Author: ಸುರೇಶ್‌

"ಕನ್ನಡ ನ್ಯೂಸ್ ನೌ ಜಾಲತಾಣದ ಮುಖ್ಯ ಸಂಪಾದಕರಾದ ಸುರೇಶ್ ಅವರು ಕಳೆದ 4 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದಾರೆ. ಸರ್ಕಾರದ ಯೋಜನೆಗಳು, ಶಿಕ್ಷಣ ಮತ್ತು ಪ್ರಚಲಿತ ವಿದ್ಯಮಾನಗಳನ್ನು ಸಾಮಾನ್ಯ ಜನರಿಗೂ ಅರ್ಥವಾಗುವಂತೆ ವಿವರಿಸುವುದು ಇವರ ವಿಶೇಷತೆ. ಈ ಮೊದಲು ವಿವಿಧ ವೆಬ್‌ಸೈಟ್‌ಗಳಲ್ಲಿ ನಾಗರಿಕ ಸಮಸ್ಯೆಗಳ ಬಗ್ಗೆ ವರದಿಗಾರರಾಗಿ ಕೆಲಸ ಮಾಡಿರುವ ಇವರು, ಸಮಯೋಚಿತ ಹಾಗೂ ವಿಶ್ವಾಸಾರ್ಹ ಮಾಹಿತಿ ನೀಡುವ ಮೂಲಕ ಓದುಗರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಡಿಜಿಟಲ್ ಸಾಕ್ಷರತೆ ಇವರ ನೆಚ್ಚಿನ ವಿಷಯಗಳಲ್ಲೊಂದು

ಬೆಂಗಳೂರು 18 ನವೆಂಬರ್ 2025 : ಸಾರ್ವಜನಿಕ ಆರೋಗ್ಯ ಹಾಗೂ ಸುರಕ್ಷತೆಯ ಹಿತದೃಷ್ಟಿಯಿಂದ  ಪೂರ್ವ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಉದ್ದಿಮೆ ಪರವಾನಗಿ ಪಡೆಯದೇ ಎಸ್.ಒ.ಪಿ ಮಾನದಂಡಗಳನ್ನು ಉಲ್ಲಂಘಿಸಿ, ಕಾನೂನು ಬಾಹಿರವಾಗಿ ಕಾರ್ಯ ನಿರ್ವಹಿಸುತ್ತಿರುವ ಪಿಜಿ ಗಳ ವಿರುದ್ಧ ಕಾರ್ಯಾಚರಣೆ ಹಾಗೂ ಉದ್ದಿಮೆ ಪರವಾನಗಿ ವಿಶೇಷ ಅಭಿಯಾನ ನಡೆಸುವಂತೆ ಆರೋಗ್ಯ ವಿಭಾಗ ಅಧಿಕಾರಿಗಳಿಗೆ  ಆದೇಶಿಸಿರುವುದಾಗಿ ಪೂರ್ವ ನಗರ ಪಾಲಿಕೆ ಆಯುಕ್ತರಾದ ಡಿ.ಎಸ್.ರಮೇಶ್ ರವರು  ತಿಳಿಸಿದರು. 14 ಪಿಜಿಗಳಿಗೆ ಬೀಗ ವಸತಿ ಪ್ರದೇಶಗಳಲ್ಲಿ ನಿಯಮಬಾಹಿರವಾಗಿ ವಾಣಿಜ್ಯ/ವಸತಿಯೇತರ ಚಟುವಟಿಕೆಗಳನ್ನು ನಡೆಸುತ್ತಿರುವ ಮತ್ತು ಜಿ.ಬಿ.ಎ. ಕಾಯ್ದೆ, 2024ರ ಅನ್ವಯ ವಿಧಿಸಿರುವ ಷರತ್ತು ಹಾಗೂ ನಿಬಂಧನೆಗಳನ್ನು ಪಾಲಿಸದೆ ಕಾರ್ಯನಿರ್ವಹಿಸುತ್ತಿರುವ 14 ಪೇಯಿಂಗ್ ಗೆಸ್ಟ್ ಗಳನ್ನು ಅಪರ ಆಯುಕ್ತರು (ಅಭಿವೃದ್ಧಿ) ಲೋಖಂಡೆ ಸ್ನೇಹಲ್ ಸುಧಾಕರ್ ರವರ ಮಾರ್ಗದರ್ಶನದಲ್ಲಿ,  ಆರೋಗ್ಯಾಧಿಕಾರಿ ಡಾ. ಸವಿತಾ ರವರ ನೇತೃತ್ವದಲ್ಲಿ ಆರೋಗ್ಯ ವೈದ್ಯಾಧಿಕಾರಿಗಳ ತಂಡವು ಪರಿಶೀಲನೆ ನಡೆಸಿ  ವಸತಿಗೃಹಗಳ (ಪಿಜಿ) ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗಿರುತ್ತದೆ ಎಂದು ತಿಳಿಸಿದರು. ಬೀಗ ಹಾಕಲಾದ  ವಸತಿಗೃಹಗಳ ವಿವರಗಳು ಮಹದೇವಪುರ ವಿಧಾನಸಭಾ  ಕ್ಷೇತ್ರ * ಎಸ್.ವಿ.ಕೆ. ಪಿ.ಜಿ ಪಟ್ಟಂದೂರು ಅಗ್ರಹಾರ, ಐಟಿಪಿಲ್ ಬ್ಯಾಕ್…

