Author: kannadanewsnow05

ನವದೆಹಲಿ : ಪ್ರಜ್ವಲ್ ರೇವಣ್ಣ ಪ್ರಕರಣ ಸಂಬಂಧ ಇದೀಗ ರಾಷ್ಟ್ರೀಯ ಮಹಿಳಾ ಆಯೋಗ ಸ್ಪಷ್ಟನೆ ಒಂದನ್ನು ನೀಡಿದ್ದು, ಪ್ರಜ್ವಲ್ ವಿರುದ್ಧ 700 ಮಹಿಳೆಯರು ರಾಷ್ಟ್ರ ಮಹಿಳಾ ಆಗೋಕೆ ದೂರು ನೀಡಿದ್ದಾರೆ ಎಂಬುದು ಸುಳ್ಳು ಎಂದು ಮಹಿಳಾ ಆಯೋಗ ಇದೀಗ ಸ್ಪಷ್ಟನೆ ನೀಡಿದೆ. ಹೌದು ಅಖಿಲ ವಿಡಿಯೋ ಹಾಗೂ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ 700 ಮಹಿಳೆಯರು ರಹಸ್ಯ ಮಹಿಳಾ ಆಯೋಗಕ್ಕೆ ದೂರು ಸಲ್ಲಿಸಿದ್ದಾರೆ ಎಂದು ಇತ್ತೀಚಿಗೆ ಸಾಮಾಜಿಕ ಜಾಲತಾಣಗಳಲ್ಲಿ ವಿಷಯ ಹರಿದಾಡುತ್ತಿತ್ತು. ಇದೀಗ ರಾಷ್ಟೀಯ ಮಹಿಳಾ ಆಯೋಗ ಸ್ಪಷ್ಟನೆ ನೀಡಿದ್ದು, ಪ್ರಜ್ವಲ್ ಪ್ರಕರಣ ಸಂಬಂಧಪಟ್ಟ ರಾಷ್ಟ್ರೀಯ ಮಹಿಳಾ ಆಯೋಗ ಸ್ಪಷ್ಟನೆ ನೀಡಿದ್ದು, 700 ಮಹಿಳೆಯರು ಎನ್ ಸಿಡಬ್ಲ್ಯೂಗೆ ಯಾವುದೇ ದೂರನ್ನು ನೀಡಿಲ್ಲ. ಈ ಬಗ್ಗೆ ಕೆಲವು ಮಾಧ್ಯಮಗಳು ಸುಳ್ಳು ವರದಿ ಮಾಡುತ್ತಿವೆ ಎಂದು ಸ್ಪಷ್ಟನೆ ನೀಡಿದೆ.

