Author: kannadanewsnow05

ಮಹಾರಾಷ್ಟ್ರ : ಅಪಘಾತ ತಪ್ಪಿಸಲು ಹೋಗಿ ಕೆಎಸ್ಆರ್ಟಿಸಿ ಬಸ್ ಒಂದು ಪಲ್ಟಿಯಾದ ಪರಿಣಾಮ ಬಸ್ ನಲ್ಲಿದ್ದ 23 ಪ್ರಯಾಣಿಕರಿಗೆ ಗಾಯಗಳಾಗಿರುವ ಘಟನೆ ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯ ಮೈಶಾಳ ಗ್ರಾಮದ ಬಳಿ ಈ ಒಂದು ಘಟನೆ ನಡೆದಿದೆ. KSRTC ಬಸ್ ಮಹಾರಾಷ್ಟ್ರದ ಮೀರಜ್ ನಿಂದ ವಿಜಯಪುರಕ್ಕೆ ತೆರಳುತ್ತಿತ್ತು. ಈ ವೇಳೆ ಕೆಎಸ್ಆರ್ಟಿಸಿ ಬಸ್ ಟ್ರ್ಯಾಕ್ಟರ್ ಅನ್ನು ಓವರ್ ಟೇಕ್ ಮಾಡಲು ಮುಂದಾಗಿದೆ. ಈ ಸಂದರ್ಭದಲ್ಲಿ ಎದುರಿಗೆ ಬಂದ ಲಾರಿ ಡಿಕ್ಕಿ ತಪ್ಪಿಸಲು ಹೋಗಿ ಬಸ್ ಪಲ್ಟಿಯಾಗಿದೆ. ನಿಯಂತ್ರಣ ಕಳೆದುಕೊಂಡ ಬಸ್ ರಸ್ತೆ ಪಕ್ಕದ ಗುಂಡಿಗೆ ಉರಳಿ ಬಿದ್ದಿದೆ. ಬಸ್ ಪಲ್ಟಿಯಾದ ಪರಿಣಾಮ ಬಸ್ ನಲ್ಲಿ 40ಕ್ಕೂ ಹೆಚ್ಚು ಜನ ಪ್ರಯಾಣಿಸುತ್ತಿದ್ದರು. 23 ಜನರಿಗೆ ಗಾಯಗಳಾಗಿದ್ದು, ಕೂಡಲೇ ಸ್ಥಳೀಯರು ಪ್ರಯಾಣಿಕರನ್ನು ರಕ್ಷಿಸಿ ಆಸ್ಪತ್ರೆಗೆ ರವಾನಿಸಿದ್ದಾರೆ. 23 ಜನರಿಗೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Read More

ಬೆಂಗಳೂರು : ರಾಜ್ಯ ಸರ್ಕಾರ ಜಾರಿ ಮಾಡಿರುವ ಅನ್ನಭಾಗ್ಯ ಯೋಜನೆ ಅಡಿ ಇಷ್ಟು ದಿನ 5 ಕೆ.ಜಿ ಅಕ್ಕಿಯ ಬದಲಾಗಿ ಡಿಬಿಟಿ ಮೂಲಕ ಫಲಾನುಭವಿಗಳ ಖಾತೆಗೆ ಹಣ ಹಾಕುತ್ತಿತ್ತು. ಆದರೆ ಇದೀಗ ಕೇಂದ್ರ ಸರ್ಕಾರದಿಂದ ಅಕ್ಕಿ ಖರೀದಿಸಲು ರಾಜ್ಯ ಸರ್ಕಾರ ನಿರ್ಧರಿಸಿದ್ದರಿಂದ, ಹಣದ ಬದಲು 10 ಕೆಜಿ ಅಕ್ಕಿ ಕೊಡಲು ತೀರ್ಮಾನ ಕೈಗೊಂಡಿದೆ. ಅನ್ನಭಾಗ್ಯ ಹಣದ ಬದಲು ಅಕ್ಕಿ ಕೊಡಲು ರಾಜ್ಯ ಸರ್ಕಾರ ಇದೀಗ ತೀರ್ಮಾನಿಸಿದ್ದು ಪ್ರತಿಫಲ ಅನುಭವಿಗೆ ಹಣದ ಬದಲು 10 ಕೆಜಿ ಅಕ್ಕಿ ಕೊಡಲು ಸರ್ಕಾರ ತೀರ್ಮಾನ ಕೈಗೊಂಡಿದೆ. ಫೆಬ್ರವರಿ ತಿಂಗಳಿನಿಂದಲೇ ಹಣದ ಬದಲು ಅಕ್ಕಿ ಕೊಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಕೇಂದ್ರ ಸರ್ಕಾರದಿಂದಲೇ ಅಕ್ಕಿ ಖರೀದಿಸಲು ರಾಜ್ಯ ಸರ್ಕಾರ ಇದೀಗ ಮುಂದಾಗಿದ್ದು, ಹಾಗಾಗಿ ಹಣದ ಬದಲಾಗಿ ಅಕ್ಕಿ ಕೊಡಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.

