Author: kannadanewsnow05

ದಕ್ಷಿಣಕನ್ನಡ : ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣದ ಅನಾಮಿಕ ದೂರುದಾರನನ್ನು ಎಸ್.ಐ.ಟಿ ಅಧಿಕಾರಿಗಳು ಬಂಧಿಸಿದ್ದಾರೆ. ಧರ್ಮಸ್ಥಳದಲ್ಲಿ ಶವ ಹೂತಿದೆ ಎಂಬ ಮಾಸ್ಕ್‌ಮ್ಯಾನ್‌ನ ದೂರಿನ ಹಿನ್ನೆಲೆಯಲ್ಲಿ ಎಸ್‌ಐಟಿ ಅಧಿಕಾರಿಗಳು ಬಂಧಿಸಿದ್ದಾರೆ. ವಿಚಾರಣೆಯ ನಂತರ ಸುಳ್ಳು ಮಾಹಿತಿ ನೀಡಿದ ಆರೋಪದ ಮೇಲೆ ಬಂಧನವಾಗಿದೆ. ಇದೀಗ ಮಾಸ್ಕ್ ಮ್ಯಾನ್ ಹೆಸರು ಮತ್ತು ಫೋಟೋವನ್ನು ಎಸ್ಐಟಿ ಅಧಿಕಾರಿಗಳು ಕೊನೆಗೂ ರಿವಿಲ್ ಮಾಡಿದ್ದಾರೆ. ಮಾಸ್ಕ್​ಮ್ಯಾನ್​ ಹೆಸರು ಸಿಎನ್​ ಚಿನ್ನಯ್ಯ ಅಲಿಯಾಸ್ ಚೆನ್ನ ಎಂದು ತಿಳಿದುಬಂದಿದ್ದು, ಆತನನ್ನು ಬಂಧಿಸಿದ್ದಾರೆ. ತಲೆಬುರುಡೆ ಕೇಸ್​ನಲ್ಲಿ ಎಸ್​ಐಟಿ ಅಧಿಕಾರಿಗಳು ಚಿನ್ನಯ್ಯನನ್ನು ಬಂಧಿಸಿದ್ದು, ಆ ಮೂಲಕ ಸಾಕ್ಷಿ ಸಂರಕ್ಷಣಾ ಕಾಯ್ದೆಯಿಂದ ವಿಮುಖಗೊಳಿಸಲಾಗಿದೆ. ಇದೀಗ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಸಿವಿಲ್ ಮತ್ತು JMFC ಕೋರ್ಟ್​ಗೆ ಎಸ್​ಐಟಿ ಅಧಿಕಾರಿಗಳು ಚಿನ್ನಯ್ಯನನ್ನು ಹಾಜರುಪಡಿಸಿದ್ದಾರೆ.

Read More

ಬಳ್ಳಾರಿ : ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಪಟ್ಟಂತೆ ಶವ ಹೂತು ಹಾಕಿದ್ದಾಗಿ ಮಾಸ್ಕ್ ಮ್ಯಾನ್ ದೂರು ನೀಡಿರುವ ವಿಚಾರವಾಗಿ ಇದೀಗ ದೂರುದಾರರನ್ನು SIT ಅಧಿಕಾರಿಗಳು ಅರೆಸ್ಟ್ ಮಾಡಿ ಕೆಲವೇ ಕ್ಷಣಗಳಲ್ಲಿ ಕೋರ್ಟಿಗೆ ಹಾಜರುಪಡಿಸಲಿದ್ದಾರೆ, ಇದರ ಮಧ್ಯ, ಮಂಗಳೂರು ಜಿಲ್ಲಾ ನ್ಯಾಯಾಲಯದಿಂದ ಜಾಮೀನು ಸಿಕ್ಕರೂ ಧರ್ಮಸ್ಥಳ ಪೊಲೀಸ್‌ ಠಾಣೆಗೆ ವಿಚಾರಣೆಗೆ ಹಾಜರಾಗದ ಹಿನ್ನೆಲೆಯಲ್ಲಿ ಯೂಟ್ಯೂಬರ್‌ ಸಮೀರ್‌ ಎಂ.ಡಿ. ಮನೆಗೆ ಪೊಲೀಸರು ನೋಟಿಸ್‌ ಅಂಟಿಸಿ ಬಂದಿದ್ದಾರೆ. ಹೌದು ಸಮೀರ್‌ ಎಂ.ಡಿ. ಕೋರ್ಟ್‌ಗೆ ನೀಡಿದ ವಿಳಾಸ ಬಳ್ಳಾರಿ ಜಿಲ್ಲೆಯ ಕೌಲ್‌ ಬಜಾರ್‌ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿರುವ ಬಂಡಿಹಟ್ಟಿ ನಿವಾಸಕ್ಕೆ ಶುಕ್ರವಾರ ನೋಟಿಸ್‌ ನೀಡಲು ತೆರಳಿದಾಗ ಮನೆ ಬಾಗಿಲಿಗೆ ಬೀಗ ಹಾಕಲಾಗಿತ್ತು. ಈ ಹಿನ್ನೆಲೆಯಲ್ಲಿ ಪೊಲೀಸರು ಮನೆ ಗೋಡೆಗೆ ನೋಟಿಸ್‌ ಅಂಟಿಸಿದ್ದಾರೆ. ಪೊಲೀಸರ ಇನ್ನೊಂದು ತಂಡ ಬೆಂಗಳೂರು ಜಿಗಣಿಯಲ್ಲಿರುವ ಹುಲ್ಲಹಳ್ಳಿಯಲ್ಲಿರುವ ಬಾಡಿಗೆ ಮನೆಗೆ ಹೋದಾಗ ಕೂಡ ಮನೆ ಬಾಗಿಲಿಗೆ ಬೀಗ ಹಾಕಿದ್ದ ಹಿನ್ನೆಲೆಯಲ್ಲಿ ಆ ಮನೆ ಗೋಡೆಗೂ ಪೊಲೀಸರು ನೋಟಿಸ್‌ ಅಂಟಿಸಿದ್ದಾರೆ.

Read More

ಬೆಂಗಳೂರು : ಕಳೆದ ಜೂನ್ ನಾಲ್ಕರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಲ್ತೊಳಿತ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ಬೆಂಗಳೂರಿನ ವಿಧಾನಸೌಧದಲ್ಲಿ ಸಿದ್ದರಾಮಯ್ಯ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ನಡೆಯಿತು. ಸಭೆಯಲ್ಲಿ ಆರ್‌ಸಿಬಿ ವಿರುದ್ಧ ಕೇಶ ದಾಖಲಿಸಲು ಸಚಿವ ಸಂಪುಟ ಸಭೆ ನಿರ್ಧರಿಸಿದೆ. ಹೌದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಿವೃತ್ತ ನ್ಯಾ.ಮೈಕಲ್ ಕುನ್ಹಾ ಸಮಿತಿಯ ತನಿಖಾ ವರದಿ ಸಲ್ಲಿಕೆ ವಿಚಾರವಾಗಿ ಇಂದು ಸಂಪುಟ ಸಭೆಯಲ್ಲಿ ಚರ್ಚಿಸಲಾಯಿತು. ಈ ವೇಳೆ ಆರ್ಸಿಬಿ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ನಿರ್ಧಾರಿಸಲಾಯಿತು. ಅಲ್ಲದೇ ರಾಜ್ಯ ಕ್ರಿಕೆಟ್ ಸಂಸ್ಥೆಯ ವಿರುದ್ಧವು ಕೇಸ್ ದಾಖಲಿಸುವ ನಿರ್ಧರಿಸಲಾಗಿದೆ. ಸಿಎಂ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಒಂದು ನಿರ್ಧಾರ ತೆಗೆದುಕೊಳ್ಳಲಾಗಿದೆ. ಪೊಲೀಸ್ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ವರದಿಯಲ್ಲೂ ಶಿಫಾರಸು ಮಾಡಲಾಗಿದೆ.

Read More

ಬೆಂಗಳೂರು : ಬೆಳಗಾವಿಯಲ್ಲಿ ನಡೆದ ಕಾಂಗ್ರೆಸ್ ಕಾರ್ಯಕ್ರಮದಲ್ಲಿ ವೇದಿಕೆ ಮೇಲೆ ಕರೆದು ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಳಗಾವಿಯ ಹೆಚ್ಚುವರಿ ಎಸ್ಪಿ ಆಗಿದ್ದ ನಾರಾಯಣ ಭರಮನಿ ಅವರಿಗೆ ಗದರಿ ಕೈ ಎತ್ತಿ ಹೊಡೆಯಲು ಮುಂದಾಗಿದ್ದರು. ಅದಾದ ಬಳಿಕ ಸಿಎಂ ನನ್ನು ಅವಮಾನಿಸಿದ್ದಾರೆ ಎಂದು ಬರಮನಿ ರಾಜೀನಾಮೆಗೆ ಮುಂದಾಗಿದ್ದರು ಆದರೆ ಅವರು ಮತ್ತೆ ತಮ್ಮ ನಿರ್ಧಾರ ಬದಲಿಸಿ ಕರ್ತವ್ಯಕ್ಕೆ ಹಾಜರಾಗಿದ್ದರು. ಇದೀಗ ರಾಜ್ಯ ಸರ್ಕಾರ ಎಎಸ್‌ಪಿ ನಾರಾಯಣ ಭರಮನಿಗೆ ಮುಂಬಡ್ತಿ ನೀಡಿದ್ದು ಧಾರವಾಡ ಎಎಸ್ಪಿಯಾಗಿದ್ದ ನಾರಾಯಣ ಬರಮನಿ ಅವರಿಗೆ ಬೆಳಗಾವಿ ಕಾನೂನು ಸುವ್ಯವಸ್ಥೆ ಡಿಸಿಪಿ ಹುದ್ದೆ ನೀಡಲಾಗಿದೆ. ಈ ಮೂಲಕ ಸರ್ಕಾರ ಡ್ಯಾಮೇಜ್ ಕಂಟ್ರೋಲ್ ಗೆ ಮುಂದಾಗಿದೆ. ಬೆಳಗಾವಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಾರ್ವಜನಿಕವಾಗಿ ಸಿಎಂ ಸಿದ್ದರಾಮಯ್ಯ ನಾರಾಯಣ ಭರಮನಿ ಮೇಲೆ ಕೈ ಎತ್ತಲು ಮುಂದಾಗಿದ್ದರು. ಇದರಿಂದ ಮನನೊಂದು ಭರಮನಿ ರಾಜೀನಾಮೆಗೆ ಮುಂದಾಗಿದ್ದರು. ಬಳಿಕ ಹಿರಿಯ ಅಧಿಕಾರಿಗಳ ಮನವೊಲಿಕೆ ಹಾಗೂ ಸಿಎಂ ಸಿದ್ದರಾಮಯ್ಯ ಅವರ ಮನವೊಲಿಕೆಯಿಂದ ಮತ್ತೆ ಕರ್ತವಕ್ಕೆ ಹಾಜರಾಗಿದ್ದರು.ಇದರ ಬೆನ್ನಲ್ಲೇ ಇದೀಗ ನಾರಾಯಣ ಬರಮನಿ ಅವರಿಗೆ…

Read More

