Author: kannadanewsnow05

ಬೆಂಗಳೂರು : ಬೆಂಗಳೂರಿನ ಕೆಸಿ ಜನರಲ್ ಹಾಸ್ಪಿಟಲ್​ ನಲ್ಲಿ ಮತ್ತೊಂದು ಅಮಾನವೀಯ ಘಟನೆ ನಡೆದಿದ್ದು, ಐಸಿಯು(ICU)ನಲ್ಲಿ ಇದ್ದ ವ್ಯಕ್ತಿಗೆ ನಿನ್ನೆ ರಾತ್ರಿ ರಕ್ತ ಬರುವ ಹಾಗೆ ಆಸ್ಪತ್ರೆಯ ಸಿಬ್ಬಂದಿ ಥಳಿಸಿದ್ದಾನೆ. ಘಟನೆಗೆ ಸಂಬಂಧಿಸಿದಂತೆ ನಿನ್ನೆ ನೆಲಮಂಗಲ ಮೂಲದ ವೆಂಕಟೇಶ್ ಎಂಬುವವರು ವಿಷ ಸೇವಿಸಿ ಐಸಿಯು ವಾರ್ಡ್ ಸೇರಿದ್ದರು. ಈ ವೇಳೆ ಆಸ್ಪತ್ರೆಯ ವಾರ್ಡ್ ಬಾಯ್ ಧನಂಜಯ್ ಎಂಬಾತ ಇಗ್ಗಾ ಮುಗ್ಗ ಹೊಡೆದಿರುವ ಶಂಕೆ ವ್ಯಕ್ತವಾಗಿದೆ. ಚಿಕಿತ್ಸೆ ವೇಳೆ ಕೂಗಾಡಿದ ಎನ್ನುವ ಕಾರಣಕ್ಕೆ ಥಳಿತ ಮಾಡಿದ್ದಾರೆ ಎನ್ನುವ ಆರೋಪ ಕೇಳಿಬಂದಿದ್ದು, ಆಸ್ಪತ್ರೆ ಬೇಜವಾಬ್ದಾರಿತನದ ವಿರುದ್ಧ ಗಾಯಾಳು ವೆಂಕಟೇಶ್ ಸಂಬಂಧಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ರೋಗಿ ಸಂಬಂಧಿ ಲಲಿತ ಎಂಬುವವರು ಮಾತನಾಡಿ, ನಮ್ಮವರು ವಿಷ ಕುಡಿದು ಕೆಸಿ ಜನರಲ್ ಆಸ್ಪತ್ರೆ ಐಸಿಯುನಲ್ಲಿ ಸೇರಿದ್ದರು. ಈ ವೇಳೆ ‘ಧನಂಜಯ ಎಂಬ ವಾರ್ಡ್ ಬಾಯ್ ಪೇಷಂಟ್ ಕೂಗಾಡುತ್ತಿದ್ದ ಎಂದು ಹೇಳಿ ಬಾಯಿ, ಮೂಗಿನ ಮೇಲೆ ಹಲ್ಲೆ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ. ಆಸ್ಪತ್ರೆ ವೈದ್ಯಕೀಯ ಅಧೀಕ್ಷಕಿ ಹೇಳಿದ್ದಿಷ್ಟು ಇನ್ನು ಘಟನೆ…

