Author: ಸುರೇಶ್‌

"ಕನ್ನಡ ನ್ಯೂಸ್ ನೌ ಜಾಲತಾಣದ ಮುಖ್ಯ ಸಂಪಾದಕರಾದ ಸುರೇಶ್ ಅವರು ಕಳೆದ 4 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದಾರೆ. ಸರ್ಕಾರದ ಯೋಜನೆಗಳು, ಶಿಕ್ಷಣ ಮತ್ತು ಪ್ರಚಲಿತ ವಿದ್ಯಮಾನಗಳನ್ನು ಸಾಮಾನ್ಯ ಜನರಿಗೂ ಅರ್ಥವಾಗುವಂತೆ ವಿವರಿಸುವುದು ಇವರ ವಿಶೇಷತೆ. ಈ ಮೊದಲು ವಿವಿಧ ವೆಬ್‌ಸೈಟ್‌ಗಳಲ್ಲಿ ನಾಗರಿಕ ಸಮಸ್ಯೆಗಳ ಬಗ್ಗೆ ವರದಿಗಾರರಾಗಿ ಕೆಲಸ ಮಾಡಿರುವ ಇವರು, ಸಮಯೋಚಿತ ಹಾಗೂ ವಿಶ್ವಾಸಾರ್ಹ ಮಾಹಿತಿ ನೀಡುವ ಮೂಲಕ ಓದುಗರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಡಿಜಿಟಲ್ ಸಾಕ್ಷರತೆ ಇವರ ನೆಚ್ಚಿನ ವಿಷಯಗಳಲ್ಲೊಂದು

ದಾವಣಗೆರೆ : ಸಾಹಿತಿ ಬಿಟಿ ಲಲಿತಾ ನಾಯಕ್ ಅವರು ವಿವಾದಾತ್ಮಕ ಹೇಳಿಕೆ ಒಂದನ್ನು ನೀಡಿದ್ದಾರೆ. ರಾಮಾಯಣ ಮಹಾಕಾವ್ಯದಲ್ಲಿರುವ ಶ್ರೀರಾಮ, ಲಕ್ಷ್ಮಣ ಹಾಗೂ ರಾವಣ ಆದರ್ಶ ವ್ಯಕ್ತಿಗಳಲ್ಲ ಕ್ರೂರಿಗಳು ಎಂದು ಬಂಡಾಯ ಸಾಹಿತಿ ಬಿ.ಟಿ ಲಲತಾ ನಾಯಕ್‌ ವಿವಾದಾತ್ಮಕ ಹೇಳಿಕೆ ನೀಡಿದರು. ದಾವಣಗೆರೆಯ ಎ.ವಿ.ಕೆ ಮಹಿಳಾ ಕಾಲೇಜು ಸಭಾಂಗಣದಲ್ಲಿಂದು ನಡೆದ ವಿಚಾರ ಸಂಕಿರಣದ ಸಮಾರೋಪದಲ್ಲಿ ಅವರು ಮಾತನಾಡಿದರು. ರಾಮಾಯಣ ಮಹಾಕಾವ್ಯದಲ್ಲಿರುವ ಶ್ರೀರಾಮ, ಲಕ್ಷ್ಮಣ ಹಾಗೂ ರಾವಣ ಕ್ರೂರಿಗಳು. ಶೂರ್ಪನಖಿಯ ಮೂಗು ಕತ್ತರಿಸಿದ ಲಕ್ಷ್ಮಣ, ಸೀತೆಯ ಮೇಲೆ ಸಂಶಯ ವ್ಯಕ್ತಪಡಿಸಿ ನಿರ್ಜನ ಕಾಡಿಗಟ್ಟಿದ ಶ್ರೀರಾಮ ಆದರ್ಶರಾಗಲು ಸಾಧ್ಯವಿಲ್ಲ. ಸೀತೆಯನ್ನ ಅಪಹರಿಸಿ ಜೀವನ ಹಾಳು ಮಾಡಿದ ರಾವಣ ಕೂಡ ಕ್ರೂರಿಯೇ ಭಕ್ತಿಯ ಹೆಸರಿನಲ್ಲಿ ಆದರ್ಶರಂತೆ ಬಿಂಬಿಸಲಾಗಿದೆ ಎಂದು ಆಕ್ಷೇಪಿಸಿದರು. ದೇಗುಲಗಳು ಜನರನ್ನ ಮೌಢ್ಯತೆಗೆ ತಳ್ಳುತ್ತಿವೆ. ಗ್ರಂಥಾಲಯಗಳು ಜ್ಞಾನಾರ್ಜನೆಯತ್ತ ಕರೆದೊಯ್ಯುತ್ತವೆ. ಮೌಢ್ಯಗಳಿಂದ ಹೊರಬರಲು ಶಿಕ್ಷಣವೇ ಪರಿಹಾರ. ಶಾಂತಿಯ ಪ್ರತೀಕವಾಗಿರುವ ಬುದ್ಧನ ಕೈಯಲ್ಲಿ ಕತ್ತಿ, ಗುರಾಣಿ, ಖಡ್ಗ ಏನೂ ಇಲ್ಲ. ಮಹಾತ್ಮ ಗಾಂಧೀಜಿ ಕೈಯಲ್ಲಿ ಚರಕ ಮಾತ್ರ ಇದೆ.…