ನವದೆಹಲಿ : ರಾಮನಗರ ಜಿಲ್ಲೆಯ ಬಿಡದಿ ತಾಲೂಕಿನಲ್ಲಿರುವ ಕೇತಗಾನಹಳ್ಳಿಯಲ್ಲಿನ ಭೂವತೋರಿ ಆರೋಪ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಸುಪ್ರೀಂಕೋರ್ಟ್ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿಗೆ ಬಿಗ್ ರಿಲೀಫ್ ನೀಡಿದೆ. ಕರ್ನಾಟಕ ಹೈಕೋರ್ಟ್‌ನಲ್ಲಿ ದಾಖಲಿಸಿರುವ ನ್ಯಾಯಾಂಗ ನಿಂದನೆ ವಿಚಾರಣೆಗೆ ಸುಪ್ರೀಂಕೋರ್ಟ್​ ತಾತ್ಕಾಲಿಕವಾಗಿ ತಡೆ ನೀಡಿದೆ. ಹೌದು ಕೇತಗಾನಹಳ್ಳಿಯಲ್ಲಿ ಜಮೀನು ಒತ್ತುವರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಎಚ್​ ಡಿ ಕುಮಾರಸ್ವಾಮಿ ವಿರುದ್ಧದ ನ್ಯಾಯಾಂಗ ನಿಂದನೆ ವಿಚಾರಣೆಗೆ ಸುಪ್ರೀಂಕೋರ್ಟ್ ತಡೆ ನೀಡಿದೆ. ಕರ್ನಾಟಕ ಹೈಕೋರ್ಟ್​ ಆದೇಶ ಪ್ರಶ್ನಿಸಿ ಕುಮಾರಸ್ವಾಮಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಪಂಕಜ್ ಮಿಥಲ್ ಹಾಗೂ ನ್ಯಾಯಾಮೂರ್ತಿ.ಪ್ರಸನ್ನ ಬಿ. ವರಾಳೆ ಅವರ ದ್ವಿಸದಸ್ಯ ಪೀಠ, ಮುಂದಿನ ಆದೇಶದವರೆಗೂ ಕುಮಾರಸ್ವಾಮಿ ವಿರುದ್ಧದ ನ್ಯಾಯಾಂಗ ನಿಂದನೆ ಪ್ರಕರಣದ ವಿಚಾರಣೆಗೆ ತಡೆ ನೀಡಿ ಆದೇಶ ಹೊರಡಿಸಿದೆ. ಸುಪ್ರೀಂಕೋರ್ಟ್‌ನಲ್ಲಿ ನ್ಯಾಯಾಂಗ ನಿಂದನೆ ಪ್ರಶ್ನಿಸಿ ಸಲ್ಲಿಸಿರುವ ಅರ್ಜಿ ವಿಚಾರಣೆಗೆ ಬಾಕಿ ಇರುವುದರಿಂದ ತಮ್ಮ ವಿರುದ್ಧದ ಕಾನೂನು ಪ್ರಕ್ರಿಯೆಗೆ ತಡೆ ನೀಡುವಂತೆ ಕುಮಾರಸ್ವಾಮಿ ಹೈಕೋರ್ಟ್‌ಗೆ ಮನವಿ ಮಾಡಿದ್ದರು. ಕುಮಾರಸ್ವಾಮಿ…

