Author: kannadanewsnow05

ಶಿವಮೊಗ್ಗ : ಕೌಟುಂಬಿಕ ಕಲಹಕ್ಕೆ ಬೇಸತ್ತು ಮಹಿಳೆಯೋರ್ವಳು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಹಬ್ಬಕ್ಕೆ ತವರು ಮನೆಗೆ ಬಂದಿದ್ದಾಗ ಮಹಿಳೆ ಆತ್ಮಹತ್ಯೆಗೆ ಶರಣಾಗಿರುವ ಘಟನೇ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರ ಎಂಬ ಗ್ರಾಮದಲ್ಲಿ ನಡೆದಿದೆ. ಮನೆಯ ಜಗುಲಿಯಲ್ಲಿ ರಂಜಿತ (28) ಎನ್ನುವ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದ್ದು, ಈ ಮೊದಲು ಮದುವೆಯಾಗಿ ರಂಜಿತ ವಿಚ್ಛೇದನ ಪಡೆದುಕೊಂಡಿದ್ದರು. ಸಾಗರದ ಆನಂದಪುರದಲ್ಲಿ ಗ್ರಾಮದಲ್ಲಿ ಘಟನೆ ನಡೆದಿದ್ದು, ಎರಡನೇ ಮದುವೆ ಕೂಡ ಆಗಿದ್ದರು ಕಳೆದ ನಾಲ್ಕು ತಿಂಗಳ ಹಿಂದೆ ಅಷ್ಟೇ ಎರಡನೇ ಮದುವೆ ಆಗಿದ್ದರು. ಇತ್ತೀಚಿಗೆ ಅಷ್ಟೇ ಪತಿ ಪತಿಯ ಮಧ್ಯೆ ಜಗಳ ನಡೆದಿತ್ತು. ಹಾಗಾಗಿ ತವರು ಮನೆಗೆ ಹಬ್ಬಕ್ಕೆ ಎಂದು ಬಂದಾಗ ರಂಜಿತ ಕೌಟುಂಬಿಕ ಕಲಹಕ್ಕೆ ಬೇಸತ್ತು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ.

Read More

ಬೆಂಗಳೂರು : ಚೊಚ್ಚಲ ಐಪಿಎಲ್ ಟ್ರೋಫಿ ಗೆದ್ದ ಹಿನ್ನೆಲೆಯಲ್ಲಿ ಕಳೆದ ಜೂನ್ 4 ರಂದು ಬೆಂಗಳೂರಲ್ಲಿ ಆರ್‌ಸಿಬಿ ತಂಡಕ್ಕೆ ಅಭಿನಂದನಾ ಸಮಾರಂಭ ಹಮ್ಮಿಕೊಳ್ಳಲಾಗಿತ್ತು. ಈ ಒಂದು ಕಾರ್ಯಕ್ರಮದಲ್ಲಿ ಅಪಾರ ಜನಸಂಖ್ಯೆಯಿಂದ ಕಾಲ್ತುಳಿತದಲ್ಲಿ 11 ಜನ ಆರ್‌ಸಿಬಿ ಅಭಿಮಾನಿಗಳು ಸಾವನ್ನಪ್ಪಿದ್ದರು. ಕಾಲ್ತುಳಿತದಿಂದ ಆರ್‌ಸಿಬಿಯ 11 ಅಭಿಮಾನಿಗಳು ಸಾವು ಪ್ರಕರಣಕ್ಕೆ ಸಂಬಂಧಪಟ್ಟಂತೆ 3 ತಿಂಗಳ ಬಳಿಕ ಅಭಿಮಾನಿಗಳಿಗೆ ವಿರಾಟ್ ಕೊಹ್ಲಿ ಭಾವುಕ ಸಂದೇಶ ರವಾನೆ ಮಾಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಆರ್ ಸಿ ಬಿ ಸೋಶಿಯಲ್ ಮೀಡಿಯಾ ಪೇಜ್ ಮೂಲಕ ವಿರಾಟ್ ಕೊಹ್ಲಿ ಪೋಸ್ಟ್ ಹಂಚಿಕೊಂಡಿದ್ದು, ಜೂನ್ 4ರ ದಿನ ಅತ್ಯಂತ ಸಂತೋಷದಾಯಕ ಕ್ಷಣವಾಗಿರಬೇಕಾಗಿತ್ತು. ಆದರೆ ದುರಂತವಾಗಿ ಮಾರ್ಪಟ್ಟಿದೆ. ಆ ದಿನ ನಮ್ಮ ಹೃದಯ ಒಡೆದಂತಾಗಿದೆ. ನಾವು ಕಳೆದುಕೊಂಡವರ ಕುಟುಂಬಗಳಿಗಾಗಿ ಮತ್ತು ಗಾಯಗೊಂಡ ನಮ್ಮ ಅಭಿಮಾನಿಗಳಿಗಾಗಿ ಯೋಚಿಸುತ್ತಿದ್ದೇನೆ ಮತ್ತು ಪ್ರಾರ್ಥಿಸುತ್ತಿದ್ದೇನೆ. ನಿಮ್ಮ ನಷ್ಟವು ಈಗ ನಮ್ಮ ಕಥೆಯ ಭಾಗವಾಗಿದೆ. ಇನ್ಮುಂದೆ ಎಚ್ಚರಿಕೆ ಗೌರವ ಜವಾಬ್ದಾರಿಯಿಂದ ಮುಂದುವರಿಯುತ್ತೇವೆ ಎಂದು ಸಾಮಾಜಿಕ ಜಾಲತಾಣದಲ್ಲಿ ಆರ್‌ಸಿಬಿ ಆಟಗಾರ ಕೊಹ್ಲಿ ಪೋಸ್ಟ್…

