Subscribe to Updates
Get the latest creative news from FooBar about art, design and business.
Author: kannadanewsnow05
ಉತ್ತರಕನ್ನಡ : ಪ್ರೀತಿಸಿ ಮದುವೆಯಾಗಿದ್ದ ಮಗಳ ನಡೆಗೆ ಕೋಪಗೊಂಡಿದ್ದ ತಂದೆಯೊಬ್ಬ ಮಗಳು ಹಾಗು ಅಳಿಯನಿಗೆ ಚಾಕು ಇರಿದು ಹತ್ಯೆಗೆ ಯತ್ನಾಸಿದ್ದಾನೆ. ಬಳಿಕ ತಾನು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ರಂಗಾಪುರದಲ್ಲಿ ನಡೆದಿದೆ. ಬದನಗೋಡಿನ ಯುವತಿ ಪೋಷಕರಿಗೆ ತಿಳಿಸದೇ ರಂಗಾಪುರದ ಯುವಕನೊಂದಿಗೆ ಕಳೆದ ಮೂರು ತಿಂಗಳ ಹಿಂದೆ ರಿಜಿಸ್ಟರ್ ಮ್ಯಾರೇಜ್ ಆಗಿದ್ದಳು. ಅನ್ಯ ಜಾತಿಯ ಯುವಕ ಎಂದು ಶಂಕರ ಕಮ್ಮಾರ ವಿರೋಧ ವ್ಯಕ್ತಪಡಿಸಿದ್ದ. ಆದರೆ, ಯುವಕನ ಮನೆಗೆ ಮಗಳನ್ನು ನೋಡುವ ನೆಪದಲ್ಲಿ ಬಂದು, ನಿಮ್ಮ ಮದುವೆಗೆ ಸಾಕ್ಷಿ ಹಾಕಿದವರ ಹೆಸರು ಹೇಳುವಂತೆ ಮಗಳ ಮೇಲೆ ಹಲ್ಲೆ ಮಾಡಿದ್ದಾನೆ. ಈ ವೇಳೆ ಮಗಳು ಹೆಸರು ಹೇಳದೇ ಇದ್ದುದಕ್ಕೆ ಹತ್ಯೆಗೆ ಯತ್ನಿಸಿದ್ದಾನೆ. ತಡೆಯಲು ಬಂದ ಅಳಿಯನಿಗೂ ಎದೆ ಹಾಗೂ ಕೈಗೆ ಚಾಕುವಿನಿಂದ ಇರಿದಿದ್ದಾನೆ.ನಂತರ ಅಲ್ಲಿಂದ ತಪ್ಪಿಸಿಕೊಂಡು ತನ್ನೂರಿಗೆ ಬಂದು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ.ಹಲ್ಲೆಗೆ ಒಳಗಾದ ಇಬ್ಬರೂ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅದೃಷ್ಟವಶಾತ್ ಮೂವರೂ ಬದುಕುಳಿದಿದ್ದು, ಇರಿತಕ್ಕೊಳಗಾದ ಇಬ್ಬರೂ…
ಬೆಂಗಳೂರು : ಶಿವರಾತ್ರಿಯ ನಿಮಿತ್ಯ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು, ಕೊಯಮತ್ತೂರಿನ ಇಶಾ ಫೌಂಡೇಶನ್ ನ ಕಾರ್ಯಕ್ರಮದಲ್ಲಿ ಡಿಸಿಎಂ ಡಿಕೆಶಿ ಭಾಗಿಯಾಗಿದ್ದು , ಆಧ್ಯಾತ್ಮಿಕ ಲೋಕದಲ್ಲಿ ಮಿಂದೆದ್ದು ಪುನೀತರಾಗಿದ್ದಾರೆ. ಈ ನಡುವೆ ತಮ್ಮ ಬಾಲ್ಯದ ನೆನಪನ್ನು ಪೋಸ್ಟ್ ಮೂಲಕ ಬಿಚ್ಚಿಟ್ಟಿದ್ದಾರೆ. ಸಾಮಾಜಿಕ ಜಾಲತಾಣ ಟ್ವೀಟ್ ನಲ್ಲಿ ಈ ಕುರಿತು ಮಾಹಿತಿ ಹಂಚಿಕೊಂಡಿದ್ದು, ಕೊಯಮತ್ತೂರಿನ ಇಶಾ ಯೋಗ ಕೇಂದ್ರದಲ್ಲಿ ನಡೆದ ಶಿವರಾತ್ರಿ ಕಾರ್ಯಕ್ರಮದಲ್ಲಿ ಪಾಲ್ಗೊಂಡೆ.