Read More

ಬೀದರ್ : ಬೀದರ್ ನಲ್ಲಿ ಭೀಕರ ಅಗ್ನಿ ದುರಂತವೊಂದು ಸಂಭವಿಸಿದ್ದು, ಶಾರ್ಟ್ ಸರ್ಕ್ಯೂಟ್ ನಿಂದಾಗಿ ಮನೆ ಒಂದು ಸಂಪೂರ್ಣವಾಗಿ ಹೊತ್ತಿ ಉರಿದಿರುವ ಘಟನೆ ಬೀದರ್ ತಾಲೂಕಿನ ಅಲಿಯಂಬರ್ ಗ್ರಾಮದಲ್ಲಿ ಈ ಒಂದು ದುರ್ಘಟನೆ ಸಂಭವಿಸಿದೆ. ದೇವೇಂದ್ರ ವೈಜ್ಯನಾಥ್ ಎಂಬುವರ ಮನೆ ಸಂಪೂರ್ಣವಾಗಿ ಬೆಂಕಿಗೆ ಆಹುತಿ ಆಗಿದೆ. ಅವಘಡದಲ್ಲಿ ಗೃಹ ಉಪಯೋಗಿ ವಸ್ತುಗಳು ಸುಟ್ಟು ಬಸ್ಮವಾಗಿವೆ. ಕುಟುಂಬದವರು ಹೊಲಕ್ಕೆ ಹೋಗಿದ್ದಾಗ ಶಾರ್ಟ್ ಸರ್ಕ್ಯೂಟ್ ನಿಂದ ಈ ಒಂದು ಅಗ್ನಿ ಅವಘಡ ಸಂಭವಿಸಿದೆ.

Read More

ಬೆಂಗಳೂರು : ಬೆಂಗಳೂರಿನಲ್ಲಿ 7.11 ಕೋಟಿ ರೂಪಾಯಿ ದರೋಡೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪ್ರಕರಣದಲ್ಲಿ ಭಾಗಿಯಾಗಿದ ಕಾನ್ಸ್ಟೇಬಲ್ ನನ್ನು ಇದೀಗ ಅಮಾನತುಗೊಳಿಸಲಾಗಿದೆ. ಪೊಲೀಸ್ ಕಾನ್ಸ್ಟೇಬಲ್ ಅಣ್ಣಪ್ಪ ನಾಯಕ್ ಸಸ್ಪೆಂಡ್ ಆಗಿದ್ದಾನೆ. ಸಸ್ಪೆಂಡ್ ಮಾಡಿ ಪೂರ್ವ ವಿಭಾಗದ ಡಿಸಿಪಿ ದೇವರಾಜ್ ಆದೇಶ ಹೊರಡಿಸಿದ್ದಾರೆ. ಅಣ್ಣಪ್ಪ ನಾಯಕ್ ಗೋವಿಂದಪುರ ಪೊಲೀಸ್ ಠಾಣೆಯಲ್ಲಿ ಕಾನ್ಸ್ಟೇಬಲ್ ಆಗಿ ಕೆಲಸ ಮಾಡುತ್ತಿದ್ದ. ದರೋಡೆ ಪ್ರಕರಣದಲ್ಲಿ ಈತ ಕೂಡ ಭಾಗಿಯಾಗಿದ್ದರ ಹಿನ್ನೆಲೆಯಲ್ಲಿ ಸಸ್ಪೆಂಡ್ ಮಾಡಲಾಗಿದೆ.

Read More

ಬೆಂಗಳೂರು : ಇಂದು ಶ್ರೀಲಂಕಾದಲ್ಲಿ ತೊಚ್ಚಲ ವಿಶ್ವಕಪ್ ಕಿರೀಟವನ್ನು ಭಾರತೀಯ ಅಂಧ ಮಹಿಳಾ ತಂಡ ಮೊಟ್ಟ ಮೊದಲ ಬಾರಿಗೆ ಗೆದ್ದು ಬಿಗಿತು. ಭಾರತದ ಅಂಧ ಮಹಿಳೆಯರ ತಂಡಕ್ಕೆ ಸಿಎಂ ಸಿದ್ದರಾಮಯ್ಯ ಶುಭಾಶಯ ತಿಳಿಸಿದ್ದಾರೆ ಈ ಕುರಿತು ಸಮಾಜ ಎಕ್ಸ್ ನಲ್ಲಿ ಪೋಸ್ಟ್ ಮಾಡಿ ಶುಭಾಶಯ ಹೇಳಿದ್ದಾರೆ. ಇಂದು ಶ್ರೀಲಂಕಾದಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ನೇಪಾಳವನ್ನು ಬಗ್ಗುಬಡಿದು ಚೊಚ್ಚಲ ವಿಶ್ವಕಪ್ ಕಿರೀಟ ಮುಡಿಗೇರಿಸಿಕೊಂಡ ಭಾರತದ ಅಂಧ ಮಹಿಳೆಯರ ತಂಡಕ್ಕೆ ಅಭಿನಂದನೆಗಳು. ದೈಹಿಕ ಸವಾಲನ್ನು ಮೆಟ್ಟಿನಿಂತು ಭಾರತದ ಅಂಧ ಮಹಿಳಾ ತಂಡ ಮಾಡಿರುವ ಸಾಧನೆ ಕೋಟ್ಯಂತರ ದೇಶವಾಸಿಗಳಿಗೆ ಹೆಮ್ಮೆ ಮತ್ತು ಸ್ಪೂರ್ತಿಯಾಗಿದೆ.ಸಮಸ್ತ ಭಾರತೀಯರ ಪಾಲಿಗೆ ಇದೊಂದು ಐತಿಹಾಸಿಕ ದಿನ ಎಂದು ಪೋಸ್ಟ್ ಮಾಡಿದ್ದಾರೆ. https://twitter.com/siddaramaiah/status/1992551497108975824?t=4WqeO0_jovYM5EXcWgxmiQ&s=19

Read More

ಬೆಂಗಳೂರು : ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರವಾಗಿ ಭಾರಿ ಚರ್ಚೆ ನಡೆಯುತ್ತಿದ್ದು, ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ನಡುವೆ ಮುಖ್ಯಮಂತ್ರಿ ಸ್ಥಾನಕ್ಕೆ ತೀವ್ರ ಜಟಾಪಟಿ ನಡೆಯುತ್ತಿದೆ. ಇದರ ಮಧ್ಯ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರನ್ನು ಸಿಎಂ ಸಿದ್ದರಾಮಯ್ಯ ನಿನ್ನೆ ಭೇಟಿಯಾಗಿದ್ದು ತೀವ್ರ ಕುತೂಹಲಕ್ಕೆ ಕಾರಣವಾಗಿತ್ತು. ಇನ್ನು ಸಿಎಂ ಬಲಾವಣೆ ವಿಚಾರವಾಗಿ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಪ್ರತಿಕ್ರಿಯೆ ನೀಡಿದ್ದು ಸಿದ್ದರಾಮಯ್ಯ ಅವರನ್ನು ತೆಗೆದರೆ ರಾಜ್ಯದಲ್ಲಿ ದೊಡ್ಡ ಕ್ರಾಂತಿಯೇ ಆಗುತ್ತದೆ. ದೊಡ್ಡ ಕ್ರಾಂತಿ, ಹೋರಾಟ ಆಗುತ್ತದೆ. ಅವರಿಗೋಸ್ಕರ ಸಾವಿರಾರು ಜನ ಜೈಲಿಗೆ ಹೋಗಲು ಸಿದ್ದರಿದ್ದಾರೆ. ಸಿಎಂ ಸ್ಥಾನದಿಂದ ತೆಗೆಯುವುದು ಅಷ್ಟು ಸುಲಭವಲ್ಲ ಸಿದ್ದರಾಮಯ್ಯ ಅವರನ್ನು ಏಕೆ ತೆಗೆಯಬೇಕು ಕಾರಣವೇನು? ಎಂದು ಪ್ರಶ್ನಿಸಿದ್ದಾರೆ. ಸಿದ್ದರಾಮಯ್ಯ ಅವರನ್ನು ತೆಗೆದ್ರೆ ಮತ್ತೆ ಆ ಸ್ಥಾನಕ್ಕೆ ಅವರಂತಹ ಒಬ್ಬ ವ್ಯಕ್ತಿ ಕಾಂಗ್ರೆಸ್ ನಲ್ಲೂ ಇಲ್ಲ, ಬಿಜೆಪಿಯಲ್ಲೂ ಇಲ್ಲ ಮತ್ತು ಜೆಡಿಎಸ್ ನಲ್ಲೂ ಇಲ್ಲ. ಸಿದ್ದರಾಮಯ್ಯ ಅವರನ್ನು ಸಿಎಂ ಸ್ಥಾನದಿಂದ ತೆಗೆಯುವುದು ಅಷ್ಟು ಸುಲಭವಲ್ಲ. ಸಿಎಂ…

Read More

ಬೆಂಗಳೂರು : ಬೆಂಗಳೂರಿನಲ್ಲಿ ನಿರ್ಜನ ಪ್ರದೇಶದಲ್ಲಿ ಅರೆಸುಟ್ಟ ಸ್ಥಿತಿಯಲ್ಲಿ ಅಪರಿಚಿತನ ಶವ ಪತ್ತೆಯಾಗಿದೆ. ಬೆಂಗಳೂರಿನ ಮಾದನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಗಂಗೊಂಡನಹಳ್ಳಿಯಲ್ಲಿ ಅಪರಿಚಿತನ ಶವ ಅರೆಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ. ಸುಮಾರು 30 ವರ್ಷದ ವ್ಯಕ್ತಿಯ ಮೃತದೇಹ ಇರಬಹುದು ಎಂದು ಮಾಹಿತಿ ತಿಳಿದು ಬಂದಿದೆ. ಬೇರೆ ಕಡೆ ಕೊಂದು ಇಲ್ಲಿ ತಂದು ಮೃತದೇಹ ಬಿಸಾಡಿರಬಹುದು. ಶವಕ್ಕೆ ಹಗ್ಗದಿಂದ ಕಟ್ಟಿರುವ ಗುರುತು ಪತ್ತೆಯಾಗಿದ್ದು ಸ್ಥಳಕ್ಕೆ ಬೆಂಗಳೂರು ಗ್ರಾಮಾಂತರ ಎಸ್.ಪಿ ಸಿ.ಕೆ ಬಾಬಾ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಸದ್ಯ ಅರೆಸುಟ್ಟ ಸ್ಥಿತಿಯಲ್ಲಿ ಶವ ಪತ್ತೆಯಾದ ಸ್ಥಳದಲ್ಲಿ ಪೊಲೀಸರು ತಪಾಸಣೆ ನಡೆಸುತ್ತಿದ್ದಾರೆ. ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮರಣೋತ್ತರ ಪರೀಕ್ಷೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ಶವ ಶಿಫ್ಟ್ ಮಾಡಲಾಗಿದೆ.

