Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ಮೈಸೂರಿನ ಕೆ ಆರ್ ನಗರ ಮಹಿಳೆ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣಗೂ ಕೂಡ ಬಂಧನದ ಭೀತಿ ಎದುರಾಗಿದ್ದರಿಂದ ಅವರು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ವಿಚಾರಣೆಯನ್ನು ನಡೆಸಿದ ನ್ಯಾಯಾಲಯವು ಅರ್ಜಿ ವಿಚಾರಣೆಯನ್ನು ನಾಳೆಗೆ ಮುಂದೂಡಿದೆ. ಮೈಸೂರಿನ ಕೆ ಆರ್ ನಗರ ಮಹಿಳೆಯ ಅಪಹರಣ ಪ್ರಕರಣದಲ್ಲಿ ಬಂಧನದ ಭೀತಿಯಿಂದ ನಿರೀಕ್ಷಣ ಜಾಮೀನು ಅರ್ಜಿಯನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ವಿಚಾರಣೆ ನಡೆಯಿಸಲಾಯಿತು. ವಿಚಾರಣೆಗೆ ಹಾಜರಾಗುವಂತೆ ಭವಾನಿಗೆ ನೋಟಿಸ್ ನೀಡಲಾಗಿದೆ.ಯಾವ ನಿಯಮದರಿ ನೋಟಿಸ್ ನೀಡಿದ್ದಾರೆ ಎಂದು ಎಸ್ಐಟಿ ತಿಳಿಸಿಲ್ಲ. ಹೀಗಾಗಿ ಭವಾನಿ ರೇವಣ್ಣಗೂ ಬಂಧನದ ಭೀತಿ ಇರುವುದರಿಂದ ಭವಾನಿ ರೇವಣ್ಣ ಪರ ವಕೀಲರು ಮದನ್ ತರ ನಿರೀಕ್ಷಣ ಜಾಮೀನು ನೀಡುವಂತೆ ಮನವಿ ಮಾಡಿದ್ದಾರೆದೆ. ಆದ್ದರಿಂದ ಆಕ್ಷೇಪಣೆ ಸಲ್ಲಿಸುವಂತೆ ಎಸ್ಐಟಿ ಪೊಲೀಸರಿಗೆ ಇದೀಗ ಕೋರ್ಟ್ ನೋಟಿಸ್ ನೀಡಿದೆ. ಭವಾನಿ ನಿರೀಕ್ಷಣ ಜಾಮೀನು ಅರ್ಜಿಯನ್ನು ನಾಳೆಗೆ ಮುಂದೂಡಿದೆ.
ಬೆಂಗಳೂರು : ಮಹಿಳೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣಗೆ ಬಂಧನದ ಭೀತಿ ಎದುರಾಗಿರುವ ಹಿನ್ನೆಲೆಯಲ್ಲಿ ಇದೀಗ ಅವರು ನಿರೀಕ್ಷಣಾ ಜಾಮೀನು ಕೋರಿ ಅರ್ಜಿಯನ್ನು ಸಲ್ಲಿಸಿದ್ದಾರೆ. ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟಿಗೆ ಅರ್ಜಿ ಸಲ್ಲಿಸಿದ್ದಾರೆ. ಈಗಾಗಲೇ ಮಹಿಳೆ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಎಚ್ ಡಿ ರೇವಣ್ಣ ಅವರಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಶರತ್ತು ಬದ್ಧ ಜಾಮೀನು ಮಂಜೂರು ಮಾಡಿತ್ತು. ಇದೀಗ ಈ ಒಂದು ಪ್ರಕರಣದಲ್ಲಿ ಭವಾನಿ ರೇವಣ್ಣ ಹೆಸರು ಕೇಳಿ ಬಂದಿರುವ ಹಿನ್ನೆಲೆಯಲ್ಲಿ ಇದೀಗ ಅವರು ಬಂಧನದ ಭೀತಿಯಿಂದ ನಿರೀಕ್ಷಣಾ ಜಾಮೀನು ಕೋರಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಅಲ್ಲಿ ಭವಾನಿ ರೇವಣ್ಣ ಅರ್ಜಿ ಸಲ್ಲಿಸಿದ್ದಾರೆ.
