Author: kannadanewsnow05

ಹಾವೇರಿ : ಹಾವೇರಿಯಲ್ಲಿ ಪೋಷಕರು ಬೈದಿದ್ದಕ್ಕೆ ಮನೆ ಬಿಟ್ಟು ಹೋಗಿದ ಅಕ್ಕ-ತಂಗಿ ಇದೀಗ ಪುಣೆಯಲ್ಲಿ ಪತ್ತೆಯಾಗಿದ್ದಾರೆ. ಹಾವೇರಿಯಲ್ಲಿ ಇಬ್ಬರು ಸಹೋದರಿಯರು ಶಾಲೆಯಿಂದ ನಾಪತ್ತೆಯಾಗಿದ್ದರು. ಹಾವೇರಿಯ ಅಬ್ದುಲ್ ಖಾದರ್ ಲೋಹರ್ ಪುತ್ರಿಯರು ನಾಪತ್ತೆಯಾಗಿದ್ದರು ನಗರದ ಲಯನ್ಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸಹೋದರಿಯರಿಬ್ಬರು ಓದುತ್ತಿದ್ದರು. ಶನಿವಾರ ಶಾಲೆ ಮುಗಿಯುತ್ತಿದ್ದಂತೆ ವಿದ್ಯಾರ್ಥಿನಿಯರು ಕಾಣೆಯಾಗಿದ್ದರು. ಉಮ್ಮರ್ ಫಾತಿಮಾ ಹಾಗೂ ಉಮ್ಮಿ ಹಬೀಬಾ ನಾಪತ್ತೆಯಾಗಿದ್ದರು. ಮಕ್ಕಳು ನಾಪತ್ತೆಯಾಗಿದ್ದರಿಂದ ಆತಕದಿಂದ ಪೋಷಕರು ಹಾವೇರಿಯ ಮಹಿಳಾ ಠಾಣೆಗೆ ದೂರು ನೀಡಿದ್ದಾರೆ. ಫಾತಿಮಾ ಮತ್ತು ಉಮ್ಮಿ ಹಬಿಬ ನಾಪತ್ತೆ ಪ್ರಕರಣದ ದಾಖಲಿಸಿಕೊಂಡ ಪೊಲೀಸರು ಇಬ್ಬರಿಗಾಗಿ ಶೋಧ ಕಾರ್ಯ ನಡೆಸಿದ್ದಾರೆ. ಈ ವೇಳೆ ಫಾತಿಮಾ ಮತ್ತು ಉಮ್ಮಿ ಹಬಿಬ ಮಹಾರಾಷ್ಟ್ರದ ಪುಣೆಯಲ್ಲಿ ಪತ್ತೆಯಾಗಿದ್ದಾರೆ ಎಂದು ತಿಳಿದು ಬಂದಿದೆ. ಇದೀಗ ಇಬ್ಬರನ್ನು ಪತ್ತೆಹಚ್ಚಿದ ಪೊಲೀಸರು ಪೋಷಕರಿಗೆ ಒಪ್ಪಿಸಿದ್ದಾರೆ.

Read More

ಬಾಗಲಕೋಟೆ : ರಾಜ್ಯದಲ್ಲಿ ಹೃದಯಾಘಾತದ ಸರಣಿ ಸಾವು ಮುಂದುವರೆದಿದ್ದು, ಮಲಗಿದ್ದಲ್ಲೇ ರೈತರೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಬಾಗಲಕೋಟೆ ಜಿಲ್ಲೆಯಲ್ಲಿ ನಡೆದಿದೆ. ಬಾಗಲಕೋಟೆ ಜಿಲ್ಲೆಯ ಗುಳೇದ್ ಗುಡ್ಡ ತಾಲೂಕಿನ ಮುರಡಿ ಗ್ರಾಮದ ಮನೆಯಲ್ಲಿ ರೈತ ಅಂದಾನಪ್ಪ (43) ಹೃದಯಾಘಾತದಿಂದ ಮೃತಪಟ್ಟಿದ್ದಾರೆ.ರಾತ್ರಿ ಎದೆನೋವು ಎಂದು ಹೇಳಿ ರೈತ ಅಂದಾನಪ್ಪ, ಪಿತ್ತ ಇರಬೇಕೆಂದು ಮಲಗಿದ್ದ ಅಂದಾನಪ್ಪ ಸೂಡಿ ಬೆಳಗ್ಗೆ 7 ಗಂಟೆಯಾದ್ರೂ ಮೇಲೇಳದಿದ್ದಾಗ ಎಬ್ಬಿಸಲು ಹೋದಾಗ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

