Author: kannadanewsnow05

ಬೆಂಗಳೂರು : ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಎಲ್ಲರನ್ನು ಒಟ್ಟಿಗೆ ತೆಗೆದುಕೊಂಡು ಹೋಗುತ್ತೇವೆ. ಮೋದಿ ಹಿಂದೂ ರಾಷ್ಟ್ರ ಮಾಡ್ತೀವಿ ಅಂತಾರೆ ಇದು ಕನಸಿನ ಮಾತು. ಈ ದೇಶವನ್ನು ಹಿಂದೂ ರಾಷ್ಟ್ರ ಮಾಡಲು ಸಾಧ್ಯವಿಲ್ಲ ಎಂದು ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ನೆಹರು ಪುಣ್ಯ ಸ್ಮರಣೆ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದರು. ಚುನಾವಣೆಯಲ್ಲಿ ಸೋಲುತ್ತೇವೆ ಅನ್ನೋದು ಮೋದಿಗೆ ಖಾತ್ರಿಯಾಗಿದೆ. ಮೋದಿ ವಿಕಸಿತ ಭಾರತ ಮಾಡಲು ದೇವರೇ ಕಳಿಸಿದ್ದಾನೆ.ಅಂತಾರೆ ಅದಕ್ಕಾಗಿ ಹಿಂದೂ ಮುಸ್ಲಿಮರನ್ನು ಡಿವೈಡ್ ಮಾಡಿ ಮಾತನಾಡುತ್ತಾರೆ. ಚುನಾವಣಾ ಭಾಷಣಗಳಲ್ಲಿ ಮುಸ್ಲಿಮರ ವಿರುದ್ಧ ಮಾತನಾಡುತ್ತಾರೆ.ನರೇಂದ್ರ ಮೋದಿ ಏನು ದೇವರ ಅವತಾರನ? ಸೋಲುವ ಭಯದಲ್ಲಿ ನರೇಂದ್ರ ಮೋದಿ ಏನೇನೋ ಮಾತನಾಡುತ್ತಿದ್ದಾರೆ.2047 ರ ತನಕ ಸೇವೆ ಮಾಡಲು ದೇವರು ಕಳುಹಿಸಿದ್ದಾನೆ ಅಂತಾರೆ. ಪ್ರಧಾನಿ ಮೋದಿಗೆ ಬಹುತ್ವದಲ್ಲಿ ನಂಬಿಕೆಯೇ ಇಲ್ಲ. ಬಿಜೆಪಿಯವರು ಪದೇ ಪದೇ ವಿಕಸಿತ ಭಾರತ ಎಂದು ಹೇಳುತ್ತಾರೆ. ಆದರೆ ವಿಕಸಿತ ಭಾರತ ಬಿಜೆಪಿಯವರ ನೈಜ ವಿಚಾರ ಅಲ್ಲ. ವಿಕಸಿತ ಭಾರತ ಆಗೋದು ಬಿಜೆಪಿಯವರಿಗೆ ಬೇಕಾಗಿಲ್ಲ ಬಿಜೆಪಿ ಹಿಡನ್…