Read More

ಮೈಸೂರು : ಚನ್ನಗಿರಿಯ ಠಾಣೆಯಲ್ಲಿ ನಡೆದ ಸಾವು ಪ್ರಕರಣಕ್ಕೆ ಸಂಬಂಧಿಸದಂತೆ ಇದು ಲಾಕಪ್ ಡೆತ್ ಅಲ್ಲ, ಆತನಿಗೆ ಮೂರ್ಛೆ ರೋಗ ಇತ್ತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪಷ್ಟನೆ ನೀಡಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ಎಫ್‌ಐಆರ್ ಇಲ್ಲದೆ ಪೊಲೀಸರು ಠಾಣೆಗೆ ಕರೆ ತಂದಿದ್ದು ತಪ್ಪು. ಈ ತಪ್ಪಿಗಾಗಿ ಪೊಲೀಸ್ ಅಧಿಕಾರಿಗಳ ಅಮಾನತ್ತಿಗೆ ಆದೇಶ ಮಾಡಿದ್ದೇನೆ. ಆದರೆ ಇದು ಲಾಕಪ್ ಡೆತ್ ಅಲ್ಲ ಎಂದು ಸಿಎಂ ಸಿದ್ದರಾಮಯ್ಯ ಅವರು ಸ್ಪಷ್ಟನೆ ನೀಡಿದರು. ಇನ್ನು ಪ್ರಜ್ವಲ್ ರೇವಣ್ಣ ಪಾಸ್ ಪೋರ್ಟ್ ವಿಚಾರದ ಕುರಿತು ಸರ್ಕಾರದಿಂದ ಕೇಂದ್ರಕ್ಕೆ ತಡವಾಗಿ ಪತ್ರ ಬಂತು ಎಂಬ ಕೇಂದ್ರ ಸಚಿವರ ಹೇಳಿಕೆ ಕುರಿತು ಮಾತನಾಡಿ, ಇದು ಮೊಸರಲ್ಲಿ ಕಲ್ಲು ಹುಡುಕುವ ಕೆಲಸ ಅಷ್ಟೇ. ನಾನು 15 ದಿನಗಳ ಹಿಂದೆಯೇ ಪತ್ರ ಬರೆದಿದ್ದೇನೆ. ಪತ್ರ ಬರೆದರೂ ನನಗೆ ಉತ್ತರ ಬಂದಿಲ್ಲ. ಒಂದು ವೇಳೆ ನಾನು ಪತ್ರ ಬರೆದದ್ದು ತಡವೇ ಅಂದುಕೊಳ್ಳಿ. ಈಗ ಯಾಕೆ ಕ್ರಮ ಕೈಗೊಳ್ಳುತ್ತಿಲ್ಲ ಹೇಳಿ. ಸುಮ್ಮನೇ ಕಾಲ ಕಳೆಯುವುದನ್ನು…

Read More

ಬೆಂಗಳೂರು : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಅಶ್ಲೀಲ ವಿಡಿಯೋ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅಶ್ಲೀಲ ವಿಡಿಯೋ ಹಂಚಿಕೆ ಮಾಡಿದ್ದು ತಪ್ಪು ಎಂಬ ಹೇಳಿಕೆಗೆ ಹೆಚ್‍ಡಿ ಕುಮಾರಸ್ವಾಮಿ ಟ್ವೀಟ್ ನಲ್ಲಿ ತಿರುಗೇಟು ನೀಡಿದ್ದು,ನಿಮ್ಮದು ‘CABINET OF KARNATAKA’ ಅಲ್ಲ, ಅದು CABINET OF CONSPIRACY ಎಂದು ಸಿಎಂ ವಿರುದ್ಧ HDK ಕಿಡಿ ಕಾರಿದ್ದಾರೆ. ಟ್ವೀಟ್ ನಲ್ಲಿ ಕ್ಷಣಕ್ಕೊಂದು ಮಾತು, ಘಳಿಗೆಗೊಂದು ಹೇಳಿಕೆ! ಕರ್ನಾಟಕದ ಮುಖ್ಯಮಂತ್ರಿ ಕುರ್ಚಿಯ ಮೇಲೆ ನೀವು ಕೂತಿದ್ದಿರೋ ಅಥವಾ ಊಸರವಳ್ಳಿ ಏನಾದರೂ ಕೂತಿದೆಯೋ? ನನಗಂತೂ ಅನುಮಾನ!! ಇಷ್ಟು ಬಣ್ಣಗೇಡಿ ವರ್ತನೆಯನ್ನು ನಿಮ್ಮಿಂದ ನಿರೀಕ್ಷೆ ಮಾಡಿರಲಿಲ್ಲ ನಾನು. ಅತೀವ ವಿಷಾದ ಮತ್ತು ನೋವಿನಿಂದಲೇ ಈ ಮಾತು ಹೇಳುತ್ತಿದ್ದೇನೆ ಸಿದ್ದರಾಮಯ್ಯನವರೇ. ಮೈಸೂರಿನಲ್ಲಿ ಇವತ್ತು ಬೆಳಗ್ಗೆ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದೀರಿ “ನೊಂದ ಮಹಿಳೆಯರ ವಿಡಿಯೋಗಳನ್ನು ಜಾಲತಾಣಗಳಲ್ಲಿ ಹಂಚುವುದು, ಹರಡುವುದು ಮುಖ್ಯವಲ್ಲ. ಅದು ಅಪರಾಧವೂ ಅಲ್ಲ! ಅಶ್ಲೀಲ ವಿಡಿಯೋಗಳನ್ನು ವೈರಲ್ ಮಾಡಿದ್ದು ದೊಡ್ಡ ಅಪರಾಧ ಎನ್ನುವುದು ಯಾವ ಸೆಕ್ಷನ್‌ನಲ್ಲಿದೆ? ಅದನ್ನು ಯಾವ…

