Subscribe to Updates
Get the latest creative news from FooBar about art, design and business.
Author: kannadanewsnow05
ಉಡುಪಿ : ವಿಧಾನ ಪರಿಷತ್ ಚುನಾವಣೆಗೆ ಟಿಕೆಟ್ ನೀಡಿಲ್ಲವೆಂದು ನೈರುತ್ಯ ಪದವೀಧರ ಕ್ಷೇತ್ರದ ಬಂಡಾಯ ಅಭ್ಯರ್ಥಿಯಾಗಿರುವ ಬಿಜೆಪಿಯ ಮಾಜಿ ಶಾಸಕ ರಘುಪತಿ ಭಟ್ ಅವರನ್ನು ನಿನ್ನೆ ಪಕ್ಷದಿಂದ ಉಚ್ಚಾಟಿಸಲಾಯಿತು. ಈ ಕುರಿತು ಪ್ರತಿಕ್ರಿಯೆ ನೀಡಿರುವವರು ನನಗೆ ಮೋದಿ ಹಾಗೂ ರಾಜ್ಯದ ನಾಯಕರಿಗೆ ಬೈದಿಲ್ಲ ಬಿಜೆಪಿ ಪಕ್ಷದ ವ್ಯವಸ್ಥೆ ಕುರಿತು ಅಸಮಾಧಾನವಿದೆ ಎಂದು ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಮೋದಿಗೆ ಬೈದಿಲ್ಲ ರಾಜ್ಯದ ನಾಯಕರಿಗೆ ಬೈದಿಲ್ಲ, ಬಿಜೆಪಿ ಪಕ್ಷದ ವ್ಯವಸ್ಥೆಯ ಬಗ್ಗೆ ನನಗೆ ಅಸಮಾಧಾನವಿದೆ. ಪಕ್ಷದ ನಾಯಕರನ್ನು ಟೀಕಿಸಿದ ಜಗದೀಶ್ ಶೆಟ್ಟರ್ ಮತ್ತೆ ಬಂದರು.ಪಕ್ಷಕ್ಕೆ ವಾಪಸ್ ಆಗಿ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಿದ್ದಾರೆ ಎಂದು ಹೇಳಿದರು. ಇದು ಶಾಶ್ವತವಾದ ವಜಾ ಅಲ್ಲ ಎಂದು ರಘುಪತಿ ಭಟ್ ತಿಳಿಸಿದರೂ. ಪರಿಷತ್ ಚುನಾವಣೆಯಲ್ಲಿ ಗೆದ್ದ ಮೇಲೆ ವಜಾ ರದ್ದಾಗುತ್ತದೆ.ಬಿಜೆಪಿ ಕಾರ್ಯಕರ್ತ ನನ್ನ ವಜಾ ಮಾಡಲು ಸಾಧ್ಯವಿಲ್ಲ ಎಂದು ನೈರುತ್ಯ ಪದವೀಧರ ಕ್ಷೇತ್ರದ ಬಂಡಾಯ ಅಭ್ಯರ್ಥಿ ರಘುಪತಿ ಭಟ್ ಅಸಮಾಧಾನ ಹೊರಹಾಕಿದ್ದಾರೆ.
ಕಲಬುರ್ಗಿ : ಕೆಲವರು ಅಡ್ಡ ದಾರಿಯ ಮೂಲಕ ಹಣ ಗಳಿಸಲು ಹೋಗಿ ಬೀದಿಗೆ ಬಂದಿರುವ ಅನೇಕ ಘಟನೆಗಳನ್ನು ನೋಡಿರುತ್ತೇವೆ. ಇದೀಗ ಅಂತಹದ್ದೇ ಘಟನೆ ಕಲಬುರ್ಗಿ ನಗರದಲ್ಲಿ ನಡೆದಿದ್ದು ಹಣ ಡಬಲ್ ಮಾಡಿಕೊಡುವುದಾಗಿ ಹೇಳಿ ದಂಪತಿಗಳಿಬ್ಬರು ಸುಮಾರು 30 ಕೋಟಿ ರೂಪಾಯಿ ವಂಚನೆ ಎಸೆಗಿರುವ ಘಟನೆ ಕಲಬುರಗಿ ನಗರದ ರೋಜಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಹೌದು ಕಲಬುರಗಿ ನಗರದ ಗಾಂಧಿನಗರದ ಬಳಿ ದಂಪತಿಗಳಾದಉತ್ಕರ್ಷ ಹಾಗೂ ಸಾವಿತ್ರಿ ಬಿ.ಎಲ್ ಕಾಂಪ್ಲೆಕ್ಸ್‌ನಲ್ಲಿ ಟ್ರೇಡಿಂಗ್ ಕಂಪನಿ ನಡೆಸುತ್ತಿದ್ದರು.ಯುವಕ ಯುವತಿಯರನ್ನು ಗುರಿಯಾಗಿಸಿಕೊಂಡು ದಂಪತಿ ಸುಮಾರು 500ಕ್ಕೂ ಹೆಚ್ಚು ಜನರಿಗೆ ವಂಚಿಸಿದ್ದಾರೆ ಎಂದು ಹೇಳಲಾಗುತ್ತಿದೆ. ಅಲ್ಲದೆ ಕೆಲವರಿಂದ 25 ಲಕ್ಷ ರೂ.ನಿಂದ 1 ಕೋಟಿ ರೂ. ವರೆಗೂ ಹೂಡಿಕೆ ಮಾಡಿಸಿಕೊಂಡಿದ್ದರು ಎಂದು ಹೇಳಲಾಗುತ್ತಿದ್ದು, ದಂಪತಿಗೆ ವಿಜಯಸಿಂಗ್ ಹಜಾರೆ ಹಾಗೂ ಸುಧಾ ಎಂಬವರು ಸಹಾಯ ಮಾಡಿದ್ದಾರೆ ಎಂದು ಜನ ಆರೋಪಿಸಿದ್ದಾರೆ. ಈ ಸಂಬಂಧ ರೋಜಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ದೂರು ದಾಖಲಾಗುತ್ತಿದ್ದಂತೆ ದಂಪತಿ ಅಪಾರ್ಟ್‍ಮೆಂಟ್‍ನಿಂದ ಸುನಿಲ್ ಎಂಬವರ ಕಾರಿನಲ್ಲಿ ಪರಾರಿಯಾಗಿದ್ದಾರೆ.…
ಶಿವಮೊಗ್ಗ : ಕೆಲವರು ಯಾವುದೋ ಒಂದು ಕಾರಣಕ್ಕೆ ಅಥವಾ ಯಾವುದೋ ಒಂದು ವಿಚಾರಕ್ಕೆ ಸಂಬಂಧಪಟ್ಟಂತೆ ಜೀವನದಲ್ಲಿ ಮನನೊಂದು ಆತ್ಮಹತ್ಯೆ ಮಾಡಿಕೊಳ್ಳುವುದನ್ನು ನೋಡಿದ್ದೇವೆ ಆದರೆ ಬ್ಯೂಟಿ ಪಾರ್ಲರ್ ನಡೆಸುತ್ತಿದ್ದ ಮಹಿಳೆಯೊಬ್ಬರು ಹೊಟ್ಟೆ ನೋವು ತಾಳಲಾರದೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸೊರಬ ಪಟ್ಟಣದ ವಿದ್ಯುತ್ ನಗರದಲ್ಲಿ ಈ ಒಂದು ದುರ್ಘಟನೆ ಸಂಭವಿಸಿದೆ. ಹೌದು ಆತ್ಮಹತ್ಯೆ ಮಾಡಿಕೊಂಡ ಅಕ್ಷತಾ ಅವರಿಗೆ ಅನಾರೋಗ್ಯ ಕಾಡುತ್ತಿತ್ತು. ಹಾಗಾಗಿ ಇಂದು ಅಕ್ಷತಾ ಅವರು ಸೊರಬ ಪಟ್ಟಣದ ವಿದ್ಯುತ್ ನಗರದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೆಲ ದಿನಗಳಿಂದ ಅಕ್ಷತಾ ಅನಾರೋಗ್ಯದಿಂದ ಬಳಲುತ್ತಿದ್ದರು. ಹೊಟ್ಟೆ ನೋವು ತಾಳಲಾರದೆ ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ ಎನ್ನಲಾಗಿದೆ. ಮೃತ ಅಕ್ಷತಾ ಅವರು ಭದ್ರಾವತಿ ತಾಲೂಕಿನ ಕೆರೆಬೀರನಹಳ್ಳಿ ಗ್ರಾಮದವರು ಎಂದು ಹೇಳಲಾಗುತ್ತಿದೆ. ಕೆಲ ವರ್ಷಗಳ ಹಿಂದೆ ಚಂದ್ರಗುತ್ತಿ ಗ್ರಾಮದ ಸಂತೋಷ್ ಜೊತೆ ಅಕ್ಷತಾ ಅವರ ಮದುವೆ ಆಗಿತ್ತು ಎಂದು ತಿಳಿದುಬಂದಿದೆ. ಹೊಟ್ಟೆನೋವು ತಾಳಲಾರದೆ ಸೊರಬ ಪಟ್ಟಣದ ವಿದ್ಯುತ್ ನಗರದ ಮನೆಯಲ್ಲಿ ಅಕ್ಷತಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನೆ ಕುರಿತಂತೆ…
ಗುಜರಾತ್ : ಇಂದು ಸಂಜೆ ಗುಜರಾತಿನ ರಾಜ್ಕೋಟ್ ನಲ್ಲಿ ಗೇಮಿಂಗ್ ಜೋನ್ ನಲ್ಲಿ ಭಾರಿ ಅಗ್ನಿವಗಡ ಸಂಭವಿಸಿ 9 ಮಕ್ಕಳು ಮಹಿಳೆಯರು ಸೇರಿ 24 ಜನರು ಸಚಿವ ದಹನ ಹೊಂದಿದ್ದಾರೆ. ಘಟನೆ ಕುರಿತಂತೆ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಟ್ವೀಟ್ ನಲ್ಲಿ ಸಂತಾಪ ಸೂಚಿಸಿದ್ದಾರೆ. ರಾಜ್‌ಕೋಟ್‌ನಲ್ಲಿ ಸಂಭವಿಸಿದ ಅಗ್ನಿ ಅವಘಡದಿಂದ ತೀವ್ರ ನೊಂದಿದ್ದೇವೆ. ನನ್ನ ಆಲೋಚನೆಗಳು ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಎಲ್ಲರೊಂದಿಗೂ ಇವೆ. ಗಾಯಗೊಂಡವರಿಗೆ ಪ್ರಾರ್ಥನೆ. ಸಂತ್ರಸ್ತರಿಗೆ ಸಾಧ್ಯವಿರುವ ಎಲ್ಲ ನೆರವು ನೀಡಲು ಸ್ಥಳೀಯ ಆಡಳಿತ ಕಾರ್ಯೋನ್ಮುಖವಾಗಿದೆ.ಘಟನೆ ಕುರಿತಂತೆ 24 ಗಂಟೆಯಲ್ಲಿ ವರದಿ ನೀಡುವಂತೆ ಗುಜರಾತ್ ಸರ್ಕಾರಕ್ಕೆ ಸೂಚನೆ ನೀಡಲಾಗಿದೆ.ಇದೆ ವೇಳೆ ಗೇಮಿಂಗ್ ಝೋನ್ ಮಾಲೀಕ ಸರಿ ನಾಲ್ವರನ್ನು ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ ದುರಂತದ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮಾಹಿತಿಯನ್ನು ಪಡೆದುಕೊಂಡಿದ್ದಾರೆ.ರಾಜಕೋಟ್ ನಲ್ಲಿ ಅಗ್ನಿ ದುರಂತ ನಮ್ಮೆಲ್ಲರಿಗೂ ದುಃಖ ತಂದಿದೆ. ಘಟನೆ ನಡೆದ ತಕ್ಷಣ ಗುಜರಾತ್ ಮುಖ್ಯಮಂತ್ರಿಗೆ ಕರೆ ಮಾಡಿದ್ದೆ. ಗುಜರಾತ್ ಸಿಎಂ ಭೂಪೇಂದ್ರ ಪಟೇಲ್ ಗೆ…
