Author: kannadanewsnow05

ದಕ್ಷಿಣಕನ್ನಡ : ಧರ್ಮಸ್ಥಳದಲ್ಲಿ ಮಹಿಳೆಯ ತಲೆ ಬುರುಡೆ ತಂದು ಇದು ಹೆಣ್ಣು ಮಗಳ ತಲೆ ಬುರುಡೆ ಎಂದು ಹೇಳಿಕೆ ನೀಡಿದ್ದ ಮಾಸ್ಕ್ ಮ್ಯಾನ್ ಚಿನ್ನಯನನ್ನು ಎಸ್ಐಟಿ ವಶಕ್ರ್ ಪಡೆದು ತೀವ್ರ ವಿಚಾರಣೆಗೆ ಒಳಪಡಿಸಿದೆ. ಅಲ್ಲದೆ ಮಹೇಶ್ ಶೆಟ್ಟಿ ತಿಮರೋಡಿ ಮನೆಯಲ್ಲೂ ಕೂಡ ನಿನ್ನೆಯಿಂದ SIT ಅಧಿಕಾರಿಗಳು ತೀವ್ರ ಶೋಧ ನೆಡೆಸಿದ್ದಾರೆ. ಇದೀಗ ಬುರುಡೆ ಷಡ್ಯಂತ್ರದ ಹಿಂದೆ ಯಾರ್ಯಾರಿದ್ದಾರೆ ಇದರ ಸೂತ್ರಧಾರಿಗಳು ಯಾರು ಎನ್ನುವುದು ಎಸ್ಐಟಿ ಪತ್ತೆ ಹಚ್ಚುತ್ತಿದ್ದು, ನಿನ್ನೆ ಮಹೇಶ್ ಶೆಟ್ಟಿ ತಿಮರೋಡಿ ಮನೆಯಲ್ಲಿ ಶೋಧ ನಡೆಸುವ ವೇಳೆ ಚಿನ್ನಯ್ಯನ ಮೊಬೈಲ್ ಪತ್ತೆಯಾಗಿದ್ದು, ಅದರಲ್ಲಿ ಹಲವು ಆಡಿಯೋ ಮತ್ತು ವಿಡಿಯೋಗಳು ಸಹ ಪತ್ತೆಯಾಗಿವೆ. ಈ ಹಿನ್ನೆಲೆಯಲ್ಲಿ ಬುರುಡೆ ಷಡ್ಯಂತರದ ಸೂತ್ರಧಾರಿಗಳಿಗೆ ಎಸ್ಐಟಿ ನೋಟಿಸ್ ನೀಡುವ ಸಾಧ್ಯತೆ ಇದೆ ಎನ್ನಲಾಗಿದ್ದು, ಪ್ರಕರಣ ಮತ್ತಷ್ಟು ತಿರುವು ಪಡೆದುಕೊಳ್ಳುವ ಸಾಧ್ಯತೆ ಇದೆ.