Read More

ಚಿತ್ರದುರ್ಗ : ಪತಿಯ ಹಣದ ಆಸೆಗೆ ಬೇಸತ್ತ ಗೃಹಿಣಿ ಒಬ್ಬಳು ಮನೆಯಲ್ಲಿ ನೇಣು ಬಿಗಿದುಕೊಂಡಿರುವ ಸ್ಥಿತಿಯಲ್ಲಿ ಗೃಹಿಣಿಯ ಶವ ಪತ್ತೆಯಾಗಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ಪಟ್ಟಣದಲ್ಲಿ ನಡೆದಿದೆ. ಹೌದು, ತುಮಕೂರು ಮೂಲದ ಗೀತಶ್ರೀ ಮೃತ ರ್ದುದೈವಿ. ಆಕೆ ಹೊಸದುರ್ಗದ ಗೊರವನಕಲ್ಲು ಗ್ರಾಮದ ಪ್ರಭುಕುಮಾರ್ ಜೊತೆ ಐದಾರು ವರ್ಷದ ಹಿಂದೆ ಮದುವೆ ಆಗಿದ್ದರು. ವಿದ್ಯಾವಂತನಾಗಿದ್ದ ಪ್ರಭುಕುಮಾರ್ ಇಂದಲ್ಲ, ನಾಳೆ ಸರ್ಕಾರಿ ಉದ್ಯೋಗ ಸಿಗುತ್ತದೆಂದು ನಂಬಿಸಿದ್ದನು. ಪ್ರಭುಕುಮಾರ್ ಖಾಸಗಿ ಬ್ಯಾಂಕ್ ಒಂದರಲ್ಲಿ ಕೆಲಸ ಮಾಡುತ್ತಿದ್ದ. ಅಲ್ಲದೆ ಗೀತಶ್ರೀ ಕೂಡ ಖಾಸಗಿ ಶಾಲೆ ಒಂದರಲ್ಲಿ ಶಿಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿದ್ದಳು. ಇವರಿಗೆ ಮುದ್ದಾದ ಹೆಣ್ಣು ಮಗು ಕೂಡ ಇತ್ತು ಎಂದು ಹೇಳಲಾಗುತ್ತಿದ್ದು, ಆದರೆ ಇತ್ತೀಚಿಗೆ ವರದಕ್ಷಿಣೆ ವಿಚಾರದಲ್ಲಿ ಪ್ರಭುಕುಮಾರ್ ಗೀತಶ್ರೀಗೆ ಕಿರುಕುಳ ನೀಡಲು ಆರಂಭಿಸಿದ್ದ ಕಳೆದ ಕೆಲವು ದಿನಗಳ ಹಿಂದೆ ಗೀತಶ್ರೀ ಅವರ ಮನೆ ಸೇರಿದಳು ಆದರೆ ನಾಲ್ಕು ದಿನಗಳ ಹಿಂದೆ ಮತ್ತೆ ಗೀತಾ ಶ್ರೀ ಗಂಡನ ಮನೆಗೆ ಬಂದಿದ್ದಳು. ಆದರೆ ಇಂದು ಗೀತಶ್ರೀ ಅವಳ ದೇಹವು…

Read More

ಬೆಂಗಳೂರು : ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಬೆಂಗಳೂರಿನ ಜೆಡಿಎಸ್ ಕಚೇರಿಯಲ್ಲಿ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ ನಡೆಸುತ್ತಿದ್ದು, ಪ್ರಕರಣಕುರಿತಂತೆ ತಪ್ಪಿಸಸ್ಥರಿಗೆ ಶಿಕ್ಷೆಯಾಗುವುದು ಬೇಕಿಲ್ಲ ಮೈತ್ರಿ ಮುಂದುವರೆಯುತ್ತೋ ಅಥವಾ ಇಲ್ಲವೋ ಎನ್ನುವುದು ಕಾಂಗ್ರೆಸ್ ನವರಿಗೆ ಮುಖ್ಯವಾಗಿದೆ ಎಂದು ಎಚ್ ಡಿ ಕುಮಾರಸ್ವಾಮಿ ಕಾಂಗ್ರೆಸ್ ನಾಯಕರು ವಿರುದ್ಧ ಆಕ್ರೋಶ ಹೊರಹಾಕಿದರು. ನಿನ್ನೆ ಹಲವು ಸಚಿವರು ಜಂಟಿ ಸುದ್ದಿಗೋಷ್ಠಿ ನಡೆಸಿದ್ದಾರೆ.ನನ್ನನ್ನೇ ಗುರಿಯಾಗಿಸಿಕೊಂಡು ನಿನ್ನೆ ಸುದ್ದಿಗೋಷ್ಠಿ ನಡೆಸಿದ್ದಾರೆ.ಪೆನ್ ಡ್ರೈವ್ ಬಿಡುಗಡೆ ಮಾಡಲು ಹುನ್ನಾರ ನಡೆಸಿದ್ದೇನೆಂದು ಹೇಳಿದ್ದಾರೆ. ಒಕ್ಕಲಿಗ ನಾಯಕನೆಂದು ಎಲ್ಲೂ ಹೇಳಿಲ್ಲ. ನಾಯಕತ್ವಕ್ಕಾಗಿ ಪೈಪೋಟಿ ನಡೆಸಿಲ್ಲ. ನಾನು ಹಿಟ್ ಅಂಡ್ ರನ್ ಅಲ್ಲ ಎಂದು ಸಚಿವ ಕೃಷ್ಣ ಬೈರೇಗೌಡರು ಹೆಚ್‍ಡಿ ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು. ಉಪ್ಪು ತಿಂದವನು ನೀರು ಕುಡಿಯಲೇ ಬೇಕು ಎಂದು ನಾನು ಹೇಳಿದ್ದೇನೆ. 2006ರಲ್ಲಿ ನಾನು ಏಕಾಂಗಿಯಾಗಿ ಹೋರಾಟ ಮಾಡಿದ್ದೇನೆ. ಆಗ ನಾನು ಸಿಎಂ ಆಗಿದ್ದರೂ ನನ್ನ ಮೇಲೆ ಆಪಾದನೆ ಮಾಡಲಾಗಿತ್ತು. ಈ ಒಂದು ಪ್ರಕರಣ ರಾಜ್ಯದಲ್ಲಿ ಅತ್ಯಂತ…