Read More

ಬೆಂಗಳೂರು : ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧದ ಆದಾಯ ಮೀರಿ ಆಸ್ತಿಗಳಿಕೆ ಕೇಸ್ ಗೆ ಸಂಬಂಧಿಸಿದಂತೆ ಸಿಬಿಐ ತನಿಖೆಗೆ ಸಮ್ಮತಿಯನ್ನು ಹಿಂಪಡೆದ ಸರ್ಕಾರದ ಕ್ರಮವನ್ನು ಪ್ರಶ್ನಿಸಿ ಸಿಬಿಐ ಸಲ್ಲಿಸಿದ್ದ ರಿಟ್ ಅರ್ಜಿ ವಿಚಾರಣೆಯನ್ನು ಹೈ ಕೋರ್ಟ್ ಮೇ 31ಕ್ಕೆ ಮುಂದೂಡಿತು. ಹೈಕೋರ್ಟ್ ವಿಭಾಗೀಯ ಪೀಠದಲ್ಲಿ ರಿಟ್ ಅರ್ಜಿ ವಿಚಾರಣೆ ನಡೆಯುತ್ತಿದ್ದು ಸಿ.ಬಿ.ಐ ತನಿಖೆಗೆ ಸಮ್ಮತಿ ಹಿಂಪಡೆದ ಸರಕಾರದ ಕ್ರಮ ಪ್ರಶ್ನಿಸಿ ರಿಟ್ ಅರ್ಜಿ ಕುರಿತಂತೆ ಡಿಕೆ ಶಿವಕುಮಾರ್ ಪರ ಹಿರಿಯ ವಕೀಲ ಅಭಿಷೇಕ್ ಮನು ಸಿಂಗ್ವಿ ಹಾಗೂ ಕಪಿಲ್ ಸಿಬಲ್ ವಾದ ಮಂಡಿಸಿದರು. ಸಿಬಿಐ ಕೇಂದ್ರ ಸರ್ಕಾರದ ಏಜೆಂಟ್ನಂತೆ ಕಾರ್ಯನಿರ್ವಹಿಸುತ್ತಿದೆ. ಸಿಬಿಐ ಗೆ ಯಾವ ರಸ್ತೆಗೆ ಹೋಗಬೇಕು ಯಾರ ಮನೆಗೆ ಹೋಗಬೇಕು ಸಿಬಿಐ ಎಲ್ಲಿಗೆ ಹೋಗಬೇಕೆಂದು ಕೇಂದ್ರ ಸರ್ಕಾರ ನಿರ್ಧರಿಸುತ್ತಿದೆ. ಉಳಿದಂತೆ ಆ ತನಿಖೆಯು ಮಾತ್ರ ಸಿಬಿಐ ನಡೆಸುತ್ತಿದೆ.ಹೀಗಾಗಿ ಸಿಬಿಐ ತನಿಖೆ ಒಕ್ಕೂಟದ ವ್ಯವಸ್ಥೆಗೆ ಪೂರಕವಾಗಿಲ್ಲ ಎಂದು ಡಿ ಸಿ ಎಂ ಡಿ ಕೆ ಶಿವಕುಮಾರ್ ಪರ ಅಭಿಷೇಕ್ ಮನುಸಿಂಗ್ವಿ ವಾದ…

Read More

ಚಿತ್ರದುರ್ಗ : ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಚಿತ್ರದುರ್ಗಕ್ಕೆ ಚುನಾವಣಾ ಪ್ರಚಾರಕ್ಕೆ ಆಗಮಿಸಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರ ಕೇಶದ ಕುರಿತು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಲೇವಡಿ ಮಾಡಿದ್ದರು. ಇದೀಗ ಅವರ ಹೇಳಿಕೆಗೆ ಮಧು ಬಂಗಾರಪ್ಪ ತಿರುಗೇಟು ನೀಡಿದ್ದು, ನನ್ನ ಹೇರ್ ಕಟ್ ಮಾಡುವವರು ಫ್ರೀ ಇಲ್ಲ, ವಿಜಯೇಂದ್ರನೇ ಬಂದು ಮಾಡಲಿ ಎಂದರು. ಶಿಕ್ಷಣ ಸಚಿವ ಇನ್ನೂ ಸಿನಿಮಾ ಭ್ರಮೆಯಲ್ಲಿದ್ದಾರೆ, ಮೊದಲು ಹೇರ್ ಕಟಿಂಗ್ ಮಾಡಿಸಿಕೊಳ್ಳಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರ ಕೇಶದ ಕುರಿತು ಹೇಳಿಕೆ ನೀಡಿದರು ಇದೀಗ ಅವರ ಹೇಳಿಕೆಗೆ ತಿರುಗೇಟು ನೀಡಿರುವ ಮದ್ದು ಬಂಗಾರಪ್ಪ ಬಿ ವೈ ವಿಜಯೇಂದ್ರ ಅವರು ಫ್ರೀ ಇದ್ದರೆ ಬಂದು ನನ್ನ ಕಟಿಂಗ್ ಮಾಡಲಿ. ಸದ್ಯಕ್ಕೆ ನಾನು ಫ್ರೀ ಇಲ್ಲ ಎಂದು ತಿರುಗೇಟು ನೀಡಿದರು. ಶಾಲಾಮಕ್ಕಳ ಭವಿಷ್ಯ ಮತ್ತು ಅವರ ಹಿತಾಸಕ್ತಿಯ ದೃಷ್ಟಿಯಿಂದ ಕೆಲ ನಿರ್ಣಯಗಳನ್ನು ತೆಗೆದುಕೊಳ್ಳಲಾಗಿದೆ ಎಂದು ಹೇಳಿದ…