Read More

ಬೆಳಗಾವಿ : ಇತ್ತೀಚಿನ ದಿನಗಳಲ್ಲಿ ಹಾರ್ಟ್ ಅಟ್ಯಾಕ್ ಅನ್ನೋದು ಸಹಜ ಕಾಯಿಲೆಯಾಗಿಬಿಟ್ಟಿದೆ. ಇದೀಗ ತರಗತಿಯಲ್ಲಿ ಪಾಠ ಮಾಡುತ್ತಿರುವಾಗಲೇ ಶಿಕ್ಷಕರೊಬ್ಬರು ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಐಗಳಿ ಗ್ರಾಮದ ತೆಲಸಂಗ ವಸತಿ ತೋಟದಲ್ಲಿ ನಡೆದಿದೆ. ಅಥಣಿ ತಾಲೂಕಿನ ಐಗಳಿ ಗ್ರಾಮದ ತೆಲಸಂಗ ವಸತಿ ತೋಟದ ಸರ್ಕಾರಿ ಕನ್ನಡ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಕರ್ತವ್ಯ ನಿರತ ಶಿಕ್ಷಕನೋರ್ವ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.ಮೃತ ಶಿಕ್ಷಕರನ್ನು ಭೈರಪ್ಪ ಆರ್ ಸಾತಗೊಂಡನವರ (55) ಎಂದು ತಿಳಿದುಬಂದಿದೆ.

Read More

ಬೆಂಗಳೂರು : ಅನ್ನಭಾಗ್ಯ ಯೋಜನೆಯ ಹಣ ಹಾಗೂ ಗೃಹಲಕ್ಷ್ಮಿ ಯೋಜನೆಯ ಹಣ ಇನ್ನು ಇನ್ನು ಫಾಲಾನುಭವಿಗಳ ಖಾತೆಗೆ ಜಮೆ ಆಗದೆ ಇರುವ ವಿಚಾರವಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ರಾಜ್ಯದ ಆರ್ಥಿಕ ಪರಿಸ್ಥಿತಿಯ ಕುರಿತು ಶ್ವೇತ ಪತ್ರ ಹೊರಡಿಸಿ ಎಂದು ರಾಜ್ಯ ಸರ್ಕಾರಕ್ಕೆ ಅಗ್ರಹಿಸಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಗ್ಯಾರಂಟಿ ಯೋಜನೆಗಳ ಬಗ್ಗೆ ನಮ್ಮ ವಿರೋಧವಿಲ್ಲ. ಗ್ಯಾರಂಟಿ ಯೋಜನೆ ಬಗ್ಗೆ ಹೊಸ ಕಂಡೀಶನ್ ಹಾಕಿದ್ವಿ. ಎಂಪಿ ಚುನಾವಣೆಯ ಮತದಾನದ ಮೂರು ದಿನಗಳ ಮುನ್ನವೇ ಹಣ ಜಮೆಯಾಗಿದೆ. ಬೈ ಎಲೆಕ್ಷನ್ ಮತದಾನಕ್ಕೂ ಮುನ್ನವೇ ಗ್ಯಾರಂಟಿ ಹಣ ತಲುಪುತ್ತದೆ. ಮುಂದಿನ ಜಿಲ್ಲಾ ಪಂಚಾಯತ್ ತಾಲೂಕು ಪಂಚಾಯತ್ ಚುನಾವಣೆಗೂ ಹೀಗೆ ಮಾಡುತ್ತಾರೆ. ರಾಜ್ಯದ ಜನರು ರೈತರು ಬಡವರು ಭಿಕ್ಷುಕರ? ಎಂದು ರಾಜ್ಯ ಸರ್ಕಾರದ ವಿರುದ್ಧ ಬಿವೈ ವಿಜಯೇಂದ್ರ ಕಿಡಿಕಾರಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿ ಎಲ್ಲವೂ ಸರಿ ಇಲ್ಲ ಕೆಪಿಸಿಸಿ ಅಧ್ಯಕ್ಷರು ಸಿಎಂ ಹುದ್ದೆ ವಿಚಾರವಾಗಿ ಬಡಿದಾಟ ನಡೆಯುತ್ತಿದೆ ಕೆಲ ನಾಯಕರು ಅಧ್ಯಕ್ಷರ ಬದಲಾವಣೆಗೆ ಬಗ್ಗೆ ಮಾತನಾಡಿದ್ದಾರೆ.…

