Subscribe to Updates
Get the latest creative news from FooBar about art, design and business.
Author: ಸುರೇಶ್
"ಕನ್ನಡ ನ್ಯೂಸ್ ನೌ ಜಾಲತಾಣದ ಮುಖ್ಯ ಸಂಪಾದಕರಾದ ಸುರೇಶ್ ಅವರು ಕಳೆದ 4 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದಾರೆ. ಸರ್ಕಾರದ ಯೋಜನೆಗಳು, ಶಿಕ್ಷಣ ಮತ್ತು ಪ್ರಚಲಿತ ವಿದ್ಯಮಾನಗಳನ್ನು ಸಾಮಾನ್ಯ ಜನರಿಗೂ ಅರ್ಥವಾಗುವಂತೆ ವಿವರಿಸುವುದು ಇವರ ವಿಶೇಷತೆ. ಈ ಮೊದಲು ವಿವಿಧ ವೆಬ್‌ಸೈಟ್‌ಗಳಲ್ಲಿ ನಾಗರಿಕ ಸಮಸ್ಯೆಗಳ ಬಗ್ಗೆ ವರದಿಗಾರರಾಗಿ ಕೆಲಸ ಮಾಡಿರುವ ಇವರು, ಸಮಯೋಚಿತ ಹಾಗೂ ವಿಶ್ವಾಸಾರ್ಹ ಮಾಹಿತಿ ನೀಡುವ ಮೂಲಕ ಓದುಗರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಡಿಜಿಟಲ್ ಸಾಕ್ಷರತೆ ಇವರ ನೆಚ್ಚಿನ ವಿಷಯಗಳಲ್ಲೊಂದು
ಬೆಂಗಳೂರು : ಬೆಂಗಳೂರಲ್ಲಿ ಸ್ಥಳ ಮಹಜರಿಗೆ ಕರೆದೊಯ್ದಿದ್ದ ವೇಳೆ ಪೊಲೀಸರ ಮೇಲೆ ದಾಳಿ ನಡೆಸಿ ಎಸ್ಕೇಪ್ ಆಗಲು ಯತ್ನಿಸಿದ ಆರೋಪಿ ಮೇಲೆ ಫೈರಿಂಗ್ ನಡೆಸಿರುವ ಘಟನೆ ಬೆಂಗಳೂರಲ್ಲಿ ನಡೆದಿದೆ. ಬೆಂಗಳೂರು ನಗರ ಜಿಲ್ಲೆ ಆನೇಕಲ್ ತಾಲೂಕಿನ ಬೊಮ್ಮಸಂದ್ರ ಸ್ಮಶಾನದ ಬಳಿ ನಿನ್ನೆ (ನ.8) ರಾತ್ರಿ 10.30ರ ಸುಮಾರಿಗೆ ಘಟನೆ ನಡೆದಿದೆ. ಕಿಡ್ನಾಪ್ & ಇಬ್ಬರ ಕೊಲೆ ಪ್ರಕರಣದ ಆರೋಪಿಯಾಗಿರುವ ಆಂಧ್ರ ಮೂಲದ ರವಿ ಪ್ರಸಾದ್ ರೆಡ್ಡಿ ಮೇಲೆ ಪೊಲೀಸರು ಫೈರಿಂಗ್ ಮಾಡಿದ್ದಾರೆ. ಉದ್ಯಮಿ ಬಾಲಪ್ಪ ರೆಡ್ಡಿ, ಮಾದೇಶ್ ಎಂಬುವರ ಕೊಲೆ ಪ್ರಕರಣದ ಸಂಬಂಧ ಆರೋಪಿ ರವಿ ಪ್ರಸಾದ್ ರೆಡ್ಡಿಯನ್ನ ಹೆಬ್ಬಗೋಡಿ ಪೊಲೀಸರು ಬಂಧಿಸಿದ್ದರು. ಕೇಸ್ ಸಂಬಂಧ ಸ್ಥಳ ಮಹಜರಿಗೆ ಪೊಲೀಸರು ಕರೆದೊಯ್ದಿದ್ದ ವೇಳೆ ಆರೋಪಿ, ಹೆಡ್ ಕಾನ್ಸ್ಸ್ಟೇಬಲ್ ಅಶೋಕ್ ಮೇಲೆ ಏಕಾಏಕಿ ದಾಳಿ ನಡೆಸಿದ್ದಾನೆ. ಈ ವೇಳೆ ಗಾಳಿಯಲ್ಲಿ ಎರಡು ಸುತ್ತು ಗುಂಡು ಹಾರಿಸಿ ವಾರ್ನಿಂಗ್ ನೀಡಿದರೂ ದಾಳಿ ನಿಲ್ಲಿಸದಿದ್ದಾಗ ಆರೋಪಿ ಮೇಲೆ ಹೆಬ್ಬಗೋಡಿ ಇನ್ಸ್ಪೆಕ್ಟರ್ ಸೋಮಶೇಖರ್ ಫೈರಿಂಗ್ ಮಾಡಿದ್ದಾರೆ. ರವಿ…
ಬೆಂಗಳೂರು : ಪರಪ್ಪನ ಅಗ್ರಹಾರ ಜಲಿನ ಕರ್ಮಕಾಂಡ ಮತ್ತೊಮ್ಮೆ ಬಯಲಾಗಿದ್ದು ಜೈಲಿನಲ್ಲಿ ಉಮೇಶ್ ರೆಡ್ಡಿ ಹಾಗೂ ಬೃಹತ್ಪಾದಕರಿ ಸೇರಿದಂತೆ ಹಲವು ಕೈದಿಗಳ ಕೈಯಲ್ಲಿ ಮೊಬೈಲ್ ಕಂಡುಬಂದಿದ್ದು ಈ ಒಂದು ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. ಈ ವಿಚಾರವಾಗಿ ಗೃಹ ಸಚಿವ ಜಿ ಪರಮೇಶ್ವರ್ ಅವರು ಪ್ರತಿಕ್ರಿಯೆ ನೀಡಿ ಇದಕ್ಕೆ ಯಾರು ಹೊಣೆಗಾರರಾಗಿದ್ದಾರೆ. ಅಂಥವರ ವಿರುದ್ಧ ಕಠಿಣವಾದ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ತಿಳಿಸಿದರು. ಬೆಂಗಳೂರಲ್ಲಿ ಮಾತನಾಡಿದ ಅವರು, ಇವಂದು ಘಟನೆಗಳು ಮಂಗಳೂರು ಬೆಳಗಾವ್ ಸೇರಿದಂತೆ ಬಹಳ ಕಡೆ ಆದ ಸಂದರ್ಭದಲ್ಲಿ ಅಧಿಕಾರಿಗಳನ್ನು ಸಸ್ಪೆಂಡ್ ಮಾಡಿ ಅವರ ವಿರುದ್ಧ ಕ್ರಮ ತೆಗೆದುಕೊಂಡಿದ್ದೇವೆ ಆದರೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ಪದೇಪದೇ ಆಗಿದ್ದು ಕೇಳಿಬಂದಿದ್ದು ಇದೇ ಕೂಡ ಇದೇ ರೀತಿಯಾದಾಗ ಕೆಲವರನ್ನು ಸಸ್ಪೆಂಡ್ ಮಾಡಲಾಗಿತ್ತು. ಎಡಿಜಿಪಿ ಬಿ ದಯಾನಂದ ಜೊತೆಗೆ ನಾನು ಮಾತನಾಡಿದ್ದೇನೆ ಯಾರು ಹೊಣೆಗಾರರಾಗಿದ್ದಾರೆ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತೇವೆ. ಸೂಪರಿಟೆಂಡೆಂಟ್ ಮತ್ತು ಕೆಳ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ. ಕೂಡಲೇ ವರದಿ…