Read More

ಬೆಂಗಳೂರು :ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದೇಶದಲ್ಲಿರುವ ಸಂಸದ ಪ್ರಜ್ವಲ್ ರೇವಣ್ಣ ಅವರ ವಿರುದ್ಧ ಈಗಾಗಲೇ ರೆಡ್ ಕಾರ್ನರ್ ಹಾಗೂ ಬ್ಲೂ ಕಾರ್ನರ್ ನೋಟಿಸ್ ಜಾರಿ ಮಾಡಲಾಗಿದ್ದು, ಈ ಸಂಬಂಧ 196 ರಾಷ್ಟ್ರಗಳಿಗೆ ಮಾಹಿತಿ ರವಾನಿಸಿರುವುದಾಗಿ ಇಂಟರ್ ಪೋಲ್ ಎಸ್‌ಐಟಿಗೆ ಮಾಹಿತಿ ನೀಡಿದೆ. ಇದೆಲ್ಲದರ ಮಧ್ಯ ಪ್ರಜ್ವಲ್ ಅವರನ್ನು ಬಂಧಿಸಲು ಕಳೆದ ಎರಡು ದಿನಗಳ ಹಿಂದೆ ಎಸ್‌ಐಟಿ ಒಂದು ತಂಡ ವಿದೇಶಕ್ಕೆ ತೆರಳಿದೆ ಎಂಬ ಮಾಹಿತಿ ಲಭ್ಯವಾಗಿದೆ. ಅಶ್ಲೀಲ ವಿಡಿಯೋ ಪ್ರಕಾರಕ್ಕೆ ಸಂಬಂಧಿಸಿದಂತೆ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ಬಂಧನಕ್ಕೆ ಇದೀಗ ಎಸ್ಐಟಿ ಅಧಿಕಾರಿಗಳು ಅವರ ಬಂಧನಕ್ಕೆ ಬೆಲೆ ಬೀಸಿದ್ದು, ಕಳೆದ ಎರಡು ದಿನಗಳ ಹಿಂದೆ ಎಸ್ಐಟಿ ಒಂದು ತಂಡ ವಿದೇಶಕ್ಕೆ ತೆರಳಿದೆ. ಹಾಗಾಗಿ ವಿದೇಶದಲ್ಲಿ ರೇವಣ್ಣ ಸಿಕ್ಕರೆ ಬಹುತೇಕ ಅವರನ್ನು ಅಲ್ಲಿ ಬಂಧಿಸಲಿದ್ದಾರೆ ಎಂದು ಬಲ್ಲಮೂಲಗಳಿಂದ ತಿಳಿದು ಬಂದಿದೆ. ಹೌದು ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ಅಧಿಕಾರಿಗಳು ವಿಚಾರಣೆಗೆ ಹಾಜರಾಗುವಂತೆ ಪ್ರಜ್ವಲ್ ರೇವಣ್ಣಗೆ ನೋಟಿಸ್ ನೀಡಿದರು. ಆದರೆ…

