Subscribe to Updates
Get the latest creative news from FooBar about art, design and business.
Author: ಸುರೇಶ್
"ಕನ್ನಡ ನ್ಯೂಸ್ ನೌ ಜಾಲತಾಣದ ಮುಖ್ಯ ಸಂಪಾದಕರಾದ ಸುರೇಶ್ ಅವರು ಕಳೆದ 4 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದಾರೆ. ಸರ್ಕಾರದ ಯೋಜನೆಗಳು, ಶಿಕ್ಷಣ ಮತ್ತು ಪ್ರಚಲಿತ ವಿದ್ಯಮಾನಗಳನ್ನು ಸಾಮಾನ್ಯ ಜನರಿಗೂ ಅರ್ಥವಾಗುವಂತೆ ವಿವರಿಸುವುದು ಇವರ ವಿಶೇಷತೆ. ಈ ಮೊದಲು ವಿವಿಧ ವೆಬ್‌ಸೈಟ್‌ಗಳಲ್ಲಿ ನಾಗರಿಕ ಸಮಸ್ಯೆಗಳ ಬಗ್ಗೆ ವರದಿಗಾರರಾಗಿ ಕೆಲಸ ಮಾಡಿರುವ ಇವರು, ಸಮಯೋಚಿತ ಹಾಗೂ ವಿಶ್ವಾಸಾರ್ಹ ಮಾಹಿತಿ ನೀಡುವ ಮೂಲಕ ಓದುಗರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಡಿಜಿಟಲ್ ಸಾಕ್ಷರತೆ ಇವರ ನೆಚ್ಚಿನ ವಿಷಯಗಳಲ್ಲೊಂದು
ಮಧ್ಯಪ್ರದೇಶ : ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯಲ್ಲಿ ಅತ್ಯಂತ ಧೃತಿಗೆಡಿಸುವ ಮತ್ತು ಆಘಾತಕಾರಿ ಘಟನೆಯೊಂದು ಸಂಭವಿಸಿದೆ. ಇಲ್ಲಿನ ಬರ್ವಾದಲ್ಲಿರುವ ಸಿಐಎಸ್‌ಎಫ್ (CISF) ಆವರಣದಲ್ಲಿ ಆಟವಾಡುತ್ತಿದ್ದ 15 ವರ್ಷದ ಅಪ್ರಾಪ್ತ ಬಾಲಕನೊಬ್ಬ ಭೀಕರ ಅಪಘಾತಕ್ಕೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದಾನೆ. ಶುಕ್ರವಾರ ತಡರಾತ್ರಿ ಈ ದುರದೃಷ್ಟಕರ ಘಟನೆ ಬೆಳಕಿಗೆ ಬಂದಿದ್ದು, ಸದ್ಯ ಬಾಲಕ ಸಾವು-ಬದುಕಿನ ನಡುವೆ ಹೋರಾಡುತ್ತಿದ್ದಾನೆ. ಲಭ್ಯವಿರುವ ಮಾಹಿತಿ ಪ್ರಕಾರ, ಬಾಲಕನು ಎಂದಿನಂತೆ ತನ್ನ ಸ್ನೇಹಿತರೊಂದಿಗೆ ಸಿಐಎಸ್‌ಎಫ್ ಆವರಣದಲ್ಲಿ ಆಟವಾಡುತ್ತಿದ್ದನು. ಆಟದ ಜೋಶ್‌ನಲ್ಲಿ ಬಾಲಕನು ತನ್ನ ಚಪ್ಪಲಿಯನ್ನು ಬೌಂಡರಿ ಗೋಡೆಯ ಆಚೆಗೆ ಎಸೆದಿದ್ದನು. ಅದನ್ನು ಮರಳಿ ತರಲು ಸುಮಾರು 8 ಅಡಿ ಎತ್ತರದ ಬೌಂಡರಿ ಗೋಡೆಯನ್ನು ಹತ್ತಿ ಆಚೆ ಜಿಗಿದಿದ್ದಾನೆ. ಆದರೆ, ಚಪ್ಪಲಿ ತಗೆದುಕೊಂಡು ವಾಪಸ್ ಗೋಡೆ ಹತ್ತಿ ಬರುವಾಗ ವಿಧಿಯ ಆಟ ಬದಲಾಗಿದೆ. ಬಾಲಕನು ಗೋಡೆ ಹತ್ತಿ ಹಿಂತಿರುಗುವಾಗ ಆಕಸ್ಮಿಕವಾಗಿ ಆತನ ಕಾಲು ಸಿಲುಕಿಕೊಂಡಿದೆ. ಪರಿಣಾಮವಾಗಿ ಆತ ನಿಯಂತ್ರಣ ತಪ್ಪಿ ಕೆಳಗೆ ಬಿದ್ದಿದ್ದು, ಅದೇ ವೇಳೆ ಅಲ್ಲೇ ಸಮೀಪದಲ್ಲಿದ್ದ ಹರಿತವಾದ ಕಬ್ಬಿಣದ ರಾಡ್…
ನವದೆಹಲಿ: ದೇಶದ ರಾಜಧಾನಿ ದೆಹಲಿಯಲ್ಲಿ ಮಾಲಿನ್ಯ ನಿಯಂತ್ರಣ ಹಾಗೂ ಇಂಧನ ಉಳಿತಾಯದ ನಿಟ್ಟಿನಲ್ಲಿ ದೆಹಲಿ ಸರ್ಕಾರ ಮಹತ್ವದ ನಿರ್ಧಾರವೊಂದನ್ನು ಕೈಗೊಂಡಿದೆ. ಇಂದಿನಿಂದಲೇ ಜಾರಿಗೆ ಬರುವಂತೆ ಸರ್ಕಾರಿ ಕಚೇರಿಗಳ ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಗೆ ವಾರದಲ್ಲಿ ಎರಡು ದಿನ ‘ವರ್ಕ್ ಫ್ರಮ್ ಹೋಮ್’ (ಮನೆಯಿಂದಲೇ ಕೆಲಸ) ವ್ಯವಸ್ಥೆಯನ್ನು ಕಡ್ಡಾಯಗೊಳಿಸಿ ಆದೇಶ ಹೊರಡಿಸಿದೆ. ಸರ್ಕಾರದ ಹೊಸ ನಿಯಮಾವಳಿಗಳ ಪ್ರಕಾರ, ಇನ್ನು ಮುಂದೆ ಪ್ರತಿ ವಾರ ಇಬ್ಬರು ದಿನಗಳ ಕಾಲ ಸಿಬ್ಬಂದಿ ಕಚೇರಿಗೆ ಬರುವ ಅಗತ್ಯವಿರುವುದಿಲ್ಲ. ವಾರದ ಪ್ರತಿ ಬುಧವಾರ ಮತ್ತು ಶನಿವಾರ ಅಧಿಕಾರಿಗಳು ಹಾಗೂ ನೌಕರರು ಮನೆಯಿಂದಲೇ ತಮ್ಮ ಕಚೇರಿ ಕೆಲಸಗಳನ್ನು ನಿರ್ವಹಿಸಬೇಕಾಗುತ್ತದೆ. ತುರ್ತು ಸೇವೆಗಳಿಗೆ ವಿನಾಯಿತಿ ದೆಹಲಿ ಸರ್ಕಾರದ ಈ ಹೊಸ ‘ವರ್ಕ್ ಫ್ರಮ್ ಹೋಮ್’ ಆದೇಶವು ಎಲ್ಲಾ ಇಲಾಖೆಗಳಿಗೂ ಅನ್ವಯಿಸುವುದಿಲ್ಲ. ಸಾರ್ವಜನಿಕರ ಹಿತದೃಷ್ಟಿಯಿಂದ ಅತ್ಯಗತ್ಯ ಹಾಗೂ ತುರ್ತು ಸೇವೆಗಳನ್ನು ಒದಗಿಸುವ ಆರೋಗ್ಯ ಇಲಾಖೆ ಸೇರಿದಂತೆ ಕೆಲವು ಪ್ರಮುಖ ಇಲಾಖೆಗಳಿಗೆ ಈ ನಿಯಮದಿಂದ ವಿನಾಯಿತಿ ನೀಡಲಾಗಿದೆ. ಇವುಗಳನ್ನು ಹೊರತುಪಡಿಸಿ ಉಳಿದ ಎಲ್ಲಾ ಸರ್ಕಾರಿ ಕಚೇರಿಗಳ…
ಬೆಂಗಳೂರು: ಭ್ರಷ್ಟಾಚಾರ ಪ್ರಕರಣವೊಂದರಲ್ಲಿ ಆರೋಪಿಯು ಸರ್ಕಾರಿ ಸೇವಕನಲ್ಲ, ಬದಲಾಗಿ ಖಾಸಗಿ ವ್ಯಕ್ತಿಯಾಗಿದ್ದಾನೆ ಹಾಗೂ ಆತ ‘ರೆಡ್ ಹ್ಯಾಂಡ್’ ಆಗಿ (ಲಂಚ ಪಡೆಯುವಾಗ) ಸಿಕ್ಕಿಬಿದ್ದಿಲ್ಲ ಅಥವಾ ಆತನಿಂದ ಲಂಚದ ಹಣ ವಶಪಡಿಸಿಕೊಂಡಿಲ್ಲ ಎಂಬ ಕಾರಣಗಳನ್ನು ಮುಂದಿಟ್ಟುಕೊಂಡು ತನಿಖೆಯನ್ನು ರದ್ದುಪಡಿಸಲು ಸಾಧ್ಯವಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಮಹತ್ವದ ಆದೇಶ ನೀಡಿದೆ. ಭ್ರಷ್ಟಾಚಾರದ ಜಾಲದಲ್ಲಿ ಮಧ್ಯವರ್ತಿಗಳಾಗಿ ಕೆಲಸ ಮಾಡುವವರ ವಿರುದ್ಧವೂ ಕಠಿಣ ಕಾನೂನು ಕ್ರಮ ಕೈಗೊಳ್ಳಬಹುದು ಎಂಬುದನ್ನು ನ್ಯಾಯಾಲಯ ಈ ಮೂಲಕ ಸ್ಪಷ್ಟಪಡಿಸಿದೆ. ಬಸವೇಶ್ವರ ನಗರದ ನಿವಾಸಿ ಹಾಗೂ ‘ದಿ ಟ್ರಾನ್ಸ್‌ಪೋರ್ಟ್’ ಕಂಪನಿಯ ಮಾಲೀಕರಾದ ಕೆ.ಎಸ್. ಗಂಗಾಧರಯ್ಯ ಎಂಬುವರು ತಮಗೆ ಸಂಬಂಧಿಸಿದ ಭ್ರಷ್ಟಾಚಾರ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ಸುದೀರ್ಘ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠವು, ಅರ್ಜಿದಾರರ ಮನವಿಯನ್ನು ಪುರಸ್ಕರಿಸಲು ನಿರಾಕರಿಸಿ ತನಿಖೆಗೆ ಹಸಿರು ನಿಶಾನೆ ನೀಡಿದೆ. ಪ್ರಕರಣದ ಹಿನ್ನೆಲೆಯ ಪ್ರಕಾರ, ಅರ್ಜಿದಾರ ಗಂಗಾಧರಯ್ಯ ಅವರು ಸರ್ಕಾರಿ ಅಧಿಕಾರಿಗಳಿಗೆ ತಲುಪಿಸಬೇಕಾಗಿದ್ದ ಲಂಚದ ಹಣವನ್ನು ಸಂಗ್ರಹಿಸಿ,…
ನವದೆಹಲಿ: ಜಾಗತಿಕ ರಾಜಕಾರಣದಲ್ಲಿ ತಲ್ಲಣ ಸೃಷ್ಟಿಸಿರುವ ಇರಾನ್ ಮತ್ತು ಅಮೆರಿಕ ನಡುವಿನ ಯುದ್ಧದ ಕಾರ್ಮೋಡಗಳು ಈಗ ಜಾಗತಿಕ ಮಾರುಕಟ್ಟೆಯ ಮೇಲೆ ತೀವ್ರ ಪರಿಣಾಮ ಬೀರಲಾರಂಭಿಸಿವೆ. ಎರಡೂ ದೇಶಗಳ ನಡುವಿನ ಸಂಘರ್ಷದಿಂದಾಗಿ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ (Crude Oil) ಬೆಲೆ ದಿಢೀರ್ ಗಗನಕ್ಕೇರಿದೆ. ಈ ಜಾಗತಿಕ ಬೆಳವಣಿಗೆಯು ಭಾರತೀಯ ಆರ್ಥಿಕತೆಯ ಮೇಲೂ ಭಾರಿ ಪ್ರಭಾವ ಬೀರುವ ಮುನ್ಸೂಚನೆ ನೀಡಿದ್ದು, ದೇಶದಲ್ಲಿ ಇಂಧನ ದರಗಳು ಮತ್ತಷ್ಟು ದುಬಾರಿಯಾಗುವ ಆತಂಕ ಎದುರಾಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗುವ ಭೀತಿಯಿಂದಾಗಿ, ಸದ್ಯ ಪ್ರತಿ ಬ್ಯಾರಲ್ ಕಚ್ಚಾ ತೈಲದ ದರವು ಬರೋಬ್ಬರಿ 110 ಡಾಲರ್ ತಲುಪಿದೆ. ಯುದ್ಧದ ತೀವ್ರತೆ ಹೆಚ್ಚಾದಷ್ಟೂ ತೈಲ ಉತ್ಪಾದನೆ ಮತ್ತು ಸಾಗಣೆಗೆ ಅಡಚಣೆಯಾಗಲಿದ್ದು, ಮುಂಬರುವ ದಿನಗಳಲ್ಲಿ ಈ ದರ ಮತ್ತಷ್ಟು ಹೆಚ್ಚಾಗಬಹುದು ಎಂದು ಜಾಗತಿಕ ತೈಲ ಮಾರುಕಟ್ಟೆ ತಜ್ಞರು ಅಂದಾಜಿಸಿದ್ದಾರೆ. ಇದು ತೈಲ ಆಮದನ್ನೇ ಪ್ರಮುಖವಾಗಿ ನೆಚ್ಚಿಕೊಂಡಿರುವ ಭಾರತದಂತಹ ದೇಶಗಳಿಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಭಾರತವು ತನ್ನ ಒಟ್ಟು…
ನವದೆಹಲಿ : ಗುಣವಾಗದಷ್ಟು ರೋಗಗ್ರಸ್ತವಾಗಿರುವ, ವ್ಯಗ್ರವಾಗಿ ವರ್ತಿಸುವ ಹಾಗೂ ಹುಚ್ಚು ಹಿಡಿದ ಬೀದಿ ನಾಯಿಗಳಿಗೆ ದಯಾಮರಣವನ್ನು ನೀಡಲು ಸರ್ವೋಚ್ಚ ನ್ಯಾಯಾಲಯ ಮಂಗಳವಾರ ಅನುಮತಿ ನೀಡಿದೆ. ಕೋರ್ಟ್ ಇಂಥ ಆದೇಶ ಮಾಡಿದ್ದು ದೇಶದ ಇತಿಹಾಸದಲ್ಲಿ ಮೊದಲು. ಇದೇ ಕಳೆದ ವರ್ಷ ಮಕ್ಕಳ ಮೇಲೆ ಬೀದಿ ನಾಯಿಗಳ ದಾಳಿ ಪ್ರಕರಣಗಳು ವಿಪರೀತವಾದ ಸಂದರ್ಭದಲ್ಲಿ ಸುಪ್ರೀಂ ಕೋರ್ಟ್ ಜು.28ರಂದು ಸ್ವಯಂಪ್ರೇರಿತವಾಗಿ ಪ್ರಕರಣವನ್ನು ದಾಖಲಿಸಿ ಕೊಂಡಿತ್ತು. ಈ ಬಗ್ಗೆ ನ್ಯಾ| ವಿಕ್ರಮ್ ನಾಥ್, ಸಂದೀಪ್ ಮೆಹ್ರಾ, ಎನ್.ವಿ. ಅಂಜಾರಿಯಾ ಅವರ ಪೀಠ ತೀರ್ಪು ಪ್ರಕಟಿಸಿತು. ‘ಇಂಥನಾಯಿಗಳಿಂದ ಮನುಷ್ಯರಿಗೆ ಆಗಬಹುದಾದಹಾನಿಯನ್ನು ತಪ್ಪಿಸುವ ಉದ್ದೇಶದೊಂದಿಗೆ ಈ ನಿರ್ದೇಶನ ನೀಡುತ್ತಿದ್ದೇವೆ’ ಎಂದು ನ್ಯಾಯಪೀಠ ಹೇಳಿತು. ಬೀದಿನಾಯಿಗಳ ಸಂಖ್ಯೆ ವಿಪರೀತ ಹೆಚ್ಚಾಗಿರುವ ಪ್ರದೇಶಗಳಲ್ಲಿ ಹಾಗೂ ನಾಯಿ ಕಡಿತ ಅಥವಾ ಆಕ್ರಮಣಕಾರಿ ದಾಳಿಗಳು ಆಗಾಗ್ಗೆ ಸಂಭವಿಸುತ್ತಿರುವ ಪ್ರದೇಶಗಳಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಅರ್ಹ ಪಶುವೈದ್ಯ ತಜ್ಞರಿಂದ ಸೂಕ್ತ ಮೌಲ್ಯಮಾಪನ ನಡೆಸಬೇಕು. ಅದರಲ್ಲಿ ಕ್ರೋಧೋನ್ಮತ್ತ ನಾಯಿಗಳು, ಗುಣಪಡಿಸಲಾಗದಷ್ಟು ಅನಾರೋಗ್ಯಕರವಾಗಿರುವಹಾಗೂ ಹುಚ್ಚುನಾಯಿಗಳಿವೆಯೇ ಎಂಬುದನ್ನು ನಿಯಮಾನುಸಾರ ಖಚಿತಪಡಿಸಿಕೊಳ್ಳಬೇಕು. ಅಂಥ ನಾಯಿಗಳನ್ನು…
ಬೆಂಗಳೂರು : ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಇಂದು ಸಾರಿಗೆ ನೌಕರರು ರಾಜ್ಯಾದ್ಯಂತ ಮುಷ್ಕರ ನಡೆಸಲು ತೀರ್ಮಾನಿಸಿದರು. ಆದರೆ ನಿನ್ನೆ ಹೈಕೋರ್ಟ್ ಬಸ್ ಮುಷ್ಕರ ಮಾಡಬೇಡಿ ಎಂದು ಖಡಕ್ ಸೂಚನೆ ನೀಡಿತು. ಇದರ ಬೆನ್ನಲ್ಲೇ ಸಾರಿಗೆ ನೌಕರರು ಸಹ ಸೈಲೆಂಟಾಗಿದ್ದು ಎಂದಿನಂತೆ ರಾಜ್ಯಾದ್ಯಂತ ಇಂದು ಬಸ್ ಸಂಚಾರ ನಡೆಯಲಿದೆ. ಹೈಕೋರ್ಟ್ ಹೇಳಿದ್ದೇನು? ಸಾರಿಗೆ ನೌಕರರ ಮುಷ್ಕರ ಪ್ರಶ್ನಿಸಿ ಪಿಐಎಲ್ ಸಲ್ಲಿಕೆಯಾಗಿತ್ತು. ನಿನ್ನೆ ಹೈ ಕೋರ್ಟ್ ನಲ್ಲಿ ಈ ಒಂದು ಪಿಐಎಲ್ ವಿಚಾರಣೆ ನಡೆಯಿತು. ವೇದಾವತಿ ಮತ್ತು ಲೆಕ್ಕಸಂದ್ರದ ಶ್ರೀಧರ್ ಎಂಬುವವರು PIL ಸಲ್ಲಿಸಿದರು. ನಾಳೆಯ ಸಾರಿಗೆ ನೌಕರರ ಮುಷ್ಕರ ನಿರ್ಭಂಧಿಸಲು ಮನವಿ ಮಾಡಿದ್ದರು.ಮನೆ ಕೆಲಸದ ಮಹಿಳೆ ಹಾಗೂ ಕಟ್ಟಡ ಕಾರ್ಮಿಕ ಅರ್ಜಿ ಸಲ್ಲಿಸಿದ್ದಾರೆ. ಇವರ ಪರ ವಕೀಲ ವಿಕ್ರಂ ಹುಯಿಳಗೊಳ ವಾದಿಸಿದರು. ಪಿಐಎಲ್ ಅರ್ಜಿದಾರರ ಬಗ್ಗೆ ಹೈಕೋರ್ಟ್ ಇದೆ ವೇಳೆ ಅಚ್ಚರಿ ವ್ಯಕ್ತಪಡಿಸಿತು. ವಿಚಾರಣೆ ನಡೆಸಿದ ಬಳಿಕ ಬಸ್ ಮುಷ್ಕರ ಮಾಡಬೇಡಿ ಎಂದು ಸಾರಿಗೆ ಮುಷ್ಕರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದ್ದು, ಸಾರಿಗೆ…
