Author: kannadanewsnow05

ಚಿಕ್ಕಮಗಳೂರು : ಕುಡಿಯಬೇಡ ಎಂದು ಬುದ್ಧಿವಾದ ಹೇಳಿದ್ದಕ್ಕೆ ಅತ್ತೆಯನ್ನು ಹೊತ್ತಿಗೆಯಿಂದ ಹೊಡೆದು ಭೀಕರವಾಗಿ ಕೊಲೆ ಮಾಡಿ ಬಳಿಕ ತಾನು ಕೂಡ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಭಾರತಿಬೈಲು ಗ್ರಾಮದಲ್ಲಿ ಈ ಒಂದು ಘಟನೆ ನಡೆದಿದೆ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಭಾರತೀಬೈಲು ಗ್ರಾಮದಲ್ಲಿ ಕುಡಿಯಬೇಡ ಎಂದಿದಕ್ಕೆ ಅತ್ತೆಯನ್ನು ಕೊಂದು ಅಳಿಯ ಆತ್ಮಹತ್ಯೆಗೆ ಶರಣಾಗಿದ್ದಾನೆ. ಅತ್ತೆ ಯಮುನಾ (65) ಳನ್ನು ಸುತ್ತಿಗೆಯಿಂದ ಹೊಡೆದು ಕೊಲೆ ಮಾಡಿದ್ದಾನೆ. ಬಳಿಕ ಅಳಿಯ ಶಶಿಧರ್ (48) ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಕಾಫಿ ತೋಟದಲ್ಲಿ ಮರಕ್ಕೆ ನೇಣು ಬಿಗಿದುಕೊಂಡು ಶಶಿಧರ್ ಆತ್ಮಹತ್ಯೆಗೆ ಶರಣಾಗಿದ್ದಾನೆ. ಕಾಫಿ ತೋಟದ ಕೆಲಸಕ್ಕೆ ಎಂದು ಯಮುನಾ ಮಗಳ ಮನೆಗೆ ಹೋಗಿದ್ದಾರೆ. ಈ ವೇಳೆ ಕುಡಿಯಬೇಡ ಎಂದು ಅತ್ತೆಯ ಮುನ ಶಶಿಧರ್ ಗೆ ಬುದ್ಧಿ ಹೇಳಿದ್ದಾರೆ. ಕುಡಿದ ಮತ್ತಿನಲ್ಲಿ ಶಶಿಧರ್ ಸುತ್ತಿಗೆಯಿಂದ ಅತ್ತಿಗೆ ಯಮುನಾ ಮೇಲೆ ಹಲ್ಲೆ ಮಾಡಿ ಕೊಲೆ ಮಾಡಿದ್ದಾನೆ. ಬಳಿಕ ತಾನು ಮರಕ್ಕೆ ನೀಡು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು…

Read More

ಮೈಸೂರು : ಮೈಸೂರಿನಲ್ಲಿ ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಪೋಸ್ಟ್ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಆರೋಪಿಯಾಗಿರುವ ಸತೀಶ್ ಜೈಲಿನಿಂದ ರಿಲೀಸ್ ಆಗಿದ್ದಾನೆ. ಪ್ರಚೋದನಕಾರಿ ಪೋಸ್ಟ್ ಮಾಡಿದ ಆರೋಪಿ ಸತೀಶ್ ಜೈಲಿನಿಂದ ಬಿಡುಗಡೆಯಾಗಿದ್ದಾನೆ. ಜಾಮೀನಿನ ಮೇಲೆ ಇಂದು ಜೈಲಿನಿಂದ ಸತೀಶ್ ಬಿಡುಗಡೆಯಾಗಿದ್ದಾನೆ. ನಿನ್ನೆ ಸತೀಶ್ ಗೆ ಷರತ್ತುಬದ್ಧ ಜಾಮೀನು ನೀಡಿತ್ತು. ಮೈಸೂರಿನ 2ನೇ ಕಿರಿಯ ಶ್ರೇಣಿ ಸಿವಿಲ್ ನ್ಯಾಯಾಧೀಶರಿಂದ ಜಾಮೀನು ಮಂಜೂರು ಮಾಡಲಾಗಿತ್ತು. ಒಬ್ಬರ ಶೂರಿಟಿ ತೆಗೆದುಕೊಂಡು ಕೋರ್ಟ್ ಬಿಡುಗಡೆಗೆ ಸೂಚಿಸಿತ್ತು. ನಿನ್ನೆ ಸಂಜೆ ತಡವಾದ ಕಾರಣ ಸತೀಶ್ ಬಿಡುಗಡೆಗೆ ಸಾಧ್ಯವಾಗಿರಲಿಲ್ಲ. ಹಾಗಾಗಿ ಇಂದು ಜಾಮೀನು ಪ್ರಕ್ರಿಯೆ ಮುಗಿಸಿ ಸತೀಶ್ ಬಿಡುಗಡೆಯಾಗಿದ್ದಾನೆ.