ಗುಜರಾತ್ : ಇಂದು ಸಂಜೆ ಗುಜರಾತ್‌ನ ರಾಜ್‌ಕೋಟ್‌ನಲ್ಲಿ ಗೇಮಿಂಗ್ ಝೋನ್‌ನಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡು ಘಟನೆಯಲ್ಲಿ 24 ಜನರು ಸಜೀವ ದಹನಗೊಂಡಿದ್ದು ಇನ್ನು ಹಲವರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ ಎಂದು ಎಎನ್ಐ ವರದಿ ಮಾಡಿದೆ. ಘಟನಾ ಸ್ಥಳಕ್ಕೆ ಹಲವು ಅಗ್ನಿಶಾಮಕ ಟೆಂಡರ್ ಧಾವಿಸಿದ್ದು, ಬೆಂಕಿ ನಂದಿಸುವ ಪ್ರಯತ್ನ ಮುಂದುವರಿದಿದೆ. ಬೆಂಕಿ ಅವಘಡಕ್ಕೆ ಇನ್ನೂ ಕಾರಣ ತಿಳಿದುಬಂದಿಲ್ಲ. ಬೆಂಕಿ ಅನಾಹುತಕ್ಕೆ ಕಾರಣ ಇನ್ನೂ ತಿಳಿದುಬಂದಿಲ್ಲ. ಬೆಂಕಿ ನಂದಿಸುವ ಪ್ರಯತ್ನ ನಡೆಯುತ್ತಿದೆ. ನಾಪತ್ತೆಯಾದವರ ಬಗ್ಗೆ ನಮಗೆ ಯಾವುದೇ ಸಂದೇಶ ಬಂದಿಲ್ಲ. ತಾತ್ಕಾಲಿಕ ಕಟ್ಟಡ ಕುಸಿದಿರುವುದರಿಂದ ಮತ್ತು ಗಾಳಿಯ ವೇಗದಿಂದಾಗಿ ನಾವು ಅಗ್ನಿಶಾಮಕ ಕಾರ್ಯಾಚರಣೆಯಲ್ಲಿ ತೊಂದರೆ ಎದುರಿಸುತ್ತಿದ್ದೇವೆ ಎಂದು ಅಗ್ನಿಶಾಮಕ ಅಧಿಕಾರಿ ಹೇಳಿರುವುದಾಗಿ ಎಎನ್ಐ ವರದಿ ಮಾಡಿದೆ. ಘಟನೆಯಲ್ಲಿ ಹಲವರಿಗೆ ಗಂಭೀರ ಗಾಯಗಳಾಗಿದ್ದು, ತಕ್ಷಣ ಅವರನ್ನು ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಇನ್ನು ಹಲವರು ಸಿಲುಕಿರುವ ಮಾಹಿತಿ ಇದೆ ಈವರೆಗೂ 24 ಶವಗಳನ್ನು ಅಗ್ನಿ ಶಾಮಕ ದಳದ ಸಿಬ್ಬಂದಿ ಹೊರ ತೆಗೆದಿದ್ದಾರೆ. ದುರಂತದಲ್ಲಿ ಸಾವಿನ ಸಂಖ್ಯೆ ಮತ್ತಷ್ಟು…
ಗುಜರಾತ್ : ಇಂದು ಸಂಜೆ ಗುಜರಾತ್‌ನ ರಾಜ್‌ಕೋಟ್‌ನಲ್ಲಿ ಗೇಮಿಂಗ್ ಝೋನ್‌ನಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡು 22 ಜನರು ಸಜೀವ ದಹನಗೊಂಡಿರುವ ಘಟನೆ ನಡೆದಿದೆ. ಘಟನಾ ಸ್ಥಳಕ್ಕೆ ಹಲವು ಅಗ್ನಿಶಾಮಕ ಟೆಂಡರ್ ಧಾವಿಸಿದ್ದು, ಬೆಂಕಿ ನಂದಿಸುವ ಪ್ರಯತ್ನ ಮುಂದುವರಿದಿದೆ. ಬೆಂಕಿ ಅವಘಡಕ್ಕೆ ಇನ್ನೂ ಕಾರಣ ತಿಳಿದುಬಂದಿಲ್ಲ. ಬೆಂಕಿ ಅನಾಹುತಕ್ಕೆ ಕಾರಣ ಇನ್ನೂ ತಿಳಿದುಬಂದಿಲ್ಲ. ಬೆಂಕಿ ನಂದಿಸುವ ಪ್ರಯತ್ನ ನಡೆಯುತ್ತಿದೆ ಎಂದು ತಿಳಿದುಬಂದಿದೆ. ನಾಪತ್ತೆಯಾದವರ ಬಗ್ಗೆ ನಮಗೆ ಯಾವುದೇ ಸಂದೇಶ ಬಂದಿಲ್ಲ. ತಾತ್ಕಾಲಿಕ ಕಟ್ಟಡ ಕುಸಿದಿರುವುದರಿಂದ ಮತ್ತು ಗಾಳಿಯ ವೇಗದಿಂದಾಗಿ ನಾವು ಅಗ್ನಿಶಾಮಕ ಕಾರ್ಯಾಚರಣೆಯಲ್ಲಿ ತೊಂದರೆ ಎದುರಿಸುತ್ತಿದ್ದೇವೆ ಎಂದು ಅಗ್ನಿಶಾಮಕ ಅಧಿಕಾರಿ ಹೇಳಿರುವುದಾಗಿ ಎಎನ್ಐ ವರದಿ ಮಾಡಿದೆ.
