Author: kannadanewsnow05

ಬೆಂಗಳೂರು : ಭಯೋತ್ಪಾದಕ ಟಿ.ನಾಸಿರ್ ಗೆ ನೆರವು ನೀಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಲಾಖಾ ತನಿಖೆ ನಡೆಸಿ ವರದಿ ನೀಡಲು ಆದೇಶ ನೀಡಿದ್ದಾರೆ. CAR ಚಾನ್ ಪಾಷಾ ವಿರುದ್ಧ ತನಿಖೆ ನಡೆಸಿ ವರದಿ ನೀಡುವಂತೆ ಬೆಂಗಳೂರು ಕಮಿಷನರ್ ಸೀಮಂತ ಕುಮಾರ್ ಅದೇಶಿಸಿದ್ದಾರೆ. ಈ ಬಗ್ಗೆ ಕಮಿಷನರ್ ಸೀಮಂತ್ ಕುಮಾರ್ ಪ್ರತಿಕ್ರಿಯೆ ನೀಡಿದ್ದು, ಪೊಲೀಸ್ ಇಲಾಖೆಯಲ್ಲಿ ಏನು ಕ್ರಮ ಇದೆ ಅದನ್ನೇ ಕೈಗೊಳ್ಳುತ್ತೇವೆ. ಸೂಕ್ತ ತನಿಖೆಯ ಬಳಿಕ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದು  ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. ಉಗ್ರ ಟಿ ನಾಸಿರ್ ಜೈಲಿನಲ್ಲಿ ಇದ್ದುಕೊಂಡೇ ಬೆಂಗಳೂರಲ್ಲಿ ಬ್ಲಾಸ್ಟ್ ಮಾಡಲು ಪ್ಲಾನ್ ಮಾಡಿಕೊಂಡಿದ್ದ. ಇದಕ್ಕೆ ಎಎಸ್ಐ ಚಾನ್ ಪಾಷಾ ಮನೋವೈದ್ಯ ನಾಗರಾಜ್ ಹಾಗು ಫಾತಿಮಾ ಆತನಿಗೆ ಸಹಕಾರ ನೀಡಿದ್ದು, ಈ ಮೂವರನ್ನು ಇದೀಗ ಎನ್ಐಎ ಅರೆಸ್ಟ್ ಮಾಡಿದ್ದು, 6 ದಿನಗಳ ಕಾಲ ವಿಚಾರಣೆಗೆ ಎಂದು ಎನ್ ಐ ಎ ಮೂವರು ಆರೋಪಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

Read More

ಬೆಂಗಳೂರು : ದೆಹಲಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನಿನ್ನೆ ರಾಷ್ಟೀಯ ಸಂದರ್ಶನ ಒಂದರಲ್ಲಿ ಮಾತನಾಡಿ ನಾನೇ 5 ವರ್ಷಗಳ ಕಾಲ ಮುಖ್ಯಮಂತ್ರಿ ಆಗಿರುತ್ತೇನೆ. 2028ರಲ್ಲೂ ನನ್ನ ನೇತೃತ್ವದಲ್ಲಿ ಚುನಾವಣೆ ನಡೆಯಲಿದೆ ಎಂದು ಹೇಳಿಕೆ ನೀಡಿದ್ದರು. ಇದರ ಬೆನ್ನಲ್ಲೇ ಕಾಂಗ್ರೆಸ್ ಹೈಕಮಾಂಡ್ ಕೂಡ ಕರ್ನಾಟಕದಲ್ಲಿ ಯಾವುದೇ ನಾಯಕತ್ವ ಬದಲಾವಣೆ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ನವದೆಹಲಿಯಲ್ಲಿ ಸಂದರ್ಶನವೊಂದರಲ್ಲಿ ಮಾತನಾಡಿದ್ದ ಸಿದ್ದರಾಮಯ್ಯ, ಅಧಿಕಾರ ಹಂಚಿಕೆ ಬಗ್ಗೆ ಸ್ಪಷ್ಟ ಮಾತುಗಳನ್ನು ಆಡಿದ್ದರು. ರಾಹುಲ್ ಗಾಂಧಿ ಕೂಡ ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆ ಮಾಡುವ ಮನಸ್ಥಿತಿಯಲ್ಲಿ ಇಲ್ಲ ಎಂಬುದು ಮೂಲಗಳಿಂದ ತಿಳಿದು ಬಂದಿದೆ. ಈ ಸಂದೇಶ ಸಿಕ್ಕ ನಂತರವೇ ಸಿದ್ದರಾಮಯ್ಯ ಗಟ್ಟಿ ದನಿಯಲ್ಲಿ ನಾಯಕತ್ವ ಬದಲಾವಣೆ ಇಲ್ಲ ಎಂಬ ಮಾತುಗಳನ್ನಾಡಿದ್ದಾರೆ. ಮತ್ತೊಂದೆಡೆ, ಕಾಂಗ್ರೆಸ್ ಹೈಕಮಾಂಡ್ ಸಚಿವರ ಕಾರ್ಯ ವೈಖರಿ ಪ್ರಗತಿಯ ಪರಿಶೀಲನೆಯಲ್ಲಿ ತೊಡಗಿಕೊಂಡಿದೆ. ಈಗಾಗಲೇ ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀರ್ ಸುರ್ಜೇವಾಲ ಬೆಂಗಳೂರಿಗೆ ಎರಡು ಬಾರಿ ಆಗಮಿಸಿದ್ದು ಶಾಸಕರ ಜೊತೆ ಪ್ರತ್ಯೇಕ ಮಾತುಕತೆ ನಡೆಸಿದ್ದಾರೆ. ಮುಂದಿನ ದಿನಗಳಲ್ಲಿ ಸಚಿವರ ಜೊತೆಗೂ…

