Author: ಸುರೇಶ್‌

"ಕನ್ನಡ ನ್ಯೂಸ್ ನೌ ಜಾಲತಾಣದ ಮುಖ್ಯ ಸಂಪಾದಕರಾದ ಸುರೇಶ್ ಅವರು ಕಳೆದ 4 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದಾರೆ. ಸರ್ಕಾರದ ಯೋಜನೆಗಳು, ಶಿಕ್ಷಣ ಮತ್ತು ಪ್ರಚಲಿತ ವಿದ್ಯಮಾನಗಳನ್ನು ಸಾಮಾನ್ಯ ಜನರಿಗೂ ಅರ್ಥವಾಗುವಂತೆ ವಿವರಿಸುವುದು ಇವರ ವಿಶೇಷತೆ. ಈ ಮೊದಲು ವಿವಿಧ ವೆಬ್‌ಸೈಟ್‌ಗಳಲ್ಲಿ ನಾಗರಿಕ ಸಮಸ್ಯೆಗಳ ಬಗ್ಗೆ ವರದಿಗಾರರಾಗಿ ಕೆಲಸ ಮಾಡಿರುವ ಇವರು, ಸಮಯೋಚಿತ ಹಾಗೂ ವಿಶ್ವಾಸಾರ್ಹ ಮಾಹಿತಿ ನೀಡುವ ಮೂಲಕ ಓದುಗರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಡಿಜಿಟಲ್ ಸಾಕ್ಷರತೆ ಇವರ ನೆಚ್ಚಿನ ವಿಷಯಗಳಲ್ಲೊಂದು

ಬೆಂಗಳೂರು : ಬೆಂಗಳೂರಿನ ಪರಪ್ಪನ ಅಗ್ರಹಾರ ಜೇಲಿನಲ್ಲಿ ಕೈದಿಗಳಿಗೆ ರಾಜಾಜಿತ್ಯ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ರಾಜ್ಯ ಸರ್ಕಾರ ಈ ಒಂದು ಪ್ರಕರಣದ ಕುರಿತು ಉನ್ನತ ಮಟ್ಟದ ತನಿಖೆ ನಡೆಸಲು ನಿರ್ಧರಿಸಿದೆ. ಈ ಒಂದು ವಿಚಾರಕ್ಕೆ ಸಂಬಂಧಪಟ್ಟಂತೆ ಇಂದು ಗೃಹ ಸಚಿವ ಜಿ ಪರಮೇಶ್ವರ್ ಕಾರಾಗೃಹ ಕಚೇರಿಯಲ್ಲಿ ಜೈಲಧಿಕಾರಿಗಳ ಜೊತೆಗೆ ಮಹತ್ವದ ಸಭೆ ನಡೆಸಿದರು. ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ನಾಲ್ವರು ಹಿರಿಯ ಪೊಲೀಸ್ ಅಧಿಕಾರಿಗಳ ಸಮಿತಿ ರಚನೆ ಮಾಡಲಾಗಿದೆ ಎಂದು ತಿಳಿಸಿದರು. ಕಾನೂನು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಆರ್ ಹಿತೇಂದ್ರ, ಸಂದೀಪ್ ಪಾಟೀಲ್ ಅಮರನಾಥ ರೆಡ್ಡಿ ಹಾಗೂ ರಿಷಣ್ ಅವರನ್ನು ಒಳಗೊಂಡ ಅಧಿಕಾರಿಗಳ ಸಮಿತಿಯನ್ನು ರಚನೆ ಮಾಡಲಾಗಿದ್ದು ತನಿಖೆ ನಡೆಸಿ ಒಂದು ತಿಂಗಳ ಒಳಗಾಗಿ ವರದಿ ನೀಡುವಂತೆ ಪರಮೇಶ್ವರ್ ಅವರು ಅಧಿಕಾರಿಗಳಿಗೆ ಡೆಡ್ ಲೈನ್ ನೀಡಿದ್ದಾರೆ.

