Author: kannadanewsnow05

ಬೆಳಗಾವಿ : ರಿಯಲ್ ಎಸ್ಟೇಟ್ ಉದ್ಯಮಿ ಒಬ್ಬರನ್ನು ಅಪಹರಿಸಿ 5 ಕೋಟಿ ರೂಪಾಯಿಗೆ ಡಿಮ್ಯಾಂಡ್ ಮಾಡಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಉದ್ಯಮಿ ಬಸವರಾಜ್ ಅಂಬಿ ನನ್ನ ಅಪಹರಣಕ್ಕೂ ಸಚಿವ ಸತೀಶ್ ಜಾರಕಿಹೊಳಿ ಅವರಿಗೂ ಯಾವುದೇ ರೀತಿಯಾದಂತಹ ಸಂಬಂಧ ಇಲ್ಲ ಎಂದು ತಿಳಿಸಿದ್ದಾರೆ. ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ರಾಜಪುರ ಗ್ರಾಮದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನನ್ನ ಅಪಹರಣಕ್ಕೂ ಸತೀಶ್ ಜಾರಕಿಹೊಳಿಗೂ ಯಾವುದೇ ಸಂಬಂಧವಿಲ್ಲ. ಅಂದು ಕಾರು ರಿಪೇರಿ ಮಾಡಿಸಲು ನಾನು ಸಾಂಗ್ಲಿಗೆ ತೆರಳಿದ್ದೆ. ಚಿಕ್ಕೋಡಿಗೆ ಬರುತ್ತಿದ್ದಂತೆ ಕಾರು ಅಡ್ಡಗಟ್ಟಿ ನನ್ನನ್ನು ಅಪಹರಿಸಿದರು. ಗೋವಾ ಘಾಟ್ ನಲ್ಲಿ ಕಾರನು ಪ್ರಪಾತಕ್ಕೆ ತಳ್ಳುವ ಬೆದರಿಕೆ ಹಾಕಿದರು.ಬಳಿಕ ಮನೆಗೆ ಕರೆ ಮಾಡಿ 5 ಕೋಟಿ ಹಣ ಕೇಳುವಂತೆ ಹೇಳಿದರು. ದಿನಕ್ಕೆ ಮೂರರಿಂದ ನಾಲ್ಕು ಕಾರುಗಳನ್ನು ಬದಲಾಯಿಸಿ ಸುತ್ತಿಸಿದರು. ಕರ್ನಾಟಕ ಮಹಾರಾಷ್ಟ್ರ ಗೋವಾ ರಾಜ್ಯಗಳಲ್ಲಿ ನನ್ನನ್ನು ಸುತ್ತಾಡಿಸಿದರು. ಪೊಲೀಸರಿಗೆ ಹೇಳಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದರು. ಹಣ ಕೂಡ ರೆಡಿ ಮಾಡಿಕೊಳ್ಳಲು ಪತ್ನಿಗೆ ನಾನು ಹೇಳಿದ್ದೆ ಪೊಲೀಸರು…

