Subscribe to Updates
Get the latest creative news from FooBar about art, design and business.
Author: kannadanewsnow05
ಬಾಗಲಕೋಟೆ : ರಸ್ತೆ ಬದಿ ಮೂತ್ರ ಮಾಡಿ ವಾಪಸ್ ಬರುವ ವೇಳೆ ಏಕಾಏಕಿ ಟ್ರ್ಯಾಕ್ಟರ್ ಹರಿದು ಎರಡುವರೆ ವರ್ಷದ ಮಗು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲೂಕಿನ ಹಳೆ ಟಕ್ಕಳಕಿ ಗ್ರಾಮದಲ್ಲಿ ನಡೆದಿದೆ. ಮೃತ ಮಗುವನ್ನು ನಿಹಾಲ್ ಮಂಡೆಪ್ಪಗೊಳ್ ಎಂದು ತಿಳಿದುಬಂದಿದ್ದು, ಮೂತ್ರ ಮಾಡಲು ಹೋಗಿದ್ದಾಗ ಟ್ರ್ಯಾಕ್ಟರ್ ಹರಿದು ನಿಹಾಲ್ ಮೃತಪಟ್ಟಿದ್ದಾನೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಘಟನೆ ಕುರಿತು ಬೀಳಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ರಾಯಚೂರು : ಸರ್ಕಾರದ ಖಜಾನೆಗೆ 4 ಕೋಟಿ ರೂ. ಆರ್ಥಿಕ ನಷ್ಟ ಆರೋಪದ ಹಿನ್ನೆಲೆಯಲ್ಲಿ, ರಾಯಚೂರು ಜಿಲ್ಲೆಯ ದೇವದುರ್ಗದ ಗ್ರೇಡ್ 2 ತಹಸಿಲ್ದಾರ್ ವೆಂಕಟೇಶ್ ನನ್ನು ಇದೀಗ ಸಸ್ಪೆಂಡ್ ಮಾಡಲಾಗಿದೆ. ದೇವದುರ್ಗದ ಗ್ರೇಡ್ 2 ತಹಸಿಲ್ದಾರ್ ವೆಂಕಟೇಶ ಅಮಾನತುಗೊಳಿಸಲಾಗಿದೆ.ವಿವಿಧ ಪಿಂಚಣಿ ಯೋಜನೆ ತಿರಸ್ಕೃತ ಅರ್ಜಿಗಳನ್ನು ವಿಲೇವಾರಿ ಮಾಡುವ ವೇಳೆ ವಂಚನೆ ಎಸಗಿರುವ ಆರೋಪ ಕೇಳಿ ಬಂದಿದ್ದು, 2024-25ನೇ ಸಾಲಿನಲ್ಲಿ ದೇವದುರ್ಗ ತಾಲೂಕದಲ್ಲಿ 10,470 ಅರ್ಜಿಗಳ ವಿಲೇವಾರಿ ಮಾಡಲಾಗಿದೆ. ಫಲಾನುಭವಿಗಳಿಗೆ ವಿವಿಧ ಮಾಸಾಶನ ಮಂಜೂರು ಮಾಡಿ ವಂಚನೆ ಎಸಗಲಾಗಿದೆ.ಗ್ರಾಮ ಆಡಳಿತ ಅಧಿಕಾರಿ ಕಂದಾಯ ನಿರೀಕ್ಷಕರು ತಿರಸ್ಕರಿಸಿದ್ದ ಅರ್ಜಿಗಳನ್ನು ವಿಲೇವಾರಿ ಮಾಡಿ ವಂಚನೆ ಎಸೆಗಿದ್ದಾನೆ ಎನ್ನುವ ಆರೋಪ ಕೇಳಿ ಬಂದಿರುವ ಹಿನ್ನೆಲೆಯಲ್ಲಿ ವೆಂಕಟೇಶ ಎನ್ನುವ ಅಧಿಕಾರಿಯನ್ನು ಇದೀಗ ಅಮಾನತು ಮಾಡಲಾಗಿದೆ.
