Subscribe to Updates
Get the latest creative news from FooBar about art, design and business.
Author: ಸುರೇಶ್
"ಕನ್ನಡ ನ್ಯೂಸ್ ನೌ ಜಾಲತಾಣದ ಮುಖ್ಯ ಸಂಪಾದಕರಾದ ಸುರೇಶ್ ಅವರು ಕಳೆದ 4 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದಾರೆ. ಸರ್ಕಾರದ ಯೋಜನೆಗಳು, ಶಿಕ್ಷಣ ಮತ್ತು ಪ್ರಚಲಿತ ವಿದ್ಯಮಾನಗಳನ್ನು ಸಾಮಾನ್ಯ ಜನರಿಗೂ ಅರ್ಥವಾಗುವಂತೆ ವಿವರಿಸುವುದು ಇವರ ವಿಶೇಷತೆ. ಈ ಮೊದಲು ವಿವಿಧ ವೆಬ್‌ಸೈಟ್‌ಗಳಲ್ಲಿ ನಾಗರಿಕ ಸಮಸ್ಯೆಗಳ ಬಗ್ಗೆ ವರದಿಗಾರರಾಗಿ ಕೆಲಸ ಮಾಡಿರುವ ಇವರು, ಸಮಯೋಚಿತ ಹಾಗೂ ವಿಶ್ವಾಸಾರ್ಹ ಮಾಹಿತಿ ನೀಡುವ ಮೂಲಕ ಓದುಗರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಡಿಜಿಟಲ್ ಸಾಕ್ಷರತೆ ಇವರ ನೆಚ್ಚಿನ ವಿಷಯಗಳಲ್ಲೊಂದು
ಚಿತ್ರದುರ್ಗ : ದೆಹಲಿಯ ಕೆಂಪು ಕೋಟೆ ಬಳಿ ಕಾರು ಸ್ಫೋಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕಾಂಗ್ರೆಸ್ ನಾಯಕರು ಪ್ರಧಾನಿ ಮೋದಿ ಹಾಗೂ ಅಮಿತ್ ಶಾ ರಾಜೀನಾಮೆ ಕೇಳುತ್ತಿದ್ದಾರೆ. ಈ ವಿಚಾರವಾಗಿ ರಾಜ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಬಿಜೆಪಿ ಸಂಸದ ಗೋವಿಂದ ಕಾರಜೋಳ ಉಗ್ರ ಮೇಲೆ ಪ್ರೀತಿ ಇರುವುದಕ್ಕೆ ಕಾಂಗ್ರೆಸ್ ನಾಯಕರು ಅವರ ವಿರುದ್ಧ ಮಾತಾಡಲ್ಲ ಎಂದು ವಾಗ್ದಾಳಿ ನಡೆಸಿದರು. ಚಿತ್ರದುರ್ಗದಲ್ಲಿ ಮಾತನಾಡಿದ ಅವರು, ನಮ್ಮ ದೇಶದ ಪ್ರಜೆಗಳು ವಿರುದ್ಧ ಕಾಂಗ್ರೆಸ್ ನಾಯಕರು ಮಾತಾಡಲ್ಲ ಉಗ್ರರ ಮೇಲೆ ಪ್ರೀತಿ ಇರುವ ಕಾರಣಕ್ಕೆ ಕಾಂಗ್ರೆಸ್ಸಿಗರು ಮಾತನಾಡಲ್ಲ. ನಿಮ್ಮ ಬೆಂಬಲ ಉಗ್ರರಿಗೋ ಪಾಕಿಸ್ತಾನಕ್ಕೂ ಎಂಬುದು ಸ್ಪಷ್ಟಪಡಿಸಿ ಎಂದು ಚಿತ್ರದುರ್ಗದಲ್ಲಿ ಬಿಜೆಪಿ ಸಂಸದ ಗೋವಿಂದ ಕಾರಜೋಳ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ಆಂಜನೇಯ ಸ್ವಾಮಿಗೆ ಈ ವಸ್ತುಗಳನ್ನು ಕೊಡುತ್ತೇನೆ ಎಂದು ಹರಕೆ ಮಾಡಿಕೊಳ್ಳಿ, ಮೂರು ವಾರಗಳಲ್ಲಿ ನಿಮ್ಮ ಕೆಲಸ ಆಗುತ್ತದೆ !!