Read More

ಮಂಗಳೂರು : CISF ಮಹಿಳಾ ಅಧಿಕಾರಿಯೊಬ್ಬರು ಮದುವೆಯಾಗುವುದಾಗಿ ಹೇಳಿ ಯುವಕನೊಂದಿಗೆ ಲೈಂಗಿಕ ಸಂಪರ್ಕ ಬೆಳೆಸಿ ಆಮೇಲೆ ವಂಚನೆ ಈಸಾಗ್ರಿರುವ ಆರೋಪ ಕೇಳಿ ಬಂದಿದ್ದು, ಈ ಹಿನ್ನೆಲೆ ನೊಂದ ಯುವಕ ಲಾಡ್ಜ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳೂರಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ಉತ್ತರ ಪ್ರದೇಶ ಮೂಲದ ಅಭಿಷೇಕ್ ಸಿಂಗ್ (40) ಎಂದು ತಿಳಿದುಬಂದಿದ್ದು, ಮಂಗಳೂರು ನಗರದ ಲಾಡ್ಜ್‌ವೊಂದರಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.ಆತ್ಮಹತ್ಯೆಗೆ ಮುನ್ನ ಅಭಿಷೇಕ್ ಸಿಂಗ್ ಇನ್‌ಸ್ಟಾಗ್ರಾಮ್‌ನಲ್ಲಿ ವಿಡಿಯೋವೊಂದನ್ನು ಹರಿಬಿಟ್ಟಿದ್ದಾನೆ. ವಿಡಿಯೋದಲ್ಲಿ ಅಭಿಷೇಕ್ ಸಿಂಗ್ CISF ಸಹಾಯಕ ಕಮಾಂಡೆಂಟ್ ಮೋನಿಕಾ ಸಿಹಾಗ್ ಅವರೊಂದಿಗೆ ಸಂಬಂಧ ಹೊಂದಿದ್ದ.ಮೋನಿಕಾ ಸಿಹಾಗ್ ಅವರು ತಮ್ಮನ್ನು ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಬಂಧ ಬೆಳೆಸಿ ವಂಚಿಸಿದ್ದಾರೆ ಎಂದು ಆರೋಪಿಸಿದ್ದಾರೆ. ಮೋನಿಕಾ ಸಿಹಾಗ್ ಈಗಾಗಲೇ ವಿವಾಹಿತೆಯಾಗಿದ್ದು, ಆ ವಿಷಯವನ್ನು ಮುಚ್ಚಿಟ್ಟು ಅಭಿಷೇಕ್ ಸಿಂಗ್ ಅವರ ಜೊತೆ ಸಂಬಂಧ ಬೆಳೆಸಿದ್ದರು ಎನ್ನಲಾಗಿದೆ. ಅಭಿಷೇಕ್ ಸಿಂಗ್ ಮೂಲತಃ ಉತ್ತರ ಪ್ರದೇಶದವನಾಗಿದ್ದು, ತಮಿಳುನಾಡಿನ ಚೆನ್ನೈನಲ್ಲಿ ಖಾಸಗಿ ಕಂಪನಿ ಒಂದರಲ್ಲಿ ಕೆಲಸ…

Read More

ಉತ್ತರಪ್ರದೇಶ : ಪ್ರೀತಿಯ ಸಾಕುಪ್ರಾಣಿಗಳ ಹೆಸರಿಗೆ ಆಸ್ತಿ ಬರೆದವರ ಬಗ್ಗೆ ಜನ ಓದಿರಬಹುದು. ಆದರೆ ಉತ್ತರ ಪ್ರದೇಶದಲ್ಲಿ ಮಹಿಳೆಯೊಬ್ಬರು ತಮ್ಮ ಪ್ರೀತಿಯ ಬೆಕ್ಕು ಮೃತಪಟ್ಟ ನಂತರ ದುಃಖ ಸಹಿಸಲಾರದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಹೌದು ಈ ಶಾಕಿಂಗ್ ಘಟನೆ ಉತ್ತರಪ್ರದೇಶ ರಾಜ್ಯದ ಅಮರೋಹಾ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ವರದಿಯಾಗಿದೆ. ಆತ್ಮಹತ್ಯೆ ಮಾಡಿಕೊಂಡ ಮಹಿಳೆಯನ್ನು ಪೂಜಾ (32) ಎಂದು ಗುರುತಿಸಲಾಗಿದೆ. ಈಕೆ ಸುಮಾರು 8 ವರ್ಷಗಳ ಹಿಂದೆ ದೆಹಲಿ ನಿವಾಸಿ ಯುವಕನನ್ನು ಮದುವೆಯಾಗಿ ಬಳಿಕ ವಿಚ್ಛೇದನ ಪಡೆದಿದ್ದಳು. ಇದಾದ ನಂತರ ಪೂಜಾ ತನ್ನ ಹೆತ್ತವರ ಮನೆಯಲ್ಲಿ ವಾಸಿಸುತ್ತಿದ್ದಳು. ಈ ವೇಳೆ ಒಂಟಿತನವನ್ನು ಹೋಗಲಾಡಿಸಲು ಪೂಜಾ ಒಂದು ಸಾಕು ಬೆಕ್ಕನ್ನು ಸಾಕಿದ್ದಳು. ಆದರೆ ಅದು ನಾಲ್ಕು ದಿನಗಳ ಹಿಂದೆ ಸತ್ತಿದೆ. ಆ ಬೆಕ್ಕಿನ ಜೊತೆ ಪೂಜಾ ಅವರು ಅದೆಷ್ಟು ಗಾಢವಾದ ಸಂಬಂಧವನ್ನು ಬೆಳೆಸಿಕೊಂಡಿದ್ದರು ಎಂದರೆ, ಬೆಕ್ಕು ಸತ್ತ ನಂತರ ಅದನ್ನು ಹೂಳಲೂ ಇಲ್ಲ. ಬೆಕ್ಕಿಗೆ ಬಹಳ ಬೇಗ ಜೀವ ಬರುತ್ತದೆ. ಹಾಗಾಗಿ ಅದನ್ನು…

