Subscribe to Updates
Get the latest creative news from FooBar about art, design and business.
Author: kannadanewsnow05
ಚಿಕ್ಕಮಗಳೂರು : ರಾಜ್ಯದ ಹಲವೆಡೆ ಇಂದು ಭಾರಿ ಮಳೆಯಾಗುತ್ತಿದ್ದು, ಅದರಂತೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ಧಾರಾಕಾರ ಮಳೆಯಿಂದ ಆಟೋ ಒಂದು ನಿಯಂತ್ರಣ ತಪ್ಪಿ ಪಲ್ಟಿಯಾಗಿ ಚಾಲನೊಬ್ಬ ಸಾವನ್ನಪ್ಪಿರುವ ಘಟನೆ ಬಣಕಲ್- ಕೊಟ್ಟಿಗೆಹಾರ ರಾಜ್ಯ ಹೆದ್ದಾರಿಯಲ್ಲಿ ನಡೆದಿದೆ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಣಕಲ್ ನಲ್ಲಿ ನಡೆದಿದೆ. ಮೃತ ಪಟ್ಟ ಚಾಲಕನನ್ನು ರವಿ ಎಂದು ಹೇಳಲಗುತ್ತಿದ್ದೂ, ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಮೈಲಿಮನೆ ನಿವಾಸಿ ಎಂದು ಹೇಳಲಾಗುತ್ತಿದೆ. ತಕ್ಷಣ ಆಟೋ ಪಲ್ಟಿಯಾಗಿದ್ದರಿಂದ ಗಂಭೀರ ಗಾಯಗೊಂಡಿದ್ದ ರವಿನನ್ನು ಮೂಡಿಗೆರೆ ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯ ಸಾವನನಪ್ಪಿದ್ದಾನೆ. ಘಟನೆ ಕುರಿತಂತೆ ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು : ಕಳೆದ ವರ್ಷ ಬಿರು ಬೇಸಿಗೆಯಲ್ಲೂ ಕೂಡ ಕಾವೇರಿ ನದಿಯಿಂದ ತಮಿಳುನಾಡಿಗೆ ರಾಜ್ಯ ಸರ್ಕಾರ ನೀರು ಬಿಟ್ಟಿತ್ತು. ಇದೀಗ ಮತ್ತೆ 2.5 ಟಿಎಂಸಿ ನೀರು ಹರಿಬಿಡುವಂತೆ ಕರ್ನಾಟಕಕ್ಕೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಸೂಚನೆ ನೀಡಿದೆ ಎಂದು ತಿಳಿದುಬಂದಿದೆ. ಹೌದು ಕರ್ನಾಟಕಕ್ಕೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಈ ಕುರಿತಂತೆ ಸೂಚನೆ ನೀಡಿದ್ದು, ಮೇ ತಿಂಗಳ ಭಾಗವಾಗಿ 2.5 ಟಿಎಂಸಿ ನೀರು ಹರಿಸಲು ಇದೀಗ ನಿರ್ದೇಶನ ನೀಡಿದೆ ಎಂದು ತಿಳಿದು ಬಂದಿದೆ.ಈ ಹಿಂದೆ ಕಾವೇರಿ ನೀರು ನಿಯಂತ್ರಣ ಸಮಿತಿ ಸಹ 2.5 ಟಿಎಂಸಿ ನೀರು ಹರಿಸುವಂತೆ ಶಿಫಾರಸು ಮಾಡಿತ್ತು. ಇದೀಗ ಇಂದು ಸಭೆ ನಡೆಸಿದ CWMA ನೀರುಹರಿಸಲು ನಿರ್ದೇಶನ ನೀಡಿದೆ ಎಂದು ತಿಳಿದುಬಂದಿದೆ. ಕನ್ನಡಪರ ಸಂಘಟನೆಗಳ ಹೋರಾಟ ಕಳೆದ ಬಾರಿ ನಮ್ಮ ರಾಜ್ಯದಲ್ಲಿ ಅದರಲ್ಲೂ ಬೆಂಗಳೂರಿನಲ್ಲಿ ಕುಡಿಯುವ ನೀರಿನ ಸಮಸ್ಯೆ ಇದ್ದರೂ ಕೂಡ ಕಾವೇರಿ ನದಿಯಿಂದ ತಮಿಳುನಾಡಿಗೆ ರಾಜ್ಯ ಸರ್ಕಾರ ಹಲವಾರು ಬಾರಿ ನೀರು ಬಿಟ್ಟಿತು. ಈ ಕುರಿತಾಗಿ ಅನೇಕ…
