Subscribe to Updates
Get the latest creative news from FooBar about art, design and business.
Author: kannadanewsnow05
ಹಾಸನ : ಮಹಿಳೆಯ ಮೇಲೆ ಅತ್ಯಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ, ಬಿಜೆಪಿ ಮುಖಂಡ ಹಾಗೂ ವಕೀಲ ದೇವರಾಜ ಗೌಡ ನ್ಯಾಯಾಂಗ ಬಂಧನ ಅವಧಿಯನ್ನು ಜೂನ್ 7 ರವರೆಗೆ ವಿಸ್ತರಿಸಿ ಹಾಸನ 2ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆದೇಶಿಸಿದೆ. ಬಿಜೆಪಿ ಮುಖಂಡ ದೇವರಾಜೆಗೌಡ ವಿರುದ್ಧ ಅತ್ಯಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ದೇವರಾಜೇಗೌಡ ನ್ಯಾಯಾಂಗ ಬಂಧನ ವಿಸ್ತರಿಸಿ ಇದೀಗ ಕೋಟ್ ಆದೇಶ ಹೊರಡಿಸಿದೆ. ಆರೋಪಿ ದೇವರಾಜಗೌಡಗೆ ಜೂನ್ 7 ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿದೆ. ಹಾಸನ ಎರಡನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಈ ಆದೇಶ ಹೊರಡಿಸಿದೆ. 14 ದಿನ ನ್ಯಾಯಾಂಗ ಬಂಧನ ಒಪ್ಪಿಸಿ ನ್ಯಾಯಾಲಯ ಆದೇಶ ನೀಡಿದೆ ಎಂದು ತಿಳಿದುಬಂದಿದೆ.ಮೇ 28ರಂದು ದೇವರಾಜೇಗೌಡ ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ.
ಬೆಂಗಳೂರು : ಕಲುಷಿತ ನೀರು ಕುಡಿದು ಅಸ್ವಸ್ಥರಾಗುತ್ತಿರುವ ಪ್ರಕರಣ ಹೆಚ್ಚಳ ಹಿನ್ನೆಲೆ ಬೆಂಗಳೂರಿನಲ್ಲಿ ಮುನ್ನೆಚ್ಚರಿಕೆ ವಹಿಸುವಂತೆ ಬಿಬಿಎಂಪಿ ಮುಖ್ಯ ಆಯುಕ್ತರು, ಜಲಮಂಡಳಿ ಅಧ್ಯಕ್ಷರು ಹಾಗೂ ನಗರ ಜಿ.