Read More

ಬೆಂಗಳೂರು : ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡವು ಸಮರ್ಥವಾಗಿದ್ದು ಹಾಗಾಗಿ ಈ ಒಂದು ಪ್ರಕರಣವನ್ನು ಸಿಬಿಐಗೆ ಕೊಡುವ ಅಗತ್ಯವಿಲ್ಲ ಎಂದು ಗೃಹ ಸಚಿವ ಜಿ ಪರಮೇಶ್ವರ್ ತಿಳಿಸಿದರು. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಎಸ್ಐಟಿ ಅಧಿಕಾರಿಗಳು ತುಂಬಾ ಆಳವಾಗಿ ತನಿಖೆ ನಡೆಸುತ್ತಿದ್ದಾರೆ. ಪ್ರಜ್ವಲ್ ರೇವಣ್ಣ ಅವರನ್ನು ಭಾರತಕ್ಕೆ ಕರೆಯುತ್ತಿರುವ ಸಲುವಾಗಿ ಈಗಾಗಲೇ ಎಸ್ಐಟಿ ಅಧಿಕಾರಿಗಳು, ಸಿಬಿಐ ಮುಖಾಂತರ ಬ್ಲ್ಯೂ ಕಾರ್ನರ್ ನೋಟಿಸ್ ಹೊರಡಿಸಿದ್ದಾರೆ. ಪ್ರಜ್ವಲ್ ರೇವಣ್ಣ ವಿದೇಶದಲ್ಲಿ ಇರುವುದರಿಂದ ತನಿಖೆ ತ್ವರಿತವಾಗಿ ನಡೆಸುವುದು ಸ್ವಲ್ಪ ಕಷ್ಟವಾಗುತ್ತದೆ ಎಂದರು. ಪ್ರಕರಣದ ತನಿಖೆಯ ದಾರಿಯನ್ನು ರಾಜ್ಯ ಸರ್ಕಾರ ಹಾದಿ ತಪ್ಪಿಸುತ್ತಿದ್ದು ಇದರಲ್ಲಿ ರಾಜ್ಯ ಸರ್ಕಾರ ಹಸ್ತಕ್ಷೇಪ ಮಾಡುತ್ತಿದೆ ಸರಿಯಾಗಿ ಪ್ರಕರಣದ ತನಿಖೆ ನಡೆಯುತ್ತಿಲ್ಲ ಎಂದು ಎಚ್ ಡಿ ಕುಮಾರಸ್ವಾಮಿ ಹಾಗೂ ಬಿಜೆಪಿ ನಾಯಕರ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ನಮ್ಮ ಪೊಲೀಸರು ಸಮರ್ಥರಿದ್ದಾರೆ ರಾಜಕೀಯ ಹೇಳಿಕೆ ಬಿಟ್ಟು ತನಿಖೆಯು ಸರಿಯಾದ ದಾರಿಯಲ್ಲಿ…

Read More

ನವದೆಹಲಿ: ಅಂಬಾನಿ ಅದಾನಿ ಹೇಳಿಕೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ. X ಅಲ್ಲಿ ಪೋಸ್ಟ್ ಅನ್ನು ಹಂಚಿಕೊಂಡ ಅವರು, ಪ್ರಧಾನಿ ಅವರೇ, ನೀವು ಹೆದರದಂತೆ ಕಾಣುತ್ತಿದೆ ಹಾಗಾಗಿ ಅಂಬಾನಿ ಆದಾನಿ ಅವರ ಜೊತೆ ಕೋಣೆಯೊಳಗೆ ಮಾತನಾಡುತ್ತಿದ್ದ ನೀವು ಇದೀಗ ಸಾರ್ವಜನಿಕವಾಗಿ ಮಾತನಾಡುತ್ತಿದ್ದೀರಿ ಎಂದು ತಿರುಗೇಟು ನೀಡಿದರು. ಟ್ವೀಟ್ ಮುಖಾಂತರ ತಿರುಗೇಟು ನೀಡಿದ ಅವರು, ಬಿಜೆಪಿಯ ಭ್ರಷ್ಟಾಚಾರದ ಗತಿಗೆ ಚಾಲಕರು ಮತ್ತು ಸಹಾಯಕರು ಯಾರು ಎಂಬುದು ದೇಶಕ್ಕೆ ಗೊತ್ತಿದೆ’ ಎಂದು ಪೋಸ್ಟ್‌ನಲ್ಲಿ ಬರೆಯಲಾಗಿದೆ.ಹಿಂದೆ ಅದಾನಿ-ಅಂಬಾನಿ ಹೆಸರುಗಳನ್ನು ಮುಚ್ಚಿ ಬಾಗಿಲು ತೆಗೆಯಲಾಗುತ್ತಿತ್ತು ಮತ್ತು ಈಗ ಪ್ರಧಾನಿ ಅವರ ಹೆಸರನ್ನು ಬಹಿರಂಗವಾಗಿ ಕರೆಯುತ್ತಿದ್ದಾರೆ ಎಂದು ರಾಹುಲ್ ಗಾಂಧಿ ಹೇಳಿದರು. “ಮೊದಲ ಬಾರಿಗೆ ನೀವು ಸಾರ್ವಜನಿಕವಾಗಿ ಅದಾನಿ, ಅದಾನಿ ಮತ್ತು ಅಂಬಾನಿ ಎಂದು ಹೇಳಿದ್ದೀರಿ” ಎಂದು ಕಾಂಗ್ರೆಸ್ ಸಂಸದರು ಹೇಳಿದರು. ಟೆಂಪೋದಲ್ಲಿ ಕಪ್ಪು ಹಣ ತೆಗೆದುಕೊಳ್ಳಲಾಗಿದೆಯೇ ಎಂದು ಮೋದಿಯವರು ರಾಹುಲ್ ಗಾಂಧಿಯವರನ್ನು ಪ್ರಶ್ನಿಸಿದ್ದರು.ಇದಕ್ಕೆ ರಾಹುಲ್ ಗಾಂಧಿ ತಿರುಗೇಟು…

