Subscribe to Updates
Get the latest creative news from FooBar about art, design and business.
Author: kannadanewsnow05
ಶಿವಮೊಗ್ಗ : ಶಿವಮೊಗ್ಗದಲ್ಲಿ ಭೀಕರ ಅಪಘಾತ ಒಂದು ನಡೆದಿದ್ದು, ಆಟೋಗೆ ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ ಆಟೋದಲ್ಲಿದ್ದ ವಿದ್ಯಾರ್ಥಿನಿ ಸಾವನ್ನಪ್ಪಿರುವ ಘಟನೆ ಶಿವಮೊಗ್ಗದ ತಾವರೆ ಚಟ್ನಳ್ಳಿ ಬಳಿ ನಡೆದಿದೆ.ಆದರೆ ಡಿಕ್ಕಿ ಹೊಡೆದ ಕ್ಯಾಂಟರ್ ಚಾಲಕ ನೋಡಿಯೂ ನೋಡದಂತೆ ಪರಾರಿಯಾಗಿದ್ದಾನೆ. ಗಾನವಿ (17) ಮೃತ ದುರ್ದೈವಿ ಎಂದು ಹೇಳಲಗುತ್ತಿದೆ. ಘಟನೆಯಲ್ಲಿ ಈಕೆಯ ತಾಯಿ ಹಾಗೂ ಅಜ್ಜಿ ಗಾಯಗೊಂಡಿದ್ದಾರೆ. ಗಾನವಿ ತಾವರೆ ಚಟ್ನಳ್ಳಿಯ ಪೇಸ್ ಕಾಲೇಜಿನ ವಿದ್ಯಾರ್ಥಿನಿಯಾಗಿದ್ದು, ತನ್ನ ಕಾಲೇಜಿನ ಎದುರಿನಲ್ಲಿ ಸಂಭವಿಸಿದ ಅಪಘಾತದಲ್ಲಿ ಸಾವನ್ನಪ್ಪಿದ್ದಾಳೆ. ವೇಗವಾಗಿ ಬಂದ ಕ್ಯಾಂಟರ್ ಆಟೋಕ್ಕೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಆಟೋ ಎಡಕ್ಕೆ ಬಿದ್ದಿದೆ. ಆಟೋ ಎಡ ಭಾಗದಲ್ಲಿದ್ದ ಗಾನವಿ ಮೊದಲು ನೆಲಕ್ಕೆ ಬಿದ್ದಿದ್ದಾಳೆ. ಇದರಿಂದ ಆಕೆಯ ಹೊಟ್ಟೆ ಭಾಗಕ್ಕೆ ತೀವ್ರವಾಗಿ ಹೊಡೆತ ಬಿದ್ದಿದೆ. ಪರಿಣಾಮ ರಕ್ತಸ್ರಾವದಿಂದ ಗಾಯಗೊಂಡಿದ್ದ ಗಾನವಿ ಆಸ್ಪತ್ರೆಗೆ ಸಾಗಿಸುವಾಗ ಸಾವನ್ನಪ್ಪಿದ್ದಾಳೆ. ಈಕೆಯ ತಾಯಿ ಹಾಗೂ ಅಜ್ಜಿ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆ ಕುರಿತಂತೆ ಚೀಲೂರಿನಲ್ಲಿ ಪೊಲೀಸರು ಕ್ಯಾಂಟರ್ ಹಾಗೂ ಚಾಲಕನನ್ನು ವಶಕ್ಕೆ…