ಪಂ ಸಿಇಒಗೆ ಡಿಸಿಎಂ ಡಿಕೆ ಶಿವಕುಮಾರ್ ಪತ್ರ ಬರೆದಿದ್ದಾರೆ. ಹೌದು ಕಲುಷಿತ ನೀರು ಕುಡಿದು ಅಸ್ವಸ್ಥರಾಗಿರುವ ಪ್ರಕರಣ ಹಿನ್ನೆಲೆ ಬೆಂಗಳೂರಿನಲ್ಲಿ ಮುನ್ನೆಚ್ಚರಿಕೆ ವಹಿಸುವಂತೆ ಡಿಕೆ ಶಿವಕುಮಾರ್ ಪತ್ರ ಬರೆದಿದ್ದಾರೆ. ಬಿಬಿಎಂಪಿ ಮುಖ್ಯ ಆಯುಕ್ತರು ಹಾಗೂ ಜಲ ಮಂಡಳಿ ಅಧ್ಯಕ್ಷರು ಬೆಂಗಳೂರು ನಗರ ಜಿಲ್ಲಾ ಪಂಚಾಯತ್ ಸಿಇಒ ಗೆ ಡಿಕೆ ಶಿವಕುಮಾರ್ ಪತ್ರ ಬರೆದಿದ್ದಾರೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಕಲುಷಿತ ನೀರು ಕುಡಿದು ಅಸ್ವಸ್ಥರಾಗಿದ್ದಾರೆ ಕಲುಷಿತ ನೀರು ಕುಡಿದಿದ್ದರಿಂದ ವಿವಿಧ ರೋಗಗಳಿಗೆ ಜನರು ತುತ್ತಾಗುತ್ತಿದ್ದಾರೆ. ಬಗ್ಗೆ ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯ ಸಭೆಯಲ್ಲಿ ಚರ್ಚೆಯಾಗಿದೆ ಎಂದು ಹೇಳಿದ್ದಾರೆ.ಹಾಗಾಗಿ ಬೆಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿರುವ ಶುದ್ಧ ಕುಡಿಯುವ ನೀರಿನ ಘಟಕಗಳ ಸ್ಥಳಗಳಿಗೆ ಅಧಿಕಾರಿಗಳು ಖುದ್ದು ಭೇಟಿ ನೀಡಬೇಕು. ನೀರಿನ ಘಟಕಗಳು ಸಮರ್ಪಕವಾಗಿ ಕಾರ್ಯ ನಿರ್ವಹಿಸುತ್ತಿರುವ ಬಗ್ಗೆ ಖಚಿತ ಪಡಿಸಿಕೊಂಡು,…
ಬೆಂಗಳೂರು : ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಸದ್ಯ ಸಂಸದ ಪ್ರಜ್ವಲ್ ರೇವಣ್ಣ ವಿದೇಶದಲ್ಲಿ ತಲೆಮರಿಸಿಕೊಂಡಿದ್ದಾರೆ. ಈ ಕುರಿತಂತೆ ನಿನ್ನೆ ಎಚ್ ಡಿ ದೇವೇಗೌಡರು ಪ್ರಜ್ವಲ್ ಗೆ ಪತ್ರ ಬರೆದಿದ್ದು ಎಲ್ಲೇ ಇದ್ದರೂ ಬಂದು ಶರಣಾಗು ಎಂದು ತಿಳಿಸಿದ್ದರು. ಇದೀಗ ಸಿಎಂ ಸಿದ್ದರಾಮಯ್ಯ ಇದಕ್ಕೆ ಪ್ರತಿಕ್ರಿಯೆ ಸಿದ್ದು ಪ್ರಜ್ವಲ್ ಅನ್ನು ಕುಟುಂಬದಿಂದ ಹೊರ ಹಾಕುತ್ತೇವೆ ಎಂದು ದೇವೇಗೌಡರಿಗೆ ವಿದೇಶಕ್ಕೆ ಹೋಗುವುದು ಗೊತ್ತಿರಲಿಲ್ಲವೇ ಎಂದು ಪ್ರಶ್ನಿಸಿದ್ದಾರೆ. ಟ್ವೀಟ್ ನಲ್ಲಿ ವಾಗ್ದಾಳಿ ನಡೆಸಿರುವ ಅವರು, ಮಾಜಿ ಮುಖ್ಯಮಂತ್ರಿ HD ಕುಮಾರಸ್ವಾಮಿ ಅವರ ಅಣ್ಣನ ಮಗ ಅತ್ಯಾಚಾರ ಪ್ರಕರಣದಲ್ಲಿ ಆರೋಪಿ. ಅತ್ಯಾಚಾರದ ವೀಡಿಯೊ ಹರಿದಾಡಿತು ಎನ್ನುವುದಕ್ಕಿಂತ, ಅತ್ಯಾಚಾರ ಘೋರ ಅಪರಾಧ. ಅತ್ಯಾಚಾರದ ಸಂಗತಿಯನ್ನು ದುರ್ಬಲಗೊಳಿಸಲು ಡಿ.