Read More

ಬೆಂಗಳೂರು : ಬೆಲೆ ಏರಿಕೆಯಿಂದ ತತ್ತರಿಸಿರುವ ರಾಜ್ಯದ ಜನರಿಗೆ ಮತ್ತೊಂದು ಶಾಕ್ ಎದುರಾಗಿದೆ. ಶೀಘ್ರವೇ ನಂದಿನಿ ಹಾಲಿನ ದರ ಏರಿಕೆಗೆ ಕೆಎಂಎಫ್ ಪ್ರಸ್ತಾವನೆ ಸಲ್ಲಿಸಿದ್ದು, ಬೆಲೆ ಏರಿಕೆಯ ಅಂತಿಮ ನಿರ್ಧಾರ ಸಿಎಂ ಅಂಗಳದಲ್ಲಿದೆ.ಪ್ರತಿ ಲೀಟರ್ ಹಾಲಿಗೆ 5 ರೂ ಏರಿಕೆ ಮಾಡುವಂತೆ ಸಿಎಂ ಸಿದ್ದರಾಮಯ್ಯಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಈಗಾಗಲೇ ಕೆಎಸ್‌ಆರ್‌ಟಿಸಿ, ಬಿಎಂಟಿಸಿ ಬಸ್ ದರ ಹೆಚ್ಚಳ, ಬೆಂಗಳೂರು ಮೆಟ್ರೋ ಟಿಕೆಟ್ ದರ ಏರಿಕೆಯ ಬರೆ ಕಾಯುತ್ತಿರುವ ಸಂದರ್ಭದಲ್ಲೇ ಹಾಲಿನ ದರ ಏರಿಕೆ ವಿಚಾರ ಗಮನಸೆಳೆದಿದೆ. ಕರ್ನಾಟಕ ಹಾಲು ಉತ್ಪಾದಕರ ಮಹಾಮಂಡಳ (ಕೆಎಂಎಫ್‌) ಹಾಲಿನ ದರ ಲೀಟರ್‌ಗೆ 5 ರೂಪಾಯಿ ಏರಿಸುವುದಕ್ಕೆ ಸಿದ್ಧತೆ ನಡೆಸಿದೆ ಎಂದು ಕೆಎಂಎಫ್ ಮೂಲಗಳು ತಿಳಿಸಿವೆ. ಜೂನ್ 2024ರಲ್ಲಿ ಪ್ರತಿ ಪ್ಯಾಕೇಟ್‌ಗೆ 50 ಮಿಲಿ ಲೀ. ಹಾಲು ಹೆಚ್ಚುವರಿಯಾಗಿ ಕೊಟ್ಟು ಮತ್ತೆ 2 ರು.ಏರಿಕೆ ಮಾಡಲಾಗಿತ್ತು. ಇದೀಗ ರಾಜ್ಯದ 16 ಹಾಲು ಒಕ್ಕೂಟಗಳಿಂದ ಹಾಲಿನ ದರವನ್ನು ಪ್ರತಿ ಲೀಟರ್‌ಗೆ 5 ರು.ನಂತೆ ಏರಿಕೆ ಮಾಡಲು ಒತ್ತಡ ಹೆಚ್ಚುತ್ತಿದೆ. ಹೀಗಾಗಿ…