Read More

ಹುಬ್ಬಳ್ಳಿ : ಹುಬ್ಬಳ್ಳಿಯ ವೀರಾಪುರ ಓಣಿಯಲ್ಲಿ ಅಂಜಲಿ ಅಂಬಿಗೇರ್ ಹತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಅಧಿಕಾರಿಗಳು ನೇಹ ಹಿರೇಮಠ ತಂದೆ ನಿರಂಜನ್ ಹಿರೇಮಠ ಅವರನ್ನು ವಿಚಾರಣೆಗೆ ಬರುವಂತೆ ಸೂಚನೆ ನೀಡಿದ್ದಾರೆ ಎಂದು ತಿಳಿದುಬಂದಿದೆ. ಹೌದು ಹುಬ್ಬಳ್ಳಿಯ ಸರ್ಕ್ಯೂಟ್ ಹೌಸ್ ಗೆ ವಿಚಾರಣೆಗೆ ಬರುವಂತೆ ನೇಹಾ ತಂದೆ ನಿರಂಜನನ್ ಹಿರೇಮಠ್ ಗೆ ಸಿಐಡಿ ಅಧಿಕಾರಿಗಳು ವಿಚಾರಣೆಗೆ ಬರುವಂತೆ ಸೂಚನೆ ನೀಡಿದ್ದಾರೆ. ಅಂಜಲಿ ಹತ್ಯೆ ಪ್ರಕರಣದಲ್ಲಿ ನಿರಂಜನ್ ಹಿರೇಮಠ ಹೋರಾಟ ಮಾಡಿದ್ದರು ಎನ್ನಲಾಗಿದೆ. ಆರೋಪಿ ವಿಶ್ವನ ವಿಚಾರಣೆ ಅಲ್ಲದೆ ಅಂಜಲಿ ಅಂಬಿಗೇರ ಕೊಲೆಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿಯ ಐಬಿಯಲ್ಲಿ ಸಿಐಡಿ ಇಂದ ಆರೋಪಿ ವಿಶ್ವನ ವಿಚಾರಣೆ ನಡೆಯುತ್ತಿದೆ. ಮುಂಜಾನೆಯಿಂದ ಸಂಜೆಯವರೆಗೂ ಐಬಿಯಲ್ಲಿ ತೀವ್ರ ವಿಚಾರಣೆ ನಡೆಸಲಾಗುತ್ತಿದೆ. ಅಂಜಲಿ ಕೊಲೆ ಬಳಿಕ ಮತ್ತೊಬ್ಬ ಮಹಿಳೆಗೆ ವಿಶ್ವ ಚಾಕು ಇರಿದಿದ್ದ. ಚಲಿಸುತ್ತಿದ್ದ ರೈಲಿನಲ್ಲಿ ಗದಗ ಮೂಲದ ಲಕ್ಷ್ಮಿ ಎನ್ನುವ ಮಹಿಳೆಗೆ ಚಾಕು ಇರಿದಿದ್ದ. ಚಾಕುವಿರದಕ್ಕೆ ಒಳಗಾಗಿದ್ದು ಲಕ್ಷ್ಮಿಯನ್ನು ಇದೀಗ ಅಧಿಕಾರಿಗಳು ಐವಿಗೆ ಕರೆಸಿ ವಿಚಾರಣೆ ನಡೆಸುತ್ತಿದ್ದಾರೆ. ಹಂತಕನ…