Read More

ಬೆಂಗಳೂರು : ಮಹಿಳೆ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಪ್ಪನ ಅಗ್ರಹಾರ ಜೈಲು ಸೇರಿರುವ ಮಾಜಿ ಸಚಿವ HD ರೇವಣ್ಣಗೆ ಅಲ್ಲಿನ ಜೈಲಾಧಿಕಾರಿಗಳು ರೇವಣ್ಣ ಅವರಿಗೆ ವಿಚಾರಣಾಧೀನ ಬಂಧಿ ನಂಬರ್ ನೀಡಿದ್ದಾರೆ ಎಂದು ತಿಳಿದುಬಂದಿದೆ. ಜೈಲಿನಲ್ಲಿ ಮಾಜಿ ಸಚಿವ ಎಚ್ ಡಿ ರೇವಣ್ಣ ಅವರ ವಿಚಾರಣಾಧೀನ ಬಂಧಿ ನಂಬರ್ 4567 ಎಂದು ಹೇಳಲಾಗಿತ್ತಿದೆ. ಜೈಲಿಗೆ ಬರುವ ಎಲ್ಲಾ ಆರೋಪಿಗಳಿಗೆ ಎಂಟ್ರಿ ನಂಬರ್ ನೀಡಲಾಗುತ್ತದೆ.ಅದೇ ರೀತಿ ರೇವಣ್ಣಗೆ ವಿಚಾರಣಾ ಬಂದಿ ಸಂಖ್ಯೆಯನ್ನು ಇದೀಗ ಅಧಿಕಾರಿಗಳು ನೀಡಿದ್ದಾರೆ ಎಂದು ತಿಳಿದುಬಂದಿದೆ. ಮಹಿಳೆ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ ಡಿ ರೇವಣ್ಣ ಅವರು ಬೆಂಗಳೂರಿನ 17ನೇ ಎಸಿ ಎಂ ಎಂ ನ್ಯಾಯಾಲಯದಲ್ಲಿ ಜಾಮೀನಿಗಾಗಿ ಅರ್ಜಿ ಸಲ್ಲಿಸಿದರು ಇಂದು ಅರ್ಜಿ ವಿಚಾರ ನಡೆಸಿದ ಕೋರ್ಟ್ ಆಮೆ 14 ರವರೆಗೆ ಅಂದರೆ 7 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಆದೇಶ ಹೊರಡಿಸಿತು ಈ ನೆಲೆಯಲ್ಲಿ ಇದೀಗ ಎಸ್ಐಟಿ ಅಧಿಕಾರಿಗಳು ಅವರನ್ನು ಪರಪ್ಪನ ಅಗ್ರಹಾರ ಸೆಂಟ್ರಲ್ ಜೈಲಿಗೆ ಕರೆತಂದಿದ್ದಾರೆ.