Read More

ಕೊಡಗು : ಕೊಡಗು ಜಿಲ್ಲೆಯಲ್ಲಿ ಮಳೆ ಆರ್ಭಟ ಜೋರಾಗಿದ್ದು, ಅಪಾಯದ ಮಟ್ಟ ಮೀರಿ ನದಿ ಮತ್ತು ಹಳ್ಳಕೊಳ್ಳಗಲು ತುಂಬಿ ಹರಿಯುತ್ತಿವೆ. ಇದೆ ವೇಳೆ ಚಲಿಸುತ್ತಿದ್ದ ಕಾರಿನ ಮೇಲೆ ಬೃಹತ್ ಗಾತ್ರದ ಮರ ಒಂದು ಇದೆ ವೇಳೆ ಮುರಿದು ಬಿದ್ದಿದೆ. ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಬಜಿಗುಂಡಿ ಗ್ರಾಮದಲ್ಲಿ ಈ ಒಂದು ಘಟನೆ ಸಂಭವಿಸಿದೆ ಕೂದಲನೆ ಅಂತರದಲ್ಲಿ ಕಾರು ಚಾಲಕ ಚರಣ್ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಗಾಳಿ ಸಹಿತ ಮರಗಳು ಮತ್ತು ವಿದ್ಯುತ್ ಕಂಬಗಳು ದೊರೆಗುರುಳಿವೆ. ಹೀಗಾಗಿ ಕೊಡಗು ಜಿಲ್ಲಾಡಳಿತ ಮತ್ತು ಎನ್ ಡಿ ಆರ್ ಆರ್ ಸಿಬ್ಬಂದಿ ಅಲರ್ಟ್ ಆಗಿದೆ.

Read More

ಬೆಂಗಳೂರು : ನಿನ್ನೆ ಕೊಪ್ಪಳ ಜಿಲ್ಲೆಯಲ್ಲಿ ಯೂರಿಯಾ ಗೊಬ್ಬರದ ಕೊರತೆಯಿಂದ ಎಲ್ಲ ರಸಗೊಬ್ಬರ ಅಂಗಡಿಗಳಲ್ಲಿ ನೋ ಸ್ಟಾಕ್ ಎಂದು ಬೋರ್ಡ್ ಹಾಕಲಾಗಿದೆ. ಬೆಳಿಗ್ಗೆ ಇಂದ ರಾತ್ರಿ ವರೆಗೂ ಸರತಿ ಸಾಲಲ್ಲಿ ನಿಂತರು ಗೊಬ್ಬರ ಸಿಕ್ಕಿಲ್ಲ ಇದರಿಂದ ಬೇಸತ್ತ ಕುಣಿಕೆರಿ ತಾಂಡಾ ನಿವಾಸಿ ಬಸಪ್ಪ ಬಡಿಗಿ ಮಣ್ಣು ತಿಂದು ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ. ಇದೆ ವಿಚಾರವಾಗಿ ವಿಪಕ್ಷ ನಾಯಕ ಆರ್ ಅಶೋಕ್ ಸರ್ಕಾರದ ವಿರುದ್ಧ ಕಿಡಿ ಕಾರಿದ್ದು, ಅನ್ನ ನೀಡುವ ರೈತರಿಗೆ ಮಣ್ಣು ಮುಕ್ಕಿಸಿದ ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಧಿಕಾರ. ಈ ಬಾರಿ ಮುಂಗಾರು ಒಂದು ತಿಂಗಳು ಮುಂಚಿತವಾಗಿ ಬಂದಾಗಲೇ ಎಚ್ಚೆತ್ತುಕೊಂಡು ಅಗತ್ಯ ಪ್ರಮಾಣದ ರಸಗೊಬ್ಬರ ದಾಸ್ತಾನು, ವಿತರಣೆ ಬಗ್ಗೆ ಗಮನ ಹರಿಸಬೇಕಾಗಿದ್ದ ಕಾಂಗ್ರೆಸ್ ಸರ್ಕಾರ, ಬಣ ಬಡಿದಾಟ, ಕುರ್ಚಿ ಕಿತ್ತಾಟದ ಭರಾಟೆಯಲ್ಲಿ ರೈತರನ್ನು ಸಂಪೂರ್ಣವಾಗಿ ನಿರ್ಲಕ್ಷ್ಯ ಮಾಡಿ ರೈತರು ಮಣ್ಣು ತಿನ್ನುವ ಪರಿಸ್ಥಿತಿ ತಂದಿಟ್ಟಿದೆ. ಅನ್ನದಾತರ ಶಾಪ ಈ ಕಾಂಗ್ರೆಸ್ ಸರ್ಕಾರಕ್ಕೆ ತಟ್ಟದೇ ಇರದು. https://twitter.com/RAshokaBJP/status/1949317307307794544?t=tdB45zykzFdHYw6kzTEw9w&s=19

