Subscribe to Updates
Get the latest creative news from FooBar about art, design and business.
Author: ಸುರೇಶ್
"ಕನ್ನಡ ನ್ಯೂಸ್ ನೌ ಜಾಲತಾಣದ ಮುಖ್ಯ ಸಂಪಾದಕರಾದ ಸುರೇಶ್ ಅವರು ಕಳೆದ 4 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದಾರೆ. ಸರ್ಕಾರದ ಯೋಜನೆಗಳು, ಶಿಕ್ಷಣ ಮತ್ತು ಪ್ರಚಲಿತ ವಿದ್ಯಮಾನಗಳನ್ನು ಸಾಮಾನ್ಯ ಜನರಿಗೂ ಅರ್ಥವಾಗುವಂತೆ ವಿವರಿಸುವುದು ಇವರ ವಿಶೇಷತೆ. ಈ ಮೊದಲು ವಿವಿಧ ವೆಬ್‌ಸೈಟ್‌ಗಳಲ್ಲಿ ನಾಗರಿಕ ಸಮಸ್ಯೆಗಳ ಬಗ್ಗೆ ವರದಿಗಾರರಾಗಿ ಕೆಲಸ ಮಾಡಿರುವ ಇವರು, ಸಮಯೋಚಿತ ಹಾಗೂ ವಿಶ್ವಾಸಾರ್ಹ ಮಾಹಿತಿ ನೀಡುವ ಮೂಲಕ ಓದುಗರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಡಿಜಿಟಲ್ ಸಾಕ್ಷರತೆ ಇವರ ನೆಚ್ಚಿನ ವಿಷಯಗಳಲ್ಲೊಂದು
ದಕ್ಷಿಣಕನ್ನಡ : ರಾಜ್ಯದಲ್ಲಿ ಮತ್ತೊಂದು ಭೀಕರವಾದ ಅಪಘಾತ ಸಂಭವಿಸಿದ್ದು, ದಕ್ಷಿಣಕನ್ನಡ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತದಲ್ಲಿ ಸ್ಥಳದಲ್ಲೆ ಮೂವರು ಸಾವನ್ನಪ್ಪಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿಸಿ ರೋಡ್ನ ಸರ್ಕಲ್ ನಲ್ಲಿ ಈ ಒಂದು ಅಪಘಾತ ಸಂಭವಿಸಿದೆ. ಮೃತರು ಬೆಂಗಳೂರು ಮೂಲದವರು ಎಂದು ತಿಳಿದು ಬಂದಿದೆ. ಬಿಸಿ ರೋಡ್ನ ಎನ್. ಜಿ. ರೋಡ್ ನಲ್ಲಿರುವ ಫುಟ್ ಪಾತ್ ಗೆ ಡಿಕ್ಕಿ ಹೊಡೆದಿದೆ. ಕಾರಿನಲ್ಲಿದ್ದ ಮೂವರು ಸ್ಥಳದಲ್ಲಿ ಸಾವನಪ್ಪಿದ್ದು ಆರು ಜನರಿಗೆ ಗಂಭೀರವಾದ ಗಾಯಗಳಾಗಿವೆ.ಸದ್ಯಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು ಪರಿಶೀಲನೆ ನಡೆಸುತ್ತಿದ್ದಾರೆ
ಬೆಂಗಳೂರು : ಬಿಜೆಪಿ-ಜೆಡಿಎಸ್ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಬಾಯಿಯನ್ನೇ ಬಿಡುತ್ತಿಲ್ಲ. ಅಲ್ಲದೇ ಕಬ್ಬು ಬೆಳಗಾರರಿಗೆ ದ್ರೋಹ ಬಗೆದಿರುವುದೂ ಕೇಂದ್ರ ಸರ್ಕಾರ. ಈ ಬಗ್ಗೆ ಬಿಜೆಪಿ, ಜೆಡಿಎಸ್ ಸಂಸದರು ಬಾಯಿ ಬಿಡುತ್ತಿಲ್ಲ. ರಾಜ್ಯದಲ್ಲಿ 2028ರಲ್ಲೂ ಕಾಂಗ್ರೆಸ್ಸೇ ಅಧಿಕಾರಕ್ಕೆ ಬರುವುದು ಶತಸಿದ್ಧ ಎಂದು ಸಿಎಂ ಸಿದ್ದರಾಮಯ್ಯ ಭವಿಷ್ಯ ನುಡಿದರು. ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಬರೆದಿರುವ “ನೀರಿನ ಹೆಜ್ಜೆ : ವಿವಾದ-ಒಪ್ಪಂದ-ತೀರ್ಪು” ಕೃತಿಯನ್ನು ಬಿಡುಗಡೆ ಮಾಡಿ ಮಾತನಾಡಿದ ಅವರು, ಮಹದಾಯಿ, ಕೃಷ್ಣ ಮತ್ತು ಕಾವೇರಿ ಸೇರಿ ಅಂತಾರಾಜ್ಯ ಜಲ ವಿವಾದಗಳು ಇನ್ನೂ ಜೀವಂತವಾಗಿದ್ದು, ರಾಜ್ಯಕ್ಕೆ ಪೂರ್ತಿ ಅನುಕೂಲಕರವಾದ ನ್ಯಾಯಬದ್ಧ ತೀರ್ಮಾನಗಳು ಇನ್ನೂ ಆಗಬೇಕಿದೆ. ಮೇಕೆದಾಟಿನಲ್ಲಿ 67 ಟಿಎಂಸಿ ನೀರನ್ನು ಶೇಖರಣೆ ಮಾಡಲಾಗುತ್ತದೆ. ಈ ಯೋಜನೆಯಲ್ಲಿ ನಮಗಿಂತ ಹೆಚ್ಚು ತಮಿಳುನಾಡಿಗೇ ಅನುಕೂಲ. ಆದರೂ ಅವರು ಮೇಕೆದಾಟು ಯೋಜನೆಗೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ತಮಿಳುನಾಡು ಸರ್ಕಾರ ಕೇವಲ ರಾಜಕೀಯ ಕಾರಣಕ್ಕೆ ವಿರೋಧ ವ್ಯಕ್ತಪಡಿಸುತ್ತಿದೆ. ಮತ್ತೊಂದು ಕಡೆ ಕೃಷ್ಣ ನದಿ ನೀರಿನ ವಿವಾದದಲ್ಲೂ ಕೇಂದ್ರ ಸರ್ಕಾರ…
ಬೆಂಗಳೂರು : ಜವಾಹರಲಾಲ್ ನೆಹರು ಜನ್ಮದಿನದ ಅಂಗವಾಗಿ ವಿಧಾನಸೌಧದಲ್ಲಿರುವ ನೆಹರು ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಬಿಜೆಪಿಗೆ ಗಾಂಧಿ ಹಾಗೂ ನೆಹರು ಅವರನ್ನು ತೆಗಳುವುದೇ ಕೆಲಸ ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು. ದೇಶದ ಮೊದಲ ಪ್ರಧಾನಮಂತ್ರಿ ಜವಾಹರ್‌ಲಾಲ್ ನೆಹರು ಅವರ ಜನ್ಮದಿನದಂದೇ ಮಕ್ಕಳ ದಿನಾಚರಣೆಯನ್ನು ಆಚರಿಸಲಾಗುತ್ತದೆ. ಮಕ್ಕಳನ್ನು ಕಂಡರೆ ಬಹಳ ಪ್ರೀತಿಯಿದ್ದ ಅವರು ಇಂದಿನ ಮಕ್ಕಳೇ ಭವಿಷ್ಯದ ಪ್ರಜೆಗಳು ಎಂದು ಅರ್ಥೈಸಿಕೊಂಡಿದ್ದರು. ಆದ್ದರಿಂದ ಚಾಚಾ ನೆಹರು ಎಂದೇ ಅವರನ್ನು ಕರೆಯಲಾಗುತ್ತಿತ್ತು. ಆದರೆ ಇಂದಿನ ಬಿಜೆಪಿಯವರಿಗೆ ಗಾಂಧಿ ಹಾಗೂ ನೆಹರು ಅವರನ್ನು ತೆಗಳುವುದೇ ಕೆಲಸವಾಗಿದೆ ಎಂದರು. ಬಿಜೆಪಿಗೆ ಗಾಂಧಿ ಹಾಗೂ ನೆಹರು ಅವರನ್ನು ತೆಗಳುವುದೇ ಕೆಲಸ. ದೇಶದ ಸ್ವಾತಂತ್ರ‍್ಯ ಹೋರಾಟದಲ್ಲಿ ಬಿಜೆಪಿಯ ಪಾತ್ರವೇ ಇಲ್ಲ. ಮಹಾತ್ಮ ಗಾಂಧಿ, ನೆಹರು ಅವರು ದೇಶಕ್ಕೆ ಸ್ವಾತಂತ್ರ‍್ಯ ತಂದುಕೊಟ್ಟವರು. ಅವರನ್ನು ತೆಗಳಿ, ಇಲ್ಲದ ಆರೋಪಗಳನ್ನು ಹೊರಿಸುವುದೇ ಅವರ ಕೆಲಸ. ನರೇಂದ್ರ ಮೋದಿ, ಬಿಜೆಪಿ, ಆರ್‌ಎಸ್‌ಎಸ್‌ನವರು ಗಾಂಧಿ ಮತ್ತು ನೆಹರು ಅವರನ್ನು ಹೀಯಾಳಿಸುವುದನ್ನೇ ಉದ್ಯೋಗ…
ಬೆಂಗಳೂರು : ಪದ್ಮಶ್ರೀ ಪುರಸ್ಕೃತೆ ಸಾಲುಮರದ ತಿಮ್ಮಕ್ಕ ಅವರು ತೀವ್ರ ಅನಾರೋಗ್ಯದಿಂದ ಇಂದು ನಿಧನರಾಗಿದ್ದಾರೆ. ಬೆಂಗಳೂರಿನ ಜಯನಗರದ ಖಾಸಗಿ ಆಸ್ಪತ್ರೆಯಲ್ಲಿ ಸಾಲುಮರದ ತಿಮ್ಮಕ್ಕ ಅವರು ದಾಖಲಾಗಿದ್ದರು. ತೀವ್ರ ಉಸಿರಾಟದ ಸಮಸ್ಯೆಯಿಂದ ತಿಮ್ಮಕ್ಕ ಬಳಲುತ್ತಿದ್ದರು. ಈ ಹಿನ್ನಲೆಯಲ್ಲಿ ಜಯನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇದೀಗ ಇಂದು ಚಿಕಿತ್ಸೆ ಫಲಕಾರಿಯಾಗದೆ ಸಾಲುಮರದ ತಿಮ್ಮಕ್ಕ ನಿಧನರಾಗಿದ್ದಾರೆ. ತಿಮ್ಮಕ್ಕ ಅವರ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ. ವೃಕ್ಷಮಾತೆ ಸಾಲುಮರದ ತಿಮ್ಮಕ್ಕನವರ ನಿಧನದ ಸುದ್ದಿ ತಿಳಿದು ದುಃಖಿತನಾಗಿದ್ದೇನೆ. ಸಾವಿರಾರು ಗಿಡಗಳನ್ನು ನೆಟ್ಟು, ಅವುಗಳನ್ನು ಮಕ್ಕಳಂತೆ ಸಲಹಿದ ತಿಮ್ಮಕ್ಕನವರು ತಮ್ಮ ಬಹುಪಾಲು ಜೀವಿತ ಕಾಲವನ್ನು ಪರಿಸರ ಸಂರಕ್ಷಣೆಗಾಗಿ ಮುಡಿಪಾಗಿಟ್ಟವರು. ಇಂದು ತಿಮ್ಮಕ್ಕನವರು ನಮ್ಮನ್ನು ಅಗಲಿದರೂ ಅವರ ಪರಿಸರ ಪ್ರೇಮ ಅವರನ್ನು ಚಿರಸ್ಥಾಯಿಯಾಗಿಸಿದೆ. ಅಗಲಿದ ಮಹಾಚೇತನಕ್ಕೆ ನನ್ನ ನಮನಗಳು.ಸಾಲುಮರದ ತಿಮ್ಮಕ್ಕನವರ ನಿಧನದಿಂದ ನಾಡು ಬಡವಾಗಿದೆ. ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ಅವರ ಕುಟುಂಬವರ್ಗಕ್ಕೆ ನನ್ನ ಸಂತಾಪಗಳು ಎಂದು ತಿಳಿಸಿದ್ದಾರೆ. https://twitter.com/siddaramaiah/status/1989235723908575408?t=sjyGXM08rEqOCYi6ZqTAFw&s=19