Read More

ಬೆಂಗಳೂರು : ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ರಾಜ್ಯ ಸರ್ಕಾರ ಕೇಂದ್ರದ ಜೊತೆಗೆ ವಿಶ್ವಾಸದಲ್ಲಿ ಸೌಹಾರ್ದತೆಯಲ್ಲಿ ಅನುಮತಿ ಪಡೆದರೆ ಮುಂದೆ ಕಾನೂನು ಹೋರಾಟದಲ್ಲಿ ಅನುಕೂಲವಾಗಲಿದೆ. ಇದರಲ್ಲಿ ರಾಜಕೀಯ ಬೆರೆಸಿದರೆ, ರಾಜಕೀಯ ಪ್ರತಿಷ್ಠೆ ಮಾಡಿದರೆ ರಾಜ್ಯದ ಹಿತಾಸಕ್ತಿಗೆ ಧಕ್ಕೆಯಾಗುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ‌. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮೇಕೆದಾಟು ಯೋಜನೆ ಇದು ಬಹಳ ವರ್ಷದ ರಾಜ್ಯದ ಜನರ ಕನಸಾಗಿದೆ. ಇದು 1996ರಿಂದ ಆರಂಭವಾಗಿದ್ದು. ಪವರ್ ಪ್ರಾಜೆಕ್ಟ್ ನಿಂದ ಆರಂಭವಾಗಿದ್ದು. ನಾನು ನೀರಾವರಿ ಸಚಿವ ಆಗಿದ್ದಾಗ ಬಹಳಷ್ಟು ಪ್ರದೇಶ ಮುಳುಗಡೆ ಆಗುತ್ತದೆ ಅಂತ ಕೇಳಿಬಂದಿತ್ತು. ಅದನ್ನು ಬದಲಾವಣೆ ಮಾಡಿ ಡಿಪಿಆರ್ ಸಿದ್ದ ಪಡೆಸಿದ್ದೇವು. ಕಾಂಗ್ರೆಸ್ ನವರು ಪಾದಯಾತ್ರೆ ಮಾಡದಿದ್ದರೆ ಇಷ್ಟೋತ್ತಿಗೆ ಯೋಜನೆ ಒಂದು ಹಂತಕ್ಕೆ ಬರುತ್ತಿತ್ತು. ಇವರು ಪಾದಯಾತ್ರೆ ಮಾಡಿದ್ದರಿಂದ ತಮಿಳುನಾಡಿನವರು ಮಿಸ್ ಲೀನಿಯಸ್ ಕೇಸ್ ಹಾಕಿದ್ದಾರೆ. ತಮಿಳುನಾಡು ಕೇಸು ನಿಲ್ಲುವುದಿಲ್ಲ ಎಂದು ನಮಗೆ ಗೊತ್ತಿದೆ. ಆದ್ದರಿಂದ ನಾವು ಬಹಳ ಬುದ್ದಿವಂತಿಕೆಯಿಂದ ಎಲ್ಲ ಹಂತಗಳನ್ನು ಮುಗಿಸಿಕೊಳ್ಳಬೇಕು. ಯಾಕೆಂದರೆ…