ಕೆ. ಶಿವಕುಮಾರ್ ಹಾಗೂ ಮತ್ತೊಬ್ಬರ ಮೇಲೆ ಹೇಳುತ್ತಿದ್ದಾರೆ. ಅವರು ಈ ನೆಲದ ಕಾನೂನಿಗೆ ಗೌರವ ಕೊಡಬೇಕು. ಅಣ್ಣನ ಮಗ ಅಪರಾಧಿಯಲ್ಲ ಆರೋಪಿ ಅಷ್ಟೇ ಎಂದಿದ್ದಾರೆ, ನ್ಯಾಯಾಲಯದಲ್ಲಿ ವಿಚಾರಣೆಗೆ ಒಳಪಟ್ಟಂತೆ ನಾನೂ ಕೂಡ ಆರೋಪಿ ಎಂದೇ ಹೇಳಿದ್ದೇನೆ. ಪ್ರಜ್ವಲ್ ರೇವಣ್ಣ ಅವರ…
ಬೆಂಗಳೂರು : ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ಜಿ ಆರ್ ಫಾರ್ಮ್ ಹೌಸ್ ನಲ್ಲಿ ಇತ್ತೀಚಿಗೆ ರೇವ್ ಪಾರ್ಟಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಬಿಗ್ ಟ್ರಸ್ಟ್ ಸಿಕ್ಕಿದ್ದು ಕಾಂಗ್ರೆಸ್ ಸಚಿವರೊಬ್ಬರಿಗೆ ಆಪ್ತ ರಾಗಿರುವ ಪ್ರಕರಣದ ಆರನೇ ಆರೋಪಿಗೆ ಇದೀಗ ಸಿಸಿಬಿ ಪೊಲೀಸರು ನೋಟಿಸ್ ನೀಡಿದ್ದಾರೆ ಎಂದು ತಿಳಿದುಬಂದಿದೆ. ಹೌದು ಪ್ರಕರಣದ ಆರನೇ ಆರೋಪಿ ಯಾಗಿರುವ ಬಿಲ್ಡರ್ ಗೋಪಾಲ್ ರೆಡ್ಡಿಗೆ ಸಿಸಿಬಿ ಪೊಲೀಸರು ನೋಟಿಸ್ ನೀಡಿದ್ದಾರೆ.ಇಂದು ಗೋಪಾಲ್ ರೆಡ್ಡಿ ಬಂಧಿಸಲು ಸಿಸಿಬಿ ಪೊಲೀಸರು ತೆರಳಿದ್ದರು ಪ್ರಕರಣದ ಸಂಬಂಧ ದಾಖಲೆ ಸಹಿತ ವಿಚಾರಣೆಗೆ ಬರುವಂತೆ ನೋಟಿಸ್ ನೀಡಿದ್ದಾರೆ ತನಕಾಧಿಕಾರಿ, ಲಕ್ಷ್ಮಿನಾರಾಯಣ ಎದುರು ವಿಚಾರಣೆಗೆ ಬರಲು ನೋಟಿಸ್ ನೀಡಿದ್ದರು ತೆಲುಗು ನಟಿ ಹೇಮಾ ಅವರಿಗೂ ಕೂಡ ಗೋಪಾಲ್ ರೆಡ್ಡಿ ಹಾಗೂ ಅವರ ಪುತ್ರ ಪರಿಚಯವಿದ್ದರು ಎನ್ನಲಾಗಿದೆ. ಇದೀಗ ಬಿಲ್ಡರ್ ಗೋಪಾಲ್ ರೆಡ್ಡಿ ತಲೆ ಮರೆಸಿಕೊಂಡಿದ್ದು, ಗೋಪಾಲ್ ರೆಡ್ಡಿ ಕಾಂಗ್ರೆಸ್ ಸಚಿವರೊಬ್ಬರ ಆಪ್ತರಾಗಿದ್ದಾರೆ ಎಂದು ಹೇಳಲಾಗುತ್ತಿದೆ. ಬಿಲ್ಡರ್ ಗೋಪಾಲ ರೆಡ್ಡಿ ಬೆಂಗಳೂರಿನ ಬಿಟಿಎಂ ಲೇಔಟ್ ನಿವಾಸಿ ಎಂದು…