Read More

ಮಂಡ್ಯ : ಮಂಡ್ಯದಲ್ಲಿ ಘೋರ ದುರಂತವೊಂದು ನಡೆದಿದ್ದು, ಬಸ್ ನಿಲ್ದಾಣದ ಬಳಿಯೇ ವ್ಯಕ್ತಿಯ ಮೇಲೆ KSRTC ಬಸ್ ಒಂದು ಹರಿದ ಘಟನೆ ಮಂಡ್ಯ ಜಿಲ್ಲೆಯ KR ಪೇಟೆ ತಾಲೂಕಿನಲ್ಲಿ ನಡೆದಿದೆ. ಘಟನೆಯಲ್ಲಿ ವ್ಯಕ್ತಿಗೆ ಗಂಭೀರ ಗಾಯಗಳಾಗಿದ್ದು, ಮಂಡ್ಯದ K.R ಪೇಟೆ ಪಟ್ಟಣದ ಬಸ್ ನಿಲ್ದಾಣದ ಬಳಿ ಘಟನೆ ನಡೆದಿದೆ. ಗಾಯಗೊಂಡ ವ್ಯಕ್ತಿಯ ಹೆಸರು ತಿಳಿದು ಬಂದಿಲ್ಲ. ತಕ್ಷಣ ಸ್ಥಳೀಯರಿಂದ ಗಾಯಗೊಂಡ ವ್ಯಕ್ತಿ ಆಸ್ಪತ್ರೆಗೆ ದಾಖಲು ಮಾಡಲಾಯಿತು. ಕೆ.ಆರ್.ಪೇಟೆ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Read More

