Author: kannadanewsnow05

ಬೆಂಗಳೂರು : ಮಹಿಳೆ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ಹಾಸನ ಜಿಲ್ಲೆಯ ಹೊಳೆನರಸೀಪುರ ಜೆಡಿಎಸ್ ಶಾಸಕ ಎಚ್ ಡಿ ರೇವಣ್ಣ ಅವರು ಬಿಡುಗಡೆಯಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಅವರು ಸಂಕಷ್ಟದಲ್ಲಿದ್ದಾಗ ಯಾವುದೇ ರೀತಿಯಾದ ಸಂಭ್ರಮಾಚರಣೆ ಹಾಗೂ ಪಟಾಕಿ ಸಿಡಿಸುವುದು ಬೇಡ ಎಂದು ಕಾರ್ಯಕರ್ತರಲ್ಲಿ ಮನವಿ ಮಾಡಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಇಂದು ನಾನು ನ್ಯಾಯಾಲಯಕ್ಕೆ ತಲೆಬಾಗಿದ್ದೇನೆ. ಯಾರು ಕೂಡ ಸಂಭ್ರಮಾಚರಣೆ ಮಾಡಬೇಡಿ. ರಾಜ್ಯದ ಜನತೆಗೆ ನಾನು ಹೇಳುವುದಿಷ್ಟೇ ಯಾವುದೇ ತರಹ ಸಂಭ್ರಮಾಚರಣೆ ಮಾಡುವುದಕ್ಕೆ ಹೋಗಬೇಡಿ. ಇವತ್ತು ನಾನು ನ್ಯಾಯಾಲಯಕ್ಕೆ ತಲೆಬಾಗಿದ್ದೇನೆ ನಾನು ಏನೇ ತಪ್ಪು ಮಾಡಿಲ್ಲ ಎಲ್ಲವನ್ನು ದೇವರಿಗೆ ಬಿಟ್ಟಿದ್ದೇನೆ ಎಂದು ತಿಳಿಸಿದರು. ನ್ಯಾಯಾಲಯ ಏನು ಆದೇಶ ಕೊಟ್ಟಿದೆಯೋ ಅದಕ್ಕೆ ತಲೆಬಾಗಿದ್ದೇನೆ. ಈಗಾಗಲೇ ಟ್ವೀಟ್ ನಲ್ಲಿ ಹೇಳಿದಂತೆ ನಮ್ಮ ಜಿಲ್ಲೆಯ ಜನ ಯಾವುದೇ ಕಾರಣಕ್ಕೂ ಸಂಭ್ರಮಾಚರಣೆ ಮಾಡಬೇಡಿ ಎಂದು ತಿಳಿಸಿದ್ದೇನೆ.ಎಲ್ಲರು ಅದನ್ನು ದಯವಿಟ್ಟು ಪಾಲಿಸಬೇಕು. ಮೆರವಣಿಗೆ ಪಟಾಕಿ ಸಿಡಿಸುವುದು ಮಾಡಬೇಡಿ ಸಂಕಷ್ಟದಲ್ಲಿದ್ದಾಗ ಇದೆಲ್ಲವನ್ನು ಮಾಡಬಾರದು ಅಂತ ನಾನು…

