Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ಬಾಕಿ ಬಿಲ್ ಪಾವತಿಯಾಗದ ಹಿನ್ನೆಲೆಯಲ್ಲಿ ಮನನೊಂದ ಸಂತೇಬೆನ್ನೂರಿನ ಗುತ್ತಿಗೆದಾರ ಪಿ.ಎಸ್ ಗೌಡರ್ (48) ಡೆತ್ನೋಟ್ ಬರೆದಿಟ್ಟು ನೇಣುಬಿಗಿದುಕೊಂಡು ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಪ್ರಕರಣದ ತನಿಖೆಯನ್ನು ಇಲಾಖೆಯ ಹಿರಿಯ ಅಧಿಕಾರಿಗಳ ಸಮಿತಿ ರಚಿಸಿ ವರದಿ ನೀಡುವಂತೆ ಸಚಿವ ಪ್ರಿಯಾಂಕ ಖರ್ಗೆ ಸೂಚಿಸಿದ್ದಾರೆ. ಇಲಾಖೆಗೆ ವಹಿಸಿದ ಗ್ರಾಮೀಣ ಅಭಿವೃದ್ಧಿ ಸಚಿವ ಪ್ರಿಯಾಂಕ ಖರ್ಗೆ, ಹಿರಿಯ ಅಧಿಕಾರಿಗಳ ಸಮಿತಿ ರಚಿಸಿ ವರದಿ ನೀಡುವಂತೆ ಸೂಚನೆ ನೀಡಿದ್ದಾರೆ ಗ್ರಾಮೀಣ ಅಭಿವೃದ್ಧಿ ಇಲಾಖೆ ಎಸಿ ಎಸಿಗೆ ಪ್ರಿಯಾಂಕ ಖರ್ಗೆ ಸೂಚನೆ ನೀಡಿದ್ದಾರೆ ಎಂದು ತಿಳಿದುಬಂದಿದೆ. ಘಟನೆ ಹಿನ್ನೆಲೆ? ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಯಮಿತನಿಂದ 2023-24ನೇ ಸಾಲಿನ ಬಾಕಿ ಬಿಲ್ ಪಾವತಿಯಾಗದ ಹಿನ್ನೆಲೆಯಲ್ಲಿ ಮನನೊಂದ ಸಂತೇಬೆನ್ನೂರಿನ ಗುತ್ತಿಗೆದಾರ ಪಿ.ಎಸ್ ಗೌಡರ್ (48) ಡೆತ್ನೋಟ್ ಬರೆದಿಟ್ಟು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗುತ್ತಿಗೆದಾರ ಪಿ.ಎಸ್ ಗೌಡರ್ ಚನ್ನಗಿರಿ ತಾಲೂಕಿನ ಸಂತೆಬೆನ್ನೂರಿನಲ್ಲಿ ವಾಸಿಸುತ್ತಿದ್ದರು. ಸಂತೇಬೆನ್ನೂರಿನ ಕೃಷಿ ಇಲಾಖೆ ಆವರಣದಲ್ಲಿ 2023-24ರಲ್ಲಿ ನಡೆದ ಕಾಮಗಾರಿಗೆ ಸಂಬಂಧಿಸಿದ ಹಣ ಬಿಡುಗಡೆ…
ಬಾಗಲಕೋಟೆ : ಮನೆಯ ಮೇಲ್ಚಾವಣಿ ಕುಸಿದು ಅಕ್ಕ ತಮ್ಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘೋರ ಘಟನೆ ಬಾಗಲಕೋಟೆ ಜಿಲ್ಲೆಯ ಇಳಕಲ್ ತಾಲೂಕಿನ ಕಂದಗಲ್ ಎಂಬ ಗ್ರಾಮದಲ್ಲಿ ಈ ದುರ್ಘಟನೆ ಸಂಭವಿಸಿದೆ. ಹೌದು ಬಾಗಲಕೋಟೆಯ ಜಿಲ್ಲೆಯ ಇಳಕಲ್ ತಾಲೂಕಿನ ಕಂದಗಲ ಗ್ರಾಮದಲ್ಲಿ ಈ ಒಂದು ದುರ್ಘಟನೆ ಸಂಭವಿಸಿದೆ. ಮೇಲ್ಚಾವಣಿ ಕುಸಿದು ಅಕ್ಕ ತಮ್ಮ ದುರ್ಮರಣ ಹೊಂದಿದ್ದಾರೆ. ಗೀತಾ ಆದಾಪುರ ಮಠ (14) ಹಾಗೂ ಆಕೆಯ ತಮ್ಮ ರುದ್ರಯ್ಯ (10) ಸಾವನಪ್ಪಿದ್ದಾರೆ. ಇಬ್ಬರ ಮೃತ ದೇಹಗಳನ್ನು ಸ್ಥಳೀಯರು ಸದ್ಯ ಹೊರ ತೆಗೆದಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.