Read More

ಮಡಿಕೇರಿ : ಮಡಿಕೇರಿಯಲ್ಲಿ ಹೃದಯವಿದ್ರಾವಕ ಘಟನೆ ಒಂದು ನಡೆದಿದ್ದು, ಶವ ಸಾಗಾಟಕ್ಕೂ ಜನರು ಪರದಾಟ ನಡೆಸುತ್ತಿದ್ದಾರೆ. ಸರಿಯಾದ ರಸ್ತೆ ಇಲ್ಲದೆ ಶವ ಸಾಗಾಟಕ್ಕೆ ಜನ ಪರದಾಟ ನಡೆಸಿದ್ದು, ಜಡಿ ಮಳೆಯಲ್ಲಿ ಜನರು ಶವ ಹೊತ್ತು ಸಾಗಿಸಿದ್ದ ಘಟನೆ ನಡೆದಿದೆ. ಮಡಿಕೇರಿ ನಗರದ ಕನ್ನಂಡ ಬಾಣೆ ಎಂಬಲ್ಲಿ ಈ ಒಂದು ಘಟನೆ ನಡೆದಿದೆ. ಮಡಿಕೇರಿಯಲ್ಲಿ ಶವ ಸಾಗಟಕ್ಕೂ ಜನ ಪರದಾಟ ನಡೆಸುತ್ತಿದ್ದಾರೆ. ಸರಿಯಾದ ರಸ್ತೆ ಇಲ್ಲದೆ ಶವ ಸಾಗಾಟಕ್ಕೆ ಜನರು ಪರದಾಟ ನಡೆಸುತ್ತಿದ್ದು, ಜನರು ಶವ ಹೊತ್ತು ಸಾಗಿಸಿದ ಘಟನೆ ನಡೆದಿದೆ. ಮಡಿಕೇರಿ ನಗರದ ಕನ್ನಡ ಬಾಣೆಯಲ್ಲಿ ಈ ಒಂದು ಘಟನೆ ನಡೆದಿದೆ. ಕನ್ನಂಡ ಬಾಣೆ ನಿವಾಸಿಗಳಿಗೆ ನರಕದ ಬದುಕು ಎದುರಾಗಿದ್ದು, ಗರ್ಭಿಣಿಯರನ್ನು ಕೂಡ ಕುರ್ಚಿಯಲ್ಲಿ ಕೂರಿಸಿ ಸಾಗಾಟ ನಡೆಸಲಾಗಿದೆ. ಕನ್ನಂಡ ಬಾಣೆಗೆ ರಸ್ತೆ ನಿರ್ಮಿಸಲು ಅರಣ್ಯ ಇಲಾಖೆ ಅಡ್ಡಿಪಡಿಸಲಾಗಿದ್ದು, ಬಡಾವಣೆಯ ಅಂಚಿನಲ್ಲಿ ಮೀಸಲು ಅರಣ್ಯ ಪ್ರದೇಶ ಇದೆ ಹಾಗಾಗಿ ಅರಣ್ಯ ಬದಿಯಲ್ಲಿ ರಚನೆ ನಿರ್ಮಿಸಿದಂತೆ ಇಲಾಖೆ ಅಡ್ಡಿಪಡಿಸುತ್ತಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.

