Subscribe to Updates
Get the latest creative news from FooBar about art, design and business.
Author: ಸುರೇಶ್
"ಕನ್ನಡ ನ್ಯೂಸ್ ನೌ ಜಾಲತಾಣದ ಮುಖ್ಯ ಸಂಪಾದಕರಾದ ಸುರೇಶ್ ಅವರು ಕಳೆದ 4 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದಾರೆ. ಸರ್ಕಾರದ ಯೋಜನೆಗಳು, ಶಿಕ್ಷಣ ಮತ್ತು ಪ್ರಚಲಿತ ವಿದ್ಯಮಾನಗಳನ್ನು ಸಾಮಾನ್ಯ ಜನರಿಗೂ ಅರ್ಥವಾಗುವಂತೆ ವಿವರಿಸುವುದು ಇವರ ವಿಶೇಷತೆ. ಈ ಮೊದಲು ವಿವಿಧ ವೆಬ್‌ಸೈಟ್‌ಗಳಲ್ಲಿ ನಾಗರಿಕ ಸಮಸ್ಯೆಗಳ ಬಗ್ಗೆ ವರದಿಗಾರರಾಗಿ ಕೆಲಸ ಮಾಡಿರುವ ಇವರು, ಸಮಯೋಚಿತ ಹಾಗೂ ವಿಶ್ವಾಸಾರ್ಹ ಮಾಹಿತಿ ನೀಡುವ ಮೂಲಕ ಓದುಗರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಡಿಜಿಟಲ್ ಸಾಕ್ಷರತೆ ಇವರ ನೆಚ್ಚಿನ ವಿಷಯಗಳಲ್ಲೊಂದು
ರಾಯಚೂರು : ರಾಜ್ಯದಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದ್ದು ಕೆಕೆಆರ್ಟಿಸಿ ಸ್ಲೀಪರ್ ಕೋಚ್ ಬಸ್ ಪಲ್ಟಿಯಾಗಿ 15 ಜನರಿಗೆ ಗಂಭೀರವಾಗಿರುವ ಘಟನೆ ರಾಯಚೂರು ತಾಲೂಕಿನ ಕ್ರಾಸ್ ಬಳಿ ಈ ಒಂದು ಅಪಘಾತ ಸಂಭವಿಸಿದೆ. ರಾಯಚೂರು ತಾಲೂಕಿನ ಸಾತ್ ಮೈಲ್ ಕ್ರಾಸ್ ಬಳಿ, ಹೊಸಪೇಟೆಯಿಂದ ಹೈದರಾಬಾದ್ಗೆ ಕೆಕೆಆರ್ಟಿಸಿ ಸ್ಲೀಪರ್ ಕೋಚ್ ಬಸ್ ತಿರುಳುತ್ತಿತ್ತು. ಈ ವೇಳೆ ನಿಯಂತ್ರಣ ಕಳೆದುಕೊಂಡ ಬಸ್ ಪಲ್ಟಿಯಾಗಿದೆ ಘಟನೆಯಲ್ಲಿ 15ಕ್ಕೂ ಹೆಚ್ಚು ಜನರಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ವರದಿಯಾಗಿದೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯ ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಶಿವಮೊಗ್ಗ : ರಾಜ್ಯದಲ್ಲಿ ಮತ್ತೊಂದು ನಾಗರಿಕ ಸಮಾಜ ತಲೆತಗ್ಗಿಸುವಂತಹ ಘಟನೆ ನಡೆದಿದ್ದು, ಶಿವಮೊಗ್ಗ ನಗರದ ಬ್ಯಾಂಕ್‌ವೊಂದರ ಶಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಮಹಿಳಾ ಸಿಬ್ಬಂದಿ ಮೇಲೆ ಅದೇ ಬ್ಯಾಂಕಿನ ಹಿರಿಯ ಅಧಿಕಾರಿಯೊಬ್ಬರು ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಕಚೇರಿ ಕೆಲಸಕ್ಕೆ ಒಬ್ಬರನ್ನೇ ಕರೆಯುವುದು, ಮೈ ಸವರುವುದನ್ನು ಮಾಡುತ್ತಿದ್ದರು ಎಂದು ಆರೋಪಿಸಲಾಗಿದೆ. ಬ್ಯಾಂಕಿನ ವ್ಯವಹಾರ ಸಂಬಂಧ ಮೀಟಿಂಗ್ ಎಂದು ಶಿವಮೊಗ್ಗದ ಹೋಟೆಲ್ ಒಂದಕ್ಕೆ ಕರೆಯಿಸಿಕೊಂಡು ಸ್ಪರ್ಶಿಸಿ ಅಸಭ್ಯವಾಗಿ ವರ್ತಿಸಿದ್ದಾರೆ. ಇದೇ ರೀತಿ ಮೂರು ಬಾರಿ ಮಾಡಿದ್ದಾರೆ ಎಂದು ಮಹಿಳೆ ದೂರಿನಲ್ಲಿ ಆರೋಪಿಸಿದ್ದಾರೆ.
ಹರಿಯಾಣ : ಜಮ್ಮು ಮತ್ತು ಕಾಶ್ಮೀರ ಪೊಲೀಸರು ಹರಿಯಾಣದ ಫರಿದಾಬಾದ್‌ನಲ್ಲಿರುವ ವೈದ್ಯರ ಕೊಠಡಿಯಿಂದ 300 ಕೆಜಿ ಆರ್‌ಡಿಎಕ್ಸ್, ಎಕೆ -47 ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಂಡಿದ್ದಾರೆ. ಜೈಶ್-ಎ-ಮೊಹಮ್ಮದ್ ಜೊತೆಗಿನ ಅವನ ಸಂಪರ್ಕದ ಬಗ್ಗೆ ತನಿಖೆ ಮುಂದುವರೆದಿದೆ. ಪೊಲೀಸರು ಭಾನುವಾರ ಕೊಠಡಿಯ ಮೇಲೆ ದಾಳಿ ನಡೆಸಿ ಎಲ್ಲಾ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಜಮ್ಮು ಮತ್ತು ಕಾಶ್ಮೀರ ಪೊಲೀಸರು ಸರಣಿ ಸಂಘಟಿತ ದಾಳಿಗಳ ನಂತರ ಪ್ರಮುಖ ಭಯೋತ್ಪಾದಕ ಸಂಚನ್ನು ವಿಫಲಗೊಳಿಸಿದ್ದಾರೆ. ಡಾ. ಆದಿಲ್ ಅಹ್ಮದ್ ರಾಥರ್ ಬಂಧನದ ನಂತರ ಪಡೆದ ಮಾಹಿತಿಯ ಮೇರೆಗೆ, ಹರಿಯಾಣದ ಫರಿದಾಬಾದ್‌ನಿಂದ ಸುಮಾರು 350 ಕಿಲೋಗ್ರಾಂಗಳಷ್ಟು ಸ್ಫೋಟಕಗಳು, ಎರಡು ಎಕೆ -47 ರೈಫಲ್‌ಗಳು ಮತ್ತು ದೊಡ್ಡ ಪ್ರಮಾಣದ ಮದ್ದುಗುಂಡುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಇದಕ್ಕೂ ಮೊದಲು, ಕಾಶ್ಮೀರ ಕಣಿವೆಯಲ್ಲಿ ಡಾ. ಆದಿಲ್‌ಗೆ ಸಂಬಂಧಿಸಿದ ಲಾಕರ್‌ನಿಂದ ಎಕೆ -47 ರೈಫಲ್ ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿತ್ತು. ಬಂಧಿತ ಮತ್ತೊಬ್ಬ ವೈದ್ಯನ ಬಹಿರಂಗಪಡಿಸುವಿಕೆಯ ಆಧಾರದ ಮೇಲೆ, ಅವರ ಗುರುತು ಇನ್ನೂ ಬಹಿರಂಗಪಡಿಸಲಾಗಿಲ್ಲ… ಪೊಲೀಸರು ಕಾರ್ಯಾಚರಣೆಗಳನ್ನು ನಡೆಸಿ ಶಸ್ತ್ರಾಸ್ತ್ರ ಮತ್ತು…
ಬೆಂಗಳೂರು : ಬೆಂಗಳೂರಿನಲ್ಲಿ ಪರಪ್ಪನ ಅಗ್ರಹಾರ ಜಾರಿನಲ್ಲಿ ಕೈದಿಗಳ ಮೋಜು ಮಸ್ತಿ ಮಾಡುತ್ತಿರುವ ವಿಡಿಯೋ ವೈರಲ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಅನೇಕ ಕಾನೂನುಬಾಹಿರ ಚಟುವಟಿಕೆ ನಡೆಯುತ್ತಿದ್ದು ಈಗಾಗಲೇ ವರದಿ ಕೊಡುವಂತೆ ಸಂಬಂಧ ಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಈ ಒಂದು ಪ್ರಕರಣ ಬಹಳ ಗಂಭೀರವಾಗಿ ಪರಿಗಣಿಸಿದ್ದೇವೆ ಎಂದು ಬೆಂಗಳೂರಲ್ಲಿ ಗೃಹ ಸಚಿವ ಜಿ.ಪರಮೇಶ್ವರ್ ತಿಳಿಸಿದರು. ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಇದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ ಸರ್ಕಾರ ಇದನ್ನು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ. ಯಾರ್ಯಾರು ಸಂಬಂಧಪಟ್ಟ ಅಧಿಕಾರಿಗಳು ಇದ್ದಾರೋ ಯಾವ ಜೈಲಿನಲ್ಲಿ ಜೈಲಾಧಿಕಾರಿಗಳಿದ್ದರೊ ಅವರೇ ಇದಕ್ಕೆ ಹೊಣೆಗಾರರಾಗಿದ್ದಾರೆ. ಸರಿಯಾದ ರೀತಿ ಆಡಳಿತ ಮಾಡುವಂತದ್ದು ಜೈಲಾಧಿಕಾರಿಗಳ ಕರ್ತವ್ಯ. ಮೊಬೈಲ್ ಫೋನ್ ಗಾಂಜ ಮದ್ಯ ಹಗ್ ಬೇರೆ ಯಾವುದೇ ಚಟುವಟಿಕೆಗಳು ನಡೆಯುತ್ತವೆ ಅಂದಾಗ ಅದಕ್ಕೆ ಹೊಣೆ ಜೈಲಾಧಿಕಾರಿಗಳೇ ಹೊಣೆ. ಇವತ್ತು ನಾನು ಪ್ರಮುಖವಾದ ಸಭೆ ಕರೆದಿದ್ದು ಸಭೆಯಲ್ಲಿ ಯಾವ ಪ್ರಮುಖ ಮಾಹಿತಿ ನೀಡುತ್ತಾರೋ ಅನೇಕ ಮಾಹಿತಿ ನಮಗೂ ಸಹ ಈಗಾಗಲೇ ಬಂದಿವೆ…
ಬೆಂಗಳೂರು : ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಟ ದರ್ಶನ್ ಆಪ್ತ ಧನ್ವೀರ್ ವಿಡಿಯೋ ರಿಲೀಸ್ ಮಾಡಿದ ಅನುಮಾನ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ಕೊಲೆ ಆರೋಪಿ ದರ್ಶನ ಧನ್ವೀರನನ್ನು ಕರೆಸಿ ಸಿಸಿಬಿ ಪೊಲೀಸರು ವಿಚಾರಣೆ ನಡೆಸಿದ್ದಾರೆ. ನಿನ್ನೆ ನಟ ಧನ್ವೀರ್ ನನ್ನು ಸಿಸಿಬಿ ಪೊಲೀಸರು ಕರೆಸಿ ವಿಚಾರಣೆ ನಡೆಸಿದ್ದಾರೆ. ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿ ಕೈದಿಗಳು ಮೊಬೈಲ್ ನಲ್ಲಿ ಮಾತನಾಡುತ್ತಿರುವುದು ಮದ್ಯ ಸೇವಿಸಿ ಡ್ಯಾನ್ಸ್ ಮಾಡುತ್ತಿರುವ ವಿಡಿಯೋ ವೈರಲ್ ಆಗಿತ್ತು. ಈ ಒಂದು ವಿಡಿಯೋ ಕುರಿತಂತೆ ಕೊಲೆ ಆರೋಪಿ ದರ್ಶನ್ ಆಪ್ತ ಧನ್ವಿರ್ ನನ್ನ ಕರೆಸಿ ವಿಚಾರಣೆ ನಡೆಸಿದ್ದಾರೆ. ಆದರೆ ಆ ರೀತಿ ಯಾವುದೇ ವಿಡಿಯೋ ಧನ್ವೀರ್ ಬಳಿ ಪತ್ತೆ ಆಗಿಲ್ಲ ಎನ್ನುವುದು ಸ್ಪಷ್ಟವಾಗಿದೆ. ಹೀಗಾಗಿ ಸಿಸಿಬಿ ಪೊಲೀಸರು ಧನ್ವೀರನನ್ನು ವಿಚಾರಣೆ ನಡೆಸಿ ಕಳುಹಿಸಿದ್ದಾರೆ.
ಬೆಂಗಳೂರು : ಬೆಂಗಳೂರು ನಗರ ಜಿಲ್ಲೆಯ ಅತ್ತಿಬೆಲೆ ಸಮೀಪದ ಬಳ್ಳೂರು ಗ್ರಾಮದಲ್ಲಿ ಕೆರೆಯಲ್ಲಿ ಮುಳುಗಿ ಇಬ್ಬರು ಬಾಲಕರು ಸಾವನ್ನಪ್ಪಿದ್ದಾರೆ. ಅನಿಕೇತ್ ಕುಮಾರ್ (12) ಹಾಗೂ ರೆಹಮದ್ ಬಾಬಾ (11) ಮೃತ ಬಾಲಕರು ಎಂದು ತಿಳಿದು ಬಂದಿದೆ. ಕೂಲಿ ಕೆಲಸ ಮಾಡಿಕೊಂಡಿದ್ದ ಮರದ ಬಾಲಕರ ಪೋಷಕರು ನಿನ್ನೆ ಸಂಜೆ ಮನೆ ಬಳಿ ಆಟವಾಡುತ್ತಾ ಮಕ್ಕಳು ಕೆರೆಯ ಬಳಿ ತೆರಳಿದ್ದಾರೆ, ಈ ವೇಳೆ ಕೆರೆಗೆ ಇಳಿದಿದ್ದ ಮಕ್ಕಳು ನೀರಿನಲ್ಲಿ ಮುಳುಗಿ ಸಾವನಪ್ಪಿದ್ದಾರೆ,. ಮೃತದೇಹಗಳನ್ನು ಹೊರ ತೆಗೆದು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಘಟನೆ ಸಂಭಂದ ಅತ್ತಿಬೆಲೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉತ್ತರಕನ್ನಡ : ಗೇಟ್ ನಿಂದ ಸಿಐಎಸ್ಎಫ್ ಹೆಡ್ ಕಾನ್ಸ್ಟೇಬಲ್ ಜಗದಾಳೆ (52) ಸಾವನ್ನಪ್ಪಿರುವ ಘಟನೆ ಕೈಗಾ ಅಣು ವಿದ್ಯುತ್ ಸ್ಥಾವರ ಘಟಕದಲ್ಲಿ ನಡೆದಿದೆ ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಕೈಗಾ ಅಣು ವಿದ್ಯುತ್ ಸ್ಥಾವರದಲ್ಲಿ ನಿನ್ನೆ ರಾತ್ರಿ ಜಗದಾಳೆ ಕರ್ತವ ನಿರತದಲ್ಲಿ ಇದ್ದಾಗ ಗೇಟ್ ಕೆಳಗೆ ಬಿದ್ದಿದೆ. ಈ ವೇಳೆ ತಲೆಗೆ ಬಲವಾಗಿ ಬಿಟ್ಟು ಬಿದ್ದಿದ್ದರಿಂದ ಜಗದಾಳೆ, ಸ್ಥಳದಲ್ಲೇ ಸಾವನಪ್ಪಿದ್ದಾರೆ ಸಿಐಎಸ್ಎಫ್ ಹೆಡ್ ಕಾನ್ಸ್ಟೇಬಲ್ ಜಗದಾಳೆ, ಕೈಗಾದಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ ಮಲ್ಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.a
ಬೆಂಗಳೂರು : ಸದ್ಯ ರಾಜ್ಯ ರಾಜಕಾರಣದಲ್ಲಿ ನಾಯಕತ್ವ ಬದಲಾವಣೆ ಕುರಿತಂತೆ ಭಾರಿ ಚರ್ಚೆ ನಡೆಯುತ್ತಿದ್ದು, ಇದರ ಬೆನ್ನಲ್ಲೇ ಸಂಸದ ರಾಜಶೇಖರ ಹಿಟ್ನಾಳ ದೆಹಲಿಯಲ್ಲಿ ಔತಣಕೂಟ ಏರ್ಪಡಿಸಿದ್ದು, ಸಿಎಂ ಸಿದ್ದರಾಮಯ್ಯ ಸೇರಿದಂತೆ ಸಚಿವರು, ಶಾಸಕರುಗಳಿಗೆ ಆಹ್ವಾನ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ನವೆಂಬರ್ 15ಕ್ಕೆ ಸಿಎಂ ಸಿದ್ದರಾಮಯ್ಯ ದೆಹಲಿಗೆ ತೆರಳಿದ್ದಾರೆ. ಹೌದು ನವೆಂಬರ್ ಕ್ರಾಂತಿ ಚರ್ಚೆ ಮಧ್ಯ ಸಿಎಂ ಸಿದ್ದರಾಮಯ್ಯ ದೆಹಲಿ ಪ್ರವಾಸ ಕೈಗೊಳ್ಳಲಿದ್ದು ಕಾಂಗ್ರೆಸ್ ಮನೆಯಲ್ಲಿ ದೆಹಲಿ ದಂಡಯಾತ್ರೆ ಜೋರಾಗಿದೆ. ನವೆಂಬರ್ 15ಕ್ಕೆ ಸಿಎಂ ಸಿದ್ದರಾಮಯ್ಯ ದೆಹಲಿಗೆ ತೆರಳಲಿದ್ದಾರೆ ಹೈಕಮಾಂಡ್ ನಾಯಕರನ್ನು ಸಿಎಂ ಸಿದ್ದರಾಮಯ್ಯ ಭೇಟಿ ಆಗಲಿದ್ದಾರೆ. ಸಿಎಂ ಬದಲಾವಣೆ ಮತ್ತು ಸಂಪುಟ ಪುನಾರಚನ ಸೇರಿ ಚರ್ಚಿಸಲಿದ್ದಾರೆ ಎಂದು ತಿಳಿದುಬಂದಿದೆ. ಇದೇ ವೇಳೆ ದೆಹಲಿ ಪ್ರವಾಸದ ವೇಳೆ ಶಕ್ತಿ ಪ್ರದರ್ಶನಕ್ಕೆ ಸಿಎಂ ಸಿದ್ದರಾಮಯ್ಯ ಸಜ್ಜಾಗಿದ್ದಾರೆ. ನವೆಂಬರ್ 16ರಂದು ರಾಜಶೇಖರ್ ಹಿಟ್ನಾಳ ಮನೆಯಲ್ಲಿ ಡಿನ್ನರ್ ಸಭೆ ಇದ್ದು ಆಪ್ತನ ಮನೆಯಲ್ಲಿ ಡಿನ್ನರ್ ಮೀಟಿಂಗ್ ಆಯೋಜನೆ ಮಾಡಲಾಗಿದೆ. ನವೆಂಬರ್ 16ರಂದು ರಾಜಶೇಖರ್ ಮನೆಯಲ್ಲಿ ಡಿನ್ನರ್ ಸಭೆ…
ದಕ್ಷಿಣಭಾರತದ ಖ್ಯಾತ ನಟಿ ಅನುಪಮಾ ಪರಮೇಶ್ವರನ್ಗೆ ಸಾಮಾಜಿಕ ಜಾಲತಾಣದಲ್ಲಿ 20 ವರ್ಷದ ಯುವತಿ ಒಬ್ಬಳು ಕಿರುಕುಳ ನೀಡಿದ್ದಾಳೆ ಈ ವಿಚಾರವಾಗಿ ಸಂಬಂಧಪಟ್ಟಂತೆ ಅನುಪಮಾ ಪರಮೇಶ್ವರಂ ಅವರು ಸೈಬರ್ ಠಾಣೆಗೆ ದೂರು ನೀಡಿದ್ದು ಕಿರುಕುಳ ನೀಡಿದ 20 ವರ್ಷದ ಯುವತಿಯ ವಿರುದ್ಧ ಪ್ರಕರಣ ದಾಖಲಾಗಿದೆ. ಹೌದು ನಟಿಯ ಫೋಟೋವನ್ನು ಆಕ್ಷೇಪಾರ್ಹ ರೀತಿಯಲ್ಲಿ ಎಡಿಟ್ ಮಾಡಿ, ಸುಳ್ಳು ಮಾಹಿತಿ ಹಬ್ಬಿಸಲಾಗಿದೆ. ವಿಪರ್ಯಾಸ ಏನೆಂದರೆ, ಈ ಕೃತ್ಯ ಎಸಗಿರುವುದು ಕೂಡ ಓರ್ವ ಯುವತಿ! ಆ ಯುವತಿಯ ವಯಸ್ಸು ಕೇವಲ 20 ವರ್ಷ. ಈ ಬಗ್ಗೆ ಅನುಪಮಾ ಪರಮೇಶ್ವರ್ ಅವರು ಸೋಶಿಯಲ್ ಮೀಡಿಯಾದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಇತ್ತೀಚಿನ ದಿನಗಳಲ್ಲಿ ಒಂದು ಇನ್ಸ್ಟಾಗ್ರಾಮ್ ಖಾತೆಯಲ್ಲಿ ನನ್ನ ಆಕ್ಷೇಪಾರ್ಹ ಫೋಟೋ ಮತ್ತು ತಪ್ಪು ಮಾಹಿತಿಯನ್ನು ಹರಡುತ್ತಿರುವುದು ತಿಳಿದುಬಂತು. ನನ್ನ ಪರಿಚಯದವರನ್ನು ಮತ್ತು ಕುಟುಂಬದವರನ್ನು ಟ್ಯಾಗ್ ಮಾಡಲಾಗುತ್ತಿತ್ತು. ಈ ರೀತಿ ಟಾರ್ಗೆಟ್ ಮಾಡಿ ಕಿರುಕುಳು ನೀಡಿದ್ದರಿಂದ ನನಗೆ ನಿಜಕ್ಕೂ ತೀವ್ರ ನೋವಾಗಿದೆ’ ಎಂದು ಅನುಪಮಾ ಪರಮೇಶ್ವರನ್ ಅವರು ಹೇಳಿದ್ದಾರೆ. ನನಗೆ ಆಶ್ಚರ್ಯ…
ಕೊಡಗು : ರಾಜ್ಯದಲ್ಲಿ ಸರ್ಕಾರಿ ಶಾಲೆಗಳಿಗೆ 12,000 ಹಾಗೂ ಅನುದಾನಿತ ಶಾಲೆಗಳಿಗೆ 6,000 ಸೇರಿ ಒಟ್ಟು 18 ಸಾವಿರ ಶಿಕ್ಷಕರ ನೇಮಕಾತಿ ಶೀಘ್ರದಲ್ಲೇ ನಡೆಯಲಿದೆ ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದರು. ಕೊಡಗಿನ ಸೋಮವಾರ ಪೇಟೆ ಬಳಿಯ ಬೇಳೂರು ಕುಸುಬೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಾತನಾಡಿದ ಅವರು, ಸರ್ಕಾರಿ ಶಾಲೆಯನ್ನು ಬಲಪಡಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಹಲವು ಕಾರ್ಯಕ್ರಮ ರೂಪಿಸಿದೆ. ಆ ನಿಟ್ಟಿನಲ್ಲಿ ಪೂರ್ವ ಕಿರಿಯ ಪ್ರಾಥಮಿಕ ಆರಂಭಿಸಲಾಗಿದೆ ಎಂದು ಸಚಿವರು ತಿಳಿಸಿದರು. ರಾಜ್ಯದಲ್ಲಿ 46 ಸಾವಿರ ಸರ್ಕಾರಿ ಶಾಲೆಗಳು, 57 ಸಾವಿರ ಅನುದಾನಿತ ಶಾಲೆಗಳು ಕಾರ್ಯ ನಿರ್ವಹಿಸುತ್ತಿವೆ. ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳಲ್ಲಿ ಎಲ್‌ಕೆಜಿ ಯಿಂದ 12ನೇ ತರಗತಿ ವರೆಗೆ ಸುಮಾರು 1.16 ಕೋಟಿ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ರಾಷ್ಟ್ರದ ಬೆಳವಣಿಗೆಗೆ ಶಿಕ್ಷಣದಿಂದ ಮಾತ್ರ ಸಾಧ್ಯ, ಆ ದಿಸೆಯಲ್ಲಿ ಸರ್ಕಾರ ಹಲವು ಸಮಸ್ಯೆಗಳ ನಡುವೆಯೂ ಅಗತ್ಯ ಮೂಲಸೌಕರ್ಯ ಹಾಗೂ ಗುಣಮಟ್ಟದ…