Read More

ಬೆಂಗಳೂರು : ಬೆಂಗಳೂರು ಚಲನಚಿತ್ರೋತ್ಸವ ಉದ್ಘಾಟನಾ ಸಮಾರಂಭದಲ್ಲಿ ಸಾಕಷ್ಟು ಸ್ಟಾರ್ ಕಲಾವಿದರು ಗೈರಾಗಿದ್ದರು. ಇದು ಡಿಕೆ ಶಿವಕುಮಾರ್ ಸಿಟ್ಟಿಗೆ ಕಾರಣವಾಗಿತ್ತು. ಇದೇ ಸಂದರ್ಭದಲ್ಲಿ ಅವರು ಮೇಕೆದಾಟು ಹೋರಾಟ, ಕನ್ನಡ ಪರ ಹೋರಾಟದಲ್ಲೂ ಕಲಾವಿದರು ಪಾಲ್ಗೊಳ್ಳಲ್ಲ ಎಂದು ಗರಂ ಆಗಿ ಹೇಳಿದ್ದರು. ಅಲ್ಲದೆ ಎಲ್ಲರ ನಟ್ಟು ಬೋಲ್ಟ್ ಸರಿ ಮಾಡ್ತೀನಿ ಎಂದಿದ್ದರು. ಡಿಕೆ ಶಿವಕುಮಾರ್ ಅವರ ಹೇಳಿಕೆಯನ್ನು ನಟಿ ರಮ್ಯಾ ಅವರು ಇದೀಗ ಸಮರ್ಥನೆ ಮಾಡಿಕೊಂಡಿದ್ದಾರೆ. ನೆಲ, ಜಲ, ಭಾಷೆ ವಿಚಾರದಲ್ಲಿ ಎಲ್ಲರೂ ಒಂದಾಗಬೇಕು.ನನಗನಿಸುವ ಪ್ರಕಾರ ಸಾಹೇಬ್ರು ಹೇಳಿದ್ದರಲ್ಲಿ ಯಾವುದೇ ತಪ್ಪಿಲ್ಲ. ನೀವು ಡಾ. ರಾಜ್ ಕುಮಾರ್ ಅವರನ್ನೇ ನೋಡಿ. ಕನ್ನಡ ಪರ ಹೋರಾಟ ಅಂದಾಗ ಮುಂಚೂಣಿಯಲ್ಲಿರುತ್ತಿದ್ದರು. ಅದೇ ರೀತಿ ಈಗಿನ ನಟರು ಇರಬೇಕು ಎಂದು ಹೇಳಿರಬಹುದು ಅದು ನಮ್ಮ ಕರ್ತವ್ಯ ಎಂದು ತಿಳಿಸಿದರು. ಉತ್ತರ ಕರ್ನಾಟಕದ ನದಿಗಳು, ಜಲಾಶಯಗಳ ಬಗ್ಗೆಯೂ ಕಲಾವಿದರು ಮಾತನಾಡಬೇಕು, ನಮಗೆ ಒಂದು ಜವಾಬ್ದಾರಿ ಇರುತ್ತದೆ ಎಂದು ಓರ್ವ ನಟಿಯಾಗಿ ನಾನು ಭಾವಿಸುತ್ತೇನೆ. ನಮ್ಮ ಭಾಷೆ, ಜಾಗ, ಸಂಸ್ಕೃತಿಗೆ…

