Author: ಸುರೇಶ್‌

"ಕನ್ನಡ ನ್ಯೂಸ್ ನೌ ಜಾಲತಾಣದ ಮುಖ್ಯ ಸಂಪಾದಕರಾದ ಸುರೇಶ್ ಅವರು ಕಳೆದ 4 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದಾರೆ. ಸರ್ಕಾರದ ಯೋಜನೆಗಳು, ಶಿಕ್ಷಣ ಮತ್ತು ಪ್ರಚಲಿತ ವಿದ್ಯಮಾನಗಳನ್ನು ಸಾಮಾನ್ಯ ಜನರಿಗೂ ಅರ್ಥವಾಗುವಂತೆ ವಿವರಿಸುವುದು ಇವರ ವಿಶೇಷತೆ. ಈ ಮೊದಲು ವಿವಿಧ ವೆಬ್‌ಸೈಟ್‌ಗಳಲ್ಲಿ ನಾಗರಿಕ ಸಮಸ್ಯೆಗಳ ಬಗ್ಗೆ ವರದಿಗಾರರಾಗಿ ಕೆಲಸ ಮಾಡಿರುವ ಇವರು, ಸಮಯೋಚಿತ ಹಾಗೂ ವಿಶ್ವಾಸಾರ್ಹ ಮಾಹಿತಿ ನೀಡುವ ಮೂಲಕ ಓದುಗರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಡಿಜಿಟಲ್ ಸಾಕ್ಷರತೆ ಇವರ ನೆಚ್ಚಿನ ವಿಷಯಗಳಲ್ಲೊಂದು

ಬೆಂಗಳೂರು : ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಚರ್ಚೆ ನಡುವೆ ಅಹಿಂದ ಶಕ್ತಿ ಪ್ರದರ್ಶನ ನಡೆಯುತ್ತಿದ್ದು, ನವೆಂಬರ್ 19 ರಂದು ಬೆಂಗಳೂರಿನಲ್ಲಿ ಬೃಹತ್ ಸಮಾವೇಶ ಆಯೋಜನೆ ಮಾಡಲಾಗಿದೆ. ಹಾವನೂರು ವರದಿಗೆ 50 ವರ್ಷ ತುಂಬಿದ ಹಿನ್ನೆಲೆಯಲ್ಲಿ ಸಮಾವೇಶ ಹಮ್ಮಿಕೊಂಡಿದ್ದು ಹಿಂದುಳಿದ ಜಾತಿಗಳ ಒಕ್ಕೂಟದ ಅಧ್ಯಕ್ಷ ರಾಮಚಂದ್ರಪ್ಪ ಈ ಕುರಿತು ಮಾಹಿತಿ ನೀಡಿದರು. ಎಲ್ ಜಿ ಹಾವನೂರು ವರದಿಗೆ 50 ವರ್ಷ ತುಂಬಿದೆ ಸುವರ್ಣ ಮಹೋತ್ಸವದ ಅಂಗವಾಗಿ ನವೆಂಬರ್ 19ರಂದು ಸಮಾವೇಶ ಹಮ್ಮಿಕೊಂಡಿದ್ದು ಹಿಂದುಳಿದ ಜಾತಿಗಳ ಒಕ್ಕೂಟದಿಂದ ಸಮಾವೇಶ ಆಯೋಜನೆ ಮಾಡಲಾಗಿದೆ. ನವೆಂಬರ್ 19 ರ ಸಮಾವೇಶವನ್ನು ಸಿಎಂ ಸಿದ್ದರಾಮಯ್ಯ ಉದ್ಘಾಟಿಸಲಿದ್ದಾರೆ. ಹಿಂದೆ ವರ್ಗದ ಸಚಿವರು ಶಾಸಕರು ಮುಖಂಡರು ಭಾಗಿಯಾಗಲಿದ್ದಾರೆ. ಮರು ಸಮೀಕ್ಷೆಗೆ ವಿರೋಧ ಮಾಡಿದರೆ ದಂಗೆ ಹೇಳುತ್ತೇವೆ ಸಿದ್ದರಾಮಯ್ಯ ಅವರನ್ನು ಕೆಳಗಿಳಿಸಿದರೆ. ಕಾಂಗ್ರೆಸ್ ನಿರ್ನಾಮ ಆಗಲಿದೆಯಿಂದ ಬೆಂಬಲ ಇರುವವರೆಗೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಕೆಳಗಿಳಿಸುವುದು ಸುಲಭವಲ್ಲ. ಕಾಂಗ್ರೆಸ್ ಹೈಕಮಾಂಡ್ಗೆ ಹಿಂದುಳಿದ ಜಾತಿಗಳ ಒಕ್ಕೂಟದಿಂದ ಎಚ್ಚರಿಕೆ ನೀಡಿದರು.

