Author: kannadanewsnow05

ಬೆಂಗಳೂರು : ಹೆರಿಗೆ ನಂತರ ಆಸ್ಪತ್ರೆಗೆ ದಾಖಲಾಗಿದ್ದ ಬಾಣಂತಿ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ನಡೆದಿದೆ. ಮೃತ ಬಾಣಂತಿಯನ್ನು ಜನನಿ (33) ಎಂದು ತಿಳಿದುಬಂದಿದೆ. ಸದ್ಯ ಮಣಿಪಾಲ್ ಆಸ್ಪತ್ರೆಯ ವೈದ್ಯರ ವಿರುದ್ಧ ಕುಟುಂಬಸ್ಥರು ಇದೀಗ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಕ್ಲೌಡ್ ನೈನ್ ಆಸ್ಪತ್ರೆಯಲ್ಲಿ ಐವಿಎಫ್ ಮೂಲಕ ಜನನಿ ಹಾಗೂ ಕೇಶವ್ ದಂಪತಿ ಅವಳಿ ಮಕ್ಕಳನ್ನು ಪಡೆದಿದ್ದರು. ಕ್ಲೌಡ್ ನೈನ್ ಆಸ್ಪತ್ರೆಯಲ್ಲಿ ದಂಪತಿ ಹೆರಿಗೆ ಪ್ಯಾಕೇಜ್ ಮಾಡಿಸಿದ್ದರು. ಮೇ ಎರಡರಂದು ಕ್ಲೌಡ್ ನೈನ್ ಆಸ್ಪತ್ರೆಯಲ್ಲಿ ಪ್ರಸವಪೂರ್ವ ಹೆರಿಗೆಯಾಗಿತ್ತು. ಬಳಿಕ ಜನನಿಗೆ ಜಾಂಡಿಸ್ ಲಿವರ್ ಸಮಸ್ಯೆ ಇದೆ ಎಂದು ವೈದ್ಯರು ತಿಳಿಸಿದರು. ಬಳಿಕ ಆರೋಗ್ಯ ಸ್ಥಿತಿ ಗಂಭೀರವಾದ ಹಿನ್ನೆಲೆಯಲ್ಲಿ ಮಣಿಪಾಲ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ ಎಂದು ಬೆಳಿಗ್ಗೆ ಮಣಿಪಾಲ್ ಆಸ್ಪತ್ರೆಯಲ್ಲಿ ಬಾಣಂತಿ ಜನನಿ ಸಾವನ್ನಪ್ಪಿದ್ದಾಳೆ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ 30 ಲಕ್ಷ ಬಿಲ್ ಮಾಡಿರುವ ಆರೋಪ ಕೂಡ ಇದೀಗ ಕೇಳಿ ಬರುತ್ತಿದೆ.

Read More

ದಕ್ಷಿಣಕನ್ನಡ : ಬೆಂಬಲಿಗರ ಪರವಾಗಿ ಪೊಲೀಸ್ ಠಾಣೆಯ ಆವರಣದಲ್ಲಿ ಧರಣಿ ಹಾಗೂ ಠಾಣೆಯ ಪಿಎಸ್ಐಗೆ ಧಮ್ಕಿ ಹಾಕಿದ ಆರೋಪಕ್ಕೆ ಸಂಬಂಧಿಸಿದಂತೆ ಇದೀಗ ವಿಟ್ಲ ಠಾಣೆಯ ಪೊಲೀಸ್ ಅಧಿಕಾರಿಗಳು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಹಾಗೆ ನೋಟಿಸ್ ಜಾರಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಹೌದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾಗೆ ನೋಟಿಸ್ ಜಾರಿ ಮಾಡಲಾಗಿದೆ. ವಿಟ್ಲ ಠಾಣೆಯ ಪೊಲೀಸರಿಂದ ನೋಟಿಸ್ ಜಾರಿ ಮಾಡಿದ್ದಾರೆ ಎಂದು ತಿಳಿದುಬಂದಿದೆ. ವಿಟ್ಲ ಠಾಣೆಯ ಇನ್ಸ್ಪೆಕ್ಟರ್ ನಾಗರಾಜ್ ಹಾಗೂ ಸಬ್ ಇನ್ಸ್ಪೆಕ್ಟರ್ ನಂದಕುಮಾರ್ ಅವರಿಂದ ನೋಟಿಸ್ ನೀಡಲಾಗಿದೆ ಎಂದು ತಿಳಿದು ಬಂದಿದೆ. ತತನಿಕಾಧಿಕಾರಿಗಳ ಜೊತೆಗೆ ಠಾಣೆಗೆ ಬರುವಂತೆ ನೋಟಿಸ್ ನೀಡಿದ್ದಾರೆ. ಈ ಒಂದು ಘಟನೆಗೆ ಸಂಬಂಧಿಸಿದಂತೆ ಇಂದು ಹರೀಶ್ ಪೂಂಜಾ ಅವರನ್ನು ಬಂಧಿಸಲು ಪೊಲೀಸರು ತೆರಳಿದಾಗ, ಅವರ ನಿವಾಸದ ಮುಂದೆ ಬಾರಿ ಹೈಡ್ರಾಮಾ ನಡೆಯಿತು.ಹರೀಶ್ ಪೂಂಜಾ ಅವರ ಬೆಂಬಲಿಗರು ಹಾಗೂ ಕಾರ್ಯಕರ್ತರು ಪೊಲೀಸರೊಂದಿಗೆ ವಾಗ್ವಾದಕ್ಕೆ ಇಳಿದರು. ಪೊಲೀಸರ ಈ ವರ್ತನೆಗೆ ಬಿಜೆಪಿ ನಾಯಕರು ಕಾಂಗ್ರೆಸ್ ವಿರುದ್ಧ ಕಿಡಿಕಾರಿದ್ದಾರೆ.