ಚಿಕ್ಕಮಗಳೂರು : ಇಂದು ರಾಜ್ಯದಲ್ಲಿ ದುರಂತಗಳ ಸರಮಾಲೆಯ ನಡೆದಿದೆ. ಈಗ ಚಿಕ್ಕಮಂಗಳೂರಿನಲ್ಲಿ ಒಂದು ಅನಾಹುತ ನಡೆದಿದ್ದು ಲೈನ್ ದುರಸ್ತಿ ಮಾಡುವ ವೇಳೆ ವಿದ್ಯುತ್ ಪ್ರವಹಿಸಿ ಯುವಕನೊಬ್ಬ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ಚಿಕ್ಕಮಗಳೂರು ತಾಲೂಕಿನ ಗಾಂಜಾಲಗೋಡು ಗ್ರಾಮದಲ್ಲಿ ಈ ದುರ್ಘಟನೆ ಸಂಭವಿಸಿದೆ.ನಿನ್ನೆ ಸುರಿದ ಗಾಳಿ ಮಳೆಯಿಂದ ವೈರು ಒಂದು ನೇತಾಡುತ್ತಿತ್ತು.ಈ ವಳೆ ಯುವಕ ಲೈನ್ ದುರಸ್ತಿ ಮಾಡುವಾಗ ವಿದ್ಯುತ್ ಪ್ರವಹಿಸಿ ಯುವಕ ಜೀವಿತ್ (23) ಸಾವನ್ನಪ್ಪಿದ್ದಾನೆ. ಎಂದು ತಿಳಿದುಬಂದಿದೆ. ಚಿಕ್ಕಮಗಳೂರು ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು : ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಕೂಡಲೇ ಅವರ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಆಗ್ರಹಿಸಿದ್ದರು. ಈ ವಿಚಾರಕ್ಕೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದು, ಪಾಪ ಕುಮಾರಸ್ವಾಮಿ ಅವರ ಅಸೂಯೆಗೂ ಮದ್ದಿಲ್ಲ ಹೊಟ್ಟೆಕಿಚ್ಚಿಗೂ ಮದ್ದಿಲ್ಲ ಎಂದು ವ್ಯಂಗ್ಯವಾಡಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿಕೆ ರಾಜೀನಾಮೆ ನೀಡಬೇಕಂಬ ಎಚ್ ಡಿ ಕುಮಾರಸ್ವಾಮಿ ಆಗ್ರಹ ವಿಚಾರಕ್ಕೆ ಸಂಬಂಧಿಸಿದಂತೆ ಪಾಪ ಕುಮಾರಸ್ವಾಮಿ ಕಿಂಗ್ ಮೇಕರ್ ಆಗಲು ಹೊರಟಿದ್ದರು. ಈಗ ನನ್ನ ಅಧ್ಯಕ್ಷತೆಯಲ್ಲಿ ನಮ್ಮ 136 ಶಾಸಕರು ಗೆದ್ದಿದ್ದಾರೆ. ಅವರ ಅಧ್ಯಕ್ಷತೆಯಲ್ಲಿ 19 ಸ್ಥಾನ ಬಂದಿವೆ. ಪಾಪ ಈಗ ಕೈ ಹಿಸುಕಿಕೊಳ್ಳುತ್ತಿದ್ದಾರೆ ಎಂದರು. ಅಸೂಯೆಗೂ ಮದ್ದಿಲ್ಲ ಹೊಟ್ಟೆಕಿಚ್ಚಿಗೂ ಮದ್ದಿಲ್ಲ. ಕುಮಾರಸ್ವಾಮಿ ಏನು ಬೇಕಾದರೂ ಮಾತನಾಡಿಕೊಳ್ಳಲಿ. ನಾನು ರಾಜೀನಾಮೆ ಕೊಡಬೇಕು ಅಂತ ಅವನ ಆಸೆ. ಆ ತರ ಆಸೆ ಪಡುವವರನ್ನು ತಪ್ಪು ಅನ್ನೋಕೆ ಆಗುತ್ತದಾ? ಪಾಪ ಅವನ ಆಸೆ ಅದು ಎಂದು ವ್ಯಂಗ್ಯವಾಡಿದರು.