Read More

ಹುಬ್ಬಳ್ಳಿ : ಮಕ್ಕಳಿಗೆ ಸೇರಬೇಕಾಗಿದ್ದ ಅನ್ನಕ್ಕೂ ಇದೀಗ ಕನ್ನ ಹಾಕಿದ್ದು, ಹುಬ್ಬಳ್ಳಿಯಲ್ಲಿ ಕಾಂಗ್ರೆಸ್ ನಾಯಕಿ ಬೈತೂಲ್ಲಾ ಕಿಲ್ಲೇದಾರ ಸಣ್ಣ ಮಕ್ಕಳಿಗೆ ನೀಡುವ ಹಾಲಿನ ಪೌಡರ್, ಗೋಧಿ, ಬೇಳೆ, ಬೆಲ್ಲ ಸೇರಿದಂತೆ ಪೌಷ್ಟಿಕ ಅಹಾರವನ್ನು ಅಕ್ರಮವಾಗಿ ಸಂಗ್ರಹಿಸಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಅಧಿಕಾರಿಗಳು 26 ಜನರನ್ನು ಅರೆಸ್ಟ್ ಮಾಡಿದ್ದಾರೆ. ಹೌದು ಅಂಗನವಾಡಿ ಕಾರ್ಯಕರ್ತೆಯರು ಸಹಾಯಕರು ಸೇರಿದಂತೆ ಒಟ್ಟು 26 ಜನರನ್ನು ಇದೀಗ ಹುಬ್ಬಳ್ಳಿಯ ಕೇಶ್ವಾಪುರ, ಸಿಸಿಬಿ ಪೊಲೀಸರ ಜಂಟಿ ಕಾರ್ಯಾಚರಣೆಯಲ್ಲಿ ಅರೆಸ್ಟ್ ಮಾಡಲಾಗಿದೆ. ಗಬ್ಬೂರ ಬಳಿ ಗೋದಾಮಿನ ಮೇಲೆ ಅಧಿಕಾರಿಗಳು ದಾಳಿ ಮಾಡಿದ್ದರು. ಕಾಂಗ್ರೆಸ್ ನಾಯಕಿ ಬೈತುಲ್ಲಾ ಕಿಲ್ಲೆದಾರ್ ಪತಿ ಫಾರೂಕೆಗೆ ಈ ಒಂದು ಗೋದಾಮು ಸೇರಿತ್ತು. ಗೋದಾಮಿನಲ್ಲಿ ಅಪಾರ ಪ್ರಮಾಣದ ಪೌಷ್ಟಿಕ ಆಹಾರ ಪತ್ತೆಯಾಗಿತ್ತು ಈ ಸಂಬಂಧ ಹುಬ್ಬಳ್ಳಿಯ ಕಸಬಾಪೇಟೆ ಠಾಣೆಯಲ್ಲಿ ದೂರು ದಾಖಲಾಗಿತ್ತು. ಫಾರೂಕ್ ಸೇರಿ ಮೂವರು ಆರೋಪಿಗಳ ವಿರುದ್ಧ ದೂರು ದಾಖಲಾಗಿತ್ತು. ಇದೀಗ ಈ ಒಂದು ಪ್ರಕರಣಕ್ಕೆ ಸಂಬಂಧಪಟ್ಟಂತೆ 26 ಜನರನ್ನು ಪೊಲೀಸ್ ಅಧಿಕಾರಿಗಳು ಅರೆಸ್ಟ್ ಮಾಡಿದ್ದಾರೆ. ಪ್ರಕರಣ…

Read More

ಉತ್ತರಕನ್ನಡ : ಕಾರವಾರದ ಕದಂಬ ನೌಕಾನೆಲೆಯ ಕೆಲ ರಹಸ್ಯ ಮಾಹಿತಿ ಸೋರಿಕೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ವರ್ಷದ ಆಗಸ್ಟ್ 28 ರಂದು ತಾಲ್ಲೂಕಿನ ಮುದಗಾ, ತೊಡೂರು ಮತ್ತು ಅಂಕೋಲಾದ ಮೂವರು ಯುವಕರನ್ನು ವಿಚಾರಣೆ ನಡೆಸಿದ್ದ NIA ತಂಡವು ಈಗ ಪುನಃ ಅದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಇದೀಗ ಅರೆಸ್ಟ್ ಮಾಡಿದ್ದಾರೆ. ಇಬ್ಬರು ಆರೋಪಿಗಳನ್ನು ಇದೀಗ NIA ಅಧಿಕಾರಿಗಳು ಅರೆಸ್ಟ್ ಮಾಡಿದ್ದಾರೆ. ಮುದುಗ ಗ್ರಾಮದ ನಿವಾಸಿ ವೇತನ್ ತಾಂಡೇಲ್ ಹಾಗೂ ಹಳವಳ್ಳಿಯ ಅಕ್ಷಯ್ ನಾಯಕ್ನನ್ನು ಎನ್ಐಎ ಅಧಿಕಾರಿಗಳು ಇದೀಗ ಅರೆಸ್ಟ್ ಮಾಡಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಮುದುಗ ಗ್ರಾಮದಲ್ಲಿ ನಿನ್ನೆ ಇಬ್ಬರ ಬಗ್ಗೆಯೂ ಎನ್ಐಎ ತಂಡ ಮಾಹಿತಿ ಕಲೆಹಾಕಿತ್ತು. ನೌಕಾನೆಲೆ ಮಾಹಿತಿ ಸೋರಿಕೆ ಹಿನ್ನೆಲೆಯಲ್ಲಿ ಎನ್ಐಎ ಅಧಿಕಾರಿಗಳು ಕಾರವಾರಕ್ಕೆ ಭೇಟಿ ನೀಡಿದ್ದರು. 2024ರ ಅಗಸ್ಟ್ ತಿಂಗಳಲ್ಲಿ ಎನ್ಐಎ ಅಧಿಕಾರಿಗಳು ಮೂವರನ್ನು ವಿಚಾರಣೆ ನಡೆಸಿದ್ದರು. ಮೂವರ ವಿಚಾರಣೆ ನಡೆಸಿ ನೋಟಿಸ್ ನೀಡಿದ್ದರು. ಮುದುಗ ಗ್ರಾಮದ ವೇತನ್ ತಾಂಡೇಲ್, ತೋಳೂರಿನ ಸುನಿಲ್…