Read More

ನವದೆಹಲಿ : ಪಂಜಾಬ್‌ ಮಾಜಿ ಸಿಎಂ ಹಾಗೂ ಜಲಂಧರ್‌ನ ಕಾಂಗ್ರೆಸ್‌ ಅಭ್ಯರ್ಥಿ ಚರಣ್‌ಜಿತ್‌ ಸಿಂಗ್‌ ಚನ್ನಿ ವಿವಾದಿತ ಮಾತಿನಿಂದಾಗಿ ಸುದ್ದಿಯಾಗಿದ್ದಾರೆ. ಹಾಗೇನಾದರೂ ಕೇಂದ್ರದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದಲ್ಲಿ ವಾಘಾ (ಭಾರತ-ಪಾಕಿಸ್ತಾನ) ಗಡಿಯನ್ನು ಓಪನ್‌ ಮಾಡಲಿದ್ದೇವೆ ಎಂದಿದ್ದಾರೆ. ಹೌದು ಪಂಜಾಬ್‌ನ ಮಾಜಿ ಮುಖ್ಯಮಂತ್ರಿ ಮತ್ತು ಪ್ರಸ್ತುತ ಪಂಜಾಬ್‌ನ ಜಲಂಧರ್ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸುತ್ತಿರುವ ಚರಂಜಿತ್ ಸಿಂಗ್ ಚನ್ನಿ ಮತ್ತೊಮ್ಮೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಬಂದರೆ ವಾಘಾ ಗಡಿ (ಭಾರತ-ಪಾಕಿಸ್ತಾನ ಗಡಿ) ತೆರೆಯಲಾಗುವುದು ಎಂದು ಹೇಳಿದರು. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ ಈ ಪ್ರದೇಶವನ್ನು ಅಭಿವೃದ್ಧಿಪಡಿಸಿ ವಾಘಾ ಗಡಿಯನ್ನು ತೆರೆಯುತ್ತೇವೆ ಇದರಿಂದ ಬೇರೆ ದೇಶಗಳ ಸಹೋದರರು ಚಿಕಿತ್ಸೆಗಾಗಿ ಇಲ್ಲಿಗೆ ಬರುತ್ತಾರೆ, ಇದು ನಮ್ಮ ವೈದ್ಯಕೀಯ ಪ್ರವಾಸೋದ್ಯಮಕ್ಕೆ ಹೆಚ್ಚಿನ ಉತ್ತೇಜನ ನೀಡುತ್ತದೆ.ಗಡಿ ತೆರೆಯುವುದರೊಂದಿಗೆ, ಪಾಕಿಸ್ತಾನದ ಜನರು ಚಿಕಿತ್ಸೆಗಾಗಿ ಭಾರತಕ್ಕೆ ಬರುತ್ತಾರೆ ಮತ್ತು ಇದು ಪಂಜಾಬ್‌ನ ವೈದ್ಯಕೀಯ ಪ್ರವಾಸೋದ್ಯಮವನ್ನು ಉತ್ತೇಜಿಸುತ್ತದೆ ಎಂದು ಹೇಳಿದರು.

Read More

ಕಲಬುರ್ಗಿ : ಕಲ್ಬುರ್ಗಿ ಜಿಲ್ಲೆಯಲ್ಲಿ ಗುಡುಗು ಸಹಿತ ಬಾರಿ ಮಳೆಯಾಗುತ್ತಿದ್ದು ಜಿಲ್ಲೆಯ ಚಿತ್ತಾಪುರ ತಾಲೂಕಿನ ಲಾಡ್ಲಾಪುರದಲ್ಲಿ ಮರದ ಕೆಳಗಡೆ ನಿಂದಿದ್ದ ಇಬ್ಬರೂ ವ್ಯಕ್ತಿಗಳು ಸಿಡಿಲು ಬಡಿದು ದಾರುಣವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಹೌದು ಕಲ್ಬುರ್ಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಲಾಡ್ಲಾಪುರ ಗ್ರಾಮದಲ್ಲಿ ಈ ಒಂದು ದುರ್ಘಟನೆ ಸಂಭವಿಸಿದೆ. ಏಕನಾಥ ವಾಗಮೋಡೆ (55) ಸತೀಶ ಶೆಳಕೆ (40) ಸಾವನ್ನಪ್ಪಿದ್ದಾರೆ ಎಂದು ಹೇಳಲಾಗುತ್ತಿದೆ.ಇಬ್ಬರು ವಾಡಿ ಪಟ್ಟಣದ ರೈಲ್ವೆ ಕಾಲೋನಿಯ ನಿವಾಸಿಗಳು ಎಂದು ಹೇಳಲಾಗುತ್ತಿದೆ. ಹೊಲದಲ್ಲಿ ಕೆಲಸ ಮುಗಿಸಿಕೊಂಡು ಮನೆಗೆ ವಾಪಸ್ ಆಗುವಾಗ ಜೋರಾಗಿ ಮಳೆ ಬಂದಿದೆ ಈ ವೇಳೆ ಮಳೆ ಬಂದ ಹಿನ್ನೆಲೆಯಲ್ಲಿ ಮರದಡಿ ನಿಂತಿದ್ದಾಗ ಸಿಡಿಲು ಬಡದು ಸಾವನ್ನಪ್ಪಿದ್ದಾರೆ. ಘಟನೆ ಕುರಿತಂತೆ ವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Read More