Read More

ಮೈಸೂರು : ನಿನ್ನೆ ನಡೆದ ದೆಹಲಿ ಸ್ಫೋಟ ಬಿಹಾರ ಚುನಾವಣೆ ಮೇಲೆ ಪರಿಣಾಮ ಬೀರಬಹುದು. ಅದೂ ಕೂಡ ಬಿಜೆಪಿ ವಿರುದ್ಧವಾಗಿ ಪರಿಣಾಮ ಬೀರಬಹುದು ಹಾಗಾಗಿ ಕೇಂದ್ರ ಸರ್ಕಾರವೇ ಈ ಕುರಿತು ತನಿಖೆ ನಡೆಸಲಿ ಎಂದು ಸಿಎಂ ಸಿದ್ದರಾಮಯ್ಯ ಅಭಿಪ್ರಾಯಪಟ್ಟಿದ್ದಾರೆ. ದೆಹಲಿ ಸ್ಫೋಟ ಇವತ್ತಿನ ಬಿಹಾರ ಚುನಾವಣೆ ಮೇಲೆ ಪ್ರಭಾವ ಬೀರುತ್ತದೆಯೇ ಎಂಬ ಪ್ರಶ್ನೆಗೆ ಉತ್ತರಿಸಿ, ಚುನಾವಣೆ ವೇಳೆಯೇ ಬಾಂಬ್ ಬ್ಲಾಸ್ಟ್​ಗಳ ಬಗ್ಗೆ ಕೇಂದ್ರ ಸರ್ಕಾರವೇ ಹೇಳಬೇಕು. ಕೇಂದ್ರವೇ ತನಿಖೆ ನಡೆಸಿ ಉತ್ತರಿಸಲಿ‌. ಬಾಂಬ್ ಬ್ಲಾಸ್ಟ್​ಗಳು ಆಗಬಾರದು. ಇದರಿಂದಾಗುವ ಅಮಾಯಕರ ಜೀವಹಾನಿ ತುಂಬಾ ಬೇಸರದ ಸಂಗತಿ ಎಂದರು.

Read More

ನವದೆಹಲಿ : ದೆಹಲಿಯ ಕೆಂಪುಕೋಟೆ ಬಳಿ ಸಂಭವಿಸಿದ ಕಾರು ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಪೊಲೀಸರು ಇಬ್ಬರು ವೈದ್ಯರು ಸೇರಿದಂತೆ 8 ಮಂದಿಯನ್ನು ಬಂಧಿಸಿದ್ದಾರೆ. ಜೈಶ್ ಎ ಮೊಹ್ಮಮದ್ ಉಗ್ರ ಸಂಘಟನೆ ಸಂಪರ್ಕದ ಶಂಕೆ ಹಿನ್ನೆಲೆಯಲ್ಲಿ ಹರಿಯಾಣದ ಫರಿದಾಬಾದ್ ನಲ್ಲಿ ಮುಜಾಮ್ಮಿಲ್, ಇಬ್ಬರು ವೈದ್ಯರು ಸೇರಿ 8 ಜನರನ್ನು ಪೊಲೀಸರು ಬಂಧಿಸಿದ್ದಾರೆ. ಇದೀಗ ಡಾಕ್ಟರ್ ಶಾಹೀನ್ ಫೋಟೋ ಬರಲಾಗಿದ್ದು ವೃತ್ತಿಯಲ್ಲಿ ವೈದ್ಯ ಆಗಿದ್ದ ಶಾಹಿದ್ ಪ್ರವೃತ್ತಿಯಲ್ಲಿ ಭಯೋತ್ಪಾದಿಕೆಯಾಗಿದ್ದಾಳೆ ಈಕೆಗೆ ಜೈ ಸಂಘಟನೆಯ ಲಿಂಕ್ ಇದೆ ಎಂದು ತಿಳಿದುಬಂದಿದೆ. ದೆಹಲಿ ಕಾರು ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ IB, NIA, NSG & ಸ್ಥಳೀಯರ ತಂಡವನ್ನು ರಚನೆ ಮಾಡಲಾಗಿದೆ. 500 ಕ್ಕೂ ಹೆಚ್ಚು ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಈ ತಂಡದಲ್ಲಿದ್ದಾರೆ. ದೆಹಲಿಯ ಕೆಂಪು ಕೋಟೆಯ ಬಳಿ i20 ಕಾರು ಸ್ಪೋಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದುವರೆಗೂ 9 ಜನರು ಸಾವನ್ನಪ್ಪಿದ್ದರು. ಇದೀಗ ಮತ್ತೆ ಮೂವರು ಚಿಕಿತ್ಸೆ ಫಲಕರಿಯಾಗದೆ ಸಾವನಪ್ಪಿದು ಮೃತರ ಸಂಖ್ಯೆ 12ಕ್ಕೆ ಏರಿಕೆಯಾಗಿದೆ…

Read More

ಮೈಸೂರು : ನಮ್ಮದು ಬಹುತ್ವ ರಾಷ್ಟ್ರ ಹಾಗಾಗಿ ಭಾರತ ಎಂದಿಗೂ ಹಿಂದೂ ರಾಷ್ಟ್ರ ಆಗಲ್ಲ. ಹಲವು ಕಲೆ, ಸಂಸ್ಕೃತಿ, ಭಾಷೆ ಹಾಗು ಧರ್ಮಗಳಿರುವ ದೇಶ ನಮ್ಮ ಭಾರತ. ಹಾಗಾಗಿ ಭಾರತ ಎಂದು ಹಿಂದೂ ರಾಷ್ಟ್ರ ಆಗುವುದಿಲ್ಲ ಎಂದು ಮೈಸೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ ನೀಡಿದರು. ಮೈಸೂರಿನಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, RSS ಬಹಳ ದಿನದಿಂದ ಹಿಂದೂ ರಾಷ್ಟ್ರ ಅಂತ ಹೇಳುತ್ತಿದೆ. ಆದರೆ ಯಾವತ್ತೂ ಭಾರತ ಹಿಂದೂ ರಾಷ್ಟ್ರವಾಗುವುದಿಲ್ಲ. ಈ ಒಂದು ಹೇಳಿಕೆಗೆ ಆರ್ ಅಶೋಕ್ ತಿರುಗೇಟು ನೀಡಿದ್ದು ಹಿಂದೂ ಎನ್ನುವುದು ಒಂದು ಜೀವನ ಪದ್ಧತಿ ಅಯೋಧ್ಯೆಯಲ್ಲಿ ರಾಮಮಂದಿರ ಆಗಲ್ಲ ಅಂತ ಹೇಳುತ್ತಿದ್ದರು ಅದು ಆಯ್ತು ಜಮ್ಮು ಕಾಶ್ಮೀರದಲ್ಲಿ ವಿಶೇಷ ಕಾಯಿದೆ 370 ರದ್ದು ಮಾಡಲು ಆಗಲ್ಲ ಎನ್ನುತ್ತಿದ್ದರು. ಕೇಂದ್ರ ಸರ್ಕಾರ ವಿಶೇಷ ಕಾಯ್ದೆ 373 ರದ್ದು ಪಡಿಸಿದೆ ಪಾಕಿಸ್ತಾನದ ಜನರು ರಾಹುಲ್ ಗಾಂಧಿಯನ್ನು ಪ್ರೀತಿಸುತ್ತಾರೆ ಪಾಕಿಸ್ತಾನದವರು ರಾಹುಲ್ ಗಾಂಧಿ ಅವರನ್ನು ಪ್ರೀತಿಸುವುದು ಇಡೀ ಪ್ರಪಂಚಕ್ಕೆ ಗೊತ್ತಿದೆ. ಪಾಕಿಸ್ತಾನದಲ್ಲಿ ರಾಹುಲ್ ಗಾಂಧಿ ಫೋಟೋ…

Read More

ಕಲಬುರ್ಗಿ : ಕಲಬುರ್ಗಿಯಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು, ಟಿಪ್ಪರ್ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿರುವ ಘಟನೆ ವರದಿಯಾಗಿದೆ. ಬೈಕ್ ಸವಾರರು ಸಾವನಪ್ಪಿರುವ ಘಟನೆ ಕಲಬುರ್ಗಿ ತಾಲೂಕಿನ ಫರತಾಬಾದ್ ಬಳಿ ಈ ಒಂದು ಭೀಕರ ಅಪಘಾತ ಸಂಭವಿಸಿದೆ. ಭಾಗಣ್ಣ ಆಡಿನ (31) ಮತ್ತು ಶರಣಬಸಪ್ಪ ಪೂಜಾರಿ (32) ಎಂದು ತಿಳಿದುಬಂದಿದೆ. ಜೇವರ್ಗಿ ತಾಲೂಕಿನ ಕಲ್ಲೂರು ಮತ್ತು ಕೊಳಕೂರು ಗ್ರಾಮದ ನಿವಾಸಿಗಳು ಎಂದು ತಿಳಿದುಬಂದಿದೆ. ಜೇವರ್ಗಿ ಕಡೆಯಿಂದ ಕಲಬುರ್ಗಿ ಕಡೆಗೆ ಬರುತ್ತಿದ್ದಾಗ ಈ ಒಂದು ಅಪಘಾತ ಸಂಭವಿಸಿದೆ. ಕಲ್ಬುರ್ಗಿ ಸಂಚಾರ ಪೊಲೀಸ್ ಠಾಣೆ-1ರಲ್ಲಿ ಅಪಘಾತದ ಕುರಿತು ಪ್ರಕರಣ ದಾಖಲಾಗಿದೆ.

Read More

ಲವಂಗದಿಂದ ಈ ಪರಿಹಾರವನ್ನು ಮಾಡಿಕೊಳ್ಳಿ ಮೂರು ಶುಕ್ರ ವಾರ ಗಳ ಕಾಲ ಈ ಪರಿಹಾರವನ್ನು ನೀವು ಪಾಲಿಸಿಕೊಂಡು ಬಂದಿದೆ ಅದರೆ ನಿಮ್ಮ ಜೀವನದಲ್ಲಿ ಎದುರಾಗುತ್ತ ಇರುವಂತಹ ಹಣಕಾಸಿಗೆ ಸಂಬಂಧಪಟ್ಟ ವಿಚಾರಗಳು ಬೇಗ ಪರಿಹರವಾಗುತ್ತದೆ. ಪಂಡಿತ್  ವಿದ್ಯಾಧರ್ ನಕ್ಷತ್ರಿ ಪ್ರಧಾನ ಅರ್ಚಕರು ಹಾಗೂ ಮಾಂತ್ರಿಕರು 9686268564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತುಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇ ಘೋರ ನಿಗೂಢ ಗುಪ್ತಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ಶ್ರೀ ಕ್ಷೇತ್ರ ಕಟೀಲು ರಕ್ತೇಶ್ವರೀ ದೇವಿಯ ವಿಶೇಷ ಪೂಜಾದೈವಿಕ ವಿಧಿವಿಧಾನದಿಂದ ಪರಿಹಾರ ತಿಳಿಸುತ್ತಾರೆ ಶ್ರೀ ವಿದ್ಯಾಧರ್ ನಕ್ಷತ್ರಿ ಪ್ರಧಾನ್ ತಾಂತ್ರಿಕ್ 9686268564 ಅದು ಹೇಗೆ ಅಂತೀರಾ ಈ ಲವಂಗಕ್ಕೆ ಬಹಳ ವಿಶೇಷವಾದ ಶಕ್ತಿ ಇದೆ ಹಾಗೂ ದುಷ್ಟಶಕ್ತಿಯನ್ನು ದೂರ ಮಾಡುವಂತಹ…