ಬಾಗಲಕೋಟೆ : ಇತ್ತೀಚಿಗೆ ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಸರ್ಕಾರಿ ಐಬಿ ಯಲ್ಲಿದಾರರ ಜೊತೆ ಸೇರಿ ಎಣ್ಣೆ ಪಾರ್ಟಿ ಮಾಡಿದ್ದ ಇಂಜಿನಿಯರ್ಸ್ ಗಳನ್ನು ಇದೀಗ ಅಮಾನತು ಮಾಡಲಾಗಿದೆ ಎಂದು ತಿಳಿದು ಬಂದಿದೆ. ಹೌದು ಮೇ 22ರಂದು ಜಮಖಂಡಿಯ ಸರ್ಕಾರಿ ಐಬಿಯಲ್ಲಿ ಮಧ್ಯದ ಪಾರ್ಟಿ ಮಾಡಿದ್ದರು.ಬಾಗಲಕೋಟೆ ಜಿಲ್ಲಾ ಪಂಚಾಯತ್ ವಿಭಾಗದ ಜಮಖಂಡಿ ವಿಭಾಗದ ಎಇಇ ಎಂ ಎಸ್ ನಾಯಕ್, ಇಂಜಿನಿಯರ್ ಗಳಾದ ರಾಮಪ್ಪ ರಾಥೋಡ್, ಗಜಾನನ ಪಾಟೀಲ್ ಹಾಗೂ ಜಗದೀಶ್ ನಾಡಗೌಡ್ ಐಬಿ ಕೀ ಕೊಡುವಂತೆ ಸಿಬ್ಬಂದಿಗೆ ಸೂಚಿಸಿದ್ದಕ್ಕೆ ಪಿಡಬ್ಲ್ಯೂಡಿ ಎಇ ಜಂಬಗಿ ಕೂಡ ಸಸ್ಪೆಂಡ್ ಅಮಾನತುಗೊಳಿಸಿ ಡಿಸಿ ಕೆಎಂ ಜಾನಕಿ ಆದೇಶ ಹೊರಡಿಸಿದ್ದಾರೆ. ಮೇ 22 ರಂದು ಜಮಖಂಡಿ ಸರಕಾರಿ ಐಬಿಯಲ್ಲಿ ಮದ್ಯದ ಪಾರ್ಟಿ ಮಾಡಿದ್ದರು.ಗುತ್ತಿಗೆದಾರರ ಜೊತೆ ಸೇರಿ ಇಂಜಿನಿಯರ್ ಗಳು ಮಧ್ಯ ಸೇವನೆ ಮಾಡಿದ್ದರು. ಕರ್ತವ್ಯಕ್ಕೆ ಚಕ್ಕರ್ ಹಾಕಿ ನೀತಿ ಸಂಹಿತೆಯನ್ನು ಉಲ್ಲಂಘಿಸಿ ಮಧ್ಯಪಾನ ಮಾಡಿದ್ದರು. ಮರುದಿನ ಘಟನೆ ಕುರಿತಂತೆ ಉತ್ತರ ನೀಡಿ ಎಂದು ಶೋಕಾಸ್ ನೋಟಿಸ್ ನೀಡಲಾಗಿತ್ತು. ಸಮರ್ಪಕ…
ರಾಮನಗರ : ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿಯಾಗಿರುವ ಅಡಿಗೆ ಶಿವಕುಮಾರ್ ಅವರು ನೂರಕ್ಕೆ ನೂರರಷ್ಟು ಮುಖ್ಯಮಂತ್ರಿಯಾಗಿ ಆಗುತ್ತಾರೆ ಎಂದು ರಾಮನಗರದಲ್ಲಿ ಕಾಂಗ್ರೆಸ್ ಎಂಎಲ್ಸಿ ಪುಟ್ಟಣ್ಣ ಭವಿಷ್ಯ ನುಡಿದಿದ್ದಾರೆ. ರಾಮನಗರದಲ್ಲಿ ಎಂಎಲ್ಸಿ ಪುಟ್ಟಣ್ಣ ಹೇಳಿಕೆ ನೀಡಿದ್ದು, ಯಾರನ್ನೋ ಮಾಡಿದ್ದೇವೆ ಅಂತೇ, ನಮ್ಮ ಮನೆ ಮಗ, ನಮ್ಮೂರವರು ಮುಖ್ಯಮಂತ್ರಿ ಆಗಲಿ ಬಿಡಿ. ಹಿತ್ತಲ ಬಾಗಿಲಲ್ಲಿ ಕೆಲವರು ಸಿಎಂ ಆಗಿದ್ದಾರೆ.