Read More

ಮಂಗಳೂರು : ಠಾಣೆಯಲ್ಲಿ ಪ್ರತಿಭಟನೆ ನಡೆಸಿದ್ದಲ್ಲದೆ ಪಿಎಸ್ಐ ಅಧಿಕಾರಿಗೆ ಧಮ್ಕಿ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮಂಗಳೂರು ವಿಮಾನ ನಿಲ್ದಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿ ಎಂಎಲ್ಎ ಅಂತ ಬಿಟ್ಟು ಬಿಡೋಕೆ ಆಗುತ್ತಾ ಎಂದು ಬಿಜೆಪಿ ಶಾಸಕ ಹರೀಶ್ ಪೂಂಜಾ ವಿರುದ್ಧ ವಾಗ್ದಾಳಿ ನಡೆಸಿದರು. ಮಂಗಳೂರು ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಠಾಣೆಯಲ್ಲಿ ಪ್ರತಿಭಟನೆ ನಡೆದಪೊಲೀಸರಿಗೆ ಧಮ್ಕಿ ಹಾಕಿದ ಪ್ರಕರಣಕೆ ಸಂಬಂಧಿಸಿದಂತೆ ಶಾಸಕ ಹರೀಶ್ ಪೂಂಜಾ ವಿರುದ್ಧ ಎರಡು ಎಫ್ಐಆರ್ ದಾಖಲಾಗಿದೆ. ಪೂಂಜಾ ಪ್ರಕರಣದಲ್ಲಿ ಕಾಂಗ್ರೆಸ್ನ ಒತ್ತಡ ಅಂದರೆ ಏನು ಅರ್ಥ? ಕಾನೂನು ಎಲ್ಲರಿಗೂ ಒಂದೇ ಅಲ್ವಾ? ಇದು ಜಾಮೀನು ಪ್ರಕರಣ ಅಲ್ಲ ಈ ಕೆ ಎಸ್ ನಲ್ಲಿ ಏಳು ವರ್ಷ ಜೈಲು ಶಿಕ್ಷೆ ಇರುತ್ತದೆ ಎಂಎಲ್ಎ ಅಂತ ಬಿಟ್ಟುಬಿಡುವುದಕ್ಕೆ ಆಗುತ್ತಾ ಎಂದು ಮಂಗಳೂರು ವಿಮಾನ ನಿಲ್ದಾಣದಲ್ಲಿ ಶಾಸಕ ಹರೀಶ್ ಪೂಂಜ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.