Read More

ಬೆಳಗಾವಿ : ಸಿದ್ದರಾಮಯ್ಯ ಪೂರ್ಣಾವಧಿ ಸಿಎಂ ಆಗಿರುತ್ತಾರೆ ಎಂಬ ವಿಚಾರವಾಗಿ ಮುಖ್ಯಮಂತ್ರಿ ಇದ್ದಾಗ ಇವೆಲ್ಲ ಚರ್ಚೆ ಯಾಕೆ ಬೇಕು? ಸಿಎಂ ತೆಗೆಯಬೇಕು ಎಂದು ಯಾರು ಹೇಳುತ್ತಿದ್ದಾರೆ? ಯಾರು ಕೂಡ ಹೇಳುತ್ತಿಲ್ಲ. ಎಲ್ಲರಿಗೂ ಆಸೆ, ಆಕಾಂಕ್ಷಿಗಳು ಇರುತ್ತವೆ, ಅದು ರಾಜಕೀಯ. ಇದೆಲ್ಲವೂ ಇತಿಮಿತಿಯಲ್ಲಿ ಇರಬೇಕು ನನಗೆ ಸಿಎಂ ಆಸೆ ಇಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು. ಬೆಳಗಾವಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಚಿವ ದಿನೇಶ್ ಗುಂಡೂರಾವ್, ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ಬಣಗಳಿಲ್ಲ. ಆದರೆ ಪ್ರತಿಷ್ಠೆಗಳಿವೆ. ಬಿಜೆಪಿಯಲ್ಲಿ ಇರುವುದೇ ಬೇರೆ ಅಲ್ಲಿ ಸಂಪೂರ್ಣ ಬಿರುಕು ಇದೆ ಬಿಜೆಪಿಯಲ್ಲಿ ಪ್ರತಿಷ್ಠೆ ಭಿನ್ನಾಭಿಪ್ರಾಯಗಳಲ್ಲ ಸಂಪೂರ್ಣ ಬಿರುಕು ಇದೆ. ಬಿಜೆಪಿಯಲ್ಲಿರುವ ರಾಜಕಾರಣವೇ ಬೇರೆ ಎಂದು ಅವರು ತಿಳಿಸಿದರು. ನಮ್ಮಲ್ಲಿ ಎಲ್ಲರೂ ಚೆನ್ನಾಗಿದ್ದೇವೆ ಶಾಸಕರಿಗೆ ವೈ ಮನಸು ಏನಿಲ್ಲ ಕೆಲ ವಿಷಯದಲ್ಲಿ ಪ್ರತಿಷ್ಠೆ ಇಟ್ಟುಕೊಂಡು ಏನೇನೋ ಮಾತನಾಡುತ್ತಿದ್ದಾರೆ ನಮ್ಮ ಪಕ್ಷ ಆರೋಗ್ಯಕರವಾಗಿದೆ ರಾಜಕೀಯದಲ್ಲಿ ಇದೆಲ್ಲ ಇದ್ದಿದ್ದೇ ಆದರೆ ಅದು ಸೀಮಿತವಾಗಿರಬೇಕು ಖಂಡಿತ ನಮ್ಮ ವರಿಷ್ಠರು ಒಳ್ಳೆಯ ರೀತಿಯಲ್ಲಿ…

Read More

ಮೈಸೂರು : ನಿನ್ನೆ ತಾನೆ ಮೈಸೂರಿನಲ್ಲಿ ಉದ್ಯಮಿಯೊಬ್ಬ ಹೆಂಡತಿ, ಮಗ ಹಾಗು ತಾಯಿಯನ್ನು ಕೊಂದು ತಾನು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿತ್ತು. ಇದೀಗ ಈ ಒಂದು ಘಟನೆ ಮಾಸುವ ಮುನ್ನವೇ, ಮೈಸೂರಿನಲ್ಲಿ ಓರ್ವ ಪುರುಷ ಹಾಗೂ ಮಹಿಳೆಯ ಶವ ಪತ್ತೆಯಾಗಿದ್ದು, ಇವರಿಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ಇದೀಗ ವ್ಯಕ್ತವಾಗುತ್ತಿದೆ. ಹೌದು ಮೈಸೂರಿನ ವಿಜಯನಗರ ಮೈದಾನದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಇಬ್ಬರ ಶವ ಪತ್ತೆಯಾಗಿದೆ. ನೇಣು ಬಿಗಿದ ಸ್ಥಿತಿಯಲ್ಲಿ ಪುರುಷ ಹಾಗೂ ಮಹಿಳೆಯ ಶವ ಪತ್ತೆಯಾಗಿದ್ಫು, ಇಬ್ಬರೂ ಸಹ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ಇದೀಗ ವ್ಯಕ್ತವಾಗುತ್ತಿದೆ. ಆದರೆ ಮೃತ ಪುರುಷ ಹಾಗೂ ಮಹಿಳೆಯ ಗುರುತು ಇದುವರೆಗೂ ಪತ್ತೆಯಾಗಿಲ್ಲ ಸ್ಥಳಕ್ಕೆ ವಿಜಯನಗರ ಠಾಣೆ ಪೊಲೀಸ್ರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Read More