ರಾಯಚೂರು : ರಾಯಚೂರಲ್ಲಿ ಘೋರ ಘಟನೆ ನಡೆದಿದ್ದು, ಸಾರಿಗೆ ಬಸ್ ಹರಿದು ಭಿಕ್ಷಾಟನೆ ಮಾಡ್ತಿದ್ದ ಬಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ವರದಿಯಾಗಿದೆ. ರಾಯಚೂರು ಜಿಲ್ಲೆಯ ಲಿಂಗಸೂಗೂರು ಪಟ್ಟಣದ ಬಸ್ ನಿಲ್ದಾಣದಲ್ಲಿ ಘಟನೆ ನಡೆದಿದೆ. ಬಾಲಕ ಸೀತಾರಾಮ್ ಹನ್ನೆರಡು ಸವಣಪಿದು ಮತ್ತು ಬಾಲಕನಿಗೆ ಎರಡು ಕೈ ಕಟ್ಟಾಗಿದೆ. ಗಯ್ಯಾಳು ಎಂಟು ವರ್ಷದ ಧನಂಜಯ ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದು ಚಿಗಸೆ ಪಡೆಯುತ್ತಿದ್ದಾನೆ ಘಟನೆ ಕುರಿದಂತೆ ಲಿಂಗಸುಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು : ಕಬ್ಬಿಗೆ ಸೂಕ್ತ ಬೆಲೆ ನಿಗದಿ ಮಾಡಲು ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗ ಎಸ್ ಎಪಿ ಕಾನೂನು ಮಾಡಲಾಗಿದ್ದು, ಆ ಕಾನೂನಿನಲ್ಲಿ ರಾಜ್ಯ ಸರ್ಕಾರಕ್ಕೆ ಸಂಪೂರ್ಣವಾದ ಅಧಿಕಾರ ಇದೆ. ಇದನ್ನು ರಾಜ್ಯ ಸರ್ಕಾರ ಇದುವರೆಗೂ ಬಳಕೆ ಮಾಡಿಲ್ಲ. ಸಿಎಂ ಇದನ್ನು ಬಳಕೆ ಮಾಡಿ ರೈತರಿಗೆ ನ್ಯಾಯ ಕೊಟ್ಟರೆ ಕಬ್ಬಿನ ಸಮಸ್ಯೆಗೆ ನ್ಯಾಯ ಸಮ್ಮತ ಪರಿಹಾರ ಕೊಡಲು ಸಾಧ್ಯ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಈ ಕುರಿತು ಎಕ್ಸ್ ಮಾಡಿರುವ ಅವರು, ಕಬ್ಬಿಗೆ ಸೂಕ್ತ ಬೆಲೆ ನಿಗದಿ ಮಾಡಲು ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗ ಎಸ್ ಎಪಿ ಕಾನೂನು ಮಾಡಲಾಗಿದ್ದು, ಆ ಕಾನೂನಿನಲ್ಲಿ ರಾಜ್ಯ ಸರ್ಕಾರಕ್ಕೆ ಸಂಪೂರ್ಣವಾದ ಅಧಿಕಾರ ಇದೆ. ಹಾಗೂ ಯಾವ ಸೂತ್ರದಡಿ ದರ ನಿಗದಿ ಮಾಡಬೇಕು ಎನ್ನುವುದು ಇದೆ. ಕಬ್ಬು ಬೆಳೆಯಲು, ಸಕ್ಕರೆ ತಯಾರಿಕೆ, ಉಪ ಪದಾರ್ಥ ತಯಾರಿಕೆಗೆ ಬೀಳುವ ಹೊರೆ ಎಷ್ಟು ಹಾಗೂ ಮಾರುಕಟ್ಟೆಯ ದರ ಎಷ್ಟು ಒಟ್ಟು ಲಾಭದಲ್ಲಿ ರೈತರ ಪಾಲು ಕಾರ್ಖಾನೆ…