Read More

ವಿಜಯನಗರ : ವಿಜಯನಗರದಲ್ಲಿ ಘೋರವಾದಂತಹ ದುರಂತ ಒಂದು ಸಂಭವಿಸಿದ್ದು, ಕೆರೆಯಲ್ಲಿ ಈಜಲು ಹೋಗಿದ್ದ ಬಾಲಕರಿಬ್ಬರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲೂಕಿನ ಹೊಸಕೇರಿಯಲ್ಲಿ ನಡೆದಿದೆ. ಮೃತ ಬಾಲಕರನ್ನು ವೀರೇಶ್ (12) ಹಾಗು ವಿನಯ್ (12) ಎಂದು ತಿಳಿದುಬಂದಿದೆ. ಇಂದು ಅವರು ಕೆರೆಯಲ್ಲಿ ಈಜಲು ತೆರಳಿದ್ದಾಗ ನೀರಿನಲ್ಲಿ ಮುಳುಗಿ ಸಾವನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಸದ್ಯ ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಅಗ್ನಿಶಾಮಕ ದಳ ಸಿಬ್ಬಂದಿಗಳಿಂದ ಶವಗಳನ್ನು ಹೊರ ತೆಗೆಯಲಾಗಿದೆ. ಹಗರಿಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು : ನಿನ್ನೆ ಬೆಂಗಳೂರಿನ ಬ್ಯಾಟರಾಯನಪುರದಲ್ಲಿ ಸೆಕ್ಯೂರಿಟಿ ಗಾರ್ಡ್ ನನ್ನು ಚಾಕು ಇರಿದು ಭೀಕರವಾಗಿ ಕೊಲೆ ಮಾಡಲಾಗಿತ್ತು. ಇದೀಗ ಈ ಒಂದು ಕೊಲೆಗೆ ಸಂಬಂಧಿಸಿದಂತೆ ಡೆಲಿವರಿ ಬಾಯ್ ಕಾರ್ತಿಕ್ ಎನ್ನುವ ಆರೋಪಿಯನ್ನು ಇದೀಗ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಡೆಲಿವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದ ಕಾರ್ತಿಕ್ ಒಡಿಶಾ ಮೂಲದ ಗಣೇಶ್ (32) ಎನ್ನುವ ಸೆಕ್ಯೂರಿಟಿ ಗಾರ್ಡ್ ನನ್ನು ಚಾಕು ಇರಿದು ಭೀಕರವಾಗಿ ಕೊಲೆ ಮಾಡಿ ಅಲ್ಲಿಂದ ಪರಾರಿಯಾಗಿದ್ದ. ಬಳಿಕ ಬ್ಯಾಟರಾಯನ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿ ಪತ್ತೆಗೆ ಬಲೆ ಬೀಸಿದ್ದು ಇದೀಗ ಆರೋಪಿನ ಅರೆಸ್ಟ್ ಮಾಡಿ ವಿಚಾರಣೆಗೆ ಒಳಪಡಿಸಿದ್ದಾರೆ.

Read More

ಕಲಬುರ್ಗಿ : ಇತ್ತೀಚಿಗೆ ಹೆಂಡತಿಯರ ಕಾಟಕ್ಕೆ ಗಂಡಂದಿರು ಆತ್ಮಹತ್ಯೆಗೆ ಶರಣಾಗುತ್ತಿರುವ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದೆ. ಕಳೆದ ಕೆಲವು ದಿನಗಳ ಹಿಂದೆ ಬೆಂಗಳೂರಿನಲ್ಲಿ ಟೆಕ್ಕಿ ಅತುಲ್ ಸುಭಾಷ್ ಆತ್ಮಹತ್ಯೆ ಮಾಡಿಕೊಂಡಿದ್ದ ಘಟನೆ ಇಡೀ ದೇಶದಾದ್ಯಂತ ಭಾರಿ ಸುದ್ದಿಯಾಗಿತ್ತು.ಇದೀಗ ಕಲ್ಬುರ್ಗಿಯಲ್ಲಿ ಪತ್ನಿಯ ಕಾಟಕ್ಕೆ ಬೇಸತ್ತು ಪತಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕಲಬುರ್ಗಿ ನಗರದ ಮಹದೇವನಗರದಲ್ಲಿ ನಡೆದಿದೆ. ಹೌದು ಮನೇಯಲ್ಲಿ ನೇಣು ಬಿಗಿದುಕೊಂಡು ರಾಕೇಶ್ (30) ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮಾತೆತ್ತಿದರೆ ಪತ್ನಿ ಕಂಪ್ಲೇಂಟ್ ಕೊಡುತ್ತೇನೆ ಎಂದು ಕಿರುಕುಳ ನೀಡಿದ್ದಾಳೆ ಎಂದು ಆರೋಪಿಸಲಾಗಿದೆ. ಕಲಬುರ್ಗಿ ಮಹದೇವನಗರದಲ್ಲಿ ಈ ಒಂದು ಘಟನೆ ನಡೆದಿದೆ. 6 ತಿಂಗಳ ಹಿಂದೆ ರಾಕೇಶ್ ಹಾಗೂ ಮೇಘನಾ ಮದುವೆಯಾಗಿತ್ತು. ಮನೆ ಕೆಲಸ ಸೇರಿ ಸಣ್ಣ ಸಣ್ಣ ವಿಚಾರಕ್ಕೆ ಮೇಘನಾ ಕಿರಿಕ್ ಮಾಡುತ್ತಿದ್ದಳು. ಮನೆ ಒರೆಸುವ, ಮನೆ ಕೆಲಸ ಮಾಡಲು ಕಾಟ ನೀಡಲಾಗುತ್ತಿತ್ತು.ಮನೆ ಕೆಲಸ ಮಾಡದಿದ್ದರೆ ಪೊಲೀಸರಿಗೆ ಕಂಪ್ಲೇಂಟ್ ಕೊಡುತ್ತೇನೆ ಎಂದು ಪತ್ನಿ ಹೆದರಿಸುತ್ತಿದ್ದಳು. ಒಂದು ವೇಳೆ ಮಾತು ಕೇಳದಿದ್ದರೆ ಪೊಲೀಸರಿಗೆ ದೂರು…