ಬೆಂಗಳೂರು : ಇತ್ತೀಚಿಗೆ ರಾಜ್ಯದಲ್ಲಿ ಆನೆ ಹಾಗೂ ಮಾನವ ಸಂಘರ್ಷಗಳಿಂದ ಅನೇಕ ಜನರು ಪ್ರಾಣ ಕಳೆದುಕೊಂಡಿದ್ದಾರೆ. ಹಾಗಾಗಿ ಈ ಒಂದು ಆನೆ ಮಾನವ ಸಂಘರ್ಷ ತಡೆಗೆ ರಾಜ್ಯ ಸರ್ಕಾರ ಹೊಸ ಕ್ರಮ ಕೈಗೊಂಡಿದ್ದು, ಆನೆ ಮತ್ತು ಮಾನವ ಸಂಘರ್ಷ ತಡೆಯಲು ಅರಣ್ಯ ಇಲಾಖೆ ಮತ್ತೊಂದು ಪ್ರಯತ್ನ ನಡೆಸಿದ್ದು, ಭದ್ರಾ ಅಭಯಾರಣ್ಯದಲ್ಲಿ ‘ಆನೆ ಧಾಮ’ ನಿರ್ಮಾಣ ಮಾಡಲು ಯೋಜನೆ ರೂಪಿಸಿದೆ ಎಂದು ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ. ಹೌದು ಕೊಡಗು, ಹಾಸನ, ಚಿಕ್ಕಮಗಳೂರು ಸುತ್ತಮುತ್ತ ಕಾಡಿನಿಂದ ಹೊರಬಂದು ಗುಂಪಾಗಿ ಸಂಚರಿಸುವ ಕೆಲವು ಆನೆಗಳಿಂದ ಸಮಸ್ಯೆ ತಲೆದೋರಿದೆ. ಕಾಡಿನ ಹೊರಗಡೆಯೇ ಓಡಾಡುತ್ತಾ ತೊಂದರೆ ನೀಡುವ ಸುಮಾರು 150ಕ್ಕೂ ಹೆಚ್ಚು ಪುಂಡಾನೆಗಳನ್ನು ಅರಣ್ಯ ಇಲಾಖೆ ಗುರುತಿಸಿದೆ. ಇಂತಹ ಆನೆಗಳನ್ನು ಖೆಡ್ಡಾಕ್ಕೆ ಕೆಡವಿ ನಂತರ ಅವುಗಳನ್ನು ಆನೆಗಳ ಧಾಮದಲ್ಲಿ ಬಿಡುವ ಯೋಜನೆಯನ್ನ ಅರಣ್ಯ ಇಲಾಖೆ ರೂಪಿಸಿದ್ದು, ಇದು ಕಾರ್ಯಗತಗೊಳ್ಳಲು ಕಾಲಾವಕಾಶ ಬೇಕಾಗುತ್ತದೆ ಎಂದು ಅರಣ್ಯ ಮತ್ತು ಪರಿಸರ ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ. ಭದ್ರಾ ಅಭಯಾರಣ್ಯದ 2…
ಚಿಕ್ಕಮಗಳೂರು : ಇಂಧನ ಸಚಿವ ಕೆಜೆ ಜಾರ್ಜ್ ಉಸ್ತುವಾರಿ ಜಿಲ್ಲೆಯಲ್ಲೇ ಇದೀಗ ರೈತರಿಗೆ ಮೆಸ್ಕಾಂ ಶಾಕ್ ನೀಡಿದೆ. 10 ಹೆಚ್ ಪಿ ಮೋಟರ್ ಬಳಕೆಗೆ ಸುಮಾರು 3,20,076 ರೂಪಾಯಿ ಬಿಲ್ ಬಂದಿದೆ. ಬರೋಬ್ಬರಿ 13 ವರ್ಷ 4 ತಿಂಗಳ ಬಳಿಕ ಮೆಸ್ಕಾಂ ರೈತರೊಬ್ಬರಿಗೆ ಬಿಗ್ ಶಾಕ್ ನೀಡಿದೆ. ಹೌದು ಮಾಜಿ ಮುಖ್ಯಮಂತ್ರಿ ಬಂಗಾರಪ್ಪ ಕಾಲದಿಂದಲೂ ಚಿಕ್ಕಮಗಳೂರು ಭಾಗದ ರೈತರಿಗೆ ಉಚಿತ ವಿದ್ಯುತ್ ಪೂರೈಕೆ ಮಾಡಲಾಗುತ್ತಿತ್ತು. ಇದೀಗ ರೈತರಿಗೆ ಏಕಾಏಕಿ ಮೆಸ್ಕಾಂ ಶಾಕ್ ನೀಡಿದೆ. ಕಾಫಿ ಬೆಳೆಗಾರರಿಗೆ ವಿದ್ಯುತ್ ಉಚಿತ ಇಲ್ಲ ಅಂತ ಮೆಸ್ಕಾಂ ಹೇಳಿದೆ.