Read More

ಬೆಂಗಳೂರು : ಬೆಂಗಳೂರಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ನೀಡಿರುವ ವಿಚಾರಕ್ಕೆ ಸಂಬಂಧಪಟ್ಟಂತೆ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡಿದ್ದು ಉನ್ನತ ಮಟ್ಟದ ತನಿಖೆಗೆ ರಾಜ್ಯ ಸರ್ಕಾರ ನಿರ್ಧರಿಸಿದೆ. ಇದರ ಬೆನ್ನಲ್ಲೇ, ಕೆಪಿಎಸ್‌ಸಿ ಮೂಲಕ 1000 ಸಿಬ್ಬಂದಿಗಳನ್ನು ನೇಮಕ ಮಾಡಿಕೊಳ್ಳಲು ನಿರ್ಧರಿಸಲಾಗಿದೆ ಎಂದು ಗೃಹ ಸಚಿವ ಜಿ ಪರಮೇಶ್ವರ್ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಿ ಪರಮೇಶ್ವರ್ ಕಾರಾಗೃಹ ಇಲಾಖೆಯಲ್ಲಿ ಖಾಲಿ ಹುದ್ದೆಗಳ ಭರ್ತಿಗೆ ನಿರ್ದೇಶನ ನೀಡಲಾಗಿದೆ. ಕೆಪಿಎಸ್ಸಿ ಮೂಲಕ ಅಧಿಕಾರಿಗಳ ನೇಮಕಾತಿಗೆ ಕ್ರಮ ಕೈಗೊಳ್ಳಲಾಗುತ್ತಿದ್ದು, ಸಹಾಯಕ ಅಧೀಕ್ಷಕರು ಸೇರಿದಂತೆ 1000 ಸಿಬ್ಬಂದಿಗಳನ್ನು ನೇಮಕ ಮಾಡಲಾಗುತ್ತದೆ ಕರ್ನಾಟಕ ಲೋಕಸೇವಾ ಆಯೋಗದ ಮೂಲಕ ನೇಮಕಾತಿ ನಡೆಯಲಿದೆ ಸಿಬ್ಬಂದಿ ಕೊರತೆ ನೀಗಿದರೆ ಸಮರ್ಪಕವಾಗಿ ನಿರ್ವಹಿಸಬಹುದು ಎಂದು ಜಿ ಪರಮೇಶ್ವರ್ ತಿಳಿಸಿದರು.

Read More

ಬೆಂಗಳೂರು : ಬೆಂಗಳೂರಿನ ಪರಪ್ಪನ ಅಗ್ರಹಾರದಲ್ ಜೈಲಲ್ಲಿ ಅಕ್ರಮ ಚಟುವಟಿಕೆ ಕಾನೂನುಬಾಹಿರ ಚಟುವಟಿಕೆ ವಿಡಿಯೋಗಳು ವೈರಲ್ ಆಗಿರುವ ಕುರಿತಂತೆ ಇಂದು ಕಾರಾಗೃಹ ಕಚೇರಿಯಲ್ಲಿ ಅಧಿಕಾರಿಗಳ ಜೊತೆಗೆ ಸಚಿವ ಜಿ ಪರಮೇಶ್ವರ್ ಸಭೆ ನಡೆಸಿದರು. ಸಭೆಯ ಬಳಿಕ ಪರಮೇಶ್ವರ್ ಅವರು ಸುದ್ದಿಗೋಷ್ಠಿ ನಡೆಸಿದರು. ಘಟನೆಗೆ ಸಂಬಂಧಿಸಿದಂತೆ ಇಬ್ಬರು ಅಧಿಕಾರಿಗಳನ್ನು ಸಸ್ಪೆಂಡ್ ಮಾಡಲಾಗಿದೆ ಎಂದು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ, ಅವರು, ಜೈಲು ಅಧಿಕ್ಷಕ ಮ್ಯಾಗೇರಿ ಹಾಗೂ ಉಪಾಧಿಕ್ಷಕ ಅಶೋಕ್ ಬಜಂತ್ರಿ ಸಸ್ಪೆಂಡ್ ಮಾಡಲಾಗಿದೆ.ಕೆಲ ಕಾನೂನು ಬಾಹಿರ ಚಟುವಟಿಕೆ ಆಗಿದೆ ಎಂದು ಪ್ರಸಾರ ಆಗಿದೆ. ಮಾಧ್ಯಮದಲ್ಲಿ ಪ್ರಸಾರ ಆಗಿರುವಂತಹ ವಿಡಿಯೋಗಳ ಬಗ್ಗೆ ಪರಿಶೀಲನೆ ನಡೆಸಿದ್ದೇವೆ. ಮುಖ್ಯವಾದ ಕೆಲವು ವಿಡಿಯೋಗಳು 2023 ರಲ್ಲಿ ಆಗಿರುವುದು ಬೆಳಕಿಗೆ ಬಂದಿದೆ. ಒಂದೆರಡು ವಿಡಿಯೋಗಳು ಮಾತ್ರ 3-4 ತಿಂಗಳ ಹಿಂದೆ ಆಗಿವೆ. ಈ ಎಲ್ಲ ವಿಡಿಯೋಗಳ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದೇನೆ. ವಿಡಿಯೋಗಳು ತನಿಖೆಗೆ ಸಮಿತಿ ರಚನೆ ಮಾಡಿದ್ದೇವೆ. ಇನ್ನು ಪರಪ್ಪನ ಅಗ್ರಹಾರ ದಿನ ಮುಖ್ಯ ಅಧ್ಯಕ್ಷಕ ಸುರೇಶ್ ಎತ್ತಂಗಡಿ ಮಾಡಲಾಗಿದ್ದು,…