Read More

ಚಿತ್ರದುರ್ಗ : ಚಿತ್ರದುರ್ಗದಲ್ಲಿ ಇಂದು ಘೋರವಾದ ದುರಂತ ಒಂದು ಸಂಭವಿಸಿದ್ದು, ಸರ್ಕಾರಿ ಶಾಲೆಯಲ್ಲಿ ಗ್ಯಾಸ್ ಲೀಕ್ ಆಗಿ ಏಕಾಏಕಿ ಸಿಲಿಂಡರ್ ಸ್ಪೋಟಗೊಂಡಿದೆ.ಅದೃಷ್ಟವಶಾತ್ ಇಂದು ಮಕ್ಕಳಿಗೆ ಶಾಲೆಗೆ ರಜೆ ಇರುವ ಹಿನ್ನೆಲೆಯಲ್ಲಿ ಯಾವುದೇ ಪ್ರಾಣಪಾಯ ಸಂಭವಿಸಿಲ್ಲ. ಹೌದು ಮಲ್ಲಾಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಸಿಲಿಂಡರ್ ಸ್ಫೋಟಗೊಂಡಿದೆ. ಚಿತ್ರದುರ್ಗ ತಾಲೂಕಿನ ಮಲ್ಲಾಪುರ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಸಿಲಿಂಡರ್ ಸ್ಫೋಟಗೊಂಡಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಶಾಲೆಯ ಅಡುಗೆ ಕೋಣೆಯಲ್ಲಿ ಸಿಲಿಂಡರ್ ಲೀಕ್ ಆಗಿ ಏಕಾಏಕಿ ಸ್ಪೋಟಗೊಂಡಿದೆ. ಮುಂಜಾಗ್ರತಕ್ಕ ಕ್ರಮವಾಗಿ ವಿದ್ಯಾರ್ಥಿಗಳಿಗೆ ಇಂದು ರಜೆ ಘೋಷಣೆ ಮಾಡಲಾಗಿತ್ತು. ಹಾಗಾಗಿ ಶಾಲೆಯಲ್ಲಿಯೇ ಬ್ಯಾಗ್ ಬಿಟ್ಟು ಮಕ್ಕಳಿಗೆ ಮನೆಗೆ ತೆರಳುವಂತೆ ಸೂಚನೆ ನೀಡಲಾಗಿತ್ತು. ಘಟನೆ ಕುರಿತಂತೆ ಚಿತ್ರದುರ್ಗದ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು : ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ 11 ಜನ ಕಾಲ್ತುಳಿತದಿಂದ ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ಹೆಚ್ಚುವರಿ ಪೊಲೀಸ್ ಆಯುಕ್ತ ವಿಕಾಸ್ ಕುಮಾರ್ ಅಮಾನತು ಹಿನ್ನೆಲೆಯಲ್ಲಿ ಅಮಾನತು ರದ್ದು ಪಡಿಸಿದ ಸಿಇಟಿ ಆದೇಶ ಪ್ರಶ್ನೆ ಸಿ ಮೇಲ್ಮನವಿ ಸಲ್ಲಿಸಲಾಗಿದೆ. ಹೈಕೋರ್ಟ್ ವಿಭಾಗೀಯ ಪೀಠದಲ್ಲಿ ರಾಜ್ಯ ಸರ್ಕಾರ ಮೇಲ್ಮನವಿ ವಿಚಾರಣೆ ನಡೆಸಿದ ಹೈಕೋರ್ಟ್ ಈ ವೇಳೆ ಪೊಲೀಸರ ಅಮಾನತುಕ್ರಮವನ್ನು ರಾಜ್ಯ ಸರ್ಕಾರ ಸಮರ್ಥಿಸಿಕೊಂಡಿತು. ರಾಜ್ಯ ಸರ್ಕಾರದ ಪರವಾಗಿ ಪಿ. ಎಸ್ ರಾಜಗೋಪಾಲ್ ವಾದ ಮಂಡಿಸಿದರು ಅನುಮತಿ ಕೇಳಿದ ದಿನವೇ ಪೊಲೀಸರು ಅನುಮತಿ ನಿರಾಕರಿಸಬೇಕಿತ್ತು ಅನುಮತಿ ನೀಡದಿದ್ದರೂ ಪೊಲೀಸ್ ಆಯುಕ್ತಾರಾದಿಯಾಗಿ ಎಲ್ಲರೂ ಸಿದ್ಧತೆ ಆರಂಭಿಸಿದ್ದಾರೆ.ಪೊಲೀಸ್ ಆಯುಕ್ತರು ಅಂದು ಬೆಳಗ್ಗೆ 11:40ಕ್ಕೆ ಬಂದೋ ಬಸ್ತ್ ಗೆ ಸೂಚನೆ ನೀಡಿದ್ದಾರೆ. ಮೆರವಣಿಗೆಗೆ ಅನುಮತಿ ನಿರಾಕರಿಸಿದರೆ ನಿಬಂಧನೆ ಏಕೆ ವಿಧಿಸಲಿಲ್ಲ? ಪೊಲೀಸರು ಕಾರ್ಯಕ್ರಮ ನಡೆಸಿದಂತೆ ನಿರ್ಬಂಧ ವಿಧಿಸಬಹುದಿತ್ತು. ದುರ್ಘಟನೆಯಿಂದ ಸರ್ಕಾರಕ್ಕೆ ಮುಜುಗರವಾಗಿದ್ದರಿಂದ ಅವರನ್ನು ಅಮಾನತು ಪಡಿಸಲಾಗಿದೆ ಎಂದು ಪೊಲೀಸರ ವಿರುದ್ಧವೇ ರಾಜ್ಯ ಸರ್ಕಾರ ಆರೋಪಿಸಿತು. ಗುಪ್ತಚರ ಇಲಾಖೆ ಮುಖ್ಯಮಂತ್ರಿಗಳಿಗೆ ವರದಿ ನೀಡಿತ್ತು…