Read More

ಬೆಂಗಳೂರು : ಮೈಸೂರು ಕೆ. ಆರ್ ನಗರದ ಮಹಿಳೆ ಅಪಹರಣ ಪ್ರಕರಣದಲ್ಲಿ ಆರೋಪಿಯಾಗಿರುವ ಭವಾನಿ ರೇವಣ್ಣ ಅವರ ನಿರೀಕ್ಷಣಾ ಜಾಮೀನಿನ ಷರತ್ತಿನಲ್ಲಿನ ಸಡಿಲಿಕೆ ಕೋರಿ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಮಾರ್ಚ್ 10 ರಂದು ವಿಚಾರಣೆ ಮುಂದೂಡಿ ಆದೇಶ ಹೊರಡಿಸಿತು. ಈ ವೇಳೆ ಭವಾನಿ ರೇವಣ್ಣ ಪರವಾಗಿ ಹಿರಿಯ ವಕೀಲ ಸಂದೇಶ್‌ ಚೌಟ ಅವರು ನಿರೀಕ್ಷಣಾ ಜಾಮೀನು ಮಂಜೂರು ಮಾಡುವಾಗ ಈ ನ್ಯಾಯಾಲಯವು ವಿಧಿಸಿರುವ ಷರತ್ತಿನಿಂದಾಗಿ ಭವಾನಿ ಅವರು ಮಂಡ್ಯ ಅಥವಾ ಮೈಸೂರಿಗೆ ಪ್ರಯಾಣಿಸಲಾಗುತ್ತಿಲ್ಲ. ತುರ್ತಿನ ಪರಿಸ್ಥಿತಿ ಇರುವುದರಿಂದ ಅರ್ಜಿ ವಿಚಾರಣೆ ನಡೆಸಬೇಕುಎಂದು ಮನವಿ ಮಾಡಿದರು. ಈ ವೇಳೆ ಆಕ್ಷೇಪಣೆ ಸಲ್ಲಿಸಲು ರಾಜ್ಯ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಕಾಲಾವಕಾಶ ನೀಡಿದೆ.ಇದನ್ನು ಆಲಿಸಿದ ಪೀಠವು ರಾಜ್ಯ ಸರ್ಕಾರ ಆಕ್ಷೇಪಣೆ ಸಲ್ಲಿಸಲಿ, ಮಾರ್ಚ್‌ 10ರಂದು ಅರ್ಜಿ ವಿಚಾರಣೆ ನಡೆಸಲಾಗುವುದು ಎಂದು ವಿಚಾರಣೆ ಮುಂದೂಡಿತು.2024ರ ಜೂನ್‌ 7ರಂದು ಆರು ಷರತ್ತುಗಳನ್ನು ವಿಧಿಸಿ ಹೈಕೋರ್ಟ್‌, ಭವಾನಿ ಅವರಿಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿತ್ತು.