Read More

ಹುಬ್ಬಳ್ಳಿ : ರಾಜ್ಯದಲ್ಲಿ ಒಂದೆಡೆ ಮುಖ್ಯಮಂತ್ರಿ ಸಿದ್ದರಾಮಯ್ಯ ಐದು ವರ್ಷಗಳ ಕಾಲ ಪೂರ್ಣವಧಿ ನಾನೇ ಸಿಎಂ ಆಗಿರುತ್ತೇನೆ. ಎಂದು ಹೇಳಿಕೆ ನೀಡುತ್ತಿದ್ದರೆ, ಇನ್ನೊಂದು ಕಡೆ ಡಿಸಿಎಂ ಡಿಕೆ ಶಿವಕುಮಾರ್ ಬೆಂಬಲಿತ ಶಾಸಕರು ಡಿಸೆಂಬರ್ ನಲ್ಲಿ ಡಿಕೆ ಶಿವಕುಮಾರ್ ಸಿಎಂ ಆಗಲಿದ್ದಾರೆ ಎಂದು ಹೇಳಿಕೆ ನೀಡಿದ್ದಾರೆ. ಇದೀಗ ನಾನು ಸಿಎಂ ಆಗೋಕೆ ಗುರು ಬಲ, ತಾರಾ ಬಲ ಬೇಕು, ಜೊತೆಗೆ ಶನಿಕಾಟ ಕಡಿಮೆ ಆಗ್ಬೇಕು ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮತನಾಡಿದ ಅವರು, ನಾನು ಸಿಎಂ ಆಗಲು ಗುರುಬಲ, ತಾರಾ ಬಲ ಕೂಡಬೇಕು. ಶನಿಕಾಟ ಕಡಿಮೆಯಾಗಬೇಕು. ಒಬ್ಬೊಬ್ಬರಿಗೆ ಒಂದೊಂದು ರೀತಿ ಸಮಸ್ಯೆ ಇವೆ. ನನಗೆ ಶನಿಕಾಟ ಇದೆ.ಸಿಎಂ ದೆಹಲಿ ಭೇಟಿ ವಿಚಾರವಾಗಿ, ಯಾವುದೇ ನಿಗಮ ಮಂಡಳಿ ನೇಮಕ ಪೈನಲ್ ಮಾಡುವುದಾದರೂ ರಾಹುಲ್ ಗಾಂಧಿಯವರಿಗೆ ಹೇಳಿ ಮಾಡ್ತಾರೆ. ವಾರಕ್ಕೊಮ್ಮೆ ದೆಹಲಿಗೆ ಹೋದರೂ ಕಡಿಮೆ. ನಿಗಮ ಮಂಡಳಿ ಚರ್ಚೆಗೆ ಹೋಗಿದ್ದಾರೆ. ಸಚಿವ ಸಂಪುಟ ವಿಸ್ತರಣೆಗೆ ಮುಹೂರ್ತ ಇನ್ನೂ ನಿಗದಿಯಾಗಿಲ್ಲ ಎಂದಿದ್ದಾರೆ. ರಾಜ್ಯಾಧ್ಯಕ್ಷ…