Read More

ಬೆಂಗಳೂರು : ಬಾನು ಮುಷ್ತಾಕ್ ಅವರಿಂದ ದಸರಾ ಉದ್ಘಾಟನಾ ವಿಚಾರವಾಗಿ ಜೆಡಿಎಸ್, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಕಾಲೆಳೆದಿದೆ.ಚಾಮುಂಡಿ ಬೆಟ್ಟ ಏನು ಹಿಂದುಗಳ ಆಸ್ತಿಯಲ್ಲ ಎಂದು ನಿನ್ನೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಇದೀಗ ಈ ಇಂದು ಹೇಳಿಕೆಗೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದ್ದು ಜೆಡಿಎಸ್ ತನ್ನ ಟ್ವೀಟ್ ಖಾತೆಯಲ್ಲಿ, ಚಾಮುಂಡಿ ಬೆಟ್ಟ ಹಿಂದೂ ಧರ್ಮದ ಆಸ್ತಿಯಲ್ಲ ಎಂಬ ಡಿಕೆ ಶಿವಕುಮಾ‌ರ್ ಹೇಳೀಕೆಗೆ ಆಪ್ತಮಿತ್ರ ಚಿತ್ರದಲ್ಲಿ ಗಂಗಾ ನಾಗವಲ್ಲಿಯಾಗಿ ಹಂತ ಹಂತವಾಗಿ ಬದಲಾಗುತ್ತಾಳೆ. ಆದರೆ ಡಿಕೆ ಶಿವಕುಮಾರ್ ನಾಗವಲ್ಲಿಗಿಂತಲೂ ಬಹುಬೇಗ ಬದಲಾಗುತ್ತಿದ್ದಾರೆ ಎಂದು ವ್ಯಂಗ್ಯವಾಡಿದೆ. https://twitter.com/JanataDal_S/status/1960541540029497850?t=FbXJsJEvM2-O2aKyoR3N3A&s=19

Read More

ನವದೆಹಲಿ : ಮಾಜಿ ಸಚಿವ ಮುರುಗೇಶ್ ನಿರಾಣಿಯವರ ಪುತ್ರ ವಿಜಯ್ ನಿರಾಣಿ ವಿರುದ್ಧ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಬಿಗ್ ಶಾಕ್ ಕೊಟ್ಟಿದೆ. 2018ರಲ್ಲಿ ಮುಧೋಳದ ಕುಳಲಿ ಗ್ರಾಮದಲ್ಲಿರುವ ನಿರಾಣಿ ಶುಗರ್ಸ್ ನಲ್ಲಿನ ತ್ಯಾಜ್ಯ ವಿಲೇವಾರಿ ಘಟಕದಲ್ಲಿ ಸ್ಫೋಟ ಸಂಭವಿಸಿ ಆರು ಜನ ಕಾರ್ಮಿಕರು ಸಾವಿಗೀಡಾಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಮಹತ್ವದ ಆದೇಶ ನೀಡಿದೆ. ಹೌದು 2018ರಲ್ಲಿ ಮುಧೋಳದ ಕುಳಲಿ ಗ್ರಾಮದಲ್ಲಿರುವ ನಿರಾಣಿ ಶುಗರ್ಸ್ ನಲ್ಲಿನ ತ್ಯಾಜ್ಯ ವಿಲೇವಾರಿ ಘಟಕದಲ್ಲಿ ಸ್ಫೋಟ ಸಂಭವಿಸಿ ಆರು ಜನ ಕಾರ್ಮಿಕರು ಸಾವಿಗೀಡಾಗಿದ್ದರು. ಆ ಪ್ರಕರಣದ ತನಿಖೆಗೆ ಕರ್ನಾಟಕ ಹೈಕೋರ್ಟ್ 2023ರಲ್ಲಿ ಬ್ರೇಕ್ ಹಾಕಿತ್ತು. ಆದರೆ, ಈ ಆದೇಶದ ವಿರುದ್ಧ ರಾಜ್ಯ ಸರ್ಕಾರ, ಸುಪ್ರೀಂಕೋರ್ಟ್​ ಮೆಟ್ಟಿಲೇರಿತ್ತು. ಇದೀಗ ಸುಪ್ರಿಂಕೋರ್ಟ್​, ಹೈಕೋರ್ಟ್ ಆದೇಶವನ್ನು ರದ್ದುಪಡಿಸಿ ತನಿಖೆಗೆ ಆದೇಶಿಸಿದೆ. ಪ್ರಕರಣ ಹಿನ್ನೆಲೆ? ವಿಜಯ್ ನಿರಾಣಿ ನಿರಾಣಿ ಶುಗರ್ಸ್ ಲಿಮಿಟೆಡ್ ಕಂಪನಿಯ ನಿರ್ದೇಶಕರಾಗಿದ್ದಾರೆ. ಮುಧೋಳದ ಕುಳಲಿ ಗ್ರಾಮದಲ್ಲಿರುವ ನಿರಾಣಿ ಶುಗರ್ಸ್‌‌ನ ಡಿಸ್ಟಿಲರಿ ಫ್ಯಾಕ್ಟರಿಯಲ್ಲಿ ತ್ಯಾಜ್ಯ ನಿರ್ವಹಣಾ ಘಟಕವೊಂದನ್ನು ಸ್ಥಾಪಿಸಿದ್ದರು. ಆ ಘಟಕಕ್ಕೆ…