Read More

ಬೆಂಗಳೂರು : ವಿಚ್ಛೇದನ ಪಡೆದುಕೊಳ್ಳಲು ಎರಡು ಆರೋಪಗಳಿದ್ದ ಸಂದರ್ಭದಲ್ಲಿ ಒಂದು ಆರೋಪ ಸಾಬೀತಾದರೂ ಕೂಡ, ವಿಚ್ಛೇದನ ಪಡೆದುಕೊಳ್ಳಬಹುದು. ಎಲ್ಲಾ ಆರೋಪಗಳು ಸಾಬೀತಾಗಬೇಕಿಲ್ಲ ಎಂದು ಹೈಕೋರ್ಟ್ ತಿಳಿಸಿತು. ಪ್ರಕರಣದಲ್ಲಿ ಪತಿಯ ಮಾನಸಿಕ ಕ್ರೌರ್ಯ ಮತ್ತು ಪರಿತ್ಯಾಗದ ಕಾರಣವನ್ನು ಪರಿಗಣಿಸಿ ವಿಚ್ಛೇದನ ನೀಡಲು ವಿವಾಹವನ್ನು ಅನೂರ್ಜಿತಗೊಳಿಸಿ ವಿಚ್ಛೇದನ ಮಂಜೂರು ಮಾಡುವಂತೆ ತುಮಕೂರಿನ ನವ್ಯ ಎಂಬ ಮಹಿಳೆಯ ಮೇಲ್ಮನವಿಯನ್ನು ಪುರಸ್ಕರಿಸಿದ ನ್ಯಾಯಮೂರ್ತಿ ಅನು ಶಿವರಾಮನ್ ಅವರಿದ್ದ ವಿಭಾಗೀಯ ಪೀಠ ಈ ಒಂದು ತೀರ್ಪು ನೀಡಿದೆ. ಪ್ರಕರಣದಲ್ಲಿ ಪತಿಯ ಮಾನಸಿಕ ಕ್ರೌರ್ಯ ಮತ್ತು ಪರಿತ್ಯಾಗದ ಕಾರಣವನ್ನು ಪರಿಗಣಿಸಿ ವಿಚ್ಛೇದನ ನೀಡಲು ಪತ್ನಿ ಕೋರಿದ್ದಾರೆ. ದಾಖಲೆಗಳನ್ನು ಪರಿಶೀಲಿಸಿದಾಗ ಪತ್ನಿ ತನ್ನ ಸಹೋದ್ಯೋಗಿಯೊಬ್ಬನ ಜತೆ ಸಂಬಂಧ ಹೊಂದಿದ್ದರು. ಆತನನ್ನು ಮದುವೆಯಾಗಲೆಂದೇ ವಿಚ್ಛೇದನಕ್ಕಾಗಿ ಅರ್ಜಿ ಸಲ್ಲಿಸಿದ್ದಾರೆ ಎಂದು ಪತಿ ಧ್ರುವ ಆಧಾರರಹಿತ ಆರೋಪ ಮಾಡಿರುವುದು ಸಾಬೀತಾಗಿದೆ. ಇದು ಪತ್ನಿಯ ಚಾರಿತ್ರ್ಯವನ್ನು ಹಾಳು ಮಾಡುವುದು ಬಿಟ್ಟು ಮತ್ತೇನು ಅಲ್ಲ ಮತ್ತು ಪತ್ನಿ ಮೇಲೆ ಎಸಗಿದ ಮಾನಸಿಕ ಕ್ರೌರ್ಯ ಎಂದು ಪೀಠ ಅಭಿಪ್ರಾಯಪಟ್ಟಿದೆ. ಹೀಗಿದ್ದರೂ…