Read More

ಬೆಂಗಳೂರು : ಒಂದು ಕಡೆ ರಾಜ್ಯದಲ್ಲಿ ಸಿಎಂ ಕುರ್ಚಿಗಾಗಿ ಸಿದ್ದರಾಮಯ್ಯ ಡಿಕೆ ಶಿವಕುಮಾರ್ ನಡುವೆ ಜಟಾಪಟಿ ನಡೆಯುತ್ತಿದ್ದರೆ, ಮತ್ತೊಂದು ಕಡೆ ಸದ್ಯಕ್ಕೆ ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ಇಲ್ಲ ನಾನೇ ಬಿಜೆಪಿ ರಾಜ್ಯಾಧ್ಯಕ್ಷನಾಗಿ ಮುಂದುವರಿಯುತ್ತೇನೆ ಎಂದು ಬಿ ವೈ ವಿಜಯೇಂದ್ರ ಸ್ಪಷ್ಟಪಡಿಸಿದ್ದಾರೆ. ಈ ವಿಚಾರವಾಗಿ ಮಾತನಾಡಿದ ಅವರು, ಬಿಹಾರ ಚುನಾವಣೆ ಫಲಿತಾಂಶದ ಬಳಿಕ ರಾಜ್ಯಾಧ್ಯಕ್ಷರ ಆಯ್ಕೆ ಬಾಕಿ ಉಳಿದ ರಾಜ್ಯಗಳ ಬಗ್ಗೆ ಬಿಜೆಪಿ ಗಮನ ಹರಿಸಲಿದೆ ಎಂಬ ವರದಿಗಳ ಬೆನ್ನಲ್ಲೇ, ರಾಜ್ಯದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ವಿಚಾರ ಸದ್ಯಕ್ಕೆ ಇಲ್ಲ.ಆ ಮೂಲಕ ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ಕುರಿತ ಉಹಾಪೋಹಗಳಿಗೆ ತೆರೆ ಎಳೆದಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷನಾಗಿ ನಾನೇ ಮುಂದುವರಿಯುತ್ತೇನೆ. ಪಕ್ಷ ಸಂಘಟನೆಯ ಉದ್ದೇಶದಿಂದ ಎಲ್ಲರನ್ನೂ ಭೇಟಿಯಾಗುತ್ತಿದ್ದೇನೆ. ಏನೇ ಸಮಸ್ಯೆ, ಕಷ್ಟ ಬಂದರೂ ಸಹಿಸಿಕೊಂಡು ಪಕ್ಷ ಸಂಘಟಿಸುವ ಕಾರ್ಯದಲ್ಲಿ ತೊಡಗಿಸಿಕೊಳ್ಳುತ್ತೇನೆ. ಕಾರ್ಯಕರ್ತರ ಮಧ್ಯೆ ದುಡಿಯುತ್ತಿದ್ದೇನೆ. ಸಣ್ಣ, ಪುಟ್ಟ ಸಮಸ್ಯೆಗಳಿಗೆ ತಲೆ ಕೆಡಿಸಿಕೊಳ್ಳುವುದಿಲ್ಲ. ನನ್ನ ಕೆಲಸವನ್ನು ನಾನು ಮಾಡಿಕೊಂಡು ಹೋಗುತ್ತೇನೆ ಎಂದರು.