ಮಂಡ್ಯ : ಸಕ್ಕರೆನಾಡು ಮಂಡ್ಯದಲ್ಲಿ ವಿಚಿತ್ರ ಪ್ರಕರಣವೊಂದು ನಡೆದಿದ್ದು, ಆಸ್ತಿಗಾಗಿ ಮಗನಿಂದಲೇ ತಂದೆಗೆ ಬ್ಲಾಕ್ ಮೇಲ್ ಮಾಡಿದ್ದಾನೆ. ವಾಟ್ಸಪ್ ಗ್ರೂಪ್ ಗೆ ಅಪ್ಪನ ಅಶ್ಲೀಲ ಸಂದೇಶ ಕಳಿಸಿ ತಂದೆಗೆ ಹಣಕ್ಕೆ ಬೇಡಿಕೆ ಇಟ್ಟಿದ್ದಾನೆ. ಮಗನ ವಿರುದ್ದ ರೊಚ್ಚಿಗೆದ್ದ ತಂದೆಯಿಂದ ಪೊಲೀಸರಿಗೆ ದೂರು ನೀಡಿದ್ದು, ಸದ್ಯ ಬೆದರಿಕೆ ಹಾಕಿದ ಆರೋಪಿ ಮಗನನ್ನು ಬಂಧಿಸಿ ಪೊಲೀಸರು ಜೈಲಿಗಟ್ಟಿದ್ದಾರೆ. ಮಂಡ್ಯ ಜಿಲ್ಲೆಯ ಮದ್ದೂರು ಪಟ್ಟಣದಲ್ಲಿ ವಿಚಿತ್ರ ಘಟನೆ ನಡೆದಿದೆ. ಮದ್ದೂರಿನ ರಿಯಲ್ ಎಸ್ಟೇಟ್ ಉದ್ಯಮಿ ಸತೀಶ್ ಗೆ ಮಗನಿಂದಲೇ ಬೆದರಿಕೆ ಹಾಕಿದ್ದು, ಮದ್ದೂರು ಸೇರಿದಂತೆ ರಾಜ್ಯದ ಹಲವೆಡೆ ರಾಣಿ ಐಶ್ವರ್ಯ ಡೆವಲರ್ಸ್ ಹೆಸರಲ್ಲಿ ರಿಯಲ್ ಎಸ್ಟೇಟ್ ಉದ್ಯಮ ನಡೆಸ್ತಿರೋ ಉದ್ಯಮಿ ಸತೀಶ್‌. ಈತನ‌ ಮಗ ಪ್ರಣವ್ (25) ತಂದೆಗೆ ಬ್ಲಾಕ್ ಮೇಲ್ ಮಾಡಿದ ಕಿರಾತಕ ಮಗ ಎಂದು ತಿಳಿದುಬಂದಿದೆ. ದುಶ್ಚಟಗಳಿಗೆ ಬಲಿಯಾಗಿ ವಿರೋಧಿಗಳ ಜೊತೆ ಸೇರಿ ಆಸ್ತಿಗಾಗಿ ತಂದೆ ಜೊತೆ ಕಿರಿಕ್ ಮಾಡಿಕೊಂಡಿದ್ದಾನೆ. ಈಗಾಗಲೇ ತಂದೆಯ ಕೋಟ್ಯಾಂತರ ರೂ ಕಳೆದು ಮತ್ತೆ ಹಣಕ್ಕೆ ಬೇಡಿಕೆ ಇಟ್ಟಿದ್ದಾನೆ.…

