Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ಮದುವೆ ಹೆಸರಿನಲ್ಲಿ ಕ್ರಿಪ್ಟೋದಲ್ಲಿ ಹಣ ಹೂಡಿಕೆ ಮಾಡಿಸಿ ವಂಚನೆ ಎಸಗಲಾಗಿದೆ. ಯುವತಿಯೊಬ್ಬಳು ಯುವಕನಿಗೆ ಮದುವೆ ಹೆಸರಲ್ಲಿ 21.22 ಲಕ್ಷ ವಂಚಿಸಿದ್ದಾಳೆ. ಬೆಂಗಳೂರಿನ ಟಿ ದಾಸರಹಳ್ಳಿ ಮೂಲದ ಯುವಕನಿಗೆ ಯುವತಿ ವಂಚನೆ ಎಸಗಿದ್ದಾಳೆ. ಮ್ಯಾಟ್ರಿಮೋನಿಯಲ್ಲಿ ವಧು ಹುಡುಕುತ್ತಿದ್ದ ಸಿ.ಎಸ್ ರಾಕೇಶ್ ಎಂಬ ಯುವಕನಿಗೆ ಶಿರಿಷ ಎಂಬಾಕೆ ಪರಿಚಯವಾಗಿದ್ದಳು. ಇಬ್ಬರು ಪರಸ್ಪರ ಸ್ನೇಹಿತರಾಗಿ ಫೋನ್ ಕಾಂಟಾಕ್ಟ್ ನಲ್ಲಿದ್ದರು. ನಂತರ ಮದುವೆಯಾಗೋಣ ಎಂದು ಯುವಕನಿಗೆ ಶಿರೀಶ ಆಮಿಷ ಒಡ್ಡಿದ್ದಾಳೆ. ಕ್ರಿಪ್ಟೋದಲ್ಲಿ ಟ್ರೇಡಿಂಗ್ ಮಾಡಲು ಹೇಳಿದ್ದಳು. ವೆಬ್ಸೈಟ್ ಲಿಂಕ್ ಹಾಗೂ ಬ್ಯಾಂಕ್ ಖಾತೆ ನೀಡಿ ಹಣ ಹೂಡಿಕೆ ಮಾಡಲು ಹೇಳಿದ್ದಾಳೆ. ಕೆಲ ದಿನಗಳ ಕಾಲ ಲಾಭದ ಅಂಶ ತೋರಿಸಿದ್ದ ಶಿರೀಶ ನಂತರ ಹಣ ಡ್ರಾ ಮಾಡಲು ಕಮಿಷನ್ ಕಟ್ಟಬೇಕು ಎಂದು ಸೂಚನೆ ನೀಡಿದ್ದಾಳೆ. ಹಂತ ಹಂತವಾಗಿ 21. 22 ಲಕ್ಷ ರೂಪಾಯಿ ಹಾಕಿಸಿಕೊಂಡು ವಂಚನೆ ಎಸಗಿದ್ದಾಳೆ. ಬಳಿಕ ಹೂಡಿಕೆ ಮಾಡಿದ ಹಣ ನೀಡದೆ ಲಾಭವು ನೀಡದೆ ವಂಚನೆ ಎಸಗಿದ್ದಾಳೆ. ಮೋಸ ಹೋದ ವಿಚಾರ ತಿಳಿದು…
ಬೆಂಗಳೂರು : ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧ ಆರೋಪ ಮಾಡಿ ಬಳಿಕ ಕ್ಷಮೆಯಾಚಿಸಿದ್ದ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಬೆಂಗಳೂರಿನಲ್ಲಿ ಮತ್ತೊಂದು ಎಫ್‌ಐಆರ್ ದಾಖಲಾಗಿದೆ. ಇದಕ್ಕೆ ಕಾರಣ ಅಂದರೆ ಪವಿತ್ರಾ ಎಂಬುವರ ಮನೆಗೆ ಬೆದರಿಕೆ ಪತ್ರ ಕಳುಹಿಸಿದ ಆರೋಪದಡಿ ಬಸವೇಶ್ವರ ನಗರ ಠಾಣೆಯಲ್ಲಿ ಸ್ನೇಹಮಯಿ ಕೃಷ್ಣ ವಿರುದ್ಧ ಪ್ರಕರಣ ದಾಖಲಾಗಿದೆ. ಮೈಲಾರಪ್ಪ ಎಂಬವರ ಮೇಲೆ ನೀಡಿರುವ ದೂರು ವಾಪಸ್ ತೆಗೆದುಕೊಳ್ಳಲು ಒತ್ತಡ ಹೇರಿದ್ದಾರೆ ಎಂದು ಆರೋಪಿಸಲಾಗಿದೆ. ಈ ಬಗ್ಗೆ ಕಳೆದೆರಡು ತಿಂಗಳ ಹಿಂದೆ ದೂರು ಕೊಟ್ಟಿದ್ದು, ಎನ್ ಸಿಆರ್ ಕೂಡ ದಾಖಲಾಗಿತ್ತು. ಇದೀಗ ಕೋರ್ಟ್ ಅನುಮತಿ ಪಡೆದು ಸ್ನೇಹಮಯಿ ಕೃಷ್ಣ ವಿರುದ್ಧ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು ಮಾಡಲಾಗಿದೆ ಎಂದು ತಿಳಿದುಬಂದಿದೆ.
ಬೆಂಗಳೂರು : ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಪೊಲೀಸರು ಬಹುದೊಡ್ಡ ಕಾರ್ಯಾಚರಣೆ ನಡೆಸಿದ್ದಾರೆ. ಜೈಲಿನಲ್ಲಿ ಕೈದಿಗಳು ಬಳಸುತ್ತಿದ್ದ ವಸ್ತುಗಳೆಲ್ಲ ಸೀಜ್ ಮಾಡಿದ್ದಾರೆ. ಫೈವ್ ಸ್ಟಾರ್ ಹೋಟೆಲ್ ಅಂತೆ ಕೈದಿಗಳು ಜೈಲನ್ನು ದುರುಪಯೋಗ ಪಡಿಸುತ್ತಿದ್ದರು. ಪಾತ್ರೆ, ಅಡುಗೆ ಸಾಮಾಗ್ರಿಗಳು, ಟೇಬಲ್, ಚೇರ್ ಎಲ್ಲವನ್ನು ವಶಕ್ಕೆ ಪಡೆದಿದ್ದಾರೆ. ಖಡಕ್ ಅಧಿಕಾರಿಗಳ ನೇಮಕದಿಂದ ಜೈಲಿನ ಚಿತ್ರಣವೇ ಇದೀಗ ಬದಲಾಗಿದೆ.ಐಪಿಎಸ್ ಅಧಿಕಾರಿಯಾಗಿ ಅಂಶುಕುಮಾರ್ ಅವರನ್ನು ನೇಮಕ ಮಾಡಲಾಗಿದೆ. ಕಾರಾಗೃಹ ಡಿಜಿಪಿಯಾಗಿ ಅಂಶುಕುಮಾರ್ ನೇಮಕವಾದ ಬೆನ್ನಲ್ಲೆ, ಇದೀಗ ಪರಪ್ಪನ ಅಗ್ರಹಾರ ಜೈಲಿನ ಚಿತ್ರಣವೇ ಬದಲಾಗಿದೆ. ಜೈಲಿನಲ್ಲಿ ಕೈದಿಗಳು ಐಷಾರಾಮಿ ಜೀವನ ನಡೆಸುತ್ತಿದ್ದು, ಇದೀಗ ಖಡಕ್ ಅಧಿಕಾರಿ ನೇಮಕದಿಂದ ಐಷಾರಾಮಿ ವಸ್ತುಗಳನ್ನೆಲ್ಲ ಇದೀಗ ವಶಕ್ಕೆ ಪಡೆಯಲಾಗಿದೆ.
ತುಮಕೂರು : ತುಮಕೂರಿನಲ್ಲಿ ಎಡೆಯೂರು ಸಿದ್ದಲಿಂಗೇಶ್ವರ ದೇವಸ್ಥಾನದ ಬಳಿ ನವಜಾತ ಗಂಡು ಶಿಶು ಪತ್ತೆಯಾಗಿದೆ. ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಎಡೆಯೂರು ಗ್ರಾಮದ ಸಿದ್ದಲಿಂಗೇಶ್ವರ ದೇವಸ್ಥಾನದ ಬಳಿ ನವಜಾತ ಶಿಶು ಪತ್ತೆಯಾಗಿದೆ. ಬ್ಯಾಗ್ ನಲ್ಲಿ ಪೋಷಕರು ನವಜಾತ ಗಂಡು ಶಿಶು ಇಟ್ಟು ಪರಾರಿಯಾಗಿದ್ದಾರೆ. ಸಿದ್ದಲಿಂಗೇಶ್ವರ ದೇಗುಲದ ಸಮೀಪ ರಸ್ತೆ ಪಕ್ಕದಲ್ಲಿ ಬ್ಯಾಗ್ ಪತ್ತೆಯಾಗಿದೆ. ಸಾರ್ವಜನಿಕರು ಸ್ಥಳಕ್ಕೆ ಹೋಗಿ ಬ್ಯಾಕ್ ಪರಿಶೀಲನೆ ಮಾಡಿದ್ದಾರೆ. ಈ ವೇಳೆ ನವಜಾತ ಗಂಡು ಶಿಶು ಇರುವುದು ಪತ್ತೆಯಾಗಿದ್ದು, ತಕ್ಷಣ ಮಗುವಿಗೆ ಪ್ರಾಥಮಿಕ ಚಿಕಿತ್ಸೆ ಕೊಡಿಸಲಾಗಿದೆ. ಅಮೃತೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಒಂದು ಘಟನೆ ನಡೆದಿದೆ.
ಬೆಂಗಳೂರು : ಬ್ರೇಕ್ ಫೇಲ್ ಆಗಿ ವಿದ್ಯುತ್ ಕಂಬಕ್ಕೆ ಶಾಲಾ ಬಸ್ ಡಿಕ್ಕಿ ಆಗಿರುವ ಘಟನೆ ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್ ನಲ್ಲಿ ಈ ಒಂದು ಘಟನೆ ನಡೆದಿದೆ. ಇಳಿಜಾರಿನಲ್ಲಿ ಏಕಾಏಕಿ ಶಾಲಾ ಬಸ್ಸಿನ ಬ್ರೇಕ್ ಫೇಲ್ ಆಗಿ ಅಪಘಾತ ಸಂಭವಿಸಿದೆ. ನ್ಯಾಷನಲ್ ಪಬ್ಲಿಕ್ ಸ್ಕೂಲ್ ಮಕ್ಕಳನ್ನು ಬಸ್ ಪಿಕ್ ಮಾಡುತ್ತಿತ್ತು. ಈ ವೇಳೆ ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಶಾಲಾ ಬಸ್ ಡಿಕ್ಕಿ ಹೊಡೆದಿದೆ. ಅದೃಷ್ಟವಶಾತ್ ಎಲ್ಲಾ ಮಕ್ಕಳು ಅಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ಮಲ್ಲೇಶ್ವರಂ ಸಂಚಾರಿ ವಿಭಾಗ ಠಾಣೆ ಪೊಲೀಸರು ಭೇಟಿ ಕೊಟ್ಟಿದ್ದಾರೆ.