ಹುಬ್ಬಳ್ಳಿ : ಕೆಲವು ದಿನಗಳ ಹಿಂದೆ ಹುಬ್ಬಳ್ಳಿಯಲ್ಲಿ ಅಂಜಲಿ ಅಂಬಿಗೇರ ಬರ್ಬರ ಕೊಲೆಯಾಗಿತ್ತು.ಈ ಘಟನೆ ಮಾಸುವ ಮುನ್ನವೇ ಇದೀಗ ಹುಬ್ಬಳ್ಳಿಯಲ್ಲಿ ಮತ್ತೊಂದು ದುರಂತ ಸಂಭವಿಸಿದ್ದು ಮಹಿಳೆಯೊಂದಿಗೆ ಪೊಲೀಸ್ ಕಾನ್ಸ್ಟೇಬಲ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನವನಗರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಹೌದು ಮಹಿಳೆಯೊಂದಿಗೆ ಪೊಲೀಸ್ ಕಾನ್ಸ್ಟೇಬಲ್ ನೇಣಿಗೆ ಶರಣಾಗಿದ್ದಾನೆ. ಹುಬ್ಬಳ್ಳಿಯ ನವನಗರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ.ಮಹಿಳೆಯೊಂದಿಗೆ ಕಾನ್ಸ್ಟೇಬಲ್ ಮಹೇಶ್ ಹೆಸರೂರು ಎಂಬ ಪೊಲೀಸ್ ಕಾನ್ಸ್ಟೇಬಲ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಧಾರವಾಡ ಸಂಚಾರಿ ಪೊಲೀಸ್ ಠಾಣೆಯ ಪಿಸಿ ಮಹೇಶ್ ಹೆಸರೂರು ಎಂದು ತಿಳಿದುಬಂದಿದೆ. ಎರಡು ಮೂರು ದಿನದ ಹಿಂದೆ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.ದುರ್ವಾಸನೆ ಬಂದ ಹಿನ್ನೆಲೆಯಲ್ಲಿ ಸ್ಥಳೀಯರು ಪೊಲೀಸರಿಗೆ ಕೂಡಲೇ ಮಾಹಿತಿ ನೀಡಿದ್ದಾರೆ.ಸ್ಥಳಕ್ಕೆ ಆಗಮಿಸಿದಂತಹ ಪೊಲೀಸರು ಬಾಗಿಲು ಒಡೆದಾಗ ಘಟನೆ ಬೆಳಕಿಗೆ ಬಂದಿದೆ. ಮೃತ ಮಹಿಳೆಯ ಮಾಹಿತಿಯನ್ನು ಇದೀಗ ಪೊಲೀಸರು ಕಲೆ ಹಾಕುತ್ತಿದ್ದಾರೆ. ನವನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಒಂದು ಪ್ರಕರಣ ನಡೆದಿದೆ.