ಹಾಗಾಗಿ 13 ವರ್ಷ 4 ತಿಂಗಳ ಬಳಿಕ ಇದೀಗ 3 ಲಕ್ಷಕ್ಕೂ ಅಧಿಕ ಬಿಲ್ ಬಂದಿದೆ. ಲಕ್ಷಾಂತರ ರೂಪಾಯಿ ಬಿಲ್ ನೋಡಿ ಚಿಕ್ಕಮಗಳೂರಿನ ರೈತ ಉಮೇಶ್ ಇದೀಗ ಕಂಗಾಲಾಗಿದ್ದಾರೆ. 15 ದಿನಗಳ ಒಳಗೆ ಹಣ ಪಾವತಿ ಮಾಡುವಂತೆ ಅವರಿಗೆ ನೋಟಿಸ್ ನೀಡಲಾಗಿದ್ದು, ಬಿಲ್ ಪಾವತಿ ಮಾಡದಿದ್ದರೆ ವಿದ್ಯುತ್ ಕಡಿತ ಮಾಡುವ ಎಚ್ಚರಿಕೆ ನೀಡಲಾಗಿದೆ. ಆಲ್ದೂರು ಮೆಸ್ಕಾಂ ಉಪ…
ಹಾವೇರಿ : ಹಾವೇರಿಯಲ್ಲಿ ಭೀಕರವಾದ ಅಪಘಾತ ನಡೆದಿದ್ದು, ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿದ್ದ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿರುವ ಘಟನೆ ಹಾವೇರಿ ತಾಲೂಕಿನ ಮೇವುಂಡಿ ಗ್ರಾಮದ ಬಳಿ ನಡೆದಿದೆ. ಘಟನೆಯಲ್ಲಿ ಅದೃಷ್ಟವಶಾತ್ ಬಸ್ಸಿನಲ್ಲಿದ್ದ 20ಕ್ಕೂ ಅಧಿಕ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬಸ್ ಗದಗ ಜಿಲ್ಲೆ ಶಿರಹಟ್ಟಿ ತಾಲೂಕಿನ ಬೆಳ್ಳಟ್ಟಿ ಗ್ರಾಮದಿಂದ ರಾಣೇಬೆನ್ನೂರು ಕಡೆಗೆ ಹೊರಟಿತ್ತು. ಏಕಾಏಕಿ ಚಾಲಕನ ನಿಯಂತ್ರಣ ತಪ್ಪಿ ಬಸ್ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಬಸ್ ನಲ್ಲಿದ್ದ ಸುಮಾರು 20 ಪ್ರಯಾಣಿಕರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನೆ ಕುರಿತು ಗುತ್ತಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಕಲಬುರ್ಗಿ : ಮಹಾಶಿವರಾತ್ರಿಯ ಹಿನ್ನೆಲೆಯಲ್ಲಿ ಕಲಬುರಗಿ ಜಿಲ್ಲೆಯ ಆಳಂದ ಬಳಿಯ ಲಾಡ್ಲೆ ಮಶಾಕ್ ದರ್ಗಾದಲ್ಲಿನ ರಾಘವಚೈತನ್ಯ ಶಿವಲಿಂಗದ ಪೂಜೆ ವಿವಾದ ಮತ್ತೆ ಮುನ್ನಲೆಗೆ ಬಂದಿದೆ. ಶಿವಲಿಂಗ ಪೂಜೆಗೆ ಅನುಮತಿ ನೀಡುವಂತೆ ಹಿಂದೂ ಸಂಘಟನೆಗಳು ಕಲ್ಬುರ್ಗಿ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದು ಇದೀಗ ಹಿಂದೂ ಸಂಘಟನೆಗಳಿಗೆ ಜಯ ಸಿಕ್ಕಿದ್ದು, ಶಿವಲಿಂಗ ಪೂಜೆಗೆ ಕಲಬುರ್ಗಿ ಹೈಕೋರ್ಟ್ ಇದೀಗ ಅನುಮತಿ ನೀಡಿದೆ. ಹೌದು ಕಲ್ಬುರ್ಗಿ ಜಿಲ್ಲೆಯ ಆಳಂದ ಪಟ್ಟಣದ ಬಳಿ ಇರುವ ಲಾಡ್ಲೆ ಮಶಾಕ್ ದರ್ಗಾದಲ್ಲಿನ ರಾಘವಚೈತನ್ಯ ಶಿವಲಿಂಗದ ಪೂಜೆಗೆ ಇದೀಗ ಕಲ್ಬುರ್ಗಿ ಹೈಕೋರ್ಟ್ ಪೀಠ ಇದೀಗ ಅನುಮತಿ ನೀಡಿದೆ.ರಾಘವ ಚೈತನ್ಯ ಶಿವಲಿಂಗದ ಪೂಜೆಗೆ ಅನುಮತಿ ಕೇಳಿ ಹಿಂದೂ ಸಂಘಟನೆಗಳಿಂದ ಅರ್ಜಿ ಸಲ್ಲಿಸಲಾಗಿತ್ತು. ಇದೀಗ ಹಿಂದೂ ಸಂಘಟನೆಗಳಿಗೆ ಇದೀಗ ಕೊನೆಗೂ ಹೈಕೋರ್ಟ್ ನಲ್ಲಿ ಗೆಲುವು ಸಿಕ್ಕಿದೆ. ನಾಳೆ ಮಧ್ಯಾಹ್ನ 3 ಗಂಟೆ ಯಿಂದ ಸಂಜೆ 6 ಗಂಟೆವರೆಗೆ ಪೂಜೆ ಸಲ್ಲಿಸಲು ಹೈ ಕೋರ್ಟ್ ಅವಕಾಶ ನೀಡಿದೆ. ಈ ವೇಳೆ ಆಂದೋಲ ಸಿದ್ದಲಿಂಗ ಸ್ವಾಮೀಜಿಯನ್ನು ಹೊರತುಪಡಿಸಿ ಉಳಿದವರಿಗೆ…
ಉಡುಪಿ : ಉಡುಪಿಯಲ್ಲಿ ಘೋರವಾದ ಘಟನೆ ನಡೆದಿದ್ದು ಅಪಾರ್ಟ್ಮೆಂಟ್ ಒಂದರ 14ನೇ ಮಹಡಿಯಿಂದ ಜಿಗಿದು ಯುವಕನೂರ್ವ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಉಡುಪಿ ನಗರದ ಬ್ರಹ್ಮಗಿರಿ ಎಂಬಲ್ಲಿ ಈ ಒಂದು ದುರ್ಘಟನೆ ಸಂಭವಿಸಿದೆ. ಮೃತ ಯುವಕನನ್ನು ಲೇಕ್ ರಾಜ್ (29) ಎಂದು ತಿಳಿದುಬಂದಿದೆ. ಉಡುಪಿಯ ಬ್ರಹ್ಮಗಿರಿಬಳಿ ಇರುವ ಗ್ರಾಸ್ ಲ್ಯಾಂಡ್ ದಿ ಕಾಸ್ಟ್ಲೆ ಅಪಾರ್ಟ್ಮೆಂಟ್ ನಲ್ಲಿ ಈ ಒಂದು ದುರಂತ ಸಂಭವಿಸಿದೆ.