Read More

ಬೆಂಗಳೂರು : ಕಾಂಗ್ರೆಸ್ ಸರ್ಕಾರ ಆಡಳಿತ ವಹಿಸಿಕೊಂಡು ಒಂದು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಈ ಕುರಿತಂತೆ ಬಿಜೆಪಿಯ ಮಾಜಿ ಸಚಿವ ಸಿ ಟಿ ರವಿ ಪ್ರತಿಕ್ರಿಯೆ ನೀಡಿದ್ದು, ಸಾವಿರಾರು ಹತ್ಯೆ ಆತ್ಮಹತ್ಯೆಗಳೇ ನಿಮ್ಮ ಸಾಧನೆಯ? ಎಂದು ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಕಿಡಿ ಕಾರಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎನ್ ಸಿ ಬಿ ಆರ್ ವರದಿ ಪ್ರಕಾರ ನಾಲ್ಕು ತಿಂಗಳಲ್ಲಿ 430 ಕೊಲೆಗಳಾಗಿವೆ. 700 ಹೆಚ್ಚು ರೈತರ ಆತ್ಮಹತ್ಯೆಗೆ ಶರಣಾಗಿದ್ದಾರೆ. ಹತ್ಯೆ ಆತ್ಮಹತ್ಯೆಯಲ್ಲಿ ಪ್ರತಿ ತಿಂಗಳು ಶತಕದ ದುಡಿದಾಟಿದೆ. ಕೋವಿಡ್ ಅವಧಿಯ ಅಕ್ರಮಗಳ ತನಿಖೆಗೆ ಸಮಿತಿಯನ್ನು ರಚಿಸಿದ್ರಿ.ಕೋವಿಡ್ ಅಕ್ರಮಗಳ ತನಿಖಾ ವರದಿ ಬಂತ? ನಾಗಮೋಹನ್ ದಾಸ್ ನೇತೃತ್ವದ ಸಮಿತಿ ವರದಿ ಬಂತಾ? ಬಿಟ್ ಕಾಯಿನ್ ಹಗರಣದ ತನಿಖಾ ವರದಿ ಬಂದಿದೆಯಾ? ಎಂದು ಪ್ರಶ್ನಿಸಿದ್ದಾರೆ. ಈಗ ಕೆಲವು ಆರೋಪಗಳ ಕುರಿತು ಸಮಿತಿ ರಚಿಸಿದ್ದೀರಿ ಒಂದು ವರ್ಷವಾದರೂ ಯಾವುದೇ ವರದಿಗಳು ಬಂದಿಲ್ಲ. ನಿಮ್ಮದೊಂದು ಸರ್ಕಾರ ನೂರಾರು ಗೊಂದಲ. ಸರ್ಕಾರ ಯಾವ ಹೊಸ ಯೋಜನೆಯನ್ನೂ…

Read More

ರಾಮನಗರ : ಹೆಂಡತಿಗೆ ತವರಿನಿಂದ ವರದಕ್ಷಿಣೆ ತೆಗೆದುಕೊಂಡು ಬಾ ಎಂದು ಪ್ರತಿದಿನ ಗಂಡ ಕಿರುಕುಳ ನೀಡುತ್ತಿದ್ದ, ಅಲ್ಲದೆ ಆಸ್ತಿಗಾಗಿ ಪತ್ನಿಯ ಮೇಲೆ ಭೀಕರವಾಗಿ ಕೊಲೆ ಮಾಡಿರುವ ಘಟನೆ ರಾಮನಗರ ಜಿಲ್ಲೆಯ ಚೆನ್ನಪಟ್ಟಣ ತಾಲೂಕಿನ ಮಂಗಾಡಹಳ್ಳಿ ಗ್ರಾಮದಲ್ಲಿ ನಡೆದಿದೆ. ಅಶ್ವಿನಿ (30) ಕೊಲೆಯಾದ ದುರ್ದೈವಿ ಎಂದು ತಿಳಿದುಬಂದಿದೆ.ಕೊಲೆ ಮಾಡಿದ ಪತಿಯನ್ನು ರಮೇಶ್ ಎಂದು ಹೇಳಲಾಗುತ್ತಿದೆ.ಕೆಲವು ವರ್ಷಗಳ ಹಿಂದೆ ಅಶ್ವಿನಿಯನ್ನು ಮದಿವೆ ಮಾಡಿಕೊಂಡಿದ್ದ ರಮೇಶ್, ವರದಕ್ಷಿಣೆ ಹಾಗೂ ಆಸ್ತಿ ವಿಚಾರಕ್ಕೆ ಹೆಂಡತಿ ಮತ್ತು ಅವರ ಮನೆಯವರೊಂದಿಗೆ ಜಗಳ ಮಾಡುತ್ತಿದ್ದನು ಎಂದು ತಿಳಿದುಬಂದಿದೆ. ಆದರೆ, ಇಂದು ಜಮೀನ ಬಳಿ ಇರುವಾಗಲೇ ಇಬ್ಬರ ನಡುವೆಯೂ ಜಗಳ ಆರಂಭವಾಗಿದೆ. ತೆಂಗಿನ ತೋಟದಲ್ಲಿ ಗಂಡ ಹೆಂಡತಿ ಮಧ್ಯೆ ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಗಲಾಟೆ ಶುರುವಾಗಿದೆ. ಈ ವೇಳೆ ರಮೇಶ್ ಅಶ್ವಿನಿ ಮೇಲೆ ಹಲ್ಲೆ ಮಾಡಲು ಮುಂದಾಗಿದ್ದಾನೆ.ಪತ್ನಿ ಎನ್ನುವುದನ್ನೂ ನೋಡದೆ ಎದೆ, ಕತ್ತು, ತಲೆ ಸೇರಿದಂತೆ ಹಲವು ಭಾಗಗಳಲ್ಲಿ ರಮೇಶ್ ಭೀಕರವಾಗಿ ಹಲ್ಲೆ ಮಾಡಿದ್ದಾನೆ. ನಂತರ ಹೆಂಡತಿ ಸಾವನ್ನಪ್ಪಿರುವುದನ್ನು ಖಚಿತಪಡಿಸಿಕೊಂಡು ಅಲ್ಲಿಂದ…

