲಿ ಚಾರ್ಜ್‌ಶೀಟ್ ಹಾಕಲು 70 ಸಾವಿರ ಲಂಚ ಕೇಳಿದ್ದರು. ಸದ್ಯ ಲೋಕಾಯುಕ್ತ ದಾಳಿ ವೇಳೆ ಪಿಎಸ್‌ಐ ಜಗದೇವಿ ಹಾಗೂ ಕಾನ್ಸ್‌ಟೇಬಲ್ ಮಂಜುನಾಥ್ ಪರಾರಿಯಾಗಿದ್ದಾರೆ. ಲೋಕಾಯುಕ್ತ ಎಸ್ಪಿ ವಂಶಿಕೃಷ್ಣ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿತ್ತು.
ಚಾಮರಾಜನಗರ : ಮಲೆ ಮಾದೇಶ್ವರ ಬೆಟ್ಟದಲ್ಲಿ ಅಕ್ರಮ ಮದ್ಯ ಸಾಗಾಟ ನಿಲ್ಲುತ್ತಿಲ್ಲ. ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆ ಮಾದೇಶ್ವರ ಬೆಟ್ಟದಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮುಂದುವರೆದಿದೆ. ಸಿಎಂ ಸಿದ್ದರಾಮಯ್ಯ ಮದ್ಯ ಮುಕ್ತ ಮಾಲೆ ಮಾದೇಶ್ವರ ಬೆಟ್ಟವನ್ನಾಗಿಸಲು ಪಣತೊಟ್ಟಿದ್ದಾರೆ. ಆದರೆ ಇದೀಗ ಮಾದಪ್ಪನ ಬೆಟ್ಟದಲ್ಲಿ ಮದ್ಯ ಸಾಗಟ ಎಗ್ಗಿಲ್ಲದೆ ನಡೆಯುತ್ತಿದೆ. ಮಲೆ ಮಹದೇಶ್ವರ ಬೆಟ್ಟದ ಸುತ್ತಲೂ ಇರುವ ಹುಲಿಗೂಡು, ತಂಬಡಗಿರಿ ಗ್ರಾಮದ ಬಳಿ ಅಕ್ರಮ ಮದ್ಯ ಸಾಗಾಟಕ್ಕೆ ಯತ್ನಿಸಲಾಗಿದೆ. ಈ ವೇಳೆ ವಡ್ಡರದೊಡ್ಡಿ ಗ್ರಾಮದ ನಿವಾಸಿ ಎ.ಜೇಮ್ಸ್ ಎನ್ನುವ ವ್ಯಕ್ತಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಶ್ರೀ ರಾಘವೇಂದ್ರ ಸ್ವಾಮಿಗಳ ಪವಾಡಗಳು 16 ನೇ ಶತಮಾನದಲ್ಲಿ ವಾಸಿಸುತ್ತಿದ್ದ ಪ್ರಮುಖ ಸಂತರಲ್ಲಿ ಒಬ್ಬರು ಮತ್ತು ಅವರ ಹಲವಾರು ಅದ್ಭುತ ಆಶೀರ್ವಾದಗಳು ಮತ್ತು ಕೆಲಸಗಳಿಂದಾಗಿ ಅನೇಕ ಜನರು ದೇವರೆಂದು ಪರಿಗಣಿಸಲ್ಪಟ್ಟ ದೇವರು “ಶ್ರೀ ರಾಘವೇಂದ್ರ ಸ್ವಾಮಿಗಳು”. ಇಂದಿಗೂ ರಾಘವೇಂದ್ರ ಸ್ವಾಮಿಯ ಭಕ್ತರು ಅವರ ಉಪಸ್ಥಿತಿಯನ್ನು ಮತ್ತು ಅನುಗ್ರಹವನ್ನು ಅನುಭವಿಸುತ್ತಾರೆ. ಶ್ರೀ ರಾಘವೇಂದ್ರ ಸ್ವಾಮಿಗಳು ಅನೇಕ ಪವಾಡಗಳನ್ನು ಮಾಡಿದ್ದಾರೆ. ರಾಘವೇಂದ್ರ ಸ್ವಾಮಿಗಳ ಪವಾಡ ಮತ್ತು ಆಸಕ್ತಿದಾಯಕ ವಿಚಾರಗಳು ಹೀಗಿವೆ. ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ. ನಿಮ್ಮ ಸಮಸ್ಯೆಗಳಾದ ಆರೋಗ್ಯ, ಸಂತಾನ, ಸಾಲದ ಬಾಧೆ, ಪ್ರೀತಿಯಲ್ಲಿ ನಂಬಿ…