ಸದ್ಗುರು ಅವರು ಪ್ರತಿ ಶಿವರಾತ್ರಿಯಂದು ನಡೆಸಿಕೊಡುವ ಈ ಕಾರ್ಯಕ್ರಮದ ಬಗ್ಗೆ ಕೇಳಿದ್ದೆ, ಕಣ್ಣಾರೆ ನೋಡಿ ಇದು ಶಿವಭಕ್ತಿಯ ಶಿಖರ ಅನಿಸಿತು. ನನ್ನ ಹೆಸರಲ್ಲೇ ಶಿವನಿದ್ದಾನೆ. ಅದರ ಹಿಂದೆ ಸ್ವಾರಸ್ಯಕರ ಸಂಗತಿ ಇದೆ. ದೊಡ್ಡ ಆಲಹಳ್ಳಿಯಲ್ಲಿ ಶಿವಾಲ್ದಪ್ಪನ ಬೆಟ್ಟ ಇದೆ. ನಮ್ಮ ಮನೆಯಲ್ಲಿ ಯಾರೇ ಹುಟ್ಟಿದರೂ ಮೊದಲು ಹೆಣ್ಮಕ್ಕಳಿಗೆ ಕೆಂಪಮ್ಮ ಅಂತ ಹೆಸರಿಡುತ್ತಾರೆ. ಗಂಡು ಮಕ್ಕಳಿಗೆ ಕೆಂಪೇಗೌಡ ಅಂತ ಹೆಸರಿಡುತ್ತಾರೆ. ಅದು ಪದ್ದತಿ. ಶಿವಾಲ್ದಪ್ಪನಿಗೆ ನನ್ನ ತಾಯಿ ಹರಕೆ ಮಾಡಿಕೊಂಡಿದ್ದರು. ನಾನು ಹುಟ್ಟಿದ್ದಕ್ಕೆ ನನಗೆ ಮೊದಲು ಕೆಂಪರಾಜ್ ಅಂತ…
ಹುಬ್ಬಳ್ಳಿ : ಚಲಿಸುತ್ತಿದ್ದ ಸಾರಿಗೆ ಬಸ್ ನ ಪಾಟಾ ಕಟ್ ಆಗಿ ಬಸ್ ಪಲ್ಟಿ ಹೊಡೆದ ಪರಿಣಾಮ ಬಸ್ ನಲ್ಲಿದ್ದ 15 ಕ್ಕೂ ಹೆಚ್ಚು ಜನ ಪ್ರಯಾಣಿಕರು ಗಾಯಗೊಂಡ ಘಟನೆ ಹುಬ್ಬಳ್ಳಿ ತಾಲೂಕಿನ ಬ್ಯಾಹಟ್ಟಿ ಗ್ರಾಮದ ಬಳಿ ನಡೆದಿದೆ. ತಾಲೂಕಿನ ಬ್ಯಾಹಟ್ಟಿ ಬಳಿ ಬಸ್ ಚಲಿಸುತ್ತಿರುವಾಗಲೇ ಬಸ್ಸಿನ ಪಾಟಾ ಕಟ್ ಆಗಿದೆ. ಕೂಡಲೇ ಬಸ್ ಅನ್ನು ಚಾಲಕ ಎಷ್ಟೇ ನಿಯಂತ್ರಣಕ್ಕೆ ತರಬೇಕೆಂದರು ಸಾಧ್ಯವಾಗಿಲ್ಲ. ತಕ್ಷಣ ಬಸ್ ಪಲ್ಟಿಯಾಗಿದೆ. ಈ ವೇಳೆ ಬಸ್ ನಲ್ಲಿದ್ದ ಸುಮಾರು 15 ಪ್ರಯಾಣಿಕರಿಗೆ ಗಾಯಗಳಾಗಿವೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.ಇನ್ನು ಗಾಯಗೊಂಡ ಪ್ರಯಾಣಿಕರನ್ನು ತಕ್ಷಣ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲು ಮಾಡಲಾಗಿದೆ. ಘಟನಾ ಸ್ಥಳಕ್ಕೆ ಹುಬ್ಬಳ್ಳಿ ಗ್ರಾಮೀಣ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಗ್ರಾಮೀಣ ಠಾಣೆಯಲ್ಲಿ ಅಪಘಾತದ ಕುರಿತು ಪ್ರಕರಣ ದಾಖಲಾಗಿದೆ.
