Subscribe to Updates
Get the latest creative news from FooBar about art, design and business.
Author: ಸುರೇಶ್
"ಕನ್ನಡ ನ್ಯೂಸ್ ನೌ ಜಾಲತಾಣದ ಮುಖ್ಯ ಸಂಪಾದಕರಾದ ಸುರೇಶ್ ಅವರು ಕಳೆದ 4 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದಾರೆ. ಸರ್ಕಾರದ ಯೋಜನೆಗಳು, ಶಿಕ್ಷಣ ಮತ್ತು ಪ್ರಚಲಿತ ವಿದ್ಯಮಾನಗಳನ್ನು ಸಾಮಾನ್ಯ ಜನರಿಗೂ ಅರ್ಥವಾಗುವಂತೆ ವಿವರಿಸುವುದು ಇವರ ವಿಶೇಷತೆ. ಈ ಮೊದಲು ವಿವಿಧ ವೆಬ್‌ಸೈಟ್‌ಗಳಲ್ಲಿ ನಾಗರಿಕ ಸಮಸ್ಯೆಗಳ ಬಗ್ಗೆ ವರದಿಗಾರರಾಗಿ ಕೆಲಸ ಮಾಡಿರುವ ಇವರು, ಸಮಯೋಚಿತ ಹಾಗೂ ವಿಶ್ವಾಸಾರ್ಹ ಮಾಹಿತಿ ನೀಡುವ ಮೂಲಕ ಓದುಗರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಡಿಜಿಟಲ್ ಸಾಕ್ಷರತೆ ಇವರ ನೆಚ್ಚಿನ ವಿಷಯಗಳಲ್ಲೊಂದು
ದಕ್ಷಿಣಕನ್ನಡ : ಇತ್ತೀಚಿಗೆ ಸೈಬರ್ ವಂಚನೆ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದು, ಅಮಾಯಕ ಜನರು ಸೈಬರ್ ವಂಚಕರ ಬಲೆಗೆ ಬಿದ್ದು ಕೋಟ್ಯಾಂತರ ರೂಪಾಯಿ ಹಣ ಕಳೆದುಕೊಳ್ಳುತ್ತಿದ್ದಾರೆ. ಇದೀಗ ಮಹಿಳೆಯೊಬ್ಬರಿಗೆ ವಾಟ್ಸ್ಆ್ಯಪ್ ವಿಡಿಯೋ ಕರೆ ಮೂಲಕ ಬೆದರಿಸಿ, ಡಿಜಿಟಲ್ ಅರೆಸ್ಟ್ ಮಾಡಿ, ಸುಮಾರು 1.16 ಕೋಟಿ ರೂ. ಲಪಟಾಯಿಸಿರುವ ಬಗ್ಗೆ ಮಂಗಳೂರಿನ ಸಿಇಎನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಹಿಳೆ ಮನೆಯಲ್ಲಿದ್ದ ವೇಳೆ ವಾಟ್ಸ್ಆ್ಯಪ್ ನಂಬರ್ ಒಂದರಿಂದ ವಿಡಿಯೋ ಕರೆ ಬಂದಿದೆ. ಅದನ್ನು ಸ್ವೀಕರಿಸಿದಾಗ, ದೆಹಲಿಯ ಟೆಲಿಕಮ್ಯೂನಿಕೇಶನ್ ಡಿಪಾರ್ಟ್ಮೆಂಟ್ ಕಡೆಯಿಂದ ಮಾತನಾಡುವುದಾಗಿ ಹೇಳಿದ್ದಾರೆ. ಬಳಿಕ, ನಿಮ್ಮ ಹೆಸರಿನಲ್ಲಿರುವ ಆಧಾರ್ ಕಾರ್ಡ್ ಮತ್ತು ಪಾನ್ ಕಾರ್ಡ್ ಬಳಸಿ ಮೊಬೈಲ್ ನಂಬರ್ ಖರೀದಿಸಿದ್ದು, ದೆಹಲಿಯಲ್ಲಿ ಸಾರ್ವಜನಿಕರಿಗೆ ಅಕ್ರಮವಾಗಿ ಜಾಹೀರಾತು ಹಾಗೂ ಕಿರುಕುಳದ ಸಂದೇಶಗಳನ್ನು ಕಳುಹಿಸಿರುತ್ತೀರಿ ಎಂದಿದ್ದಾರೆ. ಆಗ ಮಹಿಳೆಯು, ತಾನು ಯಾವುದೇ ರೀತಿಯ ಸಂದೇಶಗಳನ್ನು ಹಾಗೂ ಜಾಹೀರಾತುಗಳನ್ನು ಕಳುಹಿಸಿಲ್ಲ. ಹಾಗೂ ನಂಬರ್ ನನ್ನದಲ್ಲ ಎಂದು ಉತ್ತರಿಸಿದಾಗ, ಆ ವ್ಯಕ್ತಿಯು ಹಾಗಿದ್ದಲ್ಲಿ ನಾನು ದೆಹಲಿ ಪೊಲೀಸರಿಗೆ ಕರೆ ವರ್ಗಾಯಿಸುತ್ತಿದ್ದೇನೆ.…
ಬೆಂಗಳೂರು : ಪ್ರತಿ ಟನ್ ಕಬ್ಬಿಗೆ 100 ರೂ. ಹೆಚ್ಚಿಸಿರುವ ಸರ್ಕಾರದ ತೀರ್ಮಾನವನ್ನು ಬಿಜೆಪಿ ನಾಯಕರು ಸ್ವಾಗತಿಸಿದ್ದಾರೆ. ಈ ಸಂಬಂಧ ಪ್ರತಿಕ್ರಿಯಿಸಿರುವ ಬಿವೈ ವಿಜಯೇಂದ್ರ ಬೆಳಗಾವಿ, ಬಾಗಲಕೋಟೆ, ವಿಜಯಪುರ, ಚಿಕ್ಕೋಡಿ ಜಿಲ್ಲೆಗಳಲ್ಲಿ ಕಳೆದ ಒಂದು ವಾರದಿಂದ ಕಬ್ಬು ಬೆಳೆಗಾರರು ನಡೆಸಿದ ಸಂಘಟಿತ ಹೋರಾಟಕ್ಕೆ ಮಣಿದಿರುವ ರಾಜ್ಯ ಕಾಂಗ್ರೆಸ್ ಸರ್ಕಾರ ಪ್ರತಿ ಟನ್ ಕಬ್ಬಿಗೆ ₹3,300 ದರ ನಿಗದಿಪಡಿಸಿ ನಿರ್ಧಾರ ಕೈಗೊಂಡಿರುವುದು ಸ್ವಾಗತಾರ್ಹ ಎಂದಿದ್ದಾರೆ. ಕಳೆದ ಕೆಲವು ದಿನಗಳಿಂದ ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಗುರ್ಲಾಪುರ ಕ್ರಾಸ್‍ನಲ್ಲಿ ಕಬ್ಬು ಬೆಳೆಗಾರರು, ರಾಜ್ಯ ರೈತ ಸಂಘ, ಹಸಿರು ಸೇನೆ ಶಾಂತಿಯುತ ಹೋರಾಟ ನಡೆಸಿದ್ದರು. ಇದು ಕಬ್ಬು ಬೆಳೆಗಾರರು, ರೈತ ಸಂಘದ ಹೋರಾಟಕ್ಕೆ ಸಂದ ಜಯ. ಮುಖ್ಯಮಂತ್ರಿಗಳು ಒಂದು ಅಥವಾ ಎರಡು ತಿಂಗಳ ಮೊದಲೇ ಈ ಸಭೆ ನಡೆಸಬೇಕಿತ್ತು. ರೈತರು ಬೀದಿಗಿಳಿದು ಹೋರಾಟ ಮಾಡಿ, ಆ ಹೋರಾಟವು ರಾಜ್ಯದ ಇತರ ಜಿಲ್ಲೆಗಳಿಗೆ ಹಬ್ಬುವ ಸಂದರ್ಭದಲ್ಲಿ ನಾವು ಕೂಡ ಹೋರಾಟದ ಸ್ಥಳಕ್ಕೆ ಭೇಟಿ ಕೊಟ್ಟು ಹೋರಾಟಕ್ಕೆ ಬೆಂಬಲ…
ಚಿತ್ರದುರ್ಗ : ಚಿತ್ರದುರ್ಗದಲ್ಲಿ ಘೋರ ಘಟನೆ ಒಂದು ನಡೆದಿದ್ದು, ಸರ್ಕಾರಿ ಆಸ್ಪತ್ರೆ ಚಾವಣಿಯ ಸಿಮೆಂಟ್ ಕುಸಿದು ಬಾಣಂತಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ಜಿಲ್ಲೆಯ ಹಿರಿಯೂರು ತಾಲೂಕು ಆಸ್ಪತ್ರೆಯಲ್ಲಿ ಈ ಒಂದು ಘಟನೆ ಸಂಭವಿಸಿದೆ. ಚಾವಣಿಯ ಸಿಮೆಂಟ್ ಕುಸಿದು ಬಾಣಂತಿ ಅಬ್ಜ ಕೌಸರ್ (36) ಎನ್ನುವ ಬಾಣಂತಿಗೆ ಗಾಯಗಳಾಗಿದ್ದು, ಹಿರಿಯೂರಿನ ಸರಕಾರಿ ಆಸ್ಪತ್ರೆಯ ತಾಯಿ ಮತ್ತು ಮಕ್ಕಳ ವಾರ್ಡ್ ನಲ್ಲಿ ಘಟನೆ ನಡೆದಿದೆ. ಹಿರಿಯೂರು ಸರ್ಕಾರಿ ಆಸ್ಪತ್ರೆಯ ವ್ಯವಸ್ಥೆಯ ಬಗ್ಗೆ ಸ್ಥಳೀಯರು ಆಕ್ರೋಶ ಹೊರಹಾಕಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಪ್ರತಿನಿಧಿಸುವ ಹಿರಿಯೂರಲ್ಲೇ ಇಂತಹ ಘಟನೆ ನಡೆದಿದ್ದು ಸ್ಥಳೀಯರು ಕಿಡಿ ಕಾರಿದ್ದಾರೆ.
ಬೆಂಗಳೂರು : ಮದ್ಯದ ಅಮಲಿನಲ್ಲಿ ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರ ಮಧ್ಯೆ ಉಂಟಾದ ಜಗಳವು ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಬನಶಂಕರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ತ್ಯಾಗರಾಜನಗರ ನಿವಾಸಿ ಸುರೇಶ್ ಎಂಬುವವರನ್ನು ಅವರ ಸ್ನೇಹಿತರು ಬಿಯರ್ ಬಾಟಲ್‌ನಿಂದ ಹೊಡೆದು ಕೊಂದಿದ್ದು, ಹಣಕಾಸು ವ್ಯವಹಾರವು ಜಗಳಕ್ಕೆ ಕಾರಣವಾಗಿರಬಹುದು ಎಂದು ಶಂಕಿಸಲಾಗಿದೆ. ತ್ಯಾಗರಾಜನಗರದ ನಿವಾಸಿ ಸುರೇಶ್ (45) ಕೊಲೆಯಾದ ದುರ್ದೈವಿ. ಈ ಹತ್ಯೆ ಸಂಬಂಧ ಮೃತನ ಸ್ನೇಹಿತರಾದ ವೇಲು, ಸ್ಟೀಫನ್ ಹಾಗೂ ಪ್ರದೀಪ್ ನನ್ನು ಅರೆಸ್ಟ್ ಮಾಡಲಾಗಿದೆ. ಮದ್ಯದ ಅಮಲಿನಲ್ಲಿ ಕ್ಷುಲ್ಲಕ ವಿಚಾರಕ್ಕೆ ಜಗಳವಾಗಿದೆ. ಆಗ ಮಾತಿಗೆ ಮಾತು ಬೆಳೆದು ಪರಿಸ್ಥಿತಿ ವಿಕೋಪಕ್ಕೆ ತಿರುಗಿದೆ. ಈ ಹಂತದಲ್ಲಿ ಕೆರಳಿದ ಆರೋಪಿಗಳು, ಸುರೇಶ್‌ಗೆ ಬಿಯರ್ ಬಾಟಲ್‌ನಿಂದ ಹೊಡೆದು ಕೊಂದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ನವದೆಹಲಿ : ರಾಷ್ಟ್ರೀಯ ಗೀತೆ ವಂದೇ ಮಾತರಂನ ಮುಖ್ಯ ಚರಣಗಳನ್ನು ಕತ್ತರಿಸುವ ಮೂಲಕ ಕಾಂಗ್ರೆಸ್ ಪಕ್ಷ ಅಪಮಾನ ಮಾಡಿದೆ ಎಂದು ಆರೋಪಿಸಿರುವ ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿಗೆ ಆರೆಸ್ಸೆಸ್‌ಗೆ ‘ನಮಸ್ತೆ ಸದಾ ವತ್ಸಲೇ’ ಮಾತ್ರ ಮುಖ್ಯ ಎಂದು ಹೇಳುವ ಮೂಲಕ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಿರುಗೇಟು ನೀಡಿದ್ದಾರೆ. ಕಾಂಗ್ರೆಸ್ ವಂದೇ ಮಾತರಂ ಅನ್ನು ಬಹುವಾಗಿ ಮೆಚ್ಚುತ್ತಿದ್ದ ರವೀಂದ್ರನಾಥ ಟ್ಯಾಗೋರ್‌ಅವರೇ ಆ ಗೀತೆಯ ಮೊದಲ 2 ಚರಣ ಸ್ವೀಕರಿಸಿ. ಉಳಿದವನ್ನು ಕೈಬಿಡಿ ಎಂದು ಸೂಚಿಸಿದ್ದರು. ಆ ಪ್ರಕಾರ 1937ರಲ್ಲಿ ಅವನ್ನು ಕೈಬಿಡಲಾಗಿತ್ತು. ಇದನ್ನೇ ವಿಭಜಕ ಸಿದ್ಧಾಂತ ಎಂದರೆ ಹೇಗೆ? ಇದು ನಾಚಿಕೆಗೇಡಿತನ. ಮೋದಿ ಈ ಆರೋಪದ ಬಗ್ಗೆ ಕ್ಷಮೆ ಕೇಳಬೇಕು ಎಂದು ಕಾಂಗ್ರೆಸ್ ಆಗ್ರಹಿಸಿದೆ. ಇಂದು ರಾಷ್ಟ್ರೀಯತೆಯ ಸ್ವಯಂಘೋಷಿತ ರಕ್ಷಕರೆಂದು ಹೇಳಿಕೊಳ್ಳುವ ಆರ್‌ಎಸ್‌ಎಸ್ ಮತ್ತು ಬಿಜೆಪಿ ತಮ್ಮ ಶಾಖೆಗಳಲ್ಲಿ ಅಥವಾ ಕಚೇರಿಗಳಲ್ಲಿ ವಂದೇ ಮಾತರಂ ಅಥವಾ ನಮ್ಮ ರಾಷ್ಟ್ರಗೀತೆ ಜನ ಗಣ ಮನವನ್ನು ಎಂದಿಗೂ ಹಾಡಿಲ್ಲ. ಬದಲಾಗಿ, ‘ನಮಸ್ತೆ ಸದಾ…
ಬೆಂಗಳೂರು : ರಾಜಧಾನಿ ಬೆಂಗಳೂರು ನಗರದಲ್ಲಿ ಉತ್ಪತ್ತಿಯಾಗುವ ಘನತ್ಯಾಜ್ಯವನ್ನು ವಿಲೇವಾರಿಗಾಗಿ ವೈಜ್ಞಾನಿಕ ರೀತಿಯಲ್ಲಿ ಘನ ತ್ಯಾಜ್ಯ ನಿರ್ವಹಣೆ (ಎಸ್ಡಬ್ಲೂಎಂ) ಮಾಡಲು ಏಕರೂಪ ಮತ್ತು ತಂತ್ರಜ್ಞಾನ ಆಧಾರಿತ ವ್ಯವಸ್ಥೆ ಜಾರಿಗೆ ತರುವಂತೆ ಹೈಕೋರ್ಟ್ ಸರ್ಕಾರ ಮತ್ತು ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ)ಕ್ಕೆ ನಿರ್ದೇಶನ ನೀಡಿದೆ. ಬೆಂಗಳೂರು ಘನತ್ಯಾಜ್ಯ ನಿರ್ವಹಣಾ ಲಿಮಿಟೆಡ್ (ಬಿಎಸ್ ಡಬ್ಲೂಎಂಎಲ್) 2025ರ ಜುಲೈ 30ರಂದು ಬೆಂಗಳೂರು ಮಹಾನಗರದಲ್ಲಿ ಘನತ್ಯಾಜ್ಯ ವಿಲೇವಾರಿಗೆ 33 ಪ್ಯಾಕೇಜ್ಗಳಿಗೆ ಹೊರಡಿಸಿದ್ದ ಟೆಂಡರ್ ಪ್ರಶ್ನಿಸಿ ಹಲವು ಘನತ್ಯಾಜ್ಯ ನಿರ್ವಹಣೆಯ ಗುತ್ತಿಗೆದಾರರು ಸಲ್ಲಿಸಿದ್ದ ಅರ್ಜಿಗಳನ್ನು ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸೂರಜ್ ಗೋವಿಂದ ರಾಜು ಅವರಿದ್ದ ನ್ಯಾಯಪೀಠ ಈ ಆದೇಶ ನೀಡಿದ್ದು, ಎಲ್ಲ ಅರ್ಜಿಗಳನ್ನು ವಜಾಗೊಳಿಸಿ ಆದೇಶಿಸಿದೆ. ಬೆಂಗಳೂರಿನಲ್ಲಿ ಘನತ್ಯಾಜ್ಯ ವಿಲೇವಾರಿ ವ್ಯವಸ್ಥೆಯನ್ನು ಸುಧಾರಿಸುವ ನಿಟ್ಟಿನಲ್ಲಿ ಹಲವು ನಿರ್ದೇಶನಗಳನ್ನು ನೀಡಿರುವ ಪೀಠ, ಡಿಜಿಟಲ್ ಡ್ಯಾಶ್ಬೋರ್ಡ್, ಮೊಬೈಲ್ ಅಪ್ಲಿಕೇಶನ್, ಜಿಪಿಎಸ್ ಟ್ರ್ಯಾಕಿಂಗ್, ವೇಯ್ಟ್ ಬ್ರಿಡ್ಜ್ ಏಕೀಕರಣ ಮತ್ತು ಸಿಸಿಟಿವಿ ಕಣ್ಗಾವಲುಗಳನ್ನು ಒಳಗೊಂಡಿರಬೇಕು. ಅವುಗಳನ್ನು ಪ್ರತ್ಯೇಕ ಅಥವಾ ಸ್ವತಂತ್ರ ಯೋಜನೆಗಳಾಗಿ ನೋಡದೆ ಒಂದೇ,…
ಪ್ರೀತಿ ನಿರಾಕರಿಸಿದಕ್ಕೆ ಗರ್ಭಿಣಿ ಯುವತಿ ಆತ್ಮಹತ್ಯೆಗೆ ಶರಣಾಗಿದ್ದು, ಯುವಕನ ಮನೆಯ ಮುಂದೆ ಇದೀಗ ಯುವತಿಯ ಕುಟುಂಬಸ್ಥರು ಶವ ಇಟ್ಟು ಧರಣಿ ನಡೆಸುತ್ತಿದ್ದಾರೆ. ಕುದುರಿಹಾಳ ಗ್ರಾಮದ ಯುವಕನ ಮನೆ ಮುಂದೆ ಕುಟುಂಬ ಪ್ರತಿಭಟನೆ ನಡೆಸುತ್ತಿದೆ. ಹೌದು ಪ್ರೀತಿ ನಿರಾಕರಿಸಿದ ಕ್ಕೆ ಗರ್ಭಿಣಿ ಯುವತಿ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಹಾವೇರಿ ಜಿಲ್ಲೆಯ ರಾಣಿಬೆನ್ನೂರು ತಾಲೂಕಿನ ಕುದುರಿಹಾಳ ಗ್ರಾಮದ ಸಿಂಧು ಅದೇ ಗ್ರಾಮದ ಶರತ್ ನೀಲಪ್ಪನವರನ್ನ ಪ್ರೀತಿಸುತ್ತಿದ್ದಳು. ಆದರಿಂದ ಗರ್ಭಿಣಿಯಾದ ಬಳಿಕ ಶರತ್ ಪ್ರೀತಿ ನಿರಾಕರಿಸಿದನಂತೆ ಇದರಿಂದ ಮನನೊಂದ ಯುವತಿ ನೇಣಿಗೆ ಶರಣಾಗಿದ್ದಾಳೆ. ಸದ್ಯ ಯುವಕನ ಮನೆಯ ಮುಂದೆ ಶವ ಇಟ್ಟು ಕುಟುಂಬದವರು ಧರಣಿ ನಡೆಸುತ್ತಿದ್ದಾರೆ.
ಬೆಳಗಾವಿ : ಕಳೆದ 9 ದಿನಗಳಿಂದ ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಗುರ್ಲಾಪುರದಲ್ಲಿ ಪ್ರತಿ ಟನ್ ಕಬ್ಬಿಗೆ ದರ ಹೆಚ್ಚಿಸುವಂತೆ ರೈತರು ಪ್ರತಿಭಟನೆ ನಡೆಸುತ್ತಿದ್ದರು. ಇದೀಗ ರಾಜ್ಯ ಸರ್ಕಾರವು ಟನ್ ಕಬ್ಬಿಗೆ 3,300 ರೂ. ಬೆಲೆ ನಿಗದಿ ಮಾಡಿ ಆದೇಶ ಹೊರಡಿಸುತ್ತಿದ್ದಂತೆ ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಗುರ್ಲಾಪುರ ಗ್ರಾಮದಲ್ಲಿ ರೈತರ ಸಂಭ್ರಮಾಚರಣೆ ಮುಗಿಲು ಮುಟ್ಟಿತ್ತು. ಕಬ್ಬಿಗೆ ಬೆಲೆ ಹೆಚ್ಚಳ ಘೋಷಣೆ ಮಾಡುವಂತೆ ಆಗ್ರಹಿಸಿ ಗುರ್ಲಾಪುರ ಗ್ರಾಮ ಸೇರಿದಂತೆ ಬೆಳಗಾವಿ ಜಿಲ್ಲೆ ಸೇರಿದಂತೆ ಹಲವೆಡೆ ಕಳೆದ ಒಂಭತ್ತು ದಿನಗಳಿಂದ ಕಬ್ಬು ಹೋರಾಟಗಾರರು ಹೋರಾಟ ನಡೆಸುತ್ತಿದ್ದರು. ರೈತರ ಈ ಹೋರಾಟಕ್ಕೆ ಮಣಿದ ರಾಜ್ಯ ಸರ್ಕಾರ, 11.25 ರಿಕವರಿ ದರಕ್ಕೆ ಪ್ರತಿ ಟನ್ಗೆ ಸಾಗಾಟ ಹಾಗೂ ಕಟಾವು ವೆಚ್ಚ ಹೊರತಾಗಿ 3,300 ರೂ. ಕೊಡಲು ತೀರ್ಮಾನಿಸಲಾಗಿದೆ. ನಿನ್ನೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, 81 ಸಕ್ಕರೆ ಕಾರ್ಖಾನೆ ಮಾಲೀಕರ ಜೊತೆ ಸಭೆ ಮಾಡಿದ್ದೇನೆ. ಕೇಂದ್ರ ಸರ್ಕಾರ ಹಾರ್ವೆಸ್ಟಿಂಗ್ ಮತ್ತು ಸಾಗಾಟ ವೆಚ್ಚ ಸೇರಿಸಿ 11.25…
ಬೆಂಗಳೂರು : ಬೆಂಗಳೂರಲ್ಲಿ ಘೋರವಾದ ದುರಂತ ಒಂದು ಸಂಭವಿಸಿದ್ದು, ಸಿಮೆಂಟ್ ಮಿಕ್ಸರ್ ಲಾರಿ ಅವಾಂತರಕ್ಕೆ ಒಂದು ವರ್ಷದ ಎಂಟು ತಿಂಗಳಿನ ಮಗು ಬಲಿಯಾಗಿದೆ. ಪ್ರಣವ್ ಎನ್ನುವ ಮಗು ದಾರುಣವಾಗಿ ಸಾವನಪ್ಪಿದೆ. ನವೆಂಬರ್ 7ರಂದು ಕುಂದಲಹಳ್ಳಿ ಕಾಲೋನಿಯಲ್ಲಿ ಈ ಒಂದು ಘಟನೆ ನಡೆದಿದೆ. ಮೋಲ್ಡಿಂಗ್ ಮುಗಿಸಿ ಬರುತ್ತಿದ್ದ ಸಿಮೆಂಟ್ ಮಿಕ್ಸರ್ ವಿದ್ಯುತ್ ತಂತಿ ಎಳೆದಿದ್ದು, ವೈರಿಂಗ್ ಕಂಬ ಕಿತ್ತು ಬಂದು ಮನೆ ಗೋಡೆ ಕುಸಿದಿದೆ. ಆಟ ಆಡುತ್ತಿದ್ದ ಮಗು ಮೇಲೆ ಮನೆಯ ಗೋಡೆ ಅವಶೇಷ ಬಿದ್ದಿದೆ. ತಕ್ಷಣ ಆಸ್ಪತ್ರೆಗೆ ಕರೆದೋಯುವಷ್ಟರಲ್ಲಿಯೇ ಪ್ರಣವ್ ಸಾವನ್ನಪ್ಪಿದ್ದಾನೆ. ಘಟನೆಯ ಬಳಿಕ ಕಾಂಕ್ರೀಟ್ ಮಿಕ್ಸರ್ ಚಾಲಕ ಪರಾರಿಯಾಗಿದ್ದಾನೆ.
ಬೆಂಗಳೂರು : ಅವ್ಯವಹಾರ ಹಾಗೂ ಅಕ್ರಮಗಳ ಬಗ್ಗೆ ಸಾರ್ವಜನಿಕರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ನಗರದ ಆರು ಪ್ರಾದೇಶಿಕ ಸಾರಿಗೆ ಕಚೇರಿಗಳ(ಆರ್‌ಟಿಓ) ಮೇಲೆ ಶುಕ್ರವಾರ ಲೋಕಾಯುಕ್ತ ಅಧಿಕಾರಿಗಳು ಏಕಕಾಲಕ್ಕೆ ದಾಳಿ ನಡೆಸಿ ಪರಿಶೀಲಿಸಿದ್ದಾರೆ. ಯಶವಂತಪುರ, ರಾಜಾಜಿನಗರ, ಕೆ.ಆರ್.ಪುರ, ಜಯನಗರ, ಯಲಹಂಕ, ಕಸ್ತೂರಿನಗರ ಆರ್‌ಟಿಓ ಕಚೇರಿಗಳ ಮೇಲೆ ದಾಳಿ ನಡೆಸಿ ಹಲವು ಅಕ್ರಮಗಳನ್ನು ಪತ್ತೆ ಹಚ್ಚಿದ್ದಾರೆ. ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್. ಪಾಟೀಲ್ ಅವರು ಖುದ್ದು ಯಶವಂತಪುರ ಮತ್ತು ರಾಜಾಜಿನಗರ ಆರ್‌ಟಿಒ ಕಚೇರಿಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಹಲವು ಲೋಪ ದೋಷಗಳು ಕಂಡು ಬಂದಿವೆ. ಆರ್‌ಟಿಒ ಕಚೇರಿ ಆವರಣದಲ್ಲಿ 32 ಸ್ಟೇಷನರಿ ಹಾಗೂ ಜೆರಾಕ್ಸ್ ಅಂಗಡಿ ಗಳಿದ್ದು, ಲೋಕಾಯುಕ್ತ ಅಧಿಕಾರಿಗಳು ತಪಾಸಣೆಗೆ ಮುಂದಾದಾಗ ಅಂಗಡಿಗಳನ್ನು ಮುಚ್ಚಲಾಗಿದೆ. ಈ ಸಂಬಂಧ ಕೂಲಂಕಷವಾಗಿ ಪರಿಶೀಲಿಸಿ, ವರದಿ ಸಲ್ಲಿಸುವಂತೆ ಲೋಕಾಯುಕ್ತ ಪೊಲೀಸ್ ಅಧಿಕಾರಿಗಳಿಗೆ ಲೋಕಾಯುಕ್ತ ನ್ಯಾಯಮೂರ್ತಿ ಸೂಚಿಸಿದ್ದಾರೆ. ಇದೇ ವೇಳೆ ಕೆಲ ನೌಕರರು ಕರ್ತವ್ಯಕ್ಕೆ ಗೈರಾಗಿರುವುದು ಕಂಡು ಬಂದಿದ್ದು, ಈ ಬಗ್ಗೆ ಅಧಿಕಾರಿಯನ್ನು ಪ್ರಶ್ನೆ ಮಾಡಿದಾಗ…