Read More

ಹುಬ್ಬಳ್ಳಿ : ಇತ್ತೀಚಿಗೆ ಇಡೀ ರಾಜ್ಯವೇ ಬೆಚ್ಚಿ ಬೀಳಿಸುವಂತೆ ಹುಬ್ಬಳ್ಳಿಯ ಬಿವಿಬಿ ಕಾಲೇಜಿನಲ್ಲಿ ವಿದ್ಯಾರ್ಥಿ ನೇಹಾ ಹಿರೇಮಠ ಕೊಲೆ ಮಾಸುವ ಮುನ್ನವೇ ಇದೀಗ ಮತ್ತೊಂದು ಬೆಚ್ಚಿ ಬೀಳಿಸುವ ಘಟನೆ ನಡೆದಿದ್ದು, ಮಲಗಿದ್ದ ಯುವತಿಗೆ ಚಾಕು ಇರಿದು ಭೀಕರವಾಗಿ ಕೊಲೆ ಮಾಡಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಹೌದು ಹುಬ್ಬಳ್ಳಿಯ ವೀರಾಪುರ ಓಣಿಯಲ್ಲಿ ಈ ಒಂದು ಘಟನೆ ನಡೆದಿದ್ದು, ಚಾಕುವಿನಿಂದ ಇರಿದು ಅಂಜಲಿ ಅಂಬಿಗರ ಎನ್ನುವ ಯುವತಿಯನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ನಸುಕಿನ ವೇಳೆ ಯುವತಿ ಮಲಗಿದ್ದಾಗ ಆಕೆಯ ಪ್ರಿಯಕರ ಚಾಕುವಿನಿಂದ ಇರಿದು ಕೊಲೆ ಮಾಡಿ ಪರಾರಿಯಾಗಿದ್ದಾನೇ. ಪ್ರಿಯಕರನ ಹೆಸರು ವಿಶ್ವ ಅಲಿಯಾಸ್ ಗಿರೀಶ್ ಎಂದು ಹೇಳಲಾಗುತ್ತಿದ್ದು, ಕೊಲೆಯಾದ ಅಂಜಲಿಗೆ ಮೈಸೂರಿಗೆ ಬಾ ಎಂದು ಧಮ್ಕಿ ಹಾಕಿದ್ದಾನೆ. ಒಂದು ವೇಳೆ ಮೈಸೂರಿಗೆ ಬರದೆ ಹೋದರೆ ನೇಹಾ ಕೊಂದಂತೆ ನಿನ್ನನ್ನು ಕೊಳ್ಳುತ್ತೇನೆ ಎಂದು ಬೆದರಿಕೆ ಒಡ್ಡಿದ್ದಾನೆ.ಈ ಒಂದು ವಿಷಯ ಅವಳ ಅಜ್ಜಿ ಗಂಗಮ್ಮ ಪೊಲೀಸರಿಗೆ ದೂರು ನೀಡಲು ಹೋದಾಗ ಇದು ಮೂಢನಂಬಿಕೆ ಎಂದು ಪೊಲೀಸರು ಕೂಡ…

Read More

ಬೆಂಗಳೂರು : ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಪ್ರಜ್ವಲ್ ರೇವಣ್ಣ ಇದೀಗ ವಿದೇಶದಲ್ಲಿದ್ದು ಅಂದುಕೊಂಡಂತೆ ಆಗಿದ್ದರೆ ಇಂದು ಬೆಂಗಳೂರಿಗೆ ಪ್ರಜ್ವಲ್ ಆಗಮಿಸಬೇಕಿತ್ತು, ಆದರೆ ನಾಲ್ಕು ದಿನಗಳ ಹಿಂದೆ ಟಿಕೆಟ್ ಬುಕ್ ಮಾಡಿದ್ದನ್ನು ಮತ್ತೆ ಕ್ಯಾನ್ಸಲ್ ಮಾಡಿದ್ದಾರೆ. ಜರ್ಮನಿಯಿಂದ ಬೆಂಗಳೂರಿಗೆ ಲೂಫ್ತಾನ್ಸ ಏರ್ಲೈನ್ಸ್ ಮೂಲಕ ಆಗಮಿಸಬೇಕಾಗಿತ್ತು. ಆದರೆ ಕಳೆದ ನಾಲ್ಕು ದಿನಗಳ ಹಿಂದೆ ಮೇ 15 ಅಂದರೆ ಇಂದು ಟಿಕೆಟ್ ಬುಕ್ ಮಾಡಿದ್ದನ್ನು ಕ್ಯಾನ್ಸಲ್ ಮಾಡಿದ್ದಾರೆ. ಕಳೆದ 15 ದಿನಗಳ ಹಿಂದೆ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ವಿರುದ್ಧ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಹಾಗೂ ಅಶ್ಲೀಲ ವಿಡಿಯೋ ಪ್ರಕಾರಕ್ಕೆ ಸಂಬಂಧಿಸಿದಂತೆ ದೂರು ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಪ್ರಜ್ವಲ್ ವಿದೇಶದಲ್ಲೆ ಇದ್ದುಕೊಂಡು ಕಾನೂನು ಹೋರಾಟಕ್ಕೆ ಮುಂದಾಗಿದ್ದರು. ಈ ಕುರಿತಂತೆ ಎಸ್ಐಟಿ ಹಲವಾರು ಬಾರಿ ನೋಟಿಸ್ ನೀಡಿದರು ವಿಚಾರಣೆಗೆ ಅವರು ಹಾಜರಾಗಲಿಲ್ಲ. ಈ ಹಿನ್ನೆಲೆಯಲ್ಲಿ ಎಸ್ಐಟಿ ತಂಡ ಸಿಐಡಿ ಮೂಲಕ ಪ್ರಜ್ವಲ್ ರೇವಣ್ಣ ಅವರಿಗೆ ಮೊದಲಿಗೆ ಬ್ಲೂ ಕಾರ್ನರ್ ನೋಟಿಸ್ ನೀಡಿತ್ತು.…