ಬೆಂಗಳೂರು : ಇತ್ತೀಚಿಗೆ ತಂದೆಯಾದ ಕಾರ್ ಪಡೆಯುತ್ತಿದ್ದಾಗ ಎಕ್ಸೆಲೆಟರ್ ತುಳಿದು, ನಾಲ್ಕು ವರ್ಷದ ಮಗು ಸಾವನ್ನಪ್ಪಿರುವ ಘಟನೆ ಮಹಾ ಸೋಮಣ್ಣವೆ ಮತ್ತೊಂದು ಘಟನೆ ನಡೆದಿದ್ದು ನೀರಿನ ಸಂಪ್ ನಲ್ಲಿ ಐದು ವರ್ಷದ ಮಗು ಬಿದ್ದು ಸಾವನಪ್ಪಿರುವ ಘಟನೆ ಇದೀಗ ಬೆಂಗಳೂರಿನ ಕೆ ಆರ್ ಪುರಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಹೌದು ಸಂಪಿಗೆ ಬಿದ್ದು 5 ವರ್ಷದ ಮಗು ಸಾವನನಪ್ಪಿರುವ ಘಟನೆ ನಡೆದಿದೆ. ನೇಪಾಳ ಮೂಲದ ದಂಪತಿಯ ಪುತ್ರ ಸಬೀನ್ (5) ಸಾವನ್ನಪ್ಪಿರುವ ಮಗು ಎಂದು ತಿಳಿಬಂದಿದೆ. ಬೆಂಗಳೂರಿನಲ್ಲಿ ನೇಪಾಳ ಮೂಲದ ದಂಪತಿ ಕೂಲಿ ಕೆಲಸ ಮಾಡುತ್ತಿದ್ದರು ಎಂದು ಹೇಳಲಾಗುತ್ತಿದೆ. ಮಗುವನ್ನು ಮನೆಯಲ್ಲಿ ಬಿಟ್ಟು ಕೆಲಸಕ್ಕೆ ಹೋಗಿದ್ದಾಗ ಈ ಘಟನೆ ಸಂಭವಿಸಿದೆ. ಕೆ ಆರ್ ಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ಹಲ್ಲೆಯ ಯತ್ನ ತಲೆ ಮೇಲೆ ಕಲ್ಲು ಎತ್ತಿ ಹಾಕಿ ವ್ಯಕ್ತಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಯಾದಗಿರಿ ತಾಲೂಕಿನ ಅಬ್ಬೆ…
ವಿಜಯಪುರ : ಕಳೆದ ಹಲವು ದಿನಗಳಿಂದ ರಾಜ್ಯದಲ್ಲಿ ಈಜು ದುರಂತಗಳಿಂದ ಹಲವಾರು ಜನರು ಪ್ರಾಣ ಕಳೆದುಕೊಂಡಿದ್ದಾರೆ. ಇದೀಗ ವಿಜಯಪುರ ಜಿಲ್ಲೆಯ ಇಂಡಿ ಪಟ್ಟಣದಲ್ಲಿ ಕೂಡ ಕೃಷಿ ಹೊಂಡದಲ್ಲಿ ಈಜಲು ತೆರಳಿದ್ದ ಇಬ್ಬರು ಬಾಲಕರು ನೀರು ಪಾಲಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಹೌದು ವಿಜಯಪುರ ಜಿಲ್ಲೆಯ ಇಂಡಿ ಪಟ್ಟಣದಲ್ಲಿ ಈ ದುರ್ಘಟನೆ ನಡೆದಿದೆ. ದೇಶಪಾಂಡೆ ತಾಂಡಾದಲ್ಲಿ ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಬಾಲಕರು ಸಾವನ್ನಪ್ಪಿದ್ದಾರೆ ಎಂದು ಹೇಳಲಾಗುತ್ತಿದೆ. ಅಮಿತ್ ರಾಠೋಡ್ (12) ಸುದೀಪ ರಾಠೋಡ್ (10) ಸಾವನ್ನುಪ್ಪಿರುವ ಮೃತ ಬಾಲಕರು. ಇಂಡಿ ಶಹರ ಪೊಲೀಸ್ ಠಾಣೆಯಲ್ಲಿ ಘಟನೆ ಕುರಿತಂತೆ ಪ್ರಕರಣ ದಾಖಲಾಗಿದೆ.