ಉತ್ತರಕನ್ನಡ : ರಾಜ್ಯದ ಕರಾವಳಿ ಜಿಲ್ಲೆಗಳಾದ ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಸುಂದರ ಯುವತಿಯರ ಸ್ನೇಹ ಗಿಟ್ಟಿಸಿಕೊಂಡು ಅವರೊಂದಿಗೆ ಪ್ರೀತಿಯ ನಾಟಕವಾಡಿ ಫೋಟೋ ತೆಗೆಸಿಕೊಂಡು ಅವುಗಳನ್ನು ಅಶ್ಲೀಲವೆಂಬಂತೆ ಎಡಿಟ್ ಮಾಡಿ ಬೆದರಿಸಿ ಅತ್ಯಾಚಾರವೆಸಗುತ್ತಿದ್ದ ಕಾಮುಕರ ಗುಂಪಿನ ಸದಸ್ಯರನ್ನು ಪೊಲೀಸರು ಬಂಧಿಸಿದ್ದಾರೆ. ಹೌದು ಅತ್ಯಾಚಾರ ಪ್ರಕರಣದ ಆರೋಪಿ ಬಂಧಿಸಲು ತೆರಳಿದ್ದಾಗ ಪೊಲೀಸರ ಮೇಲೆ ಕಲ್ಲುತೂರಾಟ ನಡೆಸಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಮಳಲಿ ಎಂಬ ಗ್ರಾಮದಲ್ಲಿ ನಡೆದಿದೆ. ಸಮವಸ್ತ್ರದಲ್ಲಿದ್ದ ಮೂವರು ಪೊಲೀಸ್ ಸಿಬ್ಬಂದಿ ಮೇಲೆ ಕಲ್ಲುತೂರಾಟ ನಡೆಸಿದ್ದಾರೆ. ಅರ್ಜುನ್ ಅಲಿಯಾಸ್ ಅರುಣ ಲಕ್ಷ್ಮಣಗೌಡನನ್ನು ಪೊಲೀಸರು ಬಂಧಿಸಲು ತೆರಳಿದ್ದಾರೆ.ಅರ್ಜುನ ವಿರುದ್ಧ ಬನವಾಸಿ ಠಾಣೆಯಲ್ಲಿ ಅತ್ಯಾಚಾರ ಕೇಸ್ ದಾಖಲಾಗಿತ್ತು. ಶಿರಸಿ ಪೊಲೀಸ್ ಠಾಣೆಯಲ್ಲಿ ಐಟಿ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ಅಲ್ಲದೆ ಉಡುಪಿ ಜಿಲ್ಲೆಯ ಕುಂದಾಪುರ ಠಾಣೆಯಲ್ಲೂ ಕೂಡ ಒಂದು ಕೇಸ್ ದಾಖಲಾಗಿತ್ತು. ಯುವತಿಯರ ಜೊತೆ ಚಾಟ್ ಮಾಡುತ್ತಾ ಅರ್ಜುನ್ ಅವರನ್ನು ಬಲೆಗೆ ಬೀಳಿಸಿಕೊಳ್ಳುತ್ತಿದ್ದ. ನಂತರ ಸಲುಗೆಯನ್ನು ಬೆಳೆಸಿ ಬೆತ್ತಲೆ ಫೋಟೋ ತೆಗೆದುಕೊಂಡು…