Read More

ಬೆಂಗಳೂರು : ಧರ್ಮಸ್ಥಳ ಪ್ರಕರಣ ದಿನದಿಂದ ದಿನಕ್ಕೆ ವಿವಿಧ ಸ್ವರೂಪ ಪಡೆಯುತ್ತಿದ್ದು, ಇದೀಗ ಧರ್ಮಸ್ಥಳ ದೇವಸ್ಥಾನದ ವಿರುದ್ಧ ಷ್ಯಡಂತ್ರದ ಆರೋಪ ಹೊತ್ತಿರುವ ಗಿರೀಶ್ ಮಟ್ಟಣ್ಣನವರ್ ವಿರುದ್ಧ ಮಾನವ ಹಕ್ಕುಗಳ ಆಯೋಗಕ್ಕೆ ದೂರು ಸಲ್ಲಿಕೆಯಾಗಿದೆ. ಹೌದು ಹುಬ್ಬಳ್ಳಿ ಮೂಲದ ರೌಡಿಶೀಟರ್ ಮದನ್ ಬುಗಾಡಿ ಎಂಬಾಂತನನ್ನ ಮಾನವಹಕ್ಕುಗಳ ಆಯೋಗದವರೆಂದು ಧರ್ಮಸ್ಥಳ ಪೊಲೀಸರಿಗೆ ಪರಿಚಯಿಸಿದ್ದಾರೆ ಎಂದು ಹಿಂದೂ ಮುಖಂಡ ಸುರೇಶ್ ಗೌಡ ದೂರು ದಾಖಲಿಸಿದ್ದಾರೆ. ಸುಳ್ಳು ಹೇಳಿ ಮಾನವ ಹಕ್ಕುಗಳ ಆಯೋಗವನ್ನ ಬಳಕೆ ಮಾಡಿಕೊಂಡಿದ್ದಾರೆ. ಇದು ಸರಿ ಅಲ್ಲ. ಅಧಿಕಾರಿಗಳು ಕೂಡ ಶೀಘ್ರ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ. ಅಲ್ಲದೇ ಪೊಲೀಸ್ ಠಾಣೆಗೂ ಈ ಸಂಬಂಧ ಶೀಘ್ರ ದೂರು ನೀಡುತ್ತೇವೆ. ಗಿರೀಶ್‌ ಮಟ್ಟಣ್ಣನವರ್‌ ಇಲಾಖೆಯ ಹೆಸರನ್ನು ಸುಳ್ಳು ಹೇಳಲು ಬಳಸಿಕೊಂಡಿದ್ದಾರೆಂದು ಆರೋಪಿಸಿ ಕ್ರಮಕ್ಕೆ ಒತ್ತಾಯ ಮಾಡಿದ್ದಾರೆ. ದೂರು ಪಡೆದಿರುವ ಅಧಿಕಾರಿಗಳು ಈ ಬಗ್ಗೆ ಸಮಗ್ರ ಪರಿಶೀಲನೆ ಮಾಡಿ, ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ ಎಂದು ಸುರೇಶ್ ಗೌಡ ತಿಳಿಸಿದರು.