ಬೆಂಗಳೂರು: ದೇಶವ್ಯಾಪಿ ಔಷಧ ಮಳಿಗೆಗಳ ಬಂದ್‌ಗೆ ಅಖಿಲ ಭಾರತ ರಸಾಯನಶಾಸ್ತ್ರಜ್ಞರು ಮತ್ತು ಔಷಧವ್ಯಾಪಾರಿಗಳ ಸಂಘಟನೆ (AIOCD) ಕರೆ ನೀಡಿದ್ದರೂ ಸಹ, ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಇಂದು ಮೆಡಿಕಲ್ ಶಾಪ್‌ಗಳು ಕ್ಲೋಸ್ ಆಗುವುದು ಬಹುತೇಕ ಅನುಮಾನವಾಗಿದೆ. ರಾಜ್ಯದ ಪ್ರಮುಖ ಔಷಧ ವ್ಯಾಪಾರಿಗಳ ಸಂಘಟನೆಗಳ ನಡುವೆ ಒಮ್ಮತ ಮೂಡದ ಹಿನ್ನೆಲೆಯಲ್ಲಿ, ರಾಜಧಾನಿಯಲ್ಲಿ ಎಂದಿನಂತೆ ಮೆಡಿಕಲ್ ಶಾಪ್‌ಗಳು ಕಾರ್ಯನಿರ್ವಹಿಸಲಿವೆ ಎಂದು ತಿಳಿದುಬಂದಿದೆ. ರಾಜ್ಯದ ಎರಡು ಪ್ರಮುಖ ಸಂಘಟನೆಗಳ ನಡುವೆ ಏರ್ಪಟ್ಟಿರುವ ಆಂತರಿಕ ಕಿತ್ತಾಟವೇ ಈ ಗೊಂದಲಕ್ಕೆ ಮುಖ್ಯ ಕಾರಣ ಎನ್ನಲಾಗಿದೆ. ರಾಷ್ಟ್ರೀಯ ಸಂಘಟನೆಯಾದ AIOCD ನೀಡಿದ್ದ ಬಂದ್ ಕರೆಗೆ ಕರ್ನಾಟಕ ರಸಾಯನಶಾಸ್ತ್ರಜ್ಞರು ಮತ್ತು ಔಷಧವ್ಯಾಪಾರಿಗಳ ಸಂಘ (KCDA) ಸಂಪೂರ್ಣ ಬೆಂಬಲ ಘೋಷಿಸಿತ್ತು. ಆದರೆ, ಮತ್ತೊಂದೆಡೆ ಕರ್ನಾಟಕ ಫಾರ್ಮಸಿಸ್ಟ್ಸ್ ಮತ್ತು ಡ್ರಗ್ಗಿಸ್ಟ್ಸ್ ಅಸೋಸಿಯೇಷನ್ (KPRDO) ಇದಕ್ಕೆ ಬೆಂಬಲ ನೀಡಲು ನಿರಾಕರಿಸಿದೆ. ಈ ಭಿನ್ನಾಭಿಪ್ರಾಯದಿಂದಾಗಿ ಬಂದ್ ಸಂಪೂರ್ಣ ಯಶಸ್ವಿಯಾಗುವುದು ಅನುಮಾನವಾಗಿದೆ. ಸಾರ್ವಜನಿಕರಿಗೆ ನಿರಾಳ: ಮುಕ್ತವಾಗಿರಲಿವೆ ಪ್ರಮುಖ ಔಷಧ ಮಳಿಗೆಗಳು ಸಂಘಟನೆಗಳ ನಡುವಿನ ಈ ಆಂತರಿಕ ಗೊಂದಲ ಹಾಗೂ ಭಿನ್ನಾಭಿಪ್ರಾಯದ…
ಬೆಂಗಳೂರು: ಕರ್ನಾಟಕದ ವಸತಿ ಶಾಲೆಗಳಲ್ಲಿ 6ನೇ ತರಗತಿ ಪ್ರವೇಶಾತಿಗಾಗಿ ಕಾಯುತ್ತಿದ್ದ ಪೋಷಕರು ಮತ್ತು ವಿದ್ಯಾರ್ಥಿಗಳಿಗೆ ಪ್ರಮುಖ ಸುದ್ದಿಯೊಂದು ಹೊರಬಿದ್ದಿದೆ. ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ (KREIS) ಅಡಿಯಲ್ಲಿ ಬರುವ ವಿವಿಧ ಪ್ರತಿಷ್ಠಿತ ಸರ್ಕಾರಿ ವಸತಿ ಶಾಲೆಗಳ ಪ್ರವೇಶಕ್ಕೆ ಸಂಬಂಧಿಸಿದಂತೆ, ಮೊದಲ ಸುತ್ತಿನ ತಾತ್ಕಾಲಿಕ ಸೀಟು ಹಂಚಿಕೆ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ಅಧಿಕೃತವಾಗಿ ಪ್ರಕಟಿಸಿದೆ. ಈ ಸೀಟು ಹಂಚಿಕೆಯು ರಾಜ್ಯದ ಪ್ರಮುಖ ವಸತಿ ಶಾಲೆಗಳಾದ ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚೆನ್ನಮ್ಮ, ಡಾ. ಬಿ.