ಬೆಂಗಳೂರು : ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಮುಂದಿನ 24 ಗಂಟೆಗಳಲ್ಲಿ ರಾಜ್ಯದಲ್ಲಿ ಭಾರಿ ಮಳೆ ಆಗುವ ಸಾಧ್ಯತೆ ಇದೆ. ಹಾಗಾಗಿ ರಾಜ್ಯದ 11 ಜಿಲ್ಲೆಗಳಲ್ಲಿ ಎಲ್ಲೋ ಘೋಷಿಸಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ ಎಂದು ತಿಳಿದುಬಂದಿದೆ. ಹೌದು ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಮುಂದಿನ 24 ಗಂಟೆಗಳ ಕಾಲ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಒಳನಾಡಿನ ಧಾರವಾಡ, ಗದಗ, ಹಾವೇರಿ, ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಶಿವಮೊಗ್ಗ, ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಅದೇ ರೀತಿಯಾಗಿ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಗಾಳಿಯು ಗಂಟೆಗೆ 40 ರಿಂದ 50 ಕಿಲೋಮೀಟರ್ ವೇಗದಲ್ಲಿ ಬೀಸಲಿದೆ. ಇದರ ಜೊತೆ ಭಾರೀ ಮಳೆ ಆಗುವ ಸಾಧ್ಯತೆ ಕೂಡ ಹೆಚ್ಚಿದೆ.
ಮಾಂಡ್ಯ : ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ, ಸಂಸದ ಪ್ರಜ್ವಲ್ ರೇವಣ್ಣ ವಿದೇಶದಲ್ಲಿ ತಲೆಮರೆಸಿಕೊಂಡಿರುವ ವಿಚಾರವಾಗಿ ಮಂಡ್ಯದಲ್ಲಿ ಕೃಷಿ ಸಚಿವ ಚೆಲುವರಾಯಸ್ವಾಮಿ ಪ್ರತಿಕ್ರಿಯೆ ನೀಡಿದ್ದು, ವಿಡಿಯೋ ಮಾಡಿದವರದು ತಪ್ಪಲ್ಲ ಆದರೆ ಪೆನ್ ಡ್ರೈವ್ ಹಂಚಿಕೆ ಮಾಡಿದವರದು ತಪ್ಪಿದೆ ಎಂದು ಬಿಜೆಪಿ ಜೆಡಿಎಸ್ ಒಂದಾಗಿ ಪ್ರಜ್ವಲ್ ಅನ್ನು ಸಮರ್ಥನೆ ಮಾಡಿಕೊಳ್ಳುತ್ತೇವೆ ಎಂದು ಕಿಡಿಕಾರಿದರು. ಮಂಡ್ಯದಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ಪ್ರಜ್ವಲ್ ಗೆ ಜೆಡಿಎಸ್ ಅವರಿಷ್ಟ ಎಚ್ಡಿ ದೇವೇಗೌಡ ಬರೆದಿರುವ ಪತ್ರದ ವಿಚಾರವಾಗಿ ಜೆಡಿಎಸ್ ನವರು ಪ್ರಜ್ವಲ್ ಅನ್ನು ಸಮರ್ಥಿಸಿಕೊಳ್ಳಲು