Read More

ಬೆಂಗಳೂರು : ಬೆಂಗಳೂರಿನ ಪರಪ್ಪನ ಅಗ್ರಹಾರದಲ್ ಜೈಲಲ್ಲಿ ಅಕ್ರಮ ಚಟುವಟಿಕೆ ಕಾನೂನುಬಾಹಿರ ಚಟುವಟಿಕೆ ವಿಡಿಯೋಗಳು ವೈರಲ್ ಆಗಿರುವ ಕುರಿತಂತೆ ಇಂದು ಕಾರಾಗೃಹ ಕಚೇರಿಯಲ್ಲಿ ಅಧಿಕಾರಿಗಳ ಜೊತೆಗೆ ಸಚಿವ ಜಿ ಪರಮೇಶ್ವರ್ ಸಭೆ ನಡೆಸಿದರು. ಸಭೆಯ ಬಳಿಕ ಪರಮೇಶ್ವರ್ ಅವರು ಸುದ್ದಿಗೋಷ್ಠಿ ನಡೆಸಿದರು. ಸುದ್ದಿಗೋಷ್ಠಿಯಲ್ಲಿ ಕೆಲ ಕಾನೂನು ಬಾಹಿರ ಚಟುವಟಿಕೆ ಆಗಿದೆ ಎಂದು ಪ್ರಸಾರ ಆಗಿದೆ. ಮಾಧ್ಯಮದಲ್ಲಿ ಪ್ರಸಾರ ಆಗಿರುವಂತಹ ವಿಡಿಯೋಗಳ ಬಗ್ಗೆ ಪರಿಶೀಲನೆ ನಡೆಸಿದ್ದೇವೆ. ಮುಖ್ಯವಾದ ಕೆಲವು ವಿಡಿಯೋಗಳು 2023 ರಲ್ಲಿ ಆಗಿರುವುದು ಬೆಳಕಿಗೆ ಬಂದಿದೆ. ಒಂದೆರಡು ವಿಡಿಯೋಗಳು ಮಾತ್ರ 3-4 ತಿಂಗಳ ಹಿಂದೆ ಆಗಿವೆ. ಈ ಎಲ್ಲ ವಿಡಿಯೋಗಳ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದೇನೆ. ವಿಡಿಯೋಗಳು ತನಿಖೆಗೆ ಸಮಿತಿ ರಚನೆ ಮಾಡಿದ್ದೇವೆ.