Read More

ಬೆಂಗಳೂರು : ಇತ್ತೀಚಿಗೆ ಬೆಂಗಳೂರಲ್ಲಿ ರೌಡಿಶೀಟರ್ ಬಿಕ್ಲು ಶಿವನನ್ನು ಮಾರಕಾಸರಗಳಿಂದ ಕೊಚ್ಚಿ ಭೀಕರವಾಗಿ ಕೊಲೆ ಮಾಡಲಾಗಿತ್ತು ಇದೀಗ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಾಳೆಯಿಂದ ಸಿಐಡಿ ತನಿಖೆ ಆರಂಭವಾಗಲಿದ್ದು, ಈಗಾಗಲೇ ಸಿಐಡಿ ತಂಡ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕೇಸ್ ಫೈಲ್ ತರಿಸಿಕೊಂಡಿದ್ದು ಎಸಿಪಿ ಪ್ರಕಾಶ್ ರಾಥೋಡ್ ತನಿಖೆಯ ಮಾಹಿತಿ ಪಡೆದಿದ್ದಾರೆ. ಇದೆ ವೇಳೆ ಪ್ರಮುಖ ಆರೋಪಿಗಳನ್ನು ಕಸ್ಟಡಿಗೆ ಪಡೆಯಲು ಸಿಐಡಿ ತಂಡ ಸಿದ್ಧತೆ ಮಾಡಿಕೊಂಡಿದೆ. ಈ ಕೇಸ್ ಕುರಿತು ನಾಳೆ ಕೋರ್ಟಿಗೆ ಸಿಐಡಿ ತಂಡ ಅರ್ಜಿ ಸಲ್ಲಿಸಲಿದೆ. ಸದ್ಯ ಸಿಐಡಿ ಮುಂದೆ ಕೊಲೆ ಆರೋಪಿ ಜಗ್ಗನ ಬಂಧನ ಟಾಸ್ಕ್ ಮುಂದಿದೆ. ದುಬೈನಲ್ಲಿ ಆರೋಪಿ ಜಗನಿಗೆ ಬ್ಲೂ ಕಾರ್ನರ್ ನೋಟಿಸ್ ನೀಡಲು ಇದೀಗ ಸಿಐಡಿ ಎಲ್ಲ ಸಿದ್ಧತೆ ಮಾಡಿಕೊಂಡಿದೆ.

Read More

ಈಡೇರದ ಬಯಕೆಗಳನ್ನು ಪೂರೈಸುವ ಶಕ್ತಿ ಚಕ್ರ ನಿಮ್ಮ ಕನಸುಗಳನ್ನು ನನಸಾಗಿಸಲು ನೀವು ಬಯಸಿದರೆ, ನಿಮಗೆ ಮೊದಲನೆಯದು ನಂಬಿಕೆ. ನಾವು ದೃಢಸಂಕಲ್ಪ ಮತ್ತು ಆತ್ಮವಿಶ್ವಾಸವನ್ನು ಹೊಂದಿದ್ದರೆ ಮಾತ್ರ ನಮ್ಮ ಆಸೆಗಳು ಈಡೇರುತ್ತವೆ. ಕನಸುಗಳು ನಿಜವಾಗುತ್ತವೆ. ಯಾವ ಮನುಷ್ಯನೂ ಆಸೆಯಿಲ್ಲದೆ ಬದುಕಲಾರ. ನಿಮ್ಮ ಮನಸ್ಸಿನಲ್ಲಿ ಖಂಡಿತವಾಗಿಯೂ ಅಪೂರ್ಣವಾದದ್ದು ಇದೆ. ಉದಾಹರಣೆಗೆ, ನಾವು ಒಳ್ಳೆಯ ಉದ್ಯೋಗ ಪಡೆಯಬೇಕು, ಕೈತುಂಬಾ ಹಣ ಸಂಪಾದಿಸಬೇಕು, ಸಮಾಜದಲ್ಲಿ ನಾಲ್ಕು ಜನ ಗೌರವಿಸುವ ಉನ್ನತ ಸ್ಥಾನದಲ್ಲಿ ಬದುಕಬೇಕು. ಆ ಆಸೆಯನ್ನು ಈಡೇರಿಸಿಕೊಳ್ಳಲು ಸತತ ಪ್ರಯತ್ನ ಮಾಡಬೇಕು. ನಾವು ನಮ್ಮ ಮನಸ್ಸನ್ನು ಕೇಂದ್ರೀಕರಿಸಬೇಕು ಮತ್ತು ಪ್ರಗತಿಯತ್ತ ಮಾತ್ರ ಗಮನಹರಿಸಬೇಕು. ಇತರ ಅನಗತ್ಯ ವಿಷಯಗಳತ್ತ ಗಮನ ಹರಿಸಬಾರದು. ಅದಕ್ಕೊಂದು ಪುಟ್ಟ ಕಸರತ್ತು ಈ ಶಕ್ತಿ ಸರ್ಕಾರ್ ಕಸರತ್ತು. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಂತ್ರಿ ನಂ:- 9686268564. ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ…