ಚಿಕ್ಕಮಗಳೂರು : ಜಿಲ್ಲೆಯ ಆಲ್ದೂರು ಸಮೀಪದ ಕಂಚಿನಕಲ್ಲು ದುರ್ಗದ ಖಾಸಗಿ ಕಾಫಿತೋಟದಲ್ಲಿ ವಿದ್ಯುತ್ ತಂತಿ ತಗುಲಿ ಆನೆಯೊಂದು ಸಾವನ್ನಪ್ಪಿರುವ ಘಟನೆ ನಡೆದಿದೆ. ಅಲ್ಲದೆ ಮೃತ ಪಟ್ಟಿರುವ ಆನೆ ಆಲ್ದೂರು ಸಮೀಪ ಕಾರ್ಮಿಕ ಮಹಿಳೆಯೋರ್ವರನ್ನು ತುಳಿದು ಸಾಯಿಸಿತ್ತು. ಮನುಷ್ಯರ ಮೇಲೆ ದಾಳಿ ಮಾಡಿ ಸಾಯಿಸುತ್ತಿದ್ದ ಆನೆಯೇ ಈಗ ಮೃತಪಟ್ಟಿರಬಹುದು ಎಂದು ಶಂಕಿಸಲಾಗಿದೆ.ಇತ್ತೀಚೆಗೆ ಈ ಭಾಗದಲ್ಲಿ ಆನಂದ ಪೂಜಾರಿ ಎಂಬುವರನ್ನು ಕಾಡಾನೆ ತುಳಿದು ಸಾಯಿಸಿತ್ತು. ಕೆಲ ತಿಂಗಳ ಹಿಂದೆಯೂ ಇದೇ ಭಾಗದಲ್ಲಿ ಕಾರ್ಮಿಕರೊಬ್ಬರನ್ನು ತುಳಿದು ಸಾಯಿಸಿತ್ತು. ಆನೆಯು ವಿದ್ಯುತ್ ಪ್ರವಹಿಸಿದ್ದರಿಂದ ಮೃತಪಟ್ಟಿರುವಂತೆ ತೋರುತ್ತಿದ್ದು, ಆನೆ ಸಾವನ್ನಪ್ಪಿರುವ ಜಾಗದಲ್ಲಿ ವಿದ್ಯುತ್ ತಂತಿ ಹಾದು ಹೋಗಿದೆ. ವಿದ್ಯುತ್ ಲೈನ್ ಪಕ್ಕದಲ್ಲಿ ಹಲಸಿನ ಮರವೂ ಇದೆ. ಆನೆ ಹಲಸಿನ ಹಣ್ಣು ತಿನ್ನುವ ಪ್ರಯತ್ನದಲ್ಲಿ ವಿದ್ಯುತ್ ತಂತಿಗೆ ದೇಹ ತಾಗಿ ಮೃತಪಟ್ಟಿದೆ. ಪಕ್ಕದಲ್ಲಿರುವ ಹಲಸಿನ ಮರದ ಕೊಂಬೆ ಮುರಿದು ಬಿದ್ದಿದೆ.ಅರಣ್ಯ ಇಲಾಖೆ ಅಧಿಕಾರಿಗಳು, ಸಿಬ್ಬಂದಿ ಮತ್ತು ಮೆಸ್ಕಾಂ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಬೀದರ : ಅಕ್ರಮವಾಗಿ ಗಾಂಜಾ ಸಾಗಾಟ ಮಾಡುತ್ತಿದ್ದ ವಾಹನದ ಮೇಲೆ ಖಚಿತ ಮಾಹಿತಿಯ ಮೇರೆಗೆ ಬೆಂಗಳೂರಿನ NCB ಅಧಿಕಾರಿಗಳು ಹಾಗೂ ಬೀದರ್ ಪೊಲೀಸರು ದಾಳಿ ಮಾಡಿ ಸುಮಾರು 15 ಕೋಟಿಗೂ ಮೌಲ್ಯದ ಅಧಿಕ ಗಾಂಜಾವನ್ನು ಇದೀಗ ಬೀದರ್ ಜಿಲ್ಲೆಯ ಔರಾದ ತಾಲೂಕಿನ ವನಮಾರಪಳ್ಳಿ ಬಳಿ ಜಪ್ತಿ ಮಾಡಿಕೊಂಡಿದ್ದಾರೆ. ಜಿಲ್ಲೆಯ ಔರಾದ ತಾಲೂಕಿನ ವನಮಾರಪಳ್ಳಿ ಬಳಿ NCB ಅಧಿಕಾರಿಗಳು ಕಾರ್ಯಾಚರಣೆ ನಡೆಸಿದ್ದಾರೆ. ಒಡಿಶಾದಿಂದ ಮಹಾರಾಷ್ಟ್ರಕ್ಕೆ ಅಕ್ರಮವಾಗಿ ಗಾಂಜಾ ಸಾಗಿಸುತ್ತಿದ್ದರು. ಹಾಗಾಗಿ ಖಚಿತವಾದಂತ ಮಾಹಿತಿಯನ್ನು ಪಡೆದುಕೊಂಡು ಬೆಂಗಳೂರಿನ ಎನ್ ಸಿ ಬಿ ಅಧಿಕಾರಿಗಳು ಹಾಗೂ ಪೊಲೀಸರಿಂದ ಈ ಒಂದು ಕಾರ್ಯಾಚರಣೆ ನಡೆಸಲಾಗಿದೆ. ಔರಾದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನವದೆಹಲಿ : ಇಲ್ಲಿನ ಬುರಾರಿ ಸರ್ಕಾರಿ ಆಸ್ಪತ್ರೆ ಮತ್ತು ಮಂಗೋಲ್ಪುರಿಯ ಸಂಜಯ್ ಗಾಂಧಿ ಆಸ್ಪತ್ರೆಯಲ್ಲಿ ಬಾಂಬ್ ಬೆದರಿಕೆ ಕೇಳಿ ಬಂದಿತ್ತು. ಇದಾದ ಬಳಿಕ ಅಂದರೆ 2 ಗಂಟೆ ಅಂತರದಲ್ಲೇ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೂ ಬಾಂಬ್ ಬೆದರಿಕೆಯ ಇಮೇಲ್ ಬಂದಿದೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ. ಆಸ್ಪತ್ರೆಗಳಿಗೆ ಬಾಂಬ್ ಬೆದರಿಕೆ ಸ್ವೀಕರಿಸಿದ 2 ಗಂಟೆಗಳ ಅಂತರದಲ್ಲೇ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೂ ಬಾಂಬ್ ಬೆದರಿಕೆ ಇಮೇಲ್ ಬಂದಿದೆ.ಕೂಡಲೇ ಎಚ್ಚೆತ್ತುಕೊಂಡಿರುವ ದೆಹಲಿ ಪೊಲೀಸರು ಅಗ್ನಿಶಾಮಕ ದಳದ ಅಧಿಕಾರಿಗಳೊಂದಿಗೆ ಶೋಧಕಾರ್ಯ ನಡೆಸುತ್ತಿದ್ದಾರೆ. IGI ಟರ್ಮಿನಲ್-3 ರಲ್ಲಿ ಭಾನುವಾರ ಸಂಜೆ 6:19ಕ್ಕೆ ಕರೆ ಬಂದಿದೆ. ಬಾಂಬ್ ಪತ್ತೆ ಮತ್ತು ನಿಷ್ಕ್ರಿಯ ದಳ, ಕ್ರೈಂ ಬ್ರಾಂಚ್ ಅಧಿಕಾರಿ ತಂಡಗಳು ಆಸ್ಪತ್ರೆಗೆ ತೆರಳಿ ಶೋಧಕಾರ್ಯ ನಡೆಸುತ್ತಿವೆ. ಮತ್ತೊಂದು ಕಡೆ ಇ-ಮೇಲ್ ಮೂಲವನ್ನು ತನಿಖೆ ನಡೆಸುತ್ತಿದ್ದಾರೆ. ಸದ್ಯ ಆಸ್ಪತ್ರೆ ಹೊರಗೆ ಯಾವುದೇ ಅನುಮಾನಾಸ್ಪದ ವಸ್ತುಗಳು ಪತ್ತೆಯಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ವಿಜಯಪುರ : ಕಳೆದ ವರ್ಷದಿಂದ ರಾಜ್ಯದಲ್ಲಿ ಭೀಕರ ಬರಗಾಲ ಆವರಿಸಿತ್ತು. ಇದರಿಂದ ಇಡೀ ರಾಜ್ಯದ ಜನರು ಬರಗಾಲಕ್ಕೆ ತತ್ತರಿಸಿ ಹೋಗಿದ್ದರು. ಇದೀಗ ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ಅರ್ಜುಣಗಿ ಗ್ರಾಮದಲ್ಲಿ ಸಾಲ ಬಾಧೆ ತಾಳಲಾರದೇ ರೈತ ಮಹಿಳೆಯೊಬ್ಬರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.