ಬೆಂಗಳೂರು : ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದೇಶದಲ್ಲಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿದೇಶದಲ್ಲಿ ಇದ್ದು ವಿಡಿಯೋ ಒಂದನ್ನು ರಿಲೀಸ್ ಮಾಡಿದ್ದಾರೆ. ಇದೀಗ ಪ್ರಜ್ವಲ್ ವಿಡಿಯೋ ಬಿಡುಗಡೆ ಮಾಡಿದ ಕ್ಷಣ ಎಸ್ ಐ ಟಿ ಅಧಿಕಾರಿಗಳು ಫುಲ್ ಅಲರ್ಟ್ ಆಗಿದ್ದಾರೆ. ವಿಡಿಯೋ ಬಿಟ್ಟಿದ್ದು ಎಲ್ಲಿಂದ ಯಾವ ದೇಶದಿಂದ ಈ ಕುರಿತು ಎಸ್ಐಟಿಯಿಂದ ಪರಿಶೀಲನೆ ಶುರು ಮಾಡಿದೆ.ಪ್ರಜ್ವಲ್ ರೇವಣ್ಣ ವಿಡಿಯೋ ಬೆನ್ನಲ್ಲೇ ಪ್ರಜ್ವಲ್ ರೇವಣ್ಣ ಕಾಂಟ್ಯಾಕ್ಟ್ ಗೆ ಮುಂದಾದ ಎಸ್ಐಟಿ, ಈಗಾಗಲೇ ಪ್ರಜ್ವಲ್ ರೇವಣ್ಣ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ ಮಾಡಲಾಗಿದೆ. ಹಾಸನ ಸಂಸದ ಪ್ರಜ್ವಲ್ ವಿರುದ್ಧ ಹರೆಸ್ಟ್ ವಾರಂಟ್ ಕೂಡ ಇದೆ ಒಂದು ತಿಂಗಳಿನಿಂದ ಏರ್ಪೋರ್ಟ್ ನಲ್ಲಿ ಎಸ್ಐಟಿ ಠಿಕಾಣಿ ಹೂಡಿದ್ದಾರೆ. ಯಾವ ವಿಮಾನದಲ್ಲಿ ಬರುತ್ತಾನೆ ಎಂದು ಮಾಹಿತಿ ಪಡೆಯುವ ಎಸ್ ಐ ಟಿ ಅದಕ್ಕೂ ಮುಂಚೆ ಪ್ರಜ್ವಲ್ ನನ್ನು ಇಮಿಗ್ರೇಷನ್ ಅಧಿಕಾರಿಗಳು ವಶಕ್ಕೆ ಪಡೆಯಲಿದ್ದಾರೆ. ವಶಕ್ಕೆ ಪಡೆದು ಇಮಿಗ್ರೇಶನ್ ಅಧಿಕಾರಿಗಳು ಎಸ್ಐಟಿಗೆ ಒಪ್ಪಿಸಲಿದ್ದಾರೆ.ಅದಾದ ಬಳಿಕ ಎಸ್ಐಟಿಯಿಂದ ಪ್ರಜ್ವಲ್…