ಮುಂದಾಗಿದ್ದಾರೆ. ಆ ಬಗ್ಗೆ ಮಾತನಾಡುವುದು ಸರಿಯಲ್ಲ ಪ್ರಜ್ವಲ್ ಕರೆಸುತ್ತಾರೆ ಬಿಡುತ್ತಾರೋ ಅವರಿಗೆ ಬಿಟ್ಟ ವಿಚಾರ. ಕುಮಾರಸ್ವಾಮಿ ಕುಟುಂಬಕ್ಕೆ ದೇವರು ಒಳ್ಳೆಯದು ಮಾಡಲಿ ಎಂದರು. ವಿಡಿಯೋ ಮಾಡಿದವರು, ಮಹಿಳೆಯರನ್ನು ಬೀದಿಗೆ ತಂದವನ ತಪ್ಪಲ್ಲ.ಆದರೆ ಸಿಕ್ಕ ಪೆನ್ ಡ್ರೈವ್ ಹಂಚಿದವರದ್ದು ತಪ್ಪೆಂದು ಹೇಳುತ್ತಿದ್ದಾರೆ. ಹಾಗಾಗಿ ಪ್ರಜ್ವಲ್ ಅನ್ನು ಸಮರ್ಥನೆ ಮಾಡಿಕೊಳ್ಳಲು ಜೆಡಿಎಸ್ ಬಿಜೆಪಿ ಮುಂದಾಗಿದೆ. ಬೆಕ್ಕು ಕಣ್ಣು ಮುಚ್ಚಿ ಹಾಲು ಕುಡಿದರೆ ಗೊತ್ತಾಗಲ್ಲ ಅಂದುಕೊಂಡಿದ್ದಾರೆ. ಜನರು…
ಚಿಕ್ಕಮಗಳೂರು : ಲಾರಿಗೆ ಓಮ್ನಿ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಭೀಕರ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ನಾಲ್ವರು ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಣಕಲ್ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಾಣಕಲ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಒಂದು ಅಪಘಾತ ಸಂಭವಿಸಿದ್ದು. ಲಾರಿಗೆ ಓಮಿನಿ ಕಾರ್ ಡಿಕ್ಕಿಯಾಗಿ ನಾಲ್ವರು ಸ್ಥಳದಲ್ಲಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಧರ್ಮಸ್ಥಳದಿಂದ ವಾಪಸ್ ಬರುವಾಗ ಈ ಅವಘಡ ಸಂಭವಿಸಿದೆ ಮಂಜುನಾಥನ ದರ್ಶನ ಪಡೆದು ವಾಪಸ್ ಬರುತ್ತಿದ್ದರು ಎಂದು ಹೇಳಲಾಗುತ್ತಿದೆ. ಚಿತ್ರದುರ್ಗದ ನಾಲ್ವರು ಸಾವನಪ್ಪಿದ್ದು ಮೂವರು ಗಾಯಗೊಂಡಿದ್ದು ತಕ್ಷಣ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತಪಟ್ಟವರೆಲ್ಲರೂ ಚಿತ್ರದುರ್ಗದ ಮೂಲದವರು ಎಂದು ತಿಳಿದುಬಂದಿದೆ. ಘಟನೆ ಕುರಿತಂತೆ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.