ಕೊಲ್ಕತ್ತಾ : ಟಿಎಂಸಿ ಹಿರಿಯ ನಾಯಕ ಮುಕುಲ್ ರಾಯ್ (71) ಹೃದಯಘಾತದಿಂದ ನಿಧನರಾಗಿದ್ದಾರೆ. ಕೊಲ್ಕತ್ತಾದ ಅಪೊಲೊ ಆಸ್ಪತ್ರೆಯಲ್ಲಿ ಮುಕುಲ್ ರಾಯ್ ಇಂದು ನಿಧನರಾದರು ಮದ್ಯರಾತ್ರಿ 1:30ಕ್ಕೆ ಹೃದಯಘಾತದಿಂದ ಮುಕುಲ್ ನಿಧನರಾಗಿದ್ದಾರೆ. ಮಾಜಿ ರೈಲ್ವೆ ಸಚಿವ ಮತ್ತು ತೃಣಮೂಲ ಕಾಂಗ್ರೆಸ್ ನಾಯಕ, ಒಂದು ಕಾಲದಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಆಪ್ತ ಸಹಾಯಕರಾಗಿದ್ದ ಮುಕುಲ್ ರಾಯ್ ಅವರು ಭಾನುವಾರ ಬೆಳಗಿನ ಜಾವ 1:30 ಕ್ಕೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ಅಪೋಲೋ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ನಿಧನರಾದರು ಎಂದು ಅವರ ಮಗ ಸುಭ್ರಂಶು ರಾಯ್ ದೃಢಪಡಿಸಿದರು. ಬುದ್ಧಿಮಾಂದ್ಯತೆಯಿಂದ ಬಳಲುತ್ತಿದ್ದ ರಾಯ್, ಬಹು ಕಾಯಿಲೆಗಳಿಂದ ಬಳಲುತ್ತಿದ್ದರು ಮತ್ತು ಕೆಲವು ದಿನಗಳ ಹಿಂದೆ ಕೋಮಾದಲ್ಲಿದ್ದರು.
ನೀವು ಶಿವನ ಚಿತ್ರವನ್ನು ನೋಡಿದಾಗ ಅವನ ತಲೆಯ ಮೇಲೆ ಚಂದ್ರನಿದ್ದಾನೆ ಎಂಬುವುದನ್ನು ಗಮನಿಸಿರುತ್ತೀರಿ. ಚಂದ್ರನು ಶಿವನ ಮುಕುಟ ಏರಿದ್ದು ಹೇಗೆ? ಇಲ್ಲಿದೆ ನೋಡಿ ಅದರ ಕಥೆ. ಚಂದ್ರನ ಪತ್ನಿಯಾದ ರೇವತಿಯು ದಕ್ಷ ಮಹಾರಾಜನ ಮಗಳು. ಚಂದ್ರನು ಆ ಸಮಯ ಪೂರ್ಣ ಚಂದ್ರನಾಗಿಯೇ ಇದ್ದ. ಅವನ ಸಾಮರ್ಥ್ಯದ ಬಗ್ಗೆ ಅವನಿಗೆ ಅಪಾರವಾದ ಅಹಂಕಾರವಿತ್ತು. ಈ ಎಲ್ಲಾ ಕಾರಣದಿಂದ ಅವನು ತನ್ನ ಪತ್ನಿಯನ್ನು ಚೆನ್ನಾಗಿ ನೋಡಿಕೊಳ್ಳುತ್ತಿರಲಿಲ್ಲ. ಈ ವಿಷಯ ತಿಳಿದ ರೇವತಿಯ ತಂದೆ ದಕ್ಷನು ಚಂದ್ರನ ದೇಹ ಕ್ಷಯಿಸಿ, ಮೃತ್ಯು ಬರುವಂತೆ ಶಾಪ ನೀಡುತ್ತಾನೆ. ಹೀಗೆ ಶಾಪಕ್ಕೆ ತುತ್ತಾದ ಚಂದ್ರನು ಕ್ಷಯಿಸಲಾರಂಭಿಸುತ್ತಾನೆ. ಬ್ರಹ್ಮಾಂಡದ ಸಮತೋಲನ ಅಲ್ಲೋಲ ಕಲ್ಲೋಲವಾಗುತ್ತದೆ. ಪ್ರಳಯ, ಜ್ವಾಲಾಮುಖಿಗಳು ಎದ್ದೇಳುತ್ತವೆ. ಇದರಿಂದ ದೇವ-ದಾನವರು ಭಯಭೀತರಾಗುತ್ತಾರೆ. ತಮ್ಮ ಅಸ್ತಿತ್ವವನ್ನು ಉಳಿಸಲು ಅವರು ನಾರದರ ಮೊರೆ ಹೋಗುತ್ತಾರೆ. ನಾರದ ಮುನಿಗಳು ನೇರವಾಗಿ ಈಶ್ವರನಲ್ಲಿ ತೆರಳಿ ಈ ಸಂಕಷ್ಟದಿಂದ ಬ್ರಹ್ಮಾಂಡವನ್ನು ರಕ್ಷಿಸುವಂತೆ ಕೇಳಿಕೊಳ್ಳುತ್ತಾರೆ. ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ…
ಬೆಂಗಳೂರು : ಬೆಂಗಳೂರಿನಲ್ಲಿ ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಿಜೆಪಿ ಶಾಸಕ ಭೈರತಿ ಬಸವರಾಜ್ ಅವರನ್ನು ಜನಪ್ರತಿನಿಧಿಗಳ ನ್ಯಾಯಾಲಯ ನ್ಯಾಯಾಂಗ ಬಂಧನಕ್ಕೆ ನೀಡಿತ್ತು. ಇದೀಗ ಜೈಲು ಅಧಿಕಾರಿಗಳು ದಾಸಕ ಭೈರತಿ ಬಸವರಾಜ್ ಗೆ ವಿಚಾರಣಾಧೀನ ಕೈದಿ ನಂಬರ್ ನೀಡಿದ್ದಾರೆ. 1864/2026 ಇದು ಬೈರತಿ ಬಸವರಾಜ್ ಅವರ ಕೈದಿ ನಂಬರ್ ಆಗಿದೆ. ಬಿಕ್ಲು ಶಿವ ಕೊಲೆ ಪ್ರಕರಣದ ಪ್ರಮುಖ ಆರೋಪಿಯಾಗಿರುವ ಭೈರತಿ ಬಸವರಾಜ್ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಇದ್ದು ಕ್ವಾರಂಟೈನ್ ಸೆಲ್ ನಲ್ಲಿ ಇದ್ದಾರೆ. ಭೈರತಿ ಬಸವರಾಜ್ ಬೆಂಗಳೂರಿನ ಕೆಆರ್ ಪುರಂ ಕ್ಷೇತ್ರದ ಬಿಜೆಪಿ ಶಾಸಕ.
ಗದಗ : ನಿನ್ನೆ ಶಿರಹಟ್ಟಿ ಕ್ಷೇತ್ರದ ಬಿಜೆಪಿ ಶಾಸಕ ಚಂದ್ರು ಲಮಾಣಿ ಕಾಮಗಾರಿ ಒಂದಕ್ಕೆ ಗುತ್ತಿಗೆದಾರನ ಬಳಿ 5ಲಕ್ಷ ರೂಪಾಯಿ ಕಮಿಷನ್ ಪಡೆಯುವ ವೇಳೆ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಈಗ ಈ ಒಂದು ಪ್ರಕರಣಕ್ಕೆ ಸಂಬಂಧಪಟ್ಟಂತೆ ಶಾಸಕ ಚಂದ್ರು ಲಮಾಣಿ ಹಾಗೂ ಗುತ್ತಿಗೆದಾರನ ನಡುವಿನ ಆಡಿಯೋ ಒಂದು ವೈರಲಾಗಿದೆ. ಹೌದು ಕಮಿಷನ್‌ಗಾಗಿ ಶಾಸಕ ಚಂದ್ರು ಲಮಾಣಿ ಅವರು ಗುತ್ತಿಗೆದಾರನಿಗೆ ಆವಾಜ್ ಹಾಕಿದ್ದಾರೆ. ಸೊಂಟ ಮುರಿಸ್ತೀನಿ.. ಪ್ರೀತಿ ವಿಶ್ವಾಸಕ್ಕೆ ಹೇಳಿದ್ರೆ ಹೀಗೆಲ್ಲ ನಾಟಕ ಮಾಡ್ತೀಯಾ? ನಮ್ಮ ತಾಲೂಕಿನಲ್ಲಿ ಮಾಡಿದ್ರೆ ಸೊಂಟ ಮುರಿಸ್ತೀನಿ ಅಂತ ಗುತ್ತಿಗೆದಾರನ ವಿರುದ್ಧ ಲಮಾಣಿ ಗರಂ ಆಗಿದ್ದಾರೆ. ಈ ವೇಳೆ, ಇದೊಂದು ಸಾರಿ ತಪ್ಪಾಗಿದೆ ಅಂತ ಗುತ್ತಿಗೆದಾರ ಮಾತನಾಡಿದ್ದಾರೆ. ಆಡಿಯೋದಲ್ಲೇನಿದೆ? ನಾನು ಸರಳ ಅನ್ಕೊಂಡ್ರೆ ನಡಾನೆ ಮುರಿಸ್ತೀನಿ… ಪ್ರೀತಿ ವಿಶ್ವಾಸದಿಂದ ಹೇಳಿದ್ರೆ ನಾಟಕ ಮಾಡ್ತೀಯಾ…. ಸುಳ್ಳು ಹೇಳ್ತೀಯಾ ನೀನು… ಯಲ್ಲಮ್ಮ ಹೋಗಿನಿ ಮಲ್ಲಮ್ಮಗೆ ಹೋಗಿನಿ… ನಿಮ್ಮ ತಾಲ್ಲೂಕಿನಲ್ಲಿ ಮಾಡಿದಂಗೆ ನಮ್ಮ ತಾಲ್ಲೂಕಿನಲ್ಲಿ ಮಾಡಿದ್ರೆ ನಡಾ ಮುರಿಸ್ತೀನಿ.…
ಬೆಳಗಾವಿ : ತಾಲೂಕಿನ ಮಚ್ಚೆ ಗ್ರಾಮದಲ್ಲಿ ಫೆ.19ರಂದು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಪ್ರತಿಮೆಗೆ ಯಾರೋ ಕಿಡಿಗೇಡಿಗಳು ಕಪ್ಪು ಮಸಿ ಬಳಿದಿರುವ ಆರೋಪ ಕೇಳಿ ಬಂದಿತ್ತು. ಆದರೆ, ಈ ನೈಜವಾಗಿ ಅಲ್ಲಿ ಯಾರೂ ಮಸಿ ಬಳಿದು ಅವಮಾನ ಮಾಡಿಲ್ಲ. ಬದಲಾಗಿ, ಮರದಿಂದ ಸುರಿದ ದ್ರಾವಣವು ಪ್ರತಿಮೆ ಮೇಲೆ ಬಿದ್ದಿದೆ ಎಂದು ನಗರ ಪೊಲೀಸ್ ಆಯುಕ್ತ ಭೂಷಣ ಬೊರಸೆ ಸ್ಪಷ್ಟನೆ ನೀಡಿದ್ದಾರೆ. ಸಂಗೊಳ್ಳಿ ರಾಯಣ್ಣನ ಪ್ರತಿಮೆ ಮೇಲೆ ದ್ರವರೂಪದ ವಸ್ತು ಬಿದ್ದಿತ್ತು. ಅದನ್ನು ಸಂಗ್ರಹಿಸಿ ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು. ಅದು ಯಾವುದೇ ರೀತಿಯ ಮಸಿ ಅಥವಾ ಬಣ್ಣವಲ್ಲ. ಮರದಿಂದ ಸುರಿದ ದ್ರವ ಪದಾರ್ಥ ಎಂದು ಪ್ರಯೋಗಾಲಯದ ವರದಿ ಸ್ಪಷ್ಟಪಡಿಸಿದೆ. ಗುರುವಾರ ರಾತ್ರಿ ಸಂಗೊಳ್ಳಿ ರಾಯಣ್ಣ ಮೂರ್ತಿಯನ್ನು ಕೆಲ ಯುವಕರು ಸೂಕ್ಷ್ಮವಾಗಿ ಗಮನಿಸಿದಾಗ ಕಪ್ಪು ಮಸಿ ಅಂತೆ ಕಾಣಿಸಿತ್ತು. ಯಾರೋ ಕಿಡಿಗೇಡಿಗಳು ಅಪಮಾನ ಮಾಡಿದ್ದಾರೆ ಎಂದು ಅಂತಾ ಸ್ಥಳದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಜಮಾಯಿಸಿ, ಘೋಷಣೆ ಕೂಗಲು ಶುರು ಮಾಡಿದ್ದರು. ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ…