ಬೆಂಗಳೂರು : ಪದ್ಮಶ್ರೀ ಪುರಸ್ಕೃತೆ ಸಾಲುಮರದ ತಿಮ್ಮಕ್ಕ (114)ಅವರು ತೀವ್ರ ಅನಾರೋಗ್ಯದಿಂದ ಇಂದು ನಿಧನರಾಗಿದ್ದಾರೆ. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಸಾಲುಮರದ ತಿಮ್ಮಕ್ಕ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾಲುಮರದ ತಿಮ್ಮಕ್ಕ ಇಂದು ನಿಧನರಾಗಿದ್ದಾರೆ. ಬೆಂಗಳೂರಿನ ಜಯನಗರದ ಖಾಸಗಿ ಆಸ್ಪತ್ರೆಯಲ್ಲಿ ಸಾಲುಮರದ ತಿಮ್ಮಕ್ಕ ಅವರು ದಾಖಲಾಗಿದ್ದರು. ಕಳೆದ ಕೆಲವು ದಿನಗಳ ಹಿಂದೆ ಮನೆಯಲ್ಲಿ ತಿಮ್ಮಕ್ಕ ಜಾರಿ ಬಿದ್ದಿದ್ದರು. ಅಲ್ಲದೆ ತೀವ್ರ ಉಸಿರಾಟದ ಸಮಸ್ಯೆಯಿಂದ ತಿಮ್ಮಕ್ಕ ಬಳಲುತ್ತಿದ್ದರು. ಈ ಹಿನ್ನಲೆಯಲ್ಲಿ ಜಯನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇದೀಗ ಇಂದು ಚಿಕಿತ್ಸೆ ಫಲಕಾರಿಯಾಗದೆ ಸಾಲುಮರದ ತಿಮ್ಮಕ್ಕ ನಿಧನರಾಗಿದ್ದಾರೆ.
ರಾಮನಗರ : ವೈಯಕ್ತಿಕ ದ್ವೇಷ ಹಿನ್ನೆಲೆಯಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನನ್ನು ಭೀಕರವಾಗಿ ಕೊಲೆ ಮಾಡಿರುವ ಘಟನೆ ರಾಮನಗರದ ಬಿಡದಿ ಬಳಿ ಕದಂಬ ಹೋಟೆಲ್ ನಲ್ಲಿ ತಡರಾತ್ರಿ ಈ ಒಂದು ಕೊಲೆ ನಡೆದಿದೆ. ಚನ್ನಪಟ್ಟಣ ತಾಲೂಕಿನ ಕೊಂಡಾಪುರ ಗ್ರಾಮದ ನಿವಾಸಿ ನಿಶಾಂತ್ (25) ಕೊಲೆಯಾದ ಯುವಕ. ನಿಶಾಂತ್ ಕಳೆದ ಎರಡೂವರೆ ತಿಂಗಳಿನಿಂದ ಕದಂಬ ಹೋಟೆಲ್‌ನಲ್ಲಿ ಸೆಕ್ಯುರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದು, ಹಳೆ ದ್ವೇಷಕ್ಕೆ ಹತ್ಯೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ತಡರಾತ್ರಿ ಹೋಟೆಲ್ ನಲ್ಲಿ ಮಲಗಿದ್ದ ನಿಶಾಂತ್ ನ ಕಿವಿ ಭಾಗಕ್ಕೆ ಚಾಕುವಿನಿಂದ ಇರಿದು ಕೊಲೆ ಮಾಡಿರೋ ದುಷ್ಕರ್ಮಿಗಳು ಹೋಟೆಲ್‌ನ ಸಿಸಿಟಿವಿ ಕ್ಯಾಮೆರಾದ ಡಿವಿಆರ್ ಕೂಡಾ ತೆಗೆದುಕೊಂಡು ಹೋಗಿದ್ದಾರೆ. ಸ್ಥಳಕ್ಕೆ ಬಿಡದಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಬೆರಳಚ್ಚು ತಜ್ಞರು ಹಾಗೂ ಶ್ವಾನದಳದಿಂದಲೂ ಪರಿಶೀಲನೆ ಮಾಡಲಾಗಿದೆ. ಪ್ರಕರಣದ ತನಿಖೆ ಕೈಗೊಂಡಿರುವ ಬಿಡದಿ ಪೊಲೀಸರು ಆರೋಪಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ.
