Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ಪ್ರೀತಿ ನಿರಾಕರಿಸಿದ ಯುವತಿಯ ಮೇಲಿನ ಸಿಟ್ಟಿಗೆ ಆಕೆಯ ಮನೆಯಲ್ಲಿದ್ದ ಕಾರು, ದ್ವಿಚಕ್ರ ವಾಹನಗಳಿಗೆ ಬೆಂಕಿಯಿಟ್ಟಿದ್ದ ರೌಡಿಶೀಟರ್ ಹಾಗೂ ಆತನ ಸಹಚರರನ್ನು ಸಿಸಿಬಿಯ ಪೂರ್ವ ವಿಭಾಗದ ಸಂಘಟಿತ ಅಪರಾಧ ನಿಯಂತ್ರಣ ದಳದ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹೌದು ಪ್ರೀತಿ ನಿರಾಕರಿಸಿದ್ದಾಳೆ ಎಂದು ಯುವತಿಯ ತಂದೆಗೆ ಸೇರಿದ ಕಾರಿಗೆ ಬೆಂಕಿ ಇಟ್ಟು ರೌಡಿಶೀಟರ್ ರಾಹುಲ್ ಹುಚ್ಚಾಟ ಮೆರೆದಿದ್ದ ಕಳೆದೆರಡು ದಿನಗಳ ಹಿಂದೆ ಬೆಂಗಳೂರಿನ ಸಿಕೆ ಅಚ್ಚುಕಟ್ಟು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಒಂದು ಘಟನೆ ನಡೆದಿತ್ತು. ಕಾರಿಗೆ ಬೆಂಕಿ ಇಡೋಕು ಮುಂಚೆ ಯುವತಿಯ ಸಾಕು ತಂದೆಗೆ ರೌಡಿಶೀಟರ್ ರಾಹುಲ್ ಚಾಕು ಇರಿದು ಬಳಿಕ ಕಾರಿಗೆ ಬೆಂಕಿ ಹಚ್ಚಿದ್ದ. ಇದೀಗ ರಾಹುಲ್ ಮತ್ತು ಆತನ ಸಹಚರರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಪ್ರಕರಣ ಹಿನ್ನೆಲೆ 9 ವರ್ಷಗಳಿಂದ ಯುವತಿಯೊಬ್ಬಳನ್ನು ರಾಹುಲ್ ಪ್ರೀತಿಸುತ್ತಿದ್ದ. ಆದರೆ, ಇತ್ತೀಚೆಗೆ ರಾಹುಲ್‌ನ ಸಂಪರ್ಕದಿಂದ ದೂರ ಉಳಿದಿದ್ದ ಯುವತಿ ಆತನನ್ನು ನಿರ್ಲಕ್ಷ್ಯಿಸಲಾರಂಭಿಸಿದ್ದಳು. ಇದರಿಂದ ಸಿಟ್ಟಿಗೆದ್ದ ಆರೋಪಿ ಶನಿವಾರ ರಾತ್ರಿ ತನ್ನ ಸಹಚರರೊಂದಿಗೆ…
ಮಹಾರಾಷ್ಟ : ಕುಂಭಮೇಳದಿಂದ ಹಿಂದಿರುಗುವಾಗ ಭೀಕರ ಅಪಘಾತ ಸಂಭವಿಸಿದ್ದು, ಬೀದರ್ ಜಿಲ್ಲೆಯ ಇಬ್ಬರು ಸಾವನ್ನಪ್ಪಿದ್ದಾರೆ. ಮಹಾರಾಷ್ಟ್ರದ ದರ್ಗಾ ಬಳಿ ಟಿಟಿ ಹಾಗೂ ಲಾರಿ ನಡುವೆ ಡಿಕ್ಕಿಯಾಗಿ ಇಬ್ಬರು