ಚಿಕ್ಕಬಳ್ಳಾಪುರ : ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಒಬ್ಬರಿ ಒಂದು ತಿಂಗಳ ನಂತರ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಪ್ರತ್ಯಕ್ಷವಾಗಿದ್ದು ವಿದೇಶದಲ್ಲಿ ಇದ್ದುಕೊಂಡೆ ವಿಡಿಯೋ ರಿಲೀಸ್ ಮಾಡಿದ್ದಾರೆ ಮೇ 31ರಂದು ಎಸ್ ಐ ಟಿ ವಿಚಾರಣೆಗೆ ಹಾಜರಾಗುತ್ತೇನೆ ಎಂದು ತಿಳಿಸಿದ್ದಾರೆ. ಈ ಒಂದು ವಿಚಾರಕ್ಕೆ ಸಂಬಂಧಿಸಿದಂತೆ ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದು, ಪ್ರಕರಣವನ್ನು ಎಲ್ಲಿಗೆ ತಂದು ನಿಲ್ಲಿಸುತ್ತಾರೋ ಕಾದು ನೋಡೋಣ ಎಂದು ತಿಳಿಸಿದರು. ಚಿಕ್ಕಬಳ್ಳಾಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಎಚ್ ಡಿ ಕುಮಾರಸ್ವಾಮಿ, ಅಶ್ಲೀಲ ವಿಡಿಯೋ ಪ್ರಕರಣ ಸಂಬಂಧ ದೇವೇಗೌಡರು ಮತ್ತು ನಾನು ಎಲ್ಲೇ ಇದ್ದರೂ ಎಸ್ಐಟಿಗೆ ಹಾಜರಾಗಿ ತನಿಖೆಗೆ ಸಹಕಾರ ಕೊಡಬೇಕೆಂದು ದೇವೇಗೌಡರು ಎಚ್ಚರಿಕೆಯನ್ನು ಕೊಟ್ಟಿದ್ದರೂ.ಹಾಗೂ ನಾನು ಒಂದು ಮನವಿ ಕೂಡ ಮಾಡಿದ್ದೆ ಅಲ್ಲದೆ ಕಾರ್ಯಕರ್ತರು ಮೇಲೆ ಗೌರವಿದ್ದರೆ ತಕ್ಷಣ ಬರಬೇಕೆಂದು ಮನೆ ಮಾಡಿದ್ದೆ. ಅದಕ್ಕೆ ಓಗೊಟ್ಟು ಬರುವುದಕ್ಕೆ ನಮಗೂ ಕೂಡ ಸ್ವಲ್ಪ ಸಮಾಧಾನವಿದೆ.ಅದರಿಂದ ಮುಂದಿನ ದಿನಗಳಲ್ಲಿ ತನಿಖೆಯಲ್ಲಿ…
ಬೆಂಗಳೂರು : ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರು ವಿದೇಶದಲ್ಲಿ ಇದ್ದುಕೊಂಡೆ ಇದೀಗ ಮೊದಲ ಬಾರಿಗೆ ವಿಡಿಯೋ ಮೂಲಕ ಹೇಳಿಕೆಯನ್ನು ನೀಡಿದ್ದಾರೆ ಮೇ 31ರಂದು ಬೆಳಿಗ್ಗೆ 10 ಗಂಟೆಗೆ ಎಸ್ಐಟಿ ವಿಚಾರಣೆಗೆ ಹಾಜರಾಗುತ್ತೇನೆ ಎಂದು ವಿಡಿಯೋದಲ್ಲಿ ತಿಳಿಸಿದ್ದಾರೆ. ವಿಡಿಯೋದಲ್ಲಿ ಹಾಸನ ಸಂಸದ ಪ್ರಜ್ವಲ್ ರೇವಣ್ಣ ನನ್ನ ವಿದೇಶ ಪ್ರವಾಸ ಮೊದಲೇ ನಿಗದಿಯಾಗಿತ್ತು. ವಿದೇಶಕ್ಕೆ ಹೋದ ಮೂರು ನಾಲ್ಕು ದಿನದ ಬಳಿಕ ಪ್ರಕರಣದ ಬಗ್ಗೆ ಮಾಹಿತಿ ತಿಳಿದು ಬಂದಿದೆ. ಆನಂತರ ಎಸ್ ಐಟಿ ನೋಟಿಸ್ ನೀಡಿದ ಬಗ್ಗೆ ಮಾಹಿತಿ ಸಿಕ್ಕಿತು.ನನ್ನ ವಿರುದ್ಧದ ಎಲ್ಲಾ ಆರೋಪಗಳು ಸುಳ್ಳು ಎಂದು ವಿದೇಶದಿಂದ ವಿಡಿಯೋ ರಿಲೀಸ್ ಮಾಡಿರುವ ಸಂಸದ ಪ್ರಜ್ವಲ್ ರೇವಣ್ಣ ಹೇಳಿಕೆ ನೀಡಿದ್ದಾರೆ. ಹಾಗಾಗಿ ಮೇ 31ರಂದು ಎಸ್ಐಟಿ ವಿಚಾರಣೆಗೆ ಹಾಜರಾಗುತ್ತೇನೆ. ಅಂದು ಬೆಳಗ್ಗೆ 10 ಗಂಟೆಗೆ ಎಸ್ಐಟಿ ವಿಚಾರಣೆಗೆ ಹಾಜರಾಗುತ್ತೇನೆ ನನ್ನ ತಂದೆ ತಾಯಿ ಹಾಗೂ ತಾತನ, ಕುಮಾರಣ್ಣನ ಕ್ಷಮೆ ಕೋರುತ್ತೇನೆ ರಾಜ್ಯದ ಜನತೆ ಕಾರ್ಯಕರ್ತರ ಬಳಿಯು ಕ್ಷಮೆ…
ಬೆಂಗಳೂರು : ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ಒಂದು ತಿಂಗಳಿನಿಂದ ವಿದೇಶದಲ್ಲಿ ತಲೆ ಮರೆಸಿಕೊಂಡಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಕೊನೆಗೂ ಪ್ರತ್ಯಕ್ಷವಾಗಿದ್ದಾರೆ. ವಿದೇಶದಲ್ಲಿ ಕುಳಿತಿಕೊಂಡೆ ಇದೀಗ ವಿಡಿಯೋ ಒಂದನ್ನು ರಿಲೀಸ್ ಮಾಡಿದ್ದಾರೆ. ಎಸ್ ಐ ಟಿ ಅಧಿಕಾರಿಗಳ ಎದುರು ಮೇ 31ಕ್ಕೆ ವಿಚಾರಣೆಗೆ ಹಾಜರಾಗುತ್ತೇನೆ ಎಂದು ವಿಡಿಯೋದಲ್ಲಿ ತಿಳಿಸಿದ್ದಾರೆ. ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಪ್ರಕರಣ ದಾಖಲಾಗಿದ್ದವು. ಅಲ್ಲದೆ ವಿಚಾರಣೆಗೆ ಹಾಜರಾಗುವಂತೆ ಎಸ್ಐಟಿ ಹಲವಾರು ಬಾರಿ ನೋಟಿಸ್ ನೀಡಿದ್ದರು.