ರುಕ್ಮವ್ವ ದುಂಡಪ್ಪ ಬಾಡಿಗಿ ಆತ್ಮಹತ್ಯೆಗೆ ಶರಣಾದ ರೈತ ಮಹಿಳೆ ಎಂದು ತಿಳಿದುಬಂದಿದೆ. ಹೌದು ಕಳೆದ ವರ್ಷದಿಂದ ರಾಜ್ಯವು ಮಳೆ ಬಾರದೇ ತೀವ್ರ ಬರಗಾಲ ಎದುರಿಸಿತ್ತು. ರೈತರು ಬೆಳೆಗಳಿಗೆ ನೀರಿಲ್ಲದೆ ಸಾಕಷ್ಟು ಕಷ್ಟ ಅನುಭವಿಸಿದ್ದರು. ಇದೀಗ ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ಅರ್ಜುಣಗಿ ಗ್ರಾಮದಲ್ಲಿ ಸಾಲ ಬಾಧೆ ತಾಳಲಾರದೇ ರೈತ ಮಹಿಳೆ ರುಕ್ಮವ್ವ ದುಂಡಪ್ಪ ಆತ್ಮಹತ್ಯೆಗೆ ಶರಣಾಗಿದ್ದಾರೆ. ರುಕ್ಮಿವ್ವ ದುಂಡಪ್ಪ ಅವರು, ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಗದ್ಯಾಳ ಗ್ರಾಮದಲ್ಲಿ ಜಮೀನು ಹೊಂದಿದ್ದರು.ಹಾಗಾಗಿ ಅದೇ ಗ್ರಾಮದ ಪ್ರಾಥಮಿಕ ಕೃಷಿ ಸಹಕಾರಿ ಬ್ಯಾಂಕಿನಲ್ಲಿ 1 ಲಕ್ಷ, ವಿಜಯಪುರ ಎಚ್ಡಿಎಫ್ಸಿ ಬ್ಯಾಂಕಿನಲ್ಲಿ 2.5 ಲಕ್ಷ, ಬಬಲೇಶ್ವರದ ಚೈತನ್ಯ ಪೈನಾನ್ಸ್ನಲ್ಲಿ 50…
ಬೀದರ್ : ಜಿಲ್ಲೆಯ ಬಸವಕಲ್ಯಾಣದಲ್ಲಿ ನೈತಿಕ ಪೊಲೀಸ್ಗಿರಿ ಘಟನೆ ನಡೆದಿದ್ದು, ಬಸವಕಲ್ಯಾಣದ ಹೊರವಲಯದ ಪಾರ್ಕ್‌ನಲ್ಲಿ ಹಿಂದೂ ಧರ್ಮೀಯ ವ್ಯಕ್ತಿ ಜತೆ ಕುಳಿತಿದ್ದಕ್ಕೆ ಮುಸ್ಲಿಂ ಧರ್ಮೀಯ ಮಹಿಳೆ ಮೇಲೆ ಅದೇ ಧರ್ಮದ ಕೆಲ ಯುವಕರು ಹಲ್ಲೆ ಮಾಡಿದ್ದರು ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.ಘಟನೆ ಕುರಿತಂತೆ ಇದೀಗ ಪೊಲೀಸರು ಮೂವರನ್ನು ಬಂಧಿಸಿದ್ದಾರೆ. ಇಂದು ಬೆಳಿಗ್ಗೆ ಬಸವಕಲ್ಯಾಣದ ಹೊರವಲಯದ ಪಾರ್ಕ್‌ನಲ್ಲಿ ಹಿಂದೂ ಧರ್ಮೀಯ ವ್ಯಕ್ತಿ ಜೊತೆ ಕುಳಿತಿದ್ದಕ್ಕೆ ಮುಸ್ಲಿಂ ಧರ್ಮೀಯ ಮಹಿಳೆ ಮೇಲೆ ಅದೇ ಧರ್ಮದ ಕೆಲ ಯುವಕರು ಹಲ್ಲೆ ಮಾಡಿದ್ದರು.