Read More

ದಕ್ಷಿಣಕನ್ನಡ : ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತು ಹಾಕಿದ್ದೇನೆ ಎಂದು ಚಿನ್ನಯ್ಯ ಹೇಳಿಕೆ ನೀಡಿದ ಬಳಿಕ ಎಸ್ಐಟಿ ತನಿಖೆ ಆರಂಭಿಸಿತು. ಬಳಿಕ ಯಾವುದೇ ಕುರುಹು ಪತ್ತೆ ಆಗದ ಹಿನ್ನೆಲೆಯಲ್ಲಿ ಚಿನ್ನಯ್ಯನನ್ನು ಅಧಿಕಾರಿಗಳು ವಶಕ್ಕೆ ಪಡದು ವಿಚಾರಣೆ ನಡೆಸಿದಾಗ ಹಲವು ಸ್ಫೋಟಕ ಅಂಶಗಳು ಬಯಲಾಗಿದೆ. ಇದು ಒಂದು ಕಡೆಯಾದರೆ ಇನ್ನೊಂದು ಕಡೆ ಎಸ್ಐಟಿ ಅಧಿಕಾರಿಗಳು ಸೌಜನ್ಯ ಪ್ರಕರಣದ ತನಿಖೆ ನಡೆಸುತ್ತಿದ್ದಾರಾ ಎನ್ನುವ ಪ್ರಶ್ನೆ ಹುಟ್ಟು ಹಾಕಿದೆ. ಹೌದು ಇದಕ್ಕೆ ಪುಷ್ಟಿ ನೀಡುವಂತೆ ಉದಯ್ ಕುಮಾರ್ ಜೈನ್ ಸೇರಿದಂತೆ ಹಲವರಿಗೆ ಎಸ್ಐಟಿ ಬಲಾವ್ ನೀಡಿದೆ ಶಾಸಕ ಉದಯ್ ಕುಮಾರ್ ಸೇರಿದಂತೆ ಸೌಜನ್ಯ ಮನೆಯವರು ಹಲವರ ಮೇಲೆ ಗಂಭೀರವಾದ ಆರೋಪ ಮಾಡಿದ್ದರು. ಈ ಹಿನ್ನಲೆಯಲ್ಲಿ ಸೌಜನ್ಯ ಪ್ರಕರಣದ ತನಿಖೆ ಕೂಡ ಎಸ್ಐಟಿ ನಡೆಸುತ್ತಿದೆಯ? ಎನ್ನುವ ಪ್ರಶ್ನೆ ಉದ್ಭವಿಸಿದೆ. ಇದೀಗ ಎಸ್ಐಟಿ ಅಧಿಕಾರಿಗಳು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನಲ್ಲಿರುವ ಎಸ್ಐಟಿ ಕಚೇರಿಗೆ ಆರೋಪ ಹೊತ್ತ ಉದಯ್ ಕುಮಾರ್ ಜೈನ್ ಧೀರಜ್ ಕೆಲ್ಲಾ ಹಾಗೂ ಮಲ್ಲಿಕ್ ಜೈನ್…

Read More

ವಿಜಯಪುರ : ಭೀಮಾತೀರದಲ್ಲಿ ಮತ್ತೆ ಗುಂಡಿನ ಮೊರೆತ ಕೇಳಿ ಬಂದಿದ್ದು, ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ದೇವರ ನಿಂಬರಗಿ ಗ್ರಾಮದಲ್ಲಿ ದುಷ್ಕರ್ಮಿಗಳಿಂದ ಗುಂಡಿನ ದಾಳಿ ನಡೆದಿದೆ. ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ದೇವರಿಗೆ ಎಂಬ ಗ್ರಾಮದಲ್ಲಿ ರೌಡಿಶೀಟರ್ ಭಿಮನಗೌಡ ಬಿರಾದರ್ (45) ಮೇಲೆ ಫೈರಿಂಗ್ ನಡೆಸಲಾಗಿದೆ. ಗಾಯಗೊಂಡ ಭೀಮನಗೌಡನನ್ನು ವಿಜಯಪುರ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಸಾವನಪ್ಪಿದ್ದಾನೆ. ಭೀಮನ ಗೌಡಗೆ ದುಷ್ಕರ್ಮಿಗಳು ಮೂರು ಸುತ್ತು ಗುಂಡು ಹಾರಿಸಿದ್ದಾರೆ. ಭೀಮನಗೌಡ ಬಿರಾದರ್ ತಲೆ, ಎದೆಗೆ ಗುಂಡು ತಗುಲಿದ್ದು, ಮಹದೇವ ಭೈರಗೊಂಡ ಪರಮ ಆಪ್ತನಾದ ಭೀಮನಗೌಡ ಬಿರಾದರ್ ಕಟಿಂಗ್ ಮಾಡಿಸಿಕೊಳ್ಳುವಾಗ ಕಣ್ಣಿಗೆ ಕಾರದಪುಡಿ ಎರಚಿ, ಕೃತ್ಯ ಎಸಗಿದ್ದಾರೆ. ಹಳೆ ವೈಷಮ್ಯ ಹಿನ್ನೆಲೆ ಗುಂಡಿನ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದೆ. ಗಾಯಗೊಂಡ ಭೀಮನಗೌಡ ವಿಜಯಪುರ ಖಾಸಗಿ ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯೆ ಭೀಮನಗೌಡ ಬಿರಾದರ್ ಇದೀಗ ಸಾವನಪ್ಪಿದ್ದಾನೆ.

Read More

ಬೆಂಗಳೂರು : ಇತ್ತೀಚಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ನಗರದ ಮುತ್ತೂರಿನಲ್ಲಿ ಗಣೇಶ ವಿಸರ್ಜನೆಯ ವೇಳೆ ಪಟಾಕಿ ಸಿಡಿದು ಓರ್ವ ಬಾಲಕ ಸಾವನಪ್ಪಿದ್ದ. ಈ ಒಂದು ಘಟನೆಗೆ ಸಂಬಂಧಿಸಿದಂತೆ ಗಂಭೀರವಾಗಿ ಗಾಯಗೊಂಡಿದ್ದ ಮತ್ತೋರ್ವ ಬಾಲಕ ಯೋಗೇಶ್ (15) ಇದೀಗ ಸಾವನ್ನಪ್ಪಿದ್ದಾನೆ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಯೋಗೇಶ್ ಗೆ ಚಿಕಿತ್ಸೆ ನೀಡಲಾಗುತ್ತಿತ್ತು ಆದರೆ ಚಿಕಿತ್ಸೆ ಫಲಿಸದೆ ಇಂದು ಬಾಲಕ ಯೋಗೇಶ್ ಸಾವನ್ನಪ್ಪಿದ್ದಾನೆ. ಹಾಗಾಗಿ ಪಟಾಕಿ ಸ್ಪೋಟ ದುರಂತದಿಂದ ಮೃತಪಟ್ಟವರ ಸಂಖ್ಯೆ 2ಕ್ಕೆ ಏರಿಕೆಯಾಗಿದೆ.ಆಗಸ್ಟ್ 29 ರಂದು ದೊಡ್ಡಬಳ್ಳಾಪುರ ನಗರದ ಮುತ್ತೂರಿನಲ್ಲಿ ಈ ಒಂದು ಘಟನೆ ನಡೆದಿತ್ತು ಅಂದು ಓರ್ವ ಬಾಲಕ ಮೃತಪಟ್ಟಿದ್ದು, ಆರು ಜನರು ಗಾಯಗೊಂಡಿದ್ದರು. ಇದೀಗ ಇಂದು ಮತ್ತೋರ್ವ ಬಾಲಕ ಯೋಗೇಶ್ ಚಿಕಿತ್ಸೆ ಫಲಕಾರಿಯಾಗದೆ ಸಾವನಪ್ಪಿದ್ದಾನೆ.