Read More

ಬೆಂಗಳೂರು, ನವೆಂಬರ್ 18: ಬೆಂಗಳೂರು-ತುಮಕೂರು ಮೆಟ್ರೋ ಯೋಜನೆಯ ಅನೇಕ ವಿಚಾರಗಳು ಸಂಸದ ತೇಜಸ್ವಿಸೂರ್ಯ ಅವರ ಗಮನದಲ್ಲಿಲ್ಲ. ಇದೇ ಕಾರಣದಿಂದ ಯೋಜನೆಯ ಬಗ್ಗೆ ಆತಂಕ ವ್ಯಕ್ತಪಡಿಸಿದ್ದಾರೆ ಎಂದು ಗೃಹ ಸಚಿವ ಡಾ‌. ಜಿ.ಪರಮೇಶ್ವರ ಅವರು ಹೇಳಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರತಿನಿತ್ಯ ತುಮಕೂರಿನಿಂದ ಸಾವಿರಾರು ಜನರು ಪ್ರಯಾಣ ಮಾಡುತ್ತಾರೆ. ನೆಲಮಂಗಲ, ದಾಬಸ್‌ಪೇಟೆ, ಕ್ಯಾತ್ಸಂದ್ರ ಭಾಗ ವೇಗವಾಗಿ ಬೆಳೆಯುತ್ತಿವೆ. ಕೈಗಾರಿಕೆ ಉದ್ದೇಶದಿಂದ ಜನರ ಜೀವನ ಹೆಚ್ಚಾಗುತ್ತಿದೆ. ಬೆಂಗಳೂರಿನಲ್ಲಿ ಒತ್ತಡ ಜಾಸ್ತಿ ಇದೆ. ನೀರಿಗೆ ಕಷ್ಟ, ಓಡಾಡೋಕೆ ಟ್ರಾಫಿಕ್ ಸಮಸ್ಯೆ ಇದೆಲ್ಲ ನೋಡಿಕೊಂಡು ಆ ಕಡೆ ಜೀವನ ನಡೆಸುತ್ತಿದ್ದಾರೆ. ತುಮಕೂರಿನಲ್ಲಿ 20 ಸಾವಿರ ಎಕರೆಯಲ್ಲಿ ಏಷ್ಯಾದ ಅತಿದೊಡ್ಡ ಕೈಗಾರಿಕಾ ಪ್ರದೇಶ ನಿರ್ಮಿಸಲಾಗಿದೆ. ಈಗಾಗಲೇ 200 ಕೈಗಾರಿಕೆಗಳು ಬಂದಿವೆ. ಫುಡ್‌ಪಾರ್ಕ್, ಟೈಮೆಕ್ ಜಪಾನೀಸ್ ಫ್ಯಾಕ್ಟರಿ, ಜಪನೀಸ್ ಟೌನ್‌ಶಿಪ್‌ಗೆ ಜಾಗ ಕೊಟ್ಟಿದ್ದೇವೆ. ಇಷ್ಟು ವೇಗವಾಗಿ ಬೆಳೆಯುತ್ತಿರುವಾಗ ಸಂಪರ್ಕ (ಕನೆಕ್ಟಿವಿಟಿ) ವ್ಯವಸ್ಥೆ ಬೇಕಲ್ಲವೇ ಎಂದು ಪ್ರಶ್ನಿಸಿದ ಅವರು, ರಸ್ತೆ, ಮೆಟ್ರೋ, ರೈಲು ಸಂಪರ್ಕ ಇದ್ದರೆ ಬೆಂಗಳೂರಿನ ಮೇಲಿನ ಒತ್ತಡ…