ಕೊಪ್ಪಳ : ತಾಯಿ ಹೆಸರಲ್ಲಿ ಇರುವ ಆಸ್ತಿಯನ್ನು ಪುತ್ರನ ಹೆಸರಲ್ಲಿ ಮಾಡಿಕೊಡುವಂತೆ ಒತ್ತಾಯಿಸಿ ಪಂಚಾಯತಿ ಕಚೇರಿಯಲ್ಲೇ ಮಹಿಳಾ PDO ಅಧಿಕಾರಿ ಮೇಲೆ ಗ್ರಾಂ ಪಂಚಾಯತ್ ಸದಸ್ಯೆ ಹಾಗು ಆಕೆಯ ಮಗ ಚಪ್ಪಲಿಯಿಂದ ಹಲ್ಲೆ ನಡೆಸಿರುವ ಘಟನೆ ಕೊಪ್ಪಳದಲ್ಲಿ ನಡೆದಿದೆ. ಹೌದು ಈ ಒಂದು ಘಟನೆ ನಡೆದಿದ್ದು ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಹಿರೇಮಾಗೇರಿ ಗ್ರಾಮ ಪಂಚಾಯಿತಿಯಲ್ಲಿ ನಡೆದಿದೆ.ಹಲ್ಲೆಗೆ ಒಳಗಾದಂತ ಮಹಿಳಾ ಅಧಿಕಾರಿಯನ್ನು ಪಿಡಿಒ ರತ್ನಮ್ಮ ಗುಂಡಣ್ಣನವರ ಎಂದು ತಿಳಿದುಬಂದಿದೆ. ಇನ್ನು ಹಲ್ಲೆ ಮಾಡಿದವರನ್ನು ಗ್ರಾಮ ಪಂಚಾಯಿತಿ ಸದಸ್ಯೆ ಶಾಂತಮ್ಮ ಬಂಡಿವಂಡರ, ಪುತ್ರ ಭೀಮೇಶ್ ಎನ್ನಲಾಗಿದೆ. ತಾಯಿ ಹೆಸರಲ್ಲಿ ಇದ್ದ ಆಸ್ತಿಯನ್ನು ಪುತ್ರನ ಹೆಸರಿಗೆ ಮಾಡಿಕೊಡುವಂತೆ ಒತ್ತಾಯಿಸಿ ಹಲ್ಲೆ ಮಾಡಿದ್ದಾರೆ ಎಂದು ಬಲ್ಲ ಮೂಲಗಳಿಂದ ತಿಳಿದುಬಂದಿದೆ.