ಬೆಂಗಳೂರು : ನಿರ್ಮಾಪಕ ಸೌಂದರ್ಯ ಜಗದೀಶ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಅವರ ಪತ್ನಿ ಶಶಿರೇಖಾ ಪ್ರತಿಕ್ರಿಯೆ ನೀಡಿದ್ದು, ಪತಿಯ ಸಾವಿನಿಂದ ನಾವು ಇನ್ನೂ ಹೊರಗಡೆ ಬಂದಿಲ್ಲ. ನನಗೆ ಹಾಗೂ ನನ್ನ ಮಗನಿಗೆ ಜೀವ ಬೆದರಿಕೆ ಇದೆ ಎಂದು ತಿಳಿಸಿದರು. ಬೆಂಗಳೂರಿನಲ್ಲಿ ಸೌಂದರ್ಯ ಜಗದೀಶ್ ಪತ್ನಿ ಶಶಿರೇಕ ಹೇಳಿಕೆ ನೀಡಿದ್ದು, ನನ್ನ ಪತಿಯ ಸಾವಿನ ನಾವು ಇನ್ನು ಹೊರಗೆ ಬಂದಿಲ್ಲ. ಮನೆಯಲ್ಲಿ ಬಟ್ಟೆ ತೆಗೆದಾಗ ಡೆತ್ ನೋಟ್ ಸಿಕ್ತು ಎಡತನಾಟ್ ನಲ್ಲಿ ಪಾಲುದಾರರ ಬಗ್ಗೆ ಉಲ್ಲೇಖ ಮಾಡಿದ್ದರು ನನಗೆ ಹಾಗೂ ನನ್ನ ಮಗನಿಗೆ ಜೀವ ಬೆದರಿಕೆ ಇದೆ ಎಂದು ತಿಳಿಸಿದರು. ನನ್ನ ಗಂಡನಿಂದ ಖಾಲಿ ಪೇಪರಿಗೆ ಸಹಿ ಮಾಡಿಸಿಕೊಂಡಿದ್ದಾರೆ.ನನ್ನ ಪತಿ ನಟರ ಬಳಿ ಹೇಳಿಕೊಂಡಿದ್ದಾರೋ ಇಲ್ಲವೋ ಗೊತ್ತಿಲ್ಲ.ಪಾಲುದಾರರಿಗೆ ಕೋಟ್ಯಾಂತರ ಮೌಲ್ಯದ ಭೂಮಿ ಬಿಟ್ಟು ಕೊಟ್ಟಿದ್ದರು.ಎಲ್ಲರೂ ನನ್ನ ಪ್ರತಿಗೆ ಮೋಸ ಮಾಡಿದ್ದಾರೆ ಎಂದು ಬೆಂಗಳೂರಿನಲ್ಲಿ ಸೌಂದರ್ಯ ಜಗದೀಶ್ ಪತ್ನಿಶಿರೇಖಾ ಹೇಳಿದರು.
ಬೆಂಗಳೂರು : ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಇದೀಗ ವಿದೇಶದಲ್ಲಿ ತಲೆಮರಿಸಿಕೊಂಡಿದ್ದಾರೆ. ಇದಕ್ಕೆ ಸಿಎಂ ಸಿದ್ದರಾಮಯ್ಯನವರು ನಿನ್ನೆ ಪ್ರಜ್ವಲ್ ರೇವಣ್ಣ ಅವರ ಜೊತೆ ಅಶೋಕ್ ಮಾತನಾಡಿರಬಹುದು ಎಂದು ಹೇಳಿಕೆ ನೀಡಿದರು ಇವರ ಹೇಳಿಕೆಗೆ ಆರ್ ಅಶೋಕ್ ವಿದೇಶಕ್ಕೆ ಪ್ರಜ್ವಲ್ಲರನ್ನು ಓಡಿ ಹೋಗಲು ಬಿಟ್ಟಿದೆ ಸಿಎಂ ಸಿದ್ದರಾಮಯ್ಯ ಎಂದು ಆರೋಪಿಸಿದರು. ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ಮತದಾನ ಮಾಡಿ ಬಂದಾಗ ಬಂಧಿಸದೆ ಕತ್ತೆ ಕಾಯುತ್ತಿದ್ದರಾ? ಡೋರ್ ಕ್ಲೋಸ್ ಸಭೆ ಮಾಡಿ ನಿಯೋಜಿತ ಪ್ಲಾನ್ ಮಾಡಿದ್ರು ಪ್ರಜ್ವಲ್ ಹಿಡಿಯದಿದ್ದರೆ ಮೋದಿ ದೋಷಣೆ ಮಾಡಬಹುದದು ಎಂಬ ಪ್ಲಾನ್ ಮಾಡಲಾಗಿತ್ತು. ಅದರಂತೆ ಸರ್ಕಾರ ಪ್ರಜ್ವಲ್ ರೇವಣ್ಣರನ್ನು ವಿದೇಶಕ್ಕೆ ಕಳುಹಿಸಿದೆ ಎಂದು ಆರೋಪಿಸಿದರು. ವಿದೇಶಕ್ಕೆ ಹೋಗುವ ಮುನ್ನ ನನ್ನ ಜೊತೆ ಮಾತನಾಡಿದರೆ ತನಿಖೆ ಮಾಡಲಿ. ನನ್ನ ಫೋನ್ ಹಾಗೂ ಸಿದ್ದರಾಮಯ್ಯ ಫೋನ್ ಕೂಡ ತನಿಖೆ ಮಾಡಲಿ. ಆಗ ಯಾರು ಯಾರ ಜೊತೆ ಮಾತನಾಡಿದರು ಎಂದು ಗೊತ್ತಾಗುತ್ತದೆ. ನಾವು ಅದಕ್ಕಾಗಿಯೇ ಪ್ರಕರಣವನ್ನು CBI ಗೆ ಕೊಡಿ…
ಬೆಂಗಳೂರು : ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನ ಸಂಸದ ಪ್ರಜ್ವಲ ರೇವಣ್ಣ ಅವರ ರಜತಾಂತ್ರಿಕ ಪಾಸ್ಪೋರ್ಟ್ ರದ್ದು ಮಾಡುವಂತೆ ಎಸ್ಐಟಿ ಕೇಂದ್ರಕ್ಕೆ ಪತ್ರ ಬರೆದಿರುವ ಬೆನ್ನಲ್ಲೇ ಅಲರ್ಟ್ ಆಗಿರುವ ವಿದೇಶಾಂಗ ಸಚಿವಾಲಯ ಇದೀಗ ಉತ್ತರ ಕೊಡುವಂತೆ ಪ್ರಜ್ವಲ್ ರೇವಣಗೆ ಶೋಕಾಸ್ ನೋಟಿಸ್ ಜಾರಿ ಮಾಡಿದೆ ಎಂದು ತಿಳಿದುಬಂದಿದೆ. ಹೌದು ಪ್ರಜ್ವಲ್ ರೇವಣ್ಣಗೆ ಶೋಕಾಸ್ ನೋಟಿಸ್ ಜಾರಿ ಮಾಡಲಾಗಿದೆ. ವಿದೇಶಾಂಗ ಸಚಿವಾಲಯ ನೋಟಿಸ್ ನೀಡಿದೆ ಎಂದು ತಿಳಿದುಬಂದಿದೆ. ಪಾಸ್ಪೋರ್ಟ್ ರದ್ದು ಮಾಡುವಂತೆ ಎಸ್ಐಟಿ ಪತ್ರ ಬರೆದಿತ್ತು. ಈ ಹಿನ್ನೆಲೆಯಲ್ಲಿ SIT ಪತ್ರ ಬರೆದ ಬೆನ್ನಲ್ಲೆ ವಿದೇಶಾಂಗ ಸಚಿವಾಲಯ ಅಲರ್ಟ್ ಆಗಿದ್ದು ಪ್ರಜ್ವಲ್ ಗೆ ಇದೀಗ ಶೋಕಸ್ ನೋಟಿಸ್ ಜಾರಿ ಮಾಡಿ ಈ ಮೂಲಕ ವಿದೇಶಾಂಗ ಸಚಿವಾಲಯ ಉತ್ತರ ಕೇಳಿದೆ ಎಂದು ತಿಳಿದುಬಂದಿದೆ. ಯಾವ ಕಾರಣಕ್ಕೆ ವಿದೇಶಕ್ಕೆ ಹೋಗಿದ್ದೇನೆ. ಯಾವ ಕಾರಣಕ್ಕೆ ವಿದೇಶದಲ್ಲಿದ್ದೇನೆ. ನನ್ನ ಕೆಲಸ ಏನು ಯಾವಾಗ ಬಂದು ಹಾಜರಾಗುತ್ತೇನೆ ಎಂಬುದರ ಕುರಿತು ಶೋಕಾಸ್ ನೋಟಿಸ್ ಗೆ ಪ್ರಜ್ವಲ್ ರೇವಣ್ಣ ಅವರು…