Read More

ಬೆಂಗಳೂರು : ಇದೇ ವರ್ಷದ ಅಂತ್ಯಕ್ಕೆ ಅವಧಿ ಕೊನೆಗೊಳ್ಳಲಿರುವ ರಾಜ್ಯದ 47 ನಗರಸಭೆ, 91 ಪುರಸಭೆ, 49 ಪಟ್ಟಣ ಪಂಚಾಯತ್​ಗಳು ಸೇರಿ ಒಟ್ಟು 187 ನಗರ ಸ್ಥಳೀಯ ಸಂಸ್ಥೆಗಳ ವಾರ್ಡ್​​ವಾರು ಮೀಸಲಾತಿ ಜೊತೆಗೆ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಗಳ ಅಂತಿಮ ಮೀಸಲಾತಿ ಅಧಿಸೂಚನೆ ಹೊರಡಿಸುವ ಸಂಬಂಧ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ. ನಿಗದಿತ ಸಮಯಕ್ಕೆ ಚುನಾವಣೆ ನಡೆಸುವುದಕ್ಕೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಕೋರಿ ರಾಜ್ಯ ಚುನಾವಣಾ ಆಯೋಗ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಮತ್ತು ನ್ಯಾಯಮೂರ್ತಿ ಸಿ.ಎಂ. ಪೂಣಚ್ಚ ಅವರಿದ್ದ ವಿಭಾಗೀಯ ಪೀಠ, ಈ ಸಂಬಂಧ ಆಕ್ಷೇಪಣೆ ಸಲ್ಲಿಸುವಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಮತ್ತು ನಗರಾಭಿವೃದ್ಧಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯವರಿಗೆ ನೋಟಿಸ್ ಜಾರಿ ಮಾಡಿ, ವಿಚಾರಣೆಯನ್ನು ಮುಂದೂಡಿತು. ಸಕಾಲಕ್ಕೆ ಚುನಾವಣೆ ನಡೆಸದಿರುವುದು ಸಂವಿಧಾನದ 243-ಯು ವಿಧಿ ಉಲ್ಲಂಘನೆಯಾಗಿದ್ದು, ಈಗಾಗಲೇ ಕಲಬುರಗಿ ಜಿಲ್ಲೆಯ ವಾಡಿ ಪಟ್ಟಣ ಪಂಚಾಯತ್​ ಮತ್ತು…

Read More

ಬೆಳಗಾವಿ : ಬೆಳಗಾವಿ ತಾಲೂಕಿನ ಭೂತರಾಮನಹಟ್ಟಿ ಬಳಿ ಇರುವ ರಾಣಿ ಚೆನ್ನಮ್ಮ ಕಿರುಮೃಗಾಲಯದಲ್ಲಿ 31 ಕೃಷ್ಣಮೃಗಗಳು ಸಾವನ್ನಪ್ಪಿರುವ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಮೂರು ತಿಂಗಳ ಹಿಂದೆಯೇ ರಾಷ್ಟ್ರೀಯ ಪಶು ವೈದ್ಯಕೀಯ ಸಾಂಕ್ರಾಮಿಕ ರೋಗಶಾಸ್ತ್ರ ಮತ್ತು ರೋಗ ಮಾಹಿತಿ ಸಂಸ್ಥೆಯಿಂದ ಮೃಗಾಲಯಕ್ಕೆ ಮುನ್ಸೂಚನೆ ನೀಡಲಾಗಿತ್ತು ಎಂದು ತಿಳಿದುಬಂದಿದೆ. ಹೌದು ಬೆಂಗಳೂರಿನ ಯಲಹಂಕದಲ್ಲಿರುವ ರಾಷ್ಟ್ರೀಯ ಪಶು ವೈದ್ಯಕೀಯ ಸಾಂಕ್ರಾಮಿಕ ರೋಗಶಾಸ್ತ್ರ ಮತ್ತು ರೋಗ ಮಾಹಿತಿ ಸಂಸ್ಥೆ ಅರಣ್ಯ ಇಲಾಖೆ ಹಾಗೂ ಮೃಗಾಲಯಗಳಿಗೆ ಮೂರು ತಿಂಗಳ ಹಿಂದೆ ಮೃಗಾಲಯಕ್ಕೆ ರೋಗ ಹರಡುವ ಕುರಿತು ಮಾಹಿತಿ ನೀಡಿತ್ತು. ಅಲ್ಲದೆ ಹಸು ಎಮ್ಮೆ ಸಾಕುವ ರೈತರಿಗೂ ಈ ಸಂದೇಶ ರವಾನಿಸಲಾಗಿತ್ತು. ಅಲ್ಲದೇ ಬೆಳಗಾವಿ ಭಾಗದಲ್ಲಿ ಹಿಮೋರೆಜಿಕ್ ಸೆಪ್ಟಿಸಿಮೀಯಾ ಕಾಯಿಲೆ ಬಗ್ಗೆ ಎಚ್ಚರಿಕೆ ವಹಿಸುವಂತೆ ಮಾಹಿತಿ ನೀಡಲಾಗಿತ್ತು. ರಾಷ್ಟ್ರೀಯ ಸಂಸ್ಥೆಯಿಂದ ಮಾಹಿತಿ ನೀಡಿದ ನಂತರವೂ ಸಹ ಅರಣ್ಯ ಇಲಾಖೆ ನಿರ್ಲಕ್ಷ ವಹಿಸಿದೆ. ಈಗಾಗಲೇ 31 ಕೃಷ್ಣಮೃಗಗಳು ಸಾವನ್ನಪ್ಪಿದ್ದು, 7 ಮಾತ್ರ ಬದುಕುಳಿದಿವೆ. ಹೀಗಾಗಿ ಅವುಗಳಿಗೆ ಆಂಟಿ ಬಯೋಟೆಕ್ ಚಿಕಿತ್ಸೆ ನೀಡುತ್ತಿದ್ದಾರೆ.…