Read More

ದಾವಣಗೆರೆ : ದಾವಣಗೆರೆಯಲ್ಲಿ ಘೋರವಾದ ದುರಂತ ಒಂದು ಸಂಭವಿಸಿದ್ದು, ತುಂಗಭದ್ರಾ ನದಿಗೆ ಅಡ್ಡಲಾಗಿ ನಿರ್ಮಿಸಿದ ರೈಲ್ವೇ ಸೇತುವೆ ಬಳಿ ತಾಯಿ ಮಗಳು ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದಾವಣಗೆರೆ ಜಿಲ್ಲೆಯ ಹರಿಹರ ಬಳಿ ಇರುವ ತುಂಗಭದ್ರಾ ನದಿ ಸೇತುವೆ ಬಳಿ ಈ ಒಂದು ಘಟನೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ತಾಯಿ ಮಗಳನ್ನ ಗಂಗನರಸಿ ಗ್ರಾಮದ ಸುವರ್ಣಮ್ಮ (65) ಮತ್ತು ಗೌರಮ್ಮ (45) ಆತ್ಮಹತ್ಯೆಗೆ ಶರಣಾಗಿದ್ದಾರೆ. ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಸದ್ಯ ಘಟನಾ ಸ್ಥಳಕ್ಕೆ ದಾವಣಗೆರೆ ಜಿಲ್ಲಾ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Read More

ಬೆಂಗಳೂರು : ಹಾಸನ ಜಿಲ್ಲೆಯಲ್ಲಿ ಹೃದಯಾಘಾತದಿಂದ ಸರಣಿ ಸಾವು ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಬೆಂಗಳೂರಿನ ಜಯದೇವ ಹೃದ್ರೋಗ ಆಸ್ಪತ್ರೆಯಲ್ಲಿ ತನಿಖಾ ತಂಡದಿಂದ ವರದಿ ಸ್ವೀಕರಿಸಿದರು. ಹೃದಯಘಾತದಿಂದ ಸರಣಿ ಸಾವಿನ ಬಗ್ಗೆ ತನಿಖಾ ವರದಿ ಸಲ್ಲಿಕೆಯಾಗಿದೆ. ಮೇ ಮತ್ತು ಜೂನ್ ತಿಂಗಳಲ್ಲಿ ಮೃತಪಟ್ಟ ನಾಲ್ವರು ಕಾರ್ಡಿಯಾಕ್ ಅರೆಸ್ಟ್ ನಿಂದ ಮೃತಪಟ್ಟಿಲ್ಲವೆಂಬುದು ದೃಢವಾಗಿದೆ ಎಂದರು. ಹೃದಯಾಘಾತಕ್ಕೂ ಕೋವಿಡ್ ಸಂಬಂಧ ಇಲ್ಲವೆಂದು ಹೇಳಲಾಗಿದೆ. ಮಾಹಿತಿಯ ಆಧಾರದ ಮೇಲೆ ಮಕ್ಕಳಿಗೆ ಸ್ಕ್ರೀನಿಂಗ್ ಶುರು ಮಾಡಲಿದ್ದೇವೆ. ಸಮುದಾಯ ಆರೋಗ್ಯ ಕೇಂದ್ರದಲ್ಲಿ ಇಸಿಜಿ ಅಳವಡಿಸಲು ತಜ್ಞರು ಸಲಹೆ ನೀಡಿದ್ದಾರೆ. ಹೃದಯ ಜ್ಯೋತಿ ಯೋಜನೆ ವಿಸ್ತರಣೆ ಮಾಡಬೇಕೆಂಬ ಆಲೋಚನೆ ಇದೆ. ಸಿಪಿಆರ್ ತರಬೇತಿ ನೀಡುವಂತೆ ಹೃದ್ರೋಗ ತಜ್ಞರು ಸಲಹೆ ನೀಡಿದ್ದಾರೆ. ಆಟೋ ಕ್ಯಾಬ್ ಚಾಲಕರಿಗೆ ಪ್ರತ್ಯೇಕ ಹೃದಯ ತಪಾಸಣೆಗೆ ಸಲಹೆ ನೀಡಿದ್ದಾರೆ. ಸ್ಕ್ರೀನಿಂಗ್ ಮಾಡಿಸಲು ಚಾಲಕರ ಸಂಘದ ಜೊತೆಗೆ ಮಾತುಕತೆ ಮಾಡುತ್ತೇವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್…