Read More

ಹಾಸನ : ಹಾಸನದಲ್ಲಿ ಭೀಕರವಾದ ಕೊಲೆ ನಡೆದಿದ್ದು, ಮಾರಕಾಸ್ತ್ರಗಳಿಂದ ಕೊಚ್ಚಿ ಆಟೋ ಚಾಲಕನನ್ನು ಬರ್ಬರವಾಗಿ ಹತ್ಯೆಗೈಯ್ಯಲಾಗಿದೆ. ಹಾಸನದ ದೊಡ್ಡ ಮಂಡಿಗನಹಳ್ಳಿ ನಿವಾಸಿ ಅಂಕಿತ್ (26) ಎನ್ನುವ ಆಟೋ ಚಾಲಕನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರವಾಗಿ ಕೊಲೆ ಮಾಡಲಾಗಿದೆ. ನಿನ್ನೆ ರಾತ್ರಿ ಅಂಕಿತ್ ಬೈಕ್ನಲ್ಲಿ ರಾಗಿ ಮುದ್ದನಹಳ್ಳಿ ಕಡೆಗೆ ಹೋಗುತ್ತಿದ್ದ ಈ ವೇಳೆ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪರಾರಿಯಾಗಿದ್ದಾರೆ. ಘಟನೆ ಕುರಿತಂತೆ ಹಾಸನ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಗಣಪತಿ ಅಥರ್ವಶೀರ್ಷ ಮಂತ್ರವನ್ನು ಪಠಿಸಿ ಅದೃಷ್ಟವು ಒಲಿಯುದು ಇಷ್ಟಾರ್ಥ ಕಾರ್ಯ ಪೂರ್ಣ ಸಿದ್ದಿಯಾಗಲಿದೆ..! ಬುಧವಾರ ಗಣೇಶನನ್ನು ಅಥವಾ ಗಣಪತಿ ದೇವರನ್ನು ಸಂಪೂರ್ಣ ವಿಧಿ – ವಿಧಾನಗಳ ಮೂಲಕ ಪೂಜಿಸಲಾಗುತ್ತದೆ. ಶುಕ್ರವಾರ ಈ ಮಂತ್ರಗಳನ್ನು ಜಪಿಸುವುದರಿಂದ ವ್ಯಕ್ತಿಯು ತನ್ನ ಜೀವನದಲ್ಲಿ ಸಂತೋಷ ಮತ್ತು ಸಮೃದ್ಧಿಯನ್ನು ಪಡೆಯುತ್ತಾನೆ ಮತ್ತು ಅವನ ಎಲ್ಲಾ ದುಃಖಗಳನ್ನು ತೆಗೆದುಹಾಕಲಾಗುತ್ತದೆ. ಆ 3 ಮಂತ್ರಗಳು ಯಾವುವು..? ಬುಧವಾರ ಈ 3 ಗಣಪತಿ ಮಂತ್ರ ಪಠಿಸಿದರೆ ಗಣಪತಿ ಒಲಿಯುವನು..! ಮಂತ್ರಗಳಾವುವು..? ಗಣೇಶನನ್ನು ಯಾರು ಸಂತೋಷಗೊಳಿಸುತ್ತಾರೋ ಅವರ ನೋವುಗಳನ್ನು ಗಣೇಶನು ದೂರಾಗಿಸುತ್ತಾನೆ ಮತ್ತು ಅವರ ಆಸೆಗಳು ಪರಿಪೂರ್ಣಗೊಳ್ಳುವಂತೆ ಮಾಡುತ್ತಾನೆ. ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ವಿದ್ವಾನ್ ವಿದ್ಯಾಧರ್ ತಂತ್ರಿ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9686268564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ…