Read More

ಬೆಂಗಳೂರು : ಮದೀನಾ ಅಗ್ನಿ ದುರಂತದಲ್ಲಿ ಮೃತಪಟ್ಟ ಹುಬ್ಬಳ್ಳಿ ಮೂಲದ ಅಬ್ದುಲ್ ಗನಿ ಶಿರಹಟ್ಟಿ ಅವರ ಕುಟುಂಬಕ್ಕೆ ಸಚಿವ ಜಮೀರ್ ಅಹಮದ್ ಖಾನ್ ನೆರವಾಗಿದ್ದಾರೆ. ಮೃತ ಅಬ್ದುಲ್ ಗನಿ ಅವರ ಪಾರ್ಥಿವ ಶರೀರದ ಅಂತ್ಯಕ್ರಿಯೆ ನಡೆಸಲು ಅವರ ಕುಟುಂಬದ ಮೂವರು ಸದಸ್ಯರು ಮದೀನಾ ಗೆ ತೆರಳಲು ವೀಸಾ ಸೇರಿದಂತೆ ವಿಮಾನ ಟಿಕೆಟ್, ಅಲ್ಲಿ ಉಳಿದುಕೊಳ್ಳಲು ಹೋಟೆಲ್ ಹಾಗೂ ಇತರೆ ವ್ಯವಸ್ಥೆ ಮಾಡಿಕೊಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಅಬ್ದುಲ್ ಗನಿ ಅವರ ಕುಟುಂಬ ಸದಸ್ಯರಾದ ಉಮರ್ ಸಾಬ್, ಮೌಲಾ ಅಲಿ,ಮೈನುದ್ದಿನ್ ಮಖಂದರ್ ಅವರು ಮಂಗಳವಾರ ಬೆಂಗಳೂರಿಂದ ಮದೀನಾ ಗೆ ತೆರಳಿದರು. ಅಂತ್ಯಕ್ರಿಯೆ ನಂತರ ಮೂವರು ಉಮ್ರಾ ಯಾತ್ರೆ ಮಾಡಿ ವಾಪಸ್ ಬರಲು ಸಚಿವರು ವ್ಯವಸ್ಥೆ ಮಾಡಿಕೊಟ್ಟಿದ್ದಾರೆ. ಮಾರ್ಗ ಮಧ್ಯೆ ವೆಚ್ಚಕ್ಕೆ ಆರ್ಥಿಕ ಸಹಾಯ ಮಾಡಿದ್ದಾರೆ. ಘಟನೆ ಹಿನ್ನಲೆ ಯಲ್ಲಿ ಅಬ್ದುಲ್ ಗನಿ ಕುಟುಂಬ ಸದಸ್ಯರು ಮದೀನಾ ಗೆ ತೆರಳಲು ಸಂಕಷ್ಟ ಎದುರಿಸುತ್ತಿರುವ ಬಗ್ಗೆ ಮಾಹಿತಿ ಪಡೆದ ಸಚಿವರು ಖುದ್ದು ಬೆಂಗಳೂರಿಗೆ ಕರೆಸಿಕೊಂಡು ವ್ಯವಸ್ಥೆ…