ಮಂಡ್ಯ : ಮೈಕ್ರೋ ಫೈನಾನ್ಸ್ ಕಿರುಕುಳ ತಡೆಗೆ ರಾಜ್ಯ ಸರ್ಕಾರ ಸುಗ್ರೀವಾಜ್ಞೆ ಜಾರಿ ಮಾಡಿದರು ಸಹ ರಾಜ್ಯದಲ್ಲಿ ಮೈಕ್ರೋಫೈನಾನ್ಸ್ ಸಿಬ್ಬಂದಿಗಳ ಕಾಟ ತಪ್ಪಿಲ್ಲ. ಇದೀಗ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಸಹಳ್ಳಿ ಎಂಬ ಗ್ರಾಮದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳದಿಂದ ರೈತರೊಬ್ಬರು ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ವರದಿಯಾಗಿದೆ. ಮಳವಳ್ಳಿ ತಾಲೂಕಿನ ಸಾಹಳ್ಳಿ ಗ್ರಾಮದಲ್ಲಿ ಸಾಲದ ಹೊರೆ ತಾಳಲಾರದೆ ರೈತ ಸುಬ್ಬೇಗೌಡ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.3 ಎಕರೆ ಜಮೀನು ಹೊಂದಿದ್ದ ಸುಬ್ಬೇಗೌಡ ವ್ಯವಸಾಯಕ್ಕಾಗಿ ಬ್ಯಾಂಕ್, ಸಹಕಾರ ಸಂಘ ಹಾಗೂ ಖಾಸಗಿಯಾಗಿ ಸುಮಾರು 5 ಲಕ್ಷ ಸಾಲ ಮಾಡಿದ್ದರು. ಈ ಹಿನ್ನೆಲೆ ಸಾಲದ ಹೊರೆಯಿಂದ ಮನನೊಂದಿದ್ದ ಸುಬ್ಬೇಗೌಡ ಸೋಮವಾರ ಜಮೀನಿನಲ್ಲಿ ಕ್ರಿಮಿನಾಶಕ ಸೇವಿಸಿ ತೀವ್ರ ಅಸ್ವಸ್ಥಗೊಂಡಿದ್ದರು.ಮಂಡ್ಯದ ಮಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆಗೆ ಸ್ಪಂದಿಸದೇ ಗುರುವಾರ ಮಧ್ಯಾಹ್ನ ಮೃತಪಟ್ಟಿದ್ದಾರೆ. ಮಳವಳ್ಳಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಚಂಡಿಘಡ : ಮಹಿಳೆಯೊಬ್ಬಳು ಹೆತ್ತ ತಾಯಿಯ ತೊಡೆಗೆ ಕಚ್ಚಿ ಮನಬಂದಂತೆ ಥಳಿಸಿ ಚಿತ್ರಹಿಂಸೆ ನೀಡಿರುವಂತಹ ಬೆಚ್ಚಿ ಬೀಳಿಸೋ ಘಟನೆ ಹರಿಯಾಣದಲ್ಲಿ ನಡೆದಿದ್ದು, ಸದ್ಯ ಇದರ ವಿಡಿಯೋ ವೈರಲ್ ಆಗಿ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹೌದು ವೈರಲ್ ಆಗಿರುವ ವಿಡಿಯೋದಲ್ಲಿ ಮಹಿಳೆಯೊಬ್ಬಳು ತನ್ನ ತಾಯಿಗೆ ಪ್ರಾಣಿಗಳ ಮೇಲೆ ಹಲ್ಲೆ ಮಾಡುವಂತೆ ಥಳಿಸುತ್ತಿರುವುದು ಕಂಡುಬಂದಿದೆ. ಇಷ್ಟಕ್ಕೆ ಸುಮ್ಮನಿರದೆ ತಾಯಿಯ ತೊಡೆಗೆ ಕಚ್ಚಿ ಚಿತ್ರಹಿಂಸೆ ನೀಡುತ್ತಿರುವುದು ಸಹ ವಿಡಿಯೋದಲ್ಲಿ ಕಂಡುಬಂದಿದೆ. ಸಂತ್ರಸ್ತೆ ಅಳುತ್ತಾ ತನಗೆ ಹೊಡೆಯಬೇಡ ಎಂದು ಮಗಳಲ್ಲಿ ಪರಿಪರಿಯಾಗಿ ಕೇಳಿಕೊಂಡಿದ್ದಾಳೆ. ಮಹಿಳೆ ತನ್ನ ತಾಯಿಗೆ ಮನಬಂದಂತೆ ಹೊಡೆಯುವುದು, ಕೂದಲನ್ನು ಎಳೆದಾಡುವುದು, ಕಾಲಿನಿಂದ ಒದೆಯುವುದು ಮಾತ್ರವಲ್ಲದೇ ಹಲ್ಲಿನಿಂದ ಕಚ್ಚುವುದು ಕಾಣಿಸಿಕೊಂಡಿದೆ. ಈ ಒಂದು ಘಟನೆ ಹರಿಯಾಣದಲ್ಲಿ ನಡೆದಿದ್ದು, ತಾಯೆ ಮೇಲೆ ಮಗಳು ಈ ರೀತಿ ಹಲ್ಲೆ ಮಾಡಿ ಚಿತ್ರಹಿಂಸೆ ನೀಡುತ್ತಿದ್ದರು ಸಹ ಸಹಾಯಕ್ಕೆ ಬರದೇ ವಿಡಿಯೋ ಮಾಡಿಕೊಳ್ಳುತ್ತಿದ್ದರು. I ಕುರಿತು ನೆಟ್ಟಿಗರು ಮಹಿಳೆ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ಹೊರ ಹಾಕಿದ್ದಾರೆ. ಕೂಡಲೇ ಪೊಲೀಸರು ಮಹಿಳೆಯ…
ಬೆಂಗಳೂರು : ಇನ್ಮುಂದೆ ಅನುಮತಿಯಿಲ್ಲದೆ ಗೃಹ ಸಚಿವ ಜಿ. ಪರಮೇಶ್ವರ್ ಅವರ ಮನೆಗೆ ಹೋಗಿ ಭೇಟಿಯಾಗಕೂಡದು ಎಂದು ಎಲ್ಲಾ ಹಂತದ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಗೆ ರಾಜ್ಯ ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ಅಲೋಕ್ ಮೋಹನ್ ಸೂಚಿಸಿದ್ದಾರೆ. ಈ ಸಂಬಂಧ ಮೆಮೊ ಸಹ ಹೊರಡಿಸಲಾಗಿದೆ. ವರ್ಗಾವಣೆ ಸೇರಿದಂತೆ ವಿವಿಧ ಕಾರಣಗಳಿಗಾಗಿ ಬೆಂಗಳೂರು ಮಾತ್ರವಲ್ಲದೆ, ರಾಜ್ಯದ ನಾನಾ ಕಡೆಗಳಿಂದ ಎಲ್ಲಾ ಹಂತದ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಯು ಗೃಹ ಸಚಿವ ಜಿ. ಪರಮೇಶ್ವರ್ ಅವರನ್ನು ಭೇಟಿ ಮಾಡುತ್ತಿದ್ದರು. ದಿನೇ ದಿನೆ ಭೇಟಿಯಾಗುವವರ ಸಂಖ್ಯೆ ಅಧಿಕವಾದ ಹಿನ್ನೆಲೆಯಲ್ಲಿ ಅನುಮತಿಯಿಲ್ಲದೆ ಹೋಮ್ ಮಿನಿಸ್ಟರ್ ಅವರನ್ನು ಖುದ್ದು ಭೇಟಿಯಾಗಬಾರದು ಎಂದು ಡಿಜಿಪಿ ಸೂಚಿಸಿದ್ದಾರೆ. ನಿರಂತರವಾಗಿ ಕೆಲ ಪೊಲೀಸರು, ಸಿಬ್ಬಂದಿ ವರ್ಗದವರು ಸಚಿವರ ಕಚೇರಿ, ನಿವಾಸಕ್ಕೆ ನೇರವಾಗಿ ಭೇಟಿ ನೀಡುತ್ತಿರುವುದರ ಬಗ್ಗೆ ಸಚಿವರ ಕಚೇರಿಯಿಂದ ಡಿಜಿ ಐಜಿ ಕಚೇರಿಗೆ ಮಾಹಿತಿ ಬಂದ ಹಿನ್ನೆಲೆಯಲ್ಲಿ ಈ ಆದೇಶ ಹೊರಡಿಸಲಾಗಿದೆ. ಈ ವಿಚಾರವಾಗಿ ಅಲೋಕ್ ಮೋಹನ್ ಅವರೇ ಎಲ್ಲಾ ಪೊಲೀಸ್ ಅಧಿಕಾರಿಗಳಿಗೆ ಮೆಮೋ…