ಬೆಂಗಳೂರು : ಒಂದು ಕಡೆ ಸಿಎಂ ಸಿದ್ದರಾಮಯ್ಯ 10 ವರ್ಷ ಸಿಎಂ ಆಗಿರಲಿ ಎಂದು ಕೆಲ ನಾಯಕರು ಹೇಳುತ್ತಿದ್ದರೆ, ಇನ್ನೊಂದು ಕಡೆ ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ ನೀಡಿದಂತೆ ನಮಗೂ ಕೆಪಿಸಿಸಿ ಅಧ್ಯಕ್ಷ ಮತ್ತು ಸಚಿವ ಸ್ಥಾನ ಕೊಟ್ಟರೆ ನಿಭಾಯಿಸುತ್ತೇವೆ ಎಂದು ಕೆಲ ನಾಯಕರು ಹೇಳಿಕೆ ನೀಡಿದ್ದಾರೆ. ಇದರ ಮಧ್ಯ ಗೃಹ ಸಚಿವ ಡಾ.ಜಿ ಪರಮೇಶ್ವರ್ ರವರು ಇಂದು ದೆಹಲಿಗೆ ದಿಢೀರ್ ಎಂದು ಪ್ರಯಾಣ ಬೆಳೆಸಿದ್ದು, ಕಾಂಗ್ರೆಸ್ ನಲ್ಲಿ ಬಣ ರಾಜಕೀಯದ ನಡುವೆ ಇದೀಗ ಗೃಹ ಸಚಿವರ ಈ ಒಂದು ನಡೆ ತೀವ್ರ ಕುತೂಹಲ ಮೂಡಿಸಿದೆ. ಹೌದು ಇಂದು ಬೆಂಗಳೂರಿನಿಂದ ದೆಹಲಿಗೆ ತೆರಳಿದ ಗೃಹ ಸಚಿವ ಜಿ ಪರಮೇಶ್ವರ್ ಅವರು, ಕೆಂಪೇಗೌಡ ವಿಮಾನ ನಿಲ್ದಾಣದಿಂದ ಗೃಹ ಸಚಿವ ಜಿ.ಪರಮೇಶ್ವರ್ ಅವರು ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ. ಈ ಮೂಲಕ ತೆರೆಮರೆಯಲ್ಲಿದ್ದ ಕಾಂಗ್ರೆಸ್ ಪಕ್ಷದ ಬಣ ಬಡಿದಾಟ ಇದೀಗ ಹೊರಬೀಳುತ್ತಿದೆ. ನಾಯಕತ್ವ ಬದಲಾವಣೆ, ಕೆಪಿಸಿಸಿ ಅಧ್ಯಕ್ಷರ ಬದಲಾವಣೆ, ಶೋಷಿತರ ಸಮಾವೇಶ ಕುರಿತು ಡಿ.ಕೆ.ಶಿವಕುಮಾರ್‌ ಹಾಗೂ…

