Subscribe to Updates
Get the latest creative news from FooBar about art, design and business.
Author: kannadanewsnow05
ಶಿವಮೊಗ್ಗ : ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ಒಂದು ತಿಂಗಳಿನಿಂದ ವಿದೇಶದಲ್ಲಿದ್ದ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಇದೀಗ ಕೊನೆಗೂ ಜರ್ಮನಿಯ ಮ್ಯೂನಿಕ್ ವಿಮಾನ ನಿಲ್ದಾಣದಿಂದ ಲುಫ್ತಾನ್ಸ ಫ್ಲೈಟ್ ಮೂಲಕ ಬೆಂಗಳೂರಿಗೆ ಆಗಮಿಸುತ್ತಿದ್ದಾರೆ. ಅವರು ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಬಂದ ತಕ್ಷಣ ಬಂಧಿಸಲಾಗುತ್ತದೆ ಎಂದು ಗೃಹ ಸಚಿವ ಜಿ ಪರಮೇಶ್ವರ್ ತಿಳಿಸಿದರು. ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಜ್ವಲ್ ರೇವಣ್ಣ ವಿರುದ್ಧ ಈಗಾಗಲೇ ವಾರಂಟ್ ಸಿದ್ಧಪಡಿಸಲಾಗಿದೆ. ವಿಶೇಷ ತನಿಕಾ ತಂಡದ ಅಧಿಕಾರಿಗಳು ಮುಂದಿನ ಕ್ರಮ ಕೈಗೊಳ್ಳಲಿದ್ದಾರೆ.ಪ್ರಜ್ವಲ್ ರೇವಣ್ಣ ಬೆಂಗಳೂರಿಗೆ ಬರುತ್ತಿರುವ ಬಗ್ಗೆ ಮಾಹಿತಿ ಇದೆ ಎಂದು ತಿಳಿಸಿದರು. ಆದರೆ ಪ್ರಜ್ವಲ್ ರೇವಣ್ಣ ಬೆಂಗಳೂರಿಗೆ ಬಂದ ಮೇಲೆ ಖಚಿತವಾಗಲಿದೆ ಎಂದು ಶಿವಮೊಗ್ಗದಲ್ಲಿ ಗೃಹ ಇಲಾಖೆ ಸಚಿವ ಜಿ ಪರಮೇಶ್ವರ್ ಹೇಳಿಕೆ ನೀಡಿದ್ದಾರೆ. ಈಗಾಗಲೇ ಪ್ರಜ್ವಲ್ ಆಗಮಿಸುತ್ತಿರುವ ವಿಮಾನ ಜರ್ಮನಿಯ ಯೂನಿಕ್ ಏರ್ಪೋರ್ಟ್ ಇಂದ ಟೆಕ್ ಆಫ್ ಆಗಿದೆ ಇಂದು ಮಧ್ಯರಾತ್ರಿ 12.30ಕ್ಕೆ ಬೆಂಗಳೂರಿನ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ ಬಂದ ತಕ್ಷಣ…
ಬೆಂಗಳೂರು: ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ಒಂದು ತಿಂಗಳಿನಿಂದ ವಿದೇಶದಲ್ಲಿದ್ದ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಇದೀಗ ಕೊನೆಗೂ ಜರ್ಮನಿಯ ಮ್ಯೂನಿಕ್ ವಿಮಾನ ನಿಲ್ದಾಣದಿಂದ ಲುಫ್ತಾನ್ಸ ಫ್ಲೈಟ್ ಏರಿದ್ದಾರೆ. ಶೀಘ್ರದಲ್ಲಿ ವಿಮಾನ ಕೂಡ ಟೆಕ್ ಆಫ್ ಆಗಲಿದೆ ಎಂದು ಬಲಮೂಲಗಳಿಂದ ಮಾಹಿತಿ ಬಂದಿದೆ. ಜರ್ಮನಿಯ ಮ್ಯೂನಿಚ್ ಏರ್ಪೋರ್ಟ್ ನಿಂದ ಬೆಂಗಳೂರಿಗೆ ಬರೋದಕ್ಕಾಗಿ ಸಂಸದ ಪ್ರಜ್ವಲ್ ರೇವಣ್ಣ ಆಗಮಿಸಿ, ತಮ್ಮ ಲಗೇಜ್ ಕೂಡ ಚೆಕ್ ಇನ್ ಮಾಡಿದ್ದಾರೆ. ಇಂದೇ ಬೆಂಗಳೂರಿಗೆ ಆಗಮಿಸೋ ಸಾಧ್ಯತೆ ಇದೆ. ಹೀಗಾಗಿ ಅವರನ್ನು ಬಂಧಿಸೋದಕ್ಕಾಗಿ ಎಸ್ಐಟಿ ಅಧಿಕಾರಿಗಳು ಸಕಲ ಸಿದ್ಧತೆ ಕೈಗೊಂಡಿದ್ದಾರೆ. ಅಶ್ಲೀಲ ವೀಡಿಯೋ ಪ್ರಕರಣದ ಬಳಿಕ ಸಂಸದ ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಪಲಾಯನ ಮಾಡಿದ್ದರು. ತಿಂಗಳಾನುಗಟ್ಟಲೇ ವಿದೇಶದಲ್ಲೇ ಇದ್ದಂತ ಅವರು, ಈಗ ಬೆಂಗಳೂರಿನತ್ತ ಬರೋದಕ್ಕೆ ಹೊರಟಿದ್ದಾರೆ. ಜರ್ಮನಿಯ ಮ್ಯೂನಿಚ್ ವಿಮಾನ ನಿಲ್ದಾಣದಿಂದ ಬೆಂಗಳೂರಿಗೆ ಟಿಕೆಟ್ ಬುಕ್ ಮಾಡಿದ್ದಾರೆ ಎಂಬುದಾಗಿ ಎಸ್ಐಟಿ ಅಧಿಕಾರಿಗಳ ಮೂಲಗಳಿಂದ ತಿಳಿದು ಬಂದಿದೆ. ಈಗಾಗಲೇ ಮ್ಯೂನಿಚ್ ವಿಮಾನ ನಿಲ್ದಾಣಕ್ಕೆ ಬಂದಿರುವಂತ ಅವರು, 2…
ಬೆಂಗಳೂರು : ಕೇರಳದಲ್ಲಿ ನನ್ನ ಮೇಲೆ ದೊಡ್ಡ ಪ್ರಯೋಗ ನಡೆಯುತ್ತಿದೆ.ಯಾವ ಪೂಜೆ ಯಾರು ಮಾಡುತ್ತಿದ್ದಾರೆ ಎಲ್ಲವು ಗೊತ್ತಿದೆ. ನನ್ನ, ಸಿಎಂ ಹಾಗೂ ಸರ್ಕಾರದ ವಿರುದ್ಧ ಪೂಜೆ ನಡೆಯುತ್ತಿದೆ ಎಂದು ಬೆಂಗಳೂರಿನಲ್ಲಿ ಡಿಸಿಎಂ ಶಿವಕುಮಾರ್ ಹೇಳಿದರು. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇರಳ ರಾಜರಾಜೇಶ್ವರಿ ದೇಗುಲದಲ್ಲಿ ಯಾಗ ನಡೆಯುತ್ತಿದೆ. ನನ್ನ ವಿರುದ್ಧ ಶತ್ರು ಭೈರವಿಯಾಗ ನಡೆಯುತ್ತಿದೆ. ಅಘೋರಿಗಳ ಮೂಲಕ ಈ ಒಂದು ಯಜ್ಞ ಮಾಡಿಸುತ್ತಿದ್ದಾರೆ ಎಂದು ಅವರು ತಿಳಿಸಿದರು. ಪಂಚ ಬಲಿಕೊಡುತ್ತಿದ್ದಾರೆ. 21 ಮೇಕೆ, 3 ಎಮ್ಮೆ ಹಾಗೂ 21 ಕುರಿಗಳನ್ನು ಬಲಿಕೊಡುತ್ತಿದ್ದಾರೆ. ಅವರ ಪ್ರಯತ್ನ ನಡೆಯುತ್ತಿದೆ ನಡೀಲಿ ಆದರೆ ನಾವು ನಂಬಿರುವ ದೇವರು ನಮ್ಮನ್ನು ಕಾಪಾಡುತ್ತಾನೆ ಎಂದು ಡಿಕೆ ಶಿವಕುಮಾರ್ ತಿಳಿಸಿದರು.