Read More

ಬೆಂಗಳೂರು : ಬೆಂಗಳೂರಲ್ಲಿ ರಾಜಕಾಲುವೆಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದ್ದು, ಬೆಂಗಳೂರಿನ ಆರ್ ವಿ ಕಾಲೇಜು ಹಿಂಭಾಗ ರಾಜಕಾಲುವೆಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆಯಾಗಿದೆ. ಕಳೆದ ಮೂರು ದಿನಗಳ ಹಿಂದೆ 35 ವರ್ಷದ ವ್ಯಕ್ತಿ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಕೊಳೆತ ಶವ ಕಂಡು ತಕ್ಷಣ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಘಟನಾ ಸ್ಥಳಕ್ಕೆ ಕೆಂಗೇರಿ ಠಾಣೆ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಮೃತಪಟ್ಟ ವ್ಯಕ್ತಿಯ ಎದೆಯ ಮೇಲೆ ಜಯ ಎಂದು ಹಚ್ಚೆ ಹಾಕಿಸಿಕೊಂಡಿರುವುದು ಪತ್ತೆಯಾಗಿದೆ. ಸದ್ಯ ಪೊಲೀಸರು ಮರಣೋತ್ತರ ಪರೀಕ್ಷೆಗಾಗಿ ಮೃತ ದೇಹವನ್ನು ಸ್ಥಳಾಂತರಿಸಿದ್ದಾರೆ. ರಾಜರಾಜೇಶ್ವರಿ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ಶವ ಶಿಫ್ಟ್ ಆಗಿದ್ದು ಪೊಲೀಸರು ಅನುಮಾನಾಸ್ಪದ ಸಾವು ಎಂದು ಕೇಸ್ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ. ಕೆಂಗೇರಿ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು : ರಾಜ್ಯದಲ್ಲಿ ಸರಣಿ ಹೃದಯಾಘಾತ ಸಾವು ಸಂಭವಿಸುತ್ತಿದ್ದು ರಾಜ್ಯ ಸರ್ಕಾರ ಇತ್ತೀಚಿಗೆ ತಾಂತ್ರಿಕ ಸಲಹಾ ಸಮಿತಿ ಒಂದನ್ನು ರಚನೆ ಮಾಡಿದ್ದು ಹೃದಯಾಘಾತದಿಂದ ಸಾವನ್ನಪ್ಪಿರುವವರ ಕುರಿತು ಸಂಪೂರ್ಣ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ರಾಜ್ಯ ಸರ್ಕಾರ ತನಿಖಾ ತಂಡಕ್ಕೆ ಸೂಚನೆ ನೀಡಿತ್ತು. ಇದೀಗ ತನಿಖೆ ಪೂರ್ಣಗೊಳಿಸಿರುವ ತಂಡ ಎಂದು ರಾಜ್ಯ ಸರ್ಕಾರಕ್ಕೆ ವರದಿ ಸಲ್ಲಿಸಿದೆ.. ಹೌದು ರಾಜ್ಯ ಸರ್ಕಾರಕ್ಕೆ ಇಂದು ಹೃದಯಘಾತದ ವರದಿ ಸಲಿಕೆ ಆಗಿದೆ. ಹಾಸನ ಜಿಲ್ಲೆಯಲ್ಲಿನ ಸರಣಿ ಹೃದಯಾಘಾತದ ರಿಪೋರ್ಟ್ ಸಲ್ಲಿಕೆಯಾಗಿದ್ದು, ಮೂರು ಹಂತದ ತನಿಖಾ ವರದಿ ತನಿಖಾ ತಂಡ ಸಲ್ಲಿಸಿದೆ. ಬೆಂಗಳೂರಿನ ಜಯದೇವ ಆಸ್ಪತ್ರೆಗೆ ತನಿಖಾ ತಂಡ ಆಗಮಿಸಿದ್ದು, ಅಂತಿಮ ವರದಿಯನ್ನು ವಿಮರ್ಶೆ ನಡೆಸಿ, ವಿಮರ್ಶೆ ಮಾಡಿದ ಬಳಿಕ ಆರೋಗ್ಯ ಸಚಿವರಿಗೆ ವರದಿ ಸಲ್ಲಿಕೆ ಮಾಡಲಾಯಿತು. ವರದಿ ಸಲ್ಲಿಕೆ ಆದ ನಂತರ ಸಚಿವ ದಿನೇಶ್ ಗುಂಡೂರಾವ್ ಸುದ್ದಿಗೋಷ್ಠಿ ನಡೆಸಲಿದ್ದಾರೆ. 3 ಮಾದರಿ ಯಾವವು? ಮಾದರಿ 1ರಲ್ಲಿ ಮರಣೋತ್ತರ ಪರೀಕ್ಷೆ ಯಾಗಿರುವ ಪ್ರಕರಣಗಳ ವರದಿ ಇರಲಿದ್ದು, ಮಾದರಿ 2…