Read More

ಬೆಂಗಳೂರು : ಬೆಂಗಳೂರಿನ ವಿಧಾನಸೌಧದಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ, ಹಲವು ಜನರಿಂದ ಕೋಟ್ಯಾಂತರ ರೂಪಾಯಿ ಹಣ ಪಡೆದು ದುಬೈಗೆ ಹಾರಿದ್ದ ಪಿಡಿಒ ಅಧಿಕಾರಿಯನ್ನು ಇಂದು ಬೆಂಗಳೂರಿನ ವಿಮಾನ ನಿಲ್ದಾಣದಲ್ಲಿ ಅರೆಸ್ಟ್ ಮಾಡಿರುವ ಘಟನೆ ವರದಿಯಾಗಿದೆ. ಹೌದು ವಿಧಾನಸೌಧದಲ್ಲಿ ಸ್ಪೀಕರ್ ಕಚೇರಿಯಲ್ಲಿ ಕೆಲಸ ಕೊಡಿಸುವುದಾಗಿ ಪಿಡಿಒ ಅಧಿಕಾರಿ ಯೋಗೇಂದ್ರ ಹಲವರ ಬಳಿ ಹಣ ಪಡೆದುಕೊಂಡಿದ್ದ.ಮತ್ತೊಬ್ಬರಿಗೆ ಗೋಲ್ಡ್ ಬ್ಯುಸಿನೆಸ್ ಹೆಸರಲ್ಲಿ ವಂಚನೆಗೈಯ್ಯಲಾಗಿತ್ತು. ಇನ್ನೊಬ್ಬರಿಗೆ ಕ್ರಿಪ್ಟೋ ಕರೆನ್ಸಿ, ಟೆಂಬರ್ ಬ್ಯುಸಿನೆಸ್ ಹೆಸರಲ್ಲಿ ಟೋಪಿ ಹಾಕಲಾಗಿತ್ತು. ಇದೀಗ ವಂಚಕ ಪಿಡಿಓ ಯೋಗೇಂದ್ರ ಬಂಧನವಾಗಿದೆ. ಒಬ್ಬೊಬ್ಬರಿಗೆ ಕೋಟಿಗಟ್ಟಲೇ ಟೋಪಿ ಹಾಕಿರೋ ವಂಚಕ ಯೋಗೇಂದ್ರ, ದುಬೈಗೆ ಪರಾರಿಯಾಗಿದ್ದನು. ಬೆಂಗಳೂರಿಗೆ ವಾಪಸ್ ಆದ ವೇಳೆ ಏರ್ಪೋರ್ಟ್ ನಲ್ಲಿಯೇ ಪೊಲೀಸರ ಬಲೆಗೆ ಬಿದ್ದಿದ್ದಾನೆ.ದುಬೈನಲ್ಲಿ ತಲೆಮರೆಸಿಕೊಂಡಿದ್ದ ಯೋಗೇಂದ್ರ ಬೆಂಗಳೂರಿಗೆ ವಾಪಸ್ ಆದ ತಕ್ಷಣ ಲಾಕ್ ಆಗಿದ್ದಾನೆ. ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದ ಪಿಡಿಓ ಯೋಗೇಂದ್ರ ವಿರುದ್ಧ ಚೆನ್ನಮ್ಮನಕೆರೆ, ಯಲಹಂಕ ನ್ಯೂಟೌನ್ ,ವಿವಿ ಪುರಂ,ಹಿರಿಯೂರು,ಚಿತ್ರದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿವೆ.ಚನ್ನಮ್ಮನಕೆರೆ ಅಚ್ಚುಕಟ್ಟು ಠಾಣೆ ಪೊಲೀಸರು ಹೆಚ್ಚಿನ…