ಬೆಂಗಳೂರು : ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಇದೀಗ ಜರ್ಮನಿಯ ಮ್ಯೂನಿಕ್ ವಿಮಾನ ನಿಲ್ದಾಣದಿಂದ 3:30ಕ್ಕೆ ಅಲ್ಲಿಂದ ವಿಮಾನ ಟೆಕ್ ಆಫ್ ಅಗಲಿದ್ದು ಮಧ್ಯರಾತ್ರಿ 12:30 ಕ್ಕೆ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿಯಲಿದೆ. ಹೀಗಾಗಿ ಪ್ರಜ್ವಲ್ ರೇವಣ್ಣ ಬಂದ ತಕ್ಷಣ ಅವರ ಬಂಧನಕ್ಕೆ ಎಸ್ಐಟಿ ಸಕಲ ಸಿದ್ಧತೆ ಮಾಡಿಕೊಂಡಿದೆ. ಬೆಂಗಳೂರಿಗೆ ಪ್ರಜ್ವಲ್ ರೇವಣ್ಣ ಬರುತ್ತಿದ್ದಂತೆ ಬಂಧನ ಖಚಿತ ಎಂದು ಹೇಳಲಾಗುತ್ತಿದೆ. ಪ್ರಜ್ವಲ್ ರೇವಣ್ಣ ಬಂಧನಕ್ಕೆ ಇದೀಗ ಎಸ್ ಐ ಟಿ ಅಧಿಕಾರಿಗಳು ತಯಾರಿ ನಡೆಸಿದ್ದಾರೆ. ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಎಸ್ಐಟಿ ಅಧಿಕಾರಿಗಳು ಈಗಾಗಲೇ ಠಿಕಾಣಿ ಹೂಡಿದ್ದಾರೆ. ಪ್ರಜ್ವಲ್ ವಿರುದ್ಧ ಈಗಾಗಲೇ ಲುಕ್ ಔಟ್ ನೋಟಿಸ್ ಜಾರಿಯಾಗಿದೆ. ಹಾಗಾಗಿ ಬೆಂಗಳೂರಿಗೆ ಬರುತ್ತಿದ್ದಂತೆ ಇಮಿಗ್ರೇಶನ್ ನಲ್ಲಿ ಪ್ರಜ್ವಲ್ ರನ್ನು ವಶಕ್ಕೆ ಪಡೆಯಲಾಗುತ್ತದೆ. ಅದಾದ ನಂತರ ಇಮಿಗ್ರೇಶನ್ ಅಧಿಕಾರಿಗಳು SIT ವಶಕ್ಕೆ ನೀಡಲಿದ್ದಾರೆ.ಪ್ರಜ್ವಲ್ ರೇವಣ್ಣ ಬಂಧನಕ್ಕೆ ಎಸ್ಐಟಿ ಈಗಾಗಲೇ ಸಕಲ ಸಿದ್ಧತೆ ಮಾಡಿಕೊಂಡಿದ್ದಾರೆ. ಅದರ ಜೊತೆಗೆ ಬೆಂಗಳೂರಿನ…
ಬೆಳಗಾವಿ : ಜಾತ್ರೆಯಲ್ಲಿ ಪ್ರಸಾದ ಸೇವಿಸಿ 50ಕ್ಕೂ ಹೆಚ್ಚು ಜನ ಅಸ್ವಸ್ಥರಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಕೆರೂರ ಗ್ರಾಮದಲ್ಲಿ ಈ ಒಂದು ಘಟನೆ ಸಂಭವಿಸಿದೆ. ಹೌದು ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಕೆರೂರು ಗ್ರಾಮದಲ್ಲಿ ನಿನ್ನೆ ಬಾಳು ಮಾಮ ಜಾತ್ರೆಯಲ್ಲಿ ಸಾವಿರಾರು ಜನರು ಭಾಗವಹಿಸಿದ್ದರು. ಈ ವೇಳೆ ಪ್ರಸಾದ ಸೇವಿಸಿದ ಜನರು ವಾಂತಿ ಭೇಧಿಯಿಂದ ಅಸ್ವಸ್ಥರಾಗಿದ್ದರು. ಜಾತ್ರೆಯಲ್ಲಿ ಸಾವಿರಾರು ಜನರು ನಿನ್ನೆ ಪ್ರಸಾದವನ್ನು ಸೇವಿಸಿದ್ದರು ಎನ್ನಲಾಗಿದೆ. ಅಲ್ಲದೆ ಮಧ್ಯಾಹ್ನ ಕೂಡ ಉಳಿದಿದ್ದ ಅಡುಗೆಯನ್ನ ರಾತ್ರಿಯೂ ಜನರು ಸೇವಿಸಿದ್ದಾರೆ. ಇದೀಗ ಜಾತ್ರೆಯಲ್ಲಿ ಪ್ರಸಾದ ಸೇವಿಸಿ 59ಕ್ಕೂ ಹೆಚ್ಚು ಜನರು ಅಸ್ವಸ್ಥರಾಗಿದ್ದಾರೆ. ಇನ್ನು ಹಲವು ಜನರಿಗೆ ವಾಂತಿ ಭೇದಿ ಆಗುತ್ತಿದ್ದು ತಕ್ಷಣ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಬೆಂಗಳೂರು : ಕೇಂದ್ರದಲ್ಲಿ ಈ ಬಾರಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮಹಿಳೆಯರಿಗೆ ವಾರ್ಷಿಕವಾಗಿ 1 ಲಕ್ಷ ರುಪಾಯಿ ಹಾಗೂ ತಿಂಗಳಿಗೆ 8 ಸಾವಿರ ಖಾತೆಗೆ ಹಾಗಲಾಗುತ್ತದೆ ಎಂದು ಚುನಾವಣಾ ಪ್ರಣಾಳಿಕೆಯಲ್ಲಿ ತಿಳಿಸಿತ್ತು. ಇದಕ್ಕೆ ಟ್ವೀಟ್ ನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಕಾಂಗ್ರೆಸ್ ವಿರುದ್ಧ ಕಿಡಿಕಾರಿದ್ದರು. ಈಗ ಬಿವೈ ವಿಜಯೇಂದ್ರ ಟ್ವೀಟಿಗೆ ಕಾಂಗ್ರೆಸ್ ತಿರುಗೇಟು ನೀಡಿದ್ದು ಕಾಂಗ್ರೆಸ್ ಎಂದಿಗೂ “15 ಲಕ್ಷದ ಜುಮ್ಲಾ“ ಸುಳ್ಳುಗಳನ್ನು ಹೇಳಿಲ್ಲ ಎಂದಿದೆ. ಟ್ವೀಟ್ ನಲ್ಲಿ ಕಾಂಗ್ರೆಸ್ ಮಾನ್ಯ ಯಡಿಯೂರಪ್ಪನವರ ಪುತ್ರ ವಿಜಯೇಂದ್ರರವರೇ, ಜನ ಕಾಂಗ್ರೆಸ್ ಮೇಲೆ ಇಟ್ಟಿರುವ ನಂಬಿಕೆಯನ್ನು ನೋಡಿ ತಮಗೆ ಸಹಿಸಿಕೊಳ್ಳಲಾಗದಷ್ಟು ತಾಪಮಾನ ಏರುತ್ತಿದೆ! ಜನತೆಗೆ ಈಗಾಗಲೇ ನಾವು “ನುಡಿದಂತೆ ನಡೆಯುತ್ತೇವೆ“ ಎಂಬುದು ಖಾತ್ರಿಯಾಗಿದೆ, ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವುದೂ ಸಹ ಜನರಿಗೆ ಖಚಿತವಾಗಿದೆ. ಗೃಹಲಕ್ಷ್ಮಿಯಂತೆ ”ಮಹಾಲಕ್ಷ್ಮಿ” ಯೋಜನೆಯೂ ಜಾರಿ ಮಾಡುವುದರ ಬಗ್ಗೆ ಜನತೆಗೆ ಅನುಮಾನ ಉಳಿದಿಲ್ಲ, ಏಕೆಂದರೆ ಕಾಂಗ್ರೆಸ್ ಎಂದಿಗೂ “15 ಲಕ್ಷದ ಜುಮ್ಲಾ“ ಸುಳ್ಳುಗಳನ್ನು ಹೇಳಿಲ್ಲ! ಅಂದಹಾಗೆ ಬಿವೈ ವಿಜಯೇಂದ್ರ ಅವರೇ,…