Read More

ಬೆಂಗಳೂರು : ನಟ ದರ್ಶನ್ ಮತ್ತು ಗ್ಯಾಂಗ್ ನಿಂದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ಸಿ ಆರ್ ಪಿ ಸಿ ಸೆಕ್ಷನ್ 294 ಅಡಿ ಅರ್ಜಿ ಸಲ್ಲಿಕೆ ಮಾಡಲಾಗುತ್ತಿದ್ದು, ಬೆಂಗಳೂರಿನ 57ನೇ CCH ಕೋರ್ಟಿಗೆ ಪ್ರಾಸಿಕ್ಯೂಷನ್ ಅರ್ಜಿ ಸಲ್ಲಿಸಲಿದ್ದಾರೆ. ಈ ವೇಳೆ ವಿಡಿಯೋ ಕಾನ್ಫರೆನ್ಸ್ ಮೂಲಕ ಕೊಲೆ ಆರೋಪಿ ದರ್ಶನ್ ಹಾಜರಾಗಿದ್ದಾರೆ. ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಿಆರ್ಪಿಸಿ ಸೆಕ್ಷನ್ 294 ಅಡಿ ಸಹಾಯಕ ಎಸ್ ಪಿ ಪಿ ಸಚಿನ್ ಅರ್ಜಿ ಸಲ್ಲಿಸಿದ್ದಾರೆ ಈ ಹಿನ್ನೆಲೆ ವಿಡಿಯೋ ಕಾನ್ಫರೆನ್ಸ್ ಮೂಲಕ ಕೊಲೆ ಆರೋಪಿ ನಟ ದರ್ಶನ್ ಹಾಜರಾಗಿದ್ದಾರೆ. ಮರುನ್ ಬಣ್ಣದ ಟಿ-ಶರ್ಟ್ ಹಾಗೂ ಹಣೆಗೆ ಕುಂಕುಮ ಹಚ್ಚಿ ದರ್ಶನ್ ಹಾಜರಾಗಿದ್ದಾರೆ. ಅರ್ಜಿ ಬಗ್ಗೆ ಪ್ರತಿಕ್ರಿಯೆ ನೀಡಲು ದರ್ಶನ್ ಸೇರಿದಂತೆ ಆರೋಪಿಗಳ ಪರ ವಕೀಲರು ಕಾಲಾವಕಾಶ ಕೋರಿದರು. 5000ಕ್ಕೂ ಹೆಚ್ಚಿನ ದಾಖಲೆಗಳು ಇರುವುದರಿಂದ 15 ದಿನ ಸಮಯಕ್ಕೆ ಮನವಿ ಮಾಡಿದರು. ಬಳಿಕ 57ನೇ CCH ಕೋರ್ಟ್ ವಿಚಾರಣೆಯನ್ನು ನವೆಂಬರ್ 19ಕ್ಕೆ ಮುಂದೂಡಿತು.

Read More

ಬೆಂಗಳೂರು : ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಲ್ಲಿ ಕೈದಿಗಳಿಗೆ ರಾಜಾತಿಥ್ಯ  ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ಬಿಜೆಪಿ ಸಿಎಂ ಸಿದ್ದರಾಮಯ್ಯ ಹಾಗೂ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿತು. ಬೆಂಗಳೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ವಿಪಕ್ಷ ನಾಯಕ ಆರ್ ಅಶೋಕ್ ಎಂಎಲ್ಸಿ ಸಿಟಿ ರವಿ ಎನ್ ರವಿಕುಮಾರ್ ಚಲವಾದಿ ನಾರಾಯಣ ಸ್ವಾಮಿ ಸೇರಿದಂತೆ ಶಿವಾನಂದ್ ಸರ್ಕಲ್ ನಿಂದ ಬಿಜೆಪಿ ನಾಯಕರು ಪ್ರತಿಭಟನೆ ಆರಂಭಿಸಿದರು. ಈ ವೇಳೆ ಸಿಎಂ ನಿವಾಸಕ್ಕೆ ಆಗಮಿಸುತ್ತಿದ್ದಂತೆ ಪೊಲೀಸರು ಪ್ರತಿಭಟನಾ ನಿರತ ಬಿಜೆಪಿ ನಾಯಕರನ್ನು ವಶಕ್ಕೆ ಪಡೆದುಕೊಂಡರು ಬಳಿಕ ಬಿಎಂಟಿಸಿ ಬಸ್ ನಲ್ಲಿ ಬಿಜೆಪಿ ನಾಯಕರನ್ನು ಕರೆದೊಯ್ದರು.

Read More

ಬೆಂಗಳೂರು : ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳಿಗೆ ರಾಜ್ಯಾತೀತ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ವಿಪಕ್ಷ ಬಿಜೆಪಿ ಪ್ರತಿಭಟನೆ ನಡೆಸಿದೆ. ಈ ಹಿನ್ನೆಲೆ ಸಿದ್ದರಾಮಯ್ಯ ನಿವಾಸದ ಬಳಿ ಹೆಚ್ಚುವರಿ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ. ಸಿಎಂ ಸಿದ್ದರಾಮಯ್ಯ ಕಾವೇರಿ ನಿವಾಸ ಹಾಗೂ ಗೃಹಕಚೇರಿ ಕೃಷ್ಣಬಳಿ ಪೊಲೀಸರ ಬಿಗಿ ಭದ್ರತೆ ನಿಯೋಜನೆಗೊಳಿಸಲಾಗಿದ್ದು, ಒಂದು ಕೆ ಎಸ್ ಆರ್ ಪಿ ತುಕಡಿ ಸೇರಿದಂತೆ 80ಕ್ಕೂ ಹೆಚ್ಚು ಪೋಲಿಸರಿಂದ ಭದ್ರತೆ ಒದಗಿಸಲಾಗಿದೆ. ಕುಮಾರ ಕೃಪ ಗೆಸ್ಟ್ ಹೌಸ್ ಬಳಿ ಪೊಲೀಸರು ಪ್ರತಿಭಟನಾಕಾರರನ್ನು ವಶಕ್ಕೆ ಪಡೆಯಲಿದ್ದಾರೆ. ವಶಕ್ಕೆ ಪಡೆದು ಎರಡು ಬಿಎಂಟಿಸಿ ಬಸ್ಗಳಲ್ಲಿ ಸಾಗಿಸಲು ವ್ಯವಸ್ಥೆ ಸಹ ಮಾಡಲಾಗಿದೆ. ಸದ್ಯ ಶಿವಾನಂದ ಸರ್ಕಲ್ ಬಳಿ ಬಿಜೆಪಿ ನಾಯಕರು ಪ್ರತಿಭಟನೆ ನಡೆಸುತ್ತಿದ್ದಾರೆ.