Read More

ಬೆಂಗಳೂರು : ಸದ್ಯ ರಾಜ್ಯ ಕಾಂಗ್ರೆಸ್ ನಲ್ಲಿ ಆಗುತ್ತಿರುವ ಬೆಳವಣಿಗೆಯ ಕುರಿತು AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮೊಟ್ಟಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದು ಸದ್ಯಕ್ಕೆ ನನ್ನ ಹತ್ತಿರ ಹೇಳೋಕೆ ಏನೂ ಇಲ್ಲ ಎಂದು ಸ್ಪಷ್ಟಪಡಿಸಿದರು. ನಿನ್ನೆ ಸಿಎಂ ಸಿದ್ದರಾಮಯ್ಯ ರಾತ್ರಿ 8 ಗಂಟೆಗೆ ಬೆಂಗಳೂರಿನ ಸದಾಶಿವನಗರ್ದಲ್ಲಿರುವ ಖರ್ಗೆ ನಿವಾಸಕ್ಕೆ ಭೇಟಿ ನೀಡಿ ಹಲವು ವಿಚಾರಗಳು ಕುರಿತು ಚರ್ಚೆ ಮಾಡಿದರು. ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಖರ್ಗೆ, ಏನೇ ಇದ್ದರೂ ಹೈಕಮಾಂಡ್ ಮಾಡುತ್ತೆ , ರಾಜ ಕಾಂಗ್ರೆಸ್ ಬೆಳವಣಿಗೆ ಬಗ್ಗೆ ಖರ್ಗೆ ಮೊದಲ ಪ್ರತಿಕ್ರಿಯೆ ನೀಡಿದ್ದು, ನನ್ನ ಹತ್ತಿರ ಹೇಳೋಕೆ ಏನೂ ಇಲ್ಲ. ಯಾವ ವಿಚಾರದಲ್ಲೂ ಹೇಳೋಕೆ ಏನೂ ಇಲ್ಲ ಸದ್ಯದ ಬೆಳವಣಿಗೆ ಬಗ್ಗೆ ನಾನು ಏನು ಹೇಳಲ್ಲ ಎಂದು ಮಲ್ಲಿಕಾರ್ಜುನ ಖರ್ಗೆ ಯಾವುದೇ ವಿಚಾರವನ್ನು ಬಿಟ್ಟು ಕೊಡದೆ ಎಲ್ಲವನ್ನು ಹೈಕಮಾಂಡ್ ತೀರ್ಮಾನ ಮಾಡುತ್ತೆ ಅಂತ ನುಣಿಚಿಕೊಂಡ ಪ್ರಸಂಗ ನಡೆಯಿತು.

Read More

ಮೈಸೂರು : ಕಾಂಗ್ರೆಸ್ ಶಾಸಕರನ್ನೇ ಖರೀದಿ ಮಾಡಲು 50 ಕೋಟಿ ಹಣ, ಒಂದು ಫ್ಲಾಟ್ ಹಾಗೂ ಫಾರ್ಚುನರ್ ಕಾರು ನೀಡಲಾಗುತ್ತದೆ ಎಂದು ಬಿಜೆಪಿ ಎಂಎಲ್ಸಿ ಛಲವಾದಿ ನಾರಾಯಣಸ್ವಾಮಿ ಗಂಭೀರವಾಗಿ ಆರೋಪಿಸಿದ್ದರು . ಇವರ ಒಂದು ಈ ಹೇಳಿಕೆ ಬೆನ್ನಲ್ಲೇ ಕೇಂದ್ರ ಸಚಿವ ವಿ.ಸೋಮಣ್ಣ ಸಹ ಕಳೆದ ಒಂದು ವರ್ಷದಿಂದ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಕುದುರೆ ವ್ಯಾಪಾರ ಮಾಡುತ್ತಿದ್ದಾರೆ ಎಂದು ಸ್ಪೋಟಕವಾದ ಆರೋಪ ಮಾಡಿದರು. ಮೈಸೂರಿನಲ್ಲಿ ಮಾತನಾಡಿದ ಕೇಂದ್ರ ಸಚಿವ ವಿ.ಸೋಮಣ್ಣ ಕರ್ನಾಟಕದ ಕಾಂಗ್ರೆಸ್ ನಲ್ಲಿ ಕುದುರೆ ವ್ಯಾಪಾರ ಶುರುವಾಗಿದೆ. ಕಳೆದು 1 ವರ್ಷದಿಂದಲೇ ಕುದುರೆ ವ್ಯಾಪಾರ ಶುರುವಾಗಿದೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಕುದುರೆ ವ್ಯಾಪಾರ ಮಾಡುತ್ತಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಅಧಿಕಾರದ ಹುಚ್ಚು ಹಿಡಿದಿದೆ ಇದೊಂದು ಲಫಂಗ ಸರ್ಕಾರ 2013ರಲ್ಲಿ ಇದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಈಗ ಕಾಣುತ್ತಿಲ್ಲ. ಇವಾಗ ಇರೋದು ಭ್ರಷ್ಟಾಚಾರದ ಸಿದ್ದರಾಮಯ್ಯ. ಕಾಂಗ್ರೆಸ್ನವರು ನವೆಂಬರ್ ಕ್ರಾಂತಿ ಮತ್ತು ಬ್ರಾಂತಿಯಲ್ಲಿ ಮುಳುಗಿದ್ದಾರೆ. ಇವರಿಗೆ ಅಧಿಕಾರದ…