Read More

ಹುಬ್ಬಳ್ಳಿ : ಹುಬ್ಬಳ್ಳಿಯ ವೀರಾಪುರ ಓಣಿಯಲ್ಲಿ ಅಂಜಲಿ ಅಂಬಿಗೇರ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಂತಕ ವಿಶ್ವನನ್ನು ಇದೀಗ ಸಿಐಡಿ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.ಅಲ್ಲದೆ ಇಂದು ಮೃತ ಅಂಜಲಿ ಮನೆಯಲ್ಲಿ ವಿಶ್ವ ಸಮ್ಮುಖದಲ್ಲಿ ಸ್ಥಳ ಮಹಜರು ನಡೆಸುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ. ರೈಲಿನಿಂದ ಬಿದ್ದು ಗಾಯಗೊಂಡಿದ್ದ ಹಂತಕ ವಿಶ್ವನನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸರ್ಕಾರ ಪ್ರಕರಣವನ್ನು ಸಿಐಡಿ ಗೆ ಹಸ್ತಾಂತರಿಸಿದ ನಂತರ ನಿನ್ನೆ ಸಿಐಡಿ ತಂಡ ಹುಬ್ಬಳ್ಳಿಗೆ ಆಗಮಿಸಿತ್ತು ಇಂದು ಕಿಂ ಶಾಸ್ತ್ರಿ ಗೆ ಭೇಟಿ ನೀಡಿ, ಆರೋಪಿ ವಿಶ್ವನ ಹೇಳಿಕೆಯನ್ನು ಪಡೆದುಕೊಂಡಿದ್ದಾರೆ. ನಂತರ ಆತನನ್ನು ವಶಕ್ಕೆ ಪಡೆಯದ ಸಿಐಡಿ ಅಧಿಕಾರಿಗಳು ಬೆಂಡಿಗೇರಿ ಪೊಲೀಸ್ ಠಾಣೆಗೆ ಕರೆದುಕೊಂಡು ಹೋಗಿದ್ದಾರೆ ಅಲ್ಲಿ ಆರೋಪಿ ವಿಶ್ವನ ತಾಯಿ ಶೋಭಾ ಅವರನ್ನು ಕರೆಸಿದ್ದು ಅವರನ್ನು ಕೂಡ ಸಿಐಡಿ ಅಧಿಕಾರಿಗಳು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು ತಿಳಿದು ಬಂದಿದೆ. ಹಾಗಾಗಿ ಹಂತಕ ಅಭಿಮಾನನ್ನು ಕರೆದುಕೊಂಡು ಹೋಬಳಿಯ ವೀರಾಪುರ ಓಣಿಯಲಿರುವ ಮೃತ ಜಲಿ ಮನೆಗೆ ಕರೆದುಕೊಂಡು ಹೋಗಿ…

Read More

ಮೈಸೂರು : ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದೇಶದಲ್ಲಿರುವ ಪ್ರಜ್ವಲ್ ರೇವಣ್ಣಗೆ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಮನವಿ ಮಾಡಿದ್ದು, ಪ್ರಜ್ವಲ್ ವಿದೇಶಕ್ಕೆ ಹೋಗುವುದು ಅವತ್ತೇ ಗೊತ್ತಾಗಿದ್ದರೆ ನಾನು ಅವತ್ತೆ ಅದನ್ನು ನಿಲ್ಲಿಸುತ್ತಿದ್ದೆ. ಪ್ರಜ್ವಲ್ ಭಯ ಬಿದ್ದಿರಬಹುದು. ಅದಕ್ಕೆ ಬರುತ್ತಿಲ್ಲ. ಪ್ರಜ್ವಲ್ ಗೆ ಹೇಳ್ತಿದ್ದಿನಿ, ಈ ವಿಚಾರದಲ್ಲಿ ವಕೀಲರ ಸಲಹೆ ಬೇಡ. ನೈತಿಕ ಕತೆ ಉಳಿಸಿಕೊಳ್ಳಲು ದೇಶಕ್ಕೆ ವಾಪಾಸ್ ಬಾ’ ಎಂದು ಮೈಸೂರಿನಲ್ಲಿ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಹೇಳಿದರು. ಬಿಜೆಪಿ – ಜೆಡಿಎಸ್ ಮೈತ್ರಿಗೂ ಪೆನ್ ಡ್ರೈವ್‌ಗೂ ಸಂಬಂಧ ಇಲ್ಲ. ಪೆನ್ ಡ್ರೈವ್ ಪ್ರಕರಣದಿಂದ ದೇವೇಗೌಡರ ಫ್ಯಾಮಿಲಿ ಗೆ ಸ್ವಲ್ಪ ಡ್ಯಾಮೆಜ್ ಆಗಿರೋದು ಸತ್ಯ. ಪ್ರಜ್ವಲ್ ಎಚ್.ಡಿ. ರೇವಣ್ಣನ ಸಂಪರ್ಕದಲ್ಲೂ ಇಲ್ಲ. ಪ್ರಜ್ವಲ್ ಕರ್ನಾಟಕದಲ್ಲಿ ಇದ್ದಾಗಲೇ ನನ್ನ ಸಂಪರ್ಕದಲ್ಲಿ ಇರುತ್ತಿರಲಿಲ್ಲ. ಇನ್ನು ಈಗ ಇರ್ತಾನಾ? ನಾನು ಈಗ ಏನಾದರೂ ವಿದೇಶಕ್ಕೆ ಹೋದರೆ, ಪ್ರಜ್ವಲ್ ರಕ್ಷಣೆಗೆ ಹೋಗಿದ್ದಾರೆ ಅಂತಾ ಇವರು ಸುದ್ದಿ ಹಬ್ಬಿಸಿ ಬಿಡುತ್ತಾರೆ ಎಂದು ಮೈಸೂರಿನಲ್ಲಿ ಮಾಜಿ  ಸಿಎಂ…