Read More

ಬೆಂಗಳೂರು : ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳ ರಾಜಾತಿಥ್ಯ ಪ್ರಕರಣಕ್ಕೆ ಸಂಬಂಧಪಟ್ಟಂತೆ ವಿಡಿಯೋ ಫೋಟೋಗಳು ವೈರಲ್ ಆಗಿವೆ. ಈ ಒಂದು ವಿಚಾರಕ್ಕೆ ಸಂಬಂಧಪಟ್ಟಂತೆ ಕೊಲೆ ಆರೋಪಿ ನಟ ದರ್ಶನ್ ಆಪ್ತ ನಟ ಧನ್ವೀರನನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಜೈಲಿನ ವಿಡಿಯೋ ಹೊರಗಡೆ ಬಂದಿರುವ ಸಂಬಂಧಪಟ್ಟಂತೆ ಸಿಸಿಬಿ ಪೊಲೀಸರು ದರ್ಶನ್ ಆಪ್ತ ಧನ್ವೀರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ತಡರಾತ್ರಿ ಒಂದು ಗಂಟೆಗೆ ಮನೆಯ ಬಳಿ ಧನ್ವೀರನನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಹೆಚ್ಚಿನ ವಿಚಾರಣೆಗೆ ಒಳಪಡಿಸುವ ಹಿನ್ನೆಲೆಯಲ್ಲಿ ದರ್ಶನ್ ಆಪ್ತ ಧನ್ವಿರ್ ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.a

Read More

ಬೆಂಗಳೂರು : ಕಳೆದ ಕೆಲವು ತಿಂಗಳ ಹಿಂದೆ ರೌಡಿಶೀಟರ್ ಬಿಕ್ಲು ಶಿವನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬೇಕಾರವಾಗಿ ಕೊಲೆ ಮಾಡಲಾಗಿತ್ತು ಈ ಒಂದು ಕೊಲೆ ಪ್ರಕರಣದ A1 ಆರೋಪಿಯಾಗಿದ್ದ ಜಗ್ಗ ಅಲಿಯಾಸ್ ಜಗದೀಶ್ ವಿದೇಶಕ್ಕೆ ಪರಾರಿಯಾಗಿದ್ದ. ಇದೀಗ ಬೆಂಗಳೂರಿನ ರಾಮಮೂರ್ತಿ ನಗರದಲ್ಲಿ ಸಿಐಡಿ ಅಧಿಕಾರಿಗಳು ಆರೋಪಿ ಜಗದೀಶನ ಆಪ್ತ ಅಜೀತ್ ನನ್ನ ಅರೆಸ್ಟ್ ಮಾಡಿದ್ದಾರೆ. ಹೌದು ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಜಗದೀಶ್ ಆಪ್ತ ಅಜಿತ್ ನನ್ನು ಸಿಐಡಿ ಪೋಲೀಸರು ಅರೆಸ್ಟ್ ಮಾಡಿದ್ದಾರೆ. ಬೆಂಗಳೂರಿನ ರಾಮಮೂರ್ತಿ ನಗರದಲ್ಲಿ ಅಜಿತ್ ನನ್ನು ಬಂಧಿಸಿದ್ದಾರೆ ಪ್ರಕರಣದಲ್ಲಿ ಅಜಿತ್ ವಿರುದ್ಧ ಸಿಐಡಿ ಪೋಲೀಸರು ಹೆಚ್ಚುವರಿ ಸಾಕ್ಷಿ ಕಲೆ ಹಾಕಿದ್ದರು ಇಂದು ಬೆಳಿಗ್ಗೆ ರಾಮಮೂರ್ತಿ ನಗರದಲ್ಲಿ ಸಿಐಡಿ ಪೋಲೀಸರು ಅಜಿತ್ ವಶಕ್ಕೆ ಪಡೆದುಕೊಂಡಿದ್ದು ಕಚೇರಿಗೆ ಕರೆತಂದು ಆರೋಪಿ ಅಜಿತ್ ನನ್ನು ಅರೆಸ್ಟ್ ಮಾಡಿದ್ದಾರೆ ಮಧ್ಯಾಹ್ನ 3 ಗಂಟೆಯ ಬಳಿಕ ಕೋರ್ಟಿಗೆ ಹಾಜರುಪಡಿಸಲಿದ್ದಾರೆ ಎಂದು ತಿಳಿದುಬಂದಿದೆ.