Read More

ಬೆಂಗಳೂರು: ಸಾರಕ್ಕಿ ಉಪಕೇಂದ್ರ ನಿರ್ಹವಣಾ ಕಾಮಗಾರಿ ನಿಮಿತ್ತ (ನವೆಂಬರ್ 19) ಬುಧವಾರ ಬೆಳಿಗ್ಗೆ 10.00 ರಿಂದ ಸಂಜೆ 5.00 ಗಂಟೆಯವರೆಗೆ ವಿದ್ಯುತ್‌ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ. ಶಾಕಂಬರಿ ನಗರ, ಪೈಪ್ ಲ್ಯೆನ್ ರೋಡ್, ರಾಘವೇಂದ್ರ ಸ್ವಾಮಿ ಮಟ, ಜೆ.ಪಿ ನಗರ ಮೊದಲನೇ ಹಂತ, 14ನೇ ಅಡ್ಡ ರಸ್ತೇ, ಸಲಾರ್ಪುರಿಯಾ ಅಪಾಟ್ ಮೆಂಟ್, ನಾಗಾರ್ಜುನ ಅಪಾಟ್ ಮೆಂಟ್ ಪುಟ್ಟೇನಹಳ್ಳಿ, ಜಯನಗರ 8, 5, 7 ನೇ ಬ್ಲಾಕ್, ಐಟಿಐ ಲೇಔಟ್, ಎಸ್. ಬಿ.ಐ ಕಾಲೋನಿ, ಅರ್.ವಿ.ಡೆಂಟಲ್ ಕಾಲೇಜ್ ಸುತ್ತಮುತ್ತಲ ಪ್ರದೇಶಗಳು. 24ನೇ ಮ್ಯೇನ್, ಎಲ್ಐಸಿ ಕಚೇರಿ ಹಿಂಬಾಗ, ಎಲ್ಐಸಿ ಕಾಲೋನಿ, ಕೆ ಆರ್ ಲೇಔಟ್, ವೆಂಕಟಾದ್ರಿ ಲೇಔಟ್, ಜಿ.ಪಿ.ನಗರ 5ನೇ ಹಂತ, ಸಾಯಿ ನಸ‍ರಿ ರಸ್ತೇ, ಜಿ.ಪಿ.ನಗರ 6ನೇ ಹಂತ, 15ನೇ ಕ್ರಾಸ್, 16 & 12 ನೇ ಕ್ರಾಸ್, ಆದಶð ರೆಸಿಡೆನ್ಸಿ ಅಪಾಟ್ðಮೆಂಟ್, ಬನ್ನೇರಘಟ್ಟ ರೋಡ್, ಡಾಲರ್ಸ್ ಲೇಔಟ್, ಕಲ್ಯಾಣಿ ಮ್ಯಾಗ್ನಮ್ ಅಪಾಟ್ðಮೆಂಟ್, ಕಲ್ಯಾಣಿ ಕೃಷ್ಣ ಮ್ಯಾಗ್ನಮ್ ಮತ್ತು ಸುತ್ತಮುತ್ತಲ ಪ್ರದೇಶಗಳಲ್ಲಿ ವಿದ್ಯುತ್…

Read More

ಚಾಮರಾಜನಗರ : ಚಿಕ್ಕಮಗಳೂರಲ್ಲಿ ಕಾಡಾನೆಗಳ ದಾಳಿ ಮುಂದುವರೆದಿದ್ದು ಕಾಡಾನೆ ಒಂದು ಬೈಕ್ ಸವಾರನ ಮೇಲೆ ದಾಳಿ ನಡೆಸಿದ್ದು ಬೈಕ್ ಸವಾರ ಪ್ರಾಣಾಯಾಪಾಯದಿಂದ ಜಸ್ಟ್ ಮಿಸ್ ಆಗಿದ್ದಾನೆ. ಹೌದು ಕಾಡಾನೆ ದಾಳಿಯಿಂದ ಬೈಕ್ ಸವಾರ ಪಾರಾಗಿದ್ದಾನೆ. ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನಲ್ಲಿ ಈ ಒಂದು ಘಟನೆ ನಡೆದಿದೆ. ಕಾಡಾನೆ ದಾಳಿ ನಡೆಸುವಾಗ ಬೈಕ್ ಸವಾರ ಬೈಕ್ ಬಿಟ್ಟು ಓಡಿದ್ದಾನೆ ಈ ಒಂದು ಘಟನೆ ಮೊಬೈಲ್ ನಲ್ಲಿ ಸರಿಯಾಗಿದೆ.