ಬೆಳಗಾವಿ : ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಚಿಕ್ಕಟ್ಟಿ ಗ್ರಾಮದ ಹೊರವಲಯದ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟಗೊಂಡ ಪ್ರಕಾರಣಕ್ಕೆ ಸಂಬಂಧಿಸಿದಂತೆ ಇದೀಗ ಘಟನೆಯಲ್ಲಿ ಮತ್ತೊರ್ವ ಮಹಿಳೆ ಸಾವನ್ನಪ್ಪಿದ್ದಾಳೆ. ಹೌದು ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಚಿಕ್ಕಟ್ಟಿ ಗ್ರಾಮದ ಪ್ರಿಯಾ ಎಕ್ಸ್ಪೋರ್ಟ್ ಕೈಗಾರಿಕಾ ಘಟಕದಲ್ಲಿ ಬಾಯ್ಲರ್ ಸ್ಪೋಟವಾಗಿದೆ. ಬಾಯ್ಲರ್ ಸ್ಫೋಟದಿಂದ ಒಬ್ಬ ಮಹಿಳೆ ಸಾವನ್ನಪ್ಪಿದ್ದು, ಮೂವರಿಗೆ ಗಂಭೀರವಾದ ಗಾಯಗಳಾಗಿವೆ. ಸುನಂದಾ ತೇಲಿ ಮೃತ ದುರ್ದೈವಿ ಎಂದು ತಿಳಿದುಬಂದಿದೆ. ಗಾಯಾಳುಗಳು ಅಥಣಿ ಮತ್ತು ಮಹಾರಾಷ್ಟ್ರದ ಮೀರಜ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ವೇಳೆ ಗಾಯಗೊಂಡ ಶೋಭಾ ತೇಲಿ ಎನ್ನುವ ಇನ್ನೊರ್ವ ಮಹಿಳೆ ಮಾರ್ಗ ಮಧ್ಯ ಸಾವನ್ನಪ್ಪಿದ್ದಾಳೆ. ಬ್ಲಾಸ್ಟ್ ಆದ ಸ್ಥಳದಲ್ಲಿ ಕೆಲಕಾಲ ಕೈಗಾರಿಕಾ ಪ್ರದೇಶದಲ್ಲಿ ಆತಂಕದ ವಾತಾವರಣ ಸೃಷ್ಟಿಯಾಗಿತ್ತು. ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ಬೆಂಕಿಯನ್ನು ನಂದಿಸಿದೆ ಘಟನೆ ಕುರಿತಂತೆ ಅಥಣಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಬೆಳಗಾವಿ : ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಚಿಕ್ಕಟ್ಟಿ ಗ್ರಾಮದ ಹೊರವಲಯದ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟಗೊಂಡಿದೆ. ಘಟನೆಯಲ್ಲಿ ಓರ್ವ ಮಹಿಳೆ ಸಾವನಪ್ಪಿದು, ಮೂವರಿಗೆ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಹೌದು ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಚಿಕ್ಕಟ್ಟಿ ಗ್ರಾಮದ ಪ್ರಿಯಾ ಎಕ್ಸ್ಪೋರ್ಟ್ ಕೈಗಾರಿಕಾ ಘಟಕದಲ್ಲಿ ಬಾಯ್ಲರ್ ಸ್ಪೋಟವಾಗಿದೆ. ಬಾಯ್ಲರ್ ಸ್ಫೋಟದಿಂದ ಒಬ್ಬ ಮಹಿಳೆ ಸಾವನ್ನಪ್ಪಿದ್ದು, ಮೂವರಿಗೆ ಗಂಭೀರವಾದ ಗಾಯಗಳಾಗಿವೆ. ಸುನಂದಾ ತೇಲಿ ಮೃತ ದುರ್ದೈವಿ ಎಂದು ತಿಳಿದುಬಂದಿದೆ. ಗಾಯಾಳುಗಳು ಅಥಣಿ ಮತ್ತು ಮಹಾರಾಷ್ಟ್ರದ ಮೀರಜ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಬ್ಲಾಸ್ಟ್ ಕೆಲಕಾಲ ಕೈಗಾರಿಕಾ ಪ್ರದೇಶದಲ್ಲಿ ಆತಂಕದ ವಾತಾವರಣ ಸೃಷ್ಟಿಯಾಗಿತ್ತು ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ಬೆಂಕಿಯನ್ನು ನಂದಿಸಿದೆ ಘಟನೆ ಕುರಿತಂತೆ ಅಥಣಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು : ಪ್ರಸಕ್ತ ವರ್ಷದ 5 ತಿಂಗಳಲ್ಲಿ ರಾಜ್ಯದ ಅರಣ್ಯ ಪ್ರದೇಶದಲ್ಲಿ ಆನೆಗಳ ಸಾವು ಹಾಗೂ ವನ್ಯ ಜೀವಿ ಹಾಗೂ ಮಾನವ ಸಂಘರ್ಷದಲ್ಲಿ ಸಾವನ್ನಪ್ಪಿದವರ ಅಂಕಿ-ಅಂಶಗಳನ್ನು ಬಿಡುಗಡೆ ಮಾಡಿರುವ ಅರಣ್ಯ ಇಲಾಖೆ, ಜನವರಿಯಿಂದ ಮೇ ತಿಂಗಳವರೆಗೆ ರಾಜ್ಯದಲ್ಲಿ 25 ಆನೆಗಳು ಹಾಗೂ 26 ಮಂದಿ ಸಾವನ್ನಪ್ಪಿದ್ದಾರೆ ಎಂದು ತಿಳಿಸಿದೆ. ರಾಜ್ಯದ ಅರಣ್ಯದಲ್ಲಿ ಸಾವನ್ನಪ್ಪಿರುವ 25 ಆನೆಗಳ ಪೈಕಿ 23 ಆನೆಗಳು ಸ್ವಾಭಾ ವಿಕವಾಗಿ ಸಾವನ್ನಪ್ಪಿದ್ದರೆ, 2 ಆನೆಗಳು ಬೇಟೆ ಅಥವಾ ಬೇರೆ ಕಾರಣದಿಂದ ಅಸಹಜ ಸಾವ ನ್ನಪ್ಪಿವೆ. ವನ್ಯಜೀವಿ ದಾಳಿಯಿಂದ 26 ಜನ ಸಾವನ್ನಪ್ಪಿದ್ದು, ಅದರಲ್ಲಿ ಆನೆ ದಾಳಿಯಿಂದ 22 ಜನ ಮೃತಪಟ್ಟಿದ್ದಾರೆ. ಎಷ್ಟು ಆನೆಗಳ ಸಾವು? ಜನವರಿಯಲ್ಲಿ 2, ಫೆಬ್ರುವರಿಯಲ್ಲಿ 6, ಮಾರ್ಚ್ 8 ಏಪ್ರಿನಲ್ಲಿ 3, ಮೇನಲ್ಲಿ 6, ಸೇರಿದಂತೆ ಒಟ್ಟು ಇಲ್ಲಿಯವರೆಗೆ ಅಂದರೆ ಐದು ತಿಂಗಳಿನಲ್ಲಿ 25 ಆನೆಗಳು ಸಾವನ್ನಪ್ಪಿವೆ ಎಂದು ಅರಣ್ಯ ಇಲಾಖೆ ಬಿಡುಗಡೆ ಮಾಡಿರುವಂತಹ ಅಂಕಿ ಅಂಶಗಳಲ್ಲಿ ಬಹಿರಂಗವಾಗಿದೆ.