Read More

ಬೆಂಗಳೂರು : ಮರಕ್ಕೆ ಕಾರುಡಿಕ್ಕಿಯಾಗಿ ಸ್ಥಳದಲ್ಲೆ ಇಬ್ಬರು ವಿದ್ಯಾರ್ಥಿಗಳು ಸಾವನಪ್ಪಿರುವ ಘಟನೆ ಬೆಂಗಳೂರಿನ ಬನ್ನೇರುಘಟ್ಟ ಬಳಿ ರಾಗಿಹಳ್ಳಿ ಅರಣ್ಯ ಪ್ರದೇಶದ ರಸ್ತೆ ಬಳಿ ತಡರಾತ್ರಿ ಈ ಒಂದು ಘಟನೆ ಸಂಭವಿಸಿದೆ. ಬನ್ನೇರುಘಟ್ಟ ಪೊಲೀಸ್ ಠಾಣಾ ವ್ಯಾಪ್ತಿಯ ರಾಗಿಹಳ್ಳಿ ಮರಕ್ಕೆ ಕಾರು ಡಿಕ್ಕಿಯಾಗಿ ಸ್ಥಳದಲ್ಲಿ ಇಬ್ಬರು ವಿದ್ಯಾರ್ಥಿಗಳು ಸಾವನಪ್ಪಿದ್ದಾರೆ. ಮೃತರನ್ನು ಕೇರಳ ಮೂಲದ ಸಾಹಹುಕ್ (28) ಹಾಗೂ ಅರ್ಶು (23) ಮೃತ ವಿದ್ಯಾರ್ಥಿಗಳು ಎಂದು ತಿಳಿದುಬಂದಿದೆ. ಗಾಯಗೊಂಡ ದೇವನಾರಾಯಣ ಮತ್ತು ಸಾಹಿಲ್ ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕುಡಿದ ಮತ್ತಿನಲ್ಲಿ ವೇಗವಾಗಿ ಕಾರು ಚಲಾಯಿಸಿ ಮರಕ್ಕೆ ಡಿಕ್ಕಿ ಹೊಡೆದಿದ್ದಾರೆ ಎಂದು ತಿಳಿದುಬಂದಿದೆ. ಮೃತ ವಿದ್ಯಾರ್ಥಿಗಳು ಗೊಟ್ಟಿಗೆರೆಯ ಟಿ ಜಾನ್ ಕಾಲೇಜಿನ ವಿದ್ಯಾರ್ಥಿಗಳು ಎಂದು ತಿಳಿದುಬಂದಿದ್ದು, ಘಟನಾ ಸ್ಥಳಕ್ಕೆ ಬನ್ನೇರುಘಟ್ಟ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Read More

ಕೊಪ್ಪಳ : ಕೊಪ್ಪಳದಲ್ಲಿ ಶಾಕಿಂಗ್ ಘಟನೆ ನಡೆದಿದ್ದು, ಅಂಗನವಾಡಿಯಲ್ಲಿ ಆಟ ಆಡುತ್ತಿದ್ದಾಗ ಕುಸಿದು ಬಿದ್ದು 5 ವರ್ಷದ ಬಾಲಕಿಯೊಬ್ಬಳು ಸಾವನ್ನಪ್ಪಿರುವ ಘಟನೆ ಕೊಪ್ಪಳ ಜಿಲ್ಲೆಯ ತಾಲೂಕಿನ ತಾಲೂಕಿನ ಬಳೂಟಗಿಗ್ರಾಮದಲ್ಲಿ ಈ ಒಂದು ಘಟನೆ ನಡೆದಿದೆ. ಆಟವಾಡುತ್ತಿದ್ದಾಗ ಕುಸಿದು ಬುದ್ದು ಅಲಿಯಾ (5) ಎನ್ನುವ ಬಾಲಕಿ ಸಾವನ್ನಪ್ಪಿದ್ದಾಳೆ. ಕೂಡಲೇ ಬಾಲಕಿಯನ್ನು ದೊಟಿಹಾಳ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದರು.ಆಸ್ಪತ್ರೆಗೆ ಸಾಗಿಸುವ ವೇಳೆಯೇ ಅಲಿಯ ಮೊಹಮ್ಮದ್ ರಿಯಾಜ್ ಸಾವನಪ್ಪಿದ್ದಾಳೆ. ಮೆದುಳಿನಲ್ಲಿ ರಕ್ತ ಹೆಪ್ಪುಗಟ್ಟಿ ಬಾಲಕಿ ಸಾವನಪ್ಪಿದ್ದಾಳೆ ಎಂದು ವೈದ್ಯರು ಖಚಿತಪಡಿಸಿದ್ದಾರೆ.