ಬೆಂಗಳೂರು : ಬೆಂಗಳೂರಿನಲ್ಲಿ ಚಲಿಸುತ್ತಿದ್ದ ಕಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಕಾರಿನ ಇಂಜಿನ್ ನಲ್ಲಿ ತಾಂತ್ರಿಕ ದೋಷದಿಂದ ಬೆಂಕಿ ಕಾಣಿಸಿಕೊಂಡಿದ್ದು ಕಾರಿನಲ್ಲಿದ್ದ ಚಾಲಕ ಅದೃಷ್ಟವಶಾತ್ ಪ್ರಾಣಪಾಯದಿಂದ ಪಾರಾಗಿರುವ ಘಟನೆ ಬೆಂಗಳೂರು ಚೆನ್ನೈ ರಾಷ್ಟ್ರೀಯ ಹೆದ್ದಾರಿ ಬಳಿ ನಡೆದಿದೆ. ಬೆಂಗಳೂರಿನ ಅತ್ತಿಬೆಲೆ ಗುಡಿ ಗೋಪುರದ ಬಳಿ ಹುಂಡೈ i20 ಕಾರು ಹೊತ್ತಿ ಉರಿದಿದೆ. ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಅತ್ತಿಬೆಲೆ ಬಳಿ ಚೆನ್ನೈ ಮೂಲದ ಶಂಕರ್ ಗೆ ಒಂದು i20 ಹುಂಡೈ ಕಾರು ಸೇರಿತ್ತು. ಇಂಜಿನಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಕಾರಿನಲ್ಲಿದ್ದ ಚಾಲಕ ಕೂಡಲೇ ಕೆಳಗೆ ಇಳಿದಿದ್ದಾನೆ. ಕ್ಷಣಾರ್ಧದಲ್ಲಿ ಇಡೀ ಕಾರಿಗೆ ಬೆಂಕಿ ಹಾಕಿ ಕೆನ್ನಾಲಿಗೆ ಆವರಿಸಿದೆ. TN 06 CE 3143 ನಂಬರ್ ಕಾರು ಬೆಂಕಿಗೆ ಆಹುತಿ ಆಗಿದೆ. ಕೂಡಲೇ ಅಗ್ನಿ ಶಾಮಕ ದಳ ಸಿಬ್ಬಂದಿ ಆಗಮಸಿ ಬೆಂಕಿ ನಂದಿಸಿದೆ. ಅತ್ತಿಬೆಲೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
ಬೆಂಗಳೂರು : ಬೆಂಗಳೂರಿನಲ್ಲಿ ಇತ್ತೀಚೆಗೆ ಕಾಂಗ್ರೆಸ್ ಮುಖಂಡ ಹೈದರ್ ಅಲಿ ಭೀಕರ ಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಂಧಿತ 7 ಆರೋಪಿಗಳಿಗೆ ಮಾರ್ಚ್ 11 ರವರೆಗೆ ಪೊಲೀಸ್ ಕಸ್ಟಡಿಗೆ ನೀಡಿ ಬೆಂಗಳೂರಿನ 29ನೇ ACMM ಕೋರ್ಟ್ ಆದೇಶ ಹೊರಡಿಸಿದೆ. ಹೌದು ಹೈದರ್ ಅಲಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ಬೆಂಗಳೂರಿನ ಅಶೋಕನಗರ ಠಾಣೆಯ ಪೊಲೀಸರು 7 ಆರೋಪಿಗಳನ್ನು ಅರೆಸ್ಟ್ ಮಾಡಿದ್ದರು.