Read More

ನವದೆಹಲಿ : ನಿನ್ನೆ ದೆಹಲಿಯ ಕೆಂಪು ಕೋಟೆಯ ಬಳಿ i20 ಕಾರು ಸ್ಪೋಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದುವರೆಗೂ 9 ಜನರು ಸಾವನ್ನಪ್ಪಿದ್ದರು. ಇದೀಗ ಮತ್ತೆ ಮೂವರು ಚಿಕಿತ್ಸೆ ಫಲಕರಿಯಾಗದೆ ಸಾವನಪ್ಪಿದು ಮೃತರ ಸಂಖ್ಯೆ 12ಕ್ಕೆ ಏರಿಕೆಯಾಗಿದೆ ಇನ್ನು 17 ಜನರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನಾ ಸ್ಥಳಕ್ಕೆ ಆಗಮಿಸಿದ ವಿಧಿವಿಜ್ಞಾನ ಮತ್ತು ಭಯೋತ್ಪಾದನಾ ವಿರೋಧಿ ತಜ್ಞರು ಕುಳಿಗಳು, ಚೂರುಚೂರುಗಳು ಅಥವಾ ಉಂಡೆಗಳ ಅನುಪಸ್ಥಿತಿಯಿಂದ ಗೊಂದಲಕ್ಕೊಳಗಾಗಿದ್ದರು – ಸಾಮಾನ್ಯವಾಗಿ ಸಾಂಪ್ರದಾಯಿಕ ಸ್ಫೋಟಗಳಲ್ಲಿ ನಿರೀಕ್ಷಿಸಲಾಗುತ್ತದೆ. ಪ್ರಾಥಮಿಕ ತನಿಖೆಯಲ್ಲಿ ಗುರ್ಗಾಂವ್ನ ಸಲ್ಮಾನ್ ಎಂಬ ವ್ಯಕ್ತಿ ಸ್ಫೋಟದಲ್ಲಿ ಭಾಗಿಯಾಗಿರುವ ಎಚ್ಆರ್ 26 7674 ಐ20 ಅನ್ನು ಹೊಂದಿದ್ದಾನೆ ಎಂದು ಆರೋಪಿಸಲಾಗಿದೆ. ಮಾರ್ಚ್ ನಲ್ಲಿ ದೇವೇಂದ್ರ ಎಂಬ ವ್ಯಕ್ತಿಗೆ ಕಾರನ್ನು ಮಾರಾಟ ಮಾಡಿದ್ದೇನೆ ಎಂದು ಸಲ್ಮಾನ್ ಪೊಲೀಸರಿಗೆ ತಿಳಿಸಿದ್ದಾನೆ. ಆದಾಗ್ಯೂ, ಹೆಚ್ಚಿನ ವಿಚಾರಣೆಯಲ್ಲಿ ಪುಲ್ವಾಮಾ ನಿವಾಸಿಗೆ ಸಂಬಂಧಿಸಿದ ಐಡಿ ಸೇರಿದಂತೆ ಕಾಲ್ಪನಿಕ ಗುರುತಿನ ಚೀಟಿಗಳನ್ನು ಬಳಸಲಾಗಿದೆ ಎಂದು ತಿಳಿದುಬಂದಿದೆ. ಎಸ್ ವಿಬಿ-ಐಇಡಿ (ಆತ್ಮಹತ್ಯಾ ವಾಹನ-ಬೋರ್ನ್ ಸುಧಾರಿತ ಸ್ಫೋಟಕ ಸಾಧನ)…