ಬೆಂಗಳೂರು : ಬಿಹಾರ್ ಚುನಾವಣೆಯಲ್ಲಿ NDA ಭರ್ಜರಿ ಮುನ್ನಡೆ ಸಾಧಿಸಿದ್ದು, ಬಹುತೇಕ ಮತ್ತೊಮ್ಮೆ ನಿತೀಶ್ ಕುಮಾರ್ ಸಿಎಂ ಆಗೋದು ಪಕ್ಕಾ ಎಂದೇ ಹೇಳಲಾಗುತ್ತಿದೆ. ಈ ಚುನಾವಣೆ ಕುರಿತು ಸಿಎಂ ಸಿದ್ದರಾಮಯ್ಯ ಬಿಹಾರ್ ದಲ್ಲೂ ಮತಗಳ್ಳತನ ಆಗಿದೆ ಎಂದು ಗಂಭೀರ ಆರೋಪ ಮಾಡಿದರು. ಬೆಂಗಳೂರಲ್ಲಿ ಮಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಹಾರದಲ್ಲಿಯೂ ವೋಟ್ ಚೋರಿ ಆಗಿದೆ. ಆದರೆ ಜನರ ತೀರ್ಪನ್ನು ನಾವು ಒಪ್ಪಿಕೊಳ್ಳಬೇಕು. ಯಾಕೆ ಹಿನ್ನಡೆ ಆಗಿದೆ ಗೊತ್ತಿಲ್ಲ, ನಾನು ಇನ್ನೂ ನೋಡಿಲ್ಲ, ಸರಿಯಾಗಿ ಮಾಹಿತಿ ಪಡೆದು ಮತ್ತೆ ಮಾತಾಡ್ತೀನಿ. ಯಾಕೆ ಜನ ವೋಟ್ ಹಾಕಿಲ್ಲ, NDA ಯಾಕೆ ಇಷ್ಟು ದೊಡ್ಡ ಬಹುಮತದಲ್ಲಿದೆ ಎನ್ನೋದು ಗೊತ್ತಿಲ್ಲ ಎಂದರು. ಇದೇ ವೇಳೆ ಮುಧೋಳದಲ್ಲಿ ಕಬ್ಬು ಗಲಾಟೆ ವಿಚಾರವಾಗಿ ಮಾತನಾಡಿ, ಬೇರೆ ಎಲ್ಲಾ ರೈತರು 3,300 ರೂ. ಕಬ್ಬು ರೇಟ್ ಪಡೆಯೋಕೆ ಒಪ್ಪಿಕೊಂಡಿದ್ದಾರೆ. ಆದರೆ ಮುಧೋಳ ರೈತರು ಮಾತ್ರ ಒಪ್ಪಿಕೊಂಡಿಲ್ಲ. ಅವರ ಜೊತೆಗೂ ಮಾತುಕತೆ ನಡೆಯುತ್ತಿದೆ. ಯಾರು ಕಬ್ಬು, ಟ್ರ‍್ಯಾಕ್ಟರ್, ಟ್ರಾಲಿಗಳನ್ನ ಸುಟ್ಟಿ ಹಾಕಿದ್ದಾರೆ ಅಂತ ವಿಚಾರಣೆ…
ಶಿವಮೊಗ್ಗ, : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಜಿಲ್ಲೆಯ 07 ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳನ್ನು ಗೌರವಧನ ಸೇವೆ ಆಧಾರದ ಮೇಲೆ ಭರ್ತಿ ಮಾಡಲು ಅರ್ಹ ಮಹಿಳಾ ಮತ್ತು ಮಹಿಳಾ ಲಿಂಗತ್ವ ಅಲ್ಪಸಂಖ್ಯಾತ ಸ್ಥಳೀಯ ಅಭ್ಯರ್ಥಿಗಳಿಂದ ಆನ್‌ಲೈನ್ ಅರ್ಜಿ ಆಹ್ವಾನಿಸಲಾಗಿದೆ. ಭದ್ರಾವತಿಯಲ್ಲಿ 19 ಅಂಗನವಾಡಿ ಕಾರ್ಯಕರ್ತೆಯರು ಮತ್ತು 59 ಸಹಾಯಕಿಯರು, ಹೊಸನಗರದಲ್ಲಿ 6 ಅಂಗನವಾಡಿ ಕಾರ್ಯಕರ್ತೆಯರು ಮತ್ತು 144 ಸಹಾಯಕಿಯರು, ಸಾಗರದಲ್ಲಿ 3 ಅಂಗನವಾಡಿ ಕಾರ್ಯಕರ್ತೆಯರು ಮತ್ತು 62 ಸಹಾಯಕಿಯರು, ಶಿಕಾರಿಪುರದಲ್ಲಿ 1 ಅಂಗನವಾಡಿ ಕಾರ್ಯಕರ್ತೆಯರು ಮತ್ತು 23 ಸಹಾಯಕಿಯರು, ಶಿವಮೊಗ್ಗದಲ್ಲಿ 16 ಅಂಗನವಾಡಿ ಕಾರ್ಯಕರ್ತೆಯರು ಮತ್ತು 93 ಸಹಾಯಕಿಯರು, ಸೊರಬದಲ್ಲಿ 3 ಅಂಗನವಾಡಿ ಕಾರ್ಯಕರ್ತೆಯರು ಮತ್ತು 42 ಸಹಾಯಕಿಯರು ತೀರ್ಥಹಳ್ಳಿಯಲ್ಲಿ 11 ಅಂಗನವಾಡಿ ಕಾರ್ಯಕರ್ತೆಯರು ಮತ್ತು 69 ಸಹಾಯಕಿಯರ ಹುದ್ದೆಗಳು ಖಾಲಿ ಇವೆ. ಅರ್ಜಿ ಸಲ್ಲಿಸಲು ಡಿ.15 ಕೊನೆಯ ದಿನಾಂಕವಾಗಿದ್ದು, ಅರ್ಹ ಅಭ್ಯರ್ಥಿಗಳು ವೆಬ್‌ಸೈಟ್ https://karnemakaone.kar.nic.in/abcd/ ಮೂಲಕ…
೧] ಸುಮಂಗಲಿಯರು ಬೈತಲೆಯಲ್ಲಿ ಯಾವಾಗಲೂ ಕುಂಕುಮ ಇರದೇ ಇರಬಾರದು. ೨] ಎರಡು ಕೈಗಳಿಂದಲೂ ತಲೆಯನ್ನು ಕೆರೆದುಕೊಳ್ಳಬಾರದು, ೩] ಯಾವುದೇ ಕಾರಣಕ್ಕೂ ಸಂಧ್ಯಾ ಕಾಲದಲ್ಲಿ ಕಣ್ಣಲ್ಲಿ ನೀರು ಹಾಕಬಾರದು. ೪] ಮನೆಗೆ ಬಂದ ಹೆಂಗಸರಿಗೆ ಹರಿಶಿನ, ಕುಂಕುಮ, ಹೂಗಳನ್ನು ಕೊಟ್ಟೆ ಕಳಿಸಬೇಕು. ದೈವಜ್ಞ ಪಂಡಿತ್ ಶ್ರೀ ವಿದ್ಯಾಧರ್ ನಕ್ಷತ್ರಿ ಪ್ರಧಾನ್ ತಾಂತ್ರಿಕ್ ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಮಾರ್ಗವನ್ನು ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ವಿದ್ಯಾಧರ್ ನಕ್ಷತ್ರಿ ಪ್ರಧಾನ ತಾಂತ್ರಿಕ ತಪ್ಪದೆ ಕರೆ ಮಾಡಿ 9686268564 ೫] ಗರ್ಭಿಣಿ ಸ್ತ್ರೀಯರು ತೆಂಗಿನ ಕಾಯಿ ಮತ್ತು ಕುಂಬಳ ಕಾಯಿ ಹೊಡೆಯಕೂಡದು ಮತ್ತು ಹೊಡೆವ ಜಾಗದಲ್ಲೂ ಇರಕೂಡದು. ೬] ಗರ್ಭಿಣಿ ಸ್ತ್ರೀಯರು ನಿಂಬೆಹಣ್ಣನ್ನು ಕೊಯ್ದು ಬಾರದು…