Read More

ಬೆಳಗಾವಿ : ಇತ್ತೀಚೆಗೆ ಕರ್ನಾಟಕ ಗೋವಾ ಗಡಿಯಲ್ಲಿ ಓಡಾಡುವ ರೈಲಿನಲ್ಲಿ ಚಾಕೊಲೇಟ್ ಗ್ಯಾಂಗ್ ಆ್ಯಕ್ಟೀವ್ ಆಗಿತ್ತು. ಇದೀಗ ಜ್ಯೂಸ್ ಗ್ಯಾಂಗ್ ಆಕ್ಟಿವ್ ಆಗಿದ್ದು, ಚಲಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್​​ನಲ್ಲಿಯೇ ಜ್ಯೂಸ್ ಹಾಗೂ ಬಾಳೆ ಹಣ್ಣು ಕೊಟ್ಟು ನಗನಾಣ್ಯ ದೋಚಿ ಪರಾರಿಯಾಗಿರುವಂತಹ ಘಟನೆ ಹುಬ್ಬಳ್ಳಿಯಿಂದ ಬೆಳಗಾವಿಗೆ ಬರುತ್ತಿದ್ದ ಬಸ್ ನಲ್ಲಿ ನಡೆದಿದೆ. ಹೌದು ಬೆಳಗಾವಿಯಲ್ಲಿ ಕೆಎಸ್ಆರ್ಟಿಸಿ ಬಸ್ ನಲ್ಲಿ ಜ್ಯೂಸ್ ಹಾಗೂ ಬಾಳೆಹಣ್ಣು ಮಾರಾಟ ಮಾಡುವ ಸೋಗಿನಲ್ಲಿ ಬಂದು ಪ್ರಯಾಣಿಕರಿಗೆ ಜ್ಯೂಸ್ ಬಾಳೆಹಣ್ಣು ಮಾರಾಟ ಮಾಡಿದ್ದಾರೆ. ಈ ವೇಳೆ ಜ್ಯೂಸ್ ಹಾಗೂ ಬಾಳೇನಲ್ಲಿ ಮೂರ್ಛೆ ಬರುವಂತಹ ಪದಾರ್ಥ ಮಿಶ್ರಣ ಮಾಡಿದ್ದಾರೆ. ಈ ವೇಳೆ ಸಂಜೀವ್ ಖೋತ (40) ಹಾಗೂ ಮತ್ತೋರ್ವ ಪ್ರಯಾಣಿಕರಿಂದ ಗ್ಯಾಂಗ್ ಸುಲಿಗೆ ಮಾಡಿದೆ. ತಕ್ಷಣ ಜ್ಯೂಸ್ ಗ್ಯಾಂಗ್ ಪ್ರಯಾಣಿಕರ ಬಳಿ ಇದ್ದಂತ ಬಂಗಾರದ ಚೈನ್, ಬ್ಯಾಗ್, ಪರ್ಸ್ ಕದ್ದು ಪರಾರಿ ಆಗಿದ್ದಾರೆ. ಸದ್ಯ ಹದಿನಾಲ್ಕು ಗಂಟೆಯಿಂದ ಸಂಪೂರ್ಣ ಪ್ರಜ್ಞಾಹೀನ‌ ಸ್ಥಿತಿಯಲ್ಲಿರುವ ಸಂಜೀವ್ ಖೋತಗೆ ಬಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಮತ್ತೋರ್ವನಿಗೆ ಖಾಸಗಿ…