ದಾವಣಗೆರೆ : ಇತ್ತೀಚಿಗೆ ವಾಲ್ಮೀಕಿ ನಿಗಮದ ಅಧಿಕಾರಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಾಸುವ ಮುನ್ನವೇ, ಇದೀಗ KRIDL ಬಿಲ್ ಬಾಕಿ ಉಳಿಸಿಕೊಂಡಿದ್ದರಿಂದ ಮನನೊಂದು ಗುತ್ತಿಗೆದಾರರೊಬ್ಬರು ನೇಣಿಗೆ ಶರಣಾಗಿರುವ ಘಟನೆ ದಾವಣಗೆರೆಯಲ್ಲಿ ನಡೆದಿದೆ. ಹೌದು ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಯಮಿತ ನಿಂದ 2023-24ನೇ ಸಾಲಿನ ಬಾಕಿ ಬಿಲ್ ಪಾವತಿಯಾಗದ ಹಿನ್ನೆಲೆಯಲ್ಲಿ ಮನನೊಂದ ಸಂತೇಬೆನ್ನೂರಿನ ಗುತ್ತಿಗೆದಾರ ಪಿ.ಎಸ್ ಗೌಡರ್ (48) ಡೆತ್ನೋಟ್ ಬರೆದಿಟ್ಟು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹಣಕಾಸು ವಿಚಾರದಲ್ಲಿ ಮೋಸ ಮಾಡಿದ್ದಾರೆಂದು ಡೆತ್ ನೋಟ್ ನಲ್ಲಿ ಉಲ್ಲೇಖಿಸಿದ್ದಾರೆ. ಸಂತೆಬೆನ್ನೂರಿನ ಕೃಷಿ ಇಲಾಖೆ ಆವರಣದಲ್ಲಿ ಈ ಒಂದು ಕಾಮಗಾರಿ ನಡೆದಿತ್ತು ಎಂದು ತಿಳಿದು ಬಂದಿದ್ದು. ಮನೆಯಲ್ಲಿ ಡೆತ್ ನೋಟ್ ಬರೆದಿಟ್ಟು ಪಿ ಎಸ್ ಗೌಡ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಅಧಿಕಾರಿಗಳ ಧೋರಣೆ ಮತ್ತು ಸಹೋದರರ ವರ್ತನೆಯಿಂದ ಬೇಸತ್ತು ತಮ್ಮ ಮನೆಯಲ್ಲಿ ಮೇ26 ರಂದು ಡೆತ್ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗುತ್ತಿಗೆದಾರ ಪಿ.ಎಸ್ ಗೌಡರ್ ಚನ್ನಗಿರಿ ತಾಲೂಕಿನ ಸಂತೆಬೆನ್ನೂರಿನಲ್ಲಿ ವಾಸಿಸುತ್ತಿದ್ದರು. ಸಂತೇಬೆನ್ನೂರಿನ ಕೃಷಿ ಇಲಾಖೆ ಆವರಣದಲ್ಲಿ…
ಬೆಂಗಳೂರು : ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಎಸ್ ಐ ಟಿ ಅಧಿಕಾರಿಗಳು ಬಂಧಿಸಿ ಇಂದು ಪ್ರಜ್ವಲ್ ರೇವಣ್ಣ ಅವರನ್ನು ಬೆಂಗಳೂರಿನ 42ನೇ ಎಸಿ ಎಂ ಎಂ ನ್ಯಾಯಾಲಯದ ಮುಂದೆ ಹಾಜರುಪಡಿಸಲಿದ್ದು ಅವರ ಅರ್ಜಿ ವಿಚಾರಣೆ ನಡೆಯಲಿದೆ. ಇಂದು ಮಧ್ಯಾಹ್ನ 3 ಗಂಟೆಗೆ ಪ್ರಜ್ವಲ್ ರೇವಣ್ಣ ಅರ್ಜಿ ವಿಚಾರಣೆ ನಡೆಯಲಿದೆ. ಈಗಾಗಲೇ ಪ್ರಜ್ವಲ್ ರೇವಣ್ಣರನ್ನು ಎಸ್ಐಟಿ ಅಧಿಕಾರಿಗಳು ನ್ಯಾಯಾಲಯಕ್ಕೆ ಕರೆತಂದಿದ್ದಾರೆ. ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯಕ್ಕೆ ಎಸ್ಐಟಿ ಅಧಿಕಾರಿಗಳು ಪ್ರಜ್ವಲ್ ರನ್ನ ಕರೆದು ತಂದಿದ್ದಾರೆ. ಮಧ್ಯಾಹ್ನ 3 ಗಂಟೆಗೆ ಪ್ರಜ್ವಲ್ ರೇವಣ್ಣ ಅರ್ಜಿ ವಿಚಾರಣೆ ನಡೆಯಲಿದೆ ಮಧ್ಯಾಹ್ನ 3 ಗಂಟೆಗೆ ನ್ಯಾಯಾಧೀಶರು ಅರ್ಜಿ ವಿಚಾರಣೆ ನಡೆಸಲಿದ್ದಾರೆ ಎಂದು ಹೇಳಲಾಗುತ್ತಿದೆ. ಪ್ರಜ್ವಲ್ ರೇವಣ್ಣ ಪರವಾಗಿ ವಕೀಲ ಅರುಣ್ ಅವರು ವಾದಿಸಲಿದ್ದು ಎಸ್ಐಡಿ ಪರ ಎಸ್‌ಪಿಪಿ ಅಶೋಕ್ ನಾಯಕ್ ವಾದ ಮಂಡಿಸಲಿದ್ದಾರೆ. ಬೆಂಗಳೂರಿನ 42ನೇ ಎಸಿಎಂ ಎಂ ಕೋರ್ಟ್ ನಲ್ಲಿ ವಿಚಾರಣೆ ನಡೆಯಲಿದೆ.ಆರೋಪಿ ಪ್ರಜ್ವಲ್ ಅನ್ನು ಸಿಐಟಿ…
ಗದಗ : SCP-TSP ಹಣವನ್ನು ಗ್ಯಾರೆಂಟಿ ಯೋಜನೆಗೆ ಡೈವರ್ಟ್ ಮಾಡಿದ್ದಾರೆ.ಕಳೆದ ವರ್ಷ 11,000 ಕೋಟಿ, ಈ ವರ್ಷ 13000 ಕೋಟಿ ಡೈವರ್ಟ್ ಮಾಡಿದ್ದಾರೆ. ವಾಲ್ಮೀಕಿ ಅಭಿವೃದ್ಧಿ ನಿಗಮಕ್ಕೆ ನೀಡಿದ ಹಣವನ್ನು ಲೂಟಿ ಮಾಡಿದ್ದಾರೆ ಎಂದು ಗದಗದಲ್ಲಿ ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಗಂಭೀರವಾಗಿ ಆರೋಪಿಸಿದರು. ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ಭ್ರಷ್ಟಾಚಾರಕ್ಕೆ ಪ್ರೋತ್ಸಾಹ ಭ್ರಷ್ಟಾಚಾರದಲ್ಲಿ ಮುಳುಗಿರುವ ಸರ್ಕಾರವಿದೆ ಗದಗದಲ್ಲಿ ಮಾಜಿ ಮುಖ್ಯಮಂತ್ರಿ ಬಸವರಾಜ್ ಹೇಳಿಕೆ ನೀಡಿದ್ದು ಇಡೀ ಸಚಿವ ಸಂಪುಟವೇ ಭ್ರಷ್ಟಾಚಾರದಲ್ಲಿ ಮುಳುಗಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಸಿಎಂ ಸಚಿವರ ರಾಜೀನಾಮೆ ಕೇಳುವ ನೈತಿಕತೆಯನ್ನೇ ಕಳೆದುಕೊಂಡಿದ್ದಾರೆ. ಕಾಂಗ್ರೆಸ್ನವರು ಎಸ್ಸಿ ಎಸ್ಟಿ ಉದ್ದಾರ ಮಾಡುತ್ತೇವೆ ಎಂದು ಹೇಳಿಕೊಳ್ಳುತ್ತಾರೆ. ಮೀಸಲಾತಿ ಪ್ರಮಾಣ ಹೆಚ್ಚಳ ವಿಚಾರದಲ್ಲೂ ಕಾಂಗ್ರೆಸ್ ಕ್ರಮ ಕೈಗೊಂಡಿಲ್ಲ.ನಾನು ಮುಖ್ಯಮಂತ್ರಿ ಆಗಿದ್ದಾಗ ಎಸ್ಸಿ ಎಸ್ಟಿ ಮೀಸಲಾತಿ ಪ್ರಮಾಣ ಹೆಚ್ಚಿಸಿದ್ದೆ. ಆದರೆ ಈಗ ಸಿಎಂ ಸಿದ್ದರಾಮಯ್ಯ SCP-TSP ಹಣವನ್ನು ಗ್ಯಾರೆಂಟಿ ಯೋಜನೆಗೆ ಡೈವರ್ಟ್ ಮಾಡಿದ್ದಾರೆ ಎಂದು ಆರೋಪಿಸಿದರು.