Read More

ಬೆಂಗಳೂರು : ಆಂಧ್ರದ ನೆಲಮಲ್ಲ ಅರಣ್ಯದಿಂದ ಅಕ್ರಮವಾಗಿ ರಕ್ತ ಚಂದನ ಸಾಗಾಟ ಮಾಡಲಾಗುತ್ತಿದ್ದು ಹೊಸಕೋಟೆ ತಾಲೂಕಿನ ಕಟ್ಟಿಗೆಹಳ್ಳಿಗೆ ರಕ್ತಚಂದನ ತಂದು ಸಾಗಾಟ ಮಾಡಲಾಗುತ್ತಿತ್ತು. ಹೊಸಕೋಟೆಯ ಬಳಿ ಪೊಲೀಸರು ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿ ಮೂರು ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ. ಹೌದು 25 ಲಕ್ಷ ಮೌಲ್ಯದ ಒಂದು ಕೆಜಿ ತೂಕದ ರಕ್ತ ಚಂದನದ ತುಂಡುಗಳನ್ನು ವಶಪಡಿಸಿಕೊಂಡಿದ್ದಾರೆ. ಕಟ್ಟಿಗೆನಹಳ್ಳಿ ಇಂದ ಟಾಟಾ ಎಸ್ ವಾಹನದಲ್ಲಿ ತಂದು ಪಾರ್ಸೆಲ್ ಮಾಡುತ್ತಿದ್ದರು. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಕಟ್ಟಿಗೆಹಳ್ಳಿಯಲ್ಲಿ ರಕ್ತ ಚಂದನ ತುಂಡುಗಳನ್ನು ಕೊರಿಯರ್ ಮೂಲಕ ಕಳುಹಿಸಲು ಪ್ರಯತ್ನಿಸಿದ್ದರು.ಡೆಲಿವರಿ ಟ್ರಾನ್ಸ್ಪೋರ್ಟ್ ಕಂಪನಿಯ ಮೂಲಕ ಹರಿಯಾಣಕ್ಕೆ ರಫ್ತು ಮಾಡಲು ಯತ್ನಿಸಿದ್ದಾರೆ. ಈ ಕುರಿತು ಖಚಿತ ಮಾಹಿತಿ ಮೇರೆಗೆ ಹೊಸಕೋಟೆ ಪೋಲಿಸರು ದಾಳಿ ನಡೆಸಿದ್ದಾರೆ. ಏಜಾಜ್ ಷರೀಫ್, ಫಯಾಜ್ ಷರೀಫ್ ಹಾಗು ಸಾಧಿಕ್ ಖಾನ್ ಬಂಧಿತ ಆರೋಪಿಗಳು ಎಂದು ತಿಳಿದುಬಂದಿದ್ದು, ರಕ್ತ ಚಂದನ ಸಾಗಾಟಕ್ಕೆ ಬಳಸಿದ್ದ ಟಾಟಾ ಏಸ್ ವಾಹನ ಜಪ್ತಿ ಮಾಡಿಕೊಂಡಿದ್ದಾರೆ. ಘಟನೆ ಕುರಿತಂತೆ ಹೊಸಕೋಟೆ…

Read More

ಮೈಸೂರು : ಧರ್ಮಸ್ಥಳದ ಕುರಿತು ಅಪಪ್ರಚಾರ ಮಾಡುತ್ತಿರುವ ಹಿನ್ನೆಲೆಯಲ್ಲಿ ಇತ್ತೀಚಿಗೆ ತಾನೇ ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ ಜೆಡಿಎಸ್, ಧರ್ಮಸ್ಥಳ ಸತ್ಯ ಯಾತ್ರೆ ಹಮ್ಮಿಕೊಂಡಿತು. ಅದಾದ ಬಳಿಕ ಬಿಜೆಪಿ ಸಹ ಧರ್ಮಸ್ಥಳ ಚಲೋ ಪಾದಯಾತ್ರೆ ಹಮ್ಮಿಕೊಂಡು ಧರ್ಮಸ್ಥಳದಲ್ಲಿ ಬೃಹತ್ ಸಮಾವೇಶ ನಡೆಸಿತ್ತು. ಇದೀಗ ಧರ್ಮಸ್ಥಳ ವೀರೇಂದ್ರ ಹೆಗ್ಗಡೆ ಅವರನ್ನು ಬೆಂಬಲಿಸಿ, ಮೈಸೂರು ಜಿಲ್ಲೆಯ ಚಾಮರಾಜ ಕ್ಷೇತ್ರದ ಕಾಂಗ್ರೆಸ್ ಶಾಸಕ ಕೆ ಹರೀಶ್ ಗೌಡ ಅವರು ಇಂದು ಮೈಸೂರುನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ ಹಮ್ಮಿಕೊಂಡಿದ್ದಾರೆ. ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಧರ್ಮದ ವಿಚಾರದಲ್ಲಿ ಯಾರೂ ರಾಜಕಾರಣ ಮಾಡಬಾರದು. ಎಲ್ಲಾ ಜಾತಿ ಧರ್ಮದ ಜನರು ಒಟ್ಟಾಗಿ ಯಾತ್ರೆ ಮಾಡುತ್ತಿದ್ದೇವೆ ಅದಕ್ಕಾಗಿ ತನ್ವೀರ್ ಸೇಟ್ ನಮ್ಮ ಯಾತ್ರೆಗೆ ಚಾಲನೆ ನೀಡುತ್ತಿದ್ದಾರೆ ನಾವು ದೇವಸ್ಥಾನ ಮಸೀದಿಗಳಿಗೆ ಹೋಗುತ್ತೇವೆ . ನಮಗೆ ಯಾವುದೇ ಭೇದ ಭಾವ ಇಲ್ಲ ಧರ್ಮಸ್ಥಳ ವಿಚಾರದಲ್ಲಿ ನಾವು ರಾಜಕಾರಣ ಮಾಡುತ್ತಿಲ್ಲ ಮಂಜುನಾಥನ ದರ್ಶನ ಪಡೆಯಲು ಹೋಗುತ್ತಿದ್ದೇವೆ ಶ್ರೀ ಕ್ಷೇತ್ರ ಧರ್ಮಸ್ಥಳವನ್ನು ಕಳಂಕ ರಹಿತ ಮಾಡಿದ್ದು ನಮ್ಮ…