ದಾವಣಗೆರೆ : ದಾವಣಗೆರೆ ಶಾಸಕ ಬಿಪಿ ಹರೀಶ್ ಎಸ್ಪಿ ಉಮಾ ಪ್ರಶಾಂತ್ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಆರೋಪ ಹಿನ್ನಲೆಯಲ್ಲಿ ಇದೀಗ ದಾವಣಗೆರೆ ನಗರದ ಕೆಟಿಜೆ ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಹೌದು ದಾವಣಗೆರೆ ಎಸ್ಪಿ ಉಮಾ ಪ್ರಶಾಂತ್ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿರುವ ಬಿಜೆಪಿ ಶಾಸಕ ಬಿಪಿ ಹರೀಶ್ಗೆ ಇದೀಗ ಸಂಕಷ್ಟ ಎದುರಾಗಿದೆ. ಸೆಪ್ಟೆಂಬರ್ 02ರಂದು ದಾವಣಗೆರೆ ನಗರದ ವರದಿಗಾರರ ಕೂಟದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಎಸ್ಪಿ ಉಮಾ ಪ್ರಶಾಂತ್ರನ್ನು ಉದ್ದೇಶಿಸಿ ಮಾತನಾಡುವಾಗ ಶಾಮನೂರು ಮನೆ ಶ್ವಾನದ ತರ ಆಡುತ್ತಾರೆ’ ಎಂದು ಶಾಸಕ ಬಿಪಿ ಹರೀಶ್ ಕೀಳು ಮಟ್ಟದ ಭಾಷೆ ಬಳಸಿದ್ದರು. ಈ ಸಂಬಂಧ ಎಸ್ಪಿ ಉಮಾ ಪ್ರಶಾಂತ್ ನೀಡಿದ ದೂರಿನ ಮೇರೆಗೆ ಕೆಟಿಜೆ ನಗರ ಪೊಲೀಸ್ ಠಾಣೆಯಲ್ಲಿ BNS 2023 (U/s-132,351(2),79) ಪ್ರಕರಣ ದಾಖಲಾಗಿದೆ. ಸದ್ಯ ಶಾಸಕರ ಆಕ್ಷೇಪಾರ್ಹ ಹೇಳಿಕೆಗೆ ಎಫ್ಐಆರ್ ದಾಖಲಾಗಿದೆ. ಈ ಕಾರಣಕ್ಕೆ ನಿನ್ನೆ ರಾತ್ರಿ ದಾವಣಗೆರೆ ನಗರದ ಕೆಟಿಜೆ ಪೊಲೀಸ್ ಠಾಣೆಯ ಸಿಬ್ಬಂದಿ ದಾವಣಗೆರೆ…
ಬೆಂಗಳೂರು : ಬೆಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ ಕಚೇರಿ ನಿವಾಸದ ಬಳಿ ಅಪಘಾತ ಸಂಭವಿಸಿದ್ದು, ಚಾಲಕನ ನಿಯಂತ್ರಣ ತಪ್ಪಿ ಗೂಡ್ಸ್ ವಾಹನ ರಸ್ತೆ ಬದಿಯ ಡಿವೈಡರ್ ಏರಿದ ಘಟನೆ ನಡೆದಿದೆ. ಅಂಚೆ ಇಲಾಖೆಗೆ ಸೇರಿದ ಗೂಡ್ಸ್ ವಾಹನ ಅಪಘಾತಕ್ಕೆ ಈಡಾಗಿದೆ. ಅದೃಷ್ಟವಶಾತ್ ಅಪಘಾತದಲ್ಲಿ ಯಾವುದೇ ರೀತಿಯ ಪ್ರಾಣಪಾಯ ಸಂಭವಿಸಿಲ್ಲ. ತಕ್ಷಣ ಅಲ್ಲಿಗೆ ಸಂಚಾರಿ ಠಾಣೆ ಪೋಲೀಸರು ಭೇಟಿ ನೀಡಿ ಗೂಡ್ಸ್ ವಾಹನ ತೆರವುಗೊಳಿಸಿದರು. ಘಟನೆಯ ಕುರಿತು ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.