ಆದರೆ ಯಾವುದಕ್ಕೂ ಅವರು ಉತ್ತರ ನೀಡಿರಲಿಲ್ಲ. ಇದೀಗ ಕೊನೆಗೂ ಪ್ರಜ್ವಲ್ ರೇವಣ್ಣ ಪ್ರತ್ಯಕ್ಷವಾಗಿದ್ದಾರೆ. ವಿದೇಶದಲ್ಲಿ ಕುತು ಪ್ರಜ್ವಲ್ ವಿಡಿಯೋ ರಿಲೀಸ್ ಮಾಡಿದ್ದಾರೆ ಎಂದು ತಿಳಿದುಬಂದಿದೆ. ವಿಡಿಯೋದಲ್ಲಿ ನಾನು ವಿದೇಶಕ್ಕೆ ಹೋಗಿದ್ದು ಪ್ರಿ ಪ್ಲಾನ್ ಎಂದು ಪ್ರಜ್ವಲ್ ಹೇಳಿದ್ದಾರೆ. ಮೇ 31ಕ್ಕೆ SIT ಮುಂದೆ ವಿಚಾರಣೆಗೆ ಹಾಜರಾಗುತ್ತೇನೆ. ನನ್ನ ತಂದೆ ತಾಯಿ ಹಾಗೂ ತಾತನಿಗೆ ನಾನು ಕ್ಷಮೆ ಕೋರುತ್ತೇನೆ. ಅಲ್ಲದೆ ಜನರಿಗೆ ಜೆಡಿಎಸ್ ಕಾರ್ಯಕರ್ತನಿಗೆ…
ಗದಗ : ಬಿತ್ತನೆ ಬೀಜ ತರುವ ವೇಳೆ ಸರ್ಕಾರಿ ಬಸ್ ಬೈಕ್ ಒಂದಕ್ಕೆ ಡಿಕ್ಕಿ ಹೊಡೆದಿರುವ ಪರಿಣಾಮ ಬೈಕ್ ನಲ್ಲಿ ತೆರಳುತ್ತಿದ್ದ ಇಬ್ಬರು ರೈತರು ಸ್ಥಳದಲ್ಲೇ ಸಾವನ್ನಪ್ಪಿರುವ ದುರ್ಘಟನೆ ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಹಳ್ಳಿಗುಡಿ ಎಂಬಲ್ಲಿ ಈ ಅಪಘಾತ ಸಂಭವಿಸಿದೆ. ಹೌದು ಸರ್ಕಾರಿ ಬಸ್ ಡಿಕ್ಕಿಯಾಗಿ ಇಬ್ಬರು ಇಬ್ಬರು ರೈತರು ಸಾವನ್ನಪ್ಪಿದ್ದಾರೆ. ಬೈಕ್ ನಲ್ಲಿ ತೆರಳುತ್ತಿದ್ದ ಇಬ್ಬರು ರೈತರು ದುರ್ಮರಣ ಹೊಂದಿರುವ ಘಟನೆ ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಹಳ್ಳಿಗುಡಿ ಬಳಿ ಘಟನೆ ಸಂಭವಿಸಿದೆ. ಹಳ್ಳಿಗುಡಿ ಗ್ರಾಮದ ರೈತ ಪರಸಪ್ಪ ಜೋಗಿನ ಹಾಗೂ ಪೇಠಾಲೂರು ಗ್ರಾಮದ ಮಾರುತಿ ಯಾಟಿ ಸಾವನ್ನಪ್ಪಿದ್ದಾರೆ. ಬಿತ್ತನೆ ಬೀಜ ಖರೀದಿಸಿ ಊರಿಗೆ ಬರುವಾಗ ಈ ಅಪಘಾತ ಸಂಭವಿಸಿದೆ. ಮುಂಡರಗಿ ಪೊಲೀಸ್ ಠಾಣೆಯಲ್ಲಿ ಘಟನೆ ಕುರಿತಂತೆ ಪ್ರಕರಣ ದಾಖಲಾಗಿದೆ.