Read More

ಬೆಂಗಳೂರು : ಪ್ರಜ್ವಲ್​ ರೇವಣ್ಣ ನನ್ನು ವಿದೇಶಕ್ಕೆ ಕಳಿಸಿರುವುದೇ ಅವರ ತಾತ. ವಿದೇಶಕ್ಕೆ ಕಳಿಸಿ ಈಗ ಪತ್ರ ಬರೆದು ಏನು ಮಾಡುತ್ತಾರೆ? ಎಂದು ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೆಗೌಡರ ಬಗ್ಗೆ ಲಘುವಾಗಿ ಮಾತನಾಡಿರುವ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇನ್ನೆಂದೂ ನಾನು ವಕೀಲಿಕೆ ಮಾಡುತ್ತಿದ್ದೆ ಎನ್ನಬೇಡಿ ಸುಧೀರ್ಘವಾದಂತ ಟ್ವೀಟ್ ಮಾಡಿರುವ ಅವರು, ಎಚ್ ಡಿ ದೇವೇಗೌಡರೇ ಪ್ರಜ್ವಲ್ ಅನ್ನು ವಿದೇಶಕ್ಕೆ ಕಳುಸಿದ್ದಾರೆ ಎಂಬ ಹೇಳಿಕೆಗೆ ಕಿಡಿ ಕಾರಿದ್ದಾರೆ. ನಾನು ವಕೀಲನಾಗಿದ್ದೆ, ಹಿಂದೆ ನಾನೂ ವಕೀಲಿಕೆ ಮಾಡುತ್ತಿದ್ದೆ ಎಂದು ಪದೇಪದೆ ಹೇಳಬೇಡಿ. ನಿಮ್ಮ ವಕೀಲಿ ಜ್ಞಾನದ ಮೇಲೆ ಅಗೌರವ ಬರುವಂತೆ ಮಾತನಾಡಬೇಡಿ. ಎಷ್ಟೋ ಮಹಾನುಭಾವರು ಈ ವೃತ್ತಿಗೆ ಕಳಸಪ್ರಾಯರಾಗಿದ್ದಾರೆ. ದಯಮಾಡಿ ಅವರೆಲ್ಲರನ್ನು ಅಪಮಾನಿಸಬೇಡಿ. “ಅತ್ಯಾಚಾರದ ವೀಡಿಯೊ ಹರಿದಾಡಿತು ಎನ್ನುವುದಕ್ಕಿಂತ, ಅತ್ಯಾಚಾರ ಘೋರ ಅಪರಾಧ” ಎನ್ನುವ ಆಣಿಮುತ್ತು ಉದುರಿಸಿದ್ದೀರಿ. ನಿಮ್ಮ ವಕೀಲಿಕೆಯ ಪಾಂಡಿತ್ಯದ ಬಗ್ಗೆ ಈ ನಿಮ್ಮ ಮಾತು ನನ್ನಲ್ಲಿ ಅನೇಕ ಪ್ರಶ್ನೆಗಳನ್ನು ಉಂಟು ಮಾಡಿದೆ.ಅತ್ಯಾಚಾರ ಅಮಾನುಷ…

Read More

ರಾಯಚೂರು : ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ವೇಳೆ ಹಣಕ್ಕೆ ಬೇಡಿಕೆ ಇಟ್ಟ ಆರೋಪದ ಹಿನ್ನೆಲೆಯಲ್ಲಿ ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಗಬ್ಬೂರು ಠಾಣೆಯ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಪಿಎಸ್ಐ ಹಾಗೂ ಕಾನ್ಸ್ಟೇಬಲ್ ಅನ್ನು ಬಂಧಿಸಿದ್ದಾರೆ. ಹೌದು ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಗಬ್ಬುರು ಠಾಣೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಐಪಿಎಲ್ ಬೆಟ್ಟಿಂಗ್ ಆರೋಪ ವಿಚಾರವಾಗಿ ಹಣಕ್ಕೆ ಬೇಡಿಕೆ ಇಟ್ಟಿರುವ ಆರೋಪ ಕೇಳಿ ಬಂದಿದೆ. ಫಾರೂಕ್ ಎಂಬಾತನ ಬಳಿ ಪಿಎಸ್ಐ ಮಂಜುನಾಥ್ 3 ಲಕ್ಷ್ಮ ಹಣಕ್ಕೆ ಬೇಡಿಕೆ ಇಟ್ಟ ಆರೋಪ ಕೇಳಿ ಬಂದಿದೆ. ಈ ಬಗ್ಗೆ ಪಿಎಸ್ಐ ಮಂಜುನಾಥ ವಿರುದ್ಧ ಲೋಕಾಯುಕ್ತಕ್ಕೆ ಫಾರೂಖ್ ದೂರು ಸಲ್ಲಿಸಿದ್ದ. ಫಾರೂಕ್ ದೂರಿನ ಮೇರೆಗೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ದಾಳಿ ವೇಳೆ ಕಾನ್ಸ್ಟೇಬಲ್ ರಮೇಶ್ ಐವತ್ತು ಸಾವಿರ ಹಣ ಪಡೆಯುವಾಗ ಲೋಕಾಯುಕ್ತ ಬೆಲೆಗೆ ಬಿದ್ದಿದ್ದಾನೆ. ವಿಚಾರಣೆ ವೇಳೆ ಪಿಎಸ್ಐ ಮಂಜುನಾಥ ವಿರುದ್ಧ ಆರೋಪ ಕೇಳಿ ಬಂದಿದೆ. ಪ್ರಕರಣ ಸಂಬಂಧಪಟ್ಟ ಪೊಲೀಸರು…

Read More

ಬೆಂಗಳೂರು : ಕೇವಲ ಮೋರಿ ಕಾಮಗಾರಿಗಳಿಗೆ ಎರಡು ಗುಂಪುಗಳ ಮಧ್ಯ ಗಲಾಟೆ ನಡೆದಿರುವ ಘಟನೆ ಬೆಂಗಳೂರಿನ ನೆಲಮಂಗಲದ ರಾಘವೇಂದ್ರ ನಗರದಲ್ಲಿ ಈ ಒಂದು ಘಟನೆ ನಡೆದಿದೆ. ಹೌದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದ ರಾಘವೇಂದ್ರ ನಗರದಲ್ಲಿ ನೆಲಮಂಗಲ ನಗರಸಭೆ ಸದಸ್ಯ ಅಂಜನಮೂರ್ತಿ ಬೆಂಬಲಿಗರು ಹಾಗೂ ಮುನಿರಾಜು ಬೆಂಬಲಿಗರ ನಡುವೆ ಮೋರಿ ಕಾಮಗಾರಿ ಕುರಿತಂತೆ ಮಾರಾಮಾರಿ ನಡೆದಿದೆ. ಘಟನೆಯಲ್ಲಿ ಹಲವರಿಗೆ ಗಾಯಗಳಾಗಿದ್ದು, ತಕ್ಷಣ ಅವರಿಗೆ ನೆಲಮಂಗಲ ತಾಲೂಕು, ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ನಗರ ಸಭೆ ಸದಸ್ಯ ಅಂಜನಾಮೂರ್ತಿ, ಅತಿಕ್, ಗೌಸ್, ಸುರೇಂದ್ರ, ಶೇಖರ್, ಮುನಿರಾಜು, ಕುಶಾಲ್, ಕುಮಾರಯ್ಯ ಹಾಗೂ ರಾಧಾಮಣಿ ವಿರುದ್ಧ ಇದೀಗ ನೆಲಮಂಗಲ ಟೌನ್ ಠಾಣೆಯಲ್ಲಿ ಎರಡು ಕಡೆ ಅವರಿಂದ ಕೇಸ್ ದಾಖಲಾಗಿದೆ.

Read More

ರಾಯಚೂರು : ಜಿಲ್ಲೆಯ ಗಂಜಳ್ಳಿ ಗ್ರಾಮದಲ್ಲಿ ಕೃಷ್ಣ ನದಿಯಲ್ಲಿ ಕುರಿಗೆ ನೀರು ಕುಡಿಸಲು ಹೋದ ಬಾಲಕ‌ ನಾಪತ್ತೆಯಾಗಿದ್ದಾನೆ. ಈ ಹಿನ್ನೆಲೆಯಲ್ಲಿ ಬಾಲಕನನ್ನು ಮೊಸಳೆ ಹೊತ್ತೊಯ್ದಿರುವ ಶಂಕೆ ವ್ಯಕ್ತವಾಗಿದೆ. ವಿಶ್ವ (11) ಎಂಬ ಬಾಲಕನ ಶೋಧ ಕಾರ್ಯ ನಡೆದಿದೆ. ವಿಷಯ ತಿಳಿದು ಸ್ಥಳಕ್ಕೆ ರಾಯಚೂರು ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿದ್ದಾರೆ. ಸ್ಥಳಕ್ಕೆ ರಾಯಚೂರು ಗ್ರಾಮೀಣ ಠಾಣೆ ಪೋಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಕೃಷ್ಣ ನದಿಯಲ್ಲಿ ಬಾಲಕನಿಗಾಗಿ ಶೋಧ ಕಾರ್ಯ ಮುಂದುವರೆದಿದೆ. ಗ್ರಾಮಸ್ಥರು, ಪೊಲೀಸರು ಹಾಗೂ ಅಗ್ನಿಶಾಮಕ ದಳ ಸಿಬ್ಬಂದಿಯಿಂದ ಶೋಧ ಕಾರ್ಯ ಮುಂದುವರೆದಿದೆ.