ವ್ಯಕ್ತಿ ಆಟೋ ಚಾಲಕನಾಗಿದ್ದು, ಈತನ ಜೊತೆಗೆ ನೀನು ಅನೈತಿಕ ಸಂಬಂಧ ಇಟ್ಟುಕೊಂಡಿದ್ದೀಯಾ, ಮುಸ್ಲಿಮರ ಹೆಸರು ಹಾಳು ಮಾಡುತ್ತೀಯಾ ಎಂದು ಕೆಲ ಮುಸ್ಲಿಂ ಯುವಕರು ಮಹಿಳೆ ಮೇಲೆ ಹಲ್ಲೆ ನಡೆಸಿದ್ದರು. ಸದ್ಯ ಪೊಲೀಸರು ಮೂವರನ್ನ ಬಂಧಿಸಿದ್ದಾರೆ.ಘಟನೆ ಮೂರು ದಿನಗಳ ಹಿಂದೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ನೈತಿಕ ಪೊಲೀಸ್ ಗಿರಿ ನಡೆಸಿದ ಮೂವರನ್ನು ವಶಕ್ಕೆ ಪಡೆದಿದ್ದಾರೆ ಎಂದು…
ಬೆಂಗಳೂರು : ಹಾಸನ ಜಿಲ್ಲೆಯ ಹೊಳೆನರಸೀಪುರ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಶಾಸಕರಾಗಿರುವ ಎಚ್ ಡಿ ರೇವಣ್ಣ ಅವರ ವಿರುದ್ಧ ಮಹಿಳೆ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಅಪಹರಣಕ್ಕೆ ಒಳಗಾದ ಸಂತ್ರಸ್ತ ಮಹಿಳೆ ವಿಡಿಯೋ ಹೇಳಿಕೆ ಒಂದನ್ನು ಬಿಡುಗಡೆ ಮಾಡಿದ್ದು ಪ್ರಕರಣಕ್ಕೆ ಸ್ಫೋಟಕ ತಿರುವು ಸಿಕ್ಕಿದೆ. ಹೌದು ಅಪಹರಣಕ್ಕೆ ಒಳಗಾದ ಮಹಿಳೆ ಇದೀಗ ಸುಮಾರು 2 ನಿಮಿಷ 35 ಸೆಕೆಂಡುಗಳನ್ನು ಒಳಗೊಂಡಿರುವ ವಿಡಿಯೋವನ್ನು ಬಿಡುಗಡೆ ಮಾಡಿದ್ದೂ, ವಿಡಿಯೋದಲ್ಲಿ ನನ್ನನ್ನು ಯಾರು ಕಿಡ್ನ್ಯಾಪ್ ಮಾಡಿಲ್ಲ. ನಾನಾಗಿಯೇ ಮನೆಯಿಂದ ಬಂದಿದ್ದೇನೆ.ಭವಾನಿ, ಎಚ್ ಡಿ ರೇವಣ್ಣ, ಪ್ರಜ್ವಲ್ M ಹಾಗೂ ಬಾಬಣ್ಣರಿಂದ ಯಾವುದೇ ರೀತಿಯಾಗಿ ತೊಂದರೆ ಆಗಿಲ್ಲ. ನಮ್ಮ ಊರಿನವರು ಏನೇನು ಮಾತನಾಡಿದ್ದನು ಕೇಳಿ ಬೇಸರವಾಗಿತ್ತು ಹೀಗಾಗಿ ನಾಲ್ಕು ದಿನ ಇದ್ದು ಹೋಗೋಣವೆಂದು ನೆಂಟರ ಮನೆಗೆ ಬಂದಿದ್ದೇನೆ. ಸಂಬಂಧಿಕರ ಮನೆಯಲ್ಲಿ ಇದ್ದೇನೆ ಎರಡು ದಿನಗಳ ಬಳಿಕ ನಾನೇ ಬರುತ್ತೇನೆ.ನನ್ನ ಮಗ ಗೊತ್ತಿಲ್ಲದೆ ಗಾಬರಿಯಿಂದಾಗಿ ಹೀಗೆ ಮಾಡಿದ್ದಾನೆ. ನಾಲ್ಕು ಜನ ಕಾಲ ಕಳೆದು ಬರಲು ನಾನೇ ನೆಂಟರ ಮೆನೆಗೆ…