ಮಂಡ್ಯ : ಇಂದು ಮಂಡ್ಯ ಎಸ್ಪಿ ಕಚೇರಿಗೆ ಪೊಲೀಸ್ ಮಹಾನಿರ್ದೇಶಕ ಡಾ.ಸಲೀಂ ದಿಢೀರ್ ಭೇಟಿ ನೀಡಿದರು. ಪೊಲೀಸ್ ಮಹಾನಿರ್ದೇಶಕ ಡಾ.ಸಲೀಂ ಐಪಿಎಸ್ ರನ್ನು ಹೂಗುಚ್ಚು ನೀಡಿ ಆತ್ಮೀಯವಾಗಿ ಬರಮಾಡಿಕೊಂಡ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ಎಸ್ಪಿ ಕಚೇರಿಯಲ್ಲಿ ಪೊಲೀಸ್ ಮಹಾ ನಿರ್ದೇಶಕರಿಗೆ ಗೌರವ ವಂದನೆ. ಗೌರವ ವಂದನೆ ಬಳಿಕ ಎಸ್ಪಿ ಕಚೇರಿಯಲ್ಲಿ ಜಿಲ್ಲೆಯ ಪೊಲೀಸ್ ಅಧಿಕಾರಿಗಳ ಜೊತೆ ಸಭೆ ನಡೆಸಲಾಯಿತು. ಸಭೆಯಲ್ಲಿ ವಿಮರ್ಶನ ಸಭೆ ನಡೆಸಿ ಕರ್ತವ್ಯ ನಿರ್ವಹಣೆ ಕುರಿತು ಅಧಿಕಾರಿಗಳಿಗೆ ಸೂಕ್ತ ಸಲಹೆ ನಿರ್ದೇಶನ ಕೊಟ್ಟರು.ಬಳಿಕ ಮಂಡ್ಯ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಛೇರಿಗೆ ಭೇಟಿ ನೀಡಿದರು. ಶ್ವಾನದಳ, ಉಗ್ರಾಣ, ಸ್ವಚ್ಛತೆ ಇತ್ಯಾದಿಗಳನ್ನು ಪರಿಶೀಲನೆ. ನಂತರ ಪೊಲೀಸ್ ವಸತಿ ಸಮುಚ್ಚಯಗಳಿಗೆ ಭೇಟಿ ನೀಡಿ, ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಗಳ ಕುಟುಂದವರ ಕುಂದು ಕೊರತೆಗಳನ್ನು ಆಲಿಸಿದರು. ಇದೇ ವೇಳೆ ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣೆಗೆ ಭೇಟಿ ನೀಡಿ ಸಿಬ್ಬಂದಿಗಳ ಕುಂದು ಕೊರತೆಯನ್ನು ಆಲಿಸಿದರು. ಠಾಣೆಯ ಕಾರ್ಯವೈಖರಿ & ದಾಖಲಾತಿಗಳನ್ನು ಪರಿಶೀಲಿಸಿ ಠಾಣಾಧಿಕಾರಿಗೆ ಸೂಕ್ತ…