ನವದೆಹಲಿ : ಉಚಿತ ಗ್ಯಾರಂಟಿಗಳ ಆಮಿಷವೊಡ್ಡುವ ಮೂಲಕ ಜಮೀರ್ ಅಹಮ್ಮದ್ ಖಾನ್ ಅವರು ಚುನಾವಣಾ ಅಕ್ರಮ ಎಸಗಿದ್ದಾರೆ. ಹೀಗಾಗಿ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಬೇಕು ಎಂದು ಸಲ್ಲಿಸಿದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ಹೌದು ಜಮೀರ್ ಅಹಮದ್ ಖಾನ್ ಅವರನ್ನು ಶಾಸಕ ಸ್ಥಾನದಿಂದ ವಜಾಗೊಳಿಸುವಂತೆ ಚಾಮರಾಜಪೇಟೆ ನಿವಾಸಿ ಶಶಾಂಕ್ ಜೆ. ಶ್ರೀಧರ್ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ನ ನ್ಯಾಯಮೂರ್ತಿ ನ್ಯಾಯಮೂರ್ತಿ ಸೂರ್ಯಕಾಂತ್ ನೇತೃತ್ವದ ದ್ವಿಸದಸ್ಯ ಪೀಠ, ಚುನಾವಣಾ ಗ್ಯಾರಂಟಿಗಳು ಭ್ರಷ್ಟಾಚಾರಕ್ಕೆ ಕಾರಣವಾಗುವುದಿಲ್ಲ. ಸಾರ್ವಜನಿಕರಿಗೆ ನೇರವಾಗಿ ಆರ್ಥಿಕ ಸಹಾಯಕವಾಗುತ್ತದೆ. ಇದರಿಂದ ಅಭ್ಯರ್ಥಿ ಭ್ರಷ್ಟನಾಗುತ್ತಾನೆ ಎಂಬ ವಾದ ಸರಿಯಲ್ಲ ಎಂದು ಅಭಿಪ್ರಾಯಪಟ್ಟಿದೆ. ರಾಜಕೀಯ ಪಕ್ಷದ ಪ್ರಣಾಳಿಕೆಯಲ್ಲಿನ ಭರವಸೆಗಳು ಜನರಿಗೆ ಸಹಾಯಕವಾಗುತ್ತವೆ. ಸಾರ್ವಜನಿಕರಿಗೆ ನೇರವಾಗಿ ಅಥವಾ ಪರೋಕ್ಷವಾಗಿ ಆರ್ಥಿಕ ಸಹಾಯಕ್ಕೆ ಕಾರಣವಾಗುತ್ತವೆ. ಇದರಿಂದ ಆ ಪಕ್ಷದ ಅಭ್ಯರ್ಥಿಯ ಭ್ರಷ್ಟಚಾರಕ್ಕೆ ಕಾರಣವಾಗುತ್ತದೆ ಎಂಬುದು ಸೂಕ್ತವಾದ ವಾದವಲ್ಲ. ಅದನ್ನು ಒಪ್ಪಿಕೊಳ್ಳಲಾಗುವುದಿಲ್ಲ ಎಂದು ಹೇಳಿ ಅರ್ಜಿಯನ್ನು ವಜಾಗೊಳಿಸಿದೆ.
ರಾಯಚೂರು : ರಾಯಚೂರಿನಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು ಶಾರ್ಟ್ ನ ಸರ್ಕ್ಯೂಟ್ ನಿಂದ ಚಾರ್ಜಿಂಗ್ ಬೈಕ್ ಅಂಗಡಿಯ ಒಂದು ಸಂಪೂರ್ಣವಾಗಿ ಹೊತ್ತಿ ಉರಿದಿರುವ ಘಟನೆ ರಾಯಚೂರು ನಗರದ ಮಹಾವೀರ ಚೌಕ್ ನಲ್ಲಿ ನಡೆದಿದೆ. ರೈಚೂರ್ ನಲ್ಲಿ ಚಾರ್ಜಿಂಗ್ ಬೈಕ್ ಅಂಗಡಿಗೆ ಬೆಂಕಿ ಹೊತ್ತಿಕೊಂಡಿದ್ದು, ಶಾರ್ಟ್ ಸರ್ಕ್ಯೂಟ್ ನಿಂದಾಗಿ ಈ ಒಂದು ಅಗ್ನಿ ಅವಘಡ ಸಂಭವಿಸಿದೆ. ಘಟನೆಯು ರಾಯಚೂರಿನ ಮಹಾವೀರ ಚೌಕ್ ನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಆರ್ ಕೆ ಭಂಡಾರಿ ಅವರ ಅಂಗಡಿ ಬೆಂಕಿಗೆ ಆಹುತಿಯಾಗಿದೆ. ಬೆಂಕಿ ಅನಾಹುತದಿಂದ ಮೂರು ಅಂತರ್ಸಿನ ಕಟ್ಟಡ ಸಂಪೂರ್ಣ ಬೆಂಕಿಗೆ ಆಹುತಿಯಾಗಿದೆ. ಬೆಂಕಿ ನಂದಿಸಲು ಅಗ್ನಿಶಾಮಕ ದಳದ ಸಿಬ್ಬಂದಿಗಳು ಇದೀಗ ಹರಸಾಹಸ ಪಡುತ್ತಿದ್ದಾರೆ. ಅದೃಷ್ಟವಶಾತ ಘಟನೆಯಲ್ಲಿ ಯಾವುದೇ ಸಾವು ನೋವುಗಳ ಕುರಿತಂತೆ ವರದಿಯಾಗಿಲ್ಲ.ಸದರ ಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಲ್ಲದೆ ಕಳೆದ ಎರಡು ದಿನಗಳ ಹಿಂದೆ ಬೀದರ್ ನಗರದ ಜೆಸ್ಕಾಂ ಕಚೇರಿಯಲ್ಲಿ ಭಾರಿ ಅಗ್ನಿ ದುರಂತ ಸಂಭವಿಸಿತ್ತು. ಬೀದರ್ ನ ಜ್ಯೋತಿ ನಗರದಲ್ಲಿರುವ…
ಬೆಂಗಳೂರು : ಬೆಂಗಳೂರಿನಲ್ಲಿ ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ಜಿ. ಆರ್ ಫಾರ್ಮ್ ಹೌಸ್ ನಲ್ಲಿ ಇತ್ತೀಚಿಗೆ ರೇವ್ ಪಾರ್ಟಿ ಮೇಲೆ ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ತೆಲುಗು ನಟಿ ಹೇಮಾ ಹೊಸ ವಿಡಿಯೋದಲ್ಲಿ ಸ್ಪಷ್ಟನೇ ನೀಡಿದ್ದು, ಒಂದು ತಪ್ಪು ಸಮರ್ಥಿಸಿಕೊಳ್ಳಲು ಮತ್ತೊಂದು ತಪ್ಪು ಮಾಡಲ್ಲ ಎಂದು ತಿಳಿಸಿದ್ದಾರೆ. ಅವರು ಮಾಡಿರುವ ಹೊಸ ವಿಡಿಯೋದಲ್ಲಿ ನನ್ನಿಂದಲೂ ತಪ್ಪಾಗಿದೆ ನಾನೇನು ದೇವರಲ್ಲ ಎಂದು ಹೊಸ ವಿಡಿಯೋದಲ್ಲಿ ತೆಲುಗು ನಟಿ ಹೇಮಾ ಹೇಳಿಕೆ ನೀಡಿದ್ದಾರೆ. ಯಾರು ಏನು ಬೇಕಾದರೂ ಉರ್ಕೊಳ್ಳಲಿ ತಪ್ಪು ಮಾಡದಿದ್ದರೆ ಯಾರಿಗೂ ಭಯಪಡುವ ಅವಶ್ಯಕತೆ ಇಲ್ಲ. ಒಂದು ವೇಳೆ ತಪ್ಪು ಮಾಡಿದ್ದೆ ಆದರೂ ನಾನು ದೇವರಲ್ಲ. ಒಂದು ತಪ್ಪು ಸಮರ್ಥಿಸಲು ಮತ್ತೊಂದು ತಪ್ಪು ಮಾಡಲ್ಲ ಎಂದು ಹೊಸ ವಿಡಿಯೋದಲ್ಲಿ ತೆಲುಗು ನಟಿ ಹೇಮಾ ಸ್ಪಷ್ಟನೆ ನೀಡಿದ್ದಾರೆ. ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯಲ್ಲಿ ನಡೆದ ರೇವ್ ಪಾರ್ಟಿಯಲ್ಲಿ ತೆಲುಗು ನಟಿ ಹೇಮಾ ಕೂಡ ಭಾಗಿಯಾಗಿದ್ದರು, ಈ ಕುರಿತಂತೆ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ಸಿಸಿಬಿ…