ಆತ್ಮಹತ್ಯೆ ಮಾಡಿಕೊಂಡ ಯುವಕ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ. ಘಟನಾ ಸ್ಥಳಕ್ಕೆ ಉಡುಪಿ ನಗರ ಠಾಣೆ ಪೋಲಿಸರು ಭೇಟಿ ನೀಡಿದ್ದು, ಆತ್ಮಹತ್ಯೆ ಕುರಿತು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
ಉಡುಪಿ : ಸಿಎಂ ಸಿದ್ದರಾಮಯ್ಯನವರ ಸಮ್ಮುಖದಲ್ಲಿ ಶರಣಾಗಿದ್ದ ಆರು ಮಂದಿ ನಕ್ಸಲರ ಪೈಕಿ ನಾಲ್ವರನ್ನು ವಶಕ್ಕೆ ಪಡೆದಿರುವ ಕಾರ್ಕಳ ಪೊಲೀಸರು ಇಂದು ನ್ಯಾಯಾಲಯಕ್ಕೆ ಹಾಜರುಪಡಿಸಿದರು. ಈ ವೇಳೆ ನಾಲ್ವರು ನಕ್ಸಲರನ್ನು 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿ ಕಾರ್ಕಳ ಜೆಎಂಎಫ್ಸಿ ನ್ಯಾಯಾಲಯ ಆದೇಶಿಸಿದೆ. ಕಾರ್ಕಳ- ಹೆಬ್ರಿಯ 15 ಪ್ರಕರಣಗಳ ಕುರಿತು ತನಿಖೆ ನಡೆಸಲು ಮಾರಪ್ಪ(ಜಯಣ್ಣ), ಮುಂಡಗಾರು ಲತಾ, ವನಜಾಕ್ಷಿ(ಜ್ಯೋತಿ), ಸುಂದರಿ(ಗೀತಾ, ಜೆನ್ನಿ) ಎಂಬವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ಪೊಲೀಸರು, ವಶಕ್ಕೆ ಪಡೆದಿದ್ದಾರೆ.ಕಾರ್ಕಳ ಜೆಎಂಎಫ್ಸಿ ನ್ಯಾಯಾಲಯ ನಾಲ್ವರು ನಕ್ಸಲರನ್ನು 5 ದಿನ ಪೊಲೀಸರ ವಶಕ್ಕೆ ನೀಡಿದೆ. ಬೆಂಗಳೂರಿನ ಪರಪ್ಪನ ಅಗ್ರಹಾರದ ಕಾರಾಗೃಹದಿಂದ ಇವರನ್ನು ಕಾರ್ಕಳಕ್ಕೆ ಸ್ಥಳಾಂತರಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.ಕಳೆದ ಜನೆವರಿ 8 ರಂದು ಆರು ಮಂದಿ ನಕ್ಸಲರು ಜ.8ರಂದು ಶರಣಾಗಿದ್ದರು. ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಸಿದ್ದರಾಮಯ್ಯನವರ ಎದುರು ಶರಣಾಗಿದ್ದ ನಕ್ಸಲರಿಗೆ ಹೂಗುಚ್ಛ ಹಾಗೂ ಸಂವಿಧಾನ ಪುಸ್ತಕ ನೀಡಿ ಸ್ವಾಗತಿಸಲಾಗಿತ್ತು.
ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಕೋಟ್ಯಂತರ ರೂಪಾಯಿ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಹೈಕೋರ್ಟ್ನಿಂದ ಜಾಮೀನು ಪಡೆದು ಬಿಡುಗಡೆಯಾಗಿರುವ ಮಾಜಿ ಸಚಿವ ಬಿ ನಾಗೇಂದ್ರಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಹೌದು ವಾಲ್ಮೀಕಿ ನಿಗಮದ ಬಹುಕೋಟಿ ಹಗರಣ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಿಐಡಿ ಬಳಿಕ ಸಿಬಿಐ ಇದೀಗ ಇಡಿಗೆ ಪತ್ರ ಬರೆದಿದೆ. ಇಡಿ ಬಳಿ ಇರುವ ಮಾಹಿತಿಯನ್ನು ಕೋರಿ ಸಿಬಿಐ ಇದೀಗ ಪತ್ರ ಬರೆದಿದೆ ಎಂದು ತಿಳಿದುಬಂದಿದೆ. ಈ ಪ್ರಕರಣದಲ್ಲಿ ಮಾಜಿ ಸಚಿವ ಬಿ ನಾಗೇಂದ್ರ ಅರೆಸ್ಟ್ ಆಗಿದ್ದರು. ಇದೀಗ ಇಡಿ ಬಳಿಕ ಬಿ.ನಾಗೇಂದ್ರಗೆ ಸಿಬಿಐ ಸಂಕಷ್ಟ ಎದುರಾಗಿದೆ.
ನವದೆಹಲಿ : 1984 ರಲ್ಲಿ ಸಿಖ್ ವಿರೋಧಿ ದಂಗೆ ವೇಳೆ ಇಬ್ಬರ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ, ಕಾಂಗ್ರೆಸ್ ಮಾಜಿಸಂಸದ ಸಜನ್ ಕುಮಾರ್ ಗೆ ಜೀವಾವಧಿ ಶಿಕ್ಷೆ ವಿಧಿಸಿ ದೆಹಲಿಯ ರೋಸ್ ಅವೆನ್ಯೂ ವಿಶೇಷ ಕೋರ್ಟ್ ಈ ಒಂದು ತೀರ್ಪು ಪ್ರಕಟಿಸಿ ಆದೇಶ ಹೊರಡಿಸಿದೆ. ವಿಶೇಷ ನ್ಯಾಯಾಧೀಶೆ ಕಾವೇರಿ ಭವೇಜಾ ಅವರು ಶಿಕ್ಷೆ ಪ್ರಮಾಣ ಪ್ರಕಟಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಸಜ್ಜನ್ ಕುಮಾರ್ ಅವರನ್ನು ದೋಷಿ ಎಂದುದೆಹಲಿ ಹೈಕೋರ್ಟ್ ಫೆ.12 ರಂದು ತೀರ್ಪು ಪ್ರಕಟಿಸಿತ್ತು.ಫೆ.21 ರಂದು ಸಿಖ್ ವಿರೋಧಿ ದಂಗೆ ಪ್ರಕರಣದಲ್ಲಿ ಕಾಂಗ್ರೆಸ್‌ನ ಮಾಜಿ ಸಂಸದ ಸಜ್ಜನ್ ಕುಮಾರ್ ಶಿಕ್ಷೆಯ ಪ್ರಮಾಣವನ್ನು ದೆಹಲಿ ಹೈಕೋರ್ಟ್ ಕಾಯ್ದಿರಿಸಿತ್ತು. ಇದೀಗ ಮಾಜಿ ಸಂಸದ ಸಚಿನ್ ಕುಮಾರ್ ಗೆ ಜೀವಾವಧಿ ಶಿಕ್ಷೆ ವಿಧಿಸಿ ದೆಹಲಿಯ ರೋಸ್ ಅವೆನ್ಯೂ ಕೋರ್ಟ್ ಶಿಕ್ಷೆ ಪ್ರಮಾಣ ಪ್ರಕಟಿಸಿದೆ. ಏನಿದು ಪ್ರಕರಣ? 1984ರ ನವೆಂಬರ್ 1 ರಂದು ಸಿಖ್ ವಿರೋಧಿ ದಂಗೆಯ ವೇಳೆ ಸರಸ್ವತಿ ವಿಹಾರ್ ಬಳಿ ಜಸ್ವಂತ್ ಸಿಂಗ್…