ಎಚ್ ಡಿ ದೇವೇಗೌಡರದ್ದು ಹಾಗೂ ಸಿದ್ದರಾಮಯ್ಯ ಅವರದೆಲ್ಲಾ ಹೋರಾಟ. ಅವರನ್ನು ಬೇರೆಯವರಿಗೆ ಏಕೆ ಹೋಲಿಸುತ್ತೀರೆಂದು ಎಚ್ ಡಿ ಕುಮಾರಸ್ವಾಮಿಗೆ ಟಾಂಗ್ ನೀಡಿದ್ದಾರೆ. ಗ್ಯಾರೆಂಟಿ ಯೋಜನೆಯ ಅಂಡರ್ ಕರೆಂಟ್ ಇದು.ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ 23 ರಿಂದ 25 ಸ್ಥಾನ ಗೆಲ್ಲುತ್ತೇವೆ. ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲೂ ಕಾಂಗ್ರೆಸ್ ಗೆಲ್ಲಲಿದೆ ಎಂದರು ಅಲ್ಲದೆ ಫಲಿತಾಂಶದ ಬಳಿಕ ಬಿಜೆಪಿ ಜೆಡಿಎಸ್ ಮೈತ್ರಿ ಮುಂದುವರಿಯುವ ವಿಚಾರವಾಗಿ ಮಾತನಾಡಿದ ಅವರು, ಅದು ಗೊತ್ತಿಲ್ಲ ಯಾರನ್ನು ಇಟ್ಕೋತಾರೋ ಕಟ್ಕೋತಾರೋ ಗೊತ್ತಿಲ್ಲ. ಇನ್ನು 9 ವರ್ಷ ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಮುಂದುವರೆಯಲಿದೆ ಎಂದು ರಾಮನಗರದಲ್ಲಿ ಕಾಂಗ್ರೆಸ್ ಪಕ್ಷದ…
ಕಲಬುರಗಿ : ಹಲ್ಲಿ ಬಿದ್ದ ಆಹಾರ ಸೇವಿಸಿ ಓರ್ವ ಅಸ್ವಸ್ಥನಾಗಿದ್ದು, ಹಲವರಿಗೆ ವಾಂತಿ ಭೇದಿ ಆಗಿರುವ ಘಟನೆ ಕಲಬುರ್ಗಿ ಜಿಲ್ಲೆಯ ಸೇಡಂ ಪಟ್ಟಣದ ವಾಸವಾದತ್ತ ಸಿಮೆಂಟ್ ಫ್ಯಾಕ್ಟರಿಯಲ್ಲಿ ಈ ಘಟನೆ ಸಂಭವಿಸಿದೆ.ಅಸ್ವಸ್ಥಗೊಂಡ ಕಾರ್ಮಿಕನನ್ನು ತಕ್ಷಣ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿಲಾಗಿದೆ. ಕಲಬುರ್ಗಿ ಜಿಲ್ಲೆಯ ಸೇಡಂ ಪಟ್ಟಣದ ವಾಸವಾದತ್ತ ಸಿಮೆಂಟ್ ಫ್ಯಾಕ್ಟರಿಯಲ್ಲಿ ಈ ದುರ್ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ. ಫ್ಯಾಕ್ಟ್ರಿಯಲ್ಲಿನ ಕಾರ್ಮಿಕರ ಕ್ಯಾಂಟೀನ್ ಆಹಾರದಲ್ಲಿ ಹಲ್ಲಿ ಪತ್ತೆಯಾಗಿದೆ. ವಾಂತಿ, ಭೇದಿ ಆಗಿರುವ ಹಲವರಿಗೆ ತಕ್ಷಣ ಆಸ್ಪತ್ರೆಗೆ ದಾಖಲಿಸಿ ಚಿಕೆತ್ಸೆ ನೀಡಲಾಗುತ್ತಿದೆ.