ಮೈಸೂರು : ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪೆನ್ ಡ್ರೈವ್ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಆರೋಪಿ ನವೀನ್ ಗೌಡ ಫೇಸ್ಬುಕ್ನಲ್ಲಿ ಪೆನ್ ಡ್ರೈವ್ ಅನ್ನು ಅರಕಲಗೂಡು ಶಾಸಕ ಎ ಮಂಜು ಅವರಿಗೆ ನೀಡಿದ್ದೇನೆ ಎಂದು ಪೋಸ್ಟ್ ಹಾಕಿದ್ದು, ಈ ಕುಡಿದಂತೆ ಮೈಸೂರಿನಲ್ಲಿ ಪ್ರತಿಕ್ರಿಯಿಸಿದ ಶಾಸಕ ಎ ಮಂಜು ನನಗೆ ಮಾಹಿತಿ ಇರೋ ಪ್ರಕಾರ ಈ ಪ್ರಕಾರಣ ಇಟ್ಟುಕೊಂಡು ಜೆಡಿಎಸ್ ಮುಗಿಸಲು ಷಡ್ಯಂತ್ರ ನಡೆಯುತ್ತಿದೆ ಆದರೆ ಯಾರಿಂದಲೂ ಅದು ಸಾಧ್ಯವಿಲ್ಲ ಎಂದು ತಿಳಿದರು. ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನವೀನ ಗೌಡ ಯಾರು ಅಂತಾನೆ ನನಗೆ ಗೊತ್ತಿಲ್ಲ. ಹಾಗಾಗಿ ಎಸ್ಐಟಿ ಅಧಿಕಾರಿಗಳು ಮೊದಲು ನವೀನ್ ಗೌಡನನ್ನು ಬಂಧಿಸಬೇಕು ಎಂದು ಹಾಸನ ಜಿಲ್ಲೆಯ ಅರಕಲಗೂಡು ಕ್ಷೇತ್ರದ ಜೆಡಿಎಸ್ ಶಾಸಕ ಮಂಜು ಹೇಳಿಕೆ ನೀಡಿದರು. ರಸ್ತೆಗಳು, ಪಾರ್ಕ್, ಅಂಗಡಿ ಮುಂಗಟ್ಟು ಮುಂದೆ ಪೆನ್ ಡ್ರೈವ್ ಎಸೆದಿದ್ದರು.ಊರಿಗೆಲ್ಲ ಹಂಚಿದ ಮೇಲೆ ನನಗೆ ಕೊಟ್ಟೆ ಎಂದು ಹೇಳಿದ್ದೇನೆ. ನಾನು ಎಚ್ ಡಿ ದೇವೇಗೌಡ ಕುಟುಂಬಕ್ಕೆ ಹತ್ತಿರವಾದ…
ಬೆಂಗಳೂರು : ಕೇವಲ ಲೋಕಸಭೆ ಚುನಾವಣೆಗೆ ಅಷ್ಟೇ ಬಿಜೆಪಿ ಜೆಡಿಎಸ್ ಮೈತ್ರಿ ಎಂದು ಹೇಳಲಾಗಿತ್ತು ಆದರೆ ಇದೀಗ ವಿಧಾನ ಪರಿಷತ್ ಚುನಾವಣೆಗೂ ಕೂಡ ಬಿಜೆಪಿ ಜೆಡಿಎಸ್ ಮೈತ್ರಿ ಮುಂದುವರೆದಿದೆ. ಇದೀಗ ವಿಧಾನ ಪರಿಷತ್ ಚುನಾವಣಾ ಟಿಕೆಟ್ ಹಂಚಿಕೆಯ ವಿಚಾರವಾಗಿ ಮಾಜಿ ಸಿಎಂ HD ಕುಮಾರಸ್ವಾಮಿ ಅವರ ಬೇಡಿಕೆಯಂತೆ ಜೆಡಿಎಸ್ ಗೆ ಎರಡು ಸ್ಥಾನ ಕೊಡಲು ಇದೀಗ ಬಿಜೆಪಿ ಒಪ್ಪಿಗೆ ಸೂಚಿಸಿದೆ. ದಕ್ಷಿಣ ಶಿಕ್ಷಕರ ಕ್ಷೇತ್ರ ಹಾಗೂ ನೈರುತ್ಯ ಶಿಕ್ಷಕರ ಕ್ಷೇತ್ರ ಇದೀಗ ಜೆಡಿಎಸ್ ಪಾಲಾಗಿದೆ. ಈ ಕುರಿತಂತೆ ಎಚ್ ಡಿ ಕುಮಾರಸ್ವಾಮಿ ದೂರವಾಣಿ ಮೂಲಕ ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ದ ಹಾಗೂ ಬಿವೈ ವಿಜಯೇಂದ್ರ ಜೊತೆಗೆ ಮಾತುಕತೆ ನಡೆಸಿದರು. ನಿನ್ನೆ ಇ.