Read More

ಮೈಸೂರು : ಹಾಸನ ಸಂಸದ ಪ್ರಜ್ವಲ್ ಪೆನ್ ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿ ದಂತೆ ಮೈಸೂರಿನಲ್ಲಿ HD ಕುಮಾರಸ್ವಾಮಿ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧ ಗಂಭೀರವಾದ ಆರೋಪ ಮಾಡಿದ್ದು, ಕಾರು ಚಾಲಕ ಕಾರ್ತಿಕ್ ಹತ್ತಿರ ಪೆನ್ ಡ್ರೈವ್ ಪಡೆದುಕೊಂಡು ವಿಡಿಯೋಗಳನ್ನ ಡಿಕೆ ಶಿವಕುಮಾರ್ ಟ್ರಾನ್ಸ್ಫರ್ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿದ್ದಾರೆ. ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ಪೆನ್ ಡ್ರೈವ್ ಪ್ರಕರಣದಲ್ಲಿ ಅರ್ಧ ನಿಮಿಷದಲ್ಲಿ ಎಲ್ಲವೂ ತೀರ್ಮಾನ ಆಗಿದೆ. ಡಿಕೆ ಶಿವಕುಮಾರ್ ವಿರುದ್ಧ ಮಾಜಿ ಸಿಎಂ ಕುಮಾರಸ್ವಾಮಿ ಗಂಭೀರವಾದ ಆರೋಪ ಮಾಡಿದ್ದಾರೆ. ನಾನು ಪ್ರಜ್ವಲ್ ಪರ ಇಲ್ಲ ಆರೋಪ ಸಾಬೀದಾದರೆ ಶಿಕ್ಷೆ ಕೊಡಿ. ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ಅಧಿಕಾರ ಶಾಶ್ವತ ಅಲ್ಲ ಅಧಿಕಾರ ದುರುಪಯೋಗ ವಿರುದ್ಧ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ. ಪೆನ್ ಡ್ರೈವ್ ಹರಿಬಿಟ್ಟ ಕಾರಣಿಕರ್ತರು ಯಾರಿದ್ದಾರೆ? ರೇವಣ ಮನೆಯಲ್ಲಿ ಕೆಲಸಕ್ಕೆ ಇದ್ದ ಕಾರ್ತಿಕ್ ಅವನು ಪೆನ್ ಡ್ರೈವ್ ಮೂಲ. ಅವನು ಎಲ್ಲಿಗೆ ಹೋದ? ಹಾಸನ ಜಿಲ್ಲೆಯ ಕಾಂಗ್ರೆಸ್ ಅಭ್ಯರ್ಥಿ ಹಿಡಿದುಕೊಂಡು ಹಳೇ ನರಸೀಪುರದಲ್ಲಿ ವ್ಯಕ್ತಿ…

Read More

ಬೆಂಗಳೂರು : ಪೊಲೀಸ್ ಠಾಣೆಯ ಆವರಣದಲ್ಲಿ ಬೆಂಬಲಿಗರ ಪರ ಧರಣಿ ಕುಳಿತಿದ್ದು, ಹಾಗೂ ಪಿ ಎಸ್ ಐ ಗೆ ದಮ್ಕಿ ಹಾಕಿದ ಆರೋಪದ ಅಡಿಯಲ್ಲಿ ಇದೀಗ ದಕ್ಷಿಣಕನ್ನಡ ಜಿಲ್ಲೆಯ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರನ್ನು ಬಂಧಿಸಲು ಪೊಲೀಸರು ಅವರ ನಿವಾಸಕ್ಕೆ ತೆರಳಿದ್ದಾರೆ. ಈ ಕುರಿತಂತೆ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಪ್ರತಿಕ್ರಿಯೆ ನೀಡಿದ್ದು ಶಾಸಕರನ್ನು ಬಂಧಿಸುವ ದುಸಾಹಸಕ್ಕೆ ಕೈ ಹಾಕಿದರೆ ಮುಂದೆ ಆಗುವಂತಹ ಅನಾಹುತಕ್ಕೆ ಸರ್ಕಾರ ಹಾಗೂ ಇಲಾಖೆ ಹೊಣೆಯಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಶಾಸಕ ಹರೀಶ್ ಪೂಂಜಾ ಬಂಧನ ಸಾಧ್ಯತೆ ವಿಚಾರವಾಗಿ ಹರೀಶ್ ಪೂಂಜಾ ಬಂಧನಕ್ಕೆ ಯತ್ನಿಸುತ್ತಿರುವುದು ಖಂಡನಿಯ. ಪೂಂಜಾ ಭಾಷಣ ನೋಡಿದ್ದೇನೆ. ಅವರ ಜೊತೆ ಚರ್ಚಿಸಿದ್ದೇನೆ. ವಿಷಯ ಮರೆಮಾಚುವ ಕೆಲಸ ಪೊಲೀಸರು ಮಾಡುತ್ತಿದ್ದಾರೆ. ಶಾಸಕರು ಉದ್ವೇಗದಲ್ಲಿ ಕೆಲವು ಮಾತುಗಳನ್ನು ಹೇಳಿದ್ದಾರೆ ಅದು ಸರಿಯಲ್ಲ ಎಂದು ಪೂಂಜಾರಿಗು ಗೊತ್ತಾಗಿದೆ. ಪದೇ ಪದೇ ಬಿಜೆಪಿಗರ ಮೇಲೆ ದಬ್ಬಾಳಿಕೆ ಸಹಿಸಲು ಆಗುವುದಿಲ್ಲ. ಶಾಸಕರನ್ನು ಅರೆಸ್ಟ್…