ಇನ್ನು ಜೀವನದಲ್ಲಿ ಕಷ್ಟಗಳು ಇದ್ದರೆ,ಶ್ರೀ ಆಂಜನೇಯ ಸ್ವಾಮಿಗೆ ಈ ರೀತಿಯಾಗಿ ಹರಕೆ ಮಾಡಿಕೊಂಡರೆ ,ಜೀವನದಲ್ಲಿ ಇರುವಂತಹ ಇಂತಹ ಕಷ್ಟಗಳುಇದು ಯಾವ ರೀತಿಯ ಕಷ್ಟವೇ ಆದರೂ ಸರಿ ಆಂಜನೇಯಸ್ವಾಮಿ ಕೃಪೆಯಿಂದ ಎಲ್ಲಾ ಕಷ್ಟಗಳು ಜೀವನದಲ್ಲಿ ಪರಿಹಾರವಾಗುತ್ತದೆ . ಪಂಡಿತ್ ವಿದ್ಯಾಧರ್ ನಕ್ಷತ್ರಿ ಪ್ರಧಾನ ಅರ್ಚಕರು ಹಾಗೂ ಮಾಂತ್ರಿಕರು 9686268564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತುಪ್ರಶ್ನೆಗಳಿಗೆ ಉತ್ತರಿಸೃಬಹುದು ಏಷ್ಟೇ ಪೂಜೆ ಪ್ರಯತ್ನಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇ ಘೋರ ನಿಗೂಢ ಗುಪ್ತಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ಶ್ರೀ ಕ್ಷೇತ್ರ ಕಟೀಲು ರಕ್ತೇಶ್ವರೀ ದೇವಿಯ ವಿಶೇಷ ಪೂಜಾದೈವಿಕ ವಿಧಿವಿಧಾನದಿಂದ ಪರಿಹಾರ ತಿಳಿಸುತ್ತಾರೆ ಶ್ರೀ ವಿದ್ಯಾಧರ್ ನಕ್ಷತ್ರಿ ಪ್ರಧಾನ್ ತಾಂತ್ರಿಕ್ 9686268564 ಎಲ್ಲಾ ಸಂಕಷ್ಟಗಳು ದೂರವಾಗುವುದು ಖಚಿತ. ಸಾಕ್ಷಾತ್ ಶ್ರೀರಾಮ ಭಕ್ತ ಆಂಜನೇಯನ ಮಹಿಮೆಗಳು ಅಪಾರ. ನಂಬಿ…
ಬೆಂಗಳೂರು : ರಾಜ್ಯದ ವಿವಿಧ ಕಾರ್ಮಿಕ ಕಾಯ್ದೆಯಡಿ ನೋಂದಣಿಯಾಗಿರುವ ಸರ್ಕಾರಿ ಹಾಗೂ ಖಾಸಗಿ ಕಂಪೆನಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲ ಮಹಿಳಾ ಉದ್ಯೋಗಿಗಳಿಗೆ ಋತುಚಕ್ರ ವೇಳೆ ಮಾಸಿಕ ವೇತನಸಹಿತ ಒಂದು ರಜೆ ನೀಡುವಂತೆ ಕಾರ್ಮಿಕ ಇಲಾಖೆ ಆದೇಶ ಹೊರಡಿಸಿದೆ. ಕಾರ್ಖಾನೆಗಳ ಕಾಯ್ದೆ-1948, ಕರ್ನಾಟಕ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳ ಕಾಯ್ದೆ-1961, ತೋಟ ಕಾರ್ಮಿಕರ ಕಾಯ್ದೆ-1951, ಬೀಡಿ ಮತ್ತು ಸಿಗಾರ್ ಕಾರ್ಮಿಕರ (ಉದ್ಯೋಗ ಮತ್ತು ಷರತ್ತುಗಳು) ಕಾಯ್ದೆ-1966 ಹಾಗೂ ಮೋಟಾರು ಸಾರಿಗೆ ಕಾರ್ಮಿಕರ ಕಾಯ್ದೆ-1961ರಡಿ ನೋಂದಣಿಯಾಗಿರುವ ಎಲ್ಲ ಕೈಗಾರಿಕೆಗಳು ಹಾಗೂ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ 18ರಿಂದ 52 ವರ್ಷದ ವಯೋಮಿತಿಯ ಎಲ್ಲ ಖಾಯಂ ಆಥವಾ ಗುತ್ತಿಗೆ ಹೊರಗುತ್ತಿಗೆ ಮಹಿಳಾ ನೌಕರರಿಗೆ ಅವರ ಆರೋಗ್ಯ ಕಾರ್ಯದಕ್ಷತೆ ಮತ್ತು ಕಾರ್ಯಕ್ಷಮತೆ ಹೆಚ್ಚಿಸಿ ಅವರ ಮನೋಸ್ಥೈರ್ಯವನ್ನು ಹೆಚ್ಚಿಸುವ ಸದುದ್ದೇಶದಿಂದ ಅವರ ಋತುಚಕ್ರದ ಸಮಯದಲ್ಲಿ ಪ್ರತಿ ಮಾಸಿಕ ಒಂದು ದಿನದ ರಜೆಯಂತೆ ವಾರ್ಷಿಕ 12 ದಿನಗಳ ವೇತನ ಸಹಿತ ರಜೆಯ ಸೌಲಭ್ಯವನ್ನು ಸಂಬಂಧಿಸಿದ ಉದ್ಯೋಗದಾತರು ಒದಗಿಸುವಂತೆ ಸೂಚನೆ ನೀಡಲಾಗಿದೆ. ಕಾರ್ಮಿಕರು, ಕಾರ್ಮಿಕ ಸಂಘಗಳು,…
BREAKING : ತುಮಕೂರು ಜಿಲ್ಲೆಯಲ್ಲಿ ಕಾಂಗ್ರೆಸ್ ಮತ್ತೆ ವೈಟ್ ವಾಷ್ ಆಗಬಹುದು : ಶಾಸಕ ಕೆ.ಎನ್ ರಾಜಣ್ಣ ಸ್ಪೋಟಕ ಹೇಳಿಕೆ!
ತುಮಕೂರು : ತುಮಕೂರು ಜಿಲ್ಲೆಯಲ್ಲಿ ಕಾಂಗ್ರೆಸ್ ಮತ್ತೆ ವೈಟ್ ವಾಷ್ ಆಗಬಹುದು ಎಂದು ಕಾಂಗ್ರೆಸ್ ಶಾಸಕ ಕೆ ಎನ್ ರಾಜಣ್ಣ ಸ್ಫೋಟಕ ಹೇಳಿಕೆ ನೀಡಿದ್ದಾರೆ. ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ದೊಡ್ಡೇರಿಯ ಜನ ಸಂಪರ್ಕ ಸಭೆಯಲ್ಲಿ ಕೆ ಎನ್ ರಾಜಣ್ಣ ಈ ಒಂದು ಹೇಳಿಕೆ ನೀಡಿದ್ದಾರೆ. 