Read More

ಬೆಂಗಳೂರು : ಮುಂಬರುವ ಚುನಾವಣೆ ದೃಷ್ಟಿಯಿಂದ ಈಗಿನಿಂದಲೇ ಕಾಂಗ್ರೆಸ್ ಭಾರಿ ಸಿದ್ಧತೆ ನಡೆಸುತ್ತಿದ್ದು, ಈ ಹಿನ್ನಲೆಯಲ್ಲಿ ಜೆಡಿಎಸ್ ನ ಹಲವು ಶಾಸಕರನ್ನು ತನ್ನ ತೆಕ್ಕೆಗೆ ಸೆಳೆದುಕೊಳ್ಳುವಲ್ಲಿ ಪ್ರಯತ್ನಿಸುತ್ತಿದೆ. ಹಾಗಾಗಿ ಜೆಡಿಎಸ್ ನ ಹಲವು ಶಾಸಕರ ಸಂಪರ್ಕದಲ್ಲಿರುವ ಕಾಂಗ್ರೆಸ್ ನಾಯಕರು, ಅವರನ್ನು ಪಕ್ಷಕ್ಕೆ ಸೆಳೆಯುವ ಆಪರೇಷನ್ ಹಸ್ತಕ್ಕೆ ಮುಂದಾಗಿದ್ದಾರೆ ಎಂದು ಬಲ್ಲ ಮೂಲಗಳಿಂದ ತಿಳಿದು ಬಂದಿದೆ. ಹೌದು ಜೆಡಿಎಸ್ ಶಾಸಕರ ಆಪರೇಷನ್ ಗೆ ಮುಂದಾದ ಕಾಂಗ್ರೆಸ್ ನಾಯಕರು, ಜೆಡಿಎಸ್ ಪಕ್ಷದ 6 ಶಾಸಕರನ್ನು ಸಂಪರ್ಕ ಮಾಡಿದ್ದಾರೆ ಎಂದು ತಿಳಿದುಬಂದಿದೆ.. ಈಗ ಒಟ್ಟು 10 ಶಾಸಕರ ಸಂಪರ್ಕಕ್ಕೆ ಯತ್ನಿಸಿದ್ದು, ಬಿಜೆಪಿ ವಿರುದ್ಧ ಗೆದ್ದಿರುವ ಜೆಡಿಎಸ್ ಶಾಸಕರನ್ನು ಸಳೆಯಲು ಮೊದಲು ಆದ್ಯತೆ ನೀಡಿದ್ದಾರೆ. ದೇವದುರ್ಗ ಶಾಸಕಿ ಕರೆಮ್ಮ, ಶಾಸಕ ಸಮೃದ್ಧಿ ಮಂಜುನಾಥ್ ಸೇರಿ ಹಲವು ಶಾಸಕರನ್ನು ಸಂಪರ್ಕಿಸಿದ್ದಾರೆ ಎಂದು ತಿಳಿದು ಬಂದಿದೆ. ಈ ಮೂಲಕ ಮುಂದಿನ ಚುನಾವಣೆಗೆ ಈಗಲೇ ಆಪರೇಷನ್ ಹಸ್ತ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.

Read More

ಬೆಂಗಳೂರು : ಫುಟ್ಪಾತ್ ಮೇಲೆ ವ್ಯಕ್ತಿಯೊಬ್ಬರು ನಡೆದುಕೊಂಡು ಹೋಗುತ್ತಿದ್ದರು ಈ ವೇಳೆ ಸಿಮೆಂಟ್ ಲಾರಿ ಎಂದು ಓವರ್ಟೇಕ್ ಮಾಡುವ ಬರದಲ್ಲಿ ಪಾದ ಚಾರಿಗೆ ಡಿಕ್ಕಿ ಹೊಡೆದಿದೆ ಕೂಡಲೇ ಪಾದಚಾರಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಚಾಮರಾಜಪೇಟೆಯ ರಾಮಕೃಷ್ಣ ಮಠದ ಬಳಿ ನಡೆದಿದೆ. ಬೆಂಗಳೂರಿನಲ್ಲಿ ಸಿಮೆಂಟ್ ಲಾರಿ ಡಿಕ್ಕಿಯಾಗಿ ಪಾದಾಚಾರಿ ಸಾವನ್ನಪ್ಪಿದ್ದಾರೆ. ಚಾಮರಾಜಪೇಟೆ ರಾಮಕೃಷ್ಣ ಮಠದ ಬಳಿ ಈ ಒಂದು ಅಪಘಾತ ಸಂಭವಿಸಿದೆ. ಸಿಮೆಂಟ್ ಲಾರಿ ವೇಗವಾಗಿ ಬಂದು ಓವರ್ ಟೆಕ್ ಮಾಡುವ ಬರದಲ್ಲಿ ಪಾದಚಾರಿಗೆ ಡಿಕ್ಕಿ ಹೊಡೆದಿದ್ದು, ಸಿಮೆಂಟ್ ಲಾರಿ ಡಿಕ್ಕಿಯ ರಭಸಕ್ಕೆ ಪಾದಚಾರಿ ಸ್ಥಳದಲ್ಲಿ ಸಾವನ್ನಪ್ಪಿದ್ದಾರೆ.