Read More

ಬೆಂಗಳೂರು: ಅಪರಿಚಿತ ಕಿಡಿಗೇಡಿಗಳು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಕಚೇರಿ ಹಾಗೂ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್ ಸ್ಫೋಟಿಸುವುದಾಗಿ ಇ-ಮೇಲ್ ಸಂದೇಶ ಕಳುಹಿಸಿದ್ದು, ವಿಮಾನ ನಿಲ್ದಾಣದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ನಿನ್ನೆ ಈ ಒಂದು ಘಟನೆ ನಡೆದಿದ್ದು, ಈ ಬೆದರಿಕೆ ಸಂದೇಶ ಬಂದ ಕೂಡಲೇ ಡಿಸಿಎಂ ಕಚೇರಿಗೂ ಮಾಹಿತಿ ರವಾನಿಸಲಾಗಿದ್ದು, ಮನೆ ಮತ್ತು ಕಚೇರಿ ಮತ್ತು ವಿಮಾನ ನಿಲ್ದಾಣದ ಪ್ರತಿ ಸ್ಥಳವನ್ನು ಬಾಂಬ್ ನಿಷ್ಕ್ರಿಯ ದಳದಿಂದ ತಪಾಸಣೆ ನಡೆಸಲಾಗಿದೆ. ಬಳಿಕ ಇದೊಂದು ಹುಸಿ ಬಾಂಬ್ ಬೆದರಿಕೆ ಸಂದೇಶ ಎಂಬುದು ಗೊತ್ತಾಗಿದೆ ಎಂದು ಪೊಲೀಸರು ಹೇಳಿದ್ದಾರೆ. ಅಪರಿಚಿತ ಇ-ಮೇಲ್‌ನಿಂದ ಟರ್ಮಿನಲ್ ಮ್ಯಾನೇಜರ್ ಇ-ಮೇಲ್ ವಿಳಾಸಕ್ಕೆ ಬೆದರಿಕೆ ಸಂದೇಶ ಕಳುಹಿಸಿರುವ ಕಿಡಿಗೇಡಿಗಳು, ವಿಮಾನ ನಿಲ್ದಾಣದ ಎರಡು ಟರ್ಮಿನಲ್‌ನಲ್ಲಿ 4 ಸುಧಾರಿತ ಸ್ಫೋಟಕಗಳನ್ನು (ಐಇಡಿ) ಇಡಲಾಗಿದ್ದು, 11 ಗಂಟೆ ಸುಮಾರಿಗೆ ಸ್ಫೋಟಗೊಳ್ಳಲಿವೆ. ಇದಾದ 2 ಗಂಟೆ ಬಳಿಕ ಡಿಸಿಎಂ ಶಿವಕುಮಾರ್ ಅವರ ಕಚೇರಿಯಲ್ಲಿ ಬಾಂಬ್ ಸ್ಫೋಟಿಸುತ್ತೇನೆ ಎಂದು ಸಂದೇಶದಲ್ಲಿ ಉಲ್ಲೇಖಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