Read More

ಬೆಂಗಳೂರು : ಬೆಳಗಾವಿಯಲ್ಲಿ ಕಂಡಕ್ಟರ್ ಮೇಲೆ ಹಲ್ಲೆಯನ್ನು ಖಂಡಿಸಿ ಇಂದು ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ರಾಜಭವನ ಮುತ್ತಿಗೆಗೆ ಯತ್ನಿಸಿದರು. ಈ ವೇಳೆ ಅಲ್ಲಿಯೇ ನಿಯೋಜನೆಗೊಂಡಿದ್ದ ಪೊಲೀಸರು ತಕ್ಷಣ ವಾಟಾಳ್ ನಾಗರಾಜ್ ಅವರನ್ನು ವಶಕ್ಕೆ ಪಡೆದುಕೊಂಡು ಬಸ್ಸಿನಲ್ಲಿ ಕರೆದೋಯ್ದ ಘಟನೆ ನಡೆಯಿತು. ಹೌದು ಬೆಂಗಳೂರಲ್ಲಿ ರಾಜಭವನ ಮುತ್ತಿಗೆಗೆ ವಾಟಾಳ್ ನಾಗರಾಜ್ ಯತ್ನಿಸಿದ್ದು, ಸದ್ಯ ವಾಟಳ್ ನಾಗರಾಜ್ ಅವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ವಶಕ್ಕೆ ಪಡೆದು ಬಸ್ ನಲ್ಲಿ ಪೊಲೀಸರು ಕರೆದುಕೊಂಡು ಹೋಗಿದ್ದಾರೆ. ಕನ್ನಡಿಗರ ಮೇಲೆ ಶಿವಸೇನೆ ದೌರ್ಜನ್ಯ ಎಸಗಿದ್ದನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದರು.

Read More

ಬೆಂಗಳೂರು : ಇತ್ತೀಚಿಗೆ ಬೆಂಗಳೂರಲ್ಲಿ 16ನೇ ಅಂತರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಸ್ಯಾಂಡಲ್ ವುಡ್ ತಾರೆಯರೇ ಭಾಗವಹಿಸದಿರುವುದಕ್ಕೆ ಆಕ್ರೋಶ ವ್ಯಕ್ತವಾಗುತ್ತಿದೆ. ಇತ್ತೀಚಿಗೆ ನಟಿ ರಶ್ಮಿಕ ಮಂದಣ್ಣ ವಿರುದ್ಧ ಕರವೇ ಅಧ್ಯಕ್ಷ ನಾರಾಯಣಗೌಡ ವಾಗ್ದಾಳಿ ನಡೆಸಿದ್ದರು. ಇದೀಗ ಶಾಸಕ ರವಿ ಗಣಿಗ ಅವರು ಕೂಡ ನಟಿ ರಶ್ಮಿಕಾ ಮಂದಣ್ಣ ವಿರುದ್ಧ ಕಿಡಿ ಕಾರಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ರಶ್ಮಿಕಾ ಮಂದಣ್ಣ ಅವರಿಗೆ ಕಳೆದ ಬಾರಿ ಶಾಸಕರೊಬ್ಬರು ಹೋಗಿ ಚಿತ್ರೋತ್ಸವಕ್ಕೆ ಆಹ್ವಾನ ನೀಡಿದರೆ ನಾನು ಹೈದರಾಬಾದ್ ನಲ್ಲಿ ಇದ್ದೇನೆ. ನನಗೆ ಬರಲು ಟೈಂ ಇಲ್ಲ ಎಂದಿದ್ದಾರೆ. ಕನ್ನಡದವರೇ ಆಗಿ ಕನ್ನಡ ಸಿನಿಮಾ ಕಾರ್ಯಕ್ರಮಕ್ಕೆ ಈ ರೀತಿ ಹೇಳಿದರೆ ಇಂತವರಿಗೆ ಬುದ್ಧಿಕಲಿಸುವುದು ಬೇಡವೇ? ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ‘CCL’ ಆಡೋಕೆ ಆಗುತ್ತೆ, ಚಲನಚಿತ್ರೋತ್ಸವದಲ್ಲಿ ಭಾಗವಹಿಸಲು ಆಗಲ್ವಾ? ಇವರಿಗೆ ಸಿಸಿಎಲ್ ಕ್ರಿಕೆಟ್ ಆಡಲು ಹೋಗಲು ಆಗುತ್ತೆ, ಇಲ್ಲಿನ ಚಲನಚಿತ್ರೋತ್ಸವದಲ್ಲಿ ಪಾಲ್ಗೊಳ್ಳಲು ಆಗಲ್ಲ. ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವ ಇದೆ. ಸದ್ಯಕ್ಕೆ ಸಿಸಿ ಎಲ್ ಕ್ರಿಕೆಟ್ ನಿಲ್ಲಿಸಿ ಎಂದು ಫಿಲ್ಮ್…

Read More