Read More

ಬೆಂಗಳೂರು : ಈತ ಸಾಮಾನ್ಯ ಕಳನಲ್ಲ ಎಲ್ಲಿ ಮದುವೆ ನಡೆಯುತ್ತವೆಯೋ ಆ ಒಂದು ಕಲ್ಯಾಣ ಮಂಟಪಕ್ಕೆ ಅಥಿತಿಯಂತೆ ತೆರಳಿ ವಧು-ವರರ ಒಡವೆ ಕೊಠಡಿಗಳಿಗೆ ನುಗ್ಗಿ ಚೆನ್ನಾಭರಣ ದೋಚಿ ಅದೇ ಹಣದಿಂದ ಮೂರು ಸೈಟ್ ಮತ್ತು ಒಂದು ಮನೆ ಕಟ್ಟಿದ್ದ. ಮದುವೆ ನಡೆಯುವಾಗ ಕಲ್ಯಾಣ ಮಂಟಪಗಳಿಗೆ ನುಗ್ಗಿ ಕಳ್ಳತನ ಮಾಡುತ್ತಿದ್ದ ವ್ಯಕ್ತಿಯನ್ನು ಮಾಗಡಿ ರೋಡ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಹೌದು ತುಮಕೂರು ಜಿಲ್ಲೆ ಗುಬ್ಬಿಯ ಪರಮೇಶ್ ಬಂಧಿತ ಆರೋಪಿ. ಈತನಿಂದ 400 ಗ್ರಾಂ ಚಿನ್ನಾಭರಣ, 91,000 ರೂ. ನಗದು ಸೇರಿ 36.91 ಲಕ್ಷ ರೂ.ಮೌಲ್ಯದ ವಸ್ತು ಜಪ್ತಿ ಮಾಡಲಾಗಿದೆ. ಅತಿಥಿ ಸೋಗಿನಲ್ಲಿ ಮದುವೆ ಸಮಾರಂಭ ನಡೆಯುತ್ತಿದ್ದ ಕಲ್ಯಾಣ ಮಂಟಪಗಳಿಗೆ ಹೋಗುತ್ತಿದ್ದ ಎನ್ನಲಾಗಿದೆ. ಆರೋಪಿ ಮಾಂಗಲ್ಯ ಧಾರಣೆ ಸಂದರ್ಭದಲ್ಲಿ ವಧು, ವರನ ಕಡೆಯವರ ರೂಂ ಗೆ ಹೋಗಿ ನಗದು, ಚಿನ್ನಾಭರಣ ದೋಚಿ ಪರಾರಿ ಆಗುತ್ತಿದ್ದ. ಕದ್ದ ಆಭರಣಗಳನ್ನು ಮಾರಾಟ ಮಾಡುತ್ತಿದ್ದ. ಕಾಮಾಕ್ಷಿಪಾಳ್ಯ, ಕೆಂಗೇರಿ, ಬಸವನಗುಡಿ, ಮಾಗಡಿ ರೋಡ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಳವು ಮಾಡಿದ್ದ…