Read More

ಹಾಸನ : ಇಂದು ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ಕೋಡಿ ಮಠಕ್ಕೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಭೇಟಿ ನೀಡಿದ್ದರು.ಮಠಕ್ಕೆ ಭೇಟಿ ನೀಡಿ ದರ್ಶನ ಪಡೆದ ಡಿಕೆಶಿ, ಪ್ರಾರ್ಥನೆ ಸಲ್ಲಿಸಿದ್ದಾರೆ. ನಾನು ಏನು ಪ್ರಾರ್ಥನೆ ಬೇಕೋ ಮಾಡಿದ್ದೇನೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಹಾಸನ ಜಿಲ್ಲೆಯ ‌ಅರಸೀಕೆರೆ ತಾಲ್ಲೂಕಿನ ಹಾರನಹಳ್ಳಿಯಲ್ಲಿರುವ ಕೋಡಿ ಮಠಕ್ಕೆ ಭೇಟಿ ನೀಡಿ ದರ್ಶನ ಮಾಡಿದ್ದಾರೆ. ಕೋಡಿ ಶ್ರೀಗಳ ಭೇಟಿ ಬಳಿಕ ಮಾತನಾಡಿದ ಡಿಕೆ ಶಿವಕುಮಾರ್, ಏನು ಪ್ರಾರ್ಥನೆ ಮಾಡಬೇಕು ಮಾಡಿದ್ದೇನೆ ಎಂದಿದ್ದಾರೆ. ಇದೇ ವೇಳೆ ಸ್ವಾಮೀಗಳು ಊರಿನಲ್ಲಿ ಇದ್ದಾರೆ ಎಂಬುದು ಗೊತ್ತಾಯ್ತು. ಹೀಗಾಗಿ ಭೇಟಿಗೆ ಬಂದಿದ್ದೇನೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ. ಧರ್ಮದ ಬಗ್ಗೆ, ದೇವರ ಬಗ್ಗೆ, ಸಂಸ್ಕೃತಿ ಬಗ್ಗೆ, ಆಚಾರ-ವಿಚಾರಗಳ ಬಗ್ಗೆ ನಂಬಿಕೆ ಇಟ್ಟುಕೊಂಡಿದ್ದೇನೆ. ಯಾವುದೇ ಧರ್ಮದಲ್ಲಾಗಲಿ ಒಂದು ಶಕ್ತಿ ಇದೆ. ಕೆಲವರು ನಂಬಬಹುದು, ಕೆಲವರು ನಂಬದೇ ಇರಬಹುದು. ಆದರೆ ನನಗೆ ನಂಬಿಕೆ ಇದೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ. ನಂಬಿಕೆ ಇರುವ…

Read More

ಕೋಲಾರ : ಉಗ್ರವಾದಿ ಸಂಘಟನೆಗಳ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಪದೇ ಪದೇ ಹುಡುಕಾಟ ನಡೆಸುತ್ತಿದ್ದ ಬಾಲಕನೊಬ್ಬನನ್ನು ಇದೀಗ ಆಂತರಿಕ ಭದ್ರತಾ ಮತ್ತು ಕೇಂದ್ರ ಗುಪ್ತಚರ ಇಲಾಖೆ ಅಧಿಕಾರಿಗಳು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಹೌದು ದೇಶ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿದ ಹಾಗೂ ಉಗ್ರವಾದಿ ಸಂಘಟನೆಗಳ ಕುರಿತು ಪೋಸ್ಟ್​ಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿರುವ ಆರೋಪದಡಿ ಕೆಜಿಎಫ್ ತಾಲೂಕಿನ ದ್ಯಾವರಹಳ್ಳಿ ಗ್ರಾಮದ ಓರ್ವ ಬಾಲಕನನ್ನು ಆಂತರಿಕ ಭದ್ರತಾ ಅಧಿಕಾರಿಗಳು ಮತ್ತು ಕೇಂದ್ರ ಗುಪ್ತಚರ ಇಲಾಖೆ ಅಧಿಕಾರಿಗಳು ವಶಕ್ಕೆ ಪಡೆದು ವಿಚಾರಣೆ ನಡೆಸಿದರು. ಬಾಲಕ ಮೂಲತಃ ಆಂದ್ರ ಪ್ರದೇಶದ ಮುಸ್ಲಿಂ ಕುಟುಂಬಕ್ಕೆ ಸೇರಿದವನು. ಬಾಲಕನ ಕುಟುಂಬ ಹಲವು ವರ್ಷಗಳ ಹಿಂದೆ ಆಂದ್ರ ಪ್ರದೇಶದ ರಾಮಕುಪ್ಪಂ ತೊರೆದು ಕೋಲಾರ ಜಿಲ್ಲೆಯ ಕೆಜಿಎಫ್​ ತಾಲೂಕಿನ ಬೇತಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ದ್ಯಾವರಹಳ್ಳಿ ಗ್ರಾಮದ ಬಳಿ ಬಾಡಿಗೆ ಮನೆಯಲ್ಲಿ ವಾಸವಾಗಿದೆ ಎಂದು ತಿಳಿದು ಬಂದಿದೆ. ಬಾಲಕ ಉಗ್ರಗಾಮಿ ಸಂಘಟನೆಗೆ ಸಂಬಂಧಿಸಿದಂತೆ ಕೆಲವೊಂದು ಪೋಸ್ಟ್​ಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದನು. ಅಲ್ಲದೆ, ಪದೇ…

Read More