Read More

ಬೆಂಗಳೂರು : ಪಟಾಕಿ ಸ್ಫೋಟಕ್ಕೆ ಬಾಂಬ್ ಎಂದು ವಿದ್ಯಾರ್ಥಿಗಳು ಭಯಗೊಂಡ ಘಟನೆ ಬೆಂಗಳೂರಿನ ಬನ್ನೇರುಘಟ್ಟ ಪೊಲೀಸ್ ಠಾಣಾ ವ್ಯಾಪ್ತಿಯ ಶಾಲೆಯಲ್ಲಿ ಈ ಒಂದು ಘಟನೆ ನಡೆದಿದೆ. ಶಾಲೆಯ ಶೌಚಾಲಯದಲ್ಲಿ ವಿದ್ಯಾರ್ಥಿಗಳು ಪಟಾಕಿ ಇಟ್ಟಿದ್ದರು. ಬನ್ನೇರುಘಟ್ಟ ಬಳಿಯ ಎಸ್ ಬಿಂಗಿಪುರದ ಬಿ ಎಸ್ ಶಾಲೆಯಲ್ಲಿ ಈ ಒಂದು ಘಟನೆ ಸಂಭವಿಸಿದೆ. ನಿನ್ನೆ ಬೆಳಿಗ್ಗೆ ಶೌಚಾಲಯದಲ್ಲಿ ಕೆಲವು ವಿದ್ಯಾರ್ಥಿಗಳು ಪಟಾಕಿ ಇಟ್ಟಿದ್ದಾರೆ. ಪಟಾಕಿ ಬ್ಲಾಸ್ಟ್ ಶಬ್ದ ಕೇಳಿ ವಿದ್ಯಾರ್ಥಿಗಳು ಮತ್ತು ಸ್ಥಳೀಯ ನಿವಾಸಿಗಳು ಭಯಗೊಂಡಿದ್ದಾರೆ. ಶಾಲಾ ಸಿಬ್ಬಂದಿಗಳು ಪರಿಶೀಲನೆ ನಡೆಸಿದಾಗ ಇದು ಪಟಾಕಿ ಎಂದು ಬೆಳಕಿಗೆ ಬಂದಿದೆ.ಸದ್ಯ ಪೊಲೀಸರು ಶಾಲಾ ಆಡಳಿತ ಮಂಡಳಿ ಸಿಬ್ಬಂದಿ ವಿಚಾರಣೆ ನಡೆಸುತ್ತಿದ್ದಾರೆ. ಬೆಂಗಳೂರಿನ ಬನ್ನೇರುಘಟ್ಟ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.

Read More

ನವದೆಹಲಿ : ದೆಹಲಿಯಲ್ಲಿ ಕೆಂಪು ಕೋಟೆಯ ಬಳಿ ಕಾರು ಸ್ಫೋಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ದೆಹಲಿ ಕಾರು ಸ್ಪೋಟದ ರೂವಾರಿಗಳಿಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಖಡಕ್ ವಾರ್ನಿಂಗ್ ಕೊಟ್ಟಿದ್ದಾರೆ. ಸ್ಫೋಟದ ಹಿಂದೆ ಇರುವವರನ್ನು ಯಾವುದೇ ಕಾರಣಕ್ಕೂ ನಾವು ಬಿಡುವುದಿಲ್ಲ ಎಂದು ರಕ್ಷಣಾ ಸಚಿವ ರಾಜನಾಥ ಸಿಂಗ್ ಎಚ್ಚರಿಕೆ ನೀಡಿದ್ದಾರೆ. ದೆಹಲಿ ಸ್ಪೋಟದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ರಕ್ಷಣಾ ಸಚಿವ ರಾಜನಾಥ ಸಿಂಗ್ ದೆಹಲಿ ದುರಂತದಲ್ಲಿ ನಿನ್ನೆ ಪ್ರಾಣ ಕಳೆದುಕೊಂಡು ವರ ಕುಟುಂಬಕ್ಕೆ ಸಂತಾಪ ಸೂಚಿಸುತ್ತೇನೆ. ತಮ್ಮವರನ್ನು ಕಳೆದುಕೊಂಡ ಕುಟುಂಬಗಳಿಗೆ ದೇವರು ದುಃಖ ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ. ದೇಶದ ಜನರಿಗೆ ನಾನು ಭರವಸೆ ನೀಡುತ್ತೇನೆ ಪ್ರಕರಣದ ಸಮಗ್ರ ತನಿಖೆ ನಡೆಸುತ್ತಿವೆ. ತನಿಖೆಯ ಎಲ್ಲ ಮಾಹಿತಿಯನ್ನು ದುರಂತಕ್ಕೆ ಕಾರಣ ಆದವರನ್ನು ಕಟಕಟೆಗೆ ತಂದು ನಿಲ್ಲಿಸುತ್ತೇವೆ. ಅವರನ್ನು ಯಾವುದೇ ಸಂದರ್ಭ ಬಂದರೂ ಬಿಡುವುದಿಲ್ಲ.ಅವರಿಗೆ ತಕ್ಕ ಶಿಕ್ಷೆ ಕಾದಿದೆ ತಕ್ಕ ಶಾಸ್ತಿ ಮಾಡುತ್ತೇವೆ ಅವರನ್ನು ಕಟಕಟಗೆ ತಂದು ನಿಲ್ಲಿಸುತ್ತೇವೆ. ದೇಶದ ಜನರಿಗೆ ನಾನು ಭರವಸೆ…

Read More

ವಿಜಯನಗರ : ವಿಜಯನಗರದಲ್ಲಿ ಘೋರವಾದ ದುರಂತ ಒಂದು ಸಂಭವಿಸಿದ್ದು ಕೇವಲ 500 ರೂಪಾಯಿ ಆಸೆಗಾಗಿ ಬಾಲಕನೊಬ್ಬ ನಾಗರಹಾವು ಹಿಡಿಯಲು ಹೋಗಿದ್ದಾನೆ. ಈ ವೇಳೆ ಹಾವು ಕಚ್ಚಿ 17 ವರ್ಷದ ಬಾಲಕ ದಾರುಣವಾಗಿ ಸಾವನ್ನಪ್ಪಿರುವ ಘಟನೆ ವರದಿಯಾಗಿದೆ. ಹೊಸಪೇಟೆ ನಗರದ ಮುದ್ಲಾಪುರ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಅಬ್ದುಲ್ ರಜಾಕ್ (17) ಮೃತಪಟ್ಟ ಹುಡುಗ. ಹಾವು ಕಚ್ಚಿರೋ ವಿಡಿಯೋ ಮೊಬೈಲ್‌ನಲ್ಲಿ ಸೆರೆಯಾಗಿದೆ. ಮನೆಯೊಂದಕ್ಕೆ ಬಂದಿದ್ದ ನಾಗರಹಾವನ್ನು ಅಬ್ದುಲ್ ರಜಾಕ್ ಹಿಡಿಯಲು ಯತ್ನಿಸಿದಾಗ ಕೈಗೆ ಹಾವು ಕಚ್ಚಿ ಮೃತಪಟ್ಟಿದ್ದಾನೆ. ಹಾವು ಹಿಡಿದರೆ 500 ಸಿಗುತ್ತದೆ ಎಂಬ ಆಸೆಗೆ ಹುಡುಗ ಹಾವು ಹಿಡಿಯಲು ಹೋಗಿದ್ದ ಎನ್ನಲಾಗಿದೆ. ಹಾವಿನ ಬಾಲವನ್ನು ಹಿಡಿದು ಮುಂದೆ ಹೆಡೆಯನ್ನು ಹಿಡಿಯುವ ವೇಳೆ ಹಾವು ಕೈಗೆ ಕಚ್ಚಿದೆ. ಹಾವು ಕಚ್ಚಿದ ಬಳಿಕ ಎರಡು ತಾಸು ಮನೆಯಲ್ಲಿ‌ ಯಾರಿಗೂ ಹೇಳಿರಲಿಲ್ಲ. ಆರೋಗ್ಯದಲ್ಲಿ ಏರುಪೇರಾದಾಗ, ಕೂಡಲೇ ಹೊಸಪೇಟೆಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಕೊಪ್ಪಳಕ್ಕೆ, ನಂತರ ಹುಬ್ಬಳ್ಳಿಗೆ ಕಳುಹಿಸಿಕೊಡಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ…

Read More