Read More

ಬೆಂಗಳೂರು : ದೊಡ್ಡಬಳ್ಳಾಪುರದಲ್ಲಿ ಘೋರ ಘಟನೆ ನಡೆದಿದ್ದು, ಒಣಗಲು ಹಾಕಲಾಗಿದ್ದ ಬಟ್ಟೆಯನ್ನ ತೆಗೆಯಲು ಹೋದ ತಾಯಿ ಹಾಗೂ ತಾಯಿಯನ್ನ ಉಳಿಸಲು ಹೋದ ಮಗನಿಗೂ ವಿದ್ಯುತ್ ಸ್ವರ್ಶಿಸಿ ಮೃತಪಟ್ಟಿದ್ದಾರೆ. ಮತ್ತೊಂದು ಕಡೆ ತಾಯಿ ಮತ್ತು ಅಣ್ಣನನ್ನ ರಕ್ಷಿಸಲು ಮುಂದಾಗ ತಂಗಿಗೂ ವಿದ್ಯುತ್ ತಗುಲಿದೆ. ವಿದ್ಯುತ್ ಅವಘಡದಲ್ಲಿ ತಾಯಿ – ಮಗ ದುರಂತ ಸಾವನ್ನಪ್ಪಿದ್ದು, ಗಾಯಗೊಂಡ ಮಗಳನ್ನು ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಕಾರನಾಳ ಗ್ರಾಮದಲ್ಲಿ ಇಂದು ರಾತ್ರಿ ಘಟನೆ ನಡೆದಿದ್ದು, ವಿದ್ಯುತ್ ಅವಘಡದಲ್ಲಿ ತಾಯಿ ಲಲಿತಮ್ಮ (55), ಮಗ ಸಂಜಯ್ (35) ಸಾವನ್ನಪ್ಪಿದ್ದಾರೆ. ವಿದ್ಯುತ್ ಸ್ವರ್ಶದಿಂದ ಸುಟ್ಟಗಾಯಕ್ಕೆ ತುತ್ತಾಗಿರುವ ಮಗಳು ಲಕ್ಷ್ಮೀದೇವಿ(32)ಯನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ದಕ್ಷಿಣಕನ್ನಡ : ಧರ್ಮಸ್ಥಳದಲ್ಲಿ ನೂರಾರು ಶವ ಹೂತು ಹಾಕಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಾಸ್ಕ್ ಮ್ಯಾನ್ ಚೆನ್ನಯ್ಯನನ್ನು ಎಸ್ಐಟಿ ಅಧಿಕಾರಿಗಳು ಅರೆಸ್ಟ್ ಮಾಡಿ ತೀವ್ರ ವಿಚಾರಣೆ ಒಳಪಡಿಸಿದ್ದು ಸ್ಫೋಟಕವಾದ ಮಾಹಿತಿ ಬಾಯಿ ಬಿಟ್ಟಿದ್ದಾನೆ. ಬುರುಡೆ ಗ್ಯಾಂಗ್ ಧರ್ಮಸ್ಥಳದ ವಿರುದ್ಧ ತನಿಖೆ ನಡೆಸಲು ಸರ್ಕಾರಕ್ಕೆ ಒತ್ತಡ ಇರುವಂತೆ ಸ್ವಾಮೀಜಿಗಳ ಮೊರೆ ಹೋಗಲಾಗಿತ್ತು ಎಂದು ಹೇಳಿಕೆ ನೀಡಿದ್ದಾನೆ. ಹೌದು ಬುರುಡೆ ಕೇಸ್‌ನ ಆರೋಪಿ ಚಿನ್ನಯ್ಯ, ಇದೀಗ ಮತ್ತೊಂದು ಸ್ಫೋಟಕ ಮಾಹಿತಿಯನ್ನು ಎಸ್‌ಐಟಿ ಮುಂದೆ ಬಾಯ್ಬಿಟ್ಟಿದ್ದಾನೆ ಎಂದು ತಿಳಿದುಬಂದಿದೆ. ಬುರುಡೆ ಗ್ಯಾಂಗ್ ಸ್ವಾಮೀಜಿಯೊಬ್ಬರನ್ನು ಭೇಟಿ ಮಾಡಿತ್ತು ಎನ್ನುವ ಸ್ಫೋಟಕ ಮಾಹಿತಿಯನ್ನು ಚಿನ್ನಯ್ಯ ಬಾಯ್ಬಿಟ್ಟಿದ್ದಾನೆ ಎಂದು ಹೇಳಲಾಗಿದೆ. ಇದೊಂದು ಹಿಂದೂ ವಿರೋಧಿ ಹೋರಾಟ ಎಂದು ಗುರುತಿಸಿಕೊಳ್ಳಬಾರದು ಎನ್ನುವ ಕಾರಣಕ್ಕೆ ಸ್ವಾಮೀಜಿಯನ್ನು ಭೇಟಿ ಮಾಡಿದ ತಂಡ, ಸರ್ಕಾರಕ್ಕೆ ಒತ್ತಡ ಹೇರಲು ಮುಂದಾಗಿತ್ತು. ಸ್ವಾಮೀಜಿ ಮೂಲಕ ಧರ್ಮಸ್ಥಳ ಪ್ರಕರಣದ ತನಿಖೆ ತಮ್ಮ ಯೋಜನೆಯಂತೆಯೇ ಮುಂದೆ ಸಾಗಲು ಪ್ಲ್ಯಾನ್ ಮಾಡಿತ್ತು. ಸ್ವಾಮೀಜಿ ಮೂಲಕ ಸರ್ಕಾರಕ್ಕೆ ಒತ್ತಡ ಹಾಕುವುದು, ಈ ಹೋರಾಟದಲ್ಲಿ ಇಡೀ ಹಿಂದೂ…