Read More

ಚಿಕ್ಕಮಗಳೂರು : ಲಾರಿ ಹಾಗೂ ಟಿಟಿ ವಾಹನದ ಮಧ್ಯ ಸರಣಿ ಅಪಘಾತ ಸಂಭವಿಸಿ ಓರ್ವ ಸಾವನ್ನಪ್ಪಿದ್ದು ಐವರಿಗೆ ಗಂಭೀರವಾಗಿ ಗಾಯಗಳಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಬಯಲು ಬಸಪ್ಪನ ದಿಬ್ಬ ಬಳಿ ಹೆದ್ದಾರಿಯಲ್ಲಿ ಈ ದುರ್ಘಟನೆ ನಡೆದಿದೆ. ಚಿಕ್ಕಮಂಗಳೂರು ಜಿಲ್ಲೆಯ ಕಡೂರು ತಾಲೂಕಿನ ಬಯಲು ಬಸಪ್ಪನ ದಿಬ್ಬ ಗ್ರಾಮದಲ್ಲಿ ಸರಣಿ ಅಪಘಾತದಲ್ಲಿ ಓರ್ವ ಸಾವನಪ್ಪಿದು ಐವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.ಎರಡು ಲಾರಿ ಒಂದು ಟಿಟಿ ವಾಹನದ ನಡುವೆ ಅಪಘಾತ ಸಂಭವಿಸಿದೆ.ಕೆಟ್ಟು ನಿಂತಿದ್ದ ಲಾರಿಗೆ ಹಿಂಬದಿಯಿಂದ ಟಿಟಿ ವಾಹನ ಗುದ್ದಿದೆ. ಇದೆ ವೇಳೆ ಟಿಟಿ ವಾಹನಕ್ಕೆ ಮತ್ತೊಂದು ಲಾರಿ ಹಿಂದಿನಿಂದ ಬಂದು ಗುದ್ದಿದೆ ಟಿಟಿ ಅಲ್ಲಿದ್ದ ಹಾಸನ ಮೂಲದ ಮಂಜುನಾಥ್ (40) ಎನ್ನುವ ವ್ಯಕ್ತಿ ಸಾವನ್ನಪ್ಪಿದ್ದಾರೆ. ಅಲ್ಲದೆ ಅದೇ ವಾಹನದಲ್ಲಿದ್ದ ಐವರು ಗಂಭೀರವಾಗಿ ಗಾಯಗೊಂಡಿದ್ದು ಅವರನ್ನು ತಕ್ಷಣ ಶಿವಮೊಗ್ಗದ ಮೆಗನ್ ಆಸ್ಪತ್ರೆಗೆ ದಾಖಲಿಸಲಾಗಿದೆ.ಘಟನೆ ಕುರಿತಂತೆ ಕಡೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ

Read More

ವಿಜಯಪುರ : ಉಷ್ಣ ವಿದ್ಯುತ್ ಸ್ಥಾವರದ ಚಿಮಣಿಯ ಮೇಲಿಂದ ಬಿದ್ದು ಉತ್ತರ ಪ್ರದೇಶದ ಮೂಲದ ಕಾರ್ಮಿಕ ಸಾವನ್ನಪ್ಪಿರುವ ಘಟನೆ ವಿಜಯಪುರ ಜಿಲ್ಲೆಯ ಕೂಡಿಗೆ ಉಷ್ಣ ವಿದ್ಯುತ್ ಸ್ಥಾವರದಲ್ಲಿ ಈ ದುರ್ಘಟನೆ ಸಂಭವಿಸಿದೆ. ಉತ್ತರ ಪ್ರದೇಶ ಮೂಲದ ಕಿಶನ್ ಕುಮಾರ್ ಭಾರಧ್ವಜ (32) ಎನ್ನುವ ಕಾರ್ಮಿಕ ಸಾವನ್ನಪ್ಪಿದ್ದಾನೆ. ಉಷ್ಣ ವಿದ್ಯುತ್ ಸ್ಥಾವರದ ಮೇಲಿಂದ ಬಿದ್ದಿರುವ ಪರಿಣಾಮ ಕಾರ್ಮಿಕನ ದೇಹ ಚಿದ್ರ ಚಿದ್ರವಾಗಿದೆ ಎಂದು ಹೇಳಲಾಗುತ್ತಿದೆ. ಕೇಬಲ್ ಅಳವಡಿಸುವಾಗ ಆಯತಪಿ ಬಿದ್ದು ದುರ್ಮರಣ ಉತ್ತರ ಪ್ರದೇಶದ ಗಾಜಿಪುರ ಮೂಲದ ಕಾರ್ಮಿಕ ಸಾವನ್ನಪ್ಪಿದ್ದಾನೆ. ಇದೆ ವೇಳೆ ಕಾರ್ಮಿಕರಿಗೆ ಸೂಕ್ತ ರಕ್ಷಣೆ ಇಲ್ಲ ಎಂದು ಇತರೆ ಕಾರ್ಮಿಕರು ಪ್ರತಿಭಟಿಸುತ್ತಿದ್ದಾರೆ. NTPC ಎದುರು ಕಾರ್ಮಿಕರು ಪ್ರತಿಭಟನೆ ನಡೆಸಿದ್ದಾರೆ.ಮೃತನ ಕುಟುಂಬಕ್ಕೆ ಪರಿಹಾರ ನೀಡುವಂತೆ ಇದೀಗ ಒತ್ತಾಯ ಕೇಳಿ ಬಂದಿದೆ. ಕೂಡಗಿ NTPC ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಯಾದಗಿರಿ : ಬಡವರಿಗಾಗಿ ರಾಜ್ಯ ಸರ್ಕಾರ ಪಡಿತರ ಅಕ್ಕಿ ವಿತರಣೆ ಯೋಜನೆಯ ದಾರಿ ಮಾಡಿದ್ದು ಆದರೆ ಅಲ್ಲಲ್ಲಿ ಕಳ್ಳತನದಿಂದ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಾಗಾಟ ಮಾಡಲಾಗುತ್ತಿದೆ. ಪೊಲೀಸರು ಹಾಗೂ ಅಧಿಕಾರಿಗಳು ಎಷ್ಟೇ ಕಠಿಣ ಕ್ರಮ ತೆಗೆದುಕೊಂಡರು ಅಕ್ರಮವಾಗಿ ಪಡಿತರ ಅಕ್ಕಿಯನ್ನು ಸಾಗಾಟ ಮಾಡಲಾಗುತ್ತಿದೆ. ಇದೀಗ ಯಾದಗಿರಿಯಲ್ಲಿ ಅಕ್ರಮವಾಗಿ ಸಂಗ್ರಹಿಸಿದ್ದ 15 ಕ್ವಿಂಟಲ್ ಪಡಿತರ ಅಕ್ಕಿಯನ್ನು ಆಹಾರ ಅಧಿಕಾರಿಗಳು ಹಾಗೂ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಯಾದಗಿರಿ ಜಿಲ್ಲೆಯ ಶಹಪುರದಲ್ಲಿ 15 ಕ್ವಿಂಟಲ್ ಅಕ್ಕಿಯನ್ನು ಇದೀಗ ಜಪ್ತಿ ಮಾಡಿಕೊಂಡಿದ್ದಾರೆ. ಬೋರ್ಡಿನ ಒಂಟಿ ಸೈಯದ್ ಮನೆಯಲ್ಲಿದ್ದ ಅಕ್ಕಿಯನ್ನು ಇದೀಗ ಅಧಿಕಾರಿಗಳು ಜಪ್ತಿ ಮಾಡಿಕೊಂಡಿದ್ದಾರೆ. ಪೊಲೀಸರು ಹಾಗೂ ಆಹಾರ ಇಲಾಖೆ ಅಧಿಕಾರಿಗಳು ಜಂಟಿ ದಾಳಿ ನಡೆಸಿ ಅಕ್ರಮವಾಗಿ ಸಂಗ್ರಹಿಸಿದ್ದ ಅಕ್ಕಿಯನ್ನು ವಶಪಡಿಸಿಕೊಂಡಿದ್ದು ಈ ಕುರಿತು ಶಹಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Read More

ಕಲಬುರಗಿ : ಶಾರ್ಟ್ ಸರ್ಕ್ಯೂಟ್ ನಿಂದ ಮನೆಯೊಂದು ಹೊತ್ತಿ ಹೊಡೆದಿದ್ದು ಮನೆಯಲ್ಲಿದ್ದ ಇಪ್ಪತ್ತು ಸಾವಿರ ನಗಾದು ಚಿನ್ನಾಭರಣ ಹಾಗೂ ಗೃಹಪಯೋಗಿ ವಸ್ತುಗಳು ಸಂಪೂರ್ಣವಾಗಿ ಸುಟ್ಟು ಕರಕಲಾಗಿರುವ ಘಟನೆ ಕಲಬುರ್ಗಿ ಜಿಲ್ಲೆಯ ಆಳಂದ ತಾಲೂಕಿನಲ್ಲಿ ನಡೆದಿದೆ. ಆಳಂದ್ ತಾಲೂಕಿನಲ್ಲಿ ಶಾರ್ಟ್ ಸರ್ಕ್ಯೂಟ್ ಇಂದ ಮನೆಯೊಂದು ಹೊತ್ತಿ ಉರಿದಿದ್ದು, ಸೈಬಣ್ಣ ಎನ್ನುವವರ ಮನೆ ಇದೀಗ ಸಂಪೂರ್ಣವಾಗಿ ಬೆಂಕಿಗೆ ಆಹುತಿಯಾಗಿದೆ. ಮನೆಯಲ್ಲಿದ್ದ 20,000 ನಗದು ಚಿನ್ನಾಭರಣ ಹಾಗೂ ಗೃಹ ಉಪಯೋಗಿ ವಸ್ತುಗಳು ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿವೆ. ಘಟನೆ ಕುರಿತಂತೆ ಕಲಬುರ್ಗಿ ಉಪನಗರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Read More

ಮೈಸೂರು : ಪಕ್ಕದ ರಾಜ್ಯ ಕೇರಳದಲ್ಲಿ ವೆಸ್ಟ್ ನೈಲ್ ಜ್ವರ ಹೆಚ್ಚಳ ಬಾಗುತಿದ್ದಂತೆ ಇದೀಗ ಮೈಸೂರು ಗಡಿಭಾಗದಲ್ಲಿ ಆರೋಗ್ಯ ಅಧಿಕಾರಿಗಳು ಅಲರ್ಟ್ ಆಗಿದ್ದು ಕೇರಳದಿಂದ ಮೈಸೂರಿಗೆ ಆಗಮಿಸುವ ವಾಹನಗಳ ತಪಾಸನೆ ಹಾಗೂ ಸವಾರರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ. ಕೇರಳದಲ್ಲಿ ವೆಸ್ಟ್ ನೈಲ್ ಜ್ವರ ಹೆಚ್ಚಳವಾಗುತ್ತಿದ್ದಂತೆ ಇತ್ತ ಮೈಸೂರು ಗಡಿ ಭಾಗದಲ್ಲಿ ಅಧಿಕಾರಿಗಳು ಫುಲ್ ಅಲರ್ಟ್ ಆಗಿದ್ದಾರೆ. ಮೈಸೂರು ಜಿಲ್ಲೆಯ HD ಕೋಟೆ ತಾಲೂಕಿನ ಬಾವಲಿ ಚೆಕ್ ಪೋಸ್ಟ್ ನಲ್ಲಿ ತಪಾಸಣೆ ಹಾಗೂ ಜಾಗೃತಿ ಮೂಡಿಸಲಾಗುತ್ತಿದೆ. ಆದ್ದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ಮೈಸೂರು ಜಿಲ್ಲೆಯ ಎಚ್ ಡಿ ಕೋಟೆ ತಾಲೂಕಿನ ಬಾವಲಿ ಚೆಕ್ ಪೋಸ್ಟ್ ನಲ್ಲಿ ಅಧಿಕಾರಿಗಳು ಕೇರಳದಿಂದ ಬರುವ ವಾಹನಗಳನ್ನು ಪರಿಶೀಲನೆ ಮಾಡುತ್ತಿದ್ದು, ಹಾಗೂ ಜಾಗೃತಿ ಮೂಡಿಸಲಾಗುತ್ತಿದೆ. ಕೇರಳದಿಂದ ಮೈಸೂರಿಗೆ ಆಗಮಿಸುವವರ ಮೇಲೆ ಅಧಿಕಾರಿಗಳು ನಿಗಾ ವಹಿಸಿದ್ದಾರೆ ಎಂದು ತಿಳಿದುಬಂದಿದೆ.

Read More

ಹುಬ್ಬಳ್ಳಿ : ಇತ್ತೀಚಿಗೆ ಇಡೀ ರಾಜ್ಯವೇ ಬೆಚ್ಚಿ ಬೀಳಿಸುವಂತೆ ಹುಬ್ಬಳ್ಳಿಯ ಬಿವಿಬಿ ಕಾಲೇಜಿನಲ್ಲಿ ವಿದ್ಯಾರ್ಥಿ ನೇಹಾ ಹಿರೇಮಠ ಕೊಲೆ ಮಾಸುವ ಮುನ್ನವೇ ಇದೀಗ ಮತ್ತೊಂದು ಬೆಚ್ಚಿ ಬೀಳಿಸುವ ಘಟನೆ ನಡೆದಿದ್ದು, ಮಲಗಿದ್ದ ಯುವತಿಗೆ ಚಾಕು ಇರಿದು ಭೀಕರವಾಗಿ ಕೊಲೆ ಮಾಡಲಾಗಿದೆ. ಹೌದು ಹುಬ್ಬಳ್ಳಿಯ ವೀರಾಪುರ ಓಣಿಯಲ್ಲಿ ಈ ಒಂದು ಘಟನೆ ನಡೆದಿದ್ದು, ಚಾಕುವಿನಿಂದ ಇರಿದು ಅಂಜಲಿ ಅಂಬಿಗರ ಎನ್ನುವ ಯುವತಿಯನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ರಾತ್ರಿ ಯುವತಿ ಮಲಗಿದ್ದಾಗ ದುಷ್ಕರ್ಮಿಗಳು ಚಾಕುವಿನಿಂದ ಇರಿದು ಕೊಲೆ ಮಾಡಿ ಪರಾರಿಯಾಗಿದ್ದಾರೆ. ಘಟನೆ ಕುರಿತಂತೆ ಬೆಂಡಿಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.ಘಟನೆ ಕುರಿತಂತೆ ಇದೀಗ ಪೊಲೀಸರು ತನಿಖೆ ಕೈಗೊಂಡಿದ್ದು ದುಷ್ಕರ್ಮಿಗಳ ಬಂಧನಕ್ಕೆ ಬೆಲೆ ಬೀಸಿದ್ದಾರೆ ಎನ್ನಲಾಗಿದೆ.

Read More

ನವದೆಹಲಿ: ಕಳೆದ ಕೆಲವು ದಿನಗಳಿಂದ ದೆಹಲಿಯಲ್ಲಿ ಆತಂಕ ಸೃಷ್ಟಿಯಾಗಿದ್ದು, ದುಷ್ಕರ್ಮಿಗಳು ಬಾಂಬ್ ಬೆದರಿಕೆ ಸಂದೇಶಗಳನ್ನು ಕಳುಹಿಸುತ್ತಲೇ ಇದ್ದಾರೆ. ಇದೀಗ ರಾಷ್ಟ್ರ ರಾಜಧಾನಿಯಲ್ಲಿ ಏಳು ಆಸ್ಪತ್ರೆಗಳು ಮತ್ತು ತಿಹಾರ್ ಜೈಲಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿದ್ದು, ಭಯದ ವಾತಾವರಣ ಸೃಷ್ಟಿಸುವ ದುಷ್ಕರ್ಮಿಗಳ ಅಟ್ಟಹಾಸ ಮುಂದುವರಿದಿದೆ. ಕಳೆದ ಎರಡು ವಾರಗಳಿಂದ ದೇಶಾದ್ಯಂತ ವಿವಿಧ ನಗರಗಳಿಗೆ ಹುಸಿ ಬಾಂಬ್ ಬೆದರಿಕೆ ಹಾಕುತ್ತಿರುವ ಅಪರಿಚಿತರು ಮಂಗಳವಾರವೂ ತಿಹಾರ್ ಜೈಲು ಹಾಗೂ ದೆಹಲಿಯ ಜಿಟಿವಿ ಆಸ್ಪತ್ರೆ, ದಾದಾ ದೇವ್ ಆಸ್ಪತ್ರೆ, ಹೆಡ್ಡೆವಾರ್ ಆಸ್ಪತ್ರೆ, ದೀಪ್ ಚಂದ್‌ ಬಂಧು ಆಸ್ಪತ್ರೆ, ಕೇಶವಪುರಂನ ಅತ್ತ‌ರ್ ಸೈನ್ ಜೈನ್ ಮತ್ತು ಗೀತಾ ಕಾಲನಿಯಲ್ಲಿರುವ ಚಾಚಾ ನೆಹರು ಆಸ್ಪತ್ರೆಗಳಿಗೆ ಇ-ಮೇಲ್ ಕಳುಹಿಸಿ ಭಯ ಸೃಷ್ಟಿಸಿದ್ದಾರೆ. ದೇಶಾದ್ಯಂತ ಶಾಲೆಗಳು, ವಿಮಾನ ಮತ್ತು ರೈಲು ನಿಲ್ದಾಣಗಳು ಸೇರಿ ಸಾರ್ವಜನಿಕ ಸ್ಥಳಗಳನ್ನು ಗುರಿಯಾಗಿಸಿಕೊಂಡು ಬೆದರಿಕೆ ಹಾಕಲಾಗುತ್ತಿದ್ದು, ವಿದೇಶಿ ಮೇಲಿಂಗ್ ಸೇವಾ ಕಂಪನಿಗಳ ಮೂಲಕ ಇ-ಮೇಲ್ ‌ ಬರುತ್ತಿವೆ. ಭಾನುವಾರ ಯುರೋಪ್ ಮೂಲದ ‘beeble.com’ ಕಂಪನಿಯಿಂದ “courtisgod123@beeble.com” 2…

Read More