Read More

ಬೆಂಗಳೂರು : ಕಾಂಗ್ರೆಸ್ಸಿನ ಕೆಲವು ನಾಯಕರು ಇನ್ನೂ 10 ವರ್ಷಗಳ ಕಾಲ ಸಿದ್ದರಾಮಯ್ಯ ಅವರೇ ಸಿಎಂ ಆಗಿರುತ್ತಾರೆ ಎಂದು ಹೇಳಿಕೆ ನೀಡುತ್ತಿದ್ದರೆ, ಇನ್ನೊಂದು ಕಡೆ ಡಿಸಿಎಂ ಡಿಕೆ ಶಿವಕುಮಾರ್ ಅವರ ಅಧ್ಯಕ್ಷ ಸ್ಥಾನ ಬದಲಾವಣೆ ಕುರಿತು ಭಾರಿ ಚರ್ಚೆಯಾಗುತ್ತಿದೆ. ಇದರ ಮಧ್ಯ ಸಚಿವ ಸತೀಶ್ ಜಾರಕಿಹೊಳಿ ಕೆಲ ಅಭಿಮಾನಿಗಳು ಮಹಾ ಕುಂಭಮೇಳದಲ್ಲಿ 2028 ರಲ್ಲಿ ಸತೀಶ್ ಜಾರ್ಕಿಹೊಳಿ ಸಿಎಂ ಆಗೇ ಆಗುತ್ತಾರೆ ಎಂದು ಹರಕೆ ಹೊತ್ತಿದ್ದಾರೆ. ಹೌದು ಮಹಾ ಕುಂಭಮೇಳದಲ್ಲಿ ಸತೀಶ್ ಜಾರಕಿಹೊಳಿ ಅಭಿಮಾನಿಗಳು 2028ರಲ್ಲಿ ಸತೀಶ್ ಜಾರಕಿಹೊಳಿ ಮುಖ್ಯಮಂತ್ರಿ ಆಗುತ್ತಾರೆ ಎಂದು ಈ ಒಂದು ಹರಕೆ ಹೊತ್ತಿದ್ದಾರೆ. ಯಾದಗಿರಿ ಜಿಲ್ಲೆಯ ಶಹಪುರ ತಾಲೂಕಿನ ಸತೀಶ್ ಜಾರಕಿಹೊಳಿ ಅಭಿಮಾನಿಗಳು ಸತೀಶ್ ಫೋಟೋ ಸಮೇತ ಮಹಾ ಕುಂಭ ಮೇಳದಲ್ಲಿ ಮಿಂದೆದ್ದು ಹರಕೆ ಹೊತ್ತಿದ್ದಾರೆ. 2028ಕ್ಕೆ ಸತೀಶ್ ಜಾರಕಿಹೊಳಿ ಮುಖ್ಯಮಂತ್ರಿ ಆಗೇ ಆಗುತ್ತಾರೆ ಸಿಎಂ ಆದರೆ ಇದೇ ಸ್ಥಳಕ್ಕೆ ಬಂದು ಹರಕೆ ತೀರಿಸುವುದಾಗಿ ಅಭಿಮಾನಿಗಳ ಬೇಡಿಕೆಯಾಗಿದೆ.

Read More