Read More

ನವದೆಹಲಿ : ದೆಹಲಿಯ ವಿವೇಕ್ ವಿಹಾರ್ ಪ್ರದೇಶದ ಮಕ್ಕಳ ಆಸ್ಪತ್ರೆಯಲ್ಲಿ ಅಗ್ನಿ ಅವಘಡ ಸಂಭವಿಸಿ ನವಜಾತ ಶಿಶುಗಳು ಸಾವನ್ನಪ್ಪಿರುವ ಘಟನೆಗೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಆಸ್ಪತ್ರೆಯ ಮಾಲೀಕ ನವೀನ್ ಖಿಚಿಯನ್ನು ಇದೀಗ ಪೊಲೀಸರು ಬಂಧಿಸಿದ್ದಾರೆ. ಹೌದು ದೆಹಲಿಯ ವಿವೇಕ್ ವಿಹಾರ್ ಪ್ರದೇಶದ ಖಾಸಗಿ ಆಸ್ಪತ್ರೆಯಲ್ಲಿ ಈ ಒಂದು ದುರ್ಘಟನೆ ನಡೆದಿತ್ತು.ಶನಿವಾರ ರಾತ್ರಿ 11.30 ರ ಸುಮಾರಿಗೆ ವಿವೇಕ್ ವಿಹಾರ್ ಪೊಲೀಸ್ ಠಾಣೆಗೆ ನವಜಾತ ಶಿಶು ಆರೈಕೆ ಆಸ್ಪತ್ರೆ ಮತ್ತು ಪಕ್ಕದ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿರುವ ಬಗ್ಗೆ ಪಿಸಿಆರ್ ಕರೆ ಬಂದಿದೆ. ಉನ್ನತ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದರೆ, ಡಿಎಫ್‌ಎಸ್ ಒಂಬತ್ತು ಅಗ್ನಿಶಾಮಕ ಟೆಂಡರ್ಗಳನ್ನು ಕಳುಹಿಸಿದೆ. ರಕ್ಷಣಾ ಕಾರ್ಯಾಚರಣೆ ಇನ್ನೂ ನಡೆಯುತ್ತಿದೆ ಎಂದು ಖಚಿತಪಡಿಸಿದ ಡಿಎಫ್‌ಎಸ್ ಮುಖ್ಯಸ್ಥ ಅತುಲ್ ಗರ್ಗ್, ಬೆಂಕಿಯ ಕಾರಣವನ್ನು ಇನ್ನೂ ಕಂಡುಹಿಡಿಯಲಾಗಿಲ್ಲ ಎಂದು ಹೇಳಿದರು. ಏತನ್ಮಧ್ಯೆ, ರಕ್ಷಿಸಿದ 11 ನವಜಾತ ಶಿಶುಗಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಪೂರ್ವ ದೆಹಲಿ ಅಡ್ವಾನ್ಸ್ ಎನ್‌ಐಸಿಯು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.