ಆರ್. ಅಂಬೇಡ್ಕರ್ ಹಾಗೂ ಅಟಲ್ ಬಿಹಾರಿ ವಾಜಪೇಯಿ ಸೇರಿದಂತೆ ಸರ್ಕಾರದ ಇತರೆ ಹಿಂದುಳಿದ ವರ್ಗಗಳ ಮತ್ತು ಪರಿಶಿಷ್ಟ ಜಾತಿ/ಪಂಗಡಗಳ ಕಲ್ಯಾಣ ವಸತಿ ಶಾಲೆಗಳಿಗೆ ಅನ್ವಯಿಸಲಿದೆ. ಅರ್ಹತೆಯ ಆಧಾರದ ಮೇಲೆ ವಿದ್ಯಾರ್ಥಿಗಳಿಗೆ ಪ್ರಸ್ತುತ ಸೀಟುಗಳನ್ನು ತಾತ್ಕಾಲಿಕವಾಗಿ ಹಂಚಿಕೆ ಮಾಡಲಾಗಿದೆ. ಆಕ್ಷೇಪಣೆ ಸಲ್ಲಿಕೆಗೆ ಮೇ 21 ಕೊನೆಯ ದಿನ ಪ್ರಕಟಿಸಲಾಗಿರುವ ಈ ತಾತ್ಕಾಲಿಕ ಸೀಟು ಹಂಚಿಕೆ ಪಟ್ಟಿಯಲ್ಲಿ ಏನಾದರೂ ದೋಷಗಳು ಕಂಡುಬಂದಲ್ಲಿ ಅಥವಾ ಆಕ್ಷೇಪಣೆಗಳು ಇದ್ದಲ್ಲಿ ಸಾರ್ವಜನಿಕರು…
ಉತ್ತರಕನ್ನಡ : ರಾಜ್ಯದ ಕರಾವಳಿ ಭಾಗದಲ್ಲಿ ಹವಾಮಾನ ವೈಪರಿತ್ಯ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ, ಮುಂಜಾಗ್ರತಾ ಕ್ರಮವಾಗಿ ಉತ್ತರಕನ್ನಡ ಜಿಲ್ಲಾದ್ಯಂತ ಎಲ್ಲಾ ರೀತಿಯ ಜಲಸಾಹಸ ಕ್ರೀಡೆಗಳಿಗೆ (Water Sports) ತಕ್ಷಣದಿಂದ ಜಾರಿಗೆ ಬರುವಂತೆ ಸಂಪೂರ್ಣ ನಿರ್ಬಂಧ ವಿಧಿಸಲಾಗಿದೆ. ಪ್ರವಾಸಿಗರ ಸುರಕ್ಷತೆಯ ದೃಷ್ಟಿಯಿಂದ ಜಿಲ್ಲಾಡಳಿತ ಹಾಗೂ ಜಲಸಾಹಸ ಕ್ರೀಡೆ ನಿರ್ವಹಣೆ ಮತ್ತು ಮೇಲುಸ್ತುವಾರಿ ಸಮಿತಿಯು ಈ ಮಹತ್ವದ ಆದೇಶವನ್ನು ಹೊರಡಿಸಿದೆ. ಅರಬ್ಬಿ ಸಮುದ್ರ ಸೇರಿ ಪ್ರಮುಖ ನದಿಗಳಲ್ಲಿ ನಿಷೇಧ: ಪ್ರಕೃತಿ ವಿಕೋಪ ಹಾಗೂ ಸಮುದ್ರದಲ್ಲಿನ ಹಠಾತ್ ಏರಿಳಿತಗಳಿಂದ ಸಂಭವಿಸಬಹುದಾದ ಅನಾಹುತಗಳನ್ನು ತಪ್ಪಿಸಲು ಈ ಕಠಿಣ ಕ್ರಮ ಕೈಗೊಳ್ಳಲಾಗಿದೆ. ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣಗಳಾದ ಅರಬ್ಬಿ ಸಮುದ್ರದ ಕಡಲತೀರಗಳು, ಶರಾವತಿ ನದಿಯ ಹಿನ್ನೀರು (Backwaters) ಹಾಗೂ ಅಘನಾಶಿನಿ ನದಿಯ ಪಾತ್ರದಲ್ಲಿ ನಡೆಯುತ್ತಿದ್ದ ಎಲ್ಲಾ ಬಗೆಯ ಜಲಸಾಹಸ ಚಟುವಟಿಕೆಗಳನ್ನು ತಕ್ಷಣವೇ ಸ್ಥಗಿತಗೊಳಿಸುವಂತೆ ಸೂಚಿಸಲಾಗಿದೆ. ಮಳೆಗಾಲ ಮುಗಿಯುವವರೆಗೆ ಆದೇಶ ಜಾರಿ: ಪ್ರಸ್ತುತ ಹವಾಮಾನ ವೈಪರಿತ್ಯದ ಮುನ್ಸೂಚನೆ ಇರುವುದರಿಂದ, ಇಂದಿನಿಂದ ಆರಂಭಗೊಂಡು ಮುಂಬರುವ ಸಂಪೂರ್ಣ ಮಳೆಗಾಲ ಮುಕ್ತಾಯವಾಗುವವರೆಗೆ ಈ ಕ್ರೀಡೆಗಳ ಮೇಲಿನ…
ಬಳ್ಳಾರಿ : ಬಳ್ಳಾರಿ ಜಿಲ್ಲೆಯ ಕಂಪ್ಲಿ ಪಟ್ಟಣದಲ್ಲಿ ಪತಿಯ ಹಾಗೂ ಅತ್ತೆಯ ಕಿರುಕುಳಕ್ಕೆ ಬೇಸತ್ತು ಗೃಹಿಣಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಅತ್ಯಂತ ಕರುಣಾಜನಕ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಪ್ರೀತಿ ಎಂಬ ಸುಂದರ ಬದುಕಿನ ಕನಸು ಹೊತ್ತು ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವತಿ, ಕೊನೆಗೆ ಪತಿ ಹಾಗೂ ಅತ್ತೆಯ ಮಾನಸಿಕ ಹಿಂಸೆ ತಾಳಲಾರದೆ ಕಂಪ್ಲಿ ಪಟ್ಟಣದ ತನ್ನ ತವರು ಮನೆಯಲ್ಲಿಯೇ ಜೀವನ ಕೊನೆಗಾಣಿಸಿಕೊಂಡಿದ್ದಾರೆ. ಮೃತ ದುರ್ದೈವಿಯನ್ನು ಐಶ್ವರ್ಯ ಎಂದು ಗುರುತಿಸಲಾಗಿದೆ. ಇವರು ಪಶುಸಂಗೋಪನೆ ಇಲಾಖೆಯಲ್ಲಿ ವೈದ್ಯರಾಗಿ ಕಾರ್ಯನಿರ್ವಹಿಸುತ್ತಿರುವ ಪ್ರದೀಪ್ ಕುಮಾರ್ ಎಂಬುವವರನ್ನು ಪ್ರೀತಿಸಿ ಮದುವೆಯಾಗಿದ್ದರು. ಮದುವೆಯಾದ ಆರಂಭದಲ್ಲಿ ಎಲ್ಲವೂ ಚೆನ್ನಾಗಿಯೇ ಇತ್ತಾದರೂ, ಬೆಂಗಳೂರಿನಲ್ಲಿ ಸಂಸಾರ ಹೂಡಿದ ಕೆಲವೇ ದಿನಗಳಲ್ಲಿ ಐಶ್ವರ್ಯ ಅವರ ಪಾಲಿಗೆ ವೈವಾಹಿಕ ಜೀವನ ನರಕಸದೃಶವಾಗಿ ಮಾರ್ಪಟ್ಟಿತ್ತು ಎಂದು ತಿಳಿದುಬಂದಿದೆ. ಆರೋಪಗಳ ಪ್ರಕಾರ, ಮದುವೆಯಾದ ಮೊದಲ ದಿನದಿಂದಲೂ ಐಶ್ವರ್ಯ ಅವರಿಗೆ ಅತ್ತೆಯಿಂದ ನಿರಂತರವಾಗಿ ಮಾನಸಿಕ ಕಿರುಕುಳ ಎದುರಾಗುತ್ತಿತ್ತು. ಸಣ್ಣಪುಟ್ಟ ವಿಷಯಗಳಿಗೂ ಅತ್ತೆ ಹಿಂಸೆ ನೀಡುತ್ತಿದ್ದರು. ಇಂತಹ ಕಷ್ಟದ ಸಮಯದಲ್ಲಿ ಪತ್ನಿಯ ಬೆಂಬಲಕ್ಕೆ…