Read More

ಬೆಳಗಾವಿ : ಬೆಳಗಾವಿಯಲ್ಲಿ ಸಿನಿಮೀಯ ರೀತಿಯಲ್ಲಿ ಉದ್ಯಮಿಯನ್ನು ಅಪಹರಣ ಮಾಡಿದ ದುಷ್ಕರ್ಮಿಗಳು 5 ಕೋಟಿ ಹಣಕ್ಕೆ ಡಿಮ್ಯಾಂಡ್ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ದಂಡಾಪುರ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಬಸವರಾಜ ತಳವಾಡ (46) ಎಂಬುವವರನ್ನು ಫೆ.14 ರಂದು ದುಷ್ಕರ್ಮಿಗಳು ಸಿನಿಮೀಯ ರೀತಿಯಲ್ಲಿ ಅಪಹರಣ ಮಾಡಿದ್ದಾರೆ. ಅಪಹರಣಕಾರರು ಉದ್ಯಮಿ ಕುಟುಂಬ ಸದಸ್ಯರಿಗೆ ಕರೆ ಮಾಡಿದ ಗ್ಯಾಂಗ್ 5 ಕೋಟಿ ಹಣಕ್ಕೆ ಬೇಡಿಕೆಯಿಟ್ಟಿದ್ದಾರೆ. ಈ ಸಂಬಂಧ ಘಟಪ್ರಭಾ ಪೊಲೀಸ್ ಠಾಣೆಗೆ ಉದ್ಯಮಿ ಕುಟುಂಬದವರು ದೂರು ನೀಡಿದ್ದು, ಪೊಲೀಸರು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Read More

ಬಾಗಲಕೋಟೆ : ಶಾಲಾ ಅನುದಾನ ದುರ್ಬಳಕೆ ಹಿನ್ನೆಲೆ ಮುಖ್ಯ ಶಿಕ್ಷಕ ಅಮಾನತು ಕೋಲೂರು ಪ್ರೌಢಶಾಲೆಯ ಮುಖ್ಯ ಶಿಕ್ಷಕ ಡಿಎಚ್ ಅಂಗಡಿ ಸಸ್ಪೆಂಡ್ ಆಗಿದ್ದಾರೆ. ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲೂಕಿನ ಕೋಲೂರು ಪ್ರೌಢಶಾಲೆಯ ಮುಖ್ಯ ಶಿಕ್ಷಕ ಡಿಹೆಚ್ ಅಂಗಡಿ ಅವರನ್ನು ಅಮಾನತು ಮಾಡಿ ಧಾರವಾಡದ ಶಾಲಾ ಶಿಕ್ಷಣ ಇಲಾಖೆ ಅಪರ ಆಯುಕ್ತರು ಆದೇಶ ಹೊರಡಿಸಿದ್ದಾರೆ. ವರ್ಗಾವಣೆ ಪತ್ರ ನೀಡಲು ವಿದ್ಯಾರ್ಥಿಗಳಿಂದ 100 ರೂಪಾಯಿ ವಸೂಲಿ ಹಾಗೂ 10ನೇ ತರಗತಿ ವಿದ್ಯಾರ್ಥಿಗಳ ಹಾಲ್ ಟಿಕೆಟ್ ಗೆ 100 ರೂ ವಸೂಲಿ ಮಾಡುತ್ತಿದ್ದರು ಎಂಬ ಆರೋಪ ಕೇಳಿ ಬಂದಿತ್ತು. ಅಟಲ್ ಟಿಂಕರಿಂಗ್ ಲ್ಯಾಬ್ ಅನುದಾನವನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ಆರೋಪ ಕೇಳಿ ಬಂದಿದೆ. ಮುಖ್ಯ ಶಿಕ್ಷಕ ಡಿಎಚ್ ಅಂಗಡಿ ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ. ಧಾರವಾಡದ ಶಾಲಾ ಶಿಕ್ಷಣ ಇಲಾಖೆ ಅಪರ ಆಯುಕ್ತರಿಂದ ಈ ಒಂದು ಆದೇಶ ಬಂದಿದೆ

Read More