Read More

ಬೆಂಗಳೂರು : ಪರಪ್ಪನ ಅಗ್ರಹಾರದಲ್ಲಿ ಅಕ್ರಮದ ವಿಡಿಯೋ ವಿಚಾರಕ್ಕೆ ಸಂಬಂಧಪಟ್ಟಂತೆ ಪೊಲೀಸ ಅಧಿಕಾರಕ್ಕೆ ಗೃಹ ಸಚಿವ ಜಿ ಪರಮೇಶ್ವರಿ ಸಭೆ ನಡೆಸಿದ್ದು ಸಭೆಯಲ್ಲಿ ಜೈಲು ಅಧಿಕಾರಿಗಳಿಗೆ ಗೃಹ ಸಚಿವ ಪರಮೇಶ್ವರ ಅವರು ಹಿಗ್ಗಾಮುಗ್ಗ ತರಾಟೆಗೆ ತೆಗೆದುಕೊಂಡಿದ್ದಾರೆ. ಹೌದು ಗೃಹ ಸಚಿವ ಪರಮೇಶ್ವರ ಜೊತೆ ಜೈಲಾಧಿಕಾರಿಗಳ ಸಭೆ ನಡೆಯುತ್ತಿದ್ದು, ಜೈಲಿನಲ್ಲಿ ಕೈದಿಗಳ ಮೋಜು ಮಸ್ತಿ ವಿಡಿಯೋ ಬಗ್ಗೆ ತರಾಟೆ ತೆಗೆದುಕೊಂಡಿದ್ದಾರೆ. ಅಧಿಕಾರಿಗಳಿಗೆ ಪರಮೇಶ್ವರ್ ಅವರು ಹಿಗ್ಗಾಮುಗ್ಗ ಕ್ಲಾಸ್ ತೆಗೆದುಕೊಂಡಿದ್ದಾರೆ. ವಿಡಿಯೋ ಫೋಟೋಗಳನ್ನು ತೋರಿಸಿ ಪರಮೇಶ್ವರ್ ಕೆಲವು ಪ್ರಶ್ನೆಗಳನ್ನು ಕೇಳಿದ್ದಾರೆ. ಪ್ರಾಜೆಕ್ಟ್ ನಲ್ಲಿ ಪ್ರದರ್ಶಿಸಿ ಸಚಿವರು ವಿವರಣೆ ಕೇಳಿದ್ದಾರೆ ಎಲ್ಲಾ ಫೋಟೋ ವಿಡಿಯೋಗಳನ್ನು ತೋರಿಸಿ ಪ್ರಶ್ನೆ ಕೇಳಿದ್ದಾರೆ ಜೈಲು ಅಧಿಕಾರಿಗಳು ಎದ್ದುನಿಂತು ಗೃಹ ಸಚಿವರಿಗೆ ಉತ್ತರ ನೀಡಿದ್ದಾರೆ ಯಾವ್ಯಾವ ಫೋಟೋ ಯಾವಾಗ ತೆಗೆದಿರುವುದು ಎಂಬುದರ ಕುರಿತು ಎಲ್ಲಾ ಮಾಹಿತಿಯನ್ನು ಗೃಹ ಸಚಿವ ಪರಮೇಶ್ವರ್ ಸಂಗ್ರಹಿಸುತ್ತಿದ್ದಾರೆ. ಬೆಂಗಳೂರಿನ ಕಾರಾಗೃಹ ಕಚೇರಿಯಲ್ಲಿ ಈ ಒಂದು ಮಹತ್ವದ ಸಭೆ ನಡೆಯುತ್ತಿದೆ.

Read More