ಚಿಕ್ಕಮಗಳೂರು : ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಆಯ್ಕೆ ವಿಚಾರವಾಗಿ ನಾವು ಮುಸ್ಲಿಂ ಎನ್ನುವ ಕಾರಣಕ್ಕೆ ಯಾರನ್ನು ವಿರೋಧ ಮಾಡಿಲ್ಲ ಎಂದು ಗಣೇಶ ವಿಸರ್ಜನೆ ಕಾರ್ಯಕ್ರಮದಲ್ಲಿ ಮಾಜಿ ಸಂಸದ ಪ್ರತಾಪ್ ಸಿಂಹ ಹೇಳಿಕೆ ನೀಡಿದರು. ಚಿಕ್ಕಮಗಳೂರು ಜಿಲ್ಲೆಯ ತರೀಕೆರೆಯಲ್ಲಿ ನಿನ್ನೆ ಸಂಜೆ ನಡೆದ ಕಾರ್ಯಕ್ರಮದಲ್ಲಿ ದಸರಾ ಹಿಂದೂ ಸಂಪ್ರದಾಯದ ಪ್ರತೀಕವಾಗಿ ಉತ್ಸವ ನಡೆಯಿತು. ಕಾರ್ಯಕ್ರಮದಲ್ಲಿ ಮಾತನಾಡಿದ ಪ್ರತಾಪ್ ಸಿಂಹ ಬಾನು ಮುಷ್ತಾಕ್ ದಸರಾ ಉದ್ಘಾಟನೆ ಬಗ್ಗೆ ಈ ಮೊದಲೇ ಪ್ರತಿಕ್ರಿಯೆ ನೀಡಿದ್ದೇನೆ. ಮೈಸೂರು ದಸರಾದಲ್ಲಿ 9 ದಿನಗಳ ಕಾಲ ಆರಾಧನೆ ನಡೆಯುತ್ತದೆ. ತಾಯಿ ಚಾಮುಂಡೇಶ್ವರಿಗೆ ವಿವಿಧ ಅಲಂಕಾರ ಮಾಡಲಾಗಿರುತ್ತದೆ. ಇದು ನೂರಕ್ಕೆ ನೂರು ಧಾರ್ಮಿಕ ಕಾರ್ಯಕ್ರಮ ಎಂದದ್ದೆ. ಯಾವನೋ ಘಜ್ನಿ, ಅಕ್ಬರ್ ಬಾಬರ್ ಬಂದಿದ್ದ ಅಂತ ಹೇಳಬೇಡಿ ಎಂದರು. ಬಾಬರ್ ಇಲ್ಲದೆ ಇದ್ದರೂ ಮುಷ್ತಾಕ್ ಅಂತವರು ನಮ್ಮ ಮಧ್ಯೆ ಇದ್ದಾರೆ ಅದಕ್ಕಾಗಿ ಎಚ್ಚರಿಕೆ ನೀಡಲು ನಾನು ಬಂದಿದ್ದೇನೆ. ದೇಶ ಉಳಿಸಿಕೊಳ್ಳಲು ಹಿಂದೂಗಳು ಜಾತಿ ಬಿಟ್ಟು ಒಂದಾಗಬೇಕು ನಾವು ಮುಸ್ಲಿಂ ಎನ್ನುವ…
ದಕ್ಷಿಣಕನ್ನಡ : ಧರ್ಮಸ್ಥಳ ಬಗ್ಗೆ ಅಪಪ್ರಚಾರ ಖಂಡಿಸಿ ನಾಳೆ ಧರ್ಮ ಜಾಗೃತಿ ಸಮಾವೇಶ ಹಮ್ಮಿಕೊಂಡಿದ್ದು, ಧರ್ಮಸ್ಥಳದಲ್ಲಿ ನಾಳೆ ಬೃಹತ್ ಧರ್ಮ ಜಾಗೃತಿ ಸಮಾವೇಶ ಆಯೋಜನೆ ಮಾಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳದಲ್ಲಿ ಧರ್ಮ ಜಾಗೃತಿ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಈ ಒಂದು ಸಮಾವೇಶದಲ್ಲಿ ದಕ್ಷಿಣ ಕನ್ನಡ, ಉಡುಪಿ, ಕೇರಳದ ಕಾಸರಗೋಡು ಜಿಲ್ಲೆಯ ದೇವಸ್ಥಾನ, ದೈವಸ್ಥಾನ, ಬಸದಿಗಳ ಪ್ರಮುಖರು ವಿವಿಧ ಸಂಘಟನೆ ಗಳ ಪ್ರಮುಖರು ಭಾಗಿಯಾಗಲಿದ್ದಾರೆ. ಧರ್ಮಸ್ಥಳ ಸಮಿತಿಯಿಂದ ಜಾಗೃತಿ ಸಮಾವೇಶ ಯೋಜನೆ ಮಾಡಲಾಗಿದೆ. ಧರ್ಮಸ್ಥಳದ ಅಮೃತವರ್ಷಿಣಿ ಸಭಾವವನದಲ್ಲಿ ಈ ಸಮಾವೇಶ ನಡೆಯಲಿದೆ.