ಬೆಂಗಳೂರು : ಬೆಂಗಳೂರಲ್ಲಿ ದಿನೇ ದಿನೇ ಅಗ್ನಿ ದುರಂತ ಪ್ರಕರಣಗಳ ಸಂಖ್ಯೆ ಹೆಚ್ಚುತಲೆ ಇದೆ. ಇದೀಗ ಬೆಂಗಳೂರು ಹೊರವಲಯದ ಆನೇಕಲ್ ಬಳಿ ಇರುವ ಬೊಮ್ಮಸಂದ್ರ ಕೈಗಾರಿಕಾ ಪ್ರದೇಶದಲ್ಲಿ ಪ್ಲಾಸ್ಟಿಕ್ ಗಮ್ ಟೇಪ್ ತಯಾರಿಕಾ ಕಾರ್ಖಾನೆಯೊಂದಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿ ಹೊತ್ತಿ ಉರಿದಿದ್ದು, ಕಚ್ಚಾ ವಸ್ತುಗಳು ಸುಟ್ಟು ಕರಕಲಾಗಿವೆ. ಹೌದು ಇಂದು ಬೆಳಿಗ್ಗೆ 11 ಗಂಟೆಗೆ ಬೆಂಗಳೂರು ಹೊರವಲಯದ ಆನೇಕಲ್ ಬಳಿ ಇರುವ ಬೊಮ್ಮಸಂದ್ರ ಕೈಗಾರಿಕಾ ಪ್ರದೇಶದಲ್ಲಿ ಟೆಕ್ನೆವಾ ಟೇಪ್ಸ್ ಪ್ರೈ. ಲಿ. ಎಂಬ ಕಾರ್ಖಾನೆಯಲ್ಲಿ ಈ ಒಂದು ಅಗ್ನಿ ಅನಾಹುತ ಸಂಭವಿಸಿದೆ.ಭಾರಿ ಬೆಂಕಿ ಹಿನ್ನೆಲೆಯಲ್ಲಿ ಸಮೀಪದ ಕಾರ್ಖಾನೆಗಳ ಸಿಬ್ಬಂದಿಯೂ ಆತಂಕಗೊಂಡರು. ಸ್ಥಳಕ್ಕೆ ಹೆಬ್ಬಗೋಡಿ ಪೊಲೀಸರು ದೌಡಾಯಿಸಿದ್ದು, ಹೆಚ್ಚಿನ ಅನಾಹುತ ತಡೆಯುವಲ್ಲಿ ಕಾರ್ಯಪ್ರವೃತ್ತರಾಗಿದ್ದಾರೆ. ಗಮ್ ಟೇಪ್ ತಯಾರಿಕಾ ಕಾರ್ಖಾನೆಯಲ್ಲಿ ಬೆಂಕಿ ಸುಲಭವಾಗಿ ಹೊತ್ತಿಕೊಳ್ಳುವ ರಾಸಾಯನಿಕ ಇರುವುದು ಬೆಂಕಿಯ ತೀವ್ರತೆಗೆ ಕಾರಣವಾಗಿರಬಹುದು ಎಂದು ಶಂಕಿಸಲಾಗಿದೆ.ಬೆಂಕಿಗೆ ಇಡೀ ಕಾರ್ಖಾನೆ ಆಹುತಿಯಾಗಿದ್ದು, ಮುಗಿಲೆತ್ತರಕ್ಕೆ ದಟ್ಟ ಹೊಗೆ ಆವರಿಸಿತ್ತು. ಹತ್ತಿರದ ಎಲೆಕ್ಟ್ರಾನಿಕ್ ಸಿಟಿ ಹಾಗೂ ಆನೇಕಲ್ ಭಾಗದ ಅಗ್ನಿಶಾಮಕ…
ಬೀದರ್ : ಬೀದರ್ ನ ಜಿ ಎನ್ ಡಿ ಕಾಲೇಜು ಕಾರ್ಯಕ್ರಮದಲ್ಲಿ ಜೈ ಶ್ರೀ ರಾಮ್ ಹಾಡು ಹಾಕಿದ್ದಕ್ಕೆ ಹಿಂದೂ ಮತ್ತು ಮುಸ್ಲಿಂ ವಿದ್ಯಾರ್ಥಿಗಳು ಗಲಾಟೆ ಮಾಡಿಕೊಂಡಿರುವ ಘಟನೆಗೆ ಸಂಬಂಧಿಸಿದಂತೆ ಇದೀಗ 17 ವಿದ್ಯಾರ್ಥಿಗಳ ವಿರುದ್ಧ ಬೀದರ್ ನ ಗಾಂಧಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಹೌದು ಇಂದು ಬೀದರ್ ನ ಮೈಲೂರು ಕ್ರಾಸ್ ಬಳಿ ಇರುವ ಜಿ ಏನ್ ಡಿ ಡಿಗ್ರಿ ಕಾಲೇಜಿನಲ್ಲಿ ಹಿಂದೂ ಮುಸ್ಲಿಂ ವಿದ್ಯಾರ್ಥಿಗಳ ಹೊಡೆದಾಟ ಸಂಬಂಧ ಇದೀಗ 17 ವಿದ್ಯಾರ್ಥಿಗಳ ವಿರುದ್ಧ ಕೇಸ್ ದಾಖಲಾಗಿದೆ. ಎರಡು ಸಮುದಾಯದ ವಿದ್ಯಾರ್ಥಿಗಳಿಂದ ದೂರು ಮತ್ತು ಪ್ರತಿದೂರು ದಾಖಲಾಗಿದೆ ಎಂದು ಬೀದರ್ ಎಸ್ ಪಿ ಚನ್ನಬಸವಣ್ಣ ರಿಂದ ಮಾಧ್ಯಮ ಪ್ರಕಟಣೆ ಹೊರಡಿಸಲಾಗಿದೆ. ಬೀದರ್ ನ ಗಾಂಧಿಗಂಜ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.ಗಾಯಗೊಂಡಿದ್ದ ವಿದ್ಯಾರ್ಥಿಗಳಿಬ್ಬರ ದೂರಿನ ಮೇರೆಗೆ ಇದೀಗ ಕೇಸ್ ದಾಖಲಾಗಿದೆ.ಹಲ್ಲೆ ಪ್ರಕರಣದಲ್ಲಿ ಭಾಗಿಯಾದ 17 ವಿದ್ಯಾರ್ಥಿಗಳ ವಿರುದ್ಧ ದೂರು ದಾಖಲಾಗಿದೆ.ನಾಳೆ ಕಾಲೇಜಿನಲ್ಲಿ ಬಿಳ್ಕೊಡುಗೆ ಹಾಗೂ ಸ್ವಾಗತ ಕಾರ್ಯಕ್ರಮವನ್ನು ಇದೀಗ ಕಾಲೇಜು…
ದಾವಣಗೆರೆ : ಚೆನ್ನಗಿರಿ ಘಟನೆಯ ವೇಳೆ ಯಾರೂ ಪಾಕಿಸ್ತಾನ ಜಿಂದಾಬಾದ್ ಎಂದು ಕೂಗಿಲ್ಲ ಎಂದು ದಾವಣಗೆರೆ SP ಉಮಾ ಪ್ರಶಾಂತ್ ಸ್ಪಷ್ಟನೆ ನೀಡಿದ್ದಾರೆ. ಮೇ 24 ರಂದು ಚೆನ್ನಗಿರಿ ಠಾಣೆಯ ಮುಂದೆ ಪ್ರತಿಭಟನೆ ವೇಳೆ ಕಲ್ಲುತೂರಾಟ ನಡೆಸಲಾಗಿತ್ತು. ಈ ವೇಳೆ ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗಿದ ಆರೋಪ ಕೇಳಿ ಬಂದಿತ್ತು ಎಂದು ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹರಿದಾಡುತ್ತಿದೆ.ಈ ಬಗ್ಗೆ ಪರಿಶೀಲಿಸಿದ್ದು ಪಾಕಿಸ್ತಾನ ಜಿಂದಾಬಾದ್ ಅಂತ ಯಾರು ಘೋಷಣೆ ಕೂಗಿಲ್ಲ. ಪರಿಶೀಲಿಸಲಾದ ವಿಡಿಯೋ ದಲ್ಲಿ ಪೊಲೀಸರಿಗೆ ಧಿಕ್ಕಾರ ಎಂದು ಕೂಗಿದ್ದಾರೆ ಎಂದು ಅವರು ತಿಳಿಸಿದರು. ಪಾಕಿಸ್ತಾನ ಜಿಂದಾಬಾದ್ ಎಂದು ಕೂಗಿದ ವಿಡಿಯೋ ಲಭ್ಯವಿದ್ದಲ್ಲಿ ಜಿಲ್ಲಾ ಪೊಲೀಸ್ ಕಚೇರಿ ಅಥವಾ ಸ್ಥಳೀಯ ಠಾಣೆಗೆ ಮಾಹಿತಿ ನೀಡಿದರೆ ಸೂಕ್ತವಾದಂತೆ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಎಸ್ ಪಿ ಉಮಾ ಪ್ರಶಾಂತ್ ತಿಳಿಸಿದರು. ಯಾವುದೇ ಕಾರಣಕ್ಕೂ ಸಾರ್ವಜನಿಕರು ಸಾಮಾಜಿಕ ಜಾಲತಾಣಗಳಲ್ಲಿ ಸುದ್ದಿ ಸುಳ್ಳು ಸುದ್ದಿಗಳನ್ನು ಹರಡಬಾರದು ಸಾರ್ವಜನಿಕರಿಗೆ ದಾವಣಗೆರೆ ಎಸ್‌ಪಿ ಉಮಾ ಪ್ರಶಾಂತ್ ಸೂಚನೆ ನೀಡಿದರು. ಮಟ್ಕಾ…
ಬೆಂಗಳೂರು : ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ 136 ಸ್ಥಾನಗಳನ್ನು ಪಡೆಯದು ನುಡಿದಂತೆ ಐದು ಪ್ರಮುಖ ಗ್ಯಾರಂಟಿಗಳನ್ನು ಜಾರಿಗೊಳಿಸಿತು ಅದರಲ್ಲಿ ಪ್ರಮುಖವಾದದ್ದು ಮಹಿಳೆಯರ ಉಚಿತ ಪ್ರಯಾಣ ಶಕ್ತಿ ಯೋಜನೆ ಕೂಡ ಒಂದಾಗಿದೆ. ಇದೀಗ ಈ ಒಂದು ಯೋಜನೆಯಿಂದ ಜಿಎಸ್‌ಟಿ ಸಂಗ್ರಹ ಸೇರಿದಂತೆ ಔದ್ಯೋಗಿಕ ಕ್ಷೇತ್ರದಲ್ಲಿ ಮಹಿಳೆಯರ ಪಾಲುದಾರಿಕೆ ಹೆಚ್ಚಳವಾಗಿದೆ ಎಂದು ಸಾರಿಗೆ ಇಲಾಖೆಯ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ. ಈ ಕುರಿತಂತೆ ಟ್ವಿಟ್ ನಲ್ಲಿ ಮಾಹಿತಿ ಹಂಚಿಕೊಂಡಿರುವ ಸಚಿವ ರಾಮಲಿಂಗ ರೆಡ್ಡಿ, ಶಕ್ತಿ ಯೋಜನೆಯಿಂದ ಜಿಎಸ್‌ಟಿ ಸಂಗ್ರಹ ಹೆಚ್ಚಿದ್ದು, ಔದ್ಯೋಗಿಕ ಕ್ಷೇತ್ರದಲ್ಲಿ ಶೇ 25.1ನಿಂದ 30.2ರಷ್ಟು ಮಹಿಳೆಯ ಪಾಲುದಾರಿಕೆ ಹೊಂದಿದೆ. ಇದು ಬಿಟ್ಟಿ ಭಾಗ್ಯವಲ್ಲ ಸಮಾಜದಲ್ಲಿ ಸರ್ಕಾರ ಹೂಡಿರುವ ಬಂಡವಾಳ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಟ್ವೀಟ್ ಮಾಡಿದ್ದಾರೆ. ಆ ಮೂಲಕ ಶಕ್ತಿ ಉಚಿತ ಯೋಜನೆ ಎಂದು ಮೂಗು ಮುರಿಯುವ ಬಿಜೆಪಿಗೆ ಟಾಂಗ್ ನೀಡಿದ್ದಾರೆ. ಕರ್ನಾಟಕ ಕಾಂಗ್ರೆಸ್ ನಮ್ಮ ನಾಗರಿಕರ ಕಲ್ಯಾಣವನ್ನು ಹೆಚ್ಚಿಸಲು ಬದ್ಧವಾಗಿದೆ. ಅದರಲ್ಲೂ ವಿಶೇಷವಾಗಿ ತಮ್ಮ ಕುಟುಂಬಗಳನ್ನು ಕಾಳಜಿ ವಹಿಸುವ…