2004ರಲ್ಲಿ ನಾನು ಜೆಡಿಎಸ್ ನಿಂದ ಸ್ಪರ್ಧಿಸಿ ಶಾಸಕನಾಗಿದ್ದೆ ಆಗ ತುಮಕೂರು ಜಿಲ್ಲೆಯಲ್ಲಿ ಕಾಂಗ್ರೆಸ್ ವೈಟ್, ವಾಷ್ ಆಗಿತ್ತು. ಈಗ ಜಿಲ್ಲೆಯಲ್ಲಿ ಮತ್ತೆ ಅದೇ ಸ್ಥಿತಿ ಬರುತ್ತೇನೋ ಗೊತ್ತಿಲ್ಲ. ರಾಜಕಾರಣದಲ್ಲಿ ಯಾರು ಶಾಶ್ವತ ಮಿತ್ರರು ಅಲ್ಲ ಶತ್ರುಗಳು ಇರಲ್ಲ ಎಂದು ಶಾಸಕ ಕೆ ಎನ್ ರಾಜಣ್ಣ ಹೇಳಿಕೆ ನೀಡಿದ್ದಾರೆ. 2004ರಲ್ಲಿ ಕಾಂಗ್ರೆಸ್ ಪಕ್ಷದ ನನಗೆ ಸರಿಯಾದ ಗೌರವ ನೀಡಲಿಲ್ಲ. ಆಗ ನಾನು ಜೆಡಿಎಸ್ ಪಕ್ಷ ಸೇರಿಕೊಂಡು ಜಿಲ್ಲೆಯಲ್ಲಿ ಪ್ರವಾಸ ಮಾಡಿದೆ. ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಸಂಪೂರ್ಣ ವೈಟ್ ವಾಶ್ ಮಾಡಿದ್ವಿ. ಕಾಂಗ್ರೆಸ್ ಗೆ ಮತ್ತೆ ಅಂತಹ ಸ್ಥಿತಿ ಬರುತ್ತೇನೋ ಗೊತ್ತಿಲ್ಲ ನೋಡೋಣ ಮುಂದೆ ಏನಾಗುತ್ತೋ ಅಂತ…
ನವದೆಹಲಿ : ಕಳೆದ ಕೆಲವು ದಿನಗಳ ಹಿಂದೆ ದೆಹಲಿಯ ಕೆಂಪು ಕೋಟೆಯ ಬಳಿ ಕಾರು ಸ್ಫೋಟ ಪ್ರಕರಣ ನಡೆದ ಬೆನ್ನಲ್ಲೆ ಇದೀಗ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮತ್ತೊಂದು ಸ್ಪೋಟ ಸಂಭವಿಸಿದೆ ಮಹಿಪಾಲಪುರ ರಾಡಿಸನ್ ಹೋಟೆಲ್ ಬಳಿ ಸ್ಪೋಟ ಸಂಭವಿಸಿದೆ. ಬೆಳಿಗ್ಗೆ 9.18ರ ಸುಮಾರಿಗೆ ಸ್ಫೋಟದ ಸದ್ದು ಕೇಳಿಸಿದೆ. ಸ್ಪೋಟದ ಸದ್ದಿಗೆ ಸಾರ್ವಜನಿಕರು ಬೆಚ್ಚಿ ಬಿದ್ದಿದ್ದಾರೆ. ಈಗಾಗಲೇ ಮೊದಲು ಸ್ಪೋಟದ ಪರಿಣಾಮ 12 ಜನರು ಸಾವನ್ನಪ್ಪಿದ್ದು 17 ಗಂಭೀರವಾಗಿ ಗಾಯಗೊಂಡಿದ್ದಾರೆ. ಇದೀಗ ಇಂದು ಬೆಳಿಗ್ಗೆ ಮತ್ತೊಂದು ಸ್ಫೋಟ ಸಂಭವಿಸಿದ್ದು ದೆಹಲಿಯ ಜನತೆ ಬೆಚ್ಚಿಬಿದ್ದಿದ್ದಾರೆ. ಸದ್ಯ ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದಾರೆ.
ಬೆಂಗಳೂರು : ಇತ್ತೀಚಿಗೆ ಆನ್ಲೈನ್ ವಂಚನೆ ಪ್ರಕರಣಗಳು ಹೆಚ್ಚಾಗುತ್ತಿದ್ದು, ಬೆಂಗಳೂರಲ್ಲಿ ಡೇಟಿಂಗ್ ಆ್ಯಪ್ ಮೂಲಕ ಯುವತಿ ಒಬ್ಬಳು ಯುವಕನನ್ನು ಪರಿಚಯಿಸಿಕೊಂಡಿದ್ದಾಳೆ. ಬಳಿಕ ಯುವಕನನ್ನು ಲಾಡ್ಜ್ ಗೆ ಕರೆದು ಇದು ಯುವಕನ 58 ಗ್ರಾಂ ಚಿನ್ನಾಭರಣ ದೋಚಿ ಪರಾರಿಯಾಗಿರುವ ಘಟನೆ ವರದಿಯಾಗಿದೆ. ಹೌದು ಡೇಟಿಂಗ್ ಆ್ಯಪ್ ಮುಖಾಂತರ ಪರಿಚಯವಾದ ಯುವಕನನ್ನು ಯುವತಿಯೊಬ್ಬಳು ಲಾಡ್ಜ್ಗೆ ಕರೆದೊಯ್ದು ಪ್ರಜ್ಞೆ ತಪ್ಪಿಸಿ ಆತನ ಬಳಿ ಇದ್ದ 58 ಗ್ರಾಂ ಚಿನ್ನಾಭರಣ ಹಾಗೂ ನಗದು ದೋಚಿ ಪರಾರಿಯಾದ ಘಟನೆ ಇಂದಿರಾನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ತಮಿಳುನಾಡಿನ ಅವಿನಾಶ್ ಕುಮಾರ್ ವಂಚನೆಗೊಳಗಾದ ಯುವಕ. ಪೀಣ್ಯದ ನಾಗಸಂದ್ರದ ಪಿಜಿ ಯೊಂದರಲ್ಲಿ ವಾಸವಾಗಿದ್ದ ಅವಿನಾಶ್, ನಗರದ ಖಾಸಗಿ ಕಂಪೆನಿಯಲ್ಲಿ ಕೆಲಸ ಮಾಡುತ್ತಿದ್ದರು. ಎರಡು ತಿಂಗಳ ಹಿಂದೆ ಹ್ಯಾಪನ್ ಆ್ಯಪ್ ಹೆಸರಿನ ಡೇಟಿಂಗ್ ಆ್ಯಪ್ನಲ್ಲಿ ಯುವಕನನ್ನು ಆರೋಪಿತೆ ಪರಿಚಯಿಸಿಕೊಂಡಿದ್ದಳು. ಇಬ್ಬರು ಮೊಬೈಲ್ ನಂಬರ್ ವಿನಿಮಯ ಮಾಡಿಕೊಂಡು ಪೋನ್ನಲ್ಲಿ ಮಾತನಾಡುತ್ತಿದ್ದರು. ಮಾತುಕತೆಯಂತೆ ನ.1ರಂದು ಇಂದಿರಾನಗರದ ರೆಸ್ಟೋರೆಂಟ್ವೊಂದರಲ್ಲಿ ಇಬ್ಬರೂ ಭೇಟಿಯಾಗಿ ಮದ್ಯ ಪಾರ್ಟಿ ಮಾಡಿದ್ದಾರೆ. ಮದ್ಯ…
ಮೈಸೂರು : ಮೈಸೂರು ಜಿಲ್ಲೆಯಲ್ಲಿ ಹುಲಿ ದಾಳಿ ಮುಂದುವರೆದಿದ್ದು, ಎಚ್ ಡಿ ಕೋಟೆ ತಾಲೂಕಿನ ಬೆಳ್ತೂರು ಬಳಿ ಹುಲಿ ದಾಳಿಗೆ ಮಗ್ಗೆ ಮರಳಿ ದೇವಸ್ಥಾನದ ಎತ್ತು ಬಲಿಯಾಗಿದೆ. ಗ್ರಾಮದ ಜನರು ಪೂರಿಸುತ್ತಿದ್ದ ಊರ ಬಸವ ಹುಲಿ ದಾಳಿಗೆ ಬಲಿಯಾಗಿದೆ. ಸದ್ಯ ಘಟನಾ ಸ್ಥಳಕ್ಕೆ ಅರಣ್ಯ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಹುಲಿ ದಾಳಿ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಿ ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.