Read More

ತುಮಕೂರು : ಕೆಸರಿನಲ್ಲಿ ವ್ಯಕ್ತಿಯೊಬ್ಬ ಸಿಲುಕಿಕೊಂಡು ಸಾವು ಬದುಕಿನ ಮಧ್ಯ ಹೋರಾಡುತ್ತಿದ್ದವನನ್ನು ಇದೀಗ ಪೊಲೀಸರು ರಕ್ಷಣೆ ಮಾಡಿರುವ ಘಟನೆ ತುಮಕೂರಿನ ಹೊರವಲಯ ದೇವರಾಯಪಟ್ಟಣದ ಕೆರೆಕೋಡಿಯಲ್ಲಿ ನಡೆದಿದೆ. ಕೆರೆಕೋಡಿಹಳ್ಳದ ಕೆಸರಿನಲ್ಲಿ ಅಪರಿಚಿತ ವ್ಯಕ್ತಿ ಸಿಲುಕಿ ಒದ್ದಾಡುತ್ತಿದ್ದ. ಈ ಕುರಿತು ಕ್ಯಾತ್ಸಂದ್ರ ಠಾಣೆ ಪೊಲೀಸರಿಗೆ ಸ್ಥಳೀಯ ನಿವಾಸಿಗಳು ಮಾಹಿತಿ ನೀಡಿದ್ದರು. ಕೂಡಲೇ ಸ್ಥಳಕ್ಕೆ ಆಗಮಿಸಿ ಖುದ್ದು ಪೊಲೀಸರೇ ಕೆಸರಿಗಿಳಿದು ಶೋಧಕಾರ್ಯ ನಡೆಸಿದ್ದರು. ಹುಡುಕಾಟದ ವೇಳೆ ಕೆಸರಿನಲ್ಲಿ ಮುಳುಗುತ್ತಿದ್ದ ವ್ಯಕ್ತಿಯ ಕೈ ಮಾತ್ರ ಕಾಣಿಸಿದೆ. ಕೂಡಲೇ ಕೆಸರಿನಿಂದ ಆತನನ್ನ ಮೇಲಕ್ಕೆತ್ತಿ ಸಾವಿನ ದವಡೆಯಿಂದ ಸಿಬ್ಬಂದಿ ಪಾರು ಮಾಡಿದ್ದಾರೆ. ಮೇಲಕ್ಕೆತ್ತಿ ಸಾವಿನದ ದವಡೆಯಿಂದ ಪಾರು ಮಾಡಿದ ಸಿಬ್ಬಂದಿ ಕ್ಯಾತ್ಸಂದ್ರದ ಪೊಲೀಸ್ ಠಾಣೆಯ ಹೆಡ್ ಕಾನ್ಸ್ಟೇಬಲ್ ಮಹೇಶ್ ಹಾಗೂ ಹೊಯ್ಸಳ ಕಾರು ಚಾಲಕ ಬಸವರಾಜರಿಂದ ಮುಳುಗುತ್ತಿದ್ದ ವ್ಯಕ್ತಿಯ ರಕ್ಷಣೆ ಮಾಡಲಾಗಿದೆ. ತಕ್ಷಣ ಅಪರಿಚಿತ ವ್ಯಕ್ತಿಗೆ ತುಮಕೂರಿನ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಪೊಲೀಸರ ಸಮಯ ಪ್ರಜ್ಞೆಗೆ ತುಮಕೂರು ಎಸ್ಪಿ ಅಶೋಕ್ ಶ್ಲಾಘಿಸಿದ್ದಾರೆ. ಕ್ಯಾಸಂದ್ರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ…

Read More

ಬೆಂಗಳೂರು : ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ NIA ಅಧಿಕಾರಿಗಳು ತನಿಖೆಯನ್ನು ಚುರುಕುಗೊಳಿಸಿದ್ದು, ಪ್ರಕರಣ ಸಂಬಂಧ ಇದೀಗ ಐದನೇ ಆರೋಪಿಯನ್ನು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ. ಹುಬ್ಬಳ್ಳಿಯ ಶೋಯೆಬ್ ಅಹಮದ್ ಮಿರ್ಜಾ ಅಲಿಯಾಸ್ ಚೋಟು (35) ಎನ್ನುವವನನ್ನು NIA ಅಧಿಕಾರಿಗಳು ಅರೆಸ್ಟ್ ಮಾಡಿದ್ದಾರೆ. ಎಲ್ಇಟಿ ಪಿತೂರಿ ಕೇಸ್ ನಲ್ಲೂ ಶೋಯಬ್ ಅಹಮದ್ ಶಿಕ್ಷೆಗೆ ಒಳಗಾಗಿದ್ದ ಎಂದು ಹೇಳಲಾಗುತ್ತಿದೆ.

Read More