Read More

ದುರಾದೃಷ್ಟ ಇರುವ ದೀಪಕ್ಕೆ ಪರಿಹಾರ ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ದುಷ್ಟ ಕಣ್ಣು ಕೇವಲ ನಂಬಿಕೆಯಲ್ಲ, ಅದು ನಮ್ಮ ಸುತ್ತಲಿನ ನಕಾರಾತ್ಮಕ ಶಕ್ತಿಗಳ ಅಭಿವ್ಯಕ್ತಿಯಾಗಿದೆ. ಅನೇಕ ಜನರು, ವಿಶೇಷವಾಗಿ ಮನೆಯಲ್ಲಿರುವವರು, ಯಾವುದೇ ಕಾರಣವಿಲ್ಲದೆ ನಿರಂತರ ಆರೋಗ್ಯ ಸಮಸ್ಯೆಗಳು, ಮಾನಸಿಕ ಒತ್ತಡ, ಜಗಳಗಳು, ಸಂಬಂಧಗಳಲ್ಲಿ ಬಿರುಕುಗಳು ಮತ್ತು ಪ್ರಕ್ಷುಬ್ಧ ಪರಿಸ್ಥಿತಿಗಳನ್ನು ಅನುಭವಿಸಿದರೆ, ದುಷ್ಟಶಕ್ತಿಗಳ ಪ್ರಭಾವ ಅಥವಾ ದುಷ್ಟ ಕಣ್ಣಿನ ಪ್ರಭಾವವು ಒಂದು ಕಾರಣವಾಗಿರಬಹುದು. ಈ ಸಮಸ್ಯೆಗಳನ್ನು ತೆಗೆದುಹಾಕಲು, ನಮ್ಮ ಪೂರ್ವಜರು ಬಳಸುತ್ತಿದ್ದ ಸರಳ ಆದರೆ ಅತ್ಯಂತ ಶಕ್ತಿಶಾಲಿ ಪರಿಹಾರವೆಂದರೆ ದುಷ್ಟ ಕಣ್ಣಿನ ದೀಪ ಪರಿಹಾರ! ಈ ದೀಪ ಪರಿಹಾರವನ್ನು ಹೇಗೆ ಮಾಡುವುದು? ನಾವು ಈ ಆಧ್ಯಾತ್ಮಿಕ ಪೋಸ್ಟ್ ಅನ್ನು ಹಂಚಿಕೊಳ್ಳುತ್ತೇವೆ . ಇದು ಕೇವಲ ದೀಪ ಹಚ್ಚುವ…

Read More