ಬೆಂಗಳೂರು : ವಿಧಾನ ಪರಿಷತ್ ಚುನಾವಣೆ ಹಾಗೂ ಲೋಕಸಭೆ ಚುನಾವಣೆ ಫಲಿತಾಂಶದ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಜೂನ್ 1 ರಿಂದ 6ರ ವರೆಗೆ ಮಧ್ಯ ಮಾರಾಟ ನಿಷೇಧಿಸಲಾಗಿದ್ದು, ಈ ಕುರಿತಂತೆ ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ ಎಂದು ತಿಳಿದುಬಂದಿದೆ. ಜೂನ್ 3 ರಂದು ವಿಧಾನ ಪರಿಷತ್ ಚುನಾವಣೆ ನಡೆಯಲಿದೆ. ಜೂನ್ 4 ರಂದು ಲೋಕಸಭಾ ಚುನಾವಣಾ ಫಲಿತಾಂಶ ಘೋಷಣೆಯಾಗಲಿದೆ. ಇನ್ನು ಜೂನ್ 6 ರಂದು ವಿಧಾನ ಪರಿಷತ್ ಚುನಾವಣೆ ಮತ ಏಣಿಕೆ ನಡೆಯಲಿದೆ. ಹೀಗಾಗಿ ಜೂನ್ 1 ರಿಂದ ಜೂನ್ 6ರ ವರೆಗೆ ಮದ್ಯ ಮಾರಾಟ ನಿಷೇಧಿಸಲಾಗಿದೆ. ಜೂನ್ 1 ರಿಂದ ಜೂನ್ 6ರ ವರೆಗೆ ಬಾರ್, ವೈನ್ ಶಾಪ್, ರೆಸ್ಟೋರೆಂಟ್,ಕ್ಲಬ್, ಹೊಟೆಲ್, ಅಂಗಡಿಗಳಲ್ಲಿ ಮದ್ಯ ಮಾರಾಟ, ಶೇಖರಣೆ ನಿಷೇಧಿಸಲಾಗಿದೆ.ಜೂನ್ 3ರಂದು ವಿಧಾನ ಪರಿಷತ್ ಚುನಾವಣೆ ನಡೆಯಲಿದೆ. ಚುನಾವಣೆಗೂ 48 ಗಂಟೆ ಮನ್ನ ಅಂದರೆ ಜೂನ್ 1ರಿಂದಲೇ ಮದ್ಯ ಮಾರಾಟ ನಿಷೇಧಗೊಳ್ಳಲಿದೆ. ಇನ್ನು ಜೂನ್ 4 ರಂದು…
ಬೆಂಗಳೂರು : ಮನೆ ಮುಂದೆ ಸ್ವಚ್ಛತೆಯ ವಿಚಾರಕ್ಕೆ ಸಂಬಂಧಿಸಿದಂತೆ ಗಲಾಟೆ ನಡೆದಿದ್ದು, ಈ ವೇಳೆ ಗಲಾಟೆ ವಿಕೋಪಕ್ಕೆ ತಿರುಗಿ ಪೌರಕಾರ್ಮಿಕರ ಮೇಲೆ ಹಲ್ಲೆ ಮಾಡಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ತೋಟದಗುಡ್ಡದ ಹಳ್ಳಿಯಲ್ಲಿ ಈ ಘಟನೆ ನಡೆದಿದೆ. ಹೌದು ಮನೆಯ ಮುಂದೆ ಸ್ವಚ್ಛತೆಯ ವಿಚಾರವಾಗಿ ಗಲಾಟೆ ಶುರುವಾಗಿದೆ. ಈ ವೇಳೆ ಪೌರಕಾರ್ಮಿಕರಾದ ಸಿ. ಮಂಜುನಾಥ ಹಾಗೂ ಕೆ ಆರ್ ಮಂಜುನಾಥ್ ಅವರ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ಹೇಳಲಾಗುತ್ತಿದೆ. ಪೌರಕಾರ್ಮಿಕರ ಮೇಲೆ ಹಿತೇಶ್ ಹಾಗೂ ಜಯಂತ್ ಎನ್ನುವವರು ಹಲ್ಲೆ ನಡೆಸಿದ್ದಾರೆ.ಸ್ವಚ್ಛತೆಗೆ ದಿನನಿತ್ಯ ಬರುವುದಿಲ್ಲವೆಂದು ವಾಗ್ವಾದ ನಡೆಸಿ ಬಳಿಕ ಹಲ್ಲೆ ಮಾಡಿದ್ದಾರೆ. ಘಟನೆ ಕುರಿತಂತೆ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ .
ದಾವಣಗೆರೆ : ದಾವಣಗೆರೆ ಜಿಲ್ಲೆಯ ಚೆನ್ನಗಿರಿ ಪೊಲೀಸ್ ಠಾಣೆಯಲ್ಲಿ ಲಾಕಪ್ ಡೆತ್ ಹಾಗೂ ಠಾಣೆಯ ಮೇಲೆ ಕಲ್ಲು ತೂರಾಟ ನಡೆಸಿದ ಘಟನೆಗೆ ಸಂಬಂಧಿಸಿದಂತೆ ಇಂದು ಚನ್ನಗಿರಿ ಪೊಲೀಸ್ ಠಾಣೆಗೆ ಗ್ರಹ ಇಲಾಖೆಯ ಸಚಿವ ಡಾ. ಜಿ ಪರಮೇಶ್ವರ್ ಭೇಟಿ ನೀಡಿ, ಠಾಣೆಯ ಮೇಲೆ ಕಲ್ಲು ತೂರಾಟದ ವೇಳೆ ಯಾರು ಪಾಕಿಸ್ತಾನ ಪರ ಘೋಷಣೆ ಕೂಗಿಲ್ಲ ಎಂದು ಸ್ಪಷ್ಟನೆ ನೀಡಿದರು. ಇಂದು ಚನ್ನಗಿರಿ ಪೊಲೀಸ್ ಠಾಣೆಗೆ ಸಚಿವ ಜಿ ಪರಮೇಶ್ವರ್ ಭೇಟಿ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚನ್ನಗಿರಿ ಪೊಲೀಸ್ ಠಾಣೆ ಮೇಲೆ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ್ದ ಘಟನೆ ನಡೆದಿತ್ತು. ಲಾಕಪ್ ಡೆತ್ ಆರೋಪ ಮಾಡಿ ದುಷ್ಕರ್ಮಿಗಳು ಕಲ್ಲು ತೂರಿ ದಾಂಧಲೆ ನಡೆಸಿದ್ದರು. ನಂತರ ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರ ಸಿಐಡಿ ಗೆ ಹಸ್ತಾಂತರಿಸಿತ್ತು ಎಂದು ತಿಳಿಸಿದರು. ಪ್ರಕರಣದಲ್ಲಿ ಇದುವರೆಗೆ 30 ಆರೋಪಿಗಳನ್ನು ಬಂಧಿಸಲಾಗಿದೆ. ಒಂದು ಕಡೆ ಠಾಣೆಗೆ ಶವ ತಂದಿಟ್ಟು ಪ್ರತಿಭಟನೆ ಮಾಡಿ ಕಲ್ಲು ತೂರಿದರೆ ಠಾಣೆ ಮುಂದಿದ್ದ…
ಹಾಸನ : ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರದು ಎನ್ನಲಾದ ಅಶ್ಲೀಲ ವಿಡಿಯೋ ಪೆನ್ಡ್ರೈವ್ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ 18 ದಿನಗಳಿಂದ ಜೈಲಲ್ಲಿ ವಾಸವಿದ್ದ ಪ್ರೀತಂಗೌಡ ಆಪ್ತರಾಗಿರುವ ಆರೋಪಿಗಳಾದ ಲಿಖಿತ್ಗೌಡ ಹಾಗೂ ಚೇತನ್ ಇದೀಗ ಜೈಲಿಂದ ಬಿಡುಗಡೆಯಾಗಿದ್ದಾರೆ. ಹೌದು ಹಾಸನ ಜೈಲಿನಿಂದ ಲಿಖಿತ್ ಗೌಡ, ಯಲಗೊಂದ ಚೇತನ್ ಬಿಡುಗಡೆಯಾಗಿದ್ದಾರೆ. ಹಾಸನದ ಮೂರನೇ ಹೆಚ್ಚುವರಿ ಸೇಷನ್ಸ್ ಕೋರ್ಟ್ ಪ್ರಕರಣದ ವಿಚಾರಣೆ ನಡೆಸಿ, ದೇಶ ಬಿಟ್ಟು ಹೋಗಬಾರದು ತನಿಖಾಧಿಕಾರಿ ಎದುರು ಹಾಜರಾಗಬೇಕು. ವಾರಕ್ಕೊಮ್ಮೆ ಹಾಜರಾಗಬೇಕೆಂದು ಶರತ್ತು ವಿಧಿಸಿ ಕೋರ್ಟ್ ಜಾಮೀನು ನೀಡಿದೆ. ಬಿಜೆಪಿಯ ಮಾಜಿ ಶಾಸಕ ಪ್ರೀತಮ್ ಗೌಡ ಆಪ್ತ ಲಿಖಿತ್ ಗೌಡ ಹಾಗೂ ಕಚೇರಿ ಸಹಾಯಕ ಯಲಗುಂದ ಚೇತನ್ ಇದೀಗ ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಮೇ 12ರಂದು ಎಸ್ಐಟಿ ಪೊಲೀಸರು ಲಿಖಿತ್ ಗೌಡ ಹಾಗೂ ಚೇತನ್ ನನ್ನು ಬಂಧಿಸಿದ್ದರು. 18 ದಿನಗಳ ನಂತರ ಲಿಖಿತ್ ಗೌಡ ಚೇತನ್ ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಮೇ 12 ರಂದು ಎಸ್ ಐ ಟಿ ಅಧಿಕಾರಿಗಳು ಈ ಇಬ್ಬರು…
ವಿಜಯಪುರ : ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧೀಕ್ಷಕ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿಗೆ ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸಿಬಿಐ ವಹಿಸಿ ಎಂದು ಪತ್ರ ಬರೆದಿದ್ದಾರೆ. ಹೌದು ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧೀಕ್ಷಕ ಚಂದ್ರಶೇಖರ್ ಎನ್ನುವವರು ಇತ್ತೀಚಿಗೆ ನಿಗಮದಿಂದ ಕೋಟ್ಯಾಂತರ ರೂಪಾಯಿ ಹಣ ಅಕ್ರಮವಾಗಿ ವರ್ಗಾವಣೆ ಆಗಿದೆ ಎಂದು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದರು ಈ ಒಂದು ಘಟನೆಗೆ ಸಂಬಂಧಿಸಿದಂತೆ ಇದೀಗ ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಪ್ರಕರಣವನ್ನು ಸಿಬಿಐ ವಹಿಸಿ ಎಂದು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿದ್ದಾರೆ. ಜೊತೆಗೆ 187.3 ಕೋಟಿ ರೂಪಾಯಿಗಳನ್ನು ವರ್ಗಾವಣೆ ಮಾಡಿರುವುದು ಪತ್ತೆಯಾಗಿದೆ. ವಹಿವಾಟು ನಡೆಸುವ ಮುನ್ನ ಪಾಲಿಕೆ ಅಧಿಕಾರಿಗಳ ಸಹಿ ನಕಲಿಯಾಗಿದೆ. ಈ ಪ್ರಕರಣದ ಪ್ರಸ್ತುತ ತನಿಖೆಯನ್ನು ಸಿಐಡಿಗೆ ವಹಿಸಲಾಗಿದೆ. ಸಿಐಡಿ ಸರಕಾರಕ್ಕೆ ವರದಿ ನೀಡಿರುವುದರಿಂದ ಆರೋಪಿಗಳ ರಕ್ಷಣೆಗೆ ಅನಗತ್ಯ ಪ್ರಭಾವ ಬೀರುವ ಆತಂಕ…