ಸಾವನಪ್ಪಿದ್ದಾರೆ. ಬೀದರ್ ನ ಓಲ್ಡ್ ಸಿಟಿ ದರ್ಜಿ ಗಲ್ಲಿಯ ಇಬ್ಬರು ಸ್ಥಳದಲ್ಲಿ ದುರ್ಮರಣ ಹೊಂದಿದ್ದಾರೆ. ಟೆಂಪೋ ಟ್ರಾವೆಲರ್ ನಲ್ಲಿ ಕುಂಭಮೇಳಕ್ಕೆ ಹೋಗಿ ವಾಪಸ್ ಬರುವಾಗ ಈ ಅಪಘಾತ ಸಂಭವಿಸಿದೆ. ಟಿಟಿ ವಾಹನದಲ್ಲಿ 14 ಜನರಿಗೆ ಗಂಭೀರವಾಗಿ ಗಾಯವಾಗಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಐದು ದಿನಗಳ ಹಿಂದೆ ಉತ್ತರ ಪ್ರದೇಶದ ಪ್ರಯಾಗ್ ರಾಜ್ ಗೆ ತೆರಳಿದ್ದರು. ಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದ ಬಳಿಕ ಕಾಶಿ, ಅಯೋಧ್ಯೆಗೆ ಭೇಟಿ ನೀಡಿದ್ದರು. ಇಂದು ವಾಪಾಸ್ ಬರುವಾಗ ಟಿಟಿ ಚಾಲಕನ ನಿರ್ಲಕ್ಷದಿಂದ ಬೆಳಿಗ್ಗೆ ಅಪಘಾತವಾಗಿದೆ. ಟಿಟಿಯಲಿದ್ದ ಇಬ್ಬರು ಸ್ಥಳದಲ್ಲಿ ಸಾವನಪ್ಪಿದು 14 ಜನರ ಸ್ಥಿತಿ ಗಂಭೀರವಾಗಿದೆ. ಕೂಡಲೇ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇತ್ತೀಚೆಗೆ ತಾನೇ ಬೀದರ್ ನಗರದ ಒಂದೇ ಕುಟುಂಬದ 6 ಜನರು ಉತ್ತರ…
ಮಂಡ್ಯ : ಕಳೆದ ಕೆಲವು ದಿನಗಳ ಹಿಂದೆ ರಾಜ್ಯದಲ್ಲಿ ಬೀದರ್, ಮೈಸೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ದರೋಡೆ ಪ್ರಕರಣಗಳು ನಡೆದಿದ್ದವು.ಇದೀಗ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ದೇವಲಾಪುರ ಗ್ರಾಮದಲ್ಲಿ ಬ್ಯಾಂಕ್ ದರೋಡೆಗೆ ವಿಫಲ ಯತ್ನ ನಡೆಸಲಾಗಿದೆ. ಹೌದು ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನಲ್ಲಿ ದೇವಲಾಪುರ ಗ್ರಾಮದಲ್ಲಿ ಬ್ಯಾಂಕ್ ದರೋಡೆಗೆ ವಿಫಲ ಯತ್ನ ನಡೆದಿದೆ. ಬ್ಯಾಂಕ್ ಆಫ್ ಬರೋಡ ಬ್ಯಾಂಕ್ ನಲ್ಲಿ ಖದೀಮರು ದರೋಡೆಗೆ ತಡರಾತ್ರಿ ಬ್ಯಾಂಕಿನ ಕಿಟಕಿಯನ್ನು ಕತ್ತರಿಸಿ ಕಳ್ಳರು ಒಳನುಗ್ಗಿದ್ದಾರೆ. ಬ್ಯಾಂಕ್ ಒಳಭಾಗದಲ್ಲಿರುವ ಲಾಕಾರ್ ಹೊಡೆಯಲು ಯತ್ನಿಸಿದ್ದಾರೆ. ಲಾಕರ್ ಹೊಡೆಒಡೆಯಲು ಸಾಧ್ಯವಾಗದೆ ಕಳ್ಳರು ಬರಿಗೈಯಲ್ಲಿ ವಾಪಸ್ ಆಗಿದ್ದಾರೆ. ಸದ್ಯ ಘಟನಾ ತಳಕೆ ನಾಗಮಂಗಲ ಗ್ರಾಮಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಬೀದರ್ : ರಾಜ್ಯ ಸರ್ಕಾರ ವನ್ಯಜೀವಿ- ಮಾನವ ಸಂಘರ್ಷ ನಿಯಂತ್ರಿಸಲು ಟೆಂಟಕಲ್ ಫೆನ್ಸಿಂಗ್, ಸೌರ ಬೇಲಿ, ಆನೆ ಕಂದಕ ನಿರ್ಮಿಸಿ, ನಿರ್ವಹಿಸುತ್ತಿರುವುದರ ಜೊತೆಗೆ ರೈಲ್ವೆ ಬ್ಯಾರಿಕೇಡ್ ಸಹ ಹಾಕುತ್ತಿದೆ. 2024-25ನೇ ಸಾಲಿನಲ್ಲಿ 78.917 ಕಿ.ಮೀ ರೈಲ್ವೆ ಬ್ಯಾರಿಕೇಡ್ ಕಾಮಗಾರಿ ಪೂರ್ಣಗೊಂಡಿದೆ ಎಂದು ತಿಳಿಸಿದರು. ರಾಜ್ಯದಲ್ಲಿ ಕಾಡಾನೆ ದಾಳಿಗೆ ನಿನ್ನೆ ಮತ್ತು ಇಂದು ಇಬ್ಬರು ಸಾವಿಗೀಡಾಗಿರುವ ಬಗ್ಗೆ ತೀವ್ರ ಆಘಾತ ಮತ್ತು ಶೋಕ ವ್ಯಕ್ತಪಡಿಸಿರುವ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ, ಸಾರ್ವಜನಿಕರು ಇಲಾಖೆಯ ಮುನ್ನೆಚ್ಚರಿಕೆಗೆ ಸ್ಪಂದಿಸಬೇಕು ಎಂದು ಮನವಿ ಮಾಡಿದ್ದಾರೆ.ನಿನ್ನೆ ಹಾಸನ ಜಿಲ್ಲೆ ಬೇಲೂರು ತಾಲೂಕಿನಲ್ಲಿ ಒಬ್ಬ ಯುವಕ ಮತ್ತು ಇಂದು ಕೋಲಾರ ಜಿಲ್ಲೆ ಕಾನಸಮುದ್ರದಲ್ಲಿ ಮಹಿಳೆಯೊಬ್ಬರು ಮೃತಪಟ್ಟಿದ್ದು ತೀವ್ರ ನೋವು ತಂದಿದೆ. ಮೃತರ ಕುಟುಂಬದೊಂದಿಗೆ ಸರ್ಕಾರ ಇದೆ. ಅವರ ನೋವಿನಲ್ಲಿ ನಾವೂ ಭಾಗಿಯಾಗಿದ್ದೇವೆ ಎಂದು ತಿಳಿಸಿದ್ದಾರೆ. ಮೃತರ ಹತ್ತಿರದ ಸಂಬಂಧಿಕರಿಗೆ ಕೂಡಲೇ ಪರಿಹಾರದ ಮೊತ್ತ ನೀಡಲು ಸೂಚಿಸಲಾಗಿದೆ. ಈ ಎಲ್ಲ ದುರ್ಘಟನೆಗಳು ಬೆಳಗಿನ ಹೊತ್ತು ಮತ್ತು…
ಬೀದರ್ : ಡ್ಯೂಟಿಗೆ ತೆರಳುತ್ತಿದ್ದ ವೈದ್ಯನ ಬೈಕ್ ಗೆ ಟೆಂಪೋ ಟ್ರಾವೆಲರ್ ಒಂದು ವೇಗವಾಗಿ ಬಂದು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ವೈದ್ಯ ಸಾವನ್ನಪ್ಪಿರುವ ಘಟನೆ ಈ ಒಂದು ಅಪಘಾತ ನಡೆದಿದೆ. ಮೃತ ವೈದ್ಯನನ್ನು ಡಾ. ನೀಲಕಂಠ ಬೋಸ್ಲೆ (50) ಎಂದು ತಿಳಿದುಬಂದಿದೆ.ಬೀದರ್ ಕಡೆಯಿಂದ ಸಂತಪೂರ್‌ಗೆ ಹೋಗುತ್ತಿದ್ದ ವೇಳೆ ಟೆಂಪೋ ಟ್ರಾವೆಲ್ಸ್ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ವೈದ್ಯ (Doctor) 10 ರಿಂದ 15 ಅಡಿ ದೂರ ಹಾರಿ ಬಿದ್ದಿದ್ದಾರೆ. ಭೀಕರ ರಸ್ತೆ ಅಪಘಾತಕ್ಕೆ ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದ ವೈದ್ಯ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಔರಾದ್‌ನ ಸಂತಪುರ ಗ್ರಾಮದ ನಿವಾಸಿಯಾಗಿರುವ ವೈದ್ಯ ನೀಲಕಂಠ ಬೀದರ್‌ನಿಂದ ಸಂತಪುರ ಗ್ರಾಮದಲ್ಲಿರುವ ತನ್ನ ಕ್ಲಿನಿಕ್‌ಗೆ ಹೋಗುತ್ತಿದ್ದಾಗ ಅಫಘಾತವಾಗಿದೆ. ಸಿನಿಮೀಯಾ ರೀತಿಯಲ್ಲಿ ಭೀಕರ ರಸ್ತೆ ಅಪಘಾತದ ಭಯಾನಕ ದೃಶ್ಯಗಳು ಸಿಸಿಸಿಟಿಯಲ್ಲಿ ಸೆರೆಯಾಗಿದೆ. ಈ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ಸಂತಪೂರ್ ಪೋಲಿಸರು ಹೆಚ್ಚಿನ ತನಿಖೆ ಕೈಗೊಂಡದ್ದಾರೆ.
ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಲೋಕಾಯುಕ್ತ ಅಧಿಕಾರಿಗಳು ಇತ್ತೀಚಿಗೆ ಸಿಎಂ ಸಿದ್ದರಾಮಯ್ಯ ಹಾಗೂ ಅವರ ಕುಟುಂಬಕ್ಕೆ ಕ್ಲೀನ್ ಚಿಟ್ ನೀಡಿತು ಇದೀಗ ಕ್ಲೀನ್ ಚಿಟ್ ನೀಡಿರುವ ವಿಚಾರವಾಗಿ ಲೋಕಾಯುಕ್ತ ವರದಿ ಸಲ್ಲಿಸಿದೆ ಈ ಒಂದು ವರದಿಯಲ್ಲಿ ಮುಡಾ ಈ ಹಿಂದಿನ ಅಧಿಕಾರಿಗಳದ್ದೇ ತಪ್ಪಿದೆ ಎಂದು ಲೋಕಾಯುಕ್ತ ಅಧಿಕಾರಿಗಳು ಉಲ್ಲೇಖಿಸಿದ್ದಾರೆ. ಹೌದು ಸಿದ್ದರಾಮಯ್ಯ ಕುಟುಂಬಕ್ಕೆ ಲೋಕಾಯುಕ್ತರಿಂದ ಕ್ಲೀನ್ ಚಿಟ್ ನೀಡಿದ ವಿಚಾರಕ್ಕೆ ಸಂಬಂಧಪಟ್ಟಂತೆ ಲೋಕಾಯುಕ್ತ ಮುಡಾದಲ್ಲಿ ಸ್ಟೇಟ್ ಹಂಚಿಕೆ ಪ್ರಕರಣದ ವರದಿ ಸಲ್ಲಿಕೆ ಮಾಡಿದೆ. ಮುಡಾ ಅಧಿಕಾರಿಗಳ ಲೋಪ ಇದೆ ಎಂದು ವರದಿಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಉಲ್ಲೇಖಿಸಿದ್ದಾರೆ. ಹಿಂದಿನ ಡಿಸಿ ಕುಮಾರ್ ನಾಯಕ್, ತಹಶೀಲ್ದಾರ್ ಮಾಳಿಗೆ ಶಂಕರ್, ಆರ್ ಐ ಸಿದ್ದಪ್ಪಾಜಿ ಭೂಮಾಪಕ ಶಂಕರಪ್ಪ ಅವರಿಂದ ಲೋಪ ಆಗಿದೆ.ಅಂದಿನ ಅಧಿಕಾರಿಗಳ ತಪ್ಪಿನ ಬಗ್ಗೆ ಲೋಕಾಯುಕ್ತ ವರದಿಯಲ್ಲಿ ಉಲ್ಲೇಖಿಸಿದೆ. ಮುಡಾ ಸೈಟ್ ಗೆ ಅರ್ಜಿ ಹಾಕಿದವರು ಭೂಮಿ ಕೊಂಡವರು ಅನ್ಯಕ್ರಾಂತ ಮಾಡಿಸಿಕೊಂಡವರಲ್ಲಿ ತಪ್ಪಿಲ್ಲ. ಆದರೆ ಆ ಕೆಲಸಗಳನ್ನು ಮಾಡಿಕೊಟ್ಟವರು ತಪ್ಪು ಮಾಡಿದ್ದಾರೆ. ಕೆಸರೆ…
ಬೆಂಗಳೂರು : ಹೆದ್ದಾರಿ ಡಿವೈಡರ್ ಮೇಲೇರಿ 5 ಪಲ್ಟಿ ಹೊಡೆದು ಕಾರು ಪಲ್ಟಿಯಾಗಿದೆ. ಕಾರು ಪಲ್ಟಿಯಾಗುತ್ತಿದ್ದಂತೆ ಮೂವರು ಕಾರಿನಿಂದ ಹೊರಗೆ ಹಾರಿ ಬಿದ್ದಿದ್ದಾರೆ. ಕಾರಿನಲ್ಲಿದ್ದ ಐವರ ಪೈಕಿ 20 ವರ್ಷದ ಯೂನಿಸ್ ಎನ್ನುವ ವ್ಯಕ್ತಿ ಸಾವನಪ್ಪಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ಕತ್ತಿ ಹೊಸಹಳ್ಳಿ ಬಳಿ ಈ ಒಂದು ಭೀಕರ ಅಪಘಾತ ಸಂಭವಿಸಿದೆ. ನಿನ್ನೆ ಬೆಳಿಗ್ಗೆ ನಡೆದಂತಹ ಈ ಒಂದು ಕಾರು ಅಪಘಾತ ಧಾರವಾಡದಿಂದ ದೇವನಹಳ್ಳಿಯ ವಿಜಯಪುರಕ್ಕೆ ಐವರು ಬರುತ್ತಿದ್ದರು ಕಾರು ಪಲ್ಟಿಯಾಗಿ ಕಾರಿನಲ್ಲಿದ್ದ ಐವರು ಗಾಯಗೊಂಡಿದ್ದಾರೆ. ಆದರೆ ಚಿಕಿತ್ಸೆ ಫಲಿಸದೇ ಕಾರು ಚಾಲಕ ಯೂನಿಸ್ ಇದೀಗ ಸಾವನ್ನಪ್ಪಿದ್ದಾನೆ.
ತುಮಕೂರು : ಕಳೆದ ಕೆಲವು ದಿನಗಳ ಹಿಂದೆ ಮೈಕ್ರೋ ಫೈನಾನ್ಸ್ ಸಿಬ್ಬಂದಿಗಳ ಕಿರುಕುಳಕ್ಕೆ ಗೃಹ ಸಚಿವರ ತವರಲ್ಲಿ ಇಬ್ಬರು ವ್ಯಕ್ತಿಗಳು ಆತ್ಮಹತ್ಯೆ ಮಾಡಿಕೊಂಡಿದ್ದು, ಇಡೀ ರಾಜ್ಯಾದ್ಯಂತ ಭಾರಿ ಸುದ್ದಿಯಾಗಿತ್ತು. ಇದೀಗ ಮತ್ತೆ ಗೃಹ ಸಚಿವರ ತವರು ಸುದ್ದಿಯಲ್ಲಿದ್ದು ನವಜಾತ ಶಿಶುಗಳ ಮಾರಾಟ ಜಾಲವೊಂದು ಪತ್ತೆಯಾಗಿದೆ. ಹೌದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರ ತವರಾದ ತುಮಕೂರಿನಲ್ಲಿ ನವಜಾತ ಶಿಶುವಿನ ಮಾರಾಟ ಜಾಲ ಪತ್ತೆಯಾಗಿದ್ದು, ಶಿಶುವನ್ನು ಮಾರಾಟ ಮಾಡುತ್ತಿದ್ದ ಐವರನ್ನು ಇದೀಗ ಕುಣಿಗಲ್ ಪೊಲೀಸರು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ. ಘಟನೆ ಹಿನ್ನೆಲೆ? ಫೆ.20ರಂದು ತುಮಕೂರು ಜಿಲ್ಲೆ ಕುಣಿಗಲ್ ತಾಲೂಕು ಆಸ್ಪತ್ರೆಯಲ್ಲಿ ರಾಮನಗರ ಜಿಲ್ಲೆಯ ಮಾಗಡಿಯ 21 ವರ್ಷದ ಅವಿವಾಹಿತೆ ಮಹಿಳೆಯೊಬ್ಬರು ಗಂಡು ಮಗವಿಗೆ ಜನ್ಮ ನೀಡಿದ್ದರು. ಆದರೆ ಮಗುವನ್ನು ತೆಗೆದುಕೊಂಡು ಹೋಗಲು ತಾಯಿ ನಿರಾಕರಿಸಿದ್ದಾಳೆ.ಈ ವೇಳೆ ಮಗುವಿನ ತಾಯಿ ಹಾಗೂ ಆಕೆಯ ಪ್ರಿಯಕರ ಶ್ರೀನಂದ ಎಂಬಾತ ಮಗುವನ್ನು ಮಾರಾಟ ಮಾಡೋಣ ಎಂದು ನಿರ್ಧರಿಸಿದ್ದಾರೆ. ಅದರಂತೆ ಶ್ರೀನಂದ ಮಾಗಡಿಯ ಜ್ಯೋತಿ ಎಂಬುವವರು ಸಂಪರ್ಕಿಸಿ ನಡೆದ ವಿಚಾರವನ್ನು…
ಬೆಂಗಳೂರು : ದರ್ಶನ್ ಮತ್ತು ಗ್ಯಾಂಗ್ ನಿಂದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ A1 ಪವಿತ್ರ ಗೌಡ ಹಾಗೂ A2 ದರ್ಶನ್ ಸೇರಿದಂತೆ ಎಲ್ಲಾ 17 ಆರೋಪಿಗಳು ಬೆಂಗಳೂರಿನ 57ನೇ ಸಿಸಿಹೆಚ್ ನ್ಯಾಯಾಲಯಕ್ಕೆ ಹಾಜರಾಗಿದ್ದರು. ಈ ವೇಳೆ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶರು ಏಪ್ರಿಲ್ 8ಕ್ಕೆ ವಿಚಾರಣೆ ಮುಂದೂಡಿ ಆದೇಶ ನೀಡಿದರು. ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈಗಾಗ್ಲೇ ರೆಗ್ಯುಲರ್ ಬೇಲ್ ಪಡೆದು ಬಿಡುಗಡೆಯಾಗಿರುವ ನಟ ದರ್ಶನ್ ಹಾಗೂ ಕೊಲೆ ಪ್ರಕರಣದ A1 ಆರೋಪಿ ಪವಿತ್ರಾಗೌಡ ಸೇರಿದಂತೆ ಎಲ್ಲ ಆರೋಪಿಗಳು ಇಂದು ಕೋರ್ಟ್ ಗೆ ಹಾಜರಾಗಿದ್ದರೆ. ಕೊಲೆ ಪ್ರಕರಣಕ್ಕೆ ಸಂಬಂಧಸಿದಂತೆ ಇಂದು ಬೆಂಗಳೂರಿನ 57 ನೇ ಸಿಸಿಹೆಚ್ ಕೋರ್ಟ್ ನಟ ದರ್ಶನ್ ಹಾಜರಾಗಿದ್ದಾರೆ. ವಿಚಾರಣೆ ನಡೆಸಿದ ನ್ಯಾಯಾಧೀಶರು ಏಪ್ರಿಲ್ 8ರಂದು ವಿಚಾರಣೆ ಮುಂದೂಡಿದರು. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ & ಗ್ಯಾಂಗ್ ವಿಚಾರಣೆ ಫೆ.25 ಕ್ಕೆ ಮುಂದೂಡಿ ಬೆಂಗಳೂರಿನ 57 ನೇ ಸಿಸಿಹೆಚ್ ಕೋರ್ಟ್ ಆದೇಶ…
ಬೆಳಗಾವಿ : ಕನ್ನಡದಲ್ಲಿ ಮಾತನಾಡಿ ಎಂದಿದ್ದಕ್ಕೆ ಕೆಎಸ್ಆರ್ಟಿಸಿ ಬಸ್ ನಿರ್ವಾಹಕನ ಮೇಲೆ ಹಲ್ಲೆ ನಡೆಸಿದ್ದ ಆರೋಪಿಗಳನ್ನು ಬೆಳಗಾವಿಯ ಮಾರಿಹಾಳ ಠಾಣೆ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಆದರೆ ಕಾನೂನು ಅನ್ನು ದುರ್ಬಳಕೆ ಮಾಡಿಕೊಂಡ ಆರೋಪಿಗಳು ಕಂಡಕ್ಟರ್ ಮಹಾದೇವ ಹುಕ್ಕೇರಿ ಮೇಲೇನೆ ಪ್ರಕರಣ ದಾಖಳಿಸಿದ್ದಾರೆ. ಇದೀಗ ಇದೆ ಪ್ರಕರಣ ದಾಖಲಿಸಿದಕ್ಕೆ ಸಿಪಿಐ ವರ್ಗಾವಣೆಯಾಗಿದ್ದಾರೆ. ಹೌದು ಕಂಡಕ್ಟರ್ ಮೇಲೆ ಪೋಕ್ಸೋ ಕೇಸ್ ದಾಖಲಿಸಿಕೊಂಡಿದ್ದ ಸಿಪಿಐ ಗುರುರಾಜ್ ಕಲ್ಯಾಣಶೆಟ್ಟರ್ ಮಾರಿಹಾಳ ಠಾಣೆಯಿಂದ ಬೆಳಗಾವಿಯ ಸಿಸಿಆರ್‌ಬಿಗೆ ಗುರುರಾಜ್ ಅವರನ್ನು ವರ್ಗಾವಣೆ ಮಾಡಿ ನಗರ ಪೊಲೀಸ್ ಆಯುಕ್ತ ಯಡಾ ಮಾರ್ಟಿನ್ ಆದೇಶ ಹೊರಡಿಸಿದ್ದಾರೆ. ಸಧ್ಯ ಮಾರಿಹಾಳ ಠಾಣೆಯ ನೂತನ ಸಿಪಿಐ ಆಗಿ ಮಂಜುನಾಥ ನಾಯಕ ಅವರನ್ನು ನೇಮಕ ಮಾಡಲಾಗಿದೆ. ಬಸ್ ನಿರ್ವಾಹಕನ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕಂಡಕ್ಟರ್ ವಿರುದ್ಧ ಅಪ್ರಾಪ್ತ ಬಾಲಕಿಯಿಂದ ಮಾರಿಹಾಳ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕೇಸ್ ದಾಖಲಿಸಿದ ಬಳಿಕ… ಹಿರಿಯ ಅಧಿಕಾರಿಗಳ ಗಮನಕ್ಕೆ ತರದೇ ಮಾರಿಹಾಳ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.…