Read More

ಹುಬ್ಬಳ್ಳಿ : ರೈಲಿನಿಂದ ಜಿಗಿದು ಗಾಯಗೊಂಡು ಕಿಮ್ಸ್​ನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅಂಜಲಿ ಅಂಬಿಗೇರ ಕೊಲೆ ಆರೋಪಿ ವಿಶ್ವ ಅಲಿಯಾಸ್​ ಗಿರೀಶ್​ ಇದೀಗ CID ಅಧಿಕಾರಿಗಳ ಮುಂದೆ ಕೊಲೆಯ ರಹಸ್ಯವನ್ನು ಬಿಚ್ಚಿಟ್ಟಿದ್ದಾನೆ. ಹೌದು ಪ್ರಕರಣವನ್ನು CID ಗೆ ವಹಿಸಲಾಗುವುದು ಎಂದು ಎರಡು ದಿನಗಳ ಹಿಂದೆ ಗೃಹ ಸಚಿವ ಜಿ.ಪರಮೇಶ್ವರ್ ತಿಳಿಸಿದ್ದರು. ಇದೀಗ ಸಿಐಡಿ ಅಧಿಕಾರಗಳ ಮುಂದೆ ಕೊಲೆಯ ಕುರಿತು ಹೇಳಿರುವ ಗಿರೀಶ್, ಮೈಸೂರಿಗೆ ಬರಲು ಯುವತಿ ಅಂಜಲಿ ಒಪ್ಪದಿದ್ದಕ್ಕೆ ಕೊಲೆಯ ಹಿಂದಿನ ದಿನ ಯುವತಿಗೆ ಒಂದು ಸಾವಿರ ಕಳುಹಿಸಿದ್ದ. ಫೋನ್ ಪೇ ಮೂಲಕ ಆರೋಪಿ ವಿಶ್ವ 1000 ರೂಪಾಯಿ ಕಳುಹಿಸಿದ್ದ. 1000 ಹಣ ಪಡೆದು ಅಂಜಲಿ ನಂಬರ್ ಬ್ಲಾಕ್ ಮಾಡಿದ್ದಳು.ಈ ಒಂದು ಕಾರಣಕ್ಕೆ ಸಿಟ್ಟು ಬಂದು ಕೊಲೆ ಮಾಡಿದ್ದಾಗಿ ಹೇಳಿಕೆ ನೀಡಿದ್ದಾನೆ. ಸಿಐಡಿ ಅಧಿಕಾರಿಗಳ ಬಳಿ ಆರೋಪಿ ವಿಶ್ವ ಕೊಲೆಯ ರಹಸ್ಯ ಬಾಯಿ ಬಿಟ್ಟಿದ್ದಾನೆ. ಕಿಮ್ಸ್ ಆಸ್ಪತ್ರೆಯಲ್ಲಿ ಸಿಐಡಿ ಅಧಿಕಾರಿಗಳು ಆರೋಪಿ ಗಿರೀಶ್ ನನ್ನ ವಿಚಾರಣೆ ನಡೆಸಿದ್ದಾರೆ.

Read More