Read More

ಬೆಂಗಳೂರು : ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಳೆದ ಹಲವು ದಿನಗಳಿಂದ ಭರ್ಜರಿ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಂಡಿದ್ದರು. ಇದೀಗ ವಿಶ್ರಾಂತಿಗಾಗಿ ಅವರು ಊಟಿಗೆ ತೆರಳಿದ್ದು, ಈ ವೇಳೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಲೋಕಸಭಾ ಚುನಾವಣೆ ಪ್ರಚಾರದ ವೇಳೆ ಭಾಷಣದಲ್ಲಿ ಹೇಳಿರುವ ಕೆಲವು ಅಂಶಗಳನ್ನು ಟ್ವೀಟ್ ಮುಖಾಂತರ ತಿಳಿಸಿದ್ದಾರೆ. ಚುನಾವಣಾ ಪ್ರಚಾರ ಮುಗಿಸಿ ವಿಶ್ರಾಂತಿ ಪಡೆಯುತ್ತಿದ್ದಾಗ ನಮ್ಮ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಲೋಕಸಭಾ ಚುನಾವಣಾ ಪ್ರಚಾರ ಕಾಲದಲ್ಲಿ ಹೇಳುತ್ತಿರುವ ಸುಳ್ಳುಗಳ ನೆನಪಾಯಿತು. ಸುಮ್ಮನೆ ಲೆಕ್ಕ ಹಾಕತೊಡಗಿದೆ. ಸದ್ಯಕ್ಕೆ ಇಷ್ಟು ನೆನಪಾಯಿತು. ಹೆಚ್ಚುವರಿಯಾಗಿ ನಿಮಗೆ ನೆನಪಾದರೆ ಇದಕ್ಕೆ ಸೇರಿಸಿಕೊಳ್ಳಿ.ಈ ಸುಳ್ಳುಗಳ ಸರಮಾಲೆ ಇಲ್ಲಿಗೆ ನಿಲ್ಲಲಾರದು, ಮುಂದುವರಿಯಲಿದೆ. ಸ್ವತಂತ್ರ ಭಾರತದ ಇತಿಹಾಸದಲ್ಲಿ ಯಾವ ಪ್ರಧಾನಮಂತ್ರಿಯೂ ಇಷ್ಟೊಂದು ನಿರ್ಲಜ್ಜವಾಗಿ ಈ ರೀತಿ ಹಸಿಹಸಿ ಸುಳ್ಳುಗಳನ್ನು ಹೇಳಿರಲಾರರು. ಯಾರೂ ಕೂಡಾ ಪ್ರಧಾನಮಂತ್ರಿ ಕುರ್ಚಿಯ ಘನತೆಯನ್ನು ಈ ರೀತಿ ಮಣ್ಣು ಪಾಲು ಮಾಡಿರಲಾರರು.ಮತದಾನದ ದಿನ ದೇಶದ ಜನರಿಗೆ ಸತ್ಯ-ಸುಳ್ಳುಗಳನ್ನು ಅರಿತುಕೊಳ್ಳುವ ಸದ್ಬುದ್ದಿಯನ್ನು ದೇವರು ಕರುಣಿಸಲಿ ಎಂದು…

Read More

ಶಿವಮೊಗ್ಗ : ಹಳೆ ವೈಶಮ್ಯದ ಹಿನ್ನೆಲೆಯಲ್ಲಿ ಇಬ್ಬರು ವ್ಯಕ್ತಿಗಳನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ, ತಲೆಯ ಮೇಲೆ ಕಲ್ಲು ಎತ್ತಿಹಾಕಿ ಭೀಕರವಾಗಿ ಕೊಲೆಗೈದಿರುವ ಘಟನೆ ಶಿವಮೊಗ್ಗ ನಗರದ ಲಷ್ಕರ್ ಮೊಹಲ್ಲಾದಲ್ಲಿ ನಡೆದಿದೆ. ಮಾರಕಸ್ತ್ರಗಳಿಂದ ಕೊಚ್ಚಿ ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಲಾಗಿದೆ ಎಂದು ಹೇಳಲಾಗುತ್ತಿದ್ದು, ಮಹಮ್ಮದ್ ಗೌಸ್ (30) ಶೋಯಬ್ (35) ಎನ್ನುವ ವ್ಯಕ್ತಿಗಳನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ಘಟನಾ ಸ್ಥಳಕ್ಕೆ ಕೋಟೆ ಠಾಣೆಯ ಪೊಲೀಸರು ಬೇಟೆ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Read More