ಬೆಂಗಳೂರು : ತಂಬಾಕು ಉತ್ಪನ್ನಗಳಿಗೆ ಅಪ್ರಾಪ್ತ ಬಾಲಕರು ದಾಸರಾಗುತ್ತಿರುವ ಹಿನೆಲೆಯಲ್ಲಿ ಇದೀಗ ಆರೋಗ್ಯ ಇಲಾಖೆ ತಂಬಾಕು ಉತ್ಪನ್ನ ಮಾರಾಟದ ಆನ್ಲೈನ್ ಆಪ್ ಗಳಿಗೆ ನಿಷೇಧಿಸಿ ಆರೋಗ್ಯ ಇಲಾಖೆಯು ಸೈಬರ್ ಕ್ರೈಂ ಗೆ ಪತ್ರ ಬರೆದಿದೆ ಎಂದು ತಿಳಿದು ಬಂದಿದೆ. ಹೌದು ತಂಬಾಕು ಉತ್ಪನ್ನಗಳಿಗೆ ಅಪ್ರಾಪ್ತ ಬಾಲಕರು ದಾಸರಾಗುತ್ತಿದ್ದಾರೆ. ಹಾಗಾಗಿ ತಂಬಾಕು ಉತ್ಪನ್ನ ಮಾರಾಟದ ಆನ್ಲೈನ್ ಆಪ್ ಗಳಿಗೆ ನಿಷೇಧಿಸಿ ಎಂದು ಆನ್ಲೈನ್ ಹೋಂ ಡೆಲಿವರಿ ಆಪ್ ಗಳ ವಿರುದ್ಧ ಕ್ರಮಕ್ಕೆ ಸೈಬರ್ ಕ್ರೈಂ ಇಲಾಖೆಗೆ ಆರೋಗ್ಯ ಇಲಾಖೆ ಇದೀಗ ಪತ್ರ ಬರೆದಿದೆ ಕಾನೂನು ಕ್ರಮಕ್ಕೆ ಮನವಿ ಮಾಡಿದೆ. COTPA- 2003 ಕಾಯ್ದೆ ನಿಯಮ ಉಲ್ಲಂಘನೆ ಆರೋಪ ಮಾಡಿದ್ದು, ಬ್ಲಿಂಕ್ ಇಟ್, ಝೋಮ್ಯಾಟೋ, ಸ್ವಿಗ್ಗಿ, ಜೆಪ್ಟೊ, ಬಿಗ್ ಬಾಸ್ಕೆಟ್ ಹಲವು ಹೋಂ ಡೆಲಿವರಿ ಆಫ್ ಗಳಿಂದ ನಿಯಮ ಉಲ್ಲಂಘನೆಯಾಗಿದೆ ಎಂದು ಆರೋಪಿಸಲಾಗಿದೆ. ಹಾಗಾಗಿ ಆನ್ಲೈನ್ ಆಪ್ ಗಳ ಬಗ್ಗೆ ಸಾಕಷ್ಟು ದೂರುಗಳು ಬಂದ ಹಿನ್ನೆಲೆಯಲ್ಲಿ ಕಾನೂನು ಕ್ರಮಕ್ಕೆ ಕೋರಿ ಆರೋಗ್ಯ ಇಲಾಖೆಯ ಆಯುಕ್ತ…