Read More

ಬೆಂಗಳೂರು : ಬೆಂಗಳೂರಲ್ಲಿ ಇಂದು ಮಧ್ಯಾಹ್ನ 2:30 ಸುಮಾರಿಗೆ ಭೀಕರವಾದ ಅಪಘಾತ ಸಂಭವಿಸಿದ್ದು ವೇಗವಾಗಿ ಬಂದಂತಹ ಲಾರಿ ಬೈಕಿಗೆ ಡಿಕ್ಕಿ ಆದ ಪರಿಣಾಮ, ಬೈಕ್ ಮೇಲಿದ್ದ ಮಹಿಳೆ ರಸ್ತೆ ಮೇಲೆ ಬಿದ್ದಿದ್ದಾಳೆ. ಈ ವೇಳೆ ಲಾರಿ ಮಹಿಳೆ ಮೇಲೆ ಹರಿದು ಆಕೆ ದೇಹ ಸಂಪೂರ್ಣ ಅಪ್ಪಚ್ಚಿಯಾಗಿರುವ ಘಟನೆ ಬೆಂಗಳೂರಿನ 8ನೇ ಮೈಲಿ ಬಳಿ ನಡೆದಿದೆ. ಲಾರಿ ಚಾಲಕನ ಅಟ್ಟಹಾಸಕ್ಕೆ ಮಹಿಳೆಯ ದೇಹ ಅಪ್ಪಚ್ಚಿಯಾಗಿದೆ, ಬೆಂಗಳೂರಿನ ಪೀಣ್ಯಾದ 8ನೇ ಮೈಲಿ ಬಳಿ ಬೈಕ್ ಮೇಲೆ ಲಾರಿ ಹರಿದು ಭೀಕರ ಅಪಘಾತ ಸಂಭವಿಸಿದೆ. ಆದರೆ ಘಟನೆಯಲ್ಲಿ ಒಂದು ವರ್ಷದ ಮಗು ಹಾಗೂ ಗಂಡ ಪ್ರಾಣಾಪಾಯದಿಂದ ಪಾರಾಗಿದ್ದಾರೆ.ಬೈಕ್ ಹಿಂಬದಿ ಕುಳಿತಿದ್ದ ಪತ್ನಿ ಲಕ್ಷ್ಮಿ ಸ್ಥಳದಲ್ಲೇ ಸಾವನಪ್ಪಿದ್ದಾರೆ. ರೊಚ್ಚಿಗೆದ್ದ ಸ್ಥಳೀಯರು ಲಾರಿ ಮೇಲೆ ಕಲ್ಲುತೂರಾಟ ನಡೆಸಿದ್ದಾರೆ. ಕಲ್ಲುತ್ತೂರಿ ಲಾರಿ ಚಾಲಕನಿಗೆ ಹಲ್ಲೆ ಮಾಡಿದ್ದಾರೆ. ತಳಕ್ಕೆ ಪಿಣ್ಯ ಠಾಣೆ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Read More