ಬಿಜೆಪಿಯಲ್ಲಿ ಯಾವುದೇ ಕ್ರಾಂತಿ ಇಲ್ಲ, ರಾಜ್ಯಾಧ್ಯಕ್ಷರಾಗಿ ಬಿವೈ ವಿಜಯೇಂದ್ರ ಮುಂದುವರೆಯುತ್ತಾರೆ : ಬಿ.ಎಸ್ ಯಡಿಯೂರಪ್ಪ
ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ನವೆಂಬರ್ ನಲ್ಲಿ ಬಹುದೊಡ್ಡ ಕ್ರಾಂತಿ ಆಗಲಿದೆ ಎಂದು ಕೆಲವು ವಿಪಕ್ಷ ನಾಯಕರು ಹಾಗೂ ಇನ್ನೂ ಕೆಲವರು ಕಾಂಗ್ರೆಸ್ ಪಕ್ಷದ ನಾಯಕರೇ ಹೇಳಿಕೆ ನೀಡಿದ್ದಾರೆ. ಇನ್ನು ಈ ವಿಚಾರವಾಗಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಪ್ರತಿಕ್ರಿಯೆ ನೀಡಿದ್ದು ನವೆಂಬರ್ ನಲ್ಲಿ ಕ್ರಾಂತಿ ಆಗುತ್ತೋ ಬಿಡುತ್ತೋ ಗೊತ್ತಿಲ್ಲ. ಆದರೆ ಬಿಜೆಪಿಯಲ್ಲಿ ಯಾವುದೇ ಕ್ರಾಂತಿ ಆಗುವುದಿಲ್ಲ. ರಾಜ್ಯದ ಅಧ್ಯಕ್ಷರಾಗಿ ಬಿ ವೈ ವಿಜಯೇಂದ್ರ ಅವರೇ ಮುಂದುವರೆಯುತ್ತಾರೆ ಎಂದು ತಿಳಿಸಿದರು. ಶಿವಮೊಗ್ಗದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ನವೆಂಬರ್ ಕ್ರಾಂತಿಯ ಬಗ್ಗೆ ನಾವು ಮಾತನಾಡಲ್ಲ. ನಾನು ಈ ಬಗ್ಗೆ ಮಾತನಾಡುವುದಿಲ್ಲ ಆದರೆ ಕಾದು ನೋಡೋಣ ಬಿಜೆಪಿಯಲ್ಲಿ ಯಾವುದೇ ಕ್ರಾಂತಿ ಆಗಲ್ಲ. ರಾಜ್ಯ ಬಿಜೆಪಿ ಅಧ್ಯಕ್ಷರಾಗಿ ವಿಜಯೇಂದ್ರ ಮುಂದುವರೆಯುತ್ತಾರೆ. ಕಾರ್ಯಕರ್ತರು ಕೂಡ ಅವರೇ ಮುಂದುವರಿಯಬೇಕೆಂದು ಬಯಸಿದ್ದಾರೆ. ಬಿ.ವೈ ವಿಜಯೇಂದ್ರ ಒಳ್ಳೆಯ ಕೆಲಸ ಮಾಡುತ್ತಿದ್ದಾರೆ ಎಂದು ಶಿವಮೊಗ್ಗದಲ್ಲಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಹೇಳಿಕೆ ನೀಡಿದರು. ಇನ್ನು ದೆಹಲಿಯ ಕೆಂಪು ಕೋಟೆಯ ಬಳಿ ಕಾರು ಸ್ಫೋಟ…
ಗದಗ : ರಾಜ್ಯದಲ್ಲಿ ಮತ್ತೊಂದು ಬೆಚ್ಚಿ ಬೀಳಿಸೋ ಘಟನೆ ನಡೆದಿದ್ದು, ವ್ಯಕ್ತಿಯೋರ್ವನನ್ನು ಬೆತ್ತಲೆಗೊಳಿಸಿ, ಕೈ,ಕಾಲು ಕಟ್ಟಿ ನೀರಿನಲ್ಲಿ ಎಸೆದಿರುವ ಘಟನೆ ತಾಲೂಕಿನ ಕಣಗಿನಹಾಳ ಗ್ರಾಮದಲ್ಲಿ ನಡೆದಿದೆ. ಈಶಪ್ಪ ಕುರಿ ಎಂಬುವರ ಜಮೀನಿನ ನೀರಿನ ಹೊಂಡದಲ್ಲಿ ಸುಮಾರು 35 ರಿಂದ 40 ವರ್ಷದ ಅನಾಮಧೇಯ ವ್ಯಕ್ತಿಯ ಶವ ಪತ್ತೆಯಾಗಿದೆ. ಹೆಸರು ವಿಳಾಸ ಇನ್ನೂ ತಿಳಿದು ಬಂದಿಲ್ಲ. ದುಷ್ಕರ್ಮಿಗಳು ವ್ಯಕ್ತಿಯನ್ನು ಒಳ ಉಡುಪುನಿಂದ ಕೈ ಹಾಗೂ ಪ್ಯಾಂಟ್‌ನಿಂದ ಕಾಲು ಕಟ್ಟಿ ನೀರಿನಲ್ಲಿ ಎಸೆದಿದ್ದಾರೆ. ಮುಖ, ಕುತ್ತಿಗೆ ಹಾಗೂ ತಲೆಗೆ ಗಾಯವಾಗಿರುವ ಬಗ್ಗೆ ಪೊಲೀಸರು ಮಾಹಿತಿ ನೀಡಿದ್ದಾರೆ. ಬೆತ್ತಲೆಗೊಳಿಸಿ ಉದ್ದೇಶ ಪೂರ್ವಕವಾಗಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗುತ್ತಿದೆ.ಸ್ಥಳಕ್ಕೆ ಎಸ್.ಪಿ ರೋಹನ್‌ಜಗದೀಶ್, ಡಿವೈಎಸ್ಪಿ ಮುರ್ತುಜಾ ಖಾದ್ರಿ ಹಾಗೂ ಸಿಪಿಐ, ಬೆರಳಚ್ಚು ತಜ್ಞರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗದಗ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.
ಬೆಂಗಳೂರು : ಬೆಂಗಳೂರಲ್ಲಿ ಬೈಕ್ ಅಪಘಾತದಲ್ಲಿ ಡೆಹ್ರಾಡೂನ್ ಮೂಲದ ದೀಪಕ್ ಸಾವನನಪ್ಪಿದ್ದಾರೆ. ಬೆಂಗಳೂರಿನ ವಿಂಡ್ಸರ್ ಮ್ಯಾನರ್ ಬಳಿ ರಾತ್ರಿ ಒಂದು ದುರ್ಘಟನೆ ಸಂಭವಿಸಿದೆ. ಮೃತ ದೀಪಕ್ ಖಾಸಗಿ ಕಂಪನಿ ಕೆಲಸ ಮಾಡುತ್ತಿದ್ದರು. ಸ್ನೇಹಿತೆ ರೋಷಣಿ ಜೊತೆಗೆ ಕೋರಮಂಗಲಕ್ಕೆ ದೀಪಕ್ ಹೋಗಿದ್ದರು. ಮಧ್ಯರಾತ್ರಿ ದೇವನಹಳ್ಳಿ ಅಪಾರ್ಟ್ಮೆಂಟ್ ಗೆ ಮರಳುತ್ತಿದ್ದಾಗ ಈ ಒಂದು ಅಪಘಾತ ಸಂಭವಿಸಿದೆ. ಮಧ್ಯರಾತ್ರಿ ದೇವನಹಳ್ಳಿ ಅಪಾರ್ಟ್ಮೆಂಟ್ ಗೆ ದೀಪಕ್ ತೆರಳುತ್ತಿದ್ದರು ಈ ವೇಳೆ ವಿಂಡ್ಸರ್ ಮ್ಯಾನರ್ ಬಳಿ ಸ್ಟೆಪ್ಸ್ ಮೇಲೆ ದೀಪಕ್ ಬೈಕ್ ಇಳಿಸಿದ್ದಾರೆ. ಆಯತಪ್ಪಿ ಬುಲೆಟ್ ಬೈಕ್ ನಿಂದ ದೀಪಕ್ ಬಿದ್ದು ತಲೆಗೆ ಪೆಟ್ಟಾಗಿತ್ತು. ದೀಪಕ್ ಗೆಳತಿ ರೋಷಣಿಗೆ ಕಾಲು ಮುರಿದು ಬಿದ್ದು ಒದಾಡುತ್ತಿದ್ದರು. ಪೊಲೀಸರು ಕೂಡಲೇ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಡೆಹರಾಡೂನ್ ಮೂಲಕ ದೀಪಕ್ ಸಾವನಪ್ಪಿದ್ದಾರೆ. ಹೈಗ್ರೌಂಡ್ಸ್ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.