Read More

ಚಿತ್ರದುರ್ಗ : 97 ಲಕ್ಷ ರೂಪಾಯಿ ಸಮೇತ ಬಾಡಿಗೆ ಕಾರು ಚಾಲಕ ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಪೊಲೀಸರು ಸೀನಿಮಿಯ ರೀತಿಯಲ್ಲಿ ಆರೋಪಿ ಚಾಲಕರನ್ನು ಅರೆಸ್ಟ್ ಮಾಡಿದ್ದಾರೆ. ಚಳ್ಳಕೆರೆ ಠಾಣೆ ಸಿಪಿಐ ಕುಮಾರ್ ನೇತೃತ್ವದಲ್ಲಿ ಆರೋಪಿಯನ್ನು ಬಂಧಿಸಲಾಗಿದೆ. ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ಠಾಣಾ ವ್ಯಾಪ್ತಿಯಲ್ಲಿ ಈ ಒಂದು ಘಟನೆ ನಡೆದಿತ್ತು ಬೆಂಗಳೂರು ಮೂಲದ ನಿವೃತ್ತ ಎಸ್ಪಿ ಗುರುಪ್ರಸಾದ್ ಗೆ ವಂಚನೆ ಎಸಗಲಾಗಿತ್ತು. ನಿನ್ನೆ ಗುರುಪ್ರಸಾದ್ ಪತ್ನಿಯ ಸಮೇತ ಬಳ್ಳಾರಿಗೆ ತೆರಳಿದ್ದರು. ಬಳ್ಳಾರಿಯಲ್ಲಿದ್ದ ಜಮೀನನ್ನು ಗುರುಪ್ರಸಾದ್ ಮಾರಾಟ ಮಾಡಿದ್ದಾರೆ. ಜಾಮೀನು ಮಾರಾಟ ಮಾಡಿದ ಒಟ್ಟು 97 ಲಕ್ಷ ರೂಪಾಯಿ ಪಡೆದು ಕಾರಿನಲ್ಲಿ ಬೆಂಗಳೂರಿಗೆ ಹಿಂದಿರುಗುತ್ತಿದ್ದರು. ಈ ವೇಳೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ಪಟ್ಟಣದ ಬಳಿ ಊಟಕ್ಕಾಗಿ ಗುರುಪ್ರಸಾದ್ ಹೋಟೆಲಿಗೆ ತೆರಳಿದ್ದಾರೆ, ಈ ವೇಳೆ ಕಾರಿನಲ್ಲಿ ಇದ್ದಂತಹ ಹಣದ ಸಮೇತ ರಮೇಶ್ ಎಸ್ಕೇಪ್ ಆಗಿದ್ದ ಹಿಂದೂಪುರ ಮೂಲದ ರಮೇಶ್ ಆಂಧ್ರಕ್ಕೆ ಪ್ರಾರಾಗಲು ಯತ್ನಿಸಿದ್ದಾನೆ. ಸದ್ಯ ಚಳ್ಳಕೆರೆ ಪೊಲೀಸರು ಆರೋಪಿ ರಮೇಶನ್ನು ಅರೆಸ್ಟ್ ಮಾಡಿದ್ದಾರೆ ಅಲ್ಲದೆ…

Read More