ಬೆಂಗಳೂರು : ಉಗ್ರರಿಗೆ ಸಹಕಾರ ನೀಡುತ್ತಿದ್ದ ಮೂವರು ಶಂಕಿತ ಉಗ್ರರನ್ನು ನಿನ್ನೆ ಸಿಸಿಬಿ ಅಧಿಕಾರಿಗಳು ಅರೆಸ್ಟ್ ಮಾಡಿದ್ದು, 6 ದಿನಗಳ ಕಾಲ ಹೆಚ್ಚಿನ ವಿಚಾರಣೆಗೆ ಸಿಸಿಬಿ ಮೂವರು ಉಗ್ರರನ್ನು ಕಸ್ಟಡಿಗೆ ಪಡೆದುಕೊಂಡಿದೆ. ಇದೀಗ ವಿಚಾರಣೆಯ ವೇಳೆ ಸ್ಪೋಟಕ ಅಂಶ ಬಯಲಾಗಿದ್ದು ಬೆಂಗಳೂರಲ್ಲಿ ಬಾಂಬೆ ಸ್ಪೋಟಿಸಿ ಉಗ್ರ ನಾಸಿರ್ ನನ್ನು ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಗೊಳಿಸುವ ಪ್ಲಾನ್ ಶಂಕಿತ ಉಗ್ರರು ಮಾಡಿದ್ದರು ಎಂದು ತಿಳಿದು ಬಂದಿದೆ. ಹೌದು. 2008ರ ಬೆಂಗಳೂರು ಸ್ಫೋಟದಲ್ಲಿ ಜೈಲುಪಾಲಾಗಿರುವ ಲಷ್ಕರ್‌ ಸಂಘಟನೆಯ ಉಗ್ರ ನಾಸೀರ್‌ ಮುಸ್ಲಿಂ ಯುವಕರ ತಂಡ ಬಳಸಿ ಹೊರ ಬರಲು ಖತರ್ನಾಕ್‌ ಪ್ಲ್ಯಾನ್‌ ಮಾಡಿದ್ದ ವಿಚಾರ ಎನ್‌ಐಎ ಮೂಲಗಳಿಂದ ತಿಳಿದು ಬಂದಿದೆ.ಬಾಂಬ್‌ ಸ್ಫೋಟಿಸಿ  ಸಿನಿಮಾ ಸ್ಟೈಲ್‌ನಲ್ಲಿ ಪರಪ್ಪನ ಅಗ್ರಹಾರದಿಂದ ಪರಾರಿಯಾಗಲು ಟಿ ನಾಸೀರ್‌ಮುಂದಾಗಿದ್ದ ಸ್ಫೋಟಕ ವಿಚಾರ ರಾಷ್ಟ್ರೀಯ ತನಿಖಾ ದಳದ ವಿಚಾರಣೆಯಲ್ಲಿ ಬೆಳಕಿಗೆ ಬಂದಿದೆ. ಈ ಸಂಚು ರೂಪಿಸಲು ಎಎಸ್‌ಐ ಚಾಂದ್‌ ಪಾಷಾ ನೆರವು ನೀಡುವುದಾಗಿ ಹೇಳಿದ್ದ. ಸಿಎಆರ್ ಉತ್ತರ ವಿಭಾಗದಲ್ಲಿರುವ ಚಾಂದ್‌ ಪಾಷಾ ನಾಸೀರ್‌ನನ್ನು…

Read More

ಕಲಬುರ್ಗಿ : ಕಲ್ಬುರ್ಗಿಯಲ್ಲಿ ಘೋರ ದುರಂತ ಒಂದು ಸಂಭವಿಸಿದ್ದು, 7ನೇ ತರಗತಿ ವಿದ್ಯಾರ್ಥಿ ಒಬ್ಬ ವಸತಿ ಶಾಲೆಯ ಕೊಠಡಿಯಲ್ಲೆ ಫ್ಯಾನ್ ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕಲಬುರ್ಗಿ ಜಿಲ್ಲೆಯ ಸೇಡಂ ಪಟ್ಟಣದಲ್ಲಿ ನಡೆದಿದೆ. ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿಯನ್ನು ನಾರಾಯಣ ಪಾಳ (13) ಎಂದು ತಿಳಿದುಬಂದಿದೆ. ಕಲಬುರ್ಗಿ ಜಿಲ್ಲೆಯ ಸೇಡಂ ತಾಲೂಕಿನಲ್ಲಿರುವ ಇಂದಿರಾ ಗಾಂಧಿ ಬಾಲಕರ ವಸತಿ ಶಾಲೆಯಲ್ಲಿ ಈ ಘಟನೆ ನಡೆದಿದೆ. ವಿದ್ಯಾರ್ಥಿ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ ಸ್ಥಳಕ್ಕೆ ಮುಧೋಳ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Read More