Read More

ಬೆಂಗಳೂರು : ಸೌದಿ ಬಸ್ ದುರಂತದಲ್ಲಿ ಇಬ್ಬರು ಕನ್ನಡಿಗರು ಸಾವನ್ನಪ್ಪಿದ್ದಾರೆ ಎಂದು ಇದೀಗ ಮಾಹಿತಿ ತಿಳಿದು ಬಂದಿದೆ. ಬೀದರ್ ಮೂಲದ ಮಹಿಳೆ ರಹಮತ್ ಸಾವನಪ್ಪಿದ್ದಾರೆ ಮೈಲೂರಿನ ಸಿಎಂಸಿ ಕಾಲೋನಿಯ ನಿವಾಸಿ ಎಂದು ತಿಳಿದುಬಂದಿದೆ. ರಹಮತ್ ಹೈದರಾಬಾದ್ ಮೂಲಕ ಸೌದಿಗೆ ತೆರಳಿದ್ದರು ಸೌದಿಯಿಂದ ತೆರಳುವಾಗ ಈ ಒಂದು ದುರಂತ ಸಂಭವಿಸಿದ್ದು ಸಾವನಪ್ಪಿದ್ದಾರೆ. ಸೌದಿ ಬಸ್ ದುರತದಲ್ಲಿ ಒಟ್ಟು 45 ಪ್ರಯಾಣಿಕರು ಸಾವನ್ನಪ್ಪಿದ್ದು, ಅದರಲ್ಲಿ ಇಬ್ಬರು ಕನ್ನಡಿಗರು ಕೂಡ ಸಾವನಪ್ಪಿದ್ದಾರೆ. ಧಾರ್ಮಿಕ ಕ್ಷೇತ್ರಕ್ಕೆ ತೆರಳಿದ ಸಂದರ್ಭದಲ್ಲಿ ಸಂದರ್ಭದಲ್ಲಿ ಈ ಒಂದು ದುರಂತ ಸಂಭವಿಸಿದೆ. ಹುಬ್ಬಳ್ಳಿ ಮೂಲದ ಅಬ್ದುಲ್ ಒಬ್ರು ಕೂಡ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

Read More

ಬೆಂಗಳೂರು : ಬೆಳಗಾವಿಯ ಭೂತ ರಾಮನ ಹಟ್ಟಿ ಬಳಿ ಇರುವ ಕಿತ್ತೂರು ರಾಣಿ ಚೆನ್ನಮ್ಮ ಕಿರು ಮೃಗಾಲಯದಲ್ಲಿ 31 ಕೃಷ್ಣಮೃಗಗಳು ನಿಗೂಢವಾಗಿ ಸಾವನ್ನಪ್ಪಿವೆ ಈ ಕುರಿತು ಅರಣ್ಯ ಇಲಾಖೆ ಸಚಿವ ಈಶ್ವರ ಖಂಡ್ರೆ ಈಗಾಗಲೇ ಈ ಕುರಿತು ತನಿಖೆ ನಡೆಯುತ್ತಿದ್ದು ವರದಿಯಲ್ಲಿ ಲೋಪ ಕಂಡು ಬಂದರೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದರು. ರಾಣಿ ಚೆನ್ನಮ್ಮ ಮೃಗಾಲಯದಲ್ಲಿ ಕೃಷ್ಣಮೃಗಗಳ ಸಾವು ಪ್ರಕರಣಕ್ಕೆ ಸಂಬಂಧಪಟ್ಟಂತೆ ಬೆಂಗಳೂರಲ್ಲಿ ಮಾತನಾಡಿದ ಅವರು, ಉನ್ನತ ಮಟ್ಟದ ತನಿಖಾ ಸಂಸ್ಥೆ ರಚನೆ ಮಾಡಲಾಗಿದೆ. ಬದುಕುಳಿದ 7 ಕೃಷ್ಣಮೃಗಗಳನ್ನು ಸಹ ರಕ್ಷಣೆ ಮಾಡುತ್ತಿದ್ದೇವೆ, ಕೋರೋಣ ರೀತಿಯಲ್ಲಿ ಸೋಂಕು ತಗುಲಿದ್ದು ಹೀಗಾಗಿ 31 ಕೃಷ್ಣಮೃಗಗಳು ಮೃತಪಟ್ಟಿವೆ. ಕೃಷ್ಣಮೃಗಗಳ ಸಾವಿನ ಬಗ್ಗೆ ತನಿಖೆ ನಡೆಯುತ್ತಿದೆ ಈ ಕುರಿತು ವರದಿ ಬರಲಿ ವರದಿಯಲ್ಲಿ ಏನಾದರೂ ಲೋಪ ಕಂಡು ಬಂದರೆ ಕ್ರಮ ಕೈಗೊಳ್ಳುತ್ತೇವೆ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಹೇಳಿಕೆ ನೀಡಿದರು.

Read More