Read More

ಬೆಂಗಳೂರು : ನಾನು ಯಾವಾಗ್ಲು ರೇಸ್ ಅಲ್ಲಿ ಇರ್ತೀನಿ. 2013ರಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷನಾಗಿದ್ದಾಗ, ಎಲ್ಲರೂ ಸೇರಿ ಪಕ್ಷವನ್ನು ಅಧಿಕಾರಕ್ಕೆ ತಂದಿದ್ದೆವು. ಆದರೆ ನಾನು ಸೋತೆ. ಒಂದು ವೇಳೆ ನಾನು ಗೆದ್ದಿದ್ದರೆ ಏನಾಗುತ್ತಿತ್ತು ಗೊತ್ತಿಲ್ಲ ಎಂದು ಗೃಹ ಸಚಿವ ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದಾರೆ. ಸದಾಶಿವನಗರದ ತಮ್ಮ ನಿವಾಸದಲ್ಲಿ, ನಗರ ಪೊಲೀಸ್ ಆಯುಕ್ತರಾದ ಸೀಮಂತ್ ಕುಮಾರ್ ಸಿಂಗ್, ಜಂಟಿ ಪೊಲೀಸ್ ಆಯುಕ್ತರಾದ ಅಜಯ್ ಹಿಲೋರಿ, ವಂಶಿಕೃಷ್ಣ ಅವರೊಂದಿಗೆ ಎಟಿಎಂ ಹಣ ದರೋಡೆ ಪ್ರಕರಣದ ತನಿಖೆಯ ಕುರಿತು ಚರ್ಚಿಸಿದರು. ಬಳಿಕ ಮಾಧ್ಯಮದವರೊಂದಿಗೆ ಅವರು ಮಾತನಾಡಿರು. ರಾಜ್ಯ ಕಾಂಗ್ರೆಸ್ ನಲ್ಲಿ ಸಿಎಂ ಬದಲಾವಣೆ ಬಗ್ಗೆ ಚರ್ಚೆಯ ವಿಚಾರಕ್ಕೆ ಸಂಬಂಧಪಟ್ಟಂತೆ, ನಾನು ಕೂಡ ಸಿಎಂ ಆಕಾಂಕ್ಷಿ ನನಗೂ ಸಿಎಂ ಆಗುವ ಆಸೆ ಇದೆ. ಆದರೆ ಈ ಸಂದರ್ಭ ಆ ರೀತಿ ಇಲ್ಲ ಸಿಎಂ ಬದಲಾವಣೆಯನ್ನು ವಿಚಾರ ಬಂದಾಗ ಆ ಕುರಿತು ವಿಚಾರ ಮಾಡೋಣ ಎಂದು ಬೆಂಗಳೂರಿನಲ್ಲಿ ಗೃಹ ಸಚಿವ ಜಿ ಪರಮೇಶ್ವರ್ ಹೇಳಿಕೆ ನೀಡಿದರು.…

Read More