Read More

ಬೆಂಗಳೂರು : ಕನ್ನಡದ ಹೆಸರಾಂತ ಆ್ಯಂಕರ್ ಆಗಿರುವ ಯಾವುದೇ ವೇದಿಕೆ ಇರಲಿ ಯಾವುದೇ ಸಭೆ ಸಮಾರಂಭಗಳಿರಲಿ ನಿರರ್ಗಳವಾಗಿ ಯಾವುದೇ ಸ್ಕ್ರಿಪ್ಟ್ ಇಲ್ಲದೆ ಸುಲಲಿತವಾಗಿ ಮಾತನಾಡುವಂತಹ ಆ್ಯಂಕರ್ ಅನುಶ್ರೀ ಅವರು ತಮ್ಮ ಅಭಿಮಾನಿಗಳಿಗೆ ಕೊನೆ ಕೊನೆಗೂ ಸಿಹಿಸುದ್ದಿ ನೀಡಿದ್ದು, ಆಗಸ್ಟ್ ತಿಂಗಳಲ್ಲಿ ಅವರ ವಿವಾಹ ನಡೆಯಲಿದೆ ಎಂದು ವರದಿಗಳಿವೆ. ಹೌದು ಆಗಸ್ಟ್ 28ಕ್ಕೆ ಅನುಶ್ರೀ ಮದುವೆ ನಡೆಯಲಿದೆ ಎಂಬ ಮಾಹಿತಿ ಸಿಕ್ಕಿದೆ. ಬೆಂಗಳೂರು ಮೂಲದ ಕಾರ್ಪೋರೇಟ್ ಉದ್ಯೋಗಿ ಜೊತೆ ಅವರು ವಿವಾಹ ಆಗುತ್ತಿದ್ದಾರೆ. ಹಾಗಾದರೆ ಇದು ಲವ್ ಮ್ಯಾರೇಜಾ? ಅಲ್ಲಾ ಪಕ್ಕಾ ಅರೇಂಜ್ ಮ್ಯಾರೇಜ್ ಎನ್ನುತ್ತಿವೆ ಮೂಲಗಳು. ಕುಟುಂಬದವರು ನೋಡಿದ ಹುಡುಗನ ಜೊತೆ ಅನುಶ್ರೀ ವಿವಾಹ ಆಗುತ್ತಿದ್ದಾರಂತೆ. ಬೆಂಗಳೂರಿನಲ್ಲೇ ಈ ವಿವಾಹ ಗ್ರಾಂಡ್ಆಗಿ ನೆರವೇರಲಿದೆ ಎನ್ನಲಾಗುತ್ತಿದೆ. ಪ್ರಸಿದ್ಧ ಕನ್ನಡ ಆ್ಯಂಕರ್ ಅನುಶ್ರೀ ಅವರ ಮದುವೆಯ ಸುದ್ದಿ ಈಗ ಅಧಿಕೃತವಾಗುತ್ತಿದೆ. ಆಗಸ್ಟ್ 28ಕ್ಕೆ ಅವರ ವಿವಾಹ ನಡೆಯಲಿದೆ ಎಂದು ವರದಿಗಳಿವೆ. ಬೆಂಗಳೂರಿನ ಕಾರ್ಪೋರೇಟ್ ಉದ್ಯೋಗಿಯೊಂದಿಗೆ ಅವರ ವಿವಾಹ ನಡೆಯುವ ಸಾಧ್ಯತೆ ಇದೆ. ಈ ಬಗ್ಗೆ…

Read More

ನವದೆಹಲಿ : ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿ 131 ದಿನಗಳ ಬಳಿಕ ಸೆರೆವಾಸದಿಂದ ಮುಕ್ತಿ ಪಡೆದಿರುವ ನಟ ದರ್ಶನ್​ಗೆ ಇಂದು ಬಿಗ್‌ ಡೇ ಆಗಿದೆ. ನಟ ದರ್ಶನ್ ಪವಿತ್ರಾ ಗೌಡ ಸೇರಿ ಪ್ರಮುಖ ಆರೋಪಿಗಳಿಗೆ ಹೈಕೋರ್ಟ್ ನೀಡಿರುವ ಜಾಮೀನು ಪ್ರಶ್ನಿಸಿ ಬೆಂಗಳೂರು ಪೊಲೀಸರು ಸಲ್ಲಿಸಿದ್ದ ಅರ್ಜಿಯನ್ನು ಇಂದು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸಿತು. ದರ್ಶನ್ ಮತ್ತು ಗ್ಯಾಂಗ್ ನಿಂದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿಗಳ ಜಾಮೀನು ರದ್ದು ಕೋರಿದ ಸರ್ಕಾರದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಈ ವೇಳೆ ವಿಚಾರಣೆಯನ್ನು ಸುಪ್ರೀಂಕೋರ್ಟ್ ದ್ವೀ ಸದಸ್ಯ ಪೀಠ ಮುಂದೂಡಿರು. ಈ ವೇಳೆ ಬಂಧನದ ಕಾರಣಗಳನ್ನು ಅಷ್ಟೇ ನಾವು ಕೇಳುತ್ತಿದ್ದೇವೆ ಬೇರೆ ಕೇಳುತ್ತಿಲ್ಲ.ನಟ ದರ್ಶನ್ ಗೆ ಯಾಕೆ ಜಾಮೀನು ಕೊಡಬಾರ್ದು? ಬಂಧನ ಕಾನೂನು ಬದ್ಧವಾಗಿಲ್ಲ ಎನ್ನುವುದಾಗಿದೆ ಇದಕ್ಕೆ ಉತ್ತರ ಕೊಡಿ.  ಎಂದು ರಾಜ್ಯ ಸರ್ಕಾರದ ಪರ ವಕೀಲರಿಗೆ ಸುಪ್ರೀಂ ಕೋರ್ಟ್ ಸೂಚನೆ ನೀಡಿತು ಬಳಿಕ ವಿಚಾರಣೆಯನ್ನು ಜುಲೈ…

Read More

ಬೆಂಗಳೂರು : ಬೆಂಗಳೂರಿನ ಮೆಟ್ರೋ ಪ್ರಯಾಣಿಕರಿಗೆ ಇದೀಗ ಬಿಎಮ್ಆರ್‌ಸಿಎಲ್ ಸಿಹಿ ಸುದ್ದಿ ಒಂದನ್ನು ನೀಡಿದ್ದು ಮೆಟ್ರೋ ರೈಲು ಸಂಚರಿಸುವ ಮಾರ್ಗಗಳಲ್ಲಿ ನೆಟ್ವರ್ಕ್ ಸಮಸ್ಯೆ ಹೆಚ್ಚಾಗಿದ್ದು, ಇದನ್ನು ನಿವಾರಿಸಲು ಇದೀಗ ವೈಫೈ ಅಳವಡಿಕೆಗೆ ಬಿಎಮ್ಆರ್‌ಸಿಎಲ್ ಮುಂದಾಗಿದೆ. ಮೆಟ್ರೋ ಮಾರ್ಗಗಳಲ್ಲಿ ಉಂಟಾಗುವ ನೆಟ್‌ವರ್ಕ್ ಸಮಸ್ಯೆ ನಿವಾರಣೆಗೆ ಬಿಎಂಆರ್‌ಸಿಎಲ್, ಮೆಟ್ರೋ ನಿಲ್ದಾಣಗಳಲ್ಲಿ ಐಬಿಎಸ್, ಬಿಟಿಎಸ್ ಸೆಲ್ಯುಲಾರ್ ಟವರ್ ಮತ್ತು ಪೋಲ್‌ಗಳನ್ನು ಇಟ್ಟು ವೈಫೈ ಮೂಲಕ ಗ್ರಾಹಕರಿಗೆ 4G, 5G ಸೇವೆ ಒದಗಿಸಲು ಮುಂದಾಗಿದೆ. ನಮ್ಮ ಮೆಟ್ರೋ ಎರಡನೇ ಹಂತದ ಸುರಂಗ ಹಾಗೂ ಎತ್ತರಿಸಿದ ಮಾರ್ಗದಲ್ಲಿ ನಿರಂತರ ಮತ್ತು ಸುಗಮ ಮೊಬೈಲ್ ಸಂಪರ್ಕ ಒದಗಿಸಲು ಅಡ್ವಾನ್‌ಸ್ಡ್ ಕಮ್ಯೂನಿಕೇಶನ್ ಆ್ಯಂಡ್ ಎಲೆಕ್ಟ್ರಾನಿಕ್ಸ್ ಸಿಸ್ಟಮ್ಸ್ ಕಂಪನಿ ಸಂಸ್ಥೆಯೊಂದಿಗೆ ಬಾಡಿಗೆ ಒಪ್ಪಂದಕ್ಕೆ ಸಹಿ ಹಾಕಿದೆ. ಈ ಮೂಲಕ ಮೆಟ್ರೋ ಮಾರ್ಗದ ಅಲ್ಲಲ್ಲಿ ಪ್ರಯಾಣಿಕರಿಗೆ ಉಂಟಾಗುತ್ತಿರುವ ನೆಟ್‌ವರ್ಕ್ ಸಮಸ್ಯೆ ತಪ್ಪಲಿದೆ. ವಿಶೇಷವಾಗಿ ಭೂಗತ ಮಾರ್ಗವಿರುವ ಡೈರಿ ವೃತ್ತದಿಂದ ನಾಗವಾರದವರೆಗೆ 12 ನಿಲ್ದಾಣಗಳ ನಡುವೆ ಸಂಚರಿಸುವ ಪ್ರಯಾಣಿಕರಿಗೆ ಅನುಕೂಲ ಆಗಲಿದೆ. ಪ್ರಯಾಣ ದರದ ಹೊರತಾಗಿ…

Read More