ಸಿ ನಿಂಗರಾಜು ಹೆಸರನ್ನು ಬಿಜೆಪಿ ಹೈಕಮಾಂಡ್ ಘೋಷಿಸಿತ್ತು.6 ಕ್ಷೇತ್ರಗಳಲ್ಲಿ ಪೈಕಿ 5 ಕ್ಷೇತ್ರಗಳ ಅಭ್ಯರ್ಥಿ ಹೆಸರನ್ನು ಬಿಜೆಪಿ ಘೋಷಣೆ ಮಾಡಿತ್ತು. ಹೀಗಾಗಿ ಒಟ್ಟು ಎರಡು ಕ್ಷೇತ್ರಗಳ ಬಗ್ಗೆ ಜೆಡಿಎಸ್ ನಿರೀಕ್ಷೆಯಲ್ಲಿತ್ತು ನಿರೀಕ್ಷೆಯಂತೆ ಇದೀಗ ಜೆಡಿಎಸ್ ಗೆ ಎರಡು ಕ್ಷೇತ್ರ…
ದೆಹಲಿ : ಇತ್ತೀಚಿಗೆ ದೆಹಲಿಯ ಶಾಲೆಗಳಿಗೆ ಬಾಂಬ್ ಬೆದರಿಕೆ ಬಂದ ಕೆಲವು ದಿನಗಳ ನಂತರ, ಮತ್ತೊಂದು ಸಂದೇಶ ಬಂದಿದ್ದು, ದೆಹಲಿಯ ಎರಡು ಪ್ರಸಿದ್ಧ ಆಸ್ಪತ್ರೆಗಳಿಗೆ ಇಂದು ಮಧ್ಯಾಹ್ನ ಇಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿದೆ. ಹೌದು ದೆಹಲಿಯ ಬುರಾರಿ ಸರ್ಕಾರಿ ಆಸ್ಪತ್ರೆ ಮತ್ತು ಮಂಗೋಲ್ಪುರಿಯ ಸಂಜಯ್ ಗಾಂಧಿ ಆಸ್ಪತ್ರೆಗೆ ಬಾಂಬ್ ಬೆದರಿಕೆ ಇಮೇಲ್ ಬಂದಿದೆ.ಮಾಹಿತಿ ಮೇರೆಗೆ ಬಾಂಬ್ ನಿಷ್ಕ್ರಿಯ ದಳ ಮತ್ತು ಅಗ್ನಿಶಾಮಕ ದಳದ ಹಲವು ತಂಡಗಳು ಸ್ಥಳಕ್ಕೆ ಧಾವಿಸಿವೆ. ಏತನ್ಮಧ್ಯೆ, ಡಿಸಿಪಿ (ಉತ್ತರ) ಮನೋಜ್ ಮೀನಾ ಅವರು ಅನುಮಾನಾಸ್ಪದವಾಗಿ ಏನೂ ಪತ್ತೆಯಾಗಿಲ್ಲ ಎಂದು ಹೇಳಿದರು. ಬಾಂಬ್ ಬೆದರಿಕೆಯ ಕುರಿತು ಬುರಾರಿ ಆಸ್ಪತ್ರೆಯಲ್ಲಿ ಇಮೇಲ್ ಸ್ವೀಕರಿಸಲಾಗಿದೆ. ಸ್ಥಳೀಯ ಪೊಲೀಸರು, ಬಾಂಬ್ ನಿಷ್ಕ್ರಿಯ ತಂಡಗಳು (ಬಿಡಿಟಿ) ಆಸ್ಪತ್ರೆಯಲ್ಲಿದ್ದಾರೆ. ಇನ್ನೂ ಅನುಮಾನಾಸ್ಪದವಾಗಿ ಏನೂ ಪತ್ತೆಯಾಗಿಲ್ಲ ಎಂದು ದೆಹಲಿ ಪೊಲೀಸರು ಹೇಳಿಕೆಯಲ್ಲಿ ತಿಳಿಸಿದ್ದಾರೆ. ಮೊದಲ ಕರೆಯನ್ನು ಅಗ್ನಿಶಾಮಕ ಅಧಿಕಾರಿಗಳು ಮಧ್ಯಾಹ್ನ 3.15 ಗಂಟೆಗೆ ಬುರಾರಿ ಆಸ್ಪತ್ರೆಯಿಂದ ಮತ್ತು ಎರಡನೇ ಕರೆಯನ್ನು ಸಂಜಯ್ ಗಾಂಧಿ ಸ್ಮಾರಕ ಆಸ್ಪತ್ರೆಯಿಂದ…