1)ಸಾಲ ಲಕ್ಷ ಕೋಟಿ ಇರಲಿ ಎಲೆ ಲವಂಗ ಏಲಕ್ಕಿಯ ಪ್ರಯೋಗ ಮಾಡಿದರೆ ಸಾಲತಿರುವುದು 2)ಪಕ್ಕಾ ಸಾಲ ಅಂತ ಇದ್ರೆ ಅದು ನಮ್ಮನ್ನು ನಿದ್ರೆ ಮಾಡಲು ಬಿಡುವುದಿಲ್ಲ ಯಾವಗ ಸಾಲ ತೀರುತ್ತದೆ ಎಂಬ ಚಿಂತೆ ನಮ್ಮನ್ನು ಕಾಡುತ್ತದೆ ಸಾಲ ಇಲ್ಲದ ಜೀವನ ಅತಿ ಸುಂದರ ಜೀವನ ಎನ್ನಬಹುದು ಸಾಲ ತೆಗೆದುಕೊಳ್ಳುವುದು ತುಂಬಾ ಸುಲಭ ಆದರೆ ಅದನ್ನು ತೀರಿಸುವುದು ತುಂಬಾ ಕಷ್ಟಕರವಾದ ಕೆಲಸ ಎಂದು ಎಲ್ಲರಿಗೂ ಗೊತ್ತು ಕೆಲವೊಮ್ಮೆ ಪರಿಸ್ಥಿತಿಗಳು ಹೇಗೆ ಬರುತ್ತಿದೆ ಎಂದರೆ ತಗೊಂಡ ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಜ್ಞಾನೇಶ್ವರ್ ರಾವ್ ಜ್ಯೋತಿಷ್ಯರು ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9686268564 ನಿಮ್ಮ ಸಮಸ್ಯೆಗಳಾದ ಆರೋಗ್ಯ…
ಬೆಂಗಳೂರು : ಮತಗಳ್ಳತನದ ವಿರುದ್ಧ ಕಾಂಗ್ರೆಸ್ ನಿಂದ ಸಹಿ ಸಂಗ್ರಹ ಅಭಿಯಾನ ಆರಂಭಿಸಿದ್ದು, ಸಿಎಂ ಸಿದ್ದರಾಮಯ್ಯ ನಾನು ಸಹ ಅಭಿಯಾನದಲ್ಲಿ ಸಹಿ ಹಾಕಿದ್ದೇವೆ 1 ಕೋಟಿ 12 ಲಕ್ಷದ 41,000 ಸಹಿ ಸಂಗ್ರಹವಾಗಿದ್ದು ನವೆಂಬರ್ ಹತ್ತಿರ ಒಳಗೆ ಸಹಿ ಸಂಗ್ರಹಿಸಿ ಹೈಕಮಾಂಡ್ಗೆ ಕೊಡುತ್ತೇವೆ ಮೊಬೈಲ್ ನಂಬರ್ ಸಮೇತ ಸಹಿ ಸಂಗ್ರಹ ಆಗಿದೆ ನವೆಂಬರ್ 25 ರಂದು ದೆಹಲಿಯ ರಾಮಲೀಲಾ ಮೈದಾನದಲ್ಲಿ ಬೃಹತ್ ಸಭೆ ಹಮ್ಮಿಕೊಂಡಿದ್ದು ಮತಗೊಳ್ಳತನ ವಿರುದ್ಧ ಕಾಂಗ್ರೆಸ್ ನಿಂದ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ ಎಂದು ಕೆಪಿಸಿಸಿ ಕಚೇರಿಯಲ್ಲಿ ಡಿಕೆ ಶಿವಕುಮಾರ್ ತಿಳಿಸಿದರು. ಕಲ್ಬುರ್ಗಿ ಜಿಲ್ಲೆಯ ಆಳಂದ ಕ್ಷೇತ್ರದಲ್ಲೂ ಮತಗಳ್ಳ ತನ ನಡೆದಿದೆ. ಆಳಂದ್ ನಲ್ಲಿ ಮಹಿಳೆಯೊಬ್ಬರ ಸಹೋದರನ ಮತ ಡಿಲೀಟ್ ಆಗಿದೆ. ಈ ಸಂಬಂಧ ದೂರು ಕೊಡುತ್ತಾರೆ ತನಿಖೆಯು ಸಹ ಆರಂಭವಾಗುತ್ತದೆ. ಅಧಿಕಾರಿಗಳು ಕೂಡ ಸಸ್ಪೆಂಡ್ ಆದರು. ಮತಪಟ್ಟಿಯಿಂದ 6000 ಮತ ತೆಗೆಯುವ ಪ್ರಯತ್ನ ಮಾಡುತ್ತಾರೆ. ಮತಗಳ್ಳತನ ಸಂಬಂಧ ಈಗಾಗಲೇ ಎಸ್ಐಟಿ ತನಿಖೆ ನಡೆಸುತ್ತಿದೆ. ಹೊರ ರಾಜ್ಯದವರಿಂದ ಮತ ಡಿಲೀಟ್…
ಬೆಂಗಳೂರು : ಮತಗಳ್ಳತನದ ವಿರುದ್ಧ ಕಾಂಗ್ರೆಸ್ ನಿಂದ ಸಹಿ ಸಂಗ್ರಹ ಅಭಿಯಾನ ಆರಂಭಿಸಲಾಗಿದೆ ಚುನಾವಣಾ ಆಯೋಗವು ನಿಷ್ಪಕ್ಷಪಾತವಾಗಿ ಕಾರ್ಯನಿರ್ವಹಿಸಬೇಕು ಎಂದು ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಸಿಎಂ ಸಿದ್ದರಾಮಯ್ಯ ತಿಳಿಸಿದರು. ಮತಗಳ್ಳತನ ಕುರಿತಂತೆ ಸಹಿ ಸಂಗ್ರಹ ಅಭಿಯಾನದ ವಿಚಾರವಾಗಿ ಮಾತನಾಡಿದ ಅವರು, ಚುನಾವಣಾ ಆಯೋಗವು ನಿಷ್ಪಕ್ಷಪಾತವಾಗಿ ಕಾರ್ಯನಿರ್ವಹಿಸಬೇಕು ಸಂವಿಧಾನದಲ್ಲಿ ಆಯೋಗವನ್ನು ಸ್ವತಂತ್ರ ಸಂಸ್ಥೆಯಾಗಿ ಮಾಡಲಾಗಿದೆ ಚುನಾವಣಾ ಆಯೋಗವು ಯಾರ ಪ್ರಭಾವಕ್ಕೂ ಒಳಗಾಗಬಾರದು. ಬಿಜೆಪಿ ಸೋಲಿನ ಸರದಾರ ಅಷ್ಟೇ ಅಲ್ಲ ಸುಳ್ಳೇ ಅವರ ಮನೆದೇವರ ಆಗಿದೆ ಎಂದು ವಾಗ್ದಾಳಿ ನಡೆಸಿದರು. ಮತಗಳ್ಳತನ ಮಾಡುವಲ್ಲೂ ನಿಸ್ಮರು ಅಂತ ಬಿಜೆಪಿಯವರು ಸಾಬೀತು ಮಾಡಿದ್ದಾರೆ ಮತಗಳ್ಳತನ ಮಾಡಿ ಬಿಜೆಪಿ ಅಧಿಕಾರಕ್ಕೆ ಬರುತ್ತಿದೆ ಲೋಕಸಭೆ ವಿಧಾನಸಭೆ ಚುನಾವಣೆಯಲ್ಲೂ ಮತಗಳತನ ಮಾಡಿದ್ದಾರೆ ದೇಶದ ಹಲವು ರಾಜ್ಯಗಳಲ್ಲಿ ಮತಗಳ್ಳತನ ಮಾಡಿ ಅಧಿಕಾರಕ್ಕೆ ಬಂದಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಗಂಭೀರವಾಗಿ ಆರೋಪಿಸಿದರು.
ಚಿಕ್ಕಮಗಳೂರು : ಚಿಕ್ಕಮಗಳೂರಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಪ್ರವಾಸಕ್ಕೆ ಬಂದಿದ್ದ ವಿದ್ಯಾರ್ಥಿಗಳಿದ್ದ ಖಾಸಗಿ ಬಸ್ ಪಲ್ಟಿಯಾಗಿದೆ. ಶೃಂಗೇರಿ ತಾಲೂಕಿನ ಕಾವಡಿಯಲ್ಲಿ ಈ ಒಂದು ಅಪಘಾತ ಸಂಭವಿಸಿದೆ. ಅಪಘಾತದಲ್ಲಿ 11 ವಿದ್ಯಾರ್ಥಿಗಳಿಗೆ ಗಂಭೀರವಾದ ಗಾಯಗಳಾಗಿದ್ದು, ಐವರು ವಿದ್ಯಾರ್ಥಿಗಳ ಸ್ಥಿತಿ ಚಿಂತಾಜನಕವಾಗಿದೆ. ಗಾಯಾಳು ವಿದ್ಯಾರ್ಥಿಗಳನ್ನು ತಕ್ಷಣ ಮಣಿಪಾಲ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಶೃಂಗೇರಿ ಪ್ರವಾಸಕ್ಕೆ ವಿದ್ಯಾರ್ಥಿಗಳ ತಂಡ ಬಂದಿತ್ತು. ಚಿತ್ರದುರ್ಗದ ವಾಸವಿ ಕಾಲೇಜಿನ ವಿದ್ಯಾರ್ಥಿಗಳು ಪ್ರವಾಸಕ್ಕೆ ಬಂದಾಗ ಈ ಅಪಘಾತ ಸಂಭವಿಸಿದೆ.ಬಸ್ ನಲ್ಲಿ ಸುಮಾರು 25ಕ್ಕೂ ಹೆಚ್ಚು ವಿದ್ಯಾರ್ಥಿಗಳು ಇದ್ದರು ಎಂದು ತಿಳಿದು ಬಂದಿದೆ.
ತಮಿಳುನಾಡು : ತಮಿಳುನಾಡಿನಲ್ಲಿ ಹೃದಯವಿದ್ರಾವಕ ಘಟನೆ ಒಂದು ನಡೆದಿದ್ದು, ಸಲಿಂಗ ಕಾಮಕ್ಕೆ 5 ತಿಂಗಳ ಮಗುವನ್ನು ಹೆತ್ತ ತಾಯಿಯೇ ಕೊಲೆ ಮಾಡಿರುವ ಘಟನೆ ವರದಿಯಾಗಿದೆ. ತಮಿಳುನಾಡಿನ ಚಿನ್ನ ಹಟ್ಟಿಯಲ್ಲಿ ಈ ಒಂದು ಹೃದಯವಿದ್ರಾವಕ ಘಟನೆ ನಡೆದಿದೆ. ಭಾರತಿ ಮತ್ತು ಸುಮಿತ್ರ ಸಲಿಂಗ ಕಾಮಕ್ಕೆ ಐದು ತಿಂಗಳ ಮಗು ಬಲಿಯಾಗಿದೆ. 26 ವರ್ಷದ ಭಾರತಿಗೆ ಮದುವೆಯಾಗಿ ಎರಡು ಮಕ್ಕಳಿದ್ದಾವೆ. ಆದರೂ 22 ವರ್ಷದ ಸುಮಿತ್ರ ಜೊತೆಗೆ ಭಾರತಿ ಸಲಿಂಗ ಕಾಮ ಹೊಂದಿದ್ದಳು. ಕಳೆದ ಐದು ತಿಂಗಳ ಹಿಂದೆ ಭಾರತೀ ಗಂಡು ಮಗುವಿಗೆ ಜನ್ಮ ನೀಡಿದಳು. ನಮ್ಮ ಸರಸಕ್ಕೆ ಮಗು ಅಡ್ಡಿಯಾಗುತ್ತಿದೆ ಅಂತ ಸುಮಿತ್ರ ಹೇಳಿದ್ದಳು ಮಗುವನ್ನು ಕೊಲೆ ಮಾಡುವಂತೆ ಭಾರತಿಗೆ ಸುಮಿತ್ರ ಹೇಳಿದ್ದಾಳೆ. ಹಾಗಾಗಿ ಮಗುವನ್ನು ಉಸಿರುಘಟ್ಟಿಸಿ ತಾಯಿ ಭಾರತಿ ಕೊಲೆ ಮಾಡಿದ್ದಾಳೆ. ಹಾಲು ಕುಡಿಯುವಾಗ ನೆತ್ತಿಗೆ ಏರಿ ಮಗು ಸಾವನಪ್ಪಿದೆ ಎಂದು ಕತೆ ಕಟ್ಟಿದ್ದಾಳೆ. ಸುಮಿತ್ರ ಹೇಳಿದ ಮಾತನ್ನು ಕೇಳಿ ತಾವು ಹೆತ್ತ ಮಗುವನ್ನು ಕೊಲೆ ಮಾಡಿದ್ದಾಳೆ. ಕಳೆದ ನಾಲ್ಕು ವರ್ಷಗಳಿಂದ…
ಯಾದಗಿರಿ : ಯಾದಗಿರಿ ಡಿಸಿ ಹೆಸರಿನಲ್ಲಿ ನಕಲಿ ವಾಟ್ಸಪ್ ಖಾತೆ ಸೃಷ್ಟಿಸಿ ಮಹಿಳಾ ಅಧಿಕಾರಿಗೆ ವಂಚನೆ ಎಸಗಿರುವ ಘಟನೆ ಬೆಳಕಿಗೆ ಬಂದಿದೆ. ಯಾದಗಿರಿ ಜಿಲ್ಲಾಧಿಕಾರಿ ಹರ್ಷಲ್ ಬೋಯರ್ ಹೆಸರಿನಲ್ಲಿ ವಂಚನೆ ಎಸಗಿದ್ದು, ವಾಟ್ಸಾಪ್ ಪ್ರೊಫೈಲ್ ಗೆ ಡಿಸಿ ಹೆಸರು ಹಾಗೂ ಫೋಟೋ ಬಳಸಿ ವಂಚಕರು ವಂಚನೆಯಾಗಿದ್ದಾರೆ. ಡಿಸಿ ಹೆಸರು ಬಳಸಿ ಮಹಿಳಾಧಿಕಾರಿಗೆ ಅಪರಿಚಿತ ವ್ಯಕ್ತಿ ಮೆಸೇಜ್ ಮಾಡಿದ್ದಾನೆ. 50 ಸಾವಿರ ರೂಪಾಯಿ ಕಳುಹಿಸುವಂತೆ ಮಹಿಳಾ ಅಧಿಕಾರಿಗೆ ವಂಚನೆ ಎಸಗಿದ್ದಾನೆ. ಆರೋಗ್ಯ ಇಲಾಖೆ ಮಹಿಳಾಧಿಕಾರಿ ಜ್ಯೋತಿ ಕಟ್ಟಿಮನಿಗೆ ವಂಚಕ ಮೆಸೇಜ್ ಮಾಡಿದ್ದಾನೆ. ನನ್ನ ನಂಬರ್ ಇಂಟರ್ನೆಟ್ ಬ್ಯಾಂಕಿಂಗ್ ನಲ್ಲಿ ಸಮಸ್ಯೆ ಆಗಿದೆ ತಕ್ಷಣ ರೂ. 50,000 ಹಾಕಿ ಎಂದು ಜ್ಯೋತಿಗೆ ಮೆಸೇಜ್ ಮಾಡಿದ್ದಾನೆ.ಡಿಸಿ ಹಣ ಕೇಳುತ್ತಿದ್ದಾರೆ ಎಂದು ಅಧಿಕಾರಿಯಾಗಿ ಜ್ಯೋತಿ ಗೂಗಲ್ ಪೇ ಮಾಡಿದ್ದಾರೆ. ಬಳಿಕ 20000 ಹಾಕುವಂತೆ ಮತ್ತೆ ಅಪರಿಚಿತ ವ್ಯಕ್ತಿ ಮೆಸೇಜ್ ಮಾಡಿದ್ದಾನೆ. ಅನುಮಾನ ಗೊಂಡ ಅಧಿಕಾರಿ ಜ್ಯೋತಿ ಡಿಸಿ ಹರ್ಷಲ್ ಬಳಿ ಕೇಳಿದ್ದಾರೆ ಯಾವುದೇ ಮೆಸೇಜ್ ಕಳುಹಿಸಿಲ್ಲ ಎಂದು…