ಹಳೇ ದ್ವೇಷದ ಹಿನ್ನೆಲೆಯಲ್ಲಿ ಹೈದರ್ ಅಲಿಯನ್ನು ಹತ್ಯೆ ಮಾಡಿರುವುದಾಗಿ ತನಿಖೆಯ ವೇಳೆ ತಿಳಿದು ಬಂದಿದೆ. ಬಂಧಿತ ಆರೋಪಿಗಳನ್ನ ನಯಾಜ್ ಪಷಾ ಅಲಿಯಾಸ್ ನಾಜುದ್ದೀನ್, ರಿಜ್ವಾನ್, ಸದ್ದಾಂ, ಮತೀನ್, ದರ್ಶನ್, ರಾಹಿದ್, ವಸೀಂ ಎನ್ನಲಾಗಿದ್ದು, ಬಂಧಿತ ಸದ್ದಾಂ, ರಾಹಿದ್, ವಾಸಿಂ, ರಿಜ್ವಾನ್ ವಿರುದ್ಧ ಶಿವಮೊಗ್ಗ ಜಿಲೆಯ ವಿವಿಧ ಠಾಣೆಗಳಲ್ಲಿ ರೌಡಿಶೀಟ್ ಇದೆ. ಕೊಲೆಯಾದ ಹೈದರ್ ಹಾಗೂ ಆರೋಪಿ ನಯಾಜ್ ನಡುವೆ 10 ವರ್ಷಗಳ ದ್ವೇಷವಿತ್ತು ಎಂದು ತಿಳಿದುಬಂದಿದೆ. ಪ್ರಕರಣ ಹಿನ್ನೆಲೆ… ಬಿಬಿಎಂಪಿ ಚುನಾವಣೆಗಾಗಿ ಹೈದರ್ ಅಲಿಯ ಕೊಲೆ ಮಾಡಲಾಗಿದೆ ಎಂದು ಹೇಳಲಾಗುತ್ತಿದೆ.ಮೊನ್ನೆ ರಾತ್ರಿ ಶಾಂತಿ…
ಉತ್ತರಕನ್ನಡ : ಗುಜರಿ ಸಾಮಾನುಗಳಿದಂತಹ ಗೋಡೌನ್ ಗೆ ಆಕಸ್ಮಿಕವಾಗಿ ಬೆಂಕಿ ತಗುಲಿದ್ದ ಪರಿಣಾಮ ಪಕ್ಕದ್ದಲ್ಲಿದ್ದ ಲಾರಿ ಸಮೇತ ಅಪಾರ ವಸ್ತುಗಳು ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದಲ್ಲಿ ನಡೆದಿದೆ. ಉತ್ತರಕನ್ನಡ ಜಿಲ್ಲೆಯ ಹೊನ್ನಾವರ ಬಳಿ ಗುಣವಂತೆ ಬಳಿ ರಾಷ್ಟ್ರೀಯ ಹೆದ್ದಾರಿ 66ರ ಪಕ್ಕದಲ್ಲಿಯೇ ರಾಶಿ ಹಾಕಿದ್ದ ಗುಜರಿ ಸಾಮಾನು ಅಂಗಡಿಗೆ ಬೆಂಕಿ ಬಿದ್ದಿದೆ. ಮಧ್ಯಾಹ್ನದ ಸುಡು ಬಿಸಿಲಿನ ವೇಳೆ ಘಟನೆ ನಡೆಯಿತು. ನೋಡನೋಡುತ್ತಿದ್ದಂತೆ ಜ್ವಾಲೆ ಸಂಪೂರ್ಣ ಅಂಗಡಿಯನ್ನೇ ಆವರಿಸಿಕೊಂಡಿತು. ದಟ್ಟ ಹೊಗೆಯಿಂದ ಸಂಪೂರ್ಣ ಪ್ರದೇಶ ಕಾಣದಂತಾಗಿ ಅಂಗಡಿ ಪಕ್ಕದಲ್ಲೇ ಇದ್ದ ಲಾರಿ ಕೂಡ ಬೆಂಕಿಗೆ ಆಹುತಿಯಾಯಿತು. ಅಗ್ನಿಶಾಮಕದಳದ ಸಿಬ್ಬಂದಿ ಬೆಂಕಿ ನಂದಿಸಲು ಪ್ರಯತ್ನಿಸಿದರೂ ಬೆಂಕಿ ತಹ ಬದಿಗೆ ಬರಲಿಲ್ಲ.ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಘಟನೆ ಸಂಭವಿಸಿರಬಹುದು ಎಂದು ಅಂದಾಜಿಸಲಾಗಿದೆ. ಹೊನ್ನಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.