Read More

ಹಾಸನ : ಇಂದು ಬೆಳ್ಳಂ ಬೆಳಗ್ಗೆ ಹಾಸನದ ಹೊರವಲಯ ಈಚನಹಳ್ಳಿಯಲ್ಲಿ ಪ್ರಕಡಿಕೆಯಾಗಿ ಕಾಡಿನಲ್ಲಿದ್ದ ಮಗು ಸೇರಿ ಆರು ಮಂದಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆಗೆ ಸಂಬಂಧಿಸಿದಂತೆ, ಅಪಘಾತದಲ್ಲಿ ತಂದೆ-ತಾಯಿಯನ್ನು ಕಳೆದುಕೊಂಡ ಮಕ್ಕಳನ್ನು ಇಂದು ಚಿಕ್ಕಬಳ್ಳಾಪುರ ಕ್ಷೇತ್ರದ ಶಾಸಕ ಪ್ರದೀಪ್ ಈಶ್ವರ್ ಭೇಟಿ ಮಾಡಿ ಸಾಂತ್ವನ ಹೇಳಿದರು. ಅಪಘಾತದಲ್ಲಿ ತಂದೆ ತಾಯಿ ಕಳೆದುಕೊಂಡು ಅನಾಥರಾಗಿರುವ ಇಬ್ಬರು ಬಾಲಕಿಯರು ಎಂದು ಹೇಳಲಾಗುತ್ತಿದೆ. ಚಿಕ್ಕಬಳ್ಳಾಪುರ ತಾಲೂಕಿನ ಚಿಗಟೇನಹಳ್ಳಿ ಅಜ್ಜಿಯ ಮನೆಯಲ್ಲಿರುವ ಇಬ್ಬರು ಬಾಲಕಿಯರನ್ನು ಭೇಟಿ ಮಾಡಿ ಶಾಸಕ ಪ್ರದೀಪ್ ಈಶ್ವರ್ ಸಾಂತ್ವನ ಹೇಳಿದ್ದಾರೆ. ಶಾಸಕ ಪ್ರದೀಪ ಈಶ್ವರ ಪಲ್ಲವಿ ಹಾಗೂ ಪೂರ್ಣಿಮಾಳಿಗೆ ಸಾಂತ್ವನ ಹೇಳಿದ್ದು ಅಲ್ಲದೆ, ಇಬ್ಬರ ಹೆಸರಿನಲ್ಲಿ ತಲಾ ಒಂದು ಲಕ್ಷ ಪೋಸ್ಟಲ್ ಡಿಪಾಸಿಟ್ ಮಾಡುವ ಭರವಸೆ ನೀಡಿದ್ದಾರೆ. ಅದರ ಜೊತೆಗೆ ಉಚಿತ ವಿದ್ಯಾಭ್ಯಾಸ ಕೊಡಿಸುವುದಾಗಿ ಪ್ರದೀಪ್ ಈಶ್ವರ್ ಭರವಸೆ ನೀಡಿದ್ದಾರೆ. ಘಟನೆ ಹಿನ್ನೆಲೆ? ಹಾಸನದಲ್ಲಿ ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಮಗು ಸೇರಿ 6 ಮಂದಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಹಾಸನದ…

Read More

ಹಾಸನ : ಕಳೆದ ಜನವರಿಯಿಂದ ಚಿಕ್ಕಮಂಗಳೂರು ಹಾಸನ ಮಡಿಕೇರಿ ಕೊಡಗು ಈ ಭಾಗದಲ್ಲಿ ಕಾಡಾನೆ ದಾಳಿಯಿಂದ ಹಲವಾರು ಜನರು ಮೃತಪಟ್ಟಿದ್ದಾರೆ ಇದೀಗ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಕೆಸಗುಲಿ ಎಂಬಲ್ಲಿ ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ವೃದ್ಧೆಯ ಮೇಲೆ ಕಾಡಾನೆ ದಾಳಿ ನಡೆಸಿದೆ. ಹೌದು ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ವೃದ್ಧೆಯ ಮೇಲೆ ಕಾಡಾನೆ ದಾಳಿ ನಡೆಸಿದ. ಕೆಸಗುಲಿ ಬಳಿ ಕಾಫಿ ತೋಟದಲ್ಲಿ ದಾಕ್ಷಾಯಿಣಿ ಎನ್ನುವ ವೃದ್ಧೆಯ ಮೇಲೆ ಏಕಾಏಕಿ ಆನೆ ದಾಳಿ ನಡೆಸಿದೆ. ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಕೆಸಗುಲಿ ಗ್ರಾಮದಲ್ಲಿ ಆನೆ ದಾಳಿ ಮಾಡಿದೆ. ಕಾಡಾನೆ ದಾಳಿಯಿಂದ ಲಕ್ಕುಂದದ ದಾಕ್ಷಾಯಿಣಿ ಗಂಭೀರವಾಗಿ ಗಾಯಗೊಂಡಿದ್ದು, ಸದ್ಯ ಸ್ಥಿತಿ ಗಂಭೀರವಾಗಿದೆ. ಈ ವೇಳೆ ಅರಣ್ಯ ಅಧಿಕಾರಿಗಳು ಆಸ್ಪತ್ರೆಗೆ ಭೇಟಿ ನೀಡಿ ದಾಕ್ಷಾಯಿಣಿ ಆರೋಗ್ಯ ವಿಚಾರಿಸಿದ್ದಾರೆ